ಜೋಕಟ್ಟೆ: ಮನೆ ಮೇಲೆ ತಡೆಗೋಡೆ ಕುಸಿತ; ಬಾಲಕ ಮೃತ್ಯು

ಸುದ್ದಿಗಳು News

Posted by vidyamaana on 2024-07-25 12:27:06 |

Share: | | | | |


ಜೋಕಟ್ಟೆ: ಮನೆ ಮೇಲೆ ತಡೆಗೋಡೆ ಕುಸಿತ; ಬಾಲಕ ಮೃತ್ಯು

ಪಣಂಬೂರು: ಇಲ್ಲಿನ ಜೋಕಟ್ಟೆ ಗ್ರಾಮ ಪಂಚಾಯತ್ ಗುಡ್ಡೆ ಎಂಬಲ್ಲಿ ಮನೆಯ ಮೇಲೆ� ತಡೆಗೋಡೆ ಕುಸಿದು ಬಿದ್ದು ಯುವಕ ಮೃತಪಟ್ಟಿರುವ ಘಟನೆ ಬುಧವಾರ ರಾತ್ರಿ ನಡೆದಿರುವ ಬಗ್ಗೆ ವರದಿಯಾಗಿದೆ‌.ಮುಲ್ಕಿ ಕೊಲ್ನಾಡು ನಿವಾಸಿ ಶಂಕರ ಎಂಬವರ ಪುತ್ರ ಶೈಲೇಶ್ (17) ಮೃತ ಯುವಕ. ಜೋಕಟ್ಟೆಯಲ್ಲಿರುವ ತನ್ನ ದೊಡಮ್ಮನ ಮಗಳ ಮನೆಗೆ ಬಂದಿದ್ದ ಶೈಲೇಶ್, ಇಲ್ಲಿಯೇ ಉಳಿದುಕೊಂಡಿದ್ದ.

ಮನೆಯಲ್ಲಿ ಶೈಲೇಶ್ ರವರ ದೊಡ್ಡಮನ ಮಗಳು ಸವಿತಾ, ಆಕೆಯ ಗಂಡ ಸುರೇಶ್ ಮತ್ತು ಮಗು ಸಾಕ್ಷಿ ಮನೆಯ ಒಂದು ಕೋಣೆಯಲ್ಲಿ ಮಲಗಿದ್ದು, ಶೈಲೇಶ್ ಇನ್ನೊಂದು ಕಡೆ ಮಲಗಿದ್ದ. ತಡೆಗೋಡೆ ಕುಸಿದು ಹಂಚಿನ ಮನೆಯ ಮೇಲೆ ಬಿದ್ದಿದ್ದರಿಂದ ಅಲ್ಲಿ ಮಲಗಿದ್ದ ಶೈಲೇಶ್ ತೀವ್ರ ಗಾಯಗೊಂಡು ಮೃತಪಟ್ಟಿದ್ದಾನೆ. ಇನ್ನೊಂದು ಕೋಣೆಯಲ್ಲಿ ಮಲಗಿದ್ದ ಇತರ ಮೂರು ಜನರಲ್ಲಿ ಸವಿತಾ ಅವರಿಗೆ ಸಣ್ಣ ಗಾಯವಾಗಿದ್ದು‌, ಚಿಕಿತ್ಸೆ ಪಡೆದಿದ್ದಾರೆ‌ ಎಂದು ತಿಳಿದು ಬಂದಿದೆ.

ಶೈಲೇಶ್ ಅವರ ಮೃತದೇಹವನ್ನು ನಗರದ ಎ.ಜೆ.ಆಸ್ಪತ್ರೆಯ ಶವಗಾರದಲ್ಲಿಡಲಾಗಿದ್ದು, ಸ್ಥಳಕ್ಕೆ ಪಣಂಬೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ

 Share: | | | | |


ಕೈ ಹಿಡಿತಾರಾ ಡಿವಿಎಸ್? ಮಾ.19ರಂದು ಮಹತ್ವದ ಸುದ್ದಿಗೋಷ್ಠಿ

Posted by Vidyamaana on 2024-03-18 12:12:08 |

Share: | | | | |


ಕೈ ಹಿಡಿತಾರಾ ಡಿವಿಎಸ್? ಮಾ.19ರಂದು ಮಹತ್ವದ ಸುದ್ದಿಗೋಷ್ಠಿ

ಬೆಂಗಳೂರು :ಮಾಜಿ ಸಿಎಂ ಡಿ.ವಿ.ಸದಾನಂದ ಗೌಡರು ನಾಳೆ ಮಹತ್ವದ ಸುದ್ದಿಗೋಷ್ಠಿಯೊಂದನ್ನು ಕರೆದಿದ್ದು, ಬಹಳ ಕುತೂಹಲವನ್ನು ಉಂಟುಮಾಡಿದ್ದಾರೆ.ಲೋಕಸಭೆ ಚುನಾವಣೆ ಸಮಯಲ್ಲಿ ಡಿವಿ ಸದಾನಂದ ಗೌಡ ಅವರು ಸುದ್ದಿಗೋಷ್ಠಿಯನ್ನು ಕರೆದಿದ್ದು, ಇವರ ಮುಂದಿನ ನಡೆ ಏನು? ಯಾವ ಕಾರಣಕ್ಕೆ ಸುದ್ದಿಗೋಷ್ಠಿ ಕರೆಯಲಾಗಿದೆ ಎಂಬ ಕುತೂಹಲ ಮೂಡಿದೆ. ನಾಳೆ ಬೆಳಗ್ಗೆ 10.30 ಕ್ಕೆ ಡಿವಿಎಸ್‌ ಸುದ್ದಿಗೋಷ್ಠಿ ಕರೆದಿದ್ದಾರೆ.ಬಿಜೆಪಿ ಹೈಕಮಾಂಡ್‌ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಟಿಕೆಟನ್ನು ಶೋಭಾ ಕರಂದ್ಲಾಜೆ ಅವರಿಗೆ ನೀಡಿದ್ದು, ಇತ್ತೀಚೆಗೆ ಶೋಭಾ ಅವರು ಡಿವಿಎಸ್‌ ಅವರ ಆಶೀರ್ವಾದ ಕೂಡಾ ಪಡೆದುಕೊಂಡಿದ್ದರು. ಅನಂತರ ಡಿವಿಎಸ್‌ ಅವರು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದವರಿಗೆ ಪೋಸ್ಟ್‌ವೊಂದನ್ನು ಮಾಡಿ, ಧನ್ಯವಾದ ಹೇಳಿಕೊಂಡಿದ್ದರು.


ಲೋಕಸಭಾ ಟಿಕೆಟ್‌ ಕೈ ತಪ್ಪಿದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ನಾಯಕರು ನಿನ್ನೆ ಬಂದು ಭೇಟಿ ಮಾಡಿದ್ದಾರೆ. ಚರ್ಚೆ ಮಾಡಿ ಆಫರ್‌ ಕೂಡಾ ನೀಡಿದ್ದಾರೆ. ಈ ಕುರಿತು ನನ್ನ ಮನೆಯವರೊಂದಿಗೆ ಮಾತನಾಡುವೆ. ನಂತರ ನಾಳೆ ನನ್ನ ನಿರ್ಧಾರವನ್ನು ತಿಳಿಸುತ್ತೇನೆ ಎಂದು ಸಂಸದ ಡಿ.ವಿ.ಸದಾನಂದ ಗೌಡ ತಿಳಿಸಿದ್ದಾರೆ.


ರಾಜ್ಯದಲ್ಲಿ ನನಗೆ ಆಗಿರುವ ಅನ್ಯಾಯದ ಬಗ್ಗೆ ಕೆಲವೊಂದು ಮನದಾಳದ ವಿಚಾರಗಳನ್ನು ಹೇಳಿಕೊಳ್ಳಬೇಕಿದೆ. ಅದಕ್ಕಾಗಿ ನಾಳೆ ಸುದ್ದಿಗೋಷ್ಟಿ ಕರೆಯುತ್ತೇನೆ. ನಾಳೆ ಯಾವ ನಿರ್ಣಯ ಅಂತ ಈಗಲೇ ಹೇಳಿಬಿಟ್ಟರೆ,ನಾಳೆಗೆ ಏನೂ ಉಳಿಯಲ್ಲ. ರಾಜಕೀಯದಲ್ಲಿ ಏರುಪೇರು, ಮುಜುಗರ ಸಹಜ. ಆದರೆ, ತಿಳಿದೂ.. ತಿಳಿದೂ ಹೀಗೆ ಮಾಡಿರೋದು ಬೇಜಾರು ತಂದಿದೆ ಎಂದು ಬೆಂಗಳೂರಿನಲ್ಲಿ ಮಾಜಿ ಸಿಎಂ ಸದಾನಂದಗೌಡ ಸೋಮವಾರ (ಇಂದು) ಮಾಧ್ಯಮಗಳೊಂದಿಗೆ ಬೆಂಗಳೂರಿನಲ್ಲಿ ಹೇಳಿದರು

RCB ಬೆನ್ನು ಬಿಡದ ಬ್ಯಾಡ್ ಲಕ್ !!!; ಕೆಕೆಆರ್ ಎದುರು 1 ರನ್ ಸೋಲು

Posted by Vidyamaana on 2024-04-22 07:29:22 |

Share: | | | | |


RCB ಬೆನ್ನು ಬಿಡದ ಬ್ಯಾಡ್ ಲಕ್ !!!; ಕೆಕೆಆರ್ ಎದುರು 1 ರನ್ ಸೋಲು

ಕೋಲ್ಕತಾ : ಈಡನ್ ಗಾರ್ಡನ್ಸ್ ನಲ್ಲಿ ಭಾನುವಾರ ನಡೆದ ರೋಚಕ ಪಂದ್ಯದಲ್ಲಿ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಒಂದೇ ಒಂದು ರನ್ ನಿಂದ ಸೋಲು ಅನುಭವಿಸಿದ್ದು ತಂಡದ ದುರಾದೃಷ್ಟಕ್ಕೆ ಸಾಕ್ಷಿಯಾಯಿತು.ಬ್ಯಾಟಿಂಗ್ ಗೆ ಇಳಿಸಲ್ ಪಟ್ಟ ಕೆಕೆಆರ್ ಪರ ಓಪನರ್ ಫಿಲ್ ಸಾಲ್ಟ್ ಅವರ ಆಕ್ರಮಣಕಾರಿ 48 ರನ್ ಮತ್ತು ನಾಯಕ ಶ್ರೇಯಸ್ ಅಯ್ಯರ್ ಅವರ ಅರ್ಧಶತಕದ ನೆರವಿನಿಂದ ಆರು ವಿಕೆಟ್ ನಷ್ಟಕ್ಕೆ 222 ರನ್ ಗಳಿಸಿತು.ಗುರಿ ಬೆನ್ನಟ್ಟಿದ ಆರ್ ಸಿಬಿ ಆರಂಭಿಕ ಆಘಾತ ಅನುಭವಿಸಿತು. 7 ರನ್ ಗಳಿಸಿ ನಾಯಕ ಫ್ಲೆಸಿಸ್ ಔಟಾದರೆ, ಕೊಹ್ಲಿ 18 ರನ್ ಗಳಿಸಿದ್ದ ವೇಳೆ ನಿರ್ಗಮಿಸಿದರು. ಆ ಬಳಿಕ ಭರವಸೆಯ ನಿರ್ಣಾಯಕ ಆಟವಾಡಿದ ವಿಲ್ ಜ್ಯಾಕ್ಸ್ 55(32 ಎಸೆತ) ರನ್ ಗಳಿಸಿ ಔಟಾದರು. ಅವರಿಗೆ ಸಾಥ್ ನೀಡಿದ ರಜತ್ ಪಾಟಿದಾರ್ 52 (23 ಎಸೆತ) ರನ್ ಗಳಿಸಿ ಔಟಾದರು.

ಬಂಟ್ವಾಳ : ಬಿಜೆಪಿ ಸಕ್ರಿಯ ಕಾರ್ಯಕರ್ತ ಅಮ್ಟಾಡಿ ಮಹಾಶಕ್ತಿಕೇಂದ್ರದ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಬೆಳ್ಳೂರು ನಿಧನ.

Posted by Vidyamaana on 2023-09-18 15:21:19 |

Share: | | | | |


ಬಂಟ್ವಾಳ : ಬಿಜೆಪಿ ಸಕ್ರಿಯ ಕಾರ್ಯಕರ್ತ ಅಮ್ಟಾಡಿ ಮಹಾಶಕ್ತಿಕೇಂದ್ರದ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಬೆಳ್ಳೂರು ನಿಧನ.

ಬಂಟ್ವಾಳ : ಜ್ವರದಿಂದ ಬಳಲುತ್ತಿದ್ದ ವ್ಯಕ್ತಿಯೋರ್ವ ಔಷಧಿಗೆಂದು ಆಸ್ಪತ್ರೆಗೆ ಬಂದಿದ್ದ ವೇಳೆ ಸಾವನ್ನಪ್ಪಿದ ಘಟನೆ ನಡೆದಿದೆ.


ಬಿಜೆಪಿ ಸಕ್ರಿಯ ಯುವ ಕಾರ್ಯಕರ್ತ ಪ್ರಕಾಶ್ ಬೆಳ್ಳೂರು (43) ಮೃತ ವ್ಯಕ್ತಿ.



ಅಮ್ಟಾಡಿ ಮಹಾಶಕ್ತಿಕೇಂದ್ರದ ಪ್ರಧಾನ ಕಾರ್ಯದರ್ಶಿಯಾಗಿದ್ದ ಪ್ರಕಾಶ್ ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದರು ಎನ್ನಲಾಗಿದೆ.


ಔಷಧಿಗೆಂದು ಅವರು ಇಂದು‌ ಬೆಳಿಗ್ಗೆ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಬಂದಿದ್ದರು ಎಂದು ಹೇಳಲಾಗಿದೆ. ಈ ವೇಳೆ ವೈದ್ಯರು ಪರೀಕ್ಷೆ ಮಾಡುವ ಮೊದಲೇ ಆಸ್ಪತ್ರೆಯಲ್ಲಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

ನಂದಾವರ ದುರಂತ ಶಾಸಕ ರಾಜೇಶ್ ನಾಯ್ಕ್ ಆಸ್ಪತ್ರೆಗೆ ಭೇಟಿ

Posted by Vidyamaana on 2023-07-08 16:31:49 |

Share: | | | | |


ನಂದಾವರ ದುರಂತ ಶಾಸಕ ರಾಜೇಶ್ ನಾಯ್ಕ್ ಆಸ್ಪತ್ರೆಗೆ ಭೇಟಿ

ಬಂಟ್ವಾಳ : ನಂದಾವರದಲ್ಲಿ  ಮನೆಯೊಂದಕ್ಕೆ ಗುಡ್ಡ ಜರಿದು ಮಣ್ಣಿನೊಳಗೆ ಸಿಲುಕಿಕೊಂಡು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಸಫಾ ಅವರನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಮಂಗಳೂರಿನ ತೇಜಸ್ವಿನಿ ಆಸ್ಪತ್ರೆಗೆ ಬೇಟಿ ನೀಡಿ ಆರೋಗ್ಯ ವಿಚಾರಿಸಿದರು.

ಘಟನೆ ನಡೆದ ಸಂದರ್ಭದಲ್ಲಿ ಶಾಸಕರು ಬೆಂಗಳೂರಿನಲ್ಲಿ ಅಧಿವೇಶನದಲ್ಲಿ ಭಾಗವಹಿಸಿದ್ದ ಕಾರಣ ಇಂದು ಬೆಳಿಗ್ಗೆ ಆಸ್ಪತ್ರೆಗೆ ಬೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು.

   ಘಟನೆಯಲ್ಲಿ ಸಫಾಳ ತಾಯಿ ಮೃತಪಟ್ಟಿದ್ದು, ಕುಟುಂಬಕ್ಕೆ ಸಾಂತ್ವನ ಹೇಳಿದರು. ಘಟನೆಯ ಬಗ್ಗೆ ಮಾಹಿತಿ ಪಡೆದ ಶಾಸಕರು ಸಂಬಂಧಿಸಿದ ಅಧಿಕಾರಿಗಳ ಜೊತೆ ಚರ್ಚಿಸಿ ಕ್ರಮಕೈಗೊಳ್ಳುವ ಬಗ್ಗೆ ಭರವಸೆ ನೀಡಿದರು. ಇದೇ ವೇಳೆ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಸಫಾಳ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ವೈಯಕ್ತಿಕ ನೆಲೆಯಲ್ಲಿ ಭರಿಸುವುದಾಗಿ ಅವರು ಕುಟುಂಬಕ್ಕೆ ಭರವಸೆ ನೀಡಿದರು.  

ಘಟನೆ ವಿವರ

   ಜುಲೈ 7 ರಂದು ಸಜೀಪ ಮುನ್ನೂರು ಗ್ರಾ.ಪಂ.ವ್ಯಾಪ್ತಿಯ ನಂದಾವರ ಗುಂಪು ಮನೆಯೊಂದಕ್ಕೆ ಬೆಳಿಗ್ಗೆ ಸುಮಾರು 6 ರ ವೇಳೆ ಗುಡ್ಡ ಜರಿದು ಮಹಮ್ಮದ್ ನಂದಾವರ ಅವರ ಪತ್ನಿ ಹಾಗೂ ಮಗಳು ಸಫಾ ಮಣ್ಣಿನೊಳಗೆ ಸಿಲುಕಿಕೊಂಡಿದ್ದರು.

ನಿರಂರತವಾಗಿ ಸುರಿಯುವ ಮಳೆ ನಡುವೆಯೂ ಸ್ಥಳೀಯರು, ಅಗ್ನಿಶಾಮಕ ದಳ ಹಾಗೂ ಪೋಲೀಸ್ ಇಲಾಖೆಯ ಸಿಬ್ಬಂದಿಗಳ ಕಾರ್ಯಚರಣೆಯಿಂದ ಮಹಮ್ಮದ್ ಸಣ್ಣ ಪುಟ್ಟ ಗಾಯಗೊಂಡಿದ್ದು, ಸಫಾ ಎಂಬವಳನ್ನು ರಕ್ಷಣೆ ಮಾಡಿ ಕೂಡಲೇ ಆಸ್ಪತ್ರೆಗೆ ದಾಖಲಿಸಿಲಾಗಿತ್ತು. ಆದರೆ ಸಫಾ ಅವರ ತಾಯಿ ಝರಿನಾ ಅವರನ್ನು ಮಣ್ಣಿನೊಳಗಿಂದ ಹೊರತೆಗೆದು ಆಸ್ಪತ್ರೆಗೆ ಕೊಂಡುಹೋಗಿ ಪರೀಕ್ಷಿಸಿದಾಗ ಮೃತಪಟ್ಟ ಬಗ್ಗೆ ವೈದ್ಯರು ತಿಳಿಸಿದ್ದರು.

ಸುಳ್ಯ : ಕೆವಿಜಿ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ನಲ್ಲಿ ಅಬಾಕಸ್ ಗಣಿತ ತರಗತಿ ಉದ್ಘಾಟನೆ

Posted by Vidyamaana on 2023-07-21 02:41:25 |

Share: | | | | |


ಸುಳ್ಯ : ಕೆವಿಜಿ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ನಲ್ಲಿ ಅಬಾಕಸ್ ಗಣಿತ ತರಗತಿ ಉದ್ಘಾಟನೆ

ಸುಳ್ಯ: ಸುಳ್ಯದ ಕೆವಿಜಿ ಇಂಟರ್ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಅಬಾಕಸ್ ಗಣಿತ ತರಗತಿಯ ಉದ್ಘಾಟನಾ ಕಾರ್ಯಕ್ರಮ ಶಾಲಾ ಆಡಿಟೋರಿಯಂನಲ್ಲಿ ನಡೆಯಿತು. ದೀಪ ಬೆಳಗಿಸಿ ಅಬಾಕಸ್ ತರಬೇತಿ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಲಾಯಿತು. 

ಶಾಲಾ ಪ್ರಾಂಶುಪಾಲ ಅರುಣ್ ಕುಮಾರ್ ಮಾತನಾಡಿ, ಅಬಾಕಸ್ ತರಗತಿಯನ್ನು ವಿದ್ಯಾರ್ಥಿಗಳಿಗೆ ನೀಡುವುದರಿಂದ ವಿದ್ಯಾರ್ಥಿಗಳು ಗಣಿತದಲ್ಲಿ ಬರುವ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುತ್ತಾರೆ. ಜೊತೆಗೆ ಅವರ ಬೌದ್ಧಿಕ ಸಾಮರ್ಥ್ಯ ವೃದ್ಧಿಗೊಳ್ಳುತ್ತದೆ ಎಂದು ತಿಳಿಸಿದರು.

ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆ ಪುತ್ತೂರು ಮತ್ತು ಸುಳ್ಯ ಇದರ ಸಿಇಓ ಪ್ರಫುಲ್ಲ ಗಣೇಶ್, ಅಬಾಕಸ್ ತರಗತಿಯ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. 

ಶಾಲಾ ಸಂಚಾಲಕ ಡಾ. ರೇಣುಕಾ ಪ್ರಸಾದ್ ಕೆ. ಮತ್ತು ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಡಾ. ಉಜ್ವಲ್ ಯು.ಜೆ. ಶುಭಹಾರೈಸಿದರು.

ಐ.ಆರ್.ಸಿ.ಎಂ.ಡಿ. ಶಿಕ್ಷಣ ಸಂಸ್ಥೆಯ ನಿರ್ದೇಶಕ ಗಣೇಶ್ ಕೈಂದಾಡಿ, ತರಬೇತುದಾರರಾದ ನಿಕ್ಷಿತಾ ಮತ್ತು ಹರ್ಷಿತಾ ಉಪಸ್ಥಿತರಿದ್ದರು. ಉಪ ಪ್ರಾಂಶುಪಾಲೆ ಶಿಲ್ಪ ಬಿದ್ದಪ್ಪ ಕಾರ್ಯಕ್ರಮ ನಿರೂಪಿಸಿದರು.

ಸುದ್ದಿ ಬಿಡುಗಡೆ ಸಿಬ್ಬಂದಿ ನವೀನ್ ಕಿಶೋರ್ ಹೃದಯಾಘಾತದಿಂದ ನಿಧನ

Posted by Vidyamaana on 2024-01-30 08:14:37 |

Share: | | | | |


ಸುದ್ದಿ ಬಿಡುಗಡೆ ಸಿಬ್ಬಂದಿ  ನವೀನ್ ಕಿಶೋರ್ ಹೃದಯಾಘಾತದಿಂದ ನಿಧನ

ಪುತ್ತೂರು: ಸುದ್ದಿ ಬಿಡುಗಡೆ ಪತ್ರಿಕೆಯ ಸಿಬ್ಬಂದಿ ಕುದ್ದುಪದವು ನಿವಾಸಿ ನವೀನ್ ಕಿಶೋರ್ ಎಂಬವರು ಜ.30 ರ ನಸುಕಿನ ಜಾವ ಹೃದಯಾಘಾತದಿಂದ ನಿಧನರಾದರು.


ಜ.29ರ ಸಂಜೆ ಮನೆಗೆ ಹೋದವರು ರಾತ್ರಿ  ಹೃದಯಾಘಾತಕ್ಕೀಡಾಗಿದ್ದಾರೆ. ತಡ ರಾತ್ರಿ 2 ಗಂಟೆ ಸುಮಾರಿಗೆ ಅವರ ಸಹೋದರ ಎಚ್ಚರಗೊಂಡಾಗ ನವೀನ್ ಕಿಶೋ‌ರ್ ಅವರು  ಕುಸಿದು ಬಿದ್ದಿರುವುದು ಬೆಳಕಿಗೆ ಬಂದಿದೆ. ತಕ್ಷಣ ಮನೆ ಮಂದಿ ಮತ್ತು ಸ್ಥಳೀಯರು ಸೇರಿ ವಿಟ್ಲ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ನವೀನ್ ಕಿಶೋ‌ರ್ ಆಗಲೇ ಮೃತಪಟ್ಟಿದ್ದರು. ಮೃತರು ತಾಯಿ ಪದ್ಮನಿ, ಸಹೋದರ ಮತ್ತು ಸಹೋದರಿಯರನ್ನು ಅಗಲಿದ್ದಾರೆ.

Recent News


Leave a Comment: