ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೊಂದು ರೋಚಕ ಟ್ವಿಸ್ಟ್!

ಸುದ್ದಿಗಳು News

Posted by vidyamaana on 2024-03-23 15:52:34 | Last Updated by Vidyamaana on 2024-03-23 15:52:34

Share: | | | | |


ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೊಂದು ರೋಚಕ ಟ್ವಿಸ್ಟ್!

ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಕಾರಿನೊಳಗಿದ್ದ ಮೂವರು ಸಾವನ್ನಪ್ಪಿದ ಸಂಬಂಧಿಸಿದಂತೆ ಮೂವರು ಸೇರಿ 50 ಲಕ್ಷ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಕುಟುಂಬ ಸದಸ್ಯರು ಕೋರಾ ಪೊಲೀಸರ ವಿಚಾರಣೆ ವೇಳೆ ಮಾಹಿತಿ ನೀಡಿದ್ದಾರೆ.

*💥Whats App Group ಗೆ ಸೇರಲು ಕ್ಲಿಕ್ ಮಾಡಿ

*ಹಣ ತೆಗೆದುಕೊಂಡು ಹೋದ ವಿಚಾರ*:  ಇನ್ನೂ ಕಾರಿನಲ್ಲಿ ಹೋಗುವಾಗ ಮದಡ್ಕದ ಇಸಾಕ್ ಉಜಿರೆಯಲ್ಲಿದ್ದ ಸ್ವಂತ ಮನೆಯನ್ನು ಮಾರಾಟ ಮಾಡಿದ ಹಣ ಮತ್ತು ಮಗಳ ಚಿನ್ನವನ್ನು ಅಡವಿಟ್ಟು ಸುಮಾರು 35 ಲಕ್ಷ ಹಣವನ್ನು ತೆಗೆದುಕೊಂಡು ಹೋಗಿದ್ದರು ಎಂದು ಇಸಾಕ್ ಪತ್ನಿ ಕೋರಾ ಪೊಲೀಸ್ ಠಾಣೆಯಲ್ಲಿ ಮಾ.23 ರಂದು ಪೊಲೀಸ್ ವಿಚಾರಣೆ ವೇಳೆ ಹೇಳಿಕೆಯನ್ನು ನೀಡಿದ್ದಾರೆ. ಇನ್ನೂ ಶಿರ್ಲಾಲು ಸಿದ್ದಿಕ್ ಮತ್ತು ಟಿ.ಬಿ.ಕ್ರಾಸ್ ಸಾಹುಲ್ ಹಮೀದ್ ಕೂಡ ಸ್ನೇಹಿತರ ಮೂಲಕ ಪಡೆದ ಸುಮಾರು 15 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಮನೆಯವರು ಹೇಳಿಕೆ ನೀಡಿದ್ದಾರೆ. ಒಟ್ಟು ಮೂವರ ಬಳಿ 50 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ಇತ್ತು ಎನ್ನಲಾಗಿದೆ.

ತುಮಕೂರಿಗೆ ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56) , ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ಹೋಗಿದ್ದರು ಎಂದು ಹೇಳಲಾಗಿದೆ.

ಮೂವರು ಕೂಡ ನಕಲಿ ಚಿನ‌್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಅನ್ನೋದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಕಡಿಮೆ ಚಿನ್ನವನ್ನು ಬೆಲೆಗೆ ನೀಡುತ್ತೇವೆ ಎಂದು ಸುಳ್ಳು ಹೇಳಿ ಮೂವರನ್ನು ಕರೆಸಿ ಹಣ ದೋಚುವ  ಪ್ಲ್ಯಾನ್ ಮಾಡಿ ಕರೆಸಿಕೊಂಡು ಮಾ.21 ರಂದು ರಾತ್ರಿ ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಿ ನಂತರ ಹಣವನ್ನು ದೋಚಿದ್ದಾರೆ ಎನ್ನಲಾಗಿದೆ. ಇನ್ನೂ ಪ್ರಕರಣ ಸಂಬಂಧ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಸೇರಿ ಆರು ಜನರನ್ನು ಮೊಬೈಲ್ ಕಾಲ್ ಡಿಟೈಲ್ಸ್ ಮೂಲಕ  ಕಾರ್ಯಾಚರಣೆ ನಡೆಸಿ ಮಾ.22 ರಂದು ರಾತ್ರಿ ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಕೋರಾ ಪೊಲೀಸ್ ಠಾಣೆಯಲ್ಲಿ ಮಾ.22 ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಬೆಂಕಿಗಾಹುತಿಯಾದ ಕಾರನ್ನು ಕೋರಾ ಪೊಲೀಸ್ ಠಾಣೆಗೆ ತೆಗೆದುಕೊಂಡು ಬಂದಿದ್ದು. ಮೂವರ ಶವ ಸರಕಾರಿ ಆಸ್ಪತ್ರೆಯಲ್ಲಿ ಡಿಎನ್ಎ ಪರೀಕ್ಷೆ ಮಾಡಿದ ಬಳಿಕ ಮುಂದಿನ ಗುರುವಾರ ಅಥವಾ ಶುಕ್ರವಾರ ಮೃತದೇಹವನ್ನು ಗುರುತು ಪತ್ತೆಯಾದ ಬಳಿಕ ಅವರ ಕಟುಂಬ ಸದಸ್ಯರಿಗೆ ನೀಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.


 Share: | | | | |


ಸಿದ್ದರಾಮಯ್ಯ ಭೇಟಿ ಮಾಡಿದ ರೇಣುಕಾಸ್ವಾಮಿ ತಂದೆ-ತಾಯಿ; ಇಟ್ಟ ಬೇಡಿಕೆ ಏನು?

Posted by Vidyamaana on 2024-06-25 21:18:36 |

Share: | | | | |


ಸಿದ್ದರಾಮಯ್ಯ ಭೇಟಿ ಮಾಡಿದ ರೇಣುಕಾಸ್ವಾಮಿ ತಂದೆ-ತಾಯಿ; ಇಟ್ಟ ಬೇಡಿಕೆ ಏನು?

ಬೆಂಗಳೂರು , ಜೂನ್‌ 25: ಚಿತ್ರದುರ್ಗದ ರೇಣುಕಾಸ್ವಾಮಿ ಬರ್ಬರವಾಗಿ ಕೊಲೆಯಾಗಿದ್ದು, ಈ ಪ್ರಕರಣ ಕುರಿತು ಪವಿತ್ರ ಗೌಡ, ನಟ ದರ್ಶನ್ ಸೇರಿದಂತೆ 17 ಮಂದಿ ಆರೋಪಿಗಳು ಜೈಲುವಶವಾಗಿದ್ದಾರೆ. ಆದರೆ ಕುಟುಂಬದ ಆಧಾರವಾಗಿದ್ದ ರೇಣುಕಾಸ್ವಾಮಿಯನ್ನು ಕಳೆದುಕೊಂಡ ತಂದೆ ತಾಯಿ ಇಂದು (ಮಂಗಳವಾರ) ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಸಮಸ್ಯೆ ಹೇಳಿಕೊಂಡಿದ್ದಾರೆ.

ರೇಣುಕಾಸ್ವಾಮಿ ಅವರ ತಂದೆ , ತಾಯಿ ಇಂದು ಕಾವೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ತಮ್ಮ ಅಳಲು ತೋಡಿಕೊಂಡಿದ್ದಾರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಂದೆ ಪುತ್ರನಿ ಸಾವಿನ ಕುರಿತು ತಂದಿ ತಾಯಿ ಇಬ್ಬರು ಕಣ್ಣೀರು ಹಾಕಿದ್ದಾರೆ. ತಪ್ಪು ಮಾಡಿದ್ದರೆ ಕರೆದು ಬುದ್ಧಿ ಹೇಳಬಹುದಿತ್ತು, ಅಥವಾ ಪೊಲೀಸರಿಗೆ ದೂರು ಕೊಡಬಹುದಿತ್ತು ಆದರೆ ಬರ್ಬರವಾಗಿ ಕೊಂದುಬಿಡುವುದು ಯಾವ ನ್ಯಾಯ ಎಂದು ಅವಲತ್ತುಕೊಂಡಿದ್ದಾರೆ.

ಆಪರೇಷನ್ ಎಲಿಫೆಂಟ್ ಕೊನೆಗೂ ಸಕ್ಸಸ್ ; ಇಬ್ಬರನ್ನು ಬಲಿ ಪಡೆದ ನರಹಂಕಕ ಕಾಡಾನೆ ಸೆರೆ

Posted by Vidyamaana on 2023-02-23 13:09:14 |

Share: | | | | |


ಆಪರೇಷನ್ ಎಲಿಫೆಂಟ್ ಕೊನೆಗೂ ಸಕ್ಸಸ್ ; ಇಬ್ಬರನ್ನು ಬಲಿ ಪಡೆದ ನರಹಂಕಕ ಕಾಡಾನೆ ಸೆರೆ

ಕಡಬ; ಇಬ್ಬರನ್ನು ಬಲಿ ಪಡೆದ ನರಹಂತಕ ಆನೆ ಕೊನೆಗೂ ಸೆರೆಯಾಗಿದೆ. ಆ ಮೂಲಕ ಕಳೆದ ಮೂರು ದಿನಗಳಿಂದ ನಡೆದ ಕಾರ್ಯಾಚರಣೆ ಕೊನೆಗೂ ಸಕ್ಸಸ್ ಆಗಿದೆ. ಕಡಬ ಬಳಿಯ ಮೂಜೂರು ರಕ್ಷಿತಾರಣ್ಯದ ಕೊಂಬಾರು(ಮಂಡೆಕರ) ಎಂಬಲ್ಲಿ ಆನೆಯನ್ನು ಪತ್ತೆ ಹಚ್ಚಿಗನ್ ಮೂಲಕ ಆನೆಗೆ ಅರಿವಳಿಕೆ ನೀಡಲಾಗಿದೆ.

ಫೆ.20 ಬೆಳಿಗ್ಗೆ ಕಾಡಾನೆ ದಾಳಿಯಿಂದ ಸ್ಥಳೀಯ ನಿವಾಸಿಗಳಾದ ರಂಜಿತಾ (21) ಮತ್ತು ರಮೇಶ್ ರೈ (52 ವ) ಮೃತಪಟ್ಟಿದ್ದರು. ಅಂದು ರಾತ್ರಿಯೇ ಮೈಸೂರು ದುಬಾರೆಯಿಂದ 5 ಆನೆಗಳನ್ನು ತರಲಾಗಿದ್ದು, ಫೆ.21 ರಂದು ಡೋನ್ ಕ್ಯಾಮರಾ ಬಳಸಿ ಆನೆಯನ್ನು ಪತ್ತೆ ಹಚ್ಚಲಾಗಿತ್ತು.

ದುಬಾರೆಯ ಆನೆಗಳ ಮೂಲಕ ಸೆರೆಹಿಡಿಯುವ ಕಾರ್ಯಾಚರಣೆಯು ರೆಂಜಲಾಡಿ ಗ್ರಾಮದ ತುಂಬೆ ರಕ್ಷಿತಾರಣ್ಯದಲ್ಲಿ ಆರಂಭಗೊಂಡಿತ್ತು. ಆದರೆ ನಿನ್ನೆ ಆನೆಗೆ ಅರಿವಳಿಕೆ ನೀಡುವ ಪ್ರಯತ್ನ ವಿಫಲಗೊಂಡಿತ್ತು. ಇಂದು ಸಂಜೆ ಮತ್ತೆ ಆನೆಯನ್ನು ಪತ್ತೆ ಹಚ್ಚಿ ಅರಿವಳಿಕೆ ಮದ್ದು ಶೂಟ್ ಮಾಡಿ ಆನೆಯನ್ನು ಸೆರೆ ಹಿಡಿಯಲಾಗಿದೆ.

ನವ ವಿವಾಹಿತ ಇನ್ಫೋಸಿಸ್ ಉದ್ಯೋಗಿ ಹರೀಶ್ ಆತ್ಮಹತ್ಯೆ

Posted by Vidyamaana on 2024-06-18 13:28:02 |

Share: | | | | |


ನವ ವಿವಾಹಿತ ಇನ್ಫೋಸಿಸ್ ಉದ್ಯೋಗಿ ಹರೀಶ್ ಆತ್ಮಹತ್ಯೆ

ಕೋಲಾರ : ನವ ವಿವಾಹಿತ ಇನ್ಫೋಸಿಸ್ ಉದ್ಯೋಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ ತಾಲ್ಲೂಕಿನ ಅರಾಭಿಕೊತ್ತನೂರು ಗ್ರಾಮದಲ್ಲಿ ನಡೆದಿರುವುದಾಗಿ ವರದಿಯಾಗಿದೆ.

ಮೃತ ಯುವಕನನ್ನು ಹರೀಶ್ (28) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳ ಹಿಂದಷ್ಟೇ ದೇವನಹಳ್ಳಿ ಮೂಲದ‌ ಹುಡುಗಿಯೊಂದಿಗೆ ವಿವಾಹ ನಡೆದಿತ್ತು ಎನ್ನಲಾಗಿದೆ.

ಆ. 15ರಂದು ಮಿನಾಜ್ ನಗರ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಸನ್ಮಾನ

Posted by Vidyamaana on 2023-08-14 15:02:31 |

Share: | | | | |


ಆ. 15ರಂದು ಮಿನಾಜ್ ನಗರ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಸನ್ಮಾನ

ಬೆಂಗಳೂರು: ಇಲ್ಲಿನ ಮಿನಾಜ್’ನಗರ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಆ. 15ರಂದು ಬೆಳಿಗ್ಗೆ 9 ಗಂಟೆಗೆ ಸ್ವಾತಂತ್ರ್ಯ ದಿನಾಚರಣೆ ಹಾಗೂ ಸನ್ಮಾನ ಕಾರ್ಯಕ್ರಮ ನಡೆಯಲಿದೆ.

9 ಗಂಟೆಗೆ ಸರಿಯಾಗಿ ಧ್ವಜಾರೋಹಣ ನಡೆಯಲಿದೆ. ಲೋಕಾಯುಕ್ತ ನಿವೃತ್ತ ಸರ್ಕಾರಿ ಅಭಿಯೋಜಕ ಟಿ.ಆರ್. ಅಲಾವುದ್ದೀನ್ ಎಕ್’ಸಾಂಬಿ ಧ್ವಜಾರೋಹಣ ನೆರವೇರಿಸಲಿದ್ದಾರೆ. ಧ್ವಜಾರೋಹಣದ ಬಳಿಕ ರಾಷ್ಟ್ರಗೀತೆ, ನಾಡ ಗೀತೆ, ಕೀರತ್, ಹುಮ್ದ ಮತ್ತು ನಾಟ್ ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮ, ಅತಿಥಿಗಳಿಗೆ ಗೌರವಾರ್ಪಣೆ, ಪ್ರಶಸ್ತಿ ವಿತರಣೆ, ಮೆರವಣಿಗೆ ನಡೆಯಲಿದೆ.

ರಾಜ್ಯ ಸರ್ಕಾರದ ಕೆ.ಎಂ.ಡಿ.ಸಿ. ಆಡಳಿತ ನಿರ್ದೇಶಕ ಮೊಹಮ್ಮದ್ ನಜೀರ್ ಮುಖ್ಯ ಅತಿಥಿಯಾಗಿರುವರು.

ಲೋಕಾಯುಕ್ತ ನಿವೃತ್ತ ಸರ್ಕಾರಿ ಅಭಿಯೋಜಕ ಟಿ.ಆರ್. ಅಲಾವುದ್ದೀನ್ ಎಕ್ಸಂಬಿ, ಮಿನ್ಜಾ ವೆಲ್ಫೇರ್ ಅಸೋಸಿಯೇಶನ್ ಉಪಾಧ್ಯಕ್ಷ ಟಿ.ಆರ್. ಅಬ್ದುಲ್ ಗಫೂರ್, ಖಲೀಲ್ ಉರ್ ರೆಹಮಾನ್, ಮಿನ್ಜಾ ವೆಲ್ಫೇರ್ ಅಸೋಸಿಯೇಶನ್ ಕಾರ್ಯದರ್ಶಿ ನಜೀರ್ ಬೇಗ್, ಸಯ್ಯದ್ ಸಾಜಿದ್ ಹುಸೈನ್, ನಯಾಜ್ ಪಾಶಾ, ಇಂಜಿನಿಯರ್ ಹುಲಿವಾನ ಶಿವರಾಮ್, ಎಂಡಬ್ಲ್ಯೂಇಡಿ ಟ್ರಸ್ಟಿನ ಉಪಾಧ್ಯಕ್ಷ ನಯಾಜ್ ಬೇಗ್, ಕನ್ನಡ ಶಿಕ್ಷಕಿ ರಾಧಾ, ಮುಖ್ಯಶಿಕ್ಷಕಿ ಕೌಸರ್ ತಾಜ್ ಅವರನ್ನು ಇದೇ ಸಂದರ್ಭ ಸನ್ಮಾನಿಸಲಾಗುವುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಕಡಬ: ಬೈಕ್ ಸ್ಕಿಡ್ -ಸವಾರ ಮಂಜು ಸ್ಥಳದಲ್ಲೇ ಮೃತ್ಯು

Posted by Vidyamaana on 2023-04-25 23:23:55 |

Share: | | | | |


ಕಡಬ:  ಬೈಕ್  ಸ್ಕಿಡ್ -ಸವಾರ ಮಂಜು ಸ್ಥಳದಲ್ಲೇ ಮೃತ್ಯು

ಕಡಬ : ಬೈಕೊಂದು ಸ್ಕಿಡ್ ಆಗಿ ಬಿದ್ದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕಡಬ – ಪಂಜ ರಸ್ತೆಯ ಕಲ್ಲಂತಡ್ಕ ಎಂಬಲ್ಲಿ - ಮಂಗಳವಾರ ರಾತ್ರಿ ನಡೆದಿದೆ.ಮೃತ ಸವಾರನನ್ನು ದಾವಣಗೆರೆ ಮೂಲದ ಪ್ರಸ್ತುತ ಕೋಡಿಂಬಾಳದಲ್ಲಿ ವಾಸವಿರುವ ಮಂಜು ಎಂದು ಗುರುತಿಸಲಾಗಿದೆ. ಸೆಂಟ್ರಿಂಗ್ ಕೆಲಸ ನಿರ್ವಹಿಸುತ್ತಿದ್ದ ಮಂಜು ಬೈಕಿನಲ್ಲಿ ಕೋಡಿಂಬಾಳ ಕಡೆಗೆ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಬೈಕ್ ರಸ್ತೆಗೆ ಉರುಳಿ ಬಿದ್ದಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ಮಂಜು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ನೇಹಾ ಕೊಲೆ ಪ್ರಕರಣ ಸಿಒಡಿ ತನಿಖೆಗೆ ; ತ್ವರಿತ ವಿಚಾರಣೆಗೆ ವಿಶೇಷ ನ್ಯಾಯಾಲಯ ಸ್ಥಾಪನೆ ; ಸಿದ್ದರಾಮಯ್ಯ ಘೋಷಣೆ

Posted by Vidyamaana on 2024-04-22 21:50:52 |

Share: | | | | |


ನೇಹಾ ಕೊಲೆ ಪ್ರಕರಣ ಸಿಒಡಿ ತನಿಖೆಗೆ ; ತ್ವರಿತ ವಿಚಾರಣೆಗೆ ವಿಶೇಷ ನ್ಯಾಯಾಲಯ ಸ್ಥಾಪನೆ ; ಸಿದ್ದರಾಮಯ್ಯ ಘೋಷಣೆ

ಶಿವಮೊಗ್ಗ, ಎ.22: ಹುಬ್ಬಳ್ಳಿ ನೇಹಾ ಹಿರೇಮಠ್ ಕೊಲೆ  ಪ್ರಕರಣವನ್ನು ಸಿ.ಒ.ಡಿ ತನಿಖೆಗೆ ವಹಿಸಲಾಗುವುದು. ಇದಕ್ಕಾಗಿ ವಿಶೇಷ ನ್ಯಾಯಾಲಯ ಸ್ಥಾಪಿಸಿ   ಕಾಲಮಿತಿಯಲ್ಲಿ ವಿಚಾರಣೆ  ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಮಾಧ್ಯಮಕ್ಕೆ ಮಾತನಾಡಿದ ಅವರು, ಮುಖ್ಯಮಂತ್ರಿ ನೇಹಾ ಮನೆಗೆ ಭೇಟಿ ನೀಡಿಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸುತ್ತ ಸಚಿವರು, ಕಾರ್ಯಕರ್ತರು ಹಾಗೂ ಸಚಿವ ಹೆಚ್. ಕೆ.ಪಾಟೀಲ್ ಭೇಟಿ ನೀಡಿದ್ದಾರೆ. ಮುಂದೆ ಧಾರವಾಡಕ್ಕೆ ತೆರಳಿದ ಸಂದರ್ಭದಲ್ಲಿ ಭೇಟಿ ನೀಡುತ್ತೇನೆ ಹೇಳಿದ್ದಾರೆ.



Leave a Comment: