ನೆಟ್ಟೇ ಕಮ್ಮಿ ಆಪುಂಡು ನನ ಬರೋಡ್ಚಿ.. ಎಂದು ಹೇಳಿ ಮದ್ದು ಕೊಡ್ತಿದ್ದ ನರಸಿಂಹ ಭಟ್ ರಿಟೈರ್ಡ್

ಸುದ್ದಿಗಳು News

Posted by vidyamaana on 2023-07-10 07:10:00 | Last Updated by Vidyamaana on 2023-09-05 06:51:23

Share: | | | | |


ನೆಟ್ಟೇ ಕಮ್ಮಿ ಆಪುಂಡು ನನ ಬರೋಡ್ಚಿ.. ಎಂದು ಹೇಳಿ ಮದ್ದು ಕೊಡ್ತಿದ್ದ ನರಸಿಂಹ ಭಟ್ ರಿಟೈರ್ಡ್

ಪುತ್ತೂರು: “ನೆಟ್ಟೇ ಕಮ್ಮಿ. ನನ ಬರೋಡ್ಚಿ…”

ಹೀಗೆ ಹೇಳಿ ಔಷಧಿ ನೀಡಿದರೆಂದರೆ, ಯಾರದೇ ರೋಗವಾದರೂ ವಾಸಿಯಾಗಲೇಬೇಕು. ಆಸ್ಪತ್ರೆಗೆ ಹೋಗಿ ತಾಸುಗಟ್ಟಲೇ ಕಾಯಬೇಕೆಂದಿಲ್ಲ. ಹೆದರಿಕೆಯಾಗುವ ಬಿಲ್ ಕೂಡ ಇಲ್ಲ. ಯಾರೇ ಬಂದರೂ ಅವರ ನಗುವೇ ದಿವ್ಯೌಷಧ.

ಇದು ಎರಡೇ ಸಾಲಿನಲ್ಲಿ ವಿವರಣೆ ಕೊಡಬಹುದಾದ ಕಾಂಪೌಂಡರ್ ಖ್ಯಾತಿಯ ನರಸಿಂಹ ಭಟ್ ಅವರ ಪರಿಚಯ. ತನ್ನ 16ನೇ ವಯಸ್ಸಿಗೇ ಡಾ. ಶಿವರಾಮ ಭಟ್ ಅವರ ಜೊತೆಗೆ ಕಾಂಪೌಂಡರ್ ಆಗಿ ಸೇರಿಕೊಂಡ ಅವರು, ಇದುವರೆಗೆ ಸುದೀರ್ಘ 68 ವರ್ಷಗಳ ಸೇವೆ ಸಲ್ಲಿಸಿದ್ದಾರೆ. ಹಾರಾಡಿಯಲ್ಲಿ ವಾಸವಾಗಿರುವ ಇವರ ತಂದೆ ಶಂಕರ್ ಭಟ್, ತಾಯಿ ಕಾವೇರಮ್ಮ. ಸರಸ್ವತಿ ಇವರ ಪತ್ನಿ. ಸಾಫ್ಟ್ ವೇರ್ ಇಂಜಿನಿಯರ್ ಆಗಿರುವ ಪುತ್ರ ಕಾರ್ತಿಕ್ ತನ್ನ ಪತ್ನಿ - ಮಗನೊಂದಿಗೆ ಲಂಡನಿನಲ್ಲಿ ವಾಸವಾಗಿದ್ದಾರೆ.

ಇದೀಗ ತನ್ನ 82ನೇ ವಯಸ್ಸಿನಲ್ಲಿ ವಿಶ್ರಾಂತ ಜೀವನಕ್ಕೆ ತೆರಳಿದ್ದಾರೆ. ವಯೋ ಸಹಜ ಸಮಸ್ಯೆಗಳ ಕಾರಣದಿಂದಾಗಿ ಡಾ. ಶಿವರಾಮ ಭಟ್ ಅವರ ಕ್ಲಿನಿಕ್ ಅನ್ನು ಬಂದ್ ಮಾಡಲಾಗಿದೆ ಎಂದು ಕ್ಲಿನಿಕ್ ಮುಂದುಗಡೆ ಬೋರ್ಡ್ ಹಾಕಲಾಗಿದೆ.

ಹಾಗಾಗಿ, ಔಷಧಕ್ಕೆಂದು ಆಗಮಿಸುವ ಜನರು ಬೋರ್ಡ್ ನೋಡಿ, ಹ್ಯಾಪ್ ಮೋರೆ ಹಾಕಿಕೊಂಡು ವಾಪಾಸ್ ಹೋಗುತ್ತಿದ್ದಾರೆ. ದಿನಕ್ಕೆ ಸುಮಾರು 300 ಮಂದಿಯಂತೆ ತಿಂಗಳಿಗೆ 10 ಸಾವಿರದಷ್ಟು ಮಂದಿ ಇವರ ಔಷಧವನ್ನೇ ಅವಲಂಬಿತರಾಗಿದ್ದರು. ಇದೀಗ ಇಷ್ಟು ಮಂದಿ ಬೇರೆ ವೈದ್ಯರ ಮೊರೆ ಹೋಗಲೇಬೇಕಾದ ಅನಿವಾರ್ಯತೆ ಎದುರಾಗಿದೆ.

ಮಳೆಗಾಲ ಆರಂಭವಾಯಿತೆಂದರೆ ಜ್ವರ, ಶೀತ, ಕೆಮ್ಮು ಸಿದ್ಧ. ಇದಕ್ಕೆಲ್ಲಾ ಕಾಂಪೌಂಡರ್ ನೀಡುವ 3 ಹೊತ್ತಿನ ಮದ್ದು ಸಾಕು. ಕಡಿಮೆ ಶುಲ್ಕ ಮಾತ್ರವಲ್ಲ, ಸುಲಭದಲ್ಲಿ ಸಿಗುವ ವೈದ್ಯರು ಎಂಬ ಕಾರಣಕ್ಕೆ ಜನರೂ ಇಲ್ಲಿಗೆ ಆಗಮಿಸುತ್ತಿದ್ದರು. ಇನ್ನು ಮುಂದೆ ಪುತ್ತೂರಿನ ಹೃದಯ ಭಾಗದಲ್ಲಿ ಇದ್ದ ಡಾ. ಶಿವರಾಮ ಭಟ್ ಅವರ ಕ್ಲಿನಿಕಿನಲ್ಲಿ ಕಾಂಪೌಂಡರ್ ಮದ್ದು ನೀಡುವುದಿಲ್ಲ!

ಡಾ. ಶಿವರಾಮ ಭಟ್ ಗುರು:

ಡಾ. ಶಿವರಾಮ ಭಟ್ ಅವರನ್ನೇ ಗುರುವಾಗಿ ನೆಚ್ಚಿಕೊಂಡಿದ್ದ ಕಾಂಪೌಂಡರ್ ಖ್ಯಾತಿಯ ನರಸಿಂಹ ಭಟ್ ಅವರು, ಸುದೀರ್ಘ ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಡಾ. ಶಿವರಾಮ ಭಟ್ ಅವರ ನಿಧನದ ನಂತರವೂ ಅವರ ಹೆಸರಿನಲ್ಲೇ ಕ್ಲಿನಿಕ್ ನಡೆಯುತ್ತಿತ್ತು. ಆಗ ಕಾಂಪೌಂಡರ್ ಅವರೇ ಔಷಧ ನೀಡುತ್ತಿದ್ದರು. ಕ್ಲಿನಿಕಿಗೆ ಆಗಮಿಸಿದ ಹೆಚ್ಚಿನ ಜನರಿಗೆ ಇವರೇ ಡಾ‌. ಶಿವರಾಮ ಭಟ್ ಎಂದು ನಂಬಿದ್ದರು.

ಸರ್ಕಾರಿ ಉದ್ಯೋಗದ ಅವಕಾಶವನ್ನೇ ಕೈಚೆಲ್ಲಿದರು!

ನರಸಿಂಹ ಭಟ್ ಅವರಿಗೆ ಸರ್ಕಾರಿ ಉದ್ಯೋಗದ ಅವಕಾಶವೂ ಕೈಬೀಸಿ ಕರೆಯಿತು. ಆದರೆ ಡಾ. ಶಿವರಾಮ್ ಭಟ್ ಅವರನ್ನೇ ಮಾನಸ ಗುರುವಾಗಿ ಸ್ವೀಕರಿಸಿದ್ದರಿಂದ, ಸರ್ಕಾರಿ ಉದ್ಯೋಗದ ಅವಕಾಶವನ್ನು ಕೈಚೆಲ್ಲಿದರು. ಡಾ. ಶಿವರಾಮ ಭಟ್ ಅವರು ಇರುವವರೆಗೂ ಹಾಗೂ ಅವರು ಇಲ್ಲದ ಬಳಿಕವೂ ತನ್ನ ಗುರುವಿನ ಹೆಸರಿನಲ್ಲಿಯೇ ಔಷಧ ನೀಡಿತ್ತಿದ್ದರು ಎನ್ನುವುದು ಕಾಂಪೌಂಡರ್ ಅವರ ವಿಶೇಷತೆ.

 Share: | | | | |


ಕಾಂಗ್ರೆಸ್ ಲೂಟಿಕೋರ, ಭ್ರಷ್ಟರ ಸರ್ಕಾರ ; ಕಾವೂರು ಬಿಜೆಪಿ ಪ್ರತಿಭಟನೆಯಲ್ಲಿ ನಳಿನ್ ಕುಮಾರ್

Posted by Vidyamaana on 2023-10-18 17:07:06 |

Share: | | | | |


ಕಾಂಗ್ರೆಸ್ ಲೂಟಿಕೋರ, ಭ್ರಷ್ಟರ ಸರ್ಕಾರ ; ಕಾವೂರು ಬಿಜೆಪಿ ಪ್ರತಿಭಟನೆಯಲ್ಲಿ ನಳಿನ್ ಕುಮಾರ್

ಮಂಗಳೂರು: ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಆರೋಪಿಸಿ ನಗರದ ಕಾವೂರಿನಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಮತ್ತು ಶಾಸಕ ಭರತ್ ಶೆಟ್ಟಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದು ಕಾಂಗ್ರೆಸ್ ಸರ್ಕಾರ ಎಟಿಎಂ ಸರ್ಕಾರ ಎಂದು ಘೋಷಣೆ ಕೂಗಿದ್ದಾರೆ. 


ಪ್ರತಿಭಟನಾ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾತನಾಡಿದ್ದು ಗುತ್ತಿಗೆದಾರರ ಮನೆಯಲ್ಲಿ ರಾಶಿ ರಾಶಿ ಹಣ ಸಿಕ್ಕಿದ್ದು ಸರ್ಕಾರದ ಖಜಾನೆಯ ಹಣ ನೇರವಾಗಿ ಸಿದ್ದರಾಮಯ್ಯ ಮತ್ತು‌ ಡಿಕೆಶಿ ಮನೆಗೆ ಹೋಗಿದೆ.‌ ಇದು ಖಜಾನೆ ಖಾಲಿ‌ ಮಾಡಿದ ಲೂಟಿಕೋರ ಸರ್ಕಾರ.‌ ಡಿಕೆ‌ ಶಿವಕುಮಾರ್ ಅವರು ತಿಹಾರ್ ಜೈಲಿಗೆ ಹೋಗಿ ಬಂದಿದ್ದರು. ಇದೀಗ ಎರಡನೇ ಸಲ ತಿಹಾರ್ ಜೈಲಿಗೆ ಹೋಗಲು ಸಿದ್ದರಾಗುತ್ತಿದ್ದಾರೆ. ನಿನ್ನೆ ಸಿಕ್ಕ ಹಣ ಡಿಕೆಶಿಯದ್ದು ಅಂತ ಪತ್ರಿಕೆಗಳು, ಟಿವಿಗಳು ಹೇಳ್ತಾ ಇದೆ. ಪಂಚರಾಜ್ಯ ಚುನಾವಣೆಗಾಗಿ ಕಾಂಗ್ರೆಸ್ ಪಕ್ಷಕ್ಕೆ ಕರ್ನಾಟಕ ಎಟಿಎಂ ಆಗ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. 

ಹೊಟೇಲ್ ಗಳಲ್ಲಿ ತಿಂಡಿಗೆ ಬೆಲೆ ಇದ್ದಂತೆ ಸರ್ಕಾರಿ ಕಚೇರಿಗಳಲ್ಲಿ ರೇಟ್ ಫಿಕ್ಸ್ ಆಗಿದೆ. ವರ್ಗಾವಣೆ ಸೇರಿದಂತೆ ಯಾವುದೇ ಕೆಲಸ ಆಗಬೇಕಿದ್ದರೂ ಇಂತಿಷ್ಟು ರೇಟ್ ಕೊಡಬೇಕು. ಹೀಗಾಗಿ ಸಿದ್ದರಾಮಯ್ಯರ ಸರ್ಕಾರ 80% ಪರ್ಸಂಟೇಜ್ ಸರ್ಕಾರ ಎನ್ನುವಂತಾಗಿದೆ. ತಾಲೂಕು ಕಚೇರಿಗಳಲ್ಲಿ ತಹಶಿಲ್ದಾರ್ ರು ಲಂಚ ಕೇಳ್ತಾರೆ. ಗ್ರಾಮಗಳಲ್ಲಿ ವಿಎಗಳು ಲಂಚ ಕೇಳ್ತಾರೆ, ಪಿಡಿಓಗಳು ಲಂಚ ಕೇಳ್ತಾ‌ ಇದಾರೆ. ಭ್ರಷ್ಟಾಚಾರದಲ್ಲಿ ಇಡೀ ಸರ್ಕಾರ ಮುಳುಗಿದೆ ಎಂದು ನಳಿನ್ ಕುಮಾರ್ ಹೇಳಿದರು.

ಪತ್ನಿಯನ್ನು ನೇಣು ಬಿಗಿದು ಕೊಲೆಗೈದು ಎಸ್ಕೇಪ್ ಆದ ಪತಿ ಅರೆಸ್ಟ್

Posted by Vidyamaana on 2023-11-19 16:02:44 |

Share: | | | | |


ಪತ್ನಿಯನ್ನು ನೇಣು ಬಿಗಿದು ಕೊಲೆಗೈದು ಎಸ್ಕೇಪ್ ಆದ ಪತಿ ಅರೆಸ್ಟ್

ರಾಯಚೂರು: ಪತಿ ಮಹಾಶಯನೊಬ್ಬ ಪತ್ನಿಯನ್ನು ಹೊಡೆದು, ಆಕೆ ಪ್ರಜ್ಞೆ ತಪ್ಪುತ್ತಿದ್ದಂತೆ ನೇಣುಬಿಗಿದು ಸಾಯಿಸಿ ಎಸ್ಕೇಪ್ ಆಗಿರುವ ಘಟನೆ ರಾಯಚೂರಿನ ಸಿಂಧನೂರು ತಾಲೂಕಿನ ಪಟೇಲವಾಡಿಯಲ್ಲಿ ನಡೆದಿದೆ.31 ವರ್ಷದ ಭುವನೇಶ್ವರಿ ಕೊಲೆಯಾದ ಮಹಿಳೆ. ಭುವನೇಶ್ವರಿ ಹಾಗೂ ನಾಗರಾಜ್ 14 ವರ್ಷಗಳ ಹಿಂದೆ ವಿವಾಹವಾಗಿದ್ದರು.ಪತಿ ನಾಗರಾಜ್ ಇತ್ತೀಚೆಗೆ ಕುಡಿದು ಬಂದು ಪತ್ನಿಗೆ ಹಿಂಸಿಸುತ್ತಿದ್ದ. ಅನಗತ್ಯವಾಗಿ ಜಗಳವಾಡುತ್ತಿದ್ದ.


ಈ ಬಾರಿ ಪತಿ-ಪತ್ನಿ ನಡುವೆ ಗಲಾಟೆ ವಿಕೋಪಕ್ಕೆ ತಿರುಗಿದ್ದು, ನಾಗರಾಜ್ ಪತ್ನಿಗೆ ಹೊಡೆದಿದ್ದಾನೆ. ಪತ್ನಿ ಭುವನೇಶ್ವರಿ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಪತ್ನಿ ಪ್ರಜ್ಞೆ ತಪ್ಪಿರುವುದು ಗೊತ್ತಾಗುತ್ತಿದ್ದಂತೆ ನಾಗರಾಜ್ ಆಕೆಯ ಕೊರಳಿಗೆ ನೇಣು ಬಿಗಿದು ಸಾಯಿಸಿದ್ದಾನೆ. ಬಳಿಕ ಮನೆಯಿಂದ ಪರಾರಿಯಾಗಿದ್ದಾನೆ.


ಭುವನೇಶ್ವರಿ ಪೋಷಕರು ಸಿಂಧನೂರು ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಇದೀಗ ಆರೋಪಿ ನಾಗರಾಜ್ ನನ್ನು ಪೊಲೀಸರು ಬಂಧಿಸಿದ್ದಾರೆ.

ನಕಲಿ ಲೋಕಾಯುಕ್ತ ಅಧಿಕಾರಿ ಅಸಲಿ ಸಿಸಿಬಿ ಬಲೆಗೆ

Posted by Vidyamaana on 2024-01-04 11:44:54 |

Share: | | | | |


ನಕಲಿ ಲೋಕಾಯುಕ್ತ ಅಧಿಕಾರಿ ಅಸಲಿ ಸಿಸಿಬಿ ಬಲೆಗೆ

ಬೆಂಗಳೂರು,: ತಾನು ಲೋಕಾಯುಕ್ತ ಅಧಿಕಾರಿಯೆಂದು ಪೋಸು ಕೊಟ್ಟು 30ಕ್ಕೂ ಹೆಚ್ಚು ಸರ್ಕಾರಿ ಅಧಿಕಾರಿಗಳಿಗೆ ಮೋಸ ಮಾಡಿರುವ ಘಟನೆ ಬೆಳಕಿಗೆ ಬಂದಿದ್ದು ಬೆಂಗಳೂರು ಸಿಸಿಬಿ ಪೊಲೀಸರು ನಕಲಿ ಲೋಕಾಯುಕ್ತ ಅಧಿಕಾರಿಯನ್ನು ಬಂಧಿಸಿದ್ದಾರೆ. 


ಆರೋಪಿ ಶ್ರೀನಾಥ್ ರೆಡ್ಡಿ (34) ಆಂಧ್ರಪ್ರದೇಶ ಮೂಲದ ವ್ಯಕ್ತಿಯಾಗಿದ್ದು, 2007ರಿಂದಲೇ ಇದೇ ಮಾದರಿಯ ಕ್ರಿಮಿನಲ್ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದ. ಹಿಂದೆ ಬೀಗ ಹಾಕಿರುತ್ತಿದ್ದ ಮನೆಗಳಲ್ಲಿ ಕಳ್ಳತನ ಮಾಡುತ್ತಿದ್ದ ಶ್ರೀನಾಥ್ ಬಳಿಕ ಪೊಲೀಸ್ ಅಧಿಕಾರಿಯೆಂದು ಹೇಳಿ ಸರ್ಕಾರಿ ಅಧಿಕಾರಿಗಳನ್ನು ಯಾಮಾರಿಸಲು ತೊಡಗಿದ್ದ ಎಂದು ಪೊಲೀಸ್ ತನಿಖೆಯಲ್ಲಿ ತಿಳಿದುಬಂದಿದೆ. 


ತೆಲುಗು ಚಲನಚಿತ್ರಗಳಿಂದ ಸ್ಫೂರ್ತಿ ಪಡೆದು ಸರ್ಕಾರಿ ಅಧಿಕಾರಿಗಳನ್ನು ಗುರಿಯಾಗಿಸಿ ಕುಕೃತ್ಯ ಮುಂದುವರಿಸಿದ್ದ. ಕೇವಲ 10ನೇ ತರಗತಿ ಓದಿರುವ ಆರೋಪಿ 36 ಸರ್ಕಾರಿ ಅಧಿಕಾರಿಗಳಿಗೆ ವಂಚನೆ ಮಾಡಿರುವುದು ತನಿಖೆಯಲ್ಲಿ ಪತ್ತೆಯಾಗಿದೆ. ಆದರೆ ಒಬ್ಬರು ಮಾತ್ರ ಪೊಲೀಸರಿಗೆ ದೂರು ನೀಡಿದ್ದರು. ಅದನ್ನು ಆಧರಿಸಿ ತ‌ನಿಖೆ ನಡೆಸಿದಾಗ ಖದೀಮ ಸಿಕ್ಕಿಬಿದ್ದಿದ್ದಾನೆ. 


ಆರೋಪಿ ಶ್ರೀನಾಥ್ ರೆಡ್ಡಿ ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿಯೂ ಇದೇ ರೀತಿ ಸರ್ಕಾರಿ ಅಧಿಕಾರಿಗಳಿಗೆ ವಂಚಿಸಿದ್ದಾನೆ. ಈತನ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪ್ರಕರಣದ ಹೆಚ್ಚಿನ ತನಿಖೆಗೆ ಸಿಸಿಬಿಗೆ ವರ್ಗಾಯಿಸಲಾಗಿತ್ತು. 


ಲೋಕಾಯುಕ್ತ ಇನ್ಸ್ ಪೆಕ್ಟರ್ ಚಂದ್ರಶೇಖರ್ ಎಂದು ತನ್ನನ್ನು ಪರಿಚಯಿಸಿಕೊಂಡು ರೆಡ್ಡಿ ಸರ್ಕಾರಿ ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡುತ್ತಿದ್ದ ಮತ್ತು ಹಣ ವಸೂಲಿ ಮಾಡುತ್ತಿದ್ದ. ಪ್ರಕರಣ ದಾಖಲಾಗಿದೆ ಎಂದು ಹೇಳಿ ಮುಚ್ಚಿ ಹಾಕಲು ಹಣ ನೀಡುವಂತೆ ಬ್ಲಾಕ್ಮೇಲ್ ಮಾಡುತ್ತಿದ್ದ. ಹಣ ಸಿಕ್ಕರೆ ಲೋಕಾಯುಕ್ತದ ತಾಂತ್ರಿಕ ವಿಭಾಗ ಯಾವುದೇ ವಿಚಾರಣೆ ನಡೆಸದೆ ಬಿ ರಿಪೋರ್ಟ್ ಸಲ್ಲಿಸಲಿದೆ ಎಂದು ಭರವಸೆ ನೀಡುತ್ತಿದ್ದ. ಇದೇ ರೀತಿ ಕಿರುಕುಳಕ್ಕೆ ಒಳಗಾದ ಸರ್ಕಾರಿ ಅಧಿಕಾರಿ ರಾಮದಾಸ್ ಎಂಬವರು ದೂರು ದಾಖಲಿಸಿದ್ದರು.


ಕೆಲವು ಕಡೆ ಲೋಕಾಯುಕ್ತದಲ್ಲಿ ಎಡಿಜಿಪಿ ಶ್ರೇಣಿಯ ಅಧಿಕಾರಿ ಎಂದು ತನ್ನನ್ನು ಹೇಳಿಕೊಂಡಿದ್ದ. ಅಲ್ಲದೆ, ತನ್ನ ಹೆಸರನ್ನು ಕೇಶವ ರಾವ್ ಎಂದಿ ಮಾಡಿಕೊಂಡಿದ್ದ. ಈತನ ವಿರುದ್ಧ ಎಲೆಕ್ಟ್ರಾನಿಕ್ ಸಿಟಿ, ಬೇಗೂರು, ಹೆಬ್ಬಗೋಡಿ, ಅತ್ತಿಬೆಲೆ, ಜಿಗಣಿ ಸೇರಿದಂತೆ ಹಲವು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣಗಳಿವೆ.

ಆರು ತಿಂಗಳ ಹಿಂದೆ ಪ್ರೀತಿಸಿ ಮದುವೆಯಾದ ಮುಸ್ಕಾತ್ ತಾಜ್ ಮನನೊಂದು ನೇಣಿಗೆ ಶರಣು

Posted by Vidyamaana on 2023-12-07 04:26:35 |

Share: | | | | |


ಆರು ತಿಂಗಳ ಹಿಂದೆ ಪ್ರೀತಿಸಿ ಮದುವೆಯಾದ ಮುಸ್ಕಾತ್ ತಾಜ್ ಮನನೊಂದು ನೇಣಿಗೆ ಶರಣು

ಚಿಕ್ಕಬಳ್ಳಾಪುರ: ಪತಿಯ ಜೊತೆಗಿನ ವೈಮನಸ್ಸಿನಿಂದ ಪತ್ನಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.


ಆತ್ಮಹತ್ಯೆ ಮಾಡಿಕೊಂಡವರು ಮುಸ್ಕಾತ್ ತಾಜ್ (21)


ಮುಸ್ಕಾತ್ ತಾಜ್ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದ ವೆಂಕಟಗಿರಿಕೋಟೆಯಲ್ಲಿರುವ ಪತಿಯ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆರು ತಿಂಗಳ ಹಿಂದೆ ಆಜಾಮ್ ಎಂಬಾತನನ್ನು ಪ್ರೀತಿಸಿದ್ದ ಈಕೆ ನಂತರ ವಿವಾಹ ಮಾಡಿಕೊಂಡಿದ್ದರು. ಪತಿ ಆಜಾಮ್ ವಿರುದ್ಧ ಪತ್ನಿಯ ಪೋಷಕರು ಕೊಲೆ ಆರೋಪ ಹೊರಿಸಿದ್ದಾರೆ. ಚಿಂತಾಮಣಿ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

MLC Election: ಬಿಜೆಪಿ ಪಟ್ಟಿ ಪ್ರಕಟ; ಸಿ.ಟಿ ರವಿ, ಎಂ.ಜಿ ಮೂಳೆ, ರವಿಕುಮಾರ್ ಗೆ ಟಿಕೆಟ್

Posted by Vidyamaana on 2024-06-02 13:00:45 |

Share: | | | | |


MLC Election: ಬಿಜೆಪಿ ಪಟ್ಟಿ ಪ್ರಕಟ; ಸಿ.ಟಿ ರವಿ, ಎಂ.ಜಿ ಮೂಳೆ, ರವಿಕುಮಾರ್ ಗೆ ಟಿಕೆಟ್

ಬೆಂಗಳೂರು: ವಿಧಾನಪರಿಷತ್ ಚುನಾವಣೆಗೆ ದಿನಗಣನೆ ಶುರುವಾಗಿರುವಾಗ ಬಿಜೆಪಿ ಮೂರು ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಿದೆ. ವಿಧಾನಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಲು ನಾಳೆಯೇ ಕೊನೆಯ ದಿನವಾಗಿದೆ. ಹೀಗಾಗಿ ಇಂದು ಬಿಜೆಪಿ ಹೈಕಮಾಂಡ್ ಅಂತಿಮವಾಗಿ ತನ್ನ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ.

ವಿಧಾನಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿ ಹೈಕಮಾಂಡ್ ಕೊನೆಗೂ ಮಾಜಿ ಸಚಿವ ಸಿ.ಟಿ ರವಿ, ಎನ್. ರವಿಕುಮಾರ್ ಮತ್ತು ಎಂ.ಜಿ ಮೂಳೆ ಅವರಿಗೆ ಮಣೆ ಹಾಕಿದೆ. ಎಂಎಲ್‌ಸಿ ಚುನಾವಣೆಗೆ ಸಾಕಷ್ಟು ಮಂದಿಯ ಹೆಸರು ಕೇಳಿ ಬಂದರು ಅಂತಿಮವಾಗಿ ಬಿಜೆಪಿ ವರಿಷ್ಠರು ಮೂವರ ಹೆಸರು ಅಂತಿಮಗೊಳಿಸಿದ್ದಾರೆ.

ಮಂಜುಶ್ರೀ ಜ್ಯುವೆಲ್ಲರಿ ಮಾಲಕ ಶ್ರೀಧರ ಆಚಾರ್ಯ ಹೃದಯಾಘಾತದಿಂದ ನಿಧನ

Posted by Vidyamaana on 2023-10-30 08:19:48 |

Share: | | | | |


ಮಂಜುಶ್ರೀ ಜ್ಯುವೆಲ್ಲರಿ ಮಾಲಕ ಶ್ರೀಧರ ಆಚಾರ್ಯ ಹೃದಯಾಘಾತದಿಂದ ನಿಧನ

ಪುತ್ತೂರು: ಮುಂಡೂರು ನಿವಾಸಿ, ಮಂಜುಶ್ರೀ ಜ್ಯುವೆಲ್ಲರಿ ಮಾಲಕ ಶ್ರೀಧರ ಆಚಾರ್ಯ (63) ಭಾನುವಾರ ರಾತ್ರಿ ಹೃದಯಾಘಾತದಿಂದ ನಿಧನರಾದರು.

ಮುಂಡೂರಿನ ಕಲ್ಲಗುಡ್ಡೆಯಲ್ಲಿ ಅವರು ಜ್ಯುವೆಲ್ಲರಿ ನಡೆಸುತ್ತಿದ್ದರು.

ಮೃತರು ಪತ್ನಿ ಲತಾ, ಪುತ್ರ ಶಿವಕುಮಾರ್ ಹಾಗೂ ಪುತ್ರಿ ಶ್ರುತಿಕಾ ಅವರನ್ನು ಅಗಲಿದ್ದಾರೆ.



Leave a Comment: