ಪುತ್ತೂರು: ನೇಣು ಬಿಗಿದು ಅನ್ಸರ್ ಆತ್ಮಹತ್ಯೆ

ಸುದ್ದಿಗಳು News

Posted by vidyamaana on 2024-07-05 12:22:17 |

Share: | | | | |


ಪುತ್ತೂರು: ನೇಣು ಬಿಗಿದು  ಅನ್ಸರ್  ಆತ್ಮಹತ್ಯೆ

ಪುತ್ತೂರು : ವಿವಾಹಿತ ಯುವಕನೊಬ್ಬ ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ವಳತ್ತಡ್ಕ ಸಮೀಪದ ಕೊಪ್ಪಳ ಎಂಬಲ್ಲಿ ಗುರುವಾರ ನಡೆದಿದೆ.

ಮೂಲತಃ ಪುತ್ತೂರು ತಾಲೂಕಿನ ಸರ್ವೆ ಗ್ರಾಮದ ರೆಂಜಲಾಡಿ ನಿವಾಸಿಯಾಗಿದ್ದು, ಪ್ರಸ್ತುತ ಆರ್ಯಾಪು ಗ್ರಾಮದ ವಳತ್ತಡ್ಕ ಸಮೀಪದ ಕೊಪ್ಪಳ ಎಂಬಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸ್ತವ್ಯವಿದ್ದ ಸಿದ್ದೀಕ್ ಅನ್ಸರ್(32) ಆತ್ಮಹತ್ಯೆ ಮಾಡಿಕೊಂಡವರು. ಗುರುವಾರ ಕೊಪ್ಪಳದಲ್ಲಿರುವ ತನ್ನ ಮಾವನ ಅಡಕೆ ತೋಟದ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅಡಕೆ ಗಾರ್ಬಲ್‌ನಲ್ಲಿ ದುಡಿಯುತ್ತಿದ್ದ ಸಿದ್ದೀಕ್ ಅನ್ಸರ್ ಸರ್ವೆ ಗ್ರಾಮದ ಕಲ್ಪನೆಯಲ್ಲಿ 10 ಸೆಂಟ್ಸ್ ಜಾಗ ಖರೀದಿಸಿ ಮನೆ ನಿರ್ಮಿಸಲು ಅಡಿಪಾಯ ಹಾಕಿದ್ದರು. ಆರ್ಯಾಪು ಗ್ರಾಮದ ಕೊಪ್ಪಳದಲ್ಲಿ ಬಾಡಿಗೆ ಮನೆ ಮಾಡಿ ಅಲ್ಲಿ ತಂದೆ, ತಾಯಿ ಹಾಗೂ ಪತ್ನಿ ಮಕ್ಕಳ ಜತೆ ವಾಸ್ತವ್ಯವಿದ್ದರು. ಕಳೆದ ಒಂದೂವರೆ ತಿಂಗಳಿನಿಂದ ವಿಪರೀತ ಹೊಟ್ಟೆನೋವು ಮತ್ತು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಪುತ್ತೂರಿನ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರೂ ಗುಣಮುಖರಾಗದ ಅವರು ಗಾರ್ಬಲ್ ಕೆಲಸಕ್ಕೆ ಹೋಗದೆ ಮನೆಯಲ್ಲೇ ಉಳಿದುಕೊಂಡಿದ್ದರು. ಮನೆ ನಿರ್ಮಿಸುವ ಉದ್ದೇಶದಿಂದ ಸಾಲ ಪಡೆದಿದ್ದ ಅವರು ಸಾಲ ತೀರಿಸಲಾಗದೆ ಜೀವನದಲ್ಲಿ ಜಿಗುಪ್ಪೆಗೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.

 Share: | | | | |


Breaking: ಬಿಜೆಪಿಯಿಂದ ಮಾಜಿ ಸಚಿವ ಕೆಎಸ್‌ ಈಶ್ವರಪ್ಪ ಆರು ವರ್ಷ ಉಚ್ಛಾಟನೆ

Posted by Vidyamaana on 2024-04-22 21:31:47 |

Share: | | | | |


Breaking: ಬಿಜೆಪಿಯಿಂದ ಮಾಜಿ ಸಚಿವ ಕೆಎಸ್‌ ಈಶ್ವರಪ್ಪ ಆರು ವರ್ಷ ಉಚ್ಛಾಟನೆ

ಬೆಂಗಳೂರು; ಬಿಜೆಪಿಯಿಂದ ಮಾಜಿ ಸಚಿವ ಕೆ ಎಸ್ಈಶ್ವರಪ್ಪ ಅವರನ್ನು 6 ವರ್ಷಗಳ ಕಾಲ ಉಚ್ಛಾಟನೆ ಮಾಡಿ ಬಿಜೆಪಿ ಶಿಸ್ತು ಸಮಿತಿ ಆದೇಶ ಹೊರಡಿಸಿದೆ.

ನ 13 : ವಸ್ತ್ರ ವಿತರಣಾ ಕಾರ್ಯಕ್ರ‌ಮ ಟ್ರಾಫಿಕ್ ವ್ಯವಸ್ಥೆಯ ಬಗ್ಗೆ ಸಮಾಲೋಚನೆ

Posted by Vidyamaana on 2023-11-10 09:03:44 |

Share: | | | | |


ನ 13 : ವಸ್ತ್ರ ವಿತರಣಾ ಕಾರ್ಯಕ್ರ‌ಮ ಟ್ರಾಫಿಕ್ ವ್ಯವಸ್ಥೆಯ ಬಗ್ಗೆ ಸಮಾಲೋಚನೆ

ಪುತ್ತೂರು: ರೈ ಎಸ್ಟೇಟ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ನ.13 ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ‌ನಡೆಯಲಿರುವ ವಸ್ತ್ರ ವಿತರಣೆ ಹಾಗೂ ಸಹಭೋಜನ ಕಾರ್ಯಕ್ರಮದಲ್ಲಿ ಸಾವಿರಾರು ಮಂದಿ ಸೇರುವ ನಿರೀಕ್ಷೆ ಇದ್ದು ಟ್ರಾಫಿಕ್ ವ್ಯವಸ್ಥೆಯ ಬಗ್ಗೆ ಟ್ರಸ್ಟ್ ಕಾರ್ಯಾಧ್ಯಕ್ಷರಾದ‌‌ ಸುದೇಶ್ ಶೆಟ್ಟಿಯವರು ಟ್ರಾಫಿಕ್ ಇನ್ಸ್ ಪೆಕ್ಟರ್ ಉದಯ ರವಿ ಅವರ ಜೊತೆ ಸಮಾಲೋಚನೆ ನಡೆಸಿದರು.

ಕ್ರೀಡಾಂಗಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಇನ್ಸ್ ಪೆಕ್ಟರ್ ರವರು ಕಾರ್ಯಾಧ್ಯಕ್ಷರಿಂದ ಮಾಹಿತಿ ಪಡೆದುಕೊಂಡರು. 50 ಸಾವಿರಕ್ಕೂ‌ಮಿಕ್ಕಿ‌ ಜನರು ಕಾರ್ಯಕ್ರಮದಲ್ಲಿ‌ಭಾಗವಹಿಸುವ ಕಾರಣ ನಗರದಲ್ಲಿ ಟ್ರಾಫಿಕ್ ಜಾಮ್ ಆಗುವ ಸಂಭವ ಇದ್ದು ಸಾರ್ವಜನಿಕರಿಗೆ ತೊಂದರೆಯಾಗದಂತೆ ಎಲ್ಲಾ ವ್ಯವಸ್ಥೆಗಳನ್ನು ಕೈಗೊಳ್ಳುವಂತೆ ಸುದೇಶ್ ಶೆಟ್ಟಿಯವರು ಮನವಿ ಮಾಡಿದರು.

ಮೂಡುಬಿದಿರೆಯ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ನಾಪತ್ತೆ ಪ್ರಕರಣ; ವಿದ್ಯಾರ್ಥಿನಿ ಕೇರಳದಲ್ಲಿ ಮದುವೆಯಾಗಿ ಪತ್ತೆ

Posted by Vidyamaana on 2024-02-26 16:07:51 |

Share: | | | | |


ಮೂಡುಬಿದಿರೆಯ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ನಾಪತ್ತೆ ಪ್ರಕರಣ; ವಿದ್ಯಾರ್ಥಿನಿ ಕೇರಳದಲ್ಲಿ ಮದುವೆಯಾಗಿ ಪತ್ತೆ

ಮೂಡುಬಿದಿರೆ: ಮೂಡುಬಿದಿರೆಯ ಖಾಸಗಿ ಕಾಲೇಜಿನ ಬಿ.ಪಿ.ಟಿ ಪ್ರಥಮ ವರ್ಷದ ವಿದ್ಯಾರ್ಥಿನಿ ಆದಿರಾ ಎಂಬಾಕೆಯು ಫೆ. 23 ರಿಂದ ನಾಪತ್ತೆಯಾಗಿದ್ದು, ಈ ಕುರಿತು ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ನಾಪತ್ತೆಯಾದ ವಿದ್ಯಾರ್ಥಿನಿಯು ಮೂಲತಃ ಉಡುಪಿ ಜಿಲ್ಲೆ ಕೊಲ್ಲೂರಿನವಳಾಗಿರುವ ಆದಿರಾ. ಈಕೆ ಮೂಡುಬಿದಿರೆಯ ಪ್ರತಿಷ್ಠಿತ ಖಾಸಗಿ ಕಾಲೇಜಿನಲ್ಲಿ ಕಲಿಯುತ್ತಿದ್ದು, ವಿದ್ಯಾಗಿರಿಯಲ್ಲಿರುವ ಶಾಂಭವಿ ಹಾಸ್ಟೆಲ್ ನ ಸಿ. ವಿಭಾಗದಲ್ಲಿ ವಾಸ್ತವ್ಯವಿದ್ದಳು.

ಈಕೆಯು ಕಾಲೇಜಿನ ಬಕ್ಸ್ ನಲ್ಲಿ ಇತರ ವಿದ್ಯಾರ್ಥಿಗಳೊಂದಿಗೆ ಫೆಬ್ರವರಿ 23 ಶುಕ್ರವಾರದಂದು ಬೆಳಿಗ್ಗೆ 7-45 ಕ್ಕೆ ಹಾಸ್ಟೆಲ್ ನಿಂದ ಬಂದು ಮೂಡುಬಿದಿರೆ ಕನ್ನಡಭವನದ ಬಳಿ ಇಳಿದು ಹೋದಾಕೆ ಕಾಲೇಜಿಗೂ ಹೋಗದೆ, ಹಾಸ್ಟೆಲ್ ಗೂ ಹೋಗದೆ, ಮನೆಗೂ ಹೋಗದೆ ನಾಪತ್ತೆಯಾಗಿದ್ದಾಳು.ಇದೀಗ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್ ಎಂಬಂತೆ ಆದಿರಾ ಕೇರಳದಲ್ಲಿ ಮದುವೆಯಾಗಿ ಪತ್ತೆಯಾಗಿದ್ದಾಳೆ. ಈಕೆ ಯುವಕನೊಬ್ಬನನ್ನು ಪ್ರೀತಿಸುತ್ತಿದ್ದು ಕೇರಳಕ್ಕೆ ತೆರಳಿ ಮದುವೆಯಾಗುವ ಮೂಲಕ ಪ್ರಕರಣ ಸುಖಾಂತ್ಯ ಕಂಡಿದೆ ಎಂದು ತಿಳಿದು ಬಂದಿದೆ.

ಸಿಎಂ ಜನಸ್ಪಂದನ: ಸಮಸ್ಯೆ ಹೇಳಿಕೊಂಡ ವಿಶೇಷ ಚೇತನ ಯುವತಿಗೆ ಸಿದ್ಧರಾಮಯ್ಯ ಸ್ಥಳದಲ್ಲೇ ಪರಿಹಾರ

Posted by Vidyamaana on 2024-02-08 16:26:38 |

Share: | | | | |


ಸಿಎಂ ಜನಸ್ಪಂದನ: ಸಮಸ್ಯೆ ಹೇಳಿಕೊಂಡ ವಿಶೇಷ ಚೇತನ ಯುವತಿಗೆ ಸಿದ್ಧರಾಮಯ್ಯ ಸ್ಥಳದಲ್ಲೇ ಪರಿಹಾರ

ಬೆಂಗಳೂರು : ತನ್ನ ಸಮಸ್ಯೆ ಹೇಳಿಕೊಂಡು ಡಿಗ್ರಿ ಮುಗಿಸಿದ್ದಂತ ವಿಶೇಷ ಚೇತನ ಯುವತಿಯೊಬ್ಬಳು ಇಂದು ಸಿಎಂ ಜನಸ್ಪಂದನ ಕಾರ್ಯಕ್ರಮದಲ್ಲಿ ಭಾಗಿಯಾಗಿ, ಸಿದ್ಧರಾಮಯ್ಯ ಅವರಿಗೆ ಮನವಿ ಮಾಡಿದರು. ಆಕೆಯ ಮನವಿ ಪಡೆದಂತ ಅವರು, ಸ್ಥಳದಲ್ಲೇ ಪರಿಹಾರವನ್ನು ಸೂಚಿಸಿದರು.ಇಂದು ವಿಧಾನಸೌಧದ ಮುಂಭಾಗದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ರಾಜ್ಯಮಟ್ಟದ ಜನಸ್ಪಂದನ ಕಾರ್ಯಕ್ರಮ ನಡೆಯುತ್ತಿದೆ.ಈ ಕಾರ್ಯಕ್ರಮದಲ್ಲಿ ರಾಜ್ಯದ ವಿವಿದೆಡೆಗಳಿಂದ ಸಾವಿರಾರು ಜನರು ತಮ್ಮ ಸಮಸ್ಯೆ ಪರಿಹಾರಕ್ಕಾಗಿ ಆಗಮಿಸಿದ್ದಾರೆ.


ಮಧ್ಯಾಹ್ನವಾದರೂ ಜನಸ್ಪಂದನ ಕಾರ್ಯಕ್ರಮದಲ್ಲಿ ಜನರು ಮಾತ್ರ ಕಡಿಮೆಯಾಗುತ್ತಿಲ್ಲ. ಇನ್ನೂ ಹೆಚ್ಚು ಹೆಚ್ಚೇ ಆಗುತ್ತಿದ್ದು, ಉರಿ ಬಿಸಿಲಿನಲ್ಲೂ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಜನರ ಬಳಿಗೆ ಸರ್ಕಾರ ಎಂಬ ರೀತಿ, ಸಮಸ್ಯೆಯನ್ನು ಶಾಂತ ಚಿತ್ತದಿಂದ ಕೇಳುತ್ತ, ಅದನ್ನು ಪರಿಹರಿಸೋ ಕಾರ್ಯದಲ್ಲಿ ತೊಡಗಿದ್ದಾರೆ.


ಇಂದಿನ ಜನಸ್ಪಂದನ ಕಾರ್ಯಕ್ರಮದಲ್ಲಿ ಡಬಲ್ ಡಿಗ್ರಿ ಮಗುಸಿದ್ದಂತ ಬೆಂಗಳೂರಿನ ವಿಶೇಷ ಚೇತನ ಯುವತಿ ನವ್ಯಶ್ರೀ ಎಂಬುವರು ತಾಯಿ ರಮಾಮಣಿ ಅವರ ಜೊತೆಗೆ ಬಂದು ಉದ್ಯೋಗಕ್ಕಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಬಳಿ ಮನವಿ ಮಾಡಿದರು.


ವಿಕಲ ಚೇತನ ಯುವತಿಯು ನೀಡಿದಂತ ಮನವಿ ಸ್ವೀಕರಿಸಿದಂತ ಸಿಎಂ ಸಿದ್ಧರಾಮಯ್ಯ ಅವರು, ಉದ್ಯೋಗ ಮೇಳದ ವೇಳೆ ಈ ಅರ್ಜಿಯನ್ನು ಪರಿಗಣಿಸುವಂತೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚಿಸಿ, ವಿಶೇಷ ಚೇತನ ಯುವತಿಯ ಬದುಕಿಗೆ ಉದ್ಯೋಗದ ಭರವಸೆಯನ್ನು ನೀಡಿದರು. ಈ ಮೂಲಕ ವಿಶೇಷ ಚೇತನ ಯುವತಿಯ ಬದುಕಿಗೆ ಆಸರೆಯಾದರು.

ಅ. 7 ರಂದು ರೈ ಎಸ್ಟೇಟ್ಸ್ ಚಾರಿಟೇಬಲ್ ಟ್ರಸ್ಟ್‌ನಿಂದ ಬೃಹತ್ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

Posted by Vidyamaana on 2023-10-05 21:59:37 |

Share: | | | | |


ಅ. 7 ರಂದು ರೈ ಎಸ್ಟೇಟ್ಸ್ ಚಾರಿಟೇಬಲ್ ಟ್ರಸ್ಟ್‌ನಿಂದ ಬೃಹತ್ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

ಪುತ್ತೂರು: ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ಪುತ್ತೂರು ಶಾಸಕರಾದ ಅಶೋಕ್ ರೈ ನೇತೃತ್ವದಲ್ಲಿ ಬೃಹತ್ ಉಚಿತ ವೈದ್ಯಕೀಯ ತಪಾಸಣಾ ಶಿಬಿರವರು ಅ. ೭ ರಂದು ಶನಿವಾರ ಬೈಪಾಸ್ ಬಳಿ ಇರುವ ಶಾಸಕರ ಟ್ರಸ್ಟ್ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಟ್ರಸ್ಟ್‌ನ ಕಾರ್ಯಾಧ್ಯಕ್ಷರಾದ ಸುದೇಶ್ ಶೆಟ್ಟಿ ಶಾಂತಿನಗರ ತಿಳಿಸಿದ್ದಾರೆ.

ಕೆಎಂಸಿ ಆಸ್ಪತ್ರೆ ಅತ್ತಾವರ ಮಂಗಳೂರು ಮತ್ತು ಕೆಎಂಸಿ ಆಸ್ಪತ್ರೆ ಡಾ. ಅಂಬೇಡ್ಕರ್ ವೃತ್ತ ಮಂಗಳೂರು ಇವರ ಸಹಯೋಗದಲ್ಲಿ ಶಿಬಿರ ನಡೆಯಲಿದೆ. ನುರಿತ ವೈದ್ಯರುಗಳು ಶಿಬಿರದಲ್ಲಿ ಭಾಗವಹಿಸಲಿದ್ದು ಕೆಲವೊಂದು ಸಣ್ಣಪುಟ್ಟ ಕಾಯಿಲೆಗಳಿಗೆ ಸ್ಥಳದಲ್ಲೇ ಔಷಧವನ್ನು ನೀಡಲಾಗುವುದು ಎಂದು ತಿಳಿಸಿದ್ದಾರೆ.


ಭಾಗವಹಿಸುವ ವಿಭಾಗಗಳು

ಸಾಮಾನ್ಯ ರೋಗ, ಹೃದಯ ರೋಗ, ಕಣ್ಣಿನ ವಿಭಾಗ, ಎಲುಬು ಮತ್ತು ಕೀಲು ರೋಗ, ಗ್ಯಾಸ್ಟೋಎಂಟರಾಲಜಿ ವಿಭಾಗ, ಮೂತ್ರಶಾಸ್ತ್ರ ವಿಭಾಗದ ನುರಿತ ವೈದ್ಯರುಗಳ ಭಾಗವಹಿಸಿ ಸೂಕ್ತ ಚಿಕಿತ್ಸೆ ಮತ್ತು ತಪಾಸಣೆಯನ್ನು ನಡೆಸಲಿದ್ದಾರೆ.


ಸೌಲಭ್ಯಗಳು

ಉಚಿತ ಬಿ ಪಿ ಹಾಗೂ ಮಧುಮೇಹ ತಪಾಸಣೆ, ಅಗತ್ಯ ಇರುವವರಿಗೆ ಉಚಿತ ಇಸಿಜಿ ಪರೀಕ್ಷೆ, ಉಚಿತ ಔಷಧ ವಿತರಣೆ, ಮತ್ತು ಉಚಿತ ಓದುವ ಕನ್ನಡಕದ ವಿತರಣೆ ನಡೆಯಲಿದೆ. ಬೆಳಿಗ್ಗೆ ೯ ರಿಂದ ಮಧ್ಯಾಹ್ನ ೧ ಗಂಟೆಯತನಕ ಶಿಬಿರ ನಡೆಯಲಿದ್ದು ಸಾರ್ವಜನಿಕರು ಪ್ರಯೋಜನವನ್ನು ಪಡೆದುಕೊಳ್ಳುವಂತೆ ಕಾರ್ಯಾಧ್ಯಕ್ಷರು ವಿನಂತಿಸಿದ್ದಾರೆ.

ರೈ ಚಾರಿಟೇಬಲ್ ಟ್ರಸ್ಟ್ ನಿಂದ ಕಾರ್ಮಿಕರ ಕಾರ್ಡ್ ವಿತರಣೆ

Posted by Vidyamaana on 2023-12-01 07:03:23 |

Share: | | | | |


ರೈ ಚಾರಿಟೇಬಲ್ ಟ್ರಸ್ಟ್ ನಿಂದ ಕಾರ್ಮಿಕರ ಕಾರ್ಡ್ ವಿತರಣೆ

ಪುತ್ತೂರು: ಬಡ ಜನರ ಸೇವೆಗೆಂದು ಕಳೆದ 11 ವರ್ಷಗಳಿಂದ ರೈ ಎಸ್ಟೇಟ್  ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ರಚನೆ ಮಾಡಲಾಗಿದ್ದು ಮುಂದೆಯೂ ಟ್ರಸ್ಟ್ ನ ಸಮಾಜ ಸೇವೆ ಮುಂದುವರೆಯುತ್ತದೆ ಎಂದು ಟ್ರಸ್ಟ್ ಅಧ್ಯಕ್ಷರಾದ ಶಾಸಕ ಅಶೋಕ್ ರೈ ಹೇಳಿದರು.

ಅವರು ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕಾರ್ಮಿಕರಬಕಾರ್ಡ್ ವಿತರಿಸಿ ಮಾತನಾಡಿದರು.

ಒಟ್ಟು 5400 ಕಾರ್ಮಿಕ ಕಾರ್ಡುಗಳನ್ನು ವಿತರಿಸಲಾಗಿದೆ.‌ಕಾರ್ಮಿಕರಬಕಾರ್ಡು ನೀಡುವ ಮೂಲಕ ಬಡವರ ಬದುಕಿನಲ್ಲಿ‌ಭರವಸೆ ಮೂಡಿಸುವ ಕೆಲಸ ಟ್ರಸ್ಟಿನಿಂದ ನಡೆಯುತ್ತಿದೆ.

ಮುಂದಿನ‌ದಿನಗಳಲ್ಲಿ‌ಇನ್ನಷ್ಟು ಸಮಾಜ ಸೇವೆಗಳು ಟ್ರಸ್ಟ್ ವತಿಯಿಂದ ನಡೆಯಲಿದ್ದು ಜನರ ಸಹಕಾರವನ್ನು ಬಯಸುವುದಾಗಿ ಹೇಳಿದರು.

ವೇದಿಕೆಯಲ್ಲಿ ಟ್ರಸ್ಟ್ ಪ್ರಮುಖರಾದ ಕಾವು ಹೇಮನಾಥ ಶೆಟ್ಟಿ, ನಿಹಾಲ್ ಶೆಟ್ಟಿ ಕಲ್ಲಾರೆ, ಉಪಸ್ಥಿತರಿದ್ದರು. 

ರಚನಾ ರೈ ಸ್ವಾಗತಿಸಿ ಕಾರ್ಯಕ್ರಮ‌ನಿರೂಪಿಸಿದರು.



Leave a Comment: