ನೆಟ್ಟೇ ಕಮ್ಮಿ ಆಪುಂಡು ನನ ಬರೋಡ್ಚಿ.. ಎಂದು ಹೇಳಿ ಮದ್ದು ಕೊಡ್ತಿದ್ದ ನರಸಿಂಹ ಭಟ್ ರಿಟೈರ್ಡ್

ಸುದ್ದಿಗಳು News

Posted by vidyamaana on 2023-07-10 07:10:00 | Last Updated by Vidyamaana on 2023-09-05 06:51:23

Share: | | | | |


ನೆಟ್ಟೇ ಕಮ್ಮಿ ಆಪುಂಡು ನನ ಬರೋಡ್ಚಿ.. ಎಂದು ಹೇಳಿ ಮದ್ದು ಕೊಡ್ತಿದ್ದ ನರಸಿಂಹ ಭಟ್ ರಿಟೈರ್ಡ್

ಪುತ್ತೂರು: “ನೆಟ್ಟೇ ಕಮ್ಮಿ. ನನ ಬರೋಡ್ಚಿ…”

ಹೀಗೆ ಹೇಳಿ ಔಷಧಿ ನೀಡಿದರೆಂದರೆ, ಯಾರದೇ ರೋಗವಾದರೂ ವಾಸಿಯಾಗಲೇಬೇಕು. ಆಸ್ಪತ್ರೆಗೆ ಹೋಗಿ ತಾಸುಗಟ್ಟಲೇ ಕಾಯಬೇಕೆಂದಿಲ್ಲ. ಹೆದರಿಕೆಯಾಗುವ ಬಿಲ್ ಕೂಡ ಇಲ್ಲ. ಯಾರೇ ಬಂದರೂ ಅವರ ನಗುವೇ ದಿವ್ಯೌಷಧ.

ಇದು ಎರಡೇ ಸಾಲಿನಲ್ಲಿ ವಿವರಣೆ ಕೊಡಬಹುದಾದ ಕಾಂಪೌಂಡರ್ ಖ್ಯಾತಿಯ ನರಸಿಂಹ ಭಟ್ ಅವರ ಪರಿಚಯ. ತನ್ನ 16ನೇ ವಯಸ್ಸಿಗೇ ಡಾ. ಶಿವರಾಮ ಭಟ್ ಅವರ ಜೊತೆಗೆ ಕಾಂಪೌಂಡರ್ ಆಗಿ ಸೇರಿಕೊಂಡ ಅವರು, ಇದುವರೆಗೆ ಸುದೀರ್ಘ 68 ವರ್ಷಗಳ ಸೇವೆ ಸಲ್ಲಿಸಿದ್ದಾರೆ. ಹಾರಾಡಿಯಲ್ಲಿ ವಾಸವಾಗಿರುವ ಇವರ ತಂದೆ ಶಂಕರ್ ಭಟ್, ತಾಯಿ ಕಾವೇರಮ್ಮ. ಸರಸ್ವತಿ ಇವರ ಪತ್ನಿ. ಸಾಫ್ಟ್ ವೇರ್ ಇಂಜಿನಿಯರ್ ಆಗಿರುವ ಪುತ್ರ ಕಾರ್ತಿಕ್ ತನ್ನ ಪತ್ನಿ - ಮಗನೊಂದಿಗೆ ಲಂಡನಿನಲ್ಲಿ ವಾಸವಾಗಿದ್ದಾರೆ.

ಇದೀಗ ತನ್ನ 82ನೇ ವಯಸ್ಸಿನಲ್ಲಿ ವಿಶ್ರಾಂತ ಜೀವನಕ್ಕೆ ತೆರಳಿದ್ದಾರೆ. ವಯೋ ಸಹಜ ಸಮಸ್ಯೆಗಳ ಕಾರಣದಿಂದಾಗಿ ಡಾ. ಶಿವರಾಮ ಭಟ್ ಅವರ ಕ್ಲಿನಿಕ್ ಅನ್ನು ಬಂದ್ ಮಾಡಲಾಗಿದೆ ಎಂದು ಕ್ಲಿನಿಕ್ ಮುಂದುಗಡೆ ಬೋರ್ಡ್ ಹಾಕಲಾಗಿದೆ.

ಹಾಗಾಗಿ, ಔಷಧಕ್ಕೆಂದು ಆಗಮಿಸುವ ಜನರು ಬೋರ್ಡ್ ನೋಡಿ, ಹ್ಯಾಪ್ ಮೋರೆ ಹಾಕಿಕೊಂಡು ವಾಪಾಸ್ ಹೋಗುತ್ತಿದ್ದಾರೆ. ದಿನಕ್ಕೆ ಸುಮಾರು 300 ಮಂದಿಯಂತೆ ತಿಂಗಳಿಗೆ 10 ಸಾವಿರದಷ್ಟು ಮಂದಿ ಇವರ ಔಷಧವನ್ನೇ ಅವಲಂಬಿತರಾಗಿದ್ದರು. ಇದೀಗ ಇಷ್ಟು ಮಂದಿ ಬೇರೆ ವೈದ್ಯರ ಮೊರೆ ಹೋಗಲೇಬೇಕಾದ ಅನಿವಾರ್ಯತೆ ಎದುರಾಗಿದೆ.

ಮಳೆಗಾಲ ಆರಂಭವಾಯಿತೆಂದರೆ ಜ್ವರ, ಶೀತ, ಕೆಮ್ಮು ಸಿದ್ಧ. ಇದಕ್ಕೆಲ್ಲಾ ಕಾಂಪೌಂಡರ್ ನೀಡುವ 3 ಹೊತ್ತಿನ ಮದ್ದು ಸಾಕು. ಕಡಿಮೆ ಶುಲ್ಕ ಮಾತ್ರವಲ್ಲ, ಸುಲಭದಲ್ಲಿ ಸಿಗುವ ವೈದ್ಯರು ಎಂಬ ಕಾರಣಕ್ಕೆ ಜನರೂ ಇಲ್ಲಿಗೆ ಆಗಮಿಸುತ್ತಿದ್ದರು. ಇನ್ನು ಮುಂದೆ ಪುತ್ತೂರಿನ ಹೃದಯ ಭಾಗದಲ್ಲಿ ಇದ್ದ ಡಾ. ಶಿವರಾಮ ಭಟ್ ಅವರ ಕ್ಲಿನಿಕಿನಲ್ಲಿ ಕಾಂಪೌಂಡರ್ ಮದ್ದು ನೀಡುವುದಿಲ್ಲ!

ಡಾ. ಶಿವರಾಮ ಭಟ್ ಗುರು:

ಡಾ. ಶಿವರಾಮ ಭಟ್ ಅವರನ್ನೇ ಗುರುವಾಗಿ ನೆಚ್ಚಿಕೊಂಡಿದ್ದ ಕಾಂಪೌಂಡರ್ ಖ್ಯಾತಿಯ ನರಸಿಂಹ ಭಟ್ ಅವರು, ಸುದೀರ್ಘ ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಡಾ. ಶಿವರಾಮ ಭಟ್ ಅವರ ನಿಧನದ ನಂತರವೂ ಅವರ ಹೆಸರಿನಲ್ಲೇ ಕ್ಲಿನಿಕ್ ನಡೆಯುತ್ತಿತ್ತು. ಆಗ ಕಾಂಪೌಂಡರ್ ಅವರೇ ಔಷಧ ನೀಡುತ್ತಿದ್ದರು. ಕ್ಲಿನಿಕಿಗೆ ಆಗಮಿಸಿದ ಹೆಚ್ಚಿನ ಜನರಿಗೆ ಇವರೇ ಡಾ‌. ಶಿವರಾಮ ಭಟ್ ಎಂದು ನಂಬಿದ್ದರು.

ಸರ್ಕಾರಿ ಉದ್ಯೋಗದ ಅವಕಾಶವನ್ನೇ ಕೈಚೆಲ್ಲಿದರು!

ನರಸಿಂಹ ಭಟ್ ಅವರಿಗೆ ಸರ್ಕಾರಿ ಉದ್ಯೋಗದ ಅವಕಾಶವೂ ಕೈಬೀಸಿ ಕರೆಯಿತು. ಆದರೆ ಡಾ. ಶಿವರಾಮ್ ಭಟ್ ಅವರನ್ನೇ ಮಾನಸ ಗುರುವಾಗಿ ಸ್ವೀಕರಿಸಿದ್ದರಿಂದ, ಸರ್ಕಾರಿ ಉದ್ಯೋಗದ ಅವಕಾಶವನ್ನು ಕೈಚೆಲ್ಲಿದರು. ಡಾ. ಶಿವರಾಮ ಭಟ್ ಅವರು ಇರುವವರೆಗೂ ಹಾಗೂ ಅವರು ಇಲ್ಲದ ಬಳಿಕವೂ ತನ್ನ ಗುರುವಿನ ಹೆಸರಿನಲ್ಲಿಯೇ ಔಷಧ ನೀಡಿತ್ತಿದ್ದರು ಎನ್ನುವುದು ಕಾಂಪೌಂಡರ್ ಅವರ ವಿಶೇಷತೆ.

 Share: | | | | |


ನಾಪತ್ತೆಯಾಗಿರುವ ಹೋರಿಗಾಗಿ ದೈವದ ಮೊರೆ ಹೋದ ಬಜರಂಗದಳದ ಕಾರ್ಯಕರ್ತರು

Posted by Vidyamaana on 2024-05-18 04:56:01 |

Share: | | | | |


ನಾಪತ್ತೆಯಾಗಿರುವ ಹೋರಿಗಾಗಿ ದೈವದ ಮೊರೆ ಹೋದ ಬಜರಂಗದಳದ ಕಾರ್ಯಕರ್ತರು

ಪುತ್ತೂರು ಮೇ 17: ಪುತ್ತೂರು ಮಹಾಲಿಂಗೇಶ್ವರ ದೇವರ ಗದ್ದೆಯಲ್ಲಿ ತಿರುಗಾಡುತ್ತಿದ್ದ ಹೋರಿಯೊಂದು ನಾಪತ್ತೆಯಾಗಿದ್ದು, ನಾಪತ್ತೆಯಾಗಿರು ಹೋರಿಗಾಗಿ ಬಜರಂಗದಳದ ಕಾರ್ಯಕರ್ತರು ದೈವದ ಮೊರೆ ಹೋಗಿದ್ದಾರೆ.

ಪುತ್ತೂರು ಮಹಾಲಿಂಗೇಶ್ವರ ದೇವರ ಗದ್ದೆಯಲ್ಲಿ ತಿರುಗಾಡುತ್ತಿದ್ದ ಎರಡು ಹೋರಿಗಳು ಮೇ 1 ರಿಂದ ನಾಪತ್ತೆಯಾಗಿತ್ತು.

ಲಂಚ ಪಡೆಯುವವನ ಜೊತೆ ಕೊಡುವವನಿಗೂ ಶಿಕ್ಷೆ ಆಗಬೇಕು - ಹೈಕೋರ್ಟ್

Posted by Vidyamaana on 2023-06-30 08:25:16 |

Share: | | | | |


ಲಂಚ ಪಡೆಯುವವನ ಜೊತೆ ಕೊಡುವವನಿಗೂ ಶಿಕ್ಷೆ ಆಗಬೇಕು - ಹೈಕೋರ್ಟ್

ಬೆಂಗಳೂರು : ಲಂಚ ಪಡೆಯುವ ವ್ಯಕ್ತಿ ಮಾತ್ರವಲ್ಲ ಲಂಚ ಕೊಡುವ ವ್ಯಕ್ತಿಗೂ ಶಿಕ್ಷೆ ಆಗಬೇಕು ಎಂದು ಬೆಂಗಳೂರಿನ ಹೈಕೋರ್ಟ್ ಪೀಠ ಮಹತ್ವದ ಆದೇಶ ಹೊರಡಿಸಿದೆಲಂಚ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಹಾಗೂ ಅವರ ಪುತ್ರ ಎಂ.ವಿ. ಪ್ರಶಾಂತ್ ಕುಮಾರ್ ವಿರುದ್ಧದ ಲಂಚದ ಪ್ರಕರಣದಲ್ಲಿ ಐವರು ಆರೋಪಿಗಳ ವಿರುದ್ಧ ದಾಖಲಾಗಿರುವ ಭ್ರಷ್ಟಾಚಾರ ಪ್ರಕರಣ ರದ್ದುಪಡಿಸಲು ನಿರಾಕರಿಸಿದೆ.ಮಾಡಾಳ್ ವಿರೂಪಾಕ್ಷಪ್ಪ ಮತ್ತು ಅವರ ಪುತ್ರ ಪ್ರಶಾಂತ್ ಕುಮಾರ್‌ಗೆ ಲಂಚ ನೀಡಲು ಮುಂದಾದ ಆರೋಪಕ್ಕೆ ಸಂಬಂಧಿಸಿದಂತೆ ನಮ್ಮ ವಿರುದ್ಧ ಲೋಕಾಯುಕ್ತ ಪೊಲೀಸರು ದಾಖಲಿಸಿರುವ ಪ್ರಕರಣವನ್ನು ರದ್ದುಪಡಿಸಬೇಕು ಎಂದು ಕೋರಿ ಕರ್ನಾಟಕ ಅರೋಮಾ ಕಂಪೆನಿ ಮಾಲೀಕರಾದ ಕೈಲಾಶ್ ಎಸ್. ರಾಜ್, ವಿನಯ್ ಎಸ್. ರಾಜ್, ಚೇತನ್ ಮಾರ್ಲೇಚ, ಸಿಬ್ಬಂದಿ ಅಲ್ಬರ್ಟ್ ನಿಕೋಲಸ್ ಮತ್ತು ಗಂಗಾಧರ್ ಸಲ್ಲಿಸಿದ್ದ ಪ್ರತ್ಯೇಕ ಅರ್ಜಿಗಳನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ವಜಾಗೊಳಿಸಿದೆ.ಲಂಚ ಪಡೆಯುವ ವ್ಯಕ್ತಿಯ ಜೊತೆಜೊತೆಗೇ ಲಂಚ ಕೊಡುವ ವ್ಯಕ್ತಿಯನ್ನೂ ಶಿಕ್ಷೆಗೆ ಒಳಪಡಿಸಬೇಕು ಮತ್ತು ಲಂಚದ ಪ್ರವೃತ್ತಿಯನ್ನು ಬುಡಸಮೇತ ಹೊಸಕಿ ಹಾಕಲು ಇದು ಸಕಾಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ

ಹೆಚ್ಚಿನ ಇನ್ಸೆಂಟಿವ್‌ ಆಸೆಗೆ ಬಿದ್ದು ಬೇಕಾ ಬಿಟ್ಟಿಯಾಗಿ ಫ್ರೀ ಟಿಕೆಟ್‌ ಹರಿದ ಕಂಡೆಕ್ಟರ್

Posted by Vidyamaana on 2023-10-16 13:08:26 |

Share: | | | | |


ಹೆಚ್ಚಿನ ಇನ್ಸೆಂಟಿವ್‌ ಆಸೆಗೆ  ಬಿದ್ದು ಬೇಕಾ ಬಿಟ್ಟಿಯಾಗಿ ಫ್ರೀ ಟಿಕೆಟ್‌ ಹರಿದ ಕಂಡೆಕ್ಟರ್

ಬೆಂಗಳೂರು : ಹೆಚ್ಚಿನ ಇನ್ಸೆಂಟಿವ್​ ಆಸೆಗೆ ಬಿಎಂಟಿಸಿ ಕಂಡೆಕ್ಟರೊಬ್ಬ ಬೇಕಾ ಬಿಟ್ಟಿಯಾಗಿ ಫ್ರೀ ಟಿಕೆಟ್​ಗಳನ್ನು ಹರಿಯುತ್ತಿರುವ ವೇಳೆ ಸಿಕ್ಕಿಬಿದ್ದಾರೆ. ಮೆಜೆಸ್ಟಿಕ್​ನಿಂದ - ತಾವರಕೆರೆಗೆ ಹೋಗುವ ಬಿಬಿಎಂಟಿಸಿ ಬಸ್​​ನ ಕಂಡೆಕ್ಟರ್ ಕಳೆದ ದಿನ (ಅ.15) ರಂದು ಸುಖಾಸುಮ್ಮನೇ ಫ್ರೀ ಟಿಕೆಟ್ ಹರಿದು ಬಿಸಾಕುತ್ತಿದ್ದರು.ಇದನ್ನು ಕಂಡ ಮಹಿಳಾ ಪ್ರಯಾಣಿಕರೊಬ್ಬರು "ಯಾಕೆ ಟಿಕೆಟ್ ಹರಿದು ಬಿಸಾಕುತ್ತಿದ್ದೀರಿ ಎಂದು ಪ್ರಶ್ನೆ ಮಾಡಿದ್ದಾರೆ.ಈ ಮೂಲಕ ಕಂಡೆಕ್ಟರ್ ವಿಭಾಗಕ್ಕೆ ಹೆಚ್ಚಿನ ಪ್ರಯಾಣಿಕರ ಲೆಕ್ಕವನ್ನು ತೋರಿಸಲು ಮುಂದಾಗಿದ್ದಾರೆ. ಅಲ್ಲದೆ ಹೆಚ್ಚು ಫ್ರೀ ಟಿಕೆಟ್​ ​ಹರಿದರೇ ತನಗೆ ಹೆಚ್ಚು ಇನ್ಷೆಂಟಿವ್​ ಸಿಗುತ್ತದೆ ಎಂಬ ಆಸೆಯಿಂದ ಫ್ರೀ ಟಿಕೆಟ್​ ಹರಿದಿದ್ದಾರೆ ಎಂದು ಪ್ರಯಾಣಿಕರು ಹೇಳಿದ್ದಾರೆ.


ರಾಜ್ಯ ಸರ್ಕಾರವು ಶಕ್ತಿ ಯೋಜನೆ ಜಾರಿ ಮಾಡಿದ್ದು, ಮಹಿಳೆಯರು ಸರ್ಕಾರಿ ಬಸ್​ಗಳಲ್ಲಿ ಉಚಿತವಾಗಿ ಪ್ರಯಾಣಿಸುತ್ತಿದ್ದಾರೆ. ಆದರೆ ಇದರ ನಡುವೆ ಕಂಡಕ್ಟರ್​​ಗಳು ಮಹಿಳಾ ಪ್ರಯಾಣಿಕರಿಗೆ ನೀಡಿದ ಟಿಕೆಟ್​ ಸಂಖ್ಯೆಗಳನ್ನು ನಿಗಮಗಳಿಗೆ ತಪ್ಪಾಗಿ ನೀಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಗದಗದಲ್ಲಿ ಸಿಎಂ ಸಿದ್ದರಾಮಯ್ಯ ಹೆಲಿಕ್ಯಾಪ್ಟರ್ ಲ್ಯಾಂಡಿಂಗ್ ನಲ್ಲಿ ಭಾರಿ ಗೊಂದಲ

Posted by Vidyamaana on 2023-12-17 12:31:37 |

Share: | | | | |


ಗದಗದಲ್ಲಿ ಸಿಎಂ ಸಿದ್ದರಾಮಯ್ಯ ಹೆಲಿಕ್ಯಾಪ್ಟರ್ ಲ್ಯಾಂಡಿಂಗ್ ನಲ್ಲಿ ಭಾರಿ ಗೊಂದಲ

ಗದಗ : ಸಿಎಂ ಸಿದ್ದರಾಮಯ್ಯ ಅವರು ಇಂದು ಗದಗ ಪ್ರವಾಸ ಕೈಗೊಂಡಿದ್ದು, ಈ ವೇಳೆ ಹೆಲಿಕ್ಯಾಪ್ಟರ್‌ ಲ್ಯಾಂಡಿಂಗ್‌ ವೇಳೆ ಭಾರೀ ಗೊಂದಲವಾಗಿರುವ ಘಟನೆ ನಡೆದಿದೆ.ಗದಗದ ಹೆಲಿಪ್ಯಾಡ್‌ ನಲ್ಲಿ ಸಿಎಂ ಸಿದ್ದರಾಮಯ್ಯ ಇದ್ದ ಹೆಲಿಕಾಪ್ಟರ್‌ ಪೈಲಟ್‌ ಅರ್ಧಕ್ಕೆ ಇಳಿಸಿ ಮತ್ತೆ ಹೆಲಿಕಾಪ್ಟರ್‌ ಹಾರಿಸಿದ್ದು, ಭಾರೀ ಗೊಂದಲಕ್ಕೆ ಕಾರಣವಾಗಿದ್ದು, ಸ್ಥಳದಲ್ಲಿದ್ದ ಪೊಲೀಸರು, ಜಿಲ್ಲಾಡಳಿತ, ಕಾಂಗ್ರೆಸ್‌ ಮುಖಂಡರು ಕಕ್ಕಾಬಿಕ್ಕಿಯಾಗಿದ್ದರು.

ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ ಬೆಳ್ತಂಗಡಿ ಪೊಲೀಸರಿಂದ ಆರೋಪಿ ಕೇಶವ ಪೂಜಾರಿ ಪೊಲೀಸ್ ವಶಕ್ಕೆ

Posted by Vidyamaana on 2023-11-13 21:40:41 |

Share: | | | | |


ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ ಬೆಳ್ತಂಗಡಿ ಪೊಲೀಸರಿಂದ ಆರೋಪಿ ಕೇಶವ ಪೂಜಾರಿ ಪೊಲೀಸ್ ವಶಕ್ಕೆ

ಬೆಳ್ತಂಗಡಿ : ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಬಾಲಕಿಯನ್ನು 5 ತಿಂಗಳ ಗರ್ಭಿಣಿಯಾಗಿಸಿದ ಪ್ರಕರಣದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.


ಬಂಧಿತ ಆರೋಪಿ ಧರ್ಮಸ್ಥಳ ಗ್ರಾಮದ ನಿವಾಸಿ ಕೇಶವ ಪೂಜಾರಿ (43) ಬಂಧಿತ.ಆರೋಪಿ ಬಾಲಕಿಯ ಮನೆಯವರಿಗೆ ಪರಿಚಯಸ್ಥನಾಗಿದ್ದ.ಹತ್ತನೇ ತರಗತಿಯ ಹೈಸ್ಕೂಲ್ ವಿದ್ಯಾರ್ಥಿನಿಯಾಗಿರುವ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಾನೆ.


ಬಾಲಕಿ ಐದು ತಿಂಗಳ ಗರ್ಭಿಣಿಯಾದಾಗಲೇ ಮನೆಯವರಿಗೆ ಘಟನೆಯ ಬಗ್ಗೆ ಮಾಹಿತಿ ಲಭಿಸಿದೆ. ಈ ಬಗ್ಗೆ ಬಾಲಕಿಯ ತಾಯಿ ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇದೀಗ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಹೆರಿಗೆ ಬಳಿಕ ಮಾನಸಿಕ ಖಿನ್ನತೆ ; ನಾಲ್ಕು ತಿಂಗಳ ಮಗುವನ್ನು ನೀರಿನಲ್ಲಿ ಮುಳುಗಿಸಿ ಸಾವಿಗೆ ಶರಣಾದ ರುಕಿಯಾ

Posted by Vidyamaana on 2023-12-03 04:27:12 |

Share: | | | | |


ಹೆರಿಗೆ ಬಳಿಕ ಮಾನಸಿಕ ಖಿನ್ನತೆ ; ನಾಲ್ಕು ತಿಂಗಳ ಮಗುವನ್ನು ನೀರಿನಲ್ಲಿ ಮುಳುಗಿಸಿ ಸಾವಿಗೆ ಶರಣಾದ ರುಕಿಯಾ

ಮಂಗಳೂರು: ಹೆರಿಗೆಯಾದ ಬಳಿಕ ಮಾನಸಿಕವಾಗಿ ಖಿನ್ನರಾಗಿದ್ದ ಮಹಿಳೆಯೊಬ್ಬರು ತನ್ನ ನಾಲ್ಕುವರೆ ತಿಂಗಳ ಮಗುವನ್ನು ಟಬ್ ನಲ್ಲಿ ಮುಳುಗಿಸಿ ಕೊಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಮಂಗಳಾದೇವಿ ಬಳಿಯ ಗುಜ್ಜರಕೆರೆಯಲ್ಲಿ ನಡೆದಿದೆ. 


ಫಾತಿಮಾ ರುಕಿಯಾ (23) ತನ್ನ ನಾಲ್ಕುವರೆ ತಿಂಗಳ ಗಂಡು ಮಗುವನ್ನು ಕೊಂದು ಸಾವಿಗೆ ಶರಣಾದ ಯುವತಿ. ಇವರಿಗೆ ಒಂದೂವರೆ ವರ್ಷದ ಹಿಂದೆ ಮಹಮ್ಮದ್ ಉನೈಸ್ ಎಂಬವರ ಜೊತೆಗೆ ಮದುವೆಯಾಗಿತ್ತು. ಕಳೆದ ಜುಲೈ 7ರಂದು ಮಗುವಿಗೆ ಜನ್ಮ ನೀಡಿದ್ದ ಮಹಿಳೆ ಬಳಿಕ ಮಾನಸಿಕ ಖಿನ್ನತೆ ಹೊಂದಿದ್ದರು.‌ ತನ್ನ ತಾಯಿ ಜೊತೆಗೆ ತಾನು ಸಾಯುವುದಾಗಿ ಹೇಳುತ್ತಿದ್ದರು. ಇದಕ್ಕಾಗಿ ಅವರನ್ನು ಮಾನಸಿಕ ತಜ್ಞ ವೈದ್ಯರಲ್ಲಿ ಚಿಕಿತ್ಸೆಗೆ ಒಳಪಡಿಸಿದ್ದರು. 


ಆದರೆ, ಡಿ.2ರ ಶನಿವಾರ ಬೆಳಗ್ಗೆ 11 ರಿಂದ ಮಧ್ಯಾಹ್ನ 1.30ರ ನಡುವೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ತಾನು ವಾಸವಿದ್ದ ಗುಜ್ಜರಕೆರೆ ಲೇಕ್ ವ್ಯೂ ಅಪಾರ್ಟ್ಮೆಂಟಿನ ಫ್ಲಾಟಿನ ಬೆಡ್ ರೂಮಿನಲ್ಲಿ ಸಾವಿಗೆ ಶರಣಾಗಿದ್ದಾರೆ. ಪ್ಲಾಸ್ಟಿಕ್ ಟಬ್ ನಲ್ಲಿ ನೀರು ತುಂಬಿಸಿ ನಾಲ್ಕುವರೆ ತಿಂಗಳ ಮಗುವನ್ನು ಮುಳುಗಿಸಿ ಉಸಿರುಗಟ್ಟಿಸಿ ಕೊಲೆ ಮಾಡಿ, ಬಳಿಕ ಕಿಟಕಿಯ ಸರಳಿಗೆ ಸೀರೆಯನ್ನು ಕುತ್ತಿಗೆಗೆ ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಆಕೆಯ ತಾಯಿ ಖತೀಜಾತುಲ್ ಕುಬ್ರ ಅವರು ಪಾಂಡೇಶ್ವರ ಠಾಣೆಗೆ ದೂರು ನೀಡಿದ್ದಾರೆ. ‌



Leave a Comment: