ಶಿರೂರು ದುರಂತ: ಮಾನವೀಯ ನೆರವು ನೀಡಿದ ಪತ್ರಕರ್ತರಿಗೆ ಅಭಿನಂದನೆ ಸಲ್ಲಿಸಿದ ಜಿಲ್ಲಾಧಿಕಾರಿ

ಸುದ್ದಿಗಳು News

Posted by vidyamaana on 2024-07-24 22:11:50 |

Share: | | | | |


ಶಿರೂರು ದುರಂತ: ಮಾನವೀಯ ನೆರವು ನೀಡಿದ ಪತ್ರಕರ್ತರಿಗೆ ಅಭಿನಂದನೆ ಸಲ್ಲಿಸಿದ ಜಿಲ್ಲಾಧಿಕಾರಿ

‌ಮಂಗಳೂರು: ಶಿರೂರು ಗುಡ್ಡ ಕುಸಿತ ದುರಂತದಲ್ಲಿ ಮೃತಪಟ್ಟಿದ್ದ ವೃದ್ಧೆಯ ಅಂತ್ಯ ಸಂಸ್ಕಾರಕ್ಕೆ ಮಾನವೀಯತೆ ನೆಲೆಯಲ್ಲಿ ನೆರವು ನೀಡಿದ್ದ ಮಂಗಳೂರಿನ ಪತ್ರಕರ್ತರನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ತಮ್ಮ ಕಚೇರಿಗೆ ಆಹ್ವಾನಿಸಿ ಸನ್ಮಾನಿಸಿದರು.ಶಿರೂರು ಗುಡ್ಡ ದುರಂತದಲ್ಲಿ ಉಳುವರೆ ಗ್ರಾಮದ ಸಣ್ಣಿ ಹನುಮಂತ ಗೌಡ ಎಂಬ ವೃದ್ಧೆಯ ಮೃತದೇಹ 8 ದಿನಗಳ ಬಳಿಕ ಮಂಗಳವಾರ ಸಿಕ್ಕಿದ್ದು ಪೋಸ್ಟ್ ಮಾರ್ಟಂ ಬಳಿಕ ಮೃತದೇಹವನ್ನು ಮನೆಯಿದ್ದ ಜಾಗಕ್ಕೆ ಸಾಗಿಸಿ ಅಂತಿಮ ಸಂಸ್ಕಾರ ನಡೆಸಲು ಪತ್ರಕರ್ತರಾದ ಶಶಿ ಬೆಳ್ಳಾಯರು, ಮೋಹನ್ ಕುತ್ತಾರ್, ಆರಿಫ್ ಯು.ಆರ್. ಗಿರೀಶ್ ಮಳಲಿ ಹಾಗೂ ಶಿವಶಂಕರ್ ನೆರವಾಗಿದ್ದರು

ಈ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದ್ದನ್ನು ಗಮನಿಸಿದ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅವರಿಂದ ಪತ್ರಕರ್ತರ ಮಾಹಿತಿ ಪಡೆದು ಕಚೇರಿಯಲ್ಲಿ ಸನ್ಮಾನಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ಇಂದಾಜೆ ಅವರು ಜಿಲ್ಲಾಧಿಕಾರಿಯವರಿಗೆ ಪತ್ರಕರ್ತರ ಪರಿಚಯ ಮಾಡಿಕೊಟ್ಟರು.


ಬಳಿಕ ಮಾತಾಡಿದ ಜಿಲ್ಲಾಧಿಕಾರಿ ಅವರು, ನಿಮ್ಮ ಈ ಕಾರ್ಯ ಶ್ಲಾಘನೀಯವಾಗಿದೆ. ಇದೊಂದು ದಕ್ಷಿಣ ಕನ್ನಡ ಜಿಲ್ಲೆಗೆ ಹೆಮ್ಮೆ ತರುವಂತಹ ಕಾರ್ಯ. ಮುಂದೆಯೂ ಇಂತಹ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಳ್ಳಿ, ಏನಾದರೂ ಅಗತ್ಯ ನೆರವು ಬೇಕಾದಲ್ಲಿ ಜಿಲ್ಲಾಡಳಿತ ನಿಮ್ಮ ಜೊತೆಗಿದೆ. ನಿಮ್ಮಂತಹ ಉತ್ಸಾಹಿ ತರುಣರ ಅವಶ್ಯಕತೆ ಸಮಾಜಕ್ಕೆ ಇದೆ ಎಂದು ಬೆನ್ನುತಟ್ಟಿದರು. ಅಲ್ಲದೇ ಶಿರೂರು ಮತ್ತು ಉಳುವರೆ ಗ್ರಾಮದ ಸದ್ಯದ ಸ್ಥಿತಿಗತಿಯ ಬಗ್ಗೆ ಪತ್ರಕರ್ತರಿಂದ ಮಾಹಿತಿ ಪಡೆದರು

 Share: | | | | |


ಕಚೇರಿ ಕೆಲಸಗಳಿಗಾಗಿ ನೀವು ದೂರದೂರಿನಿಂದ ಬರುವವರೇ

Posted by Vidyamaana on 2023-05-28 16:55:33 |

Share: | | | | |


ಕಚೇರಿ ಕೆಲಸಗಳಿಗಾಗಿ ನೀವು ದೂರದೂರಿನಿಂದ ಬರುವವರೇ

ಪುತ್ತೂರು: ಶಾಸಕ, ಸಹಾಯಕ ಆಯುಕ್ತರು, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಅವರು ಸೋಮವಾರ ಸಾರ್ವಜನಿಕರ ಭೇಟಿಗೆ ಸಮಯ ಮೀಸಲಿಟ್ಟಿದ್ದಾರೆ.

ಶಾಸಕ ಅಶೋಕ್ ಕುಮಾರ್ ರೈ ಅವರು ಮೇ 29ರಂದು ಬೆಳಿಗ್ಗೆ 10.30ಕ್ಕೆ ಮಂಗಳೂರಿನಲ್ಲಿ ನಡೆಯುವ ಅಧಿಕಾರಿಗಳ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಪುತ್ತೂರಿಗೆ ಆಗಮಿಸಿ, ಸಂಜೆ 4 ಗಂಟೆಯವರೆಗೆ ಚುನಾವಣಾ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲು ಆಲಿಸಲಿದ್ದಾರೆ.

ಸಹಾಯಕ ಆಯುಕ್ತ ಗಿರೀಶ್ ನಂದನ್, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ ಅವರು ಸೋಮವಾರ ಅಂದರೆ ಮೇ 29ರಂದು ಕಚೇರಿಯಲ್ಲಿ ಲಭ್ಯರಿರುತ್ತಾರೆ.

ಬೆಂಗಳೂರು : ರೈಲ್ವೆ ಪ್ರಯಾಣಿಕರಿಗೆ ಪ್ರಜ್ಞೆ ತಪ್ಪಿಸಿ ದರೋಡೆ : ಮೂವರು ಅಂತರಾಜ್ಯ ಕಳ್ಳರ ಬಂಧನ

Posted by Vidyamaana on 2024-03-26 16:53:19 |

Share: | | | | |


ಬೆಂಗಳೂರು : ರೈಲ್ವೆ ಪ್ರಯಾಣಿಕರಿಗೆ ಪ್ರಜ್ಞೆ ತಪ್ಪಿಸಿ ದರೋಡೆ : ಮೂವರು ಅಂತರಾಜ್ಯ ಕಳ್ಳರ ಬಂಧನ

ಬೆಂಗಳೂರು : ರೈಲಿನಲ್ಲಿ ಕಳ್ಳತನ ಮಾಡುತ್ತಿದ್ದ ಕತರ್ನಾಕ್ ಅಂತರಾಜ್ಯ ಕಳ್ಳರ ಗ್ಯಾಂಗ್ ನನ್ನು ಇದೀಗ ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ಪ್ರಯಾಣಿಕರಿಗೆ ಪ್ರಜ್ಞೆ ತಪ್ಪುವ ವಸ್ತು ನೀಡಿ ಇವರು ಕಳ್ಳತನ ಮಾಡುತ್ತಿದ್ದರು. ರೈಲಿನಲ್ಲಿ ಕಳ್ಳತನ ಮಾಡುತ್ತಿದ್ದ ಪ್ರಯಾಣಿಕರನ್ನು ಟಾರ್ಗೆಟ್ ಮಾಡಿ ಹಣ ದೋಚುತ್ತಿದ್ದರು ಎನ್ನಲಾಗುತ್ತಿದೆ.ಇದೀಗ ರೈಲ್ವೆ ಪೊಲೀಸ್ರಿಂದ ಮೂರು ಆರೋಪಿಗಳನ್ನು ಬಂದಿಸಲಾಗಿದೆ. ಆರೋಪಿಗಳಿಂದ 24 ಲಕ್ಷ ಮೌಲ್ಯದ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಆರೋಪಿಗಳನ್ನ ಮಹಮ್ಮದ್ ಶೌಕತ್ ಅಲಿ, ಮಹಮ್ಮದ್ ಸತ್ತರ್, ಮೊಹಮ್ಮದ್ ಆಸಾಫ್ ಬಂಧಿತ ಆರೋಪಿಗಳು ಎಂದು ಹೇಳಲಾಗುತ್ತಿದೆ.


ದರೋಡೆ ಹೇಗೆ?


ಆರೋಪಿಗಳು ಸಂಪೂರ್ಣ ನಕಲಿ ದಾಖಲೆ ನೀಡಿ ಟಿಕೆಟ್ ಬುಕ್ ಮಾಡುತ್ತಿದ್ದರು ಎನ್ನಲಾಗುತ್ತಿದೆ. ನಂತರ ಪ್ರಯಾಣಿಕರ ಜೊತೆ ಪರಿಚಯ ದವರಂತೆ ಮಾತಿಗೆಳೆಯುತ್ತಾರೆ.ಎರಡು ದಿನಗಳ ಕಾಲ ಪ್ರಯಾಣ ಮಾಡುವಾಗ ಪರಿಚಯ ಮಾಡಿಕೊಳ್ಳುತ್ತಾರೆ. ಬೇರೆ ಪ್ರಯಾಣಿಕರ ಜೊತೆ ಊಟ ತಿಂಡಿ ಕೂಡ ಮಾಡುತ್ತಿದ್ದರು.ಅಲ್ಲದೆ ತುಂಬಾ ಕ್ಲೋಸ್ ಆಗುತ್ತಿದ್ದರು. ಸರಿಯಾದ ಸಮಯ ನೋಡಿ ಕೋಲ್ಡ್ರಿಂಗ್ಸ್ ನಲ್ಲಿ ಮತ್ತು ಬರುವ ಔಷಧಿ ಹಾಕಿ ಅವರಿಗೆ ಕೊಡುತ್ತಿದ್ದರು. ಬಾದಾಮಿ ಹಾಲಿನಲ್ಲಿ ಮತ್ತು ಬರುವ ಔಷಧಿ ಮಿಕ್ಸ್ ಮಾಡಿ ಕೊಡುತ್ತಿದ್ದರು ಪ್ರಜ್ಞೆ ತಪ್ಪಿದ ಬಳಿಕ ಹಣ ಆಗಲಿ ಚಿನ್ನಾಭರನವನ್ನು ದೋಚಿ ಪರಾರಿಯಾಗುತ್ತಿದ್ದರು.ಕೇರಳ ತಮಿಳುನಾಡು ಅಸಾಂ ಕಲ್ಕತ್ತಾದಲ್ಲೂ ಇವರು ಕೃತ್ಯ ನಡೆಸಿದ್ದಾರೆ ಎಂದು ರೈಲ್ವೆ ಎಸ್‍ಪಿ ಆಗಿರುವ ಸೌಮ್ಯಲತಾ ಅವರು ಈ ಕುರಿತಂತೆ ಮಾಹಿತಿ ನೀಡಿದರು.

ಕಾಞಂಗಾಡ್ ಸ್ನಾನಗೃಹದಲ್ಲಿ ಕುಸಿದು ಬಿದ್ದು ಮಹಿಳೆ ಮೃತ್ಯು

Posted by Vidyamaana on 2024-02-03 22:26:23 |

Share: | | | | |


ಕಾಞಂಗಾಡ್ ಸ್ನಾನಗೃಹದಲ್ಲಿ ಕುಸಿದು ಬಿದ್ದು ಮಹಿಳೆ ಮೃತ್ಯು

ಕಾಞಂಗಾಡ್ : ಸ್ನಾನ ಮಾಡಲು ತೆರಳಿದ್ದ ಮಹಿಳೆ ಸ್ನಾನಗೃಹದಲ್ಲೇ ಕುಸಿದು ಬಿದ್ದು ಮೃತಪಟ್ಟ ದಾರುಣ ಘಟನೆ ಕೇರಳದ ಕಾಞಂಗಾಡ್ ನಲ್ಲಿ ಸಂಭವಿಸಿದೆ.ಇಲ್ಲಿನ ಬಾವಾ ನಗರದ ನಿವಾಸಿ ಮಜೀದ್ ಮತ್ತು ಶಕೀಲಾ ದಂಪತಿಯ ಪುತ್ರಿ ಶುಹೈರಾ (36) ಮೃತ ದುರ್ದೈವಿಯಾಗಿದ್ದಾರೆ .ಸೇನಾ ಅಧಿಕಾರಿ ಕೋಝಿಕ್ಕೋಡ್ ಶರೀದ್ ಅವರ ಪತ್ನಿಯಾಗಿರುವ ಶುಹೈರಾ ಶುಕ್ರವಾರ ಸಂಜೆ 5 ಗಂಟೆ ಸುಮಾರಿಗೆ ಬಾತ್ ರೂಂ ಗೆ ಸ್ನಾನಕ್ಕೆಂದು ಹೋದಾಗ ಏಕಾಏಕಿ ಕುಸಿದು ಬಿದ್ದಿದ್ದಾರೆ.ಕೂಡಲೇ ಸ್ತಳಿಯರ ನೆರವಿನಿಂದ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಶುಹೈರಾ ಆದಾಗಲೇ ಇಹಲೋಕ ತ್ಯಜಿಸಿದ್ದರು ಎನ್ನಲಾಗಿದ್ದು. ಹೃದಯಾಘಾತದಿಂದ ಈ ಸಾವು ಸಂಭವಿಸಿದೆ ಎಂದು ಶಂಕಿಸಲಾಗಿದೆ.

ಸಂಚಾರ ಠಾಣೆಯ ಪೋಲಿಸ್ ಕಾನ್ಸ್‌ಟೇಬಲ್ ಆತ್ಮಹತ್ಯೆ – ಸಾವಿಗೆ ಕಾರಣ ನಿಗೂಢ

Posted by Vidyamaana on 2023-09-15 04:39:31 |

Share: | | | | |


ಸಂಚಾರ ಠಾಣೆಯ ಪೋಲಿಸ್ ಕಾನ್ಸ್‌ಟೇಬಲ್ ಆತ್ಮಹತ್ಯೆ – ಸಾವಿಗೆ ಕಾರಣ ನಿಗೂಢ

ಮಂಗಳೂರು ಸಂಚಾರ ದಕ್ಷಿಣ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೋಲಿಸ್ ಕಾನ್ಸ್‌ಟೇಬಲ್ ಒಬ್ಬರು ಆತ್ಮಹತ್ಯೆಗೈದು ಸಾವಿಗೆ ಶರಣಾಗಿರುವ ಘಟನೆ ನಡೆದಿದೆ.


ಮೃತ ಪೋಲಿಸ್ ಕಾನ್ಸ್‌ಟೇಬಲ್ ನನ್ನು ಗದಗ ಜಿಲ್ಲೆಯ ರೋಣ ತಾಲೂಕಿನ ಯಾವಗಲ್ ನ ವೀರಣ್ಣ ಎಂಬವರ ಪುತ್ರ ಮಹೇಶ್ ಸವದತ್ತಿ (31) ಎಂದು ಗುರುತಿಸಲಾಗಿದೆ.


ಮೃತ ಮಹೇಶ್ 23-07-2018 ರಂದು ಪೊಲೀಸ್ ಇಲಾಖೆಗೆ ನೇಮಕಾತಿ ಹೊಂದಿ ಮೂಲ ತರಬೇತಿಯನ್ನು ಹಾಸನ ದಲ್ಲಿ ಪಡೆದು ದಿನಾಂಕ 07-05-2019 ರಂದು ಮಂಗಳೂರು ಸಂಚಾರ ದಕ್ಷಿಣ ಪೊಲೀಸ್ ಠಾಣೆಗೆ ಕರ್ತವ್ಯಕ್ಕೆ ಹಾಜರಾಗಿ ಪೋಲಿಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು.


ಆದರೆ ಇಂದು ಕಪಿತಾನಿಯೋ ಬಳಿಯ ಸೈಮಾನ್ ಲೈನ್ ನಲ್ಲಿರುವ ಬಾಡಿಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ‌ ಎನ್ನಲಾಗಿದೆ. ಮೃತರ ಪೋಷಕರು ಮಂಗಳೂರಿನತ್ತ ಪ್ರಯಾಣ ಬೆಳೆಸಿದ್ದು, ಮೃತರ ಸಾವಿಗೆ ಕಾರಣ ತಿಳಿದುಬಂದಿಲ್ಲ.

ಕಾರ್ಕಳ ಪರಶುರಾಮ ಮೂರ್ತಿ ಮಾಯ

Posted by Vidyamaana on 2023-10-15 16:21:58 |

Share: | | | | |


ಕಾರ್ಕಳ ಪರಶುರಾಮ ಮೂರ್ತಿ ಮಾಯ

ಕಾರ್ಕಳ: ಪ್ರವಾಸಿ ಕೇಂದ್ರ ಪರಶುರಾಮ ಥೀಮ್ ಪಾರ್ಕ್ ನಲ್ಲಿ ದಿಢೀರ್ ಆಗಿ ಪರುಶುರಾಮ ಮೂರ್ತಿ ಕಾಣೆಯಾಗಿದ್ದು, ಮತ್ತೆ ವಿವಾದಕ್ಕೆ ಒಳಗಾಗಿದೆ. ಎರಡು ದಿನಗಳಿಂದ ಮೂರ್ತಿಯ ಸುತ್ತ ಕಪ್ಪು ಪ್ಲಾಸ್ಟಿಕ್ ಹೊದಿಕೆ ಹಾಕಿರುವುದು ಪತ್ತೆಯಾಗಿತ್ತು. ಇದೀಗ ಡ್ರೋಣ್ ಕ್ಯಾಮರಾದಲ್ಲಿ ಕಪ್ಪು ಪ್ಲ್ಯಾಸ್ಟಿಕ್ ಹೊದಿಕೆಯ ಒಳಗಿನ ಅಸಲಿ ಬಣ್ಣ ಬಯಲಾಗಿದ್ದು, ಪರಶುರಾಮ ಮೂರ್ತಿಯ ಪಾದ ಮತ್ತು ಕಾಲು ಬಿಟ್ಟು ಮೇಲಿನ ಭಾಗ ಮಾಯವಾಗಿರುವುದು ಕಂಡುಬಂದಿದೆ.


ಕಾರ್ಕಳದ ಬೈಲೂರಿನಲ್ಲಿ ನಿರ್ಮಿಸಲಾಗಿರುವ ಪರುಶುರಾಮನ ಮೂರ್ತಿ ನಕಲಿ ಎನ್ನುವ ಬಗ್ಗೆ ಭಾರೀ ಆರೋಪ ಕೇಳಿಬಂದಿತ್ತು. ಇದೀಗ ಮೂರ್ತಿ ನಾಪತ್ತೆ ಆಗುತ್ತಲೇ ಹೋರಾಟಗಾರರು ಮೂರ್ತಿ ಕಾಣೆಯಾಗಿದೆ ಎಂದು ಕಾರ್ಕಳ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಮೂರ್ತಿ ತೆರವು ಹಿನ್ನೆಲೆಯಲ್ಲಿ ಉಮ್ಮಿಕಲ್ ಬೆಟ್ಟಕ್ಕೆ ಕಾಂಗ್ರೆಸ್‌ ಮುಖಂಡ ಉದಯ ಕುಮಾರ್‌ ಶೆಟ್ಟಿ ಭೇಟಿ ನೀಡಿದ್ದು ಶಾಸಕ ಸುನಿಲ್ ಕುಮಾರ್ ಬಗ್ಗೆ ಆರೋಪ ಮಾಡಿದ್ದಾರೆ.ಪರಶುರಾಮನ ಕಂಚಿನ ಮೂರ್ತಿಯ ಕಾಲಿನ ಭಾಗ ಮಾತ್ರವಿದ್ದು, ದೇಹದ ಉಳಿದ ಭಾಗ ತೆರವು ಮಾಡಲಾಗಿದೆ. ಜಿಲ್ಲಾ ನಿರ್ಮಿತಿ ಕೇಂದ್ರದ ಮೇಲ್ವಿಚಾರಣೆಯಲ್ಲಿ ಸ್ಥಳದಲ್ಲಿ ಕಾಮಗಾರಿ ನಡೆಯುತ್ತಿದೆ. ಆದರೆ ಮೂರ್ತಿ ತೆರವಿನ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ. ಜನರ ದಿಕ್ಕು ತಪ್ಪಿಸಿ ಕಾಮಗಾರಿ ನಡೆಸುವ ಅಗತ್ಯ ಇಲ್ಲ. ಈ ಬಗ್ಗೆ ಎನ್‌ಐಟಿಕೆ ಹಾಗೂ ಎಂಐಟಿ ತಂತ್ರಜ್ಞರ ತಂಡ ಅಗಮಿಸಿ ಮೂರ್ತಿಯ ಅಡಿಪಾಯ ಪರಿಶೀಲನೆ ನಡೆಸಬೇಕು ಎಂದು ಉದಯಕುಮಾರ್ ಶೆಟ್ಟಿ ತಿಳಿಸಿದ್ದಾರೆ.


ಮೂರ್ತಿಯ ಮೇಲಿನ ಭಾಗ ಫೈಬರ್ ನಿಂದ ನಿರ್ಮಾಣ ಮಾಡಲಾಗಿದೆ ಎನ್ನುವ ಮಾತನ್ನು ಹೋರಾಟಗಾರರು ಹೇಳಿಕೊಂಡಿದ್ದರು. ಇದೀಗ ಮೂರ್ತಿಯನ್ನು ತೆರವುಗೊಳಿಸಿ ಜನರ ಪ್ರವೇಶಕ್ಕೆ ನಿರ್ಬಂಧ ವಿಧಿಸಿರುವುದು ನಾನಾ ರೀತಿಯ ಶಂಕೆಗೆ ಕಾರಣವಾಗಿದೆ

ಮಂಗಳೂರಿನಲ್ಲಿ ಖೋಟಾ ನೋಟು ಜಾಲ ಪತ್ತೆ ; ನಕಲಿ ನೋಟು ಚಲಾಯಿಸುತ್ತಿದ್ದ ವ್ಯಕ್ತಿ ಸಿಸಿಬಿ ಪೊಲೀಸರ ಬಲೆಗೆ

Posted by Vidyamaana on 2023-12-18 13:45:05 |

Share: | | | | |


ಮಂಗಳೂರಿನಲ್ಲಿ ಖೋಟಾ ನೋಟು ಜಾಲ ಪತ್ತೆ ; ನಕಲಿ ನೋಟು ಚಲಾಯಿಸುತ್ತಿದ್ದ ವ್ಯಕ್ತಿ ಸಿಸಿಬಿ ಪೊಲೀಸರ ಬಲೆಗೆ

ಮಂಗಳೂರು: ಮಂಗಳೂರು ನಗರದಲ್ಲಿ ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ಜಾಲವನ್ನು ಸಿಸಿಬಿ ಪೊಲೀಸರು ಪತ್ತೆಹಚ್ಚಿದ್ದು ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ. 


ಕಂಕನಾಡಿಯಲ್ಲಿ ಖೋಟಾ ನೋಟುಗಳನ್ನು ಚಲಾವಣೆಗೆ ಪ್ರಯತ್ನಿಸುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ಸದ್ರಿ ಸ್ಥಳಕ್ಕೆ ದಾಳಿ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ಆರೋಪಿತನನ್ನು ದಸ್ತಗಿರಿ ಮಾಡಿದ್ದಾರೆ, ಆರೋಪಿಯನ್ನು ಮಂಜೇಶ್ವರದ ಕೀರ್ತೇಶ್ವರ ನಿವಾಸಿ ಪ್ರಶ್ವಿತ್ (25) ಎಂದು ಗುರುತಿಸಲಾಗಿದೆ.


500 ರೂ., 200 ರೂ. ಮತ್ತು 100 ರೂ. ಮುಖಬೆಲೆಯ ಖೋಟಾ ನೋಟುಗಳನ್ನು ಚಲಾವಣೆ ಮಾಡಿದ್ದು, ಈವರೆಗೆ ಸುಮಾರು 8 ರಿಂದ 9 ಸಾವಿರ ರೂ.ಗಳ ಖೋಟಾ ನೋಟುಗಳನ್ನು ಚಲಾವಣೆ ಮಾಡಿರುವುದನ್ನು ಪತ್ತೆ ಮಾಡಲಾಗಿದೆ. ಆರೋಪಿತನಿಂದ ನಕಲಿ ನೋಟುಗಳಾದ 500 ರೂ. ಮುಖಬೆಲೆಯ 3 ನೋಟುಗಳು, 200 ರೂ. ಮುಖಬೆಲೆಯ 2 ನೋಟು ಹಾಗೂ 100 ರೂ. ಮುಖಬೆಲೆಯ 3 ನೋಟುಗಳು ಹಾಗೂ ಮೊಬೈಲ್ ಫೋನ್ ವಶಪಡಿಸಿದ್ದಾರೆ. 


ಆರೋಪಿಯಿಂದ ಎಂಟು ಖೋಟಾ ನೋಟುಗಳು, OPPO ಕಂಪನಿಯ ಮೊಬೈಲ್ ಫೋನ್ -1 (10,000/-), 35 ಅಸಲಿ ನೋಟುಗಳನ್ನು ( ಮೌಲ್ಯ-4250/-) ವಶಕ್ಕೆ ಪಡೆಯಲಾಗಿದೆ. ಪತ್ತೆ ಕಾರ್ಯದಲ್ಲಿ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಾರ್ಗದರ್ಶನದಲ್ಲಿ ಮಂಗಳೂರು ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿ ಪಾಲ್ಗೊಂಡಿದ್ದರು.

Recent News


Leave a Comment: