ಖ್ಯಾತ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ ರಾವ್ ಹೃದಾಯಘಾತದಿಂದ ನಿಧನ

ಸುದ್ದಿಗಳು News

Posted by vidyamaana on 2024-07-05 17:20:19 |

Share: | | | | |


ಖ್ಯಾತ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ ರಾವ್ ಹೃದಾಯಘಾತದಿಂದ ನಿಧನ

ಪುತ್ತೂರು: ಖ್ಯಾತ ಯಕ್ಷಗಾನ ಕಲಾವಿದರಾಗಿದ್ದಂತ ಕುಂಬ್ಳೆ ಶ್ರೀಧರ ರಾವ್ ಅವರು ಇಂದು ಹೃದಯಾಘಾತಕ್ಕೆ ಒಳಗಾಗಿ ನಿಧನರಾಗಿರುವುದಾಗಿ ತಿಳಿದು ಬಂದಿದೆ.

ಇಂದು ನೆಕ್ಕಿಲಾಡಿ ಗ್ರಾಮದ ಶಾಂತಿನಗರದ ಸಮೀಪದಲ್ಲಿನ ಬೇರಿಕೆ ನಿವಾಸಿಯಾಗಿದ್ದಂತ ಶ್ರೀಧರ ರಾವ್ ಅವರಿಗೆ ಇಂದು ಬೆಳಿಗ್ಗೆ ತೀವ್ರ ಎದೆನೋವು ಕಾಣಿಸಿಕೊಂಡಿತ್ತು.

ಕೂಡಲೇ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿಲಾಗಿತ್ತು. ಆದ್ರೇ ಚಿಕಿತ್ಸೆ ಫಲಿಸದೇ ಅವರು ಇಂದು ನಿಧನರಾಗಿದ್ದಾರೆ.

ಮೃತರು ಶಾಂತಿನಗರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸಿ ನಿವೃತ್ತರಾಗಿರುವ ಪತ್ನಿ ಸುಲೋಚನಾ, ಪುತ್ರರಾದ ಬೆಂಗಳೂರಿನಲ್ಲಿ ಪತ್ರಕರ್ತರಾಗಿರುವ ಗಣೇಶ್ ಪ್ರಸಾದ್, ಕೃಷ್ಣಪ್ರಸಾದ್ ಮತ್ತು ದೇವಿಪ್ರಸಾದ್, ಸೊಸೆಯಂದಿರು ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.

 Share: | | | | |


ಸವಣೂರು ಶ್ರೀ ವಿಷ್ಣು ಮೂರ್ತಿ ದೇವಾಲಯದ ಜಾತ್ರೋತ್ಸವ- ಹಸಿರು ಹೊರೆ ಕಾಣಿಕೆ ಸಮರ್ಪಣೆ

Posted by Vidyamaana on 2024-02-06 18:07:40 |

Share: | | | | |


ಸವಣೂರು ಶ್ರೀ ವಿಷ್ಣು ಮೂರ್ತಿ ದೇವಾಲಯದ ಜಾತ್ರೋತ್ಸವ- ಹಸಿರು ಹೊರೆ ಕಾಣಿಕೆ ಸಮರ್ಪಣೆ

ಪುತ್ತೂರು: ಫೆ. ೭ ಮತ್ತು ೮ ರಂದು ನಡೆಯಲಿರುವ ಸವಣೂರು ಶ್ರೀ ವಿಷ್ಣುಮೂರ್ತಿ ದೇವಾಲಯದ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಹಸಿರು ಹೊರೆ ಕಾಣಿಕೆ ಸಮರ್ಪಣೆಯು ಫೆ  ೬ ರಂದು ಸವಣೂರು ಶ್ರೀ ಪದ್ಮಾವತೀ ದೇವಿಯ ಬಸದಿ ವಠಾರದಿಂದ ಹೊರಟು ಸವಣೂರು ಮುಖ್ಯ ರಸ್ತೆಯಾಗಿ ಪರಣೆ ಮಾರ್ಗವಾಗಿ ಸವಣೂರು ಶ್ರೀ ವಿಷ್ಣುಮೂರ್ತಿ ದೇವಾಲಯಕ್ಕೆ ತಲುಪಿತು.

ಸವಣೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಸವಣೂರುಗುತ್ತು ವೆಂಕಪ್ಪ ಶೆಟ್ಟಿಯವರು ತೆಂಗಿನಕಾಯಿ ಒಡೆಯುವ ಮೂಲಕ ಹಸಿರುಹೊರೆ ಕಾಣಿಕೆ ಸಮರ್ಪಣೆಗೆ ಚಾಲನೆಗೈದರು. ಸವಣೂರು ಶ್ರೀ ವಿಷ್ಣುಮೂರ್ತಿ ದೇವಾಲಯದ ಅರ್ಚಕ ನಾರಾಯಣ ಬಡೆಕಿಲ್ಲಾಯರವರು ದೇವಾಲಯದ ವಠಾರದಲ್ಲಿ ಹಸಿರುಹೊರೆ ಕಾಣಿಕೆಗೆ ಆರತಿ  ಬೆಳಗಿ, ಸ್ವಾಗತಿಸಿದರು.  ಸವಣೂರಿನ ಹಿರಿಯ ಉದ್ಯಮಿ ಸವಣೂರು ಎನ್.ಸುಂದರ ರೈ, ಜಾತ್ರೋತ್ಸವ ಸಮಿತಿಯ ಕೋಶಾಧಿಕಾರಿ ರವೀಂದ್ರನಾಥ ರೈ ನೋಲ್ಮೆ, ಕಾರ್‍ಯದರ್ಶಿ ಬೆಳಿಯಪ್ಪ ಗೌಡ ಚೌಕಿಮಠ, ಸವಣೂರು ಶ್ರೀ ವಿಷ್ಣುಮೂರ್ತಿ ಸೇವಾ ಸಮಿತಿಯ ಅಧ್ಯಕ್ಷ ಶ್ರೀಧರ್ ಸುಣ್ಣಾಜೆ, ನಿಕಟಪೂರ್ವಧ್ಯಕ್ಷ ಉಮಾಪ್ರಸಾದ್ ರೈ ನಡುಬೈಲು, ಕಾರ್‍ಯದರ್ಶಿ ರಾಘವ ಗೌಡ ಸವಣೂರು, ಉಪಾಧ್ಯಕ್ಷ ಗಂಗಾಧರ್ ಸುಣ್ಣಾಜೆ, ಪುರಂದರ ಬಾರಿಕೆ, ಸತೀಶ್ ಬಲ್ಯಾಯ ಕನಡಕುಮೇರು, ನಾರಾಯಣ ಪೂಜಾರಿ ಕೆಯ್ಯೂರು,  ಜಯರಾಮ ರೈ ಮೂಡಂಬೈಲು ಕನಡಕುಮೇರು, ಜಯಪ್ಪ ಗೌಡ ಸವಣೂರು, ಭಾಸ್ಕರ ಗೌಡ ಅಡೀಲು, ರುಕ್ಮಯ್ಯ ಗೌಡ ಹೊಸವೊಕ್ಲು, ರಾಮಚಂದ್ರ ಕೊಡಂಕೀರಿ, ನಾರಾಯಣ ಪೂಜಾರಿ ಮಾಲೆತ್ತಾರು,  ಅಂಗಾರ ಸವಣೂರು, ಕಿರಣ್ ಕೋಡಿಬೈಲು, ವೆಂಕಪ್ಪ ಗೌಡ ಮಾಲೆತ್ತಾರು, ಪ್ರವೀಣ್ ಬಾರಿಕೆ ಸಹಿತ ನೂರಾರು ಮಂದಿ ಭಾಗವಹಿಸಿದರು. 

ಫೆ ೭-೮ ಜಾತ್ರೋತ್ಸವ 

ಸವಣೂರು ಶ್ರೀ ವಿಷ್ಣುಮೂರ್ತಿ ದೇವಾಲಯದ ಜಾತ್ರೋತ್ಸವ ಫೆ. ೭ ಮತ್ತು ೮ ರಂದು ಜರಗಲಿದೆ. ಫೆ ೭ ರಂದು ಬೆಳಿಗ್ಗೆ ತಂತ್ರಿಗಳ ಆಗಮನದ ಬಳಿಕ ವಿವಿಧ ವೈದಿಕ ಕಾರ್‍ಯಕ್ರಮಗಳು, ಮಧ್ಯಾಹ್ನನ ಪ್ರತಿಷ್ಠಾ ದಿನದ ಪೂಜೆಯ ಬಳಿಕ ಸಹಕಾರ ರತ್ನ ಸವಣೂರು ಕೆ.ಸೀತಾರಾಮ ರೈಯವರ ಸೇವಾರ್ಥ ಅನ್ನಸಂತರ್ಪಣೆ ನಡೆಯಲಿದೆ ಬಳಿಕ ರಾತ್ರಿ ರಂಗಪೂಜೆ , ಶ್ರೀ ದೇವರ ಬಲಿ ಹೊರಟು ಉತ್ಸವ, ಶ್ರೀ ಭೂತಬಲಿ, ವಸಂತಕಟ್ಟೆ ಪೂಜೆ ಸುಡುಮದ್ದು ಪ್ರದರ್ಶನ ನಡೆಯಲಿದೆ. ರಾತ್ರಿಯ ಅನ್ನದಾನ ಸೇವಾಕರ್ತರಾಗಿ ಗ್ರಾಮಸ್ಥರು ಮತ್ತು ಪರವೂರದಾನಿಗಳು ಸಹಕರಿಸಲಿದ್ದಾರೆ. ಫೆ. ೮ ರಂದು ಬೆಳಿಗ್ಗೆ ದರ್ಶನ ಬಲಿ, ಬಟ್ಟಲು ಕಾಣಿಕೆ, ರಾಜಾಂಗಣ ಪ್ರಸಾದ, ಮದ್ಯಾಹ್ನ ಅನ್ನಸಂತರ್ಪಣೆಯು ಸವಣೂರುಗುತ್ತು ಕುಟುಂಬಸ್ಥರ ಸೇವಾರ್ಥ ನಡೆಯಲಿದೆ. ರಾತ್ರಿ ೮ ರಿಂದ ಶ್ರೀ ಉಳ್ಳಾಲ್ತಿ ದೈವದ ನೇಮೋತ್ಸವ  ನಡೆದ ಬಳಿಕ ಅದೇ ದಿನ ಶ್ರೀಮತಿ ವಿಸ್ಮಿತಾ ಸಾಜನ್ ಹೆಗ್ಡೆರವರ ಸೇವಾರ್ಥ ಶ್ರೀ ಉಳ್ಳಾಲ್ತಿ ದೈವದ ಹರಿಕೆ ನೇಮೋತ್ಸವ ನಡೆಯಲಿದೆ. ರಾತ್ರಿಯ ಅನ್ನಸಂತರ್ಪಣೆಯು  ಶ್ರೀಮತಿ ಕವಿತಾ ವಿ.ಶೆಟ್ಟಿ ಮತ್ತು ಕು.ದೇಷ್ನಾ ಶೆಟ್ಟಿ ಬೆಂಗಳೂರುರವರ ಸೇವಾರ್ಥ ನಡೆಯಲಿದೆ  ಎಂದು ದೇವಾಲಯದ ಆಡಳಿತದಾರ ಸವಣೂರುಗುತ್ತು ಡಾ.ರತ್ನಾಕರ ಶೆಟ್ಟಿ, ಆಡಳಿತ ಸಮಿತಿಯ ಅಧ್ಯಕ್ಷ ಸವಣೂರುಗುತ್ತು ವೆಂಕಪ್ಪ ಶೆಟ್ಟಿ, ಜಾತ್ರೋತ್ಸವ ಸಮಿತಿಯ ಅಧ್ಯಕ್ಷ ಸವಣೂರು ಸೀತಾರಾಮ ರೈ, ಕಾರ್‍ಯದರ್ಶಿ ಬೆಳಿಯಪ್ಪ ಗೌಡ ಚೌಕಿಮಠ, ಕೋಶಾಧಿಕಾರಿ ರವೀಂದ್ರನಾಥ ರೈ ನೋಲ್ಮೆ, ದೇವಾಲಯದ ಪ್ರಧಾನ ಅರ್ಚಕ ಗೋಪಾಲಕೃಷ್ಣ ಬಡೆಕಿಲ್ಲಾಯ ಹಾಗೂ ಶ್ರೀ ವಿಷ್ಣುಮೂರ್ತಿ ಸೇವಾ ಸಮಿತಿಯ ಅಧ್ಯಕ್ಷ ಶ್ರೀಧರ್ ಸುಣ್ಣಾಜೆರವರು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಅಪಘಾತ : ನರ್ಸಿಂಗ್ ವಿದ್ಯಾರ್ಥಿ ಥೋಮಸ್ ಮೃತ್ಯು

Posted by Vidyamaana on 2024-05-30 16:54:25 |

Share: | | | | |


ಬೆಂಗಳೂರಿನಲ್ಲಿ ಅಪಘಾತ :  ನರ್ಸಿಂಗ್ ವಿದ್ಯಾರ್ಥಿ ಥೋಮಸ್ ಮೃತ್ಯು

ನೆಲ್ಯಾಡಿ : ಬೆಂಗಳೂರಿನ ನೆಲಮಂಗಲದಲ್ಲಿ ಬೈಕ್ ಹಾಗೂ ಲಾರಿ ಮಧ್ಯೆ ಅಪಘಾತ ಸಂಭವಿಸಿ ನೆಲ್ಯಾಡಿ ಎಂಜಿರ ಪರಕ್ಕಳದ ಯುವಕ ಮೃತಪಟ್ಟ ಬಗ್ಗೆ ವರದಿಯಾಗಿದೆ.

ನೆಲ್ಯಾಡಿ ಎಂಜಿರ ಪರಕ್ಕಳ ನಿವಾಸಿ ಸ್ಕೇರಿಯಾ ಎಂಬವರ ಪುತ್ರ, ನರ್ಸಿಂಗ್ ವಿದ್ಯಾರ್ಥಿ ಥೋಮಸ್ ಮೃತ ಯುವಕ.

ಲೋಕಸಭೆ ಚುನಾವಣೆ : ಎಪ್ರಿಲ್ 26 ರಂದು ಸಮಸ್ತ ಮದರಸ ಗಳಿಗೆ ರಜೆ ಘೋಷಣೆ

Posted by Vidyamaana on 2024-04-25 07:17:31 |

Share: | | | | |


ಲೋಕಸಭೆ ಚುನಾವಣೆ : ಎಪ್ರಿಲ್ 26 ರಂದು ಸಮಸ್ತ ಮದರಸ ಗಳಿಗೆ ರಜೆ ಘೋಷಣೆ

ಮಂಗಳೂರು : ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಎಪ್ರಿಲ್ 26 ರಂದು ಸಮಸ್ತ ಮದರಸ ಗಳಿಗೆ ರಜೆ ಘೋಷಿಸಲಾಗಿದೆ. 

ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಹಾರಿ ಎಂಬಿಬಿಎಸ್ ವಿದ್ಯಾರ್ಥಿನಿ ಪ್ರಕೃತಿ ಶೆಟ್ಟಿ ಆತ್ಮಹತ್ಯೆ

Posted by Vidyamaana on 2023-11-13 14:54:17 |

Share: | | | | |


ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಹಾರಿ ಎಂಬಿಬಿಎಸ್ ವಿದ್ಯಾರ್ಥಿನಿ ಪ್ರಕೃತಿ ಶೆಟ್ಟಿ ಆತ್ಮಹತ್ಯೆ

ಮಂಗಳೂರು, ನ.13: ಎಂಬಿಬಿಎಸ್ ಕಲಿಯುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ 6ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಎಜೆ ಮೆಡಿಕಲ್ ಕಾಲೇಜು ಆವರಣದಲ್ಲಿ ನಡೆದಿದೆ. 


ನಸುಕಿನ ಮೂರು ಗಂಟೆ ವೇಳೆಗೆ ಮಂಗಳೂರಿನ ಎಜೆ ಮೆಡಿಕಲ್ ಕಾಲೇಜಿನ ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಹೊರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.‌ ಮೊದಲ ವರ್ಷದ ಎಂಬಿಬಿಎಸ್ ಕಲಿಯುತ್ತಿದ್ದ ಪ್ರಕೃತಿ ಶೆಟ್ಟಿ(20) ಮೃತ ವಿದ್ಯಾರ್ಥಿನಿ. 


ಪ್ರಾಥಮಿಕ ಮಾಹಿತಿ ಪ್ರಕಾರ, ದಪ್ಪಗಿದ್ದೇನೆ ಎಂದು ವಿದ್ಯಾರ್ಥಿನಿ ಮಾನಸಿಕ ಖಿನ್ನತೆಯಲ್ಲಿದ್ದಳು. ‌ಇದೇ ಚಿಂತೆಯಲ್ಲಿ ಸಾವಿಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ. ಇವರ ಕುಟುಂಬ ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ನೆಲೆಸಿದ್ದು ಪ್ರಕೃತಿ ಶೆಟ್ಟಿ ಹಾಸ್ಟೆಲ್ ನಲ್ಲಿ ಉಳಿದುಕೊಂಡು ಓದುತ್ತಿದ್ದರು. ತಂದೆ ಪ್ರಶಾಂತ ಶೆಟ್ಟಿ ಮತ್ತು ತಾಯಿ ಅಥಣಿಯಲ್ಲಿ ನೆಲೆಸಿದ್ದಾರೆ. ತಾಯಿ ಕಾರ್ಕಳ ಮೂಲದವರಾಗಿದ್ದು ಡಾಕ್ಟರ್ ಕಲಿಯಬೇಕೆಂಬ ಕನಸಿನಲ್ಲಿ ಪುತ್ರಿಯನ್ನು ಪ್ರತಿಷ್ಠಿತ ಎಜೆ ಮೆಡಿಕಲ್ ಕಾಲೇಜಿಗೆ ಸೇರಿಸಿದ್ದರು.

ಹತ್ಯೆಗೀಡಾದ ದೀಪಕ್- ಫಾಝಿಲ್ ಸೇರಿ 6 ಕುಟುಂಬಗಳಿಗೆ ಪರಿಹಾರ ಚೆಕ್ ವಿತರಿಸಿದ:ಸಿಎಂ

Posted by Vidyamaana on 2023-06-19 08:46:24 |

Share: | | | | |


ಹತ್ಯೆಗೀಡಾದ ದೀಪಕ್- ಫಾಝಿಲ್ ಸೇರಿ 6 ಕುಟುಂಬಗಳಿಗೆ ಪರಿಹಾರ ಚೆಕ್ ವಿತರಿಸಿದ:ಸಿಎಂ

ಬೆಂಗಳೂರು, ಜೂನ್ 19: ಸರ್ಕಾರ ಸರ್ವರಿಗೂ ಸೇರಿದ್ದು. ಬಿಡಿ ಬಿಡಿಯಾಗಿ ಒಂದು ಜಾತಿ, ಒಂದು ಧರ್ಮದ ಪರವಾಗಿ ವರ್ತಿಸುವುದು ಸಂವಿಧಾನ ವಿರೋಧಿ ಕೃತ್ಯವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.


ಬಿಜೆಪಿ ಅವಧಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿವಿಧ ಪ್ರಕರಣಗಳಲ್ಲಿ ಹತ್ಯೆಗೀಡಾದ ಮಸೂದ್, ಮಹಮ್ಮದ್ ಫಾಝಿಲ್, ಅಬ್ದುಲ್ ಜಲೀಲ್ ಹಾಗೂ ದೀಪಕ್ ರಾವ್, ಮಂಡ್ಯದ ಇದ್ರೀಸ್ ಪಾಶಾ, ನರಗುಂದದ ಶಮೀರ್ ಕುಟುಂಬದವರಿಗೆ 25 ಲಕ್ಷ ರೂ. ಪರಿಹಾರದ ಚೆಕ್ ವಿತರಿಸಿ ಮಾತನಾಡಿದರು.


ಬಿಜೆಪಿಯ ದ್ವೇಷ ಮತ್ತು ತಾರತಮ್ಯದ ರಾಜಕಾರಣದ ವಿರುದ್ಧ ನಾನು ವಿರೋಧ ಪಕ್ಷದ ನಾಯಕನಾಗಿದ್ದಾಗ ಸದನದಲ್ಲೇ ಧ್ವನಿ ಎತ್ತಿದ್ದೆ. ಕೋಮುಗಲಭೆಗಳಿಗೆ ಬಲಿಯಾದ ಮೃತರ ಹೆಸರಲ್ಲೂ ಬಿಜೆಪಿ ತಾರತಮ್ಯ ನೀತಿಯನ್ನು ಅನುಸರಿಸಿತು. ಮೃತರ ಕುಟುಂಬದವರ ಕಣ್ಣೀರು ಒರೆಸುವುದು ಮತ್ತು ಪರಿಹಾರ ವಿತರಣೆಯಲ್ಲೂ ಹಿಂದಿನ ಸರ್ಕಾರ ತಾರತಮ್ಯವನ್ನು ಮೆರೆದಿತ್ತು. ಹಿಂದಿನ ಬಿಜೆಪಿ ಪರಿವಾರ ಮಾಡಿದ ತಾರತಮ್ಯವನ್ನು ಸರಿ ಪಡಿಸಿದ್ದೇವೆ ಎಂದರು.ನಮ್ಮ ಅವಧಿಯಲ್ಲಿ ಕಾನೂನು ಕೈಗೆತ್ತಿಕೊಳ್ಳುವ ಮತಾಂಧರಿಗೆ, ಅನೈತಿಕ ಪೊಲೀಸ್ ಗಿರಿಗೆ, ಜಾತಿ-ಧರ್ಮದ ಹೆಸರಿನಲ್ಲಿ ಕಾನೂನು ಕೈಗೆತ್ತಿಕೊಳ್ಳುವವರಿಗೆ ತಕ್ಕ ಶಾಸ್ತಿ ಮಾಡ್ತೀವಿ. ಕಠಿಣ ಕಾನೂನು ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಸ್ಪಷ್ಟ ಸೂಚನೆ ನೀಡಿದ್ದೇನೆ ಎಂದರು.

ಈ ಸಂದರ್ಭದಲ್ಲಿ ಪುತ್ತೂರು ಶಾಸಕ ಅಶೋಕ್  ಕುಮಾರ್ ರೈ ಸಚಿವರಾದ ಚೆಲುವರಾಯಸ್ವಾಮಿ, ಝಮೀರ್ ಅಹಮದ್ ಖಾನ್, ರಾಜಕೀಯ ಕಾರ್ಯದರ್ಶಿಗಳಾದ ನಸೀರ್ ಅಹಮದ್, ಗೋವಿಂದರಾಜು ಸೇರಿ ಇತರೆ ನಾಯಕರು ಉಪಸ್ಥಿತರಿದ್ದರು.

ಜ.20-21: ರಾಷ್ಟ್ರಮಟ್ಟದ ಹೊನಲು ಬೆಳಕಿನ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಸಿಝ್ಲರ್ ಟ್ರೋಫಿ-2024

Posted by Vidyamaana on 2024-01-18 07:32:40 |

Share: | | | | |


ಜ.20-21: ರಾಷ್ಟ್ರಮಟ್ಟದ ಹೊನಲು ಬೆಳಕಿನ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಸಿಝ್ಲರ್ ಟ್ರೋಫಿ-2024

ಪುತ್ತೂರು: ಸಾಮೆತ್ತಡ್ಕ ಯುವಕ ಮಂಡಲ ಹಾಗೂ ಸಾಮೆತ್ತಡ್ಕ ಸಿಝ್ಲರ್ ಸಾಫ್ಟ್ ಡ್ರಿಂಕ್ಸ್ ಜಂಟಿ ಆಶ್ರಯದಲ್ಲಿ ದಿ.ಶ್ರೀನಾಥ ಆಚಾರ್ಯ ಸ್ಮರಣಾರ್ಥ ರಾಷ್ಟ್ರಮಟ್ಟದ ಹೊನಲು ಬೆಳಕಿನ ಓವರ್ ಆರ್ಮ್‍ಕ್ರಿಕೆಟ್ ಪಂದ್ಯಾಟ ‘ಸಿಝ್ಲರ್ ಟ್ರೋಪಿ-2024’ ಜ.20 ಹಾಗೂ 21 ರಂದು ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಸಾಮೆತ್ತಡ್ಕ ಯುವಕ ಮಂಡಲದ ಅಧ್ಯಕ್ಷ ರೋಶನ್ ರೆಬೆಲ್ಲೋ ತಿಳಿಸಿದ್ದಾರೆ.


ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಕಾರ್ಯಕ್ರಮದ ವಿವರ ನೀಡಿ, ಪಂದ್ಯಾಟದಲ್ಲಿ ಒಟ್ಟು ಎಂಟು ತಂಡಗಳು ಪಾಲ್ಗೊಳ್ಳಲಿದ್ದು ದಕ್ಷಿಣ ಕನ್ನಡ ಜಿಲ್ಲೆಯ ನಂ.1 ಈವೆಂಟ್ ಇದಾಗಿದೆ. ಪಂದ್ಯಾಟದಲ್ಲಿ ಪ್ರಥಮ ಬಹುಮಾನವಾಗಿ 2 ಲಕ್ಷ ರೂ. ನಗದು, ಸಿಝ್ಲರ್ ಟ್ರೋಫಿ, ದ್ವಿತೀಯ 1 ಲಕ್ಷ ರೂ. ನಗದು ಹಾಗೂ ಸಿಝ್ಲರ್ ಟ್ರೋಫಿ, ಮ್ಯಾನ್ ಆಫ್‍ದ ಮ್ಯಾಚ್‍ ಗೆ ಬೈಕ್ ಬಹುಮಾನ ನೀಡಲಾಗುವುದು. ವಿಶೇಷವೆಂದರೆ ನೊಂದಾವಣಿ ಶುಲ್ಕ ಸಂಪೂರ್ಣ ಉಚಿತವಾಗಿರುತ್ತದೆ ಎಂದು ಅವರು ತಿಳಿಸಿದರು.




ಜ.20 ರಂದು ಬೆಳಿಗ್ಗೆ 6.30 ಕ್ಕೆ ಪಂದ್ಯಾಟವನ್ನು ಪುತ್ತೂರು ಸಹಾಯಕ ಆಯುಕ್ತ ಜುಪಿನ್ ಮಹಾಪಾತ್ರ ಉದ್ಘಾಟಿಸಲಿದ್ದು, ಮಾಯಿದೆ ದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ರೆ.ಫಾ.ಲಾರೆನ್ಸ್ ಮಸ್ಕರೇನಸ್ ಸಮಾರಂಭದ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ತಹಶೀಲ್ದಾರ್ ಶಿವಶಂಕರ್, ನಗರಸಭೆ ಪೌರಾಯುಕ್ತ ಮಧು ಎಸ್‍.ಮನೋಹರ್, ತಾಪಂ ಕಾರ್ಯನಿರ್ವಹಣಾಧಿಕಾರಿ ನವೀನ್‍ಕುಮಾರ್ ಭಂಡಾರಿ, ನಗರಸಭೆ ನಿಕಟಪೂರ್ವ ಅಧ್ಯಕ್ಷ ಜೀವಂಧರ್ ಜೈನ್, ಸವಣೂರು ವಿದ್ಯಾರಶ್ಮಿ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸವಣೂರು ಸೀತಾರಾಮ ರೈ ಸೇರಿದಂತೆ ಹಲವಾರು ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

Recent News


Leave a Comment: