ವಿ.ಹಿಂ.ಪರಿಷದ್ ನ ಪುತ್ತೂರು ನಗರ ಘಟಕದ ಅಧ್ಯಕ್ಷರಾಗಿ ಎಸ್.ದಾಮೋದರ ಪಾಟಾಳಿ ನೇಮಕ

ಸುದ್ದಿಗಳು News

Posted by vidyamaana on 2024-07-03 11:16:18 |

Share: | | | | |


ವಿ.ಹಿಂ.ಪರಿಷದ್ ನ ಪುತ್ತೂರು ನಗರ ಘಟಕದ ಅಧ್ಯಕ್ಷರಾಗಿ ಎಸ್.ದಾಮೋದರ ಪಾಟಾಳಿ ನೇಮಕ

ಪುತ್ತೂರು : ವಿಶ್ವ ಹಿಂದೂ ಪರಿಷದ್ ನ ಪುತ್ತೂರು ನಗರ ಘಟಕದ ಅಧ್ಯಕ್ಷರಾಗಿ ಎಸ್.ದಾಮೋದರ ಪಾಟಾಳಿಯವರನ್ನು ನೇಮಕ ಮಾಡಲಾಗಿದೆ.ವಿಶ್ವ ಹಿಂದೂ ಪರಿಷದ್ ನ ಜಿಲ್ಲೆಯ ಕಾರ್ಯಾಲಯದಲ್ಲಿ ನಡೆದ ಬೈಠಕ್ ನಲ್ಲಿ ಜಿಲ್ಲಾಧ್ಯಕ್ಷ ಡಾ.ಕೃಷ್ಣ ಪ್ರಸನ್ನ ಘೋಷಿಸಿದರು.

ವಿಶ್ವ ಹಿಂದೂ ಪರಿದ್ ನ ಜಿಲ್ಲಾ ಉಪಾಧ್ಯಕ್ಷ ಸತೀಶ್ ಬಿ.ಎಸ್., ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ಜಿಲ್ಲಾ ಸೇವಾ ಪ್ರಮುಖ್ ಸೀತಾರಾಮ ಭಟ್, ಜಿಲ್ಲಾ ಸಹ ಕಾರ್ಯದರ್ಶಿ ಶ್ರೀಧರ್ ತೆಂಕಿಲ ಮತ್ತಿತರರು ಈ ವೇಳೆ ಉಪಸ್ಥಿತರಿದ್ದರು.

 Share: | | | | |


ಸೋಷಿಯಲ್ ಮೀಡಿಯಾದಲ್ಲಿ ಬರೆದಿರುವುದು ತಪ್ಪು

Posted by Vidyamaana on 2023-07-28 14:57:50 |

Share: | | | | |


ಸೋಷಿಯಲ್ ಮೀಡಿಯಾದಲ್ಲಿ ಬರೆದಿರುವುದು ತಪ್ಪು

ಬೆಂಗಳೂರು: ಸಿದ್ದರಾಮಯ್ಯ ಕುಟುಂಬದ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಅವರಿಗೆ ಸ್ಟೇಷನ್ ಜಾಮೀನು ಲಭಿಸಿದೆ.  


ಬೆಂಗಳೂರಿನ ಪೊಲೀಸರು ವಶಕ್ಕೆ ಪಡೆದು, ವಿಚಾರಣೆ ನಡೆಸಿದ ಬಳಿಕ ಶಕುಂತಲಾ ನಟರಾಜ್ ಅವರನ್ನು ಠಾಣಾ ಜಾಮೀನು(ಸ್ಟೇಷನ್ ಜಾಮೀನು) ನೀಡಿ ಬಿಡುಗಡೆಗೊಳಿಸಿದ್ದಾರೆ ಎಂದು ವರದಿಯಾಗಿದೆ.  


ಉಡುಪಿ ಕಾಲೇಜಿನ ಶೌಚಾಲಯದಲ್ಲಿ ಚಿತ್ರೀಕರಣದ ಬಗ್ಗೆ ಟ್ವೀಟ್ ಮಾಡಿದ್ದ ಶಕುಂತಲಾ, “ಮುಸ್ಲಿಂ ಯುವತಿಯರು ಟಾಯ್ಲೆಟ್ ನಲ್ಲಿ ಕ್ಯಾಮೆರಾ ಇಟ್ಟು ಹಿಂದೂ ಹೆಣ್ಣುಮಕ್ಕಳ ವಿಡಿಯೋ ಮಾಡಿದ್ದು ಕಾಂಗ್ರೆಸ್​ನವರ ಪ್ರಕಾರ ಮಕ್ಕಳಾಟವಂತೆ. ಸಿದ್ದರಾಮಯ್ಯನವರ ಸೊಸೆ ಅಥವಾ ಹೆಂಡ್ತಿ ವಿಡಿಯೋವನ್ನು ಇದೇ ರೀತಿ ಮಾಡಿದ್ದಿದ್ರೆ ಅದನ್ನು ಮಕ್ಕಳಾಟ ಅಂತ ಒಪ್ಕೋತೀರಾ?” ಎಂದು ವಿವಾದಾತ್ಮಕ ಟ್ವೀಟ್ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಹನುಮಂತರಾಯ ಎಂಬವರು ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಜು.27ರಂದು ದೂರು ನೀಡಿದ್ದರು. ದೂರಿನ ಹಿನ್ನೆಲೆಯಲ್ಲಿ ಶಕುಂತಲಾ ವಿರುದ್ಧ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿತ್ತು.ಶಕುಂತಲಾ ನಟರಾಜ್ ಅವರನ್ನು ಇಂದು ಬೆಳಗ್ಗೆ ಪೊಲೀಸರು ವಶಕ್ಕೆ ಪಡೆದಿದ್ದರು. ಬಳಿಕ ಸ್ವೇಷನ್ ಜಾಮೀನಿನ ಮೇಲೆ ಮನೆಗೆ ಕಳುಹಿಸಿದ್ದಾರೆ.

‘ಸಿಎಂ ಕುಟುಂಬದ ಮಹಿಳೆಯರ ಬಗ್ಗೆ ವೈಯಕ್ತಿಕವಾಗಿ ಆ ರೀತಿ ಸೋಷಿಯಲ್ ಮೀಡಿಯಾದಲ್ಲಿ ಬರೆದಿರುವುದು ತಪ್ಪು. ಮುಂದೆ ಆ ರೀತಿ ನಡೆದುಕೊಳ್ಳುವುದಿಲ್ಲ’ ಎಂದು ಠಾಣೆಯಲ್ಲಿ ಶಕುಂತಲಾ ನಟರಾಜ್ ತಪ್ಪೊಪ್ಪಿಗೆ ಪತ್ರ ಬರೆದಿದ್ದಾರೆ ಎಂದು ವರದಿಯಾಗಿದೆ

ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ಇಲ್ಲ: ಸುಪ್ರೀಂಕೋರ್ಟ್‌ ಮಹತ್ವದ ತೀರ್ಪು

Posted by Vidyamaana on 2023-10-17 13:16:40 |

Share: | | | | |


ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ಇಲ್ಲ: ಸುಪ್ರೀಂಕೋರ್ಟ್‌ ಮಹತ್ವದ ತೀರ್ಪು

ನವದೆಹಲಿ: ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿಗಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ಮಂಗಳವಾರ ಮಹತ್ವದ ತೀರ್ಪು ಪ್ರಕಟಿಸಿದೆ.


ಭಾರತದಲ್ಲಿ ಮದುವೆಯಾಗುವ ಸಲಿಂಗ ದಂಪತಿಗಳ ಹಕ್ಕಿನ ವಿರುದ್ಧ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಐವರು ನ್ಯಾಯಾಧೀಶರ ಪೀಠವು ಭಾರತದಲ್ಲಿ ಸಲಿಂಗ ವಿವಾಹಗಳನ್ನು ಕಾನೂನುಬದ್ಧವಾಗಿ ಗುರುತಿಸಲು ನಿರಾಕರಿಸಿತು. ಅದರ ಬಗ್ಗೆ ಶಾಸನವನ್ನು ರೂಪಿಸಲು ಸಂಸತ್ತಿಗೆ ಸೂಚಿಸಿತು. ನ್ಯಾಯಾಧೀಶರು ದತ್ತು ಹಕ್ಕುಗಳು ಅಥವಾ ನಾಗರಿಕ ಒಕ್ಕೂಟದ ಮಾನ್ಯತೆಯಂತಹ ವಿಷಯಗಳ ಬಗ್ಗೆ ಒಮ್ಮತದ ತೀರ್ಪಿಗೆ ಬರಲಿಲ್ಲ, ಆದರೆ ಮದುವೆಯಾಗಲು ಯಾವುದೇ ಅನರ್ಹ ಹಕ್ಕು ಇಲ್ಲ ಎಂದು ಸರ್ವಾನುಮತದಿಂದ ಒಪ್ಪಿಕೊಂಡರು.

ಸಂವಿಧಾನದ ಅಡಿಯಲ್ಲಿ ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ಕೋರಿ ಸಲ್ಲಿಸಲಾದ ಅರ್ಜಿಗಳ ಸರಣಿಯ ಮೇಲೆ ನ್ಯಾಯಾಲಯ ತೀರ್ಪು ನೀಡಿದೆ.

‘ಮದುವೆಯಾಗುವ ಹಕ್ಕನ್ನು ಮೂಲಭೂತ ಹಕ್ಕು ಎಂದು ಪರಿಗಣಿಸಲು ಸಾಧ್ಯವಿಲ್ಲ’ ಎಂದು ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಸರ್ವಾನುಮತದಿಂದ ಅಭಿಪ್ರಾಯಪಟ್ಟರು.

ಹುಬ್ಬಳ್ಳಿ ಠಾಣಾಧಿಕಾರಿ ಮಹಮದ್ ರಫೀಕ್ ರವರಿಗೆ ಕಡ್ಡಾಯ ರಜೆ - ಬಿಎ ಜಾಧವ್ ಪ್ರಭಾರ ಇನ್ಸ್‌ಪೆಕ್ಟರ್‌

Posted by Vidyamaana on 2024-01-04 15:49:45 |

Share: | | | | |


ಹುಬ್ಬಳ್ಳಿ ಠಾಣಾಧಿಕಾರಿ ಮಹಮದ್ ರಫೀಕ್ ರವರಿಗೆ ಕಡ್ಡಾಯ ರಜೆ - ಬಿಎ ಜಾಧವ್ ಪ್ರಭಾರ ಇನ್ಸ್‌ಪೆಕ್ಟರ್‌

ಹುಬ್ಬಳ್ಳಿ: ಅಯೋಧ್ಯೆ ಕರಸೇವಕರ ಬಂಧನ ವಿಚಾರದಲ್ಲಿ ಇಕ್ಕಟ್ಟಿಗೆ ಸಿಲುಕಿರುವ ರಾಜ್ಯ ಸರ್ಕಾರ, ಶ್ರೀಕಾಂತ್ ಪೂಜಾರಿಯನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದ ಹುಬ್ಬಳ್ಳಿ ಶಹರ ಠಾಣೆಯ ಇನ್ಸ್‌ಪೆಕ್ಟರ್‌ ಅವರನ್ನು ಕಡ್ಡಾಯ ರಜೆ ಮೇಲೆ ಕಳುಹಿಸಿದೆ. 


ಇನ್ಸ್ ಪೆಕ್ಟರ್ ಮಹಮದ್ ರಫೀಕ್ ಅವರನ್ನು ಕಡ್ಡಾಯ ರಜೆ ಮೇಲೆ ಕಳುಹಿಸಿದ್ದಲ್ಲದೆ, ಅವರ ಜಾಗಕ್ಕೆ ಪ್ರಭಾರ ಜವಾಬ್ದಾರಿಯಾಗಿ ಬಿಎ ಜಾಧವ್ ಅವರನ್ನು ನೇಮಿಸಲಾಗಿದೆ. ಹುಬ್ಬಳ್ಳಿ -ಧಾರವಾಡ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ್ ಅವರು ಬಿಎ ಜಾಧವ್‌ಗೆ ಪ್ರಭಾರ ಠಾಣಾಧಿಕಾರಿಯಾಗಿ ಹೆಚ್ಚುವರಿ ಅಧಿಕಾರ ನೀಡಿದ್ದಾರೆ. 


ಡಿ.29 ರಂದು ಶ್ರೀಕಾಂತ್ ಪೂಜಾರಿಯನ್ನು ಬಂಧಿಸಿದ್ದ ಹುಬ್ಬಳ್ಳಿ ಶಹರ ಠಾಣೆಯ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. 31 ವರ್ಷಗಳ ಹಳೆಯ ಪ್ರಕರಣದಲ್ಲಿ ಬಂಧಿಸಿದ್ದಾರೆ ಎಂದು ತಿಳಿದು ಬರುತ್ತಿದ್ದಂತೆ ಠಾಣೆಯ ಇನ್ ಸ್ಪೆಕ್ಟರ್ ಅಮಾನತಿಗೆ ಆಗ್ರಹಿಸಿ ಬಿಜೆಪಿ ನಾಯಕರು ಭಾರೀ ಪ್ರತಿಭಟನೆ ನಡೆಸಿದ್ದರು. 


ಹಳೆಯ ಪ್ರಕರಣಗಳನ್ನು ವಿಲೇವಾರಿ ಮಾಡುವಾಗ ಬಂಧನ ಮಾಡಲಾಗಿದೆ. ಇದರಲ್ಲಿ  ಯಾವುದೇ ರಾಜಕೀಯ ಇಲ್ಲ ಎಂದು ಸಮರ್ಥಿಸಿಕೊಂಡಿದ್ದ ರಾಜ್ಯ ಸರ್ಕಾರ, ಇದೀಗ ಠಾಣೆಯ ಇನ್ಸ್‌ಪೆಕ್ಟರ್‌ ರಫೀಕ್‌ ಅವರನ್ನು ಕಡ್ಡಾಯ ರಜೆ ಮೇಲೆ ಕಳುಹಿಸಿದ್ದು ಚರ್ಚೆಗೆ ಗ್ರಾಸವಾಗಿದೆ. ಬಿಜೆಪಿ ನಾಯಕರ ಒತ್ತಡಕ್ಕೆ ಮಣಿದು ಈ ರೀತಿ ಮಾಡಿದೆಯಾ ಅಥವಾ ಆಕ್ರೋಶ ತಣ್ಣಗಾಗಿಸಲು ಈ ಕ್ರಮ ಕೈಗೊಂಡಿದೆಯಾ ಎನ್ನುವ ಪ್ರಶ್ನೆ ಎದುರಾಗಿದೆ.

ಲೋಕಸಭಾ ಚುನಾವಣೆ :ಪುತ್ತೂರು ಬಿಜೆಪಿಯಿಂದ ಚುನಾವಣಾ ನಿರ್ವಹಣಾ ಸಮಿತಿ ಸಭೆ

Posted by Vidyamaana on 2024-03-29 21:42:01 |

Share: | | | | |


ಲೋಕಸಭಾ ಚುನಾವಣೆ :ಪುತ್ತೂರು ಬಿಜೆಪಿಯಿಂದ ಚುನಾವಣಾ ನಿರ್ವಹಣಾ ಸಮಿತಿ ಸಭೆ

ಪುತ್ತೂರು :ಲೋಕಸಭಾ ಚುನಾವಣೆಯ ಪುತ್ತೂರು ವಿಧಾನಸಭಾ ಕ್ಷೇತ್ರದ ಚುನಾವಣಾ ನಿರ್ವಹಣಾ ಸಮಿತಿಯ ಸಭೆ ಗ್ರಾಮಾಂತರ ಮಂಡಲ ಅಧ್ಯಕ್ಷರಾದ ಸಾಜ ರಾಧಕೃಷ್ಣ ಆಳ್ವಾರವರ ಅಧ್ಯಕ್ಷತೆಯಲ್ಲಿ ಬಿಜೆಪಿ ಕಛೇರಿಯಲ್ಲಿ ನಡೆಯಿತು.ವಿವಿಧ ವಿಭಾಗಗಳ ಪ್ರಮುಖರಿಂದ ಒಟ್ಟು ಕ್ಷೇತ್ರದ ಚುನಾವಣೆಯ ಕೆಲಸಗಳ ಪ್ರಗತಿಯ ವಿವರಣೆಯನ್ನು ಚುನಾವಣಾ ನಿರ್ವಹಣ ಸಮಿತಿ ಸಂಚಾಲಕರಾದ ಚನಿಲ ತಿಮ್ಮಪ್ಪ ಶೆಟ್ಟಿಯವರು ಅವಲೋಕಿಸಿದರು.


ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಸಂಜೀವ ಮಠಂದೂರು, ವಿಭಾಗ ಸಹಪ್ರಭಾರಿ ಗೋಪಾಲಕೃಷ್ಣ ಹೇರಳೆ, ಪುತ್ತೂರು ಚುನಾವಣೆಯ ಪ್ರಭಾರಿ ಸುಲೋಚನ ಜಿ.ಕೆ ಭಟ್,ಪಕ್ಷದ ಪ್ರಮುಖರಾದ ಅರುಣ್ ಕುಮಾರ್ ಪುತ್ತಿಲ,ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಸುನೀಲ್ ಆಳ್ವಾ,ಜಿಲ್ಲಾ ಕಾರ್ಯದರ್ಶಿ ವಿದ್ಯಾ ಗೌರಿ,ಚುನಾವಣಾ ನಿರ್ವಹಣಾ ಸಹ ಸಂಚಾಲಕರಾದ ಉಮೇಶ್ ಗೌಡ, ಪ್ರಸನ್ನ ಮಾರ್ತ, ಪ್ರ.ಕಾರ್ಯದರ್ಶಿಗಳಾದ ಪುರುಷೋತ್ತಮ ಮುಂಗ್ಲಿಮನೆ, ಜಯಶ್ರೀ ಶೆಟ್ಟಿ, 

ಪ್ರಾಥಮಿಕ ಆರೋಗ್ಯ ಕೇಂದ್ರದ ನರ್ಸ್ ಬಲಿ ಪಡೆದ ಕೇಬಲ್ ವೈರ್

Posted by Vidyamaana on 2024-03-23 06:09:56 |

Share: | | | | |


ಪ್ರಾಥಮಿಕ ಆರೋಗ್ಯ ಕೇಂದ್ರದ ನರ್ಸ್ ಬಲಿ ಪಡೆದ ಕೇಬಲ್ ವೈರ್

ತುಮಕೂರು, ಮಾ.22: ಸಾವು ಯಾವ ರೂಪದಲ್ಲಿ ಬರುತ್ತದೆಯೋ ಹೇಳಲು ಅಸಾಧ್ಯ. ಅದರಂತೆ ತುಮಕೂರು(Tumakuru) ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಇಪ್ಪಾಡಿ ಗ್ರಾಮದಲ್ಲಿ ಯಮನ ರೂಪದಲ್ಲಿ ಬಂದ ಕೇಬಲ್ ವೈರ್ , ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲ್ಲೂಕಿನ ಚಿಂಚಲಕಟ್ಟೆ ಮೂಲದ ಪ್ರಾಥಮಿಕ ಆರೋಗ್ಯ ಕೇಂದ್ರದ ನರ್ಸ್​ವೊಬ್ಬರನ್ನ ಬಲಿ ಪಡೆದಿದೆ. ಲಕ್ಷ್ಮೀ ಬಾಯಿ ಜಾದವ್ (36), ಮೃತ ದುರ್ದೈವಿ.ಘಟನೆ ವಿವರ

ಕುಣಿಗಲ್ ತಾಲ್ಲೂಕಿನ ಇಪ್ಪಾಡಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನರ್ಸ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಇವರು, ಇಂದು ಕೆಲಸ ಮುಗಿಸಿ ಇಪ್ಪಾಡಿಯಿಂದ ಕುಣಿಗಲ್ ಪಟ್ಟಣಕ್ಕೆ ಬೈಕ್​ನಲ್ಲಿ ಬರುವಾಗ ದಾರಿಯಲ್ಲಿ ಹಾದುಹೋಗಿದ್ದ ಕೇಬಲ್ ವೈರ್​ಗೆ ವಿದ್ಯುತ್ ತಂತಿ ತಗುಲಿ ಲಕ್ಷ್ಮೀಬಾಯಿ ಮೇಲೆ‌ ಬಿದ್ದಿದೆ. ಕೇಬಲ್ ವೈರ್ ಬಿದ್ದ ಪರಿಣಾಮ ಲಕ್ಷ್ಮೀಬಾಯಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಇನ್ನು ಬೈಕ್ ಸವಾರ ಇಪ್ಪಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಲಕ್ಣ್ಮಣ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಕುಣಿಗಲ್ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇತ್ತ ಲಕ್ಷ್ಮೀ ಬಾಯಿ ಅವರ ಮೃತದೇಹವನ್ನ ಕುಣಿಗಲ್ ಸಾರ್ವಜನಿಕ ಆಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಲಾಗಿದ್ದು, ಕುಣಿಗಲ್ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.

ವಿಜಯ ಸಾಮ್ರಾಟ್ ತಂಡ ನಿರ್ಮಿಸಿದ ಮನೆ ಹಸ್ತಾಂತರ

Posted by Vidyamaana on 2021-06-30 18:30:00 |

Share: | | | | |


ವಿಜಯ ಸಾಮ್ರಾಟ್ ತಂಡ ನಿರ್ಮಿಸಿದ ಮನೆ ಹಸ್ತಾಂತರ

ಪುತ್ತೂರು: ಚಿಕ್ಕಮುಡ್ನೂರು ಗ್ರಾಮದ ಕುಂಬ್ರುಗ ಎಂಬಲ್ಲಿ ಬಡ ಕುಟುಂಬಕ್ಕೆ ವಿಜಯ ಸಾಮ್ರಾಟ್ ತಂಡ ನಿರ್ಮಾಣ ಮಾಡಿಕೊಟ್ಟ ಮನೆಯನ್ನು ಶಾಸಕ ಸಂಜೀವ ಮಠಂದೂರು ಅವರು ಕುಟುಂಬಕ್ಕೆ ಹಸ್ತಾಂತರಿಸಿದರು.

ಗೋಪಾಲಶೆಟ್ಟಿ ಅವರ ಕುಟುಂಬ ಭದ್ರವಾದ ಮನೆ ಇರದೇ ಪರಿತಪಿಸುತ್ತಿದ್ದ ಸಂಕಷ್ಟ ಹಾಗೂ ಈ ದಂಪತಿ ಪುತ್ರಿಯ ವಿದ್ಯಾಭ್ಯಾಸದ ಸಮಸ್ಯೆ ಮಾಧ್ಯಮಗಳಲ್ಲಿ ವರದಿಯಾಗಿತ್ತು. ಈ ವರದಿಗೆ ಸ್ಪಂದಿಸಿದ ಯುವ ಉದ್ಯಮಿ ಸಹಜ್ ರೈ ಬಳಜ್ಜ ನೇತೃತ್ವದ ವಿಜಯ ಸಾಮ್ರಾಟ್ ತಂಡ, ಶಾಸಕ ಸಂಜೀವ ಮಠಂದೂರು ಅವರ ಉಪಸ್ಥಿತಿಯಲ್ಲಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದರು. ಬಳಿಕ ತಂಡದ ಸದಸ್ಯರು ಕೈಲಾದಷ್ಟು ನೆರವು ನೀಡಿ, ಕುಟುಂಬಕ್ಕಾಗಿ ಮನೆ ನಿರ್ಮಾಣ ಮಾಡಿಕೊಟ್ಟಿದ್ದಾರೆ.

ಡಿ. ೧೦ರಂದು ಈ ಮನೆಯನ್ನು ಕುಟುಂಬಕ್ಕೆ ಹಸ್ತಾಂತರಿಸಲಾಯಿತು. ಗೋಪಾಲ ಶೆಟ್ಟಿ ದಂಪತಿ ದೀಪ ಬೆಳಗಿದರು. ಶಾಸಕ ಸಂಜೀವ ಮಠಂದೂರು ಹಾಗೂ ಅತಿಥಿಗಳು ಶ್ರೀ ಮಹಾಲಿಂಗೇಶ್ವರ ದೇವರ ಭಾವಚಿತ್ರವನ್ನು ನೀಡಿ, ಶುಭಹಾರೈಸಿದರು.

ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ ಮಾತನಾಡಿ, ಯುವ ಸಾಮ್ರಾಟ್ ತಂಡದ ಯುವಕರ ಕಾರ್ಯವನ್ನು ಶ್ಲಾಘಿಸಿದರು.

ಬನ್ನೂರು ಗ್ರಾಪಂ ಅಧ್ಯಕ್ಷೆ ಜಯ ಏಕ, ಪಿಡಿಒ ಚಿತ್ರಾ, ಕೋಡಿಂಬಾಡಿ ಗ್ರಾಪಂ ಅಧ್ಯಕ್ಷ ರಾಮಚಂದ್ರ ಪೂಜಾರಿ, ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ನಾಗೇಶ್, ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್, ಪುತ್ತೂರು ಗ್ರಾಮಾಂತರ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ನವೀನ್ ಪಡ್ನೂರು, ತಾಪಂ ಮಾಜಿ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ಬಿಜೆಪಿ ಮುಖಂಡ ರಾಮದಾಸ್, ವಿಜಯ ಸಾಮ್ರಾಟ್ ತಂಡದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.



Leave a Comment: