ಬಂಟ್ವಾಳ : ವಗ್ಗ ಬಳಿ ಅಂಬುಲೆನ್ಸ್ ನಿಯಂತ್ರಣ ತಪ್ಪಿ ಪಲ್ಟಿ

ಸುದ್ದಿಗಳು News

Posted by vidyamaana on 2023-08-18 08:29:00 |

Share: | | | | |


ಬಂಟ್ವಾಳ : ವಗ್ಗ ಬಳಿ ಅಂಬುಲೆನ್ಸ್  ನಿಯಂತ್ರಣ ತಪ್ಪಿ ಪಲ್ಟಿ

ಬೆಳ್ತಂಗಡಿ: ರೋಗಿಯೊಬ್ಬರನ್ನು  ಕೊಂಡುಹೋಗುತ್ತಿರುವ ವೇಳೆ ಟುಫಾನ್ ಅಂಬುಲೆನ್ಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಚಾಲಕ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ವಗ್ಗ ಬಳಿ ಆಗಸ್ಟ್ 18 ರಂದು ನಡೆದಿದೆ.



ಬೆಳ್ತಂಗಡಿಯಿಂದ ಮಂಗಳೂರಿಗೆ ರೋಗಿಯೊಬ್ಬರನ್ನು ಕೊಂಡೊಯ್ಯುತ್ತಿರುವ ವೇಳೆ ಬಂಟ್ವಾಳದ ವಗ್ಗ ಬಳಿ ಅಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ವೇಳೆ ಚಾಲಕ ಮಡಂತ್ಯಾರ್ ಮಾಲಾಡಿ ನಿವಾಸಿ ಶಬೀರ್ ಎಂಬವರು ಗಂಭೀರ ಗಾಯಗೊಂಡಿದ್ದು ತಕ್ಷಣ ಅವರನ್ನು ತುಂಬೆ ಖಾಸಗಿ ಆಸ್ಪತ್ರೆಗೆ ಕೊಂಡು ಹೋದರೂ ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೇ  ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

 Share: | | | | |


ಸಿಟಿ ಬಸ್ ಚಾಲಕನ ಧಾವಂತ ; ಬಸ್ಸಿನ ಬಾಗಿಲಲ್ಲಿದ್ದ ಕಂಡಕ್ಟರ್ ಹೊರಕ್ಕೆ ಎಸೆಯಲ್ಪಟ್ಟು ಸಾವು !

Posted by Vidyamaana on 2023-08-30 06:28:04 |

Share: | | | | |


ಸಿಟಿ ಬಸ್ ಚಾಲಕನ ಧಾವಂತ ; ಬಸ್ಸಿನ ಬಾಗಿಲಲ್ಲಿದ್ದ ಕಂಡಕ್ಟರ್ ಹೊರಕ್ಕೆ ಎಸೆಯಲ್ಪಟ್ಟು ಸಾವು !

ಮಂಗಳೂರು: ಖಾಸಗಿ ಬಸ್ಸಿನ ಬಾಗಿಲಿನಲ್ಲಿ ನೇತಾಡುತ್ತಿದ್ದ ಬಸ್ ಕಂಡಕ್ಟರ್ ಹೊರಕ್ಕೆ ಎಸೆಯಲ್ಪಟ್ಟು ತಲೆಗೆ ಗಂಭೀರ ಗಾಯಗೊಂಡು ಸಾವನ್ನಪ್ಪಿದ ಘಟನೆ ನಗರದ ನಂತೂರು ವೃತ್ತದಲ್ಲಿ ನಡೆದಿದೆ. 


ಮಂಗಳವಾರ ಮಧ್ಯಾಹ್ನ ಘಟನೆ ನಡೆದಿದ್ದು 15 ನಂಬರಿನ ಬಸ್ ಕದ್ರಿ ಕೆಪಿಟಿಯಿಂದ ಬಂದು ನಂತೂರು ವೃತ್ತದಲ್ಲಿ ಸಡನ್ ತಿರುವು ಪಡೆದಿದ್ದು ಎದುರಿನ ಬಾಗಿಲಲ್ಲಿ ನಿಂತಿದ್ದ ಕಂಡಕ್ಟರ್ ಕೆಳಕ್ಕೆ ಎಸೆಯಲ್ಪಟ್ಟಿದ್ದಾನೆ. ಬಸ್ ನಿರ್ವಾಹಕನಾಗಿದ್ದ ಮೂಲತಃ ಬಾಗಲಕೋಟ ಜಿಲ್ಲೆಯ ನಿವಾಸಿ, ಸದ್ಯ ಸುರತ್ಕಲ್ ತಡಂಬೈಲ್ ನಲ್ಲಿ ವಾಸವಿದ್ದ ಈರಯ್ಯ (23) ನೇರವಾಗಿ ರಸ್ತೆಗೆ ಎಸೆಯಲ್ಪಟ್ಟಿದ್ದು ಕೂಡಲೇ ಅಲ್ಲಿದ್ದ ಸ್ಥಳೀಯ ಪೊಲೀಸರು ಮತ್ತು ಸಾರ್ವಜನಿಕರು ಸೇರಿ ಯುವಕನನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.ತಲೆಯ ಭಾಗಕ್ಕೆ ತೀವ್ರ ಪೆಟ್ಟು ಬಿದ್ದ ಕಾರಣ ರಾತ್ರಿ 8 ಗಂಟೆ ಸುಮಾರಿಗೆ ಯುವಕ ಸಾವನ್ನಪ್ಪಿದ್ದಾನೆ. ಇದರ ವಿಡಿಯೋ ಎದುರಿನ ವಾಹನದಲ್ಲಿದ್ದ ಫ್ರಂಟ್ ಕ್ಯಾಮರಾದಲ್ಲಿ ರೆಕಾರ್ಡ್ ಆಗಿದ್ದು ಅದೀಗ ಜಾಲತಾಣದಲ್ಲಿ ವೈರಲ್ ಆಗಿದೆ. ಬಸ್ ವೇಗವಾಗಿ ಚಲಿಸಿದ್ದರಿಂದಲೇ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕದ್ರಿ ಸಂಚಾರಿ ಠಾಣೆಯಲ್ಲಿ ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ. ಕಲೆಕ್ಷನ್ ಮಾಡುವ ಮತ್ತು ಟೈಮ್ ಕೀಪಿಂಗ್ ಭರದಲ್ಲಿ ನಗರದ ಖಾಸಗಿ ಬಸ್ ನಿರ್ವಾಹಕರು, ಚಾಲಕರು ಎರ್ರಾಬಿರ್ರಿಯಾಗಿ ವರ್ತಿಸುತ್ತಿದ್ದು ಬಸ್ಸಿನಲ್ಲಿ ಸಿಬಂದಿಯಾಗಿದ್ದ ಯುವಕನೊಬ್ಬ ಬಲಿಯಾಗಿದ್ದಾನೆ.

ನದಿಯಲ್ಲಿ ಈಜಲು ಹೋದ ಕಾರ್ಕಳದ ಉಪನ್ಯಾಸಕರಿಬ್ಬರು ನಾಪತ್ತೆ: ಒಬ್ಬರ ಶವ ಪತ್ತೆ

Posted by Vidyamaana on 2023-06-18 11:03:17 |

Share: | | | | |


ನದಿಯಲ್ಲಿ ಈಜಲು ಹೋದ ಕಾರ್ಕಳದ ಉಪನ್ಯಾಸಕರಿಬ್ಬರು ನಾಪತ್ತೆ: ಒಬ್ಬರ ಶವ ಪತ್ತೆ

ಶಿವಮೊಗ್ಗ: ತುಂಗಾ ನದಿಯಲ್ಲಿ ಈಜಲು ಹೋದ ಉಪನ್ಯಾಸಕರಿಬ್ಬರಲ್ಲಿ ಒಬ್ಬರ ಮೃತದೇಹ ಪತ್ತೆಯಾಗಿದ್ದು, ಮತ್ತೊಬ್ಬರು ನಾಪತ್ತೆಯಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ತೀರ್ಥ ಮತ್ತೂರು ಗ್ರಾಮದ ಬಳಿಯ ತುಂಗಾ ನದಿಯಲ್ಲಿ ಈ ಘಟನೆ ನಡೆದಿದೆ.


ಕಾರ್ಕಳದ ಪ್ರತಿಷ್ಠಿತ ಕಾಲೇಜಿನ ಉಪನ್ಯಾಸಕರಿಬ್ಬರು ತಮ್ಮ ಸ್ನೇಹಿತರೊಂದಿಗೆ ಪ್ರವಾಸಕ್ಕೆಂದು ಬಂದಿದ್ದರು. ತುಂಗಾನದಿಯಲ್ಲಿ ಈಜಲು ತೆರಳಿದ್ದ ವೇಳೆ ದುರಂತ ಸಂಭವಿಸಿದೆ. ನಿಟ್ಟೆ ಕಾಲೇಜಿನ ಉಪನ್ಯಾಸಕರಾದ 38 ವರ್ಷದ ಪುನೀತ್‌ ಹಾಗೂ 36 ವರ್ಷದ ಬಾಲಾಜಿ ತುಂಗಾ ನದಿಯಲ್ಲಿ ಈಜಲು ತೆರಳಿದ್ದರು. ಈ ವೇಳೆ ಇಬ್ಬರೂ ನಾಪತ್ತೆಯಾಗಿದ್ದಾರೆ. ಕೂಡಲೇ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ. ಈ ವೇಳೆ, ಒಬ್ಬರು ಉಪನ್ಯಾಸಕರ ಮೃತದೇಹ ಪತ್ತೆಯಾಗಿದ್ದರೆ, ಮತ್ತೊಬ್ಬರು ನಾಪತ್ತೆಯಾಗಿದ್ದಾರೆ.


ಪ್ರವಾಸಕ್ಕೆಂದು ಬಂದಿದ್ದ ಉಪನ್ಯಾಸಕರು ತೀರ್ಥಹಳ್ಳಿಯ ತೀರ್ಥಮತ್ತೂರು ಮಠದ ಸಮೀಪ ತಂಗಿದ್ದರು. ಈಜಲು ತೆರಳಿದ್ದ ವೇಳೆ ನಾಪತ್ತೆಯಾಗಿದ್ದಾರೆ. ಇಬ್ಬರನ್ನು ಪತ್ತೆಹಚ್ಚಲು ತೀರ್ಥಹಳ್ಳಿ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ.

ಏ.14ರಂದು ಮಂಗಳೂರಿನಲ್ಲಿ ಪ್ರಧಾನಿ ಮೋದಿ ರ್‍ಯಾಲಿ ; ಕುಳೂರಿನಲ್ಲಿ ಬೃಹತ್ ಸಮಾವೇಶಕ್ಕೆ ಸಿದ್ಧತೆ

Posted by Vidyamaana on 2024-04-09 04:34:17 |

Share: | | | | |


ಏ.14ರಂದು ಮಂಗಳೂರಿನಲ್ಲಿ ಪ್ರಧಾನಿ ಮೋದಿ ರ್‍ಯಾಲಿ ; ಕುಳೂರಿನಲ್ಲಿ ಬೃಹತ್ ಸಮಾವೇಶಕ್ಕೆ ಸಿದ್ಧತೆ

ಮಂಗಳೂರು, ಎ.8: ಲೋಕಸಭಾ ಚುನಾವಣೆಯ ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್ 14ರಂದು ಎರಡನೇ ಬಾರಿಗೆ ರಾಜ್ಯಕ್ಕೆ ಆಗಮಿಸಲಿದ್ದು ಮಂಗಳೂರಿನಲ್ಲಿ ಬೃಹತ್ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಅಂದು ಮಧ್ಯಾಹ್ನ 3 ಗಂಟೆಗೆ ನಗರದ ಬಂಗ್ರಕೂಳೂರಿನ ಗೋಲ್ಡ್‌ಫಿಂಚ್ ಮೈದಾನದಲ್ಲಿ ಬೃಹತ್ ಸಾರ್ವಜನಿಕ ಸಭೆ ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಲಿದ್ದಾರೆ.


ಬಿಜೆಪಿಯ ರಾಜ್ಯ ಪ್ರಧಾನ ಕಾರ್ಯದರ್ಶಿ, ರಾಜ್ಯ ಚುನಾವಣಾ ಸಮಿತಿಯ ಪ್ರಧಾನ ಸಂಚಾಲಕ ವಿ. ಸುನಿಲ್ ಕುಮಾರ್ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದರು. ದಕ್ಷಿಣ ಕನ್ನಡ ಜಿಲ್ಲೆಗೆ ಹಿಂದಿನ ಬಾರಿ ಮೋದಿ ಅವರು ಭೇಟಿ ನೀಡಿದಾಗ ಸೇರಿದ ಜನತೆಯ ದಾಖಲೆ ಮೀರಿಸುವಂತೆ ಈ ಬಾರಿ ಜನರು ಸಮಾವೇಶಗೊಳ್ಳಲಿದ್ದಾರೆ. ಪ್ರಧಾನಿ ಭೇಟಿಯಿಂದ ಕಾರ್ಯಕರ್ತರ ಉತ್ಸಾಹ ಇಮ್ಮಡಿಯಾಗಲಿದೆ. ಅನಂತರ ಮೂರು ದಿನಗಳ ಕಾಲ ಅಂದರೆ ಏ.15, 16, 17ರಂದು ಪಕ್ಷದ ರಾಜ್ಯಾಧ್ಯಕ್ಷರಿಂದ ತೊಡಗಿ ಎಲ್ಲ ಪ್ರಮುಖರು, ಅಭ್ಯರ್ಥಿಗಳು, ಕಾರ್ಯಕರ್ತರು ಮನೆ ಮನೆ ಸಂಪರ್ಕ ಹಾಗೂ ಪ್ರಚಾರ ಅಭಿಯಾನ ನಡೆಸಲಿದ್ದಾರೆ ಎಂದು ಸುನಿಲ್ ಕುಮಾರ್ ಹೇಳಿದರು.ಏ.10, 11ರಂದು ಪಕ್ಷವು ಬೂತ್ ಮಟ್ಟದ ಮಹಾ ಪ್ರಚಾರ ಅಭಿಯಾನ ಕೈಗೊಂಡಿದ್ದು, ರಾಜ್ಯದ 58 ಸಾವಿರ ಬೂತ್‌ಗಳಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಮೊದಲ ಹಂತದ ಚುನಾವಣೆ ನಡೆಯುವ ಕ್ಷೇತ್ರಗಳ ವ್ಯಾಪ್ತಿಯಲ್ಲಿ 15, 16, 17ರಂದು ಮನೆ ಮನೆ ಸಂಪರ್ಕ ಅಭಿಯಾನ ನಡೆಯುತ್ತದೆ. ಈ ಬಾರಿ ಸುರಕ್ಷಿತ ಭಾರತ, ಸಾಂಸ್ಕೃತಿಕ ಭಾರತ ಮತ್ತು ವಿಕಸಿತ ಭಾರತ ಎಂಬ ಮೂರು ಪ್ರಮುಖ ವಿಚಾರಗಳನ್ನು ಇಟ್ಟುಕೊಂಡು ಜನರ ಬಳಿಗೆ ಹೋಗುತ್ತೇವೆ ಎಂದು ಸುನಿಲ್ ಕುಮಾರ್ ವಿವರಿಸಿದರು

ಏರ್ ಇಂಡಿಯಾ ಗಗನಸಖಿ ಕೊಲೆ ಪ್ರಕರಣದ ಆರೋಪಿ ವಿಕ್ರಂ ಪೊಲೀಸ್ ಠಾಣೆಯಲ್ಲೇ ಆತ್ಮಹತ್ಯೆ

Posted by Vidyamaana on 2023-09-08 21:50:08 |

Share: | | | | |


ಏರ್ ಇಂಡಿಯಾ ಗಗನಸಖಿ ಕೊಲೆ ಪ್ರಕರಣದ ಆರೋಪಿ ವಿಕ್ರಂ ಪೊಲೀಸ್ ಠಾಣೆಯಲ್ಲೇ ಆತ್ಮಹತ್ಯೆ

ಮುಂಬೈ: ಗಗನಸಖಿ ಒಬ್ಬರನ್ನು ಕತ್ತು ಸೀಳಿ ಭೀಕರವಾಗಿ ಕೊಲೆ ಮಾಡಿರುವ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿಯೊಬ್ಬ ಅಂಧೇರಿಯ ಪೊಲೀಸ್ ಠಾಣೆಯಲ್ಲಿ ತನ್ನ ಪ್ಯಾಂಟ್ ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮುಂಬೈನ ಮರೋಲ್ ಪ್ರದೇಶದಲ್ಲಿ ವಾಸಿಸುತ್ತಿದ್ದ 23 ವರ್ಷದ ಗಗನಸಖಿಯನ್ನು ಕೊಂದ ಆರೋಪದಲ್ಲಿ ವಿಕ್ರಂ ಅತ್ವಾಲ್ ನನ್ನು ಪೊಲೀಸರು ಬಂಧಿಸಿದ್ದರು. ಆರೋಪಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ ಎಂದು ಮುಂಬೈ ಪೊಲೀಸರು ಹೇಳಿದ್ದಾರೆ.

ಗಗನಸಖಿ ರೂಪಲ್ ಒಗ್ರೆ ಅಂಧೇರಿಯ ಅಪಾರ್ಟ್ಮೆಂಟ್ ನಲ್ಲಿ ಕತ್ತು ಸೀಳಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಛತ್ತೀಸ್ ಗಢ ಮೂಲದ ಅವರು ವಿಮಾನಯಾನ ಸಂಸ್ಥೆಯಲ್ಲಿ ತರಬೇತಿಗಾಗಿ ಏಪ್ರಿಲ್ ನಲ್ಲಿ ಮುಂಬೈಗೆ ಬಂದಿದ್ದರು.

ಕೊಲೆ ಆರೋಪದ ಮೇಲೆ ರೂಪಾಲ್ ಉಳಿದುಕೊಂಡಿದ್ದ ಅಪಾರ್ಟ್ಮೆಂಟ್ ನ ಸ್ವಚ್ಚತಾ ಕೆಲಸಗಾರ 40 ವರ್ಷದ ವಿಕ್ರಮ್ ಅತ್ವಾಲ್ ಎಂಬುವವನ್ನು ಪೊಲೀಸರು ಬಂಧಿಸಿದ್ದರು. ಆದರೆ ಶುಕ್ರವಾರ ಆತ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಮೊದಲ ಬಾರಿಗೆ ಹಂದಿ ಮೂತ್ರಪಿಂಡವನ್ನು ಮಾನವನಿಗೆ ಕಸಿ ಮಾಡಿದ US ವೈದ್ಯರು

Posted by Vidyamaana on 2024-03-22 15:35:31 |

Share: | | | | |


ಮೊದಲ ಬಾರಿಗೆ ಹಂದಿ ಮೂತ್ರಪಿಂಡವನ್ನು ಮಾನವನಿಗೆ ಕಸಿ ಮಾಡಿದ US ವೈದ್ಯರು

ನ್ಯೂಯಾರ್ಕ್: ಬೋಸ್ಟನ್ ನ ಮ್ಯಾಸಚೂಸೆಟ್ಸ್ ಜನರಲ್ ಆಸ್ಪತ್ರೆಯ ವೈದ್ಯರು ಗುರುವಾರ ಪ್ರಕಟಿಸಿದ್ದು, ಅಂತಿಮ ಹಂತದ ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿರುವ 62 ವರ್ಷದ ವ್ಯಕ್ತಿಯೊಬ್ಬರು ಆನುವಂಶಿಕವಾಗಿ ಮಾರ್ಪಡಿಸಿದ ಹಂದಿಯಿಂದ ಹೊಸ ಮೂತ್ರಪಿಂಡವನ್ನು ಪಡೆದ ಮೊದಲ ವ್ಯಕ್ತಿಯಾಗಿದ್ದಾರೆ.ಮಾರ್ಚ್ 16 ರಂದು ನಡೆಸಲಾದ ನಾಲ್ಕು ಗಂಟೆಗಳ ಶಸ್ತ್ರಚಿಕಿತ್ಸೆಯು "ರೋಗಿಗಳಿಗೆ ಹೆಚ್ಚು ಸುಲಭವಾಗಿ ಲಭ್ಯವಿರುವ ಅಂಗಗಳನ್ನು ಒದಗಿಸುವ ಅನ್ವೇಷಣೆಯಲ್ಲಿ ಪ್ರಮುಖ ಮೈಲಿಗಲ್ಲನ್ನು ಸೂಚಿಸುತ್ತದೆ" ಎಂದು ಆಸ್ಪತ್ರೆ ಹೇಳಿಕೆಯಲ್ಲಿ ತಿಳಿಸಿದೆ.


ಮ್ಯಾಸಚೂಸೆಟ್ಸ್ನ ವೇಮೌತ್ನ ರಿಚರ್ಡ್ ಸ್ಲೇಮನ್ ಅವರು ಚೇತರಿಸಿಕೊಳ್ಳುತ್ತಿದ್ದು, ಶೀಘ್ರದಲ್ಲೇ ಆಸ್ಪತ್ರೆಯಿಂದ ಬಿಡುಗಡೆಯಾಗುವ ನಿರೀಕ್ಷೆಯಿದೆ ಎಂದು ಆಸ್ಪತ್ರೆ ತಿಳಿಸಿದೆ.

ಪ್ರಾಣಿಯಿಂದ ಮನುಷ್ಯನಿಗೆ ಕಸಿಯ ದೀರ್ಘಕಾಲೀನ ಫಲಿತಾಂಶಗಳಲ್ಲಿ ತಜ್ಞರು ತೀವ್ರ ಆಸಕ್ತಿ ಹೊಂದಿದ್ದಾರೆ ಎಂದು ಲಾಸ್ ಏಂಜಲೀಸ್ನ ಯುಎಸ್ಸಿ ಟ್ರಾನ್ಸ್ಪ್ಲಾಂಟ್ ಇನ್ಸ್ಟಿಟ್ಯೂಟ್ನ ಮೂತ್ರಪಿಂಡ ಮತ್ತು ಮೇದೋಜ್ಜೀರಕ ಗ್ರಂಥಿ ಕಸಿ ನಿರ್ದೇಶಕ ಡಾ.ಜಿಮ್ ಕಿಮ್ ಹೇಳಿದ್ದಾರೆ.ಏಳು ವರ್ಷಗಳ ಡಯಾಲಿಸಿಸ್ ನಂತರ 2018 ರಲ್ಲಿ ಅದೇ ಆಸ್ಪತ್ರೆಯಲ್ಲಿ ಮಾನವ ಮೂತ್ರಪಿಂಡವನ್ನು ಕಸಿ ಮಾಡಲಾಯಿತು, ಆದರೆ ಐದು ವರ್ಷಗಳ ನಂತರ ಅಂಗವು ವಿಫಲವಾಯಿತು ಮತ್ತು ಅವರು ಡಯಾಲಿಸಿಸ್ ಚಿಕಿತ್ಸೆಯನ್ನು ಪುನರಾರಂಭಿಸಿದ್ದರು.


ಮ್ಯಾಸಚೂಸೆಟ್ಸ್ನ ಕೇಂಬ್ರಿಡ್ಜ್ನ ಇಜೆನೆಸಿಸ್ ಈ ಮೂತ್ರಪಿಂಡವನ್ನು ಮಾನವ ಸ್ವೀಕರಿಸುವವರಿಗೆ ಹಾನಿಕಾರಕ ಜೀನ್ಗಳನ್ನು ತೆಗೆದುಹಾಕಲು ಮತ್ತು ಹೊಂದಾಣಿಕೆಯನ್ನು ಸುಧಾರಿಸಲು ಕೆಲವು ಮಾನವ ಜೀನ್ಗಳನ್ನು ಸೇರಿಸಲು ಅನುವಂಶಿಕವಾಗಿ ಸಂಪಾದಿಸಲಾದ ಹಂದಿಯಿಂದ ಒದಗಿಸಿತು. ಕಂಪನಿಯು ಹಂದಿಗಳಲ್ಲಿ ಅಂತರ್ಗತವಾಗಿರುವ ವೈರಸ್ಗಳನ್ನು ನಿಷ್ಕ್ರಿಯಗೊಳಿಸಿದೆ, ಅದು ಈಗ ಸಾಮರ್ಥ್ಯವನ್ನು ಹೊಂದಿದೆ.

ಬೆಳ್ತಂಗಡಿ : ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ಶೇಖರ್ ಬಂಗೇರ ಮೃತ್ಯು

Posted by Vidyamaana on 2024-03-29 05:51:45 |

Share: | | | | |


ಬೆಳ್ತಂಗಡಿ : ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ಶೇಖರ್ ಬಂಗೇರ ಮೃತ್ಯು

ಬೆಳ್ತಂಗಡಿ : ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿ ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ  ಸಾವನ್ನಪ್ಪಿದ ಘಟನೆ ನಡೆದಿದೆ.

ಬೆಳ್ತಂಗಡಿ ನಗರದ ಸಂತೆಕಟ್ಟೆ ಬಸ್ ನಿಲ್ದಾಣದ ಮುಂಭಾಗದಲ್ಲಿ ಮಾ.29 ರಂದು ರಾತ್ರಿ ಶೇಖರ್ ಬಂಗೇರ ಹೇರಾಜೆ(65) ಎಂಬವರು ಹೋಟೆಲ್ ನಿಂದ ಪಾರ್ಸಲ್ ತೆಗೆದುಕೊಂಡು ರಸ್ತೆ ದಾಟುತ್ತಿದ್ದ ವೇಳೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ಸಾಗಿಸುವ ವೇಳೆ ಬಂಟ್ವಾಳದಲ್ಲಿ ಸಾವನ್ನಪ್ಪಿದ್ದಾರೆ.





Leave a Comment: