ಶಾಲಾ ಆವರಣದಲ್ಲಿ ಸಾರ್ವಜನಿಕ ಕೃಷ್ಣಾಷ್ಠಮಿ, ಗಣೇಶೋತ್ಸವ, ಹಬ್ಬಗಳ ಆಚರಣೆಗೆ ನಿರ್ಬಂಧ : ಬಿಜೆಪಿ ಆಡಳಿತಾವಧಿಯಲ್ಲೇ ಆದೇಶ

ಸುದ್ದಿಗಳು News

Posted by vidyamaana on 2024-07-24 17:19:41 |

Share: | | | | |


ಶಾಲಾ ಆವರಣದಲ್ಲಿ ಸಾರ್ವಜನಿಕ ಕೃಷ್ಣಾಷ್ಠಮಿ, ಗಣೇಶೋತ್ಸವ, ಹಬ್ಬಗಳ ಆಚರಣೆಗೆ ನಿರ್ಬಂಧ : ಬಿಜೆಪಿ ಆಡಳಿತಾವಧಿಯಲ್ಲೇ ಆದೇಶ

ರಾಜ್ಯದ ಸರಕಾರಿ ಶಾಲೆ ಮತ್ತು ಕಾಲೇಜು ಕ್ಯಾಂಪಸ್‌ ಗಳಲ್ಲಿ ಧಾರ್ಮಿಕ ಆಚರಣೆ ಸೇರಿದಂತೆ ಶೈಕ್ಷಣಿಕೇತರ ಚಟುವಟಿಕೆ ನಡೆಸದಂತೆ ರಾಜ್ಯ ಸರಕಾರ ಆದೇಶ ಹೊರಡಿಸಿದ್ದು, ಇದು ಭಾರೀ ಸಂಚಲನವನ್ನೇ ಹುಟ್ಟುಹಾಕಿದೆ. ಇದರಿಂದ ಸಾರ್ವಜನಿಕ ಕೃಷ್ಣಾಷ್ಟಮಿ, ಗಣೇಶೋತ್ಸವ, ಶಾರದೋತ್ಸವ ಆಚರಣೆಯ ಸಂಘಟಕರು ಗೊಂದಲದಲ್ಲಿದ್ದಾರೆ.

ಬೆಂಗಳೂರು ಶಾಲಾ ಶಿಕ್ಷಣ ಇಲಾಖೆ ಆಯುಕ್ತರ ಕಚೇರಿಯಿಂದ 2013ರ ಫೆ.7 ರಂದು ಮತ್ತು 2023ರ ಡಿ.1ರಂದು ರಾಜ್ಯದ ಎಲ್ಲ ಡಿಡಿಪಿಐ ಕಚೇರಿಗಳಿಗೆ ಖಾಸಗಿ ಕಾರ್ಯಕ್ರಮಗಳಿಗೆ ಶಾಲಾ ಕಟ್ಟಡ ಅಥವಾ ಶಾಲಾ ಮೈದಾನ ಅನುಮತಿ ನೀಡಬಾರದೆಂದು ಸುತ್ತೋಲೆ ಬಂದಿತ್ತು. ಈ ಆಧಾರದಲ್ಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಡಿಡಿಪಿಐ ವೆಂಕಟೇಶ್ ಪಟಗಾರ ಅವರು ಜು.16ರಂದು ಜ್ಞಾಪನಾ ಪತ್ರವನ್ನು ಎಲ್ಲ ಬಿಇಒಗಳಿಗೆ ರವಾನಿಸಿದ್ದಾರೆ.

ಜ್ಞಾಪನಾ ಪತ್ರದಲ್ಲಿ ಏನಿದೆ?

ಸರಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳಲ್ಲಿ, ಶಾಲಾ ಮೈದಾನ ಅಥವಾ ಆವರಣವನ್ನು ಶೈಕ್ಷಣಿಕೇತರ ಚಟುವಟಿಕೆ ಅಥವಾ ಉದ್ದೇಶಕ್ಕೆ ಬಳಸಬಾರದು ಮತ್ತು ಅನುಮತಿಯನ್ನು ನೀಡಬಾರದೆಂದು ಸೂಚಿಸಲಾಗಿದೆ. ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಸಂಬಂಧಿತ ಶಾಲಾ ಮುಖ್ಯಸ್ಥರೇ ಹೊಣೆಯಾಗುತ್ತಾರೆ ಎಂದು ಜ್ಞಾಪನಾ ಪತ್ರದಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ.

ಬಿಜೆಪಿಯಿಂದ ಹೋರಾಟ :

ರಾಜ್ಯಾದ್ಯಂತ ಹಲವು ದಶಕಗಳಿಂದ ಶಾಲೆಯ ಕ್ಯಾಂಪಸ್, ಶಾಲಾ ಕಟ್ಟಡದಲ್ಲಿ ಕೃಷ್ಣಾಷ್ಟಮಿ, ಗಣೇಶೋತ್ಸವ, ಶಾರದೋತ್ಸವ ಆಚರಿಸಿಕೊಂಡು ಬರಲಾಗುತ್ತಿದೆ. ಆದರೆ ಈಗ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರಕಾರ ರಾಜಕೀಯ ಮಾಡಲು ಹೊರಟಿದ್ದು, ಶಾಲಾ ವಠಾರದಲ್ಲಿ ಧಾರ್ಮಿಕ ಆಚರಣೆ ನಡೆಸದಂತೆ ಆದೇಶ ಹೊರಡಿಸಿದೆ. ಇದು ಖಂಡನೀಯವಾಗಿದ್ದು, ಈ ಹಿಂದೆ ನಿಗದಿತ ಸ್ಥಳದಲ್ಲೇ ಕಾರ್ಯಕ್ರಮ ಆಯೋಜಿಸುತ್ತೇವೆ. ಇದನ್ನು ತಡೆಯಲು ಬಂದರೆ ಸುಮ್ಮನಿರಲ್ಲ ಎಂದು ಬಿಜೆಪಿ ತಾಕೀತು ಮಾಡಿದೆ. ಇದೇ ರೀತಿ ಜಿಲ್ಲಾದ್ಯಂತ ಹೋರಾಟ ನಡೆಯುತ್ತಿದೆ.

ಬಿಜೆಪಿ ಸರಕಾರದಲ್ಲೇ ಆದೇಶ :

2013ರಲ್ಲಿ ರಾಜ್ಯದಲ್ಲಿ ಬಿಜೆಪಿ ಸರಕಾರ ಆಡಳಿತದಲ್ಲಿದ್ದು, ಜಗದೀಶ್ ಶೆಟ್ಟರ್ ಮುಖ್ಯಮಂತ್ರಿಯಾಗಿದ್ದ ಸಂದರ್ಭ ಶಿಕ್ಷಣೇತರ ಚಟುವಟಿಕೆ ನಡೆಸದಂತೆ ಆದೇಶ ಹೊರಡಿಸಿತ್ತು ಆದೇ ಆದೇಶದಡಿ ನಿಯಮದಂತೆ ದಕ್ಷಿಣ ಕನ್ನಡ ಶಿಕ್ಷಣಾಧಿಕಾರಿಯವರು ಬಿಇಒ ಮೂಲಕ ಜ್ಞಾಪನಾ ಪತ್ರ ಹೊರಡಿಸಿದ್ದಾರೆ. ಆದರೆ ಅಧಿಕಾರದಲ್ಲಿದ್ದಾಗ ಆದೇಶ ಹೊರಡಿಸಿದ್ದ ಬಿಜೆಪಿಯವರೇ ಈಗ ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ಇದರಿಂದ ಈ ವಿವಾದವೂ ಜಿಲ್ಲೆಯಲ್ಲಿ ದಿನ ಹೋದಂತೆ ರಾಜಕೀಯ ಬಣ್ಣ ಪಡೆದು ಕಾವೇರತೊಡಗಿದೆ.

 Share: | | | | |


34 ನೆಕ್ಕಿಲಾಡಿ ವಲಯ ಕಾಂಗ್ರೆಸ್ ಕಾರ್ಯಕರ್ತರ ಸಭೆ, ಅಹವಾಲು ಸ್ವೀಕಾರ

Posted by Vidyamaana on 2024-01-09 08:56:30 |

Share: | | | | |


34 ನೆಕ್ಕಿಲಾಡಿ ವಲಯ ಕಾಂಗ್ರೆಸ್ ಕಾರ್ಯಕರ್ತರ ಸಭೆ, ಅಹವಾಲು ಸ್ವೀಕಾರ

ಪುತ್ತೂರು: ಪುತ್ತೂರಿನಲ್ಲಿ ಬೃಹತ್ ಕೈಗರಿಕಾ ವಲಯವನ್ನು ಸ್ಥಾಪನೆ ಮಾಡಲಾಗುತ್ತದೆ, ಇದಕ್ಕಾಗಿ ೧೦೦ ಎಕ್ರೆ ಭೂಮಿಯನ್ನು ಕಾಯ್ದಿರಿಸಲಾಗಿದೆ, ವಿವಿಧ ಕೈಗಾರಿಕೆಗಳು ಒಂದೇ ಪ್ರದೇಶದಲ್ಲಿ ಕಾರ್ಯಾರಂಭ ಮಾಡಲಿದೆ, ಇದರಿಂದ ಇಲ್ಲಿನ ಸಾವಿರಾರು ಜನರಿಗೆ ಉದ್ಯೋಗವೂ ಲಭಿಸಲಿದೆ ಎಂದು ಮಾಜಿ ಶಾಸಕರು ಹೇಳಿದ್ದು ಪತ್ರಿಕೆಗಳಲ್ಲಿ ದೊಡ್ಡದಾಗಿ ಬಂದಿತ್ತು , ನಾನು ಓದಿ ಸಂತೋಷಪಟ್ಟಿದ್ದೆ ಆದರೆ ಹೇಳಿದವರ ಅವಧಿ ಕಳೇದರೂ ಇನ್ನೂ ೧೦೦ ಎಕ್ರೆ ಭೂಮಿ ಬಂದಿಲ್ಲ ಎಲ್ಲಿ ಹೋಗಿದೆ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಅವರನ್ನು ಪರೋಕ್ಷವಾಗಿ ಶಾಸಕ ಅಶೋಕ್ ರೈ ಕಾಲೆಳೆದಿದ್ದಾರೆ.


೩೪ ನೆಕ್ಕಿಲಾಡಿ ವಲಯ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಶಾಸಕರು ಸುಳ್ಳು ಹೇಳಿಯೇ ಐದು ವರ್ಷ ಕಳೆದುಹೋಗಿದೆ, ಜನತೆಯನ್ನು ಭರವಸೆ ಕೊಟ್ಟೇ ಮೋಸ ಮಾಡಿದ್ದಾರೆ ಎಂದು ಆರೋಪಿಸಿದರು. ಕರಾವಳಿಯಲ್ಲಿ ಏಳು ಮಂದಿ ಬಿಜೆಪಿ ಶಾಸಕರಿದ್ದರು, ಸಂಸದರಿದ್ದರು, ಮಂತ್ರಗಳಿದ್ದರು ಆದರೆ ಕೊಯಿಲದಲ್ಲಿರುವ ಪಶುವೈದ್ಯಕೀಯ ಕಾಲೇಜು ಇವರ ಯಾರ ಕಣ್ಣಿಗೂ ಕಾಣಲಿಲ್ಲ, ಜಾನುವಾರು ಕೇಂದ್ರಕ್ಕೆ ನಯಾಪೈಸೆ ಅನುದಾನ ನೀಡಿಲ್ಲ, ಕೋಟಿಗಟ್ಟಲೆ ಅನುದಾನದಲ್ಲಿ ಕಟ್ಟಿದ ಎಕ್ರೆಗಟ್ಟಲೆ ಜಾಗ ಕಣ್ಣೆದುರೇ ಕೊಳೆಯುತ್ತಿದ್ದರೂ ಬಿಜೆಪಿಗರಿಗೆ ಅದನ್ನು ಅಭಿವೃದ್ದಿ ಮಾಡಬೇಕೆಂಬ ಚಿಂತೆಯೇ ಹೊಳೆಯಲಿಲ್ಲ ಯಾಕೆ? ಕೆಎಂಎಫ್‌ನವರು ೧೦ ಎಕ್ರೆ ಜಾಗ ಕೇಳಿದರೂ ಮಾಜಿ ಶಾಸಕರಿಗೆ ಕೊಡ್ಲಿಕ್ಕೆ ಆಗಲಿಲ್ಲ ೧೦೦ ಎಕ್ರೆ ಜಾಗದ ಮಾತು ಎಲ್ಲಿ ಎಂದು ಶಾಸಕರು ಕುಟುಕಿದರು.

ಯುವಕರ ಕೈಗೆ ಉದ್ಯೋಗ ಕೊಡಿ


ಯುವಕರನ್ನು ತಮ್ಮ ಪಕ್ಷದ ಪ್ರಚಾರಕ್ಕಗಿ ಬಳಸುವ ಬಿಜೆಪಿಯವರು ಅವರಿಗೆ ಉದ್ಯೋಗ ಕೊಡಿಸುವ ಆಲೋಚನೆಯೇ ಇಲ್ಲ. ಧರ್ಮದ ಬಗ್ಗೆ ಸುಳ್ಳು ವಿಚಾರಗಳನ್ನು ತಲೆಗೆ ತುಂಬಿಸಿ ಯುವ ಸಮೂಹವನ್ನು ದಾರಿತಪ್ಪಿಸುತ್ತಿರುವ ಬಿಜೆಪಿಯವರು ಇಷ್ಟು ವರ್ಷದಲ್ಲಿ ಎಷ್ಟು ಮಂದಿ ಯುವಕರಿಗೆ ಉದ್ಯೋಗ ಕೊಡಿಸಿದ್ದಾರೆ ಎಂಬುದನ್ನು ಬಹಿರಂಗಪಡಿಸಬೇಕು. ಯುವಕರನ್ನು ಬಳಸಿಕೊಂಡು ತಾವು ಅಧಿಕಾರಕ್ಕೇರುವ ಕನಸು ಕಾಣುತ್ತಿರುವ ಬಿಜೆಪಿಯವರ ನಕಲಿ ರಂಪಾಟವನ್ನು ಯುವ ಸಮೂಹ ಅರ್ಥ ಮಾಡಿಕೊಳ್ಳಬೇಕು. ಬಿಜೆಪಿ ಸಂಸದರು, ಶಾಸಕರುಗಳು ನಿಮ್ಮ ಕ್ಷೇತ್ರದ ಯುವPರಿಗೆ ಉದ್ಯೋಗ ಕೊಡಿಸಿ ಪುಣ್ಯಕಟ್ಟಿಕೊಳ್ಳಬೇಕು. ಯಾರದೋ ಅಪ್ಪ ಅಮ್ಮನ ಮಕ್ಕಳನ್ನು ಪಕ್ಷಕ್ಕಾಗಿ ಬಳಸಿಕೊಂಡು ಅವರನ್ನು ದಾರಿತಪ್ಪಿಸಬೇಡಿ ಒಳ್ಳೆಯದಾಗುವುದಿಲ್ಲ . ಯುವ ಸಮೂಹ ಬಿಜೆಪಿಯವರ ನಕಲಿತ್ವವನ್ನು ಅರಿತುಕೊಳ್ಳಬೇಕು ಎಂದು ಹೇಳಿದರು.


ಕೆಎಂಎಫ್‌ನಿಂದ ಸಾವಿರಾರು ಮಂದಿಗೆ ಉದ್ಯೋಗ ಕೊಡುತ್ತೇನೆ


ನಾನು ಕೆಎಂಎಫ್‌ನ್ನು ಪುತ್ತೂರಿಗೆ ಸ್ಥಳಾಂತರ ಮಾಡುತ್ತಿದ್ದೇನೆ, ಇದರಲ್ಲಿ ಸಾವಿರಾರು ಮಂದಿ ಯುವಕ, ಯುವತಿಯರಿಗೆ ಕೆಲಸವನ್ನು ಕೊಡಿಸುತ್ತೇನೆ. ಯುವಕರ ಕೈಗೆ ಉದ್ಯೋಗ ಕೊಡುವ ಮೂಲಕ ಅವರ ಕುಟುಂಬಕ್ಕೆ ನೆರವಾಗುವ ರೀತಿಯಲ್ಲಿ ಯುವ ಸಮೂಹವನ್ನು ಸಮಾಜಕ್ಕೆ ಅರ್ಪಿಸುವ ಕೆಲಸವನ್ನು ಮಾಡುತ್ತೇನೆ. ಯಾವ ಕಾರಣಕ್ಕೆ ಯುವಕಸಮೂಹವನ್ನು ನಾನು ಬಳಕೆ ಮಾಡಿ ಎಸೆಯುವ ಜಾಯಾಮಾನ ಕಾಂಗ್ರೆಸ್ ಪಕ್ಷಕ್ಕಿಲ್ಲ ಎಂದು ಶಾಸಕರು ಹೇಳಿದರು. ಉಪ್ಪಿನಂಗಡಿ ಸಹಸ್ರ ಲಿಂಗೇಶ್ವರ ದೇವಸ್ಥಾನ ವಠಾರವನ್ನು ಟೂರಿಸಂ ಕ್ಷೇತ್ರ ಮಾಡುತ್ತೇನೆ, ಧರ್ಮಸ್ಥಳ, ಸುಬ್ರಹ್ಮಣ್ಯಕ್ಕೆ ತೆರಳುವ ಯಾತ್ರಾರ್ಥಿಗಳು ಪುತ್ತೂರು ಮತ್ತು ಉಪ್ಪಿನಂಗಡಿಗೆ ಬಂದು ಹೋಗುವಷ್ಟರ ಮಟ್ಟಿಗೆ ಶ್ರೀ ಮಹಾಲಿಂಗೇಶ್ವರ ಕ್ಷೇತ್ರವನ್ನೂ ಟೂರಿಸಂ ಕೇಂದ್ರವಾಗಿ ಮಾಡುತ್ತೇನೆ. ಉಪ್ಪಿನಂಗಡಿಯಲ್ಲಿ ಹೊಸ ಡ್ಯಾಂ ನಿರ್ಮಾಣ ಮಾಡಿ ಸುಮಾರು ೬ ಕಿ ಮೀ ವ್ಯಾಪ್ತಿಗೆ ವರ್ಷಪೂರ್ತಿ ನೀರು ಸಂಗ್ರಹ ಮಾಡುವ ಕೆಲಸವನ್ನು ಮಾಡುತ್ತೇನೆ. ಟೂರಿಸಂ ಕೇಂದ್ರವಾಗಿ ಮಾರ್ಪಟ್ಟರೆ ಇಲ್ಲಿರುವ ಎಲ್ಲರಿಗೂ ವ್ಯವಹಾರವಾಗಲಿದೆ ಎಲ್ಲರಿಗೂ ಒಳ್ಳೆಯದಾಗಲಿದೆ ಎಂದು ಹೇಳಿದರು.

ಭೃಷ್ಟಾಚಾರ ರಹಿತ ಕೆಲಸ

ಯಾವುದೇ ಇಲಾಖೆಯಲ್ಲೂ ಭೃಷ್ಟಾಚಾರ ನಡೆಸಿದರೆ ತಕ್ಷಣ ನನ್ನ ಗಮನಕ್ಕೆ ತನ್ನಿ. ಅಕ್ರಮ ಸಕ್ರಮ, ೯೪ ಸಿ, ೯೪ ಸಿಸಿ ಸೇರಿದಂಥೆ ಇಲಾಖೆಯ ಯಾವುದೇ ಕೆಲಸ ಕಾರ್ಯಗಳಿಗೆ ಅಧಿಕಾರಿಗಳು ಲಂಚ ಕೇಳಿದರೆ ನೇರವಾಗಿ ನನಗೆ ತಿಳಿಸಿ ತಕ್ಷಣ ನಾನು ಕಾನೂನುಕ್ರಮಗಳನ್ನು ಕೈಗೊಳ್ಳುತ್ತೇನೆ. ಚುನಾವಣೆಯ ಪೂರ್ವದಲ್ಲೂ ಆ ಬಳಿಕವೂ ನಾನು ಯಾರಿದಂಲೂ ನಯಾ ಪೈಸೆ ತೆಗೆದುಕೊಂಡಿಲ್ಲ, ಮುಂದಕ್ಕೂ ನಾನು ಭೃಷ್ಟಾಚಾರರಹಿತವಾಗಿಯೇ ಕೆಲಸವನ್ನು ಮಾಡಲಿದ್ದೇನೆ, ಮಾಡಿಸುತ್ತೇನೆ ಎಂದು ಅಧಿಕಾರಿಗಳಿಗೆ ಬಿಸಿಮುಟ್ಟಿಸಿದರು.


ಬಿಜೆಪಿಯಿಂದ ಕಾಂಗ್ರೆಸ್‌ಗೆ ಸೇರ್ಪಡೆ


ಕಾರ್ಯಕ್ರಮದಲ್ಲಿ ಸ್ಥಳೀಯ ಬಿಜೆಪಿ ಕಾರ್ಯಕರ್ತರಾದ ಅಶೋಕ್ ನಾಯಕ್ ಇಂದಾಜೆ, ಗಣೇಶ್ ನಾಯ್ಕ್ ಇಂದಾಜೆ, ಅರುಣ್, ಅಣ್ಣು, ಅಪ್ಪಿ, ಉಷಾ, ಪೊನ್ನಕ್ಕ ಮತ್ತು ಭವಾನಿ ಶಾಸಕರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯದರು. ಸಸಕರು ಪಕ್ಷದ ದ್ವಜ ನೀಡಿ ಬರಮಾಡಿಕೊಂಡರು.


ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕಾರ ನಡೆಯಿತು. ವೇದಿಕೆಯಲ್ಲಿ ವಿಟ್ಲ ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷರಾದ ಡಾ. ರಾಜಾರಾಂ ಕೆಬಿ , ಮಾಜಿ ಅಧ್ಯಕ್ಷರಾದ ಮುರಳೀಧರ್ ರೈ ಮಟಂತಬೆಟ್ಟು, ನಗರಸಭಾ ಸದಸ್ಯರಾದದಿನೇಶ್ ಶೇವಿರೆ, ಗುತ್ತಿಗೆದಾರ ರಾಧಾಕೃಷ್ಣ ನಾಯ್ಕ್, ಬನ್ನೂರು ರೈತ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಈಶ್ವರಭಟ್ ಪಂಜಿಗುಡ್ಡೆ, ಕೆಪಿಸಿಸಿ ಸಂಯೋಜಕರಾದ ಚಂಧ್ರಹಾಸ ರೈ, ಪ್ರಹ್ಲಾದ್ ಬೆಳ್ಳಿಪ್ಪಾಡಿ, ಕೋಡಿಂಬಡಿ ಗ್ರಾಪಂ ಉಪಾಧ್ಯಕ್ಷರಾದ ಜಯಪ್ರಕಾಶ್ ಬದಿನಾರ್,  ಮಾಜಿ ವಲಯಾಧ್ಯಕ್ಷರಾದ ಶೇಖಬ್ಬ ಹಾಜಿ, ವಲಯ ಕಾರ್ಯದರ್ಶಿ ಕಲಂದರ್ ಶಾಫಿ, ಬೂತ್ ಅಧ್ಯಕ್ಷರಾದ ಅಬ್ದುಲ್ ಹಮೀದ್, ಇಸಾಕ್ ನೆಕ್ಕಿಲಾಡಿ ಶಾಲೆ, ನವಾಝ್ ಕರ್ವೆಲ್, ಅಬ್ದುಲ್ ಖಾದರ್ ಆದರ್ಶನಗರ, ಜಯಶೀಲಾ, ಜಾನ್ ಕೆನ್ಯುಟ್, ಹನೀಫ್ ಕೆನರಾ, ಫಯಾಝ್ ನೆಕ್ಕಿಲಾಡಿ, ಶರೀಫ್ ನೆಕ್ಕಿಲಾಡಿ, ಕಮರು ಬಾನು, ಕಮಲಾಕ್ಷಿ, ತಾಹಿರಾ, ಪೊನ್ನಕ್ಕ, ಅಣ್ಣಿ, ಅಪ್ಪಿ, ಗಣೇಶ್ ನಾಯಕ್, ಮಜೀದ್, ಬಶೀರ್ ಬೊಳಂತಿಲ, ಯಹ್ಯಾ, ಮೊದಲಾದವರು ಉಪಸ್ಥಿತರಿದ್ದರು.


ವಲಯ ಕಾಂಗ್ರೆಸ್ ಅಧ್ಯಕ್ಷೆ ಅನಿಮಿನೆಜಸ್ ಸ್ವಾಗತಿಸಿದರು. ಬ್ಲಾಕ್ ಕಾಂಗ್ರೆಸ್ ಮುಖಂಡರಾದ ಅಬ್ದುಲ್‌ರಹಿಮಾನ್ ಯುನಿಕ್ ಕಾರ್ಯಕ್ರಮ ನಿರೂಪಿಸಿದರು.

ಬಂಟ್ವಾಳ: ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾರ್ಥಿನಿ ಆಯಿಷಾ ಶಹಿಮ ನಿಧನ

Posted by Vidyamaana on 2024-03-20 15:57:15 |

Share: | | | | |


ಬಂಟ್ವಾಳ: ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾರ್ಥಿನಿ ಆಯಿಷಾ ಶಹಿಮ ನಿಧನ

ಬಂಟ್ವಾಳ: ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಂಟ್ವಾಳ ಶಾಲೆಯೊಂದರ 2ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೇ ಮಾ.20ರ ಬುಧವಾರ ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್, ತಲಪಾಡಿಯ ಸಫೀರ್ ಅಹ್ಮದ್ ಎಂಬವರ ಮಗಳು ಆಯಿಷಾ ಶಹಿಮ (7) ಮೃತಪಟ್ಟ ವಿದ್ಯಾರ್ಥಿನಿ.

ಶಹಿಮಾ ಅವರು ಮೂರು ವಾರಗಳ ಹಿಂದೆ ಮನೆಯಲ್ಲಿ ಕುಸಿದುಬಿದ್ದಿದ್ದರು. ತಕ್ಷಣ ಇವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎರಡು ಮೂರು ದಿನ ಕೋಮ ವ್ಯವಸ್ಥೆಯಲ್ಲಿದ್ದರು. ನಂತರ ಹೆಚ್ಚಿನ ಚಿಕಿತ್ಸೆ ನೀಡಿದ್ದಾದ್ದರೂ ಸ್ವಲ್ಪ ಮಟ್ಟಿಗೆ ಸ್ಪಂದಿಸುತ್ತಿದ್ದರು ಎಂದು ಹೇಳುತ್ತಿದ್ದರೂ ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯಿಸಿರೆಳೆದಿದ್ದಾರೆ.

ಶಾಸಕನಾಗಿ ಪ್ರಮಾಣ ವಚನ ಸ್ವೀಕರಿಸಿದ ಅಶೋಕ್ ಕುಮಾರ್ ರೈ

Posted by Vidyamaana on 2023-05-22 13:24:27 |

Share: | | | | |


ಶಾಸಕನಾಗಿ ಪ್ರಮಾಣ ವಚನ ಸ್ವೀಕರಿಸಿದ ಅಶೋಕ್ ಕುಮಾರ್ ರೈ

ಪುತ್ತೂರು: ವಿಧಾನಸೌಧ ಶಾಸನ ರಚಿಸುವ ಪುಣ್ಯ ಸ್ಥಳ. ಅಂತಹ ವಿಧಾನಸೌಧಕ್ಕೆ ಶಾಸಕನಾಗಿ ಪ್ರವೇಶ ಮಾಡುವುದೇ ದೊಡ್ಡ ಸಂತೋಷದ ಭಾವನೆ. ಅದಕ್ಕೆ ಕಾರಣರು ನನ್ನ ಕ್ಷೇತ್ರದ ಜನರು. ಅವರಿಗೆ ಇದನ್ನು ಅರ್ಪಿಸಲು ಬಯಸುತ್ತೇನೆ.

ಇದು ಅಶೋಕ್ ಕುಮಾರ್ ರೈ ಅವರ ಫಸ್ಟ್ ರಿಯಾಕ್ಷನ್...

ಶಾಸಕನಾಗಿ ಸೋಮವಾರ ವಿಧಾನಸೌಧದಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದ ಬಳಿಕ ವಿದ್ಯಮಾನಕ್ಕೆ ಫಸ್ಟ್ ರಿಯಾಕ್ಷನ್ ನೀಡಿದರು.

ಹೊಸ ಧಿರಿಸಿನಲ್ಲಿ ಮಿಂಚುತ್ತಿದ್ದ ಅಶೋಕ್ ಕುಮಾರ್ ರೈ ಅವರು, ವಿಧಾನಸೌಧ ಪ್ರವೇಶಿಸುತ್ತಿದ್ದಂತೆ ಮೆಟ್ಟಿಲುಗಳಿಗೆ ನಮಿಸಿ, ಮುಂದಡಿ ಇಟ್ಟರು.

ಮಂಗಳೂರು : ಅಧಿಕಾರಿಗಳಿಗೆ ಕರ್ತವ್ಯಕ್ಕೆ ಅಡ್ಡಿ ಆರೋಪ ಪ್ರಕರಣ

Posted by Vidyamaana on 2024-04-08 12:04:31 |

Share: | | | | |


ಮಂಗಳೂರು : ಅಧಿಕಾರಿಗಳಿಗೆ ಕರ್ತವ್ಯಕ್ಕೆ ಅಡ್ಡಿ ಆರೋಪ ಪ್ರಕರಣ

ಮಂಗಳೂರು : ಏಳು ವರ್ಷಗಳ ಹಿಂದೆ ಬಲ್ಮಟ ಸರ್ಕಲ್ ಬಳಿ ಅನಧಿಕೃತವಾಗಿ ಫ್ಲೇಕ್ಸ್ ಮತ್ತು ಬಂಟಿಂಗ್ ಅಳವಡಿಸಿದ್ದು ಅದನ್ನು ತೆರವುಗೊಳಿಸುವ ಕರ್ತವ್ಯಕ್ಕೆ ನೇಮಿಸಿದ್ದಾರೆ ಎನ್ನಲಾದ ಮಂಗಳೂರು ಮಹಾನಗರ ಪಾಲಿಕೆಯ ಕಂದಾಯ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದ ಮಂಗಳೂರಿನ  ಕಾರ್ಪೊರೇಟರ್ ವಿಜಯ್ ಕುಮಾರ್ ಶೆಟ್ಟಿ, ಹಿಂದಿನ ಮಹಾಪೌರರಾಗಿದ್ದ ದಿವಾಕರ್ ಪಾಂಡೇಶ್ವರ, ನವೀನ್ ಚಂದ್ರ, ರಾಜೇಂದ್ರ,ಮೋನಪ್ಪ ಭಂಡಾರಿ ಮತ್ತು ರೂಪಾ.ಡಿ ಬಂಗೇರವರಗಳನ್ನು ಮಂಗಳೂರಿನ 6ನೇ ಜೆಎಂಎಫ್‌ಸಿ  ನ್ಯಾಯಾಲಯವು ನಿರಪರಾಧಿಗಳೆಂದು ಬಿಡುಗಡೆಗೊಳಿಸಿದೆ.


 ದಿನಾಂಕ 08/03/2018 ರಂದು ಮಂಗಳೂರು ನಗರದ ಜ್ಯೋತಿ-ಬಲ್ಮಠ ರಸ್ತೆಯ ತೆರೆದ ಸ್ಥಳದಲ್ಲಿ ಹಾಕಲಾಗಿದ್ದ  ಅನಧೀಕೃತ ಫಲಕ ಮತ್ತು ಬ್ಯಾನರ್ ಗಳನ್ನು ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರ ಸೂಚನೆಯಂತೆ ಪಾಲಿಕೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು  ತೆರವು ಕಾಮಗಾರಿಯನ್ನು ನಡೆಸುತ್ತಿದ್ದಾಗ  ವಿಜಯ್ ಕುಮಾರ್ ಶೆಟ್ಟಿ, ದಿವಾಕರ ಪಾಂಡೇಶ್ವರ, ನವೀನ್ ಚಂದ್ರ,ರಾಜೇಂದ್ರ, ಮೋನಪ್ಪ ಭಂಡಾರಿ ಮತ್ತು ರೂಪಾ.ಡಿ ಬಂಗೇರರವರುಗಳು ಸದ್ದಿ ಸರಕಾರಿ ಕರ್ತವ್ಯ ನಿರ್ವಹಣೆಯ ಕಾಯಕಕ್ಕೆ ಕಾರ್ಯಕ್ಕೆ ತಡೆವೊಡ್ಡಿ ಕರ್ತವ್ಯಕ್ಕೆ ಅಡ್ಡಿಪಡಿಸಿರುತ್ತಾರೆಂದು ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರು ಮಂಗಳೂರು ಪೂರ್ವ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಮಂಗಳೂರು| ಚಿನ್ನಾಭರಣ ಕಳವು ಪ್ರಕರಣ: ಆರೋಪಿ ಸೆರೆ

Posted by Vidyamaana on 2024-09-05 07:53:48 |

Share: | | | | |


ಮಂಗಳೂರು| ಚಿನ್ನಾಭರಣ ಕಳವು ಪ್ರಕರಣ: ಆರೋಪಿ ಸೆರೆ

ಮಂಗಳೂರು, ಸೆ.5: ನಗರದ ಎಯ್ಯಾಡಿಯ ದಂಡಕೇರಿ ಎಂಬಲ್ಲಿನ ಮನೆಯೊಂದರಿಂದ ಚಿನ್ನಾಭರಣ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಕನಾಡಿ ನಗರ ಠಾಣೆಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.ಎಯ್ಯಾಡಿ ದಂಡಕೇರಿಯ ಸಾಗರ್ (23) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.

ಉಡುಪಿಯಲ್ಲೂ ಪುತ್ತೂರು ಶಾಸಕರ ಹವಾ – ಅಶೋಕ್ ಕುಮಾರ್ ಸಾಮಾಜಿಕ ಕಳಕಳಿಗೆ ಮೆಚ್ಚುಗೆ

Posted by Vidyamaana on 2024-05-03 21:53:46 |

Share: | | | | |


ಉಡುಪಿಯಲ್ಲೂ ಪುತ್ತೂರು ಶಾಸಕರ ಹವಾ – ಅಶೋಕ್ ಕುಮಾರ್ ಸಾಮಾಜಿಕ ಕಳಕಳಿಗೆ ಮೆಚ್ಚುಗೆ

ಪುತ್ತೂರು : ಉಡುಪಿಯ ಖಾಸಗಿ ಕಾರ್ಯಕ್ರಮವೊಂದರಲ್ಲಿ ಪ್ಲೇಟ್ ಶುಚಿ ಮಾಡುತ್ತಿದ್ದ ಬಾಲಕನೋರ್ವನ ಜೊತೆ ಮಾತುಕತೆ ನಡೆಸಿದ ವಿಚಾರ ಮತ್ತು ಆ ಬಾಲಕನೊಂದಿಗೆ ತೆಗೆದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡಿದ್ದು, ಇದೀಗ ಬಾಲಕ ಶಾಸಕರಿಗೆ ಕರೆ ಮಾಡಿ ನಾನು ಕಲಿಯುತ್ತೇನೆ., ಓದು ಮುಂದುವರೆಸುತ್ತೇನೆ ಎಂದು ತಿಳಿಸಿದ್ದು, ಶಿಕ್ಷಣದ ಪೂರ್ತಿವೆಚ್ಚವನ್ನು ತಾನು ಭರಿಸುವುದಾಗಿ ಶಾಸಕರು ತಿಳಿಸಿದ್ದಾರೆ.


ಖಾಸಗಿ ಕಾರ್ಯಕ್ರಮಕ್ಕೆ ತೆರಳಿದ್ದ ಶಾಸಕರು ಅಲ್ಲಿ ಊಟ ಮಾಡಿ ಪ್ಲೇಟ್ ಇಡಲು ತೆರಳಿದಾಗ ಅಲ್ಲೋರ್ವ ಬಾಲಕ ಪ್ಲೇಟ್ ಸ್ವಚ್ಚ ಮಾಡುತ್ತಿದ್ದ. ಆತನನ್ನು ನೋಡಿದ ಶಾಸಕರು ಆತನ ಪರಿಚಯ ಮಾಡಿಕೊಂಡರು. ನೀನು ಕಲಿಯುವುದಕ್ಕೆ ಹೋಗುವುದಿಲ್ವಾ..? ಕೆಲಸಕ್ಕೆ ಯಾಕೆ ಹೋಗುತ್ತಿದ್ದಿಯ..? ಮನೆಯಲ್ಲಿ ಅಪ್ಪ ಅಮ್ಮ ಏನು ಮಾಡುತ್ತಾರೆ..? ಮನೆಯ ಪರಿಸ್ಥಿತಿ ಹೇಗಿದೆ..? ಎಂದೆಲ್ಲಾ ಆತನಲ್ಲಿ ಮಾಹಿತಿ ಪಡೆದುಕೊಂಡರು. ತನ್ನ ಮನೆಯ ವಿಚಾರವನ್ನು ಎಳೆ ಎಳೆಯಾಗಿ ಬಾಲಕ ಶಾಸಕರಲ್ಲಿ ತಿಳಿಸಿದ್ದಾನೆ. ಬಾಲಕನ ಸಂಕಷ್ಟದ ಮಾತುಗಳನ್ನು ಕೇಳಿದ ಶಾಸಕರು ನೀನು ಕಲಿಯಬೇಕು, ಕಲಿತು ಒಂದು ಒಳ್ಳೆಯ ಉದ್ಯೋಗವನ್ನು ಪಡೆದು ಅಪ್ಪ ಅಮ್ಮನನ್ನು ಚೆನ್ನಾಗಿ ನೋಡಿಕೊಳ್ಳಬೇಕು ಎಂದು ಹೇಳಿ ಆತನ ಭುಜಕ್ಕೆ ಕೈ ಇಟ್ಟು ಫೋಟೋ ಕ್ಲಿಕ್ಕಿಸಿಕೊಂಡರು. ಬಾಲಕನೂ ಶಾಸಕರ ಜೊತೆ ನಿಂತು ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದ.

Recent News


Leave a Comment: