ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕರ ಸೇವಾಂಜಲಿ ಟ್ರಸ್ಟ್ ಗೆ ಶಾಸಕರಿಂದ ರೂ.೫೦ ಸಾವಿರ ಸಹಾಯಧನ

ಸುದ್ದಿಗಳು News

Posted by vidyamaana on 2024-07-03 19:23:39 |

Share: | | | | |


ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕರ ಸೇವಾಂಜಲಿ ಟ್ರಸ್ಟ್ ಗೆ ಶಾಸಕರಿಂದ ರೂ.೫೦ ಸಾವಿರ ಸಹಾಯಧನ

ಪುತ್ತೂರು: ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕರ ಸೇವಾಂಜಲಿ ಟ್ರಸ್ಟ್ ಗೆ ಪುತ್ತೂರು ಶಾಸಕರಾದ ಅಶೋಕ್ ರೈಯವರು ರೂ. ೫೦ ಸಾವಿರ ಸಹಾಯಧನವನ್ನು ನೀಡಿದರು. ಮಂಗಳೂರು ಕೇಂದ್ರ ಕಚೇರಿಯನ್ನು ಹೊಂದಿರುವ ಈ ಟ್ರಸ್ಟ್ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಈ ಟ್ರಸ್ಟ್‌ನಲ್ಲಿ ಸದಸ್ಯರಾಗಿರುತ್ತಾರೆ.

ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಕ್ಷೇಮಾಭಿವೃದ್ದಿ ಟ್ರಸ್ಟ್ ಇದಾಗಿರುತ್ತದೆ. ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಜಿಲ್ಲಾಧ್ಯಕ್ಷೆ ತಾರಾಬಲ್ಲಾಲ್, ಪುತ್ತೂರು ತಾಲೂಕು ಅಧ್ಯಕ್ಷೆ ಕಮಲ, ತಾಲೂಕು ಕಾರ್ಯದರ್ಶಿ ಪುಷ್ಪಾವತಿ, ಸೇವಾಂಜಲಿ ಟ್ರಸ್ಟ್ ಉಪಾಧ್ಯಕ್ಷೆ ಅರುಣಾ ಡಿ, ನಿರ್ದೇಶಕಿ ಮೀನಾಕ್ಷಿ ಉಪಸ್ಥಿತರಿದ್ದರು.

 Share: | | | | |


BIG NEWS : ನಾಳೆ ಲೋಕಸಭೆ ಚುನಾವಣೆ ಫಲಿತಾಂಶ : ರಾಜ್ಯಾದ್ಯಂತ 144 ಸೆಕ್ಷನ್ ಜಾರಿ

Posted by Vidyamaana on 2024-06-03 07:05:40 |

Share: | | | | |


BIG NEWS : ನಾಳೆ ಲೋಕಸಭೆ ಚುನಾವಣೆ ಫಲಿತಾಂಶ : ರಾಜ್ಯಾದ್ಯಂತ 144 ಸೆಕ್ಷನ್ ಜಾರಿ

ಬೆಂಗಳೂರು : ಲೋಕಸಭೆ ಸಾರ್ವತ್ರಿಕ ಚುನಾವಣೆ-2024 ರ ಹಿನ್ನಲೆಯಲ್ಲಿ ನಾಳೆ ಮತ ಎಣಿಕೆ ನಡೆಯಲಿದ್ದು, ಮತ ಎಣಿಕೆ ಸಂಬಂಧ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಜೂ.04 ರ ಬೆಳಿಗ್ಗೆ 06 ಗಂಟೆಯಿಂದ ಜೂ.05 ರ ಬೆಳಿಗ್ಗೆ 06 ಗಂಟೆಯವರೆಗೆ ಸಿಆರ್‍ಪಿಸಿ 1973 ರ ಸೆಕ್ಷನ್ 144 ರಡಿ ರಾಜ್ಯಾದ್ಯಂತ ಪ್ರತಿಬಂಧಕಾಜ್ಞೆ ವಿಧಿಸಲಾಗಿರುತ್ತದೆ ಹಾಗೂ ಮತ ಎಣಿಕೆ ಕೇಂದ್ರದ ಸುತ್ತ-ಮುತ್ತ 200 ಮೀಟರ್ ಪ್ರದೇಶವನ್ನು ನಿರ್ಬಂಧಿತ ಪ್ರದೇಶವೆಂದೂ ಚುನಾವಣಾ ಆಯೋಗ ಆದೇಶಿಸಿದೆ.

ಮತ ಎಣಿಕೆ ನಂತರ ವಿಜಯ ಹೊಂದಿದ ಅಭ್ಯರ್ಥಿಗಳ ಬೆಂಬಲಿಗರು ಪಟಾಕಿ ಸಿಡಿಸುವುದು, ವಿಜಯೋತ್ಸವ, ಮೆರವಣಿಗೆ, ಸಭೆ ಮತ್ತು ಇತರೆ ಕಾರ್ಯಕ್ರಮಗಳನ್ನು ನಡೆಸಿದಲ್ಲಿ ಕಾನೂನು ಸುವ್ಯವಸ್ಥೆಗೆ ಭಂಗವಾಗುವ ಸಾಧ್ಯತೆಗಳಿರುವುದರಿಂದ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಠಿಯಿಂದ ಹಿತದೃಷ್ಠಿಯಿಂದ ಪ್ರತಿಬಂಧಕಾಜ್ಞೆ ವಿಧಿಸಿ ಆದೇಶ ಜಾರಿಗೊಳಿಸಲಾಗಿದೆ.

ಷರತ್ತುಗಳು:

ಪ್ರತಿಬಂಧಕಾಜ್ಞೆ ಅನ್ವಯ ಐದಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಪಟಾಕಿ ಸಿಡಿಸುವುದು, ವಿಜಯೋತ್ಸವ, ಮೆರವಣಿಗೆ, ರಾಜಕೀಯ ಸಭೆ ಸಮಾರಂಭ, ವಾಹನ ಜಾಥಾ, ರ್ಯಾಲಿ ಮುಂತಾದ ಯಾವುದೇ ಚಟುವಟಿಕೆ ನಡೆಸುವುದು, ಸ್ಪೋಟಕ, ದಹನ ವಸ್ತುಗಳು, ಮಾರಕ ಆಯುಧಗಳನ್ನು ಹೊಂದಿರುವುದು ಅಥವಾ ಹಿಡಿದು ಓಡಾಡುವುದು ಮುಂತಾದವುಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಚುನಾವಣಾ ಅಭ್ಯರ್ಥಿ ಅಥವಾ ಬೆಂಬಲಿಗರು ಸೇರಿ ಐದು ಜನರಗಿಂತ ಹೆಚ್ಚಿನ ಸಂಖ್ಯೆಯ ಜನರು ಸೇರುವಂತಿಲ್ಲ.

ಮತ ಎಣಿಕೆ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯ ಪ್ರದೇಶವು ಸಂಪೂರ್ಣ ನಿರ್ಬಂಧಿತ ಪ್ರದೇಶವಾಗಿದ್ದು, ಈ ಪ್ರದೇಶದಲ್ಲಿ ಖಾಸಗಿ ವಾಹನಗಳ ನಿಲುಗಡೆ, ಧ್ವನಿ ವರ್ಧಕ ಬಳಕೆ ಮುಂತಾದವುಗಳನ್ನು ನಿಷೇಧಿಸಿದೆ. ಸದರಿ ಸ್ಥಳದಲ್ಲಿ ಬಹಿರಂಗವಾಗಿ ಘೋಷಣೆ ಪದ ಹಾಡುವುದು, ವಾದ್ಯ ಬಾರಿಸುವುದು, ವ್ಯಾಖ್ಯಾನ ಕೊಡುವುದು, ಸನ್ನೆ ಅಥವಾ ನಕಲಿ ಪ್ರದರ್ಶನವನ್ನು ಹಾಗೂ ಸಾರ್ವಜನಿಕ ಸಭ್ಯತೆ ಅಥವಾ ನೀತಿಯನ್ನು ಆಕ್ರಮಿಸಬಹುದಾದ ಕೃತ್ಯಗಳನ್ನು ಮಾಡುವುದನ್ನು ನಿಷೇಧಿಸಿದೆ.

ಕ್ರಿಕೆಟ್ ಬ್ಯಾನರ್ ಕಟ್ಟುತ್ತಿದ್ದ ಯುವಕನಿಗೆ ವಿದ್ಯುತ್ ಶಾಕ್ ಮೂರ್ನಾಡಿನ ಆರಿಫ್ ದುರ್ಮರಣ!

Posted by Vidyamaana on 2024-05-11 13:39:56 |

Share: | | | | |


ಕ್ರಿಕೆಟ್ ಬ್ಯಾನರ್ ಕಟ್ಟುತ್ತಿದ್ದ ಯುವಕನಿಗೆ ವಿದ್ಯುತ್ ಶಾಕ್ ಮೂರ್ನಾಡಿನ ಆರಿಫ್ ದುರ್ಮರಣ!

ಮಡಿಕೇರಿ: ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಮೂರ್ನಾಡು ಪಟ್ಟಣದಲ್ಲಿ ನಡೆದಿದೆ

ಶುಕ್ರವಾರ ರಾತ್ರಿ ಈ ಘಟನೆ ನಡೆದಿದ್ದು, ಮೂರ್ನಾಡಿನ ಆರಿಫ್ (34) ಮೃತ ದುರ್ದೈವಿ.

ಉಡುಪಿ: ರಘುಪತಿ ಭಟ್ ಜೊತೆ ಗುರುತಿಸಿಕೊಂಡ ನಾಲ್ವರು ಬಿಜೆಪಿ ಪದಾಧಿಕಾರಿಗಳು ಪಕ್ಷದಿಂದ ಉಚ್ಛಾಟನೆ

Posted by Vidyamaana on 2024-05-31 07:59:03 |

Share: | | | | |


ಉಡುಪಿ: ರಘುಪತಿ ಭಟ್ ಜೊತೆ ಗುರುತಿಸಿಕೊಂಡ ನಾಲ್ವರು ಬಿಜೆಪಿ ಪದಾಧಿಕಾರಿಗಳು ಪಕ್ಷದಿಂದ ಉಚ್ಛಾಟನೆ

ಉಡುಪಿ, ಮೇ 30: ನೈರುತ್ಯ ಪದವೀಧರ ಕ್ಷೇತ್ರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿಯ ಅಧಿಕೃತ ಅಭ್ಯರ್ಥಿ ವಿರುದ್ಧ ಸ್ಪರ್ಧಿಸುತ್ತಿರುವ ಬಂಡಾಯ ಅಭ್ಯರ್ಥಿ ರಘುಪತಿ ಭಟ್ ಜೊತೆ ಗುರುತಿಸಿಕೊಂಡಿರುವ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಮಹೇಶ್ ಠಾಕೂರ್ ಸಹಿತ ನಾಲ್ವರು ಬಿಜೆಪಿ ಪದಾಧಿಕಾರಿಗಳನ್ನು ಪಕ್ಷದಿಂದ ಉಚ್ಛಾಚನೆ ಮಾಡಲಾಗಿದೆ ಎಂದು ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದ್ದಾರೆ.

ಮೇ 13 ಮತ ಏಣಿಕೆ | ಸುರತ್ಕಲ್ ಎನ್ಐಟಿಕೆಯಲ್ಲಿ ಬಿಗಿ ಭದ್ರತೆ: ದ.ಕ. ಜಿಲ್ಲಾಧಿಕಾರಿ ರವಿಕುಮಾರ್

Posted by Vidyamaana on 2023-05-13 01:53:50 |

Share: | | | | |


ಮೇ 13 ಮತ ಏಣಿಕೆ | ಸುರತ್ಕಲ್ ಎನ್ಐಟಿಕೆಯಲ್ಲಿ ಬಿಗಿ ಭದ್ರತೆ: ದ.ಕ. ಜಿಲ್ಲಾಧಿಕಾರಿ ರವಿಕುಮಾರ್

ಮಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಮೇ 13ರಂದು ಆರಂಭವಾಗಲಿದ್ದು, ಸುರತ್ಕಲ್ ಎನ್ ಐಟಿಕೆಯಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ರವಿಕುಮಾರ್ ತಿಳಿಸಿದ್ದಾರೆ.ಈ ಬಗ್ಗೆ ಎನ್ಐಟಿಕೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇ 10 ರಂದು ನಡೆದ ಚುನಾವಣೆಯಲ್ಲಿ ಜಿಲ್ಲೆಯಲ್ಲಿ 77.39% ಮತದಾನವಾಗಿದೆ. ಅಂಚೆ ಮತಗಳ ಎಣಿಕೆ ಬೆಳಿಗ್ಗೆ 8 ಗಂಟೆಗೆ ಪ್ರಾರಂಭವಾಗಲಿದ್ದು, ನಂತರ ಇವಿಎಂಗಳ ಎಣಿಕೆ ಬೆಳಿಗ್ಗೆ 8:30 ಕ್ಕೆ ನಡೆಯಲಿದೆ.ಅಭ್ಯರ್ಥಿಗಳು ಅಥವಾ ಅವರ ಏಜೆಂಟರು ರಿಟರ್ನಿಂಗ್ ಅಧಿಕಾರಿಗಳ ಪಕ್ಕದಲ್ಲಿ ಕುಳಿತುಕೊಳ್ಳಲು ಸಾಕಷ್ಟು ವ್ಯವಸ್ಥೆ ಮಾಡಲಾಗಿದೆ. ಮತ ಎಣಿಕೆ ಕೇಂದ್ರದ ಪ್ರತಿ ಟೇಬಲ್ ನ ಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಯಾವುದೇ ಅಕ್ರಮಗಳು ನಡೆಯದಂತೆ ಕೇಂದ್ರ ಮತ್ತು ರಾಜ್ಯ ಚುನಾವಣಾ ಆಯೋಗಗಳು ಮೇಲ್ವಿಚಾರಣೆ ನಡೆಸಲಿವೆ ಎಂದು ಜಿಲ್ಲಾಧಿಕಾರಿ ಹೇಳಿದರು.

ಮತ ಎಣಿಕೆ ಕೇಂದ್ರದಲ್ಲಿ 300 ಹೆಡ್ ಕಾನ್ಸ್ಟೇಬಲ್ ಗಳು, 14 ಇನ್ಸ್ಪೆಕ್ಟರ್ ಗಳು , 2 ಡಿಸಿಪಿಗಳು, 400 ಸಿವಿಲ್ ಪೊಲೀಸ್ ಸಿಬ್ಬಂದಿ, 39 ಸಹಾಯಕ ಸಬ್ಇನ್ಸ್ಪೆಕ್ಟರ್ ಗಳು, 200 ಗೃಹರಕ್ಷಕರು, 4 ತುಕಡಿಗಳು, ಕೆಎಸ್ ಆರ್ ಪಿ ತುಕಡಿಗಳು ಮತ್ತು ಸಿಎಪಿಎಫ್ ತುಕಡಿಗಳನ್ನು ನಿಯೋಜಿಸಲಾಗಿದೆ ಎಂದು ಹೇಳಿದ್ದಾರೆ.

ಇರಾನ್ ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟ‌ರ್ ತುರ್ತು ಭೂಸ್ಪರ್ಷ - ಇಬ್ರಾಹಿಂ ರೈಸಿ ಸ್ಥಿತಿ ಹೇಗಿದೆ?

Posted by Vidyamaana on 2024-05-19 20:56:19 |

Share: | | | | |


ಇರಾನ್ ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟ‌ರ್ ತುರ್ತು ಭೂಸ್ಪರ್ಷ - ಇಬ್ರಾಹಿಂ ರೈಸಿ ಸ್ಥಿತಿ ಹೇಗಿದೆ?

ಟೆಹರಾನ್ : ಇರಾನ್ ಅಧ್ಯಕ್ಷ ಇಬ್ರಾಹಿಂ ರಯೀಸಿ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಕಠಿಣ ಪರಿಸ್ಥಿತಿಯಲ್ಲಿ ತುರ್ತು ಭೂ ಸ್ಪರ್ಷ ಮಾಡಿದೆ ಎಂದು ಇರಾನ್‌ನ ಸುದ್ದಿ ಸಂಸ್ಥೆ ತಸ್ನೀಮ್‌ ರವಿವಾರ ಎಕ್ಸ್‌ನಲ್ಲಿ ವರದಿ ಮಾಡಿದೆ. ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದಲ್ಲಿ ಮಂಜಿನ ಪರಿಸ್ಥಿತಿಗಳಿಂದಾಗಿ ಹೆಲಿಕಾಪ್ಟರ್ ಕಠಿಣ ಪರಿಸ್ಥಿತಿಯಲ್ಲಿ ತುರ್ತು ಭೂ ಸ್ಪರ್ಷ ಮಾಡಿತು.

BREAKING: ಸ್ಥಗಿತಗೊಂಡಿದ್ದ 5, 8, 9, ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆ ಮುಂದುವರೆಸಿ- ಹೈಕೋರ್ಟ್‌ ಆದೇಶ

Posted by Vidyamaana on 2024-03-22 12:26:54 |

Share: | | | | |


BREAKING: ಸ್ಥಗಿತಗೊಂಡಿದ್ದ 5, 8, 9, ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆ ಮುಂದುವರೆಸಿ- ಹೈಕೋರ್ಟ್‌ ಆದೇಶ

ಬೆಂಗಳೂರು : ರಾಜ್ಯ ಶಾಲಾ ಶಿಕ್ಷಣ ಇಲಾಖೆ ನಿಗದಿ ಪಡಿಸಿದ್ದಂತ 5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆಯನ್ನು ಹೈಕೋರ್ಟ್ ಬಳಿಕ, ಸುಪ್ರೀಂ ಕೋರ್ಟ್ ರದ್ದುಪಡಿಸಿತ್ತು. ಆದ್ರೇ ಹೈಕೋರ್ಟ್ ಗೆ ಬೋರ್ಡ್ ಪರೀಕ್ಷೆಗೆ ಅನುಮತಿ ಕೋರಿ ಪೋಷಕರು ಸಲ್ಲಿಸಿದ್ದಂತ ವಿಚಾರಣೆಯನ್ನು ಹೈಕೋರ್ಟ್ ನಡೆಸಿತ್ತು.ಈ ಬಳಿಕ ಹೈಕೋರ್ಟ್ ತೀರ್ಪು ಕಾಯ್ದಿರಿಸಿತ್ತು. ಇಂತಹ ತೀರ್ಪನ್ನು ಇಂದು ಪ್ರಕಟಿಸಿದ್ದು, ಸ್ಥಗಿತಗೊಂಡಿರುವಂತ ಪರೀಕ್ಷೆಗಳನ್ನು ಮುಂದುವರೆಸಲು ಹೈಕೋರ್ಟ್ ಸೂಚಿಸಿದೆ. 


ಶಾಲಾ ಶಿಕ್ಷಣ ಇಲಾಖೆ ನಿಗದಿ ಪಡಿಸಿದ್ದಂತ 5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆ ರದ್ದು ಕೋರಿ ಖಾಸಗಿ ಶಾಲೆಗಳ ಸಂಘದಿಂದ ಹೈಕೋರ್ಟ್ ಮೆಟ್ಟಿಲೇರಲಾಗಿತ್ತು. ಈ ಅರ್ಜಿ ವಿಚಾರಣೆ ನಡೆಸಿದ್ದಂತ ಏಕ ಸದಸ್ಯ ನ್ಯಾಯಪೀಠವು ಬೋರ್ಡ್ ಪರೀಕ್ಷೆಯನ್ನು ರದ್ದುಗೊಳಿಸಿ ಆದೇಶಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ವಿಭಾಗಿಯ ನ್ಯಾಯಪೀಠಕ್ಕೆ ಮೇಲ್ಮನವಿ ಸಲ್ಲಿಸಲಾಗಿತ್ತು. ಈ ಅರ್ಜಿಯನ್ನು ವಿಚಾರಣೆ ನಡೆಸಿದ್ದಂತ ಹೈಕೋರ್ಟ್, 5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸೋದಕ್ಕೆ ಗ್ರೀನ್ ಸಿಗ್ನಲ್ ನೀಡಿತ್ತು.ಆದ್ರೇ ಹೈಕೋರ್ಟ್ ನ್ಯಾಯಪೀಠದ ಆದೇಶವನ್ನು ಪ್ರಶ್ನಿಸಿ ಖಾಸಗಿ ಶಾಲೆಗಳ ಸಂಘದಿಂದ ಸುಪ್ರೀಂ ಕೋರ್ಟ್ ಮೊರೆ ಹೋಗಲಾಗಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ್ದಂತ ಸುಪ್ರೀಂ ಕೋರ್ಟ್ ನ್ಯಾಯಪೀಠವು ಬಾಕಿ ಇರುವಂತ 5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆಗೆ ತಡೆಯಾಜ್ಞೆ ನೀಡಿ ಆದೇಶಿಸಿತ್ತು. ಹೀಗಾಗಿ ಶಾಲಾ ಶಿಕ್ಷಣ ಇಲಾಖೆಯಿಂದ ಬೋರ್ಡ್ ಪರೀಕ್ಷೆಯನ್ನು ಮುಂದೂಡಿ ಆದೇಶ ಕೂಡ ಮಾಡಲಾಗಿತ್ತು.


ಈ ಬೆನ್ನಲ್ಲೇ ಬೋರ್ಡ್ ಪರೀಕ್ಷೆಗೆ ಅನುಮತಿ ಕೋರಿ ಪೋಷಕರಿಂದ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿತ್ತು. ಸುಪ್ರೀಂ ಕೋರ್ಟ್ ಮೇಲ್ಮನವಿ ವಿಚಾರಣೆ ಪೂರ್ಣಗೊಳಿಸುವಂತೆ ಸೂಚಿಸಿದ್ದಂತ ಸೂಚನೆಯಂತೆ ವಿಚಾರಣೆಯನ್ನು ಪೂರ್ಣಗೊಳಿಸಿತ್ತು. ಆ ನಂತ್ರ ತನ್ನ ತೀರ್ಪನ್ನು ಕಾಯ್ದಿರಿಸಿತ್ತು.ಇಂದು ಬೆಳಿಗ್ಗೆ 10.30ಕ್ಕೆ ಹೈಕೋರ್ಟ್ ವಿಭಾಗೀಯ ನ್ಯಾಯಪೀಠದ ನ್ಯಾಯಮೂರ್ತಿ ಕೆ.ಸೋಮಶೇಖರ್ ಹಾಗೂ ನ್ಯಾಯಮೂರ್ತಿ ಕೆ.ರಾಜೇಶ್ ರೈ ಅವರನ್ನೊಳ್ಳಗೊಂಡ ನ್ಯಾಯಪೀಠವು ಕಾಯ್ದಿರಿಸಿದ್ದಂತ ತೀರ್ಪನ್ನು ಪ್ರಕಟಿಸಿದೆ.


ಹೈಕೋರ್ಟ್ ವಿಭಾಗೀಯ ನ್ಯಾಯಪೀಠವು 5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆಯನ್ನು ಮುಂದುವರೆಸುವಂತೆ ಶಿಕ್ಷಣ ಇಲಾಖೆಗೆ ಆದೇಶಿಸಿದೆ. ಮುಂದಿನ ಶೈಕ್ಷಣಿಕ ವರ್ಷದೊಂದಿಗೆ ಸಂಬಂಧಪಟ್ಟವರೊಂದಿಗೆ ಸಮಾಲೋಚಿಸಿ ಕ್ರಮ ವಹಿಸುವಂತೆ ಶಿಕ್ಷಣ ಇಲಾಖೆಗೆ ಸೂಚಿಸಿದೆ.



Leave a Comment: