ಪುತ್ತೂರಿನ ಪ್ರತಿಷ್ಠಿತ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ತಡರಾತ್ರಿ ಬರ್ಬರ ಹತ್ಯೆ

ಸುದ್ದಿಗಳು News

Posted by vidyamaana on 2023-11-07 04:42:13 |

Share: | | | | |


ಪುತ್ತೂರಿನ ಪ್ರತಿಷ್ಠಿತ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ತಡರಾತ್ರಿ ಬರ್ಬರ ಹತ್ಯೆ

ಪುತ್ತೂರು: ಪುತ್ತೂರಿನ ನಗರದಲ್ಲಿ ತಲವಾರ್ ನಲ್ಲಿ ಕಡಿದು ಕಲ್ಲೇಗ ಟೈಗರ್ಸ್ ನ ಪ್ರಮುಖ ನಾಯಕನನ್ನು ಹತ್ಯೆ ಮಾಡಿದ ಘಟನೆ ಇದೀಗ ನಡೆದಿದೆ.


ಟೈಗರ್ಸ್ ನ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಅವರನ್ನು ಹತ್ಯೆಗೀಡಾದ ಯುವಕ. ಈತ ಪುತ್ತೂರಿನ ನಗರದಲ್ಲಿ ಇದ್ದಾಗ ತಂಡಯೊಂದು ಆಗಮಿಸಿ ಯದ್ವಾತದ್ವ ತಲವಾರ್ ನಲ್ಲಿ ದಾಳಿ ನಡೆಸಿ, ಹತ್ಯೆ ಮಾಡಿದೆ. ಸ್ಥಳಕ್ಕೆ ಆಗಮಿಸಿದ ಪುತ್ತೂರು ನಗರ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

 Share: | | | | |


ಬಜಪೆ: ನಿಲ್ಲಿಸಿದ್ದ ವಾಹನಗಳ ಬ್ಯಾಟರಿ ಕಳವು ಮಾಡುತ್ತಿದ್ದ ಇಬ್ಬರ ಬಂಧನ

Posted by Vidyamaana on 2023-08-09 05:12:53 |

Share: | | | | |


ಬಜಪೆ: ನಿಲ್ಲಿಸಿದ್ದ ವಾಹನಗಳ ಬ್ಯಾಟರಿ ಕಳವು ಮಾಡುತ್ತಿದ್ದ ಇಬ್ಬರ ಬಂಧನ

ಬಜಪೆ: ನಿಲ್ಲಿಸಿದ್ದ ವಾಹನಗಳ ಬ್ಯಾಟರಿ ಕಳವು ಮಾಡುತ್ತಿದ್ದ ಇಬ್ಬರನ್ನು ಬಜಪೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮೂಡುಪೆರಾರ ಗ್ರಾಮದ ಈಶ್ವರಕಟ್ಟೆ ಕೊಲವೇಲಾ ರಾಘವೇಂದ್ರ ಭಜನಾ ಮಂದಿರದ ಸಮೀಪದ ನಿವಾಸಿ ಪ್ರತಾಪ್ (20), ಕಂದಾವರ ಗ್ರಾಮದ ಚರ್ಚ್ ರೋಡ್ ನಿವಾಸಿ ಅನಿಲ್ (23) ಎಂದು ಗುರುತಿಸಲಾಗಿದೆ.ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಅಡ್ಡೂರು, ಕೈಕಂಬ ಮತ್ತು ಗುರುಪುರ ಪರಿಸರಗಳಲ್ಲಿ ನಿಲ್ಲಿಸುತ್ತಿದ್ದ ಟಿಪ್ಪರ್ ಲಾರಿ, ಜೆಸಿಬಿ ಮತ್ತು ಇತರ ವಾಹನಗಳಿಂದ ಬ್ಯಾಟರಿಗಳು ಕಳವಾಗಿರುವ ಬಗ್ಗೆ ಬಜಪೆ ಪೊಲೀಸ್ ಠಾಣೆಯಲ್ಲಿ 2 ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದವು. ತನಿಖೆ ನಡೆಸಿದ ಬಜಪೆ ಪೊಲೀಸ್ ಇನ್‌ಸ್ಪೆಕ್ಟರ್‌ ಪ್ರಕಾಶ್ ಹಾಗೂ ಅವರ ತಂಡ ಮಂಗಳವಾರ ಮಂಗಳೂರು ತಾಲ್ಲೂಕಿನ ಬಜಪೆಯ ಒಡ್ಡಿದ ಕಲ ಎಂಬಲ್ಲಿ ಬ್ಯಾಟರಿಗಳನ್ನು ಕಳವು ಮಾಡಿಕೊಂಡು ಕಾರಿನಲ್ಲಿ ಮಾರಾಟ ಮಾಡಲು ಸಾಗಿಸುತ್ತಿದ್ದಾಗ ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಅವರಿಂದ ಸುಮಾರು ₹ 4 ಲಕ್ಷ ಮೌಲ್ಯದ ಒಂದು ಕಾರು, ₹1.50 ಲಕ್ಷ ಮೌಲ್ಯದ 17 ಬ್ಯಾಟರಿಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದಪೊಲೀಸ್ ಇನ್‌ಸ್ಪೆಕ್ಟರ್ ಪ್ರಕಾಶ್ ನೇತೃತ್ವದಲ್ಲಿ ಪೊಲೀಸ್ ಉಪ ನಿರೀಕ್ಷಕ ಗುರಪ್ಪ ಕಾಂತಿ, ರೇವಣ ಸಿದ್ದಪ್ಪ, ಕುಮಾರೇಶನ್, ಲತಾ ಮತ್ತು ಅಪರಾಧ ಪತ್ತೆ ವಿಭಾಗದ ಸಿಬ್ಬಂದಿ, ಎಎಸ್‌ಐ ರಾಮ ಪೂಜಾರಿ, ಸುಜನ್, ರಶೀದ್ ಶೇಖ್, ಬಸವರಾಜ್ ಪಾಟೀಲ್, ಜಗದೀಶ್, ಸಂತೋಷ್, ಪ್ರಕಾಶ, ಕೆಂಚಪ್ಪ, ಕೆಂಚನಗೌಡ ಪತ್ತೆ ಕಾರ್ಯದಲ್ಲಿ ಭಾಗವಹಿಸಿದ್ದರು.

ವಿಶೇಷವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ

Posted by Vidyamaana on 2024-03-01 19:43:09 |

Share: | | | | |


ವಿಶೇಷವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ

ಪುತ್ತೂರು: ಮಾಜಿ‌ ಶಾಸಕಿ ಶಕುಂತಳಾ ಟಿ. ಶೆಟ್ಟಿ ತನ್ನ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಿಕೊಂಡರು.

ಪುತ್ತೂರು ಪ್ರಜ್ಞಾ ಆಶ್ರಮದ ವಿಶೇಷ ಚೇತನರೊಂದಿಗೆ ಬೆರೆತು, ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡರು.

ಪುತ್ತೂರು ಕಾಂಗ್ರೆಸ್ ರಕ್ತನಿಧಿಯ ಅಧ್ಯಕ್ಷ ನವೀನ್ ಸಿಟಿಗುಡ್ಡೆ,ಕಲಾವಿದ ಕೃಷ್ಣಪ್ಪ,ಚಂದ್ರಶೇಖರ ನಾಯ್ಕ,ರಾಜೀವ ಗೌಡ,ರಾಮಚಂದ್ರ ನಾಯ್ಕ್ ಮಂಜಲ್ಪಡುಪು,ವಿಕ್ಟರ್ ಪಾಯಸ್,ದಿನೇಶ್ ಶೇವಿರೆ,ಪೂರ್ಣೇಶ್ ಕುಮಾರ್ ಭಂಡಾರಿ ಮೊದಲಾದವರು  ಉಪಸ್ಥಿತರಿದ್ದರು.

ನೆಲ್ಯಾಡಿ: ಕೆಟ್ಟುನಿಂತಿದ್ದ ಲಾರಿ ಗೆ ಬೈಕ್ ಢಿಕ್ಕಿ

Posted by Vidyamaana on 2023-07-26 01:56:16 |

Share: | | | | |


ನೆಲ್ಯಾಡಿ: ಕೆಟ್ಟುನಿಂತಿದ್ದ ಲಾರಿ ಗೆ ಬೈಕ್ ಢಿಕ್ಕಿ

ನೆಲ್ಯಾಡಿ, ಜು. 25. ರಸ್ತೆ ಬದಿ ಕೆಟ್ಟು ನಿಂತಿದ್ದ ಲಾರಿಗೆ ಹಿಂದಿನಿಂದಿ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸಣ್ಣಂಪಾಡಿ ಎಂಬಲ್ಲಿ ನಡೆದಿದೆ.ಮೃತ ಬೈಕ್ ಸವಾರನನ್ನು ನೆಲ್ಯಾಡಿ ಮೊರಂಕಳ ನಿವಾಸಿ ಇಕ್ಬಾಲ್ಎಂದು ಗುರುತಿಸಲಾಗಿದೆ. ಮೃತ ಇಕ್ಬಾಲ್ಉಪ್ಪಿನಂಗಡಿಯಿಂದ ನೆಲ್ಯಾಡಿ ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಸಣ್ಣಂಪಾಡಿ ಸಮೀಪ ಕೆಟ್ಟು ನಿಂತಿದ್ದ ಪಾರ್ಸೆಲ್ ಸಾಗಾಟದ ವಾಹನಕ್ಕೆ ಹಿಂದಿನಿಂದ ಢಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ. ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಉಪ್ಪಿನಂಗಡಿ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ.

ಪಡ್ಡಾಯೂರು ಶ್ರೀ ಅನ್ನಪೂರ್ಣೇಶ್ವರಿ ಭಜನಾಮಂದಿರದಲ್ಲಿ ೧೯ ನೇ ವರ್ಷದ ನವರಾತ್ರಿ ಕಾರ್ಯಕ್ರಮ

Posted by Vidyamaana on 2023-10-24 09:14:52 |

Share: | | | | |


ಪಡ್ಡಾಯೂರು ಶ್ರೀ ಅನ್ನಪೂರ್ಣೇಶ್ವರಿ ಭಜನಾಮಂದಿರದಲ್ಲಿ ೧೯ ನೇ ವರ್ಷದ ನವರಾತ್ರಿ ಕಾರ್ಯಕ್ರಮ

ಪುತ್ತೂರು: ದೋಪಾವಳಿ ಸಂದರ್ಭದಲ್ಲಿ ಹಲವು ವರ್ಷಗಳಿಂದ ಮಹಿಳೆಯರಿಗೆ ಮತ್ತು ಪುರುಷರಿಗೆ ವಸ್ತ್ರ ವಿತರಣೆ ಮಾಡುತ್ತಿದ್ದೇನೆ , ನಾನೇನು ಅಹಂಕಾರದಿಂದ ಇದನ್ನು ಮಾಡುತ್ತಿಲ್ಲ ಕ್ಷೇತ್ರದ ಬಡವರ ಜೊತೆ ಒಂದು ಹೊತ್ತು ಸಹಭೋಜನ ಮಾಡಬೇಕೆಂಬ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಮಾಡುತ್ತಿದ್ದೇನೆ. ನ. ೧೩ ರಂದು ಪುತ್ತೂರಿನಲ್ಲಿ ನಡೆಯುವ ವಸ್ತ್ರ ವಿತರಣಾ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಆಶೀರ್ವಾದ ಮಾಡುವಂತೆ ಶಾಸಕರಾದ ಅಶೋಕ್ ರೈ ಮನವಿ ಮಾಡಿದರು.


ಅವರು ಪಡ್ಡಾಯೂರು ಶ್ರೀ ಅನ್ನಪೂರ್ಣೇಶ್ವರಿ ಭಜನಾಮಂದಿರ ಪಡ್ಡಾಯೂರು ಇಲ್ಲಿ ನಡೆದ ೧೯ ನೇ ವರ್ಷದ ನವರಾತ್ರಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.


ಪುತ್ತೂರಿನಲ್ಲಿ ಈ ಬಾರಿ ಸುಮಾರು ೫೦ ಸಾವಿರ ಮಂದಿಗೆ ವಸ್ತ್ರ ವಿತರಣೆ ಮಾಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು , ನಾನು ಕಾರ್ಯಕ್ರಮಕ್ಕೆ ಭಾಗವಹಿಸುವ ಬಡವರ ಜೊತೆ ಸಹಭೋಜನವನ್ನು ಮಾಡಲಿದ್ದೇನೆ ಎಂದು ಹೇಳಿದರು. ಇನ್ನೊಬ್ಬರ ಕಷ್ಟಕ್ಕೆ ನೆರವಾಗುವುದೇ ಧರ್ಮವಾಗಿದೆ. ಜಾತಿಮತಗಳ ಭೇದವಿಲ್ಲದೆ ಎಲ್ಲರೊಂದಿಗೆ ಸಹೋದರ ಭಾವನೆಯಿಂದ ಬದುಕುವುದು ಮತ್ತು ಧರ್ಮಗಳ ನಡುವೆ ಪರಸ್ಪರ ಸೌಹಾರ್ಧತೆಯ ವಾತಾವರಣ ಇದ್ದರೆ ಮಾತ್ರ ನಮ್ಮ ಭಾರತ ವಿಶ್ವಗುರುವಾಗಲು ಸಾಧ್ಯವಾಗಿದೆ. ಇಲ್ಲಿ ಹಿಂಸೆ, ಪ್ರಚೋಧನೆಯನ್ನು ಯಾರೂ ಮಾಡಬಾರದು. ನಮ್ಮ ನೆರೆಯ ವರ ಜೊತೆ ನಾವು ಸದಾ ಉತ್ತಮ ಬಾಂಧವ್ಯ ಹೊಂದರಬೇಕು ಅವರ ನೋವುಗಳಿಗೆ ಸಪಂದಿಸಬೇಕು ಎಂದು ಹೇಳಿದರು. ವೃದ್ದರಾದ ತಂದೆ ತಾಯಿಯನ್ನು ಆರೈಕೆ ಮಾಡುವ ಮೂಲಕ ಅವರಲ್ಲಿ ದೇವರನ್ನು ಕಾಣುವ ಮನೋಭಾವ ನಮ್ಮಲ್ಲಿರಬೇಕು ಎಂದು ಹೇಳಿದರು

ಮನೆ ಒಡತಿಯ ಕೈ ಗಟ್ಟಿಮಾಡಲು ೨೦೦೦ ಕೊಟ್ಟಿದ್ದೇವೆ ಮನೆ ಒಡತಿಯ ಕೈ ಗಟ್ಟಿಯಾದರೆ ಮಾತ್ರ ಕುಟುಂಬ ನೆಮ್ಮದಿಯಾಗಿರಲು ಸಾಧ್ಯ ಎಂಬುದನ್ನು ಮನಗಂಡು ರಾಜ್ಯದ ಕಾಂಗ್ರೆಸ್ ಸರಕಾರ ಮಹಿಳೆಯರ ಖಾತೆಗೆ ೨೦೦೦ ನೀಡುತ್ತಿದ್ದೇವೆ. ಮಹಿಳೆಯರು ಸ್ವಾವಲಂಬಿಗಳಾಗಬೇಕು, ಅವರಿಗೂ ನೆಮ್ಮದಿಯ ಜೀವನ ದೊರೆಯಬೇಕು ಎಂಬ ಉದ್ದೇಶದಿಂದ ಸರಕಾರ ಉಚಿತ ವಿದ್ಯುತ್, ಪಡಿತರ ಉಚಿತ ಬಸ್ಸಿನ ಜೊತೆಗೆ ಗೃಹಲಕ್ಷ್ಮಿಯನ್ನು ನೀಡುತ್ತಿದೆ. ಎಲ್ಲರಿಗೂ ಈ ಹಣ ಜಮೆಯಾಗಲಿದ್ದು ತಾಂತ್ರಿಕ ಕಾರಣಗಳಿಂದ ಹಣ ಜಮೆಯಾಗದೇ ಇದ್ದಲ್ಲಿ ನನ್ನ ಕಚೇರಿಯನ್ನು ಸಂಪರ್ಕಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದರು.


ಬನ್ನೂರು ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಪಂಜಿಗುಡ್ಡೆ ಈಶ್ವರಭಟ್ ಮಾತನಾಡಿ ಪುತ್ತೂರಿನ ಶಾಸಕರು ನಮ್ಮೆಲ್ಲರ ಹೆಮ್ಮೆಯಾಗಿದ್ದಾರೆ. ಬಡವರ ಕಣ್ಣೀರೊರೆಸುವ ಮೂಲಕ ಅವರ ಕಷ್ಟಗಳಿಗೆ ನೆರವಾಗುತ್ತಿದ್ದಾರೆ. ಪುತ್ತೂರಿನಲ್ಲಿ ಗೆದ್ದು ಬಂದ ಯಾವುದೇ ಶಾಸಕರು ಈ ಕೆಲಸವನ್ನು ಮಾಡಿಲ್ಲ ಎಂಬುದು ಎಲ್ಲರಿಗೂ ಗೊತ್ತಿದೆ. ಸರಕಾರದ ಯೋಜನೆಗಳನ್ನು ಮನೆ ಮನೆಗೆ ತಲುಪಿಸುವುದು ಮಾತ್ರವಲ್ಲದೆ ಅದು ಇಲ್ಲಿನ ಕಟ್ಟಕಡೇಯ ವ್ಯಕ್ತಿಗೂ ಸಿಗುವಂತಾಗಬೇಕು ಎಂಬುದೇ ಶಾಸಕರ ಕನಸಾಗಿದೆ ಎಂದು ಹೇಳಿದರು.


ವೇದಿಕೆಯಲ್ಲಿ ಭಜನಾಮಂದಿರ ಅಧ್ಯಕ್ಷ ಗಣೇಶ್ ಗೌಡ, ಪಡ್ಡಾಯೂರು ಕಾಂಗ್ರೆಸ್ ಬೂತ್ ಅಧ್ಯಕ್ಷರಾದ ಲೋಕೇಶ್ ಪಡ್ಡಾಯೂರು, ಉಪಸ್ಥಿತರಿದ್ದರು. ಮೋಹನ್ ಪಡ್ಡಾಯೂರು ಸ್ವಾಗತಿಸಿ ವಂದಿಸಿದರು.

ವಿವೇಕಾನಂದ ಪಾಲಿಟೆಕ್ನಿಕ್ ನ ನಿವೃತ್ತ ಪ್ರಾಂಶುಪಾಲ, ಖ್ಯಾತ ಇಂಜಿನಿಯರ್ ಗೋಪಿನಾಥ ಶೆಟ್ಟಿ ಹೃದಯಾಘಾತದಿಂದ ನಿಧನ

Posted by Vidyamaana on 2024-03-13 10:09:57 |

Share: | | | | |


ವಿವೇಕಾನಂದ ಪಾಲಿಟೆಕ್ನಿಕ್ ನ  ನಿವೃತ್ತ ಪ್ರಾಂಶುಪಾಲ, ಖ್ಯಾತ ಇಂಜಿನಿಯರ್ ಗೋಪಿನಾಥ ಶೆಟ್ಟಿ ಹೃದಯಾಘಾತದಿಂದ ನಿಧನ

ಪುತ್ತೂರು ವಿವೇಕಾನಂದ ಪಾಲಿಟೆಕ್ನಿಕ್ ನ ನಿವೃತ್ತ ಪ್ರಾಂಶುಪಾಲರಾದ ಇಂಜಿನಿಯರ್ ಗೋಪಿನಾಥ್ ಶೆಟ್ಟಿ(60)ಯವರು ದಿಡೀರ್ ಅಸ್ವಸ್ಥಗೊಂಡು ಮಾ 13ರ ನಸುಕಿನ ಜಾವ 2 ಗಂಟೆ ಸುಮಾರಿಗೆ ಹೃದಯಾಘಾತದಿಂದ ನಿಧಾನರಾದರು.

  1986ರಲ್ಲಿ ವಿವೇಕಾನಂದ ಪಾಲಿಟೆಕ್ನಿಕ್ ಆರಂಭಗೊಂಡಿದ್ದು, 1987ರಲ್ಲಿ ಅದರ ಪ್ರಾಂಶುಪಾಲರಾಗಿ ಗೋಪಿನಾಥ್ ಶೆಟ್ಟಿಯವರು ನೇಮಕಗೊಂಡಿದ್ದರು . ಅದಾದ ಬಳಿಕ ಸುದೀರ್ಘ 35 ವರ್ಷಗಳ ಕಾಲ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ 2022 ರಲ್ಲಿ ನಿವೃತ್ತರಾಗಿದ್ದರು. ಈ ಮೂಲಕ ವಿವೇಕಾನಂದ ಪಾಲಿಟೆಕ್ನಿಕ್ ನ ಆಧಾರ ಸ್ಥಂಭವಾಗಿದ್ದರುರಾಷ್ಟ್ರೀಯ ಸ್ವಯಂಸೇವಕ ಸಂಘದಲ್ಲೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಅವರು, ಪ್ರಸ್ತುತ ಪುತ್ತೂರು ನಗರ ಸಹ ಸಂಘ ಚಾಲಕ್ ಆಗಿ ಜವಬ್ದಾರಿ ನಿರ್ವಹಿಸುತ್ತಿದ್ದರು. ಪ್ರಧಾನಮಂತ್ರಿ ಜನೌಷಧಿ ಕೇಂದ್ರದ ಪುತ್ತೂರು ಭಾಗದ ಮೇಲುಸ್ತುವಾರಿಯಾಗಿದ್ದ ಅವರು ಈ ಭಾಗದಲ್ಲಿ ಹತ್ತು ಹಲವು ಜನೌಷಧಿ ಕೇಂದ್ರಗಳ ಆರಂಭಕ್ಕೆ ಕಾರಣಿಭೂತರಾಗಿದ್ದರು.

ಮೂಲತ: ವಿಟ್ಲದ ಪೆರುವಾಯಿಯವರಾದ ಗೋಪಿನಾಥ ಶೆಟ್ಟಿಯವರು, ಪ್ರಸ್ತುತ ನೆಹರೂ ನಗರದ ಬಲಮುರಿ ಗಣಪತಿ ದೇವಸ್ಥಾನದ ಬಳಿ ನಂದಿಲದಲ್ಲಿ ವಾಸಿಸುತ್ತಿದ್ದರು. ಮೃತರು ಪತ್ನಿ, ಓರ್ವ ಪುತ್ರ, ಅಪಾರ ಶಿಷ್ಯವರ್ಗ, ಬಂಧು ಮಿತ್ರರನ್ನು ಅಗಲಿದ್ದಾರೆ.

ಹಾಸನದಲ್ಲಿ ಸಂಚಲನ ಮೂಡಿಸಿದ ಪ್ರಭಾವಿ ರಾಜಕಾರಣಿಯ ಪೆನ್‌ಡ್ರೈವ್‌!!!

Posted by Vidyamaana on 2024-04-24 20:42:30 |

Share: | | | | |


ಹಾಸನದಲ್ಲಿ ಸಂಚಲನ ಮೂಡಿಸಿದ ಪ್ರಭಾವಿ ರಾಜಕಾರಣಿಯ ಪೆನ್‌ಡ್ರೈವ್‌!!!

ಹಾಸನ: ಲೋಕಸಭೆ ಚುನಾವಣೆಗೆ ಇನ್ನೆರಡು ದಿನ ಉಳಿದಿರುವಂತೆ, ಜಿಲ್ಲೆಯ ರಾಜಕೀಯ ಯುವ ನಾಯಕರೊಬ್ಬರ ಖಾಸಗಿ ಚಟುವಟಿಕೆಗಳ ಮಾಹಿತಿಯುಳ್ಳ ಪೆನ್ ಡ್ರೈವ್‌ಗಳು ಪಾರ್ಕ್, ಕ್ರೀಡಾಂಗಣ ಹಾಗೂ ಇನ್ನಿತರೆ ಸಾರ್ವಜನಿಕ ಸ್ಥಳಗಳಲ್ಲಿ ದೊರೆಯುತ್ತಿವೆ ಎಂಬ ವದಂತಿ ಹರಡಿದ್ದು, ಸಂಚಲನ ಮೂಡಿಸಿದೆ.

ಯುವ ನಾಯಕರೊಬ್ಬರ ಖಾಸಗಿ ಚಟುವಟಿಕೆಗಳಿರುವ ವಿಡಿಯೋಗಳನ್ನು ಪೆನ್ ಡ್ರೈವ್‌ಗಳಲ್ಲಿ ತುಂಬಿ ಅನಾಮಧೇಯವಾಗಿ ಹರಡಲಾಗುತ್ತಿದೆ ಎಂಬ ಚರ್ಚೆ ಸಾರ್ವಜನಿಕ ವಲಯದಲ್ಲಿ ನಡೆದಿದೆ.



Leave a Comment: