ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೊಂದು ರೋಚಕ ಟ್ವಿಸ್ಟ್!

ಸುದ್ದಿಗಳು News

Posted by vidyamaana on 2024-03-23 15:52:34 | Last Updated by Vidyamaana on 2024-03-23 15:52:34

Share: | | | | |


ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೊಂದು ರೋಚಕ ಟ್ವಿಸ್ಟ್!

ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಕಾರಿನೊಳಗಿದ್ದ ಮೂವರು ಸಾವನ್ನಪ್ಪಿದ ಸಂಬಂಧಿಸಿದಂತೆ ಮೂವರು ಸೇರಿ 50 ಲಕ್ಷ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಕುಟುಂಬ ಸದಸ್ಯರು ಕೋರಾ ಪೊಲೀಸರ ವಿಚಾರಣೆ ವೇಳೆ ಮಾಹಿತಿ ನೀಡಿದ್ದಾರೆ.

*💥Whats App Group ಗೆ ಸೇರಲು ಕ್ಲಿಕ್ ಮಾಡಿ

*ಹಣ ತೆಗೆದುಕೊಂಡು ಹೋದ ವಿಚಾರ*:  ಇನ್ನೂ ಕಾರಿನಲ್ಲಿ ಹೋಗುವಾಗ ಮದಡ್ಕದ ಇಸಾಕ್ ಉಜಿರೆಯಲ್ಲಿದ್ದ ಸ್ವಂತ ಮನೆಯನ್ನು ಮಾರಾಟ ಮಾಡಿದ ಹಣ ಮತ್ತು ಮಗಳ ಚಿನ್ನವನ್ನು ಅಡವಿಟ್ಟು ಸುಮಾರು 35 ಲಕ್ಷ ಹಣವನ್ನು ತೆಗೆದುಕೊಂಡು ಹೋಗಿದ್ದರು ಎಂದು ಇಸಾಕ್ ಪತ್ನಿ ಕೋರಾ ಪೊಲೀಸ್ ಠಾಣೆಯಲ್ಲಿ ಮಾ.23 ರಂದು ಪೊಲೀಸ್ ವಿಚಾರಣೆ ವೇಳೆ ಹೇಳಿಕೆಯನ್ನು ನೀಡಿದ್ದಾರೆ. ಇನ್ನೂ ಶಿರ್ಲಾಲು ಸಿದ್ದಿಕ್ ಮತ್ತು ಟಿ.ಬಿ.ಕ್ರಾಸ್ ಸಾಹುಲ್ ಹಮೀದ್ ಕೂಡ ಸ್ನೇಹಿತರ ಮೂಲಕ ಪಡೆದ ಸುಮಾರು 15 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಮನೆಯವರು ಹೇಳಿಕೆ ನೀಡಿದ್ದಾರೆ. ಒಟ್ಟು ಮೂವರ ಬಳಿ 50 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ಇತ್ತು ಎನ್ನಲಾಗಿದೆ.

ತುಮಕೂರಿಗೆ ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56) , ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ಹೋಗಿದ್ದರು ಎಂದು ಹೇಳಲಾಗಿದೆ.

ಮೂವರು ಕೂಡ ನಕಲಿ ಚಿನ‌್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಅನ್ನೋದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಕಡಿಮೆ ಚಿನ್ನವನ್ನು ಬೆಲೆಗೆ ನೀಡುತ್ತೇವೆ ಎಂದು ಸುಳ್ಳು ಹೇಳಿ ಮೂವರನ್ನು ಕರೆಸಿ ಹಣ ದೋಚುವ  ಪ್ಲ್ಯಾನ್ ಮಾಡಿ ಕರೆಸಿಕೊಂಡು ಮಾ.21 ರಂದು ರಾತ್ರಿ ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಿ ನಂತರ ಹಣವನ್ನು ದೋಚಿದ್ದಾರೆ ಎನ್ನಲಾಗಿದೆ. ಇನ್ನೂ ಪ್ರಕರಣ ಸಂಬಂಧ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಸೇರಿ ಆರು ಜನರನ್ನು ಮೊಬೈಲ್ ಕಾಲ್ ಡಿಟೈಲ್ಸ್ ಮೂಲಕ  ಕಾರ್ಯಾಚರಣೆ ನಡೆಸಿ ಮಾ.22 ರಂದು ರಾತ್ರಿ ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಕೋರಾ ಪೊಲೀಸ್ ಠಾಣೆಯಲ್ಲಿ ಮಾ.22 ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಬೆಂಕಿಗಾಹುತಿಯಾದ ಕಾರನ್ನು ಕೋರಾ ಪೊಲೀಸ್ ಠಾಣೆಗೆ ತೆಗೆದುಕೊಂಡು ಬಂದಿದ್ದು. ಮೂವರ ಶವ ಸರಕಾರಿ ಆಸ್ಪತ್ರೆಯಲ್ಲಿ ಡಿಎನ್ಎ ಪರೀಕ್ಷೆ ಮಾಡಿದ ಬಳಿಕ ಮುಂದಿನ ಗುರುವಾರ ಅಥವಾ ಶುಕ್ರವಾರ ಮೃತದೇಹವನ್ನು ಗುರುತು ಪತ್ತೆಯಾದ ಬಳಿಕ ಅವರ ಕಟುಂಬ ಸದಸ್ಯರಿಗೆ ನೀಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.


 Share: | | | | |


ಮಾ :4 ರಮಾನಾಥ ರೈ ಸಾರಥ್ಯದಲ್ಲಿ 12ನೇ ವರ್ಷದ ಮೂಡೂರು ಪಡೂರು ಬಯಲು ಕಂಬಳ ಉದ್ಘಾಟನೆ.

Posted by Vidyamaana on 2023-03-04 07:28:20 |

Share: | | | | |


ಮಾ :4 ರಮಾನಾಥ ರೈ ಸಾರಥ್ಯದಲ್ಲಿ 12ನೇ ವರ್ಷದ ಮೂಡೂರು ಪಡೂರು ಬಯಲು ಕಂಬಳ ಉದ್ಘಾಟನೆ.

ಬಂಟ್ವಾಳ :  ಕೂಡಿ ಬಾಳುವ ಮಹತ್ತರ ಉದ್ದೇಶ ಇಟ್ಟುಕೊಂಡು ಜಾನಪದ ಕ್ರೀಡೆಯಾಗಿರುವ ಕಂಬಳವನ್ನು ಮತ್ತೆ ಮುಂದುವರಿಸಲಾಗಿದೆ ಎಂದು ಕಂಬಳ ಸಮಿತಿಯ ಗೌರವಾಧ್ಯಕ್ಷರಾದ ಮಾಜಿ ಸಚಿವ ಬಿ ರಮಾನಾಥ ರೈ ಹೇಳಿದರು. 

 ಕೆಪಿಸಿಸಿ ಸದಸ್ಯ ಪಿಯೂಸ್ ಎಲ್ ರೋಡ್ರಿಗಸ್ ಅವರ ಅಧ್ಯಕ್ಷತೆಯ ಕಂಬಳ ಸಮಿತಿಯ ಆಶ್ರಯದಲ್ಲಿನಡೆಯುವ ಬಂಟ್ವಾಳ ಸಮೀಪದ ನಾವೂರು ಗ್ರಾಮದ ಕೂಡಿಬೈಲಿನಲ್ಲಿ 12ನೇ ವರ್ಷದ ಮೂಡೂರು-ಪಡೂರು ಬಂಟ್ವಾಳ ಕಂಬಳಕ್ಕೆ ಮಾ :4 ರಂದು ಸಂಭ್ರಮದ ಚಾಲನೆ ನೀಡಿ ಬಳಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾಜಿ ಸಚಿವರಾದ ರಮಾನಾಥ ರೈ ಮಾತನಾಡಿದರು.ಅಲ್ಲಿಪಾದೆ ಸಂತ ಅಂಥೋನಿ ಚರ್ಚ್ ಧರ್ಮಗುರು ವಂದನೀಯ ಫೆಡ್ರಿಕ್ , ಶ್ರೀ ಕ್ಷೇತ್ರ ಕಾರಿಂಜ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಪಿ ಜಿನರಾಜ ಅರಿಗ, ಮಂಗಳೂರು ಶಾಸಕ ಜೆ ಆರ್ ಲೋಬೋ, ಬಂಟ್ವಾಳ ಪುರಸಭಾಧ್ಯಕ್ಷ ಮುಹಮ್ಮದ್ ಶರೀಫ್ ಶಾಂತಿಅಂಗಡಿ, ಉಪಾಧ್ಯಕ್ಷೆ ಜೆಸಿಂತಾ ಡಿಸೋಜ, ಸದಸ್ಯರುಗಳಾದ ಲೋಲಾಕ್ಷ ಶೆಟ್ಟಿ, ಅಬೂಬಕ್ಕರ್ ಸಿದ್ದೀಕ್ ಗುಡ್ಡೆಅಂಗಡಿ, ಜನಾರ್ದನ ಚೆಂಡ್ತಿಮಾರ್, ರಚನಾ ಪ್ರಶಸ್ತಿ ಪುರಸ್ಕೃತ ಪ್ರಗತಿಪರ ಕೃಷಿಕ ಲಿಯೋ ಫೆರ್ನಾಂಡಿಸ್ ಸರಪಾಡಿ, ನಾವೂರು ಗ್ರಾ ಪಂ ಅಧ್ಯಕ್ಷ ಬಿ ಉಮೇಶ್ ಕುಲಾಲ್, ಉಪಾಧ್ಯಕ್ಷೆ ಲವೀನಾ ವಿಲ್ಮಾ ಮೊರಾಸ್, ಜಿ ಪಂ ಮಾಜಿ ಸದಸ್ಯರಾದ ಬಿ ಪದ್ಮಶೇಖರ ಜೈನ್, ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಎಂ ಎಸ್ ಮುಹಮ್ಮದ್, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಅಕ್ರಮ-ಸಕ್ರಮ ಸಮಿತಿಯ ಮಾಜಿ ಅಧ್ಯಕ್ಷ ಕೆ ಮಾಯಿಲಪ್ಪ ಸಾಲ್ಯಾನ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜಯಂತಿ ಪೂಜಾರಿ, ತಾ ಪಂ ಮಾಜಿ ಸದಸ್ಯೆ ಫ್ಲೋಸಿ ಡಿಸೋಜ, ಬುಡಾ ಮಾಜಿ ಅಧ್ಯಕ್ಷಸ ದಾಶಿವ ಬಂಗೇರ, ಬಂಟ್ವಾಳ ತಾ ಪಂ ಮಾಜಿ ಉಪಾಧ್ಯಕ್ಷ ಬಿ ಎಂ ಅಬ್ಬಾಸ್ ಅಲಿ, ಎಪಿಎಂಸಿ ಮಾಜಿ ಅಧ್ಯಕ್ಷ ಕೆ ಪದ್ಮನಾಭ ರೈ, ನ್ಯಾಯವಾದಿ ಚಂದ್ರಶೇಖರ ಪೂಜಾರಿ, ಇಂಟಕ್ ಜಿಲ್ಲಾಧ್ಯಕ್ಷ  ಚಿತ್ತರಂಜನ್ ಶೆಟ್ಟಿ, ಯುವ ಕಾಂಗ್ರೆಸ್ ಅಧ್ಯಕ್ಷರುಗಳಾದ ಇಬ್ರಾಹಿಂ ನವಾಝ್ ಬಡಕಬೈಲು, ಸುರೇಶ್ ಪೂಜಾರಿ ಜೋರಾ,  ಪ್ರಮುಖರಾದ ಅವಿಲ್ ಮೆನೇಜಸ್, ಫಿಲಿಪ್ ಫ್ರಾಂಕ್, ಎಡ್ತೂರು ರಾಜೀವ್ ಶೆಟ್ಟಿ, ದೇವಿಪ್ರಸಾದ್ ಪೂಂಜಾ, ಸ್ಟೀವನ್ ಡಿಸೋಜ, ಪರಮೇಶ್ವರ, ಅಬ್ದುಲ್ ಕರೀಂ ಬೊಳ್ಳಾಯಿ, ಮಲ್ಲಿಕಾ ಶೆಟ್ಟಿ, ಸಂಪತ್ ಕುಮಾರ್ ಶೆಟ್ಟಿ, ಮಹಾಬಲ ಆಳ್ವ, ಮೆಲ್ವಿನ್ ಡಯಾಸ್, ಜಗದೀಶ್ ಕೊಯಿಲ, ನಾರಾಯಣ ನಾಯ್ಕ, ಶಬೀರ್ ಸಿದ್ದಕಟ್ಟೆ, ಡೆಂಝಿಲ್ ನೊರೊನ್ಹಾ, ತಿಲಕ್ ಮಂಚಿ, ಸಂಜಿತ್ ಪೂಜಾರಿ, ವೆಂಕಪ್ಪ ಪೂಜಾರಿ, ರಮೇಶ್ ಪಣೋಲಿಬೈಲು, ಮೊದಲಾದವರು ಭಾಹವಹಿಸಿದ್ದರು.

ಎದ್ದೆದ್ದು ನಿಂತು ಮಾತಾಡಿದ್ರೆ ನಿಮ್ಮನ್ನ ವಿಪಕ್ಷ ನಾಯಕ ಮಾಡುತ್ತಾರೆ ಅಂದುಕೊಂಡಿದ್ದೀರಾ? ಯತ್ನಾಳ್​ ಕಾಲೆಳೆದ ಸಿಎಂ

Posted by Vidyamaana on 2023-07-05 09:09:59 |

Share: | | | | |


ಎದ್ದೆದ್ದು ನಿಂತು ಮಾತಾಡಿದ್ರೆ ನಿಮ್ಮನ್ನ ವಿಪಕ್ಷ ನಾಯಕ ಮಾಡುತ್ತಾರೆ ಅಂದುಕೊಂಡಿದ್ದೀರಾ? ಯತ್ನಾಳ್​ ಕಾಲೆಳೆದ ಸಿಎಂ

ಬೆಂಗಳೂರು: ವಿರೋಧ ಪಕ್ಷದ ನಾಯಕನಿಲ್ಲದೇ ವಿಧಾಸಭೆ ಅಧಿವೇಶನ ನಡೆಯುತ್ತಿದ್ದು, ಇದಕ್ಕೆ ಮಾತಿನಲ್ಲೇ ಆಡಳಿತರೂಢ ಕಾಂಗ್ರೆಸ್ ನಾಯಕರು, ಬಿಜೆಪಿ ಬಗ್ಗೆ ವ್ಯಂಗ್ಯವಾಡುತ್ತಿದ್ದಾರೆ. ಅದರಂತೆ ಇಂದು (ಜುಲೈ 05) ಸದನದಲ್ಲಿ ಎದ್ದೆದ್ದು ಮಾತನಾಡುತ್ತಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ಗೆ ನಿಮ್ಮನ್ನು ವಿಪಕ್ಷ ನಾಯಕನಾಗಿ ಮಾಡುತ್ತಾರೆ ಅಂದುಕೊಂಡಿದ್ದೀರಾ ಎಂದು ಕಾಲೆಳೆದರು. ನಿಲುವಳಿ ಪ್ರಸ್ತಾವ ಮಂಡನೆ ವೇಳೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್, ಕಾಂಗ್ರೆಸ್​ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದ ವೇಳೆ ಮಧ್ಯೆ ಪ್ರವೇಶದ ಸಿಎಂ ಸಿದ್ದರಾಮಯ್ಯ, ನಿಮ್ಮನ್ನು ವಿಪಕ್ಷ‌ ನಾಯಕರಾಗಿ ಮಾಡ್ತಾರೋ ಇಲ್ವೋ ಗೊತ್ತಿಲ್ಲ. ಇಲ್ಲಿ ಎದ್ದೆದ್ದು ನಿಂತು ಮಾತಾಡಿದ್ರೆ ನಿಮ್ಮನ್ನು ವಿಪಕ್ಷ ನಾಯಕ ಮಾಡುತ್ತಾರೆ ಅಂತಾ ಅಂದುಕೊಂಡಿದ್ದೀರಾ? ಎಂದು ಟಾಂಗ್ ಕೊಟ್ಟರು.ಸದನ ಶುರುವಾಗಿ 3 ದಿನ ಆದರೂ ವಿಪಕ್ಷ ನಾಯಕ ಆಯ್ಕೆಯಾಗಿಲ್ಲ. ಇಲ್ಲಿ ಬಂದು ಬುರುಡೆ ಹೊಡೆಯುತ್ತಿದ್ದೀರಿ. ಅಶೋಕ್ ಮಾತಾಡುವುದು ನೋಡಿದರೆ ಮಹಿಳೆಯರಿಗೆ ಫ್ರೀ ಕೊಟ್ಟಿರುವುದನ್ನೇ ವಿರೋಧಿಸುತ್ತಿರುವಂತೆ ಕಾಣುತ್ತಿದೆ ಎಂದು ಶಾಸಕ ಯತ್ನಾಳ್​, ಅಶೋಕ್​ಗೆ ಕಿಚಾಯಿಸಿದರು.ಐದೂ ಗ್ಯಾರಂಟಿ ಪ್ರಸಕ್ತ ಆರ್ಥಿಕ ವರ್ಷದೊಳಗೆ ಜಾರಿ ಮಾಡುತ್ತೇವೆ. ಬಿಜೆಪಿಯವರು ಪ್ರಸ್ತಾಪಿಸಿರುವ ವಿಷಯಗಳು ಗವರ್ನರ್​ ಭಾಷಣದಲ್ಲಿದೆ. ಗವರ್ನರ್​ ಭಾಷಣದ ಮೇಲೆ ಚರ್ಚೆ ವೇಳೆ ಬಿಜೆಪಿಯವರು ಪ್ರಸ್ತಾಪಿಸಲಿ. ಹಾಗಾಗಿ ಬಿಜೆಪಿಯವರ ನಿಲುವಳಿ ಸೂಚನೆ ಮೇಲೆ ಚರ್ಚೆ ಅಗತ್ಯವಿಲ್ಲ ವಿಪಕ್ಷದವರಿಂದ ಈಗ ಚರ್ಚೆ ಬೇಡ. ಪ್ರಾಥಮಿಕ ಪ್ರಸ್ತಾವಕ್ಕಷ್ಟೇ ಅವರನ್ನು ಸೀಮಿತ ಮಾಡುವಂತೆ ಸಿಎಂ ಸಿದ್ದರಾಮಯ್ಯ ಅವರು ಸ್ಪೀಕರ್​ ಯು.ಟಿ.ಖಾದರ್​ಗೆ ಆಗ್ರಹಿಸಿದರು.

ಸೆ 10 : ಬೆಂಗಳೂರಲ್ಲಿ ಎಸ್ಸೆಸ್ಸಫ್ ಗೋಲ್ಡನ್ ಫಿಫ್ಟಿ ಸಮಾವೇಶ

Posted by Vidyamaana on 2023-09-09 19:25:42 |

Share: | | | | |


ಸೆ 10 : ಬೆಂಗಳೂರಲ್ಲಿ ಎಸ್ಸೆಸ್ಸಫ್ ಗೋಲ್ಡನ್ ಫಿಫ್ಟಿ ಸಮಾವೇಶ

ಪುತ್ತೂರು : ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ ( ಎಸ್ಸೆಸ್ಸಫ್ ) ಇದರ ಐವತ್ತನೇ ವರ್ಷಾಚರಣೆಯ ಪ್ರಯುಕ್ತ ಗೋಲ್ಡನ್ ಫಿಫ್ಟಿ ಸಮಾವೇಶವು ಬೆಂಗಳೂರಿನ ಅರಮನೆ ಮೈದಾನದಲ್ಲಿ ಜರುಗಲಿದೆ.

ಇಂಡಿಯನ್ ಗ್ರ್ಯಾಂಡ್ ಮುಫ್ತಿ ಎ.ಪಿ ಉಸ್ತಾದ್, ಮುಖ್ಯಮಂತ್ರಿ ಸಿದ್ಧರಾಮಯ್ಯ ಸಹಿತ ಹಲವಾರು ಧಾರ್ಮಿಕ, ಸಾಮಾಜಿಕ, ರಾಜಕೀಯ ನಾಯಕರು, ಚಿಂತಕರು ಭಾಗವಹಿಸಲಿದ್ದಾರೆ.

ಈ ಸಮಾವೇಶದಲ್ಲಿ ಪುತ್ತೂರು ತಾಲ್ಲೂಕಿನಿಂದ ಸಾವಿರಾರು ಸಂಖ್ಯೆಯ ಕಾರ್ಯಕರ್ತರು, ಮುಸ್ಲಿಂ ಜಮಾಅತ್, ಎಸ್‌ವೈಎಸ್ ನಾಯಕರು, ಕಾರ್ಯಕರ್ತರು ಭಾಗವಹಿಸಲಿದ್ದಾರೆ.

ಗೋಲ್ಡನ್ ಫಿಫ್ಟಿ ಸಮಾವೇಶದ ಸಮಾರೋಪ ಸಮಾರಂಭ ನವಂಬರ್ 23,24,25 ರಂದು ಮುಂಬೈಯ ಏಕತಾ ಮೈದಾನದಲ್ಲಿ ನಡೆಯಲಿದೆ ಎಂದು ಎಸ್ಸೆಸ್ಸಫ್ ಪುತ್ತೂರು ಡಿವಿಶನ್ ನಾಯಕರು ತಿಳಿಸಿದ್ದಾರೆ.

ಬ್ರೇಕ್ ತಪ್ಪಿತೇ ಬದುಕು.. ನೇಣಿಗೆ ಕೊರಳೊಡ್ಡಿದ ದಂಪತಿ

Posted by Vidyamaana on 2023-07-01 16:00:10 |

Share: | | | | |


ಬ್ರೇಕ್ ತಪ್ಪಿತೇ ಬದುಕು.. ನೇಣಿಗೆ ಕೊರಳೊಡ್ಡಿದ ದಂಪತಿ

ಪುತ್ತೂರು : ಗಂಡ-ಹೆಂಡತಿ ಇಬ್ಬರು ಆತ್ಮಹತ್ಯೆಗೆ ಯತ್ನಿಸಿ ಪತಿ ಸಾವನ್ನಪ್ಪಿ, ಪತ್ನಿ ಗಂಭೀರವಾಗಿ ಗಾಯಗೊಂಡ ಘಟನೆ ಮಾಣಿ ಸಮೀಪದ ಕೊಡಾಜೆಯಲ್ಲಿ ನಡೆದಿದೆ.

ಮೃತರನ್ನು ಕೊಡಾಜೆ ನಿವಾಸಿ ಪ್ರತಾಪ್ (33) ಎಂದು ಗುರುತಿಸಲಾಗಿದೆಪ್ರತಾಪ್ ರವರು ಖಾಸಗಿ ಬಸ್ ಚಾಲಕರಾಗಿ ಕಾರ್ಯ ನಿರ್ವಹಿಸುತ್ತಿದ್ದು, ಇಂದು ಪತಿ, ಪತ್ನಿ ಇಬ್ಬರು ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದು, ಘಟನೆಯಲ್ಲಿ ಪ್ರತಾಪ್ ರವರು ಸಾವನ್ನಪ್ಪಿ, ಪತ್ನಿ ಗಂಭೀರ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.

ಅರುಣ್ ಪುತ್ತಿಲ ಭೇಟಿ ರವರು ಪುತ್ತೂರು ಆಸ್ಪತ್ರೆಯಿಂದ ಪ್ರತಾಪ್ ರವರ ಪತ್ನಿಯನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲು ಸಹಕರಿಸಿದರು.

Breaking News : ಬಿಜೆಪಿಯಿಂದ ರಾಜ್ಯಸಭೆಗೆ ಸುಧಾಮೂರ್ತಿ ನಾಮನಿರ್ದೇಶನ

Posted by Vidyamaana on 2024-03-08 13:33:38 |

Share: | | | | |


Breaking News : ಬಿಜೆಪಿಯಿಂದ ರಾಜ್ಯಸಭೆಗೆ ಸುಧಾಮೂರ್ತಿ ನಾಮನಿರ್ದೇಶನ

ಬೆಂಗಳೂರು (ಮಾ.8): ಇನ್ಫೋಸಿಸ್‌ ಸಹ ಸಂಸ್ಥಾಪಕ ನಾರಾಯಣ ಮೂರ್ತಿ ಅವರ ಪತ್ನಿ ಹಾಗೂ ಇನ್ಫೋಸಿಸ್‌ ಫೌಂಡೇಷನ್‌ನ ಮಾಜಿ ಅಧ್ಯಕ್ಷ, ಸಮಾಜಸೇವಕಿ ಸುಧಾ ಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿದೆ. ಬಿಜೆಪಿ ಪಕ್ಷದಿಂದ ಅವರನ್ನು ರಾಜ್ಯಸಭೆಗೆ ನಾಮ ನಿರ್ದೇಶನ ಮಾಡಲಾಗಿದೆ.ಈ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ಟ್ವೀಟ್‌ ಮಾಡಿದ್ದು, ಭಾರತದ ರಾಷ್ಟ್ರಪತಿಗಳು ಶ್ರೀಮತಿ ಸುಧಾಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿರುವುದು ನನಗೆ ಖುಷಿ ತಂದಿದೆ.ಸಮಾಜಸೇವೆ, ಲೋಕೋಪಕಾರ ಮತ್ತು ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಸುಧಾ ಜಿಯವರ ಕೊಡುಗೆ ಅಪಾರ ಮತ್ತು ಸ್ಪೂರ್ತಿದಾಯಕವಾಗಿದೆ. ರಾಜ್ಯಸಭೆಯಲ್ಲಿ ಅವರ ಉಪಸ್ಥಿತಿಯು ನಮ್ಮ ನಾರಿ ಶಕ್ತಿಗೆ ಪ್ರಬಲವಾದ ಸಾಕ್ಷಿಯಾಗಿದೆ, ಇದು ನಮ್ಮ ರಾಷ್ಟ್ರದ ಭವಿಷ್ಯವನ್ನು ರೂಪಿಸುವಲ್ಲಿ ಮಹಿಳೆಯರ ಶಕ್ತಿ ಮತ್ತು ಸಾಮರ್ಥ್ಯವನ್ನು ಉದಾಹರಿಸುತ್ತದೆ. ಅವರ ಸಂಸದೀಯ ಅವಧಿ ಫಲಪ್ರದವಾಗಲಿ ಎಂದು ಹಾರೈಸುತ್ತೇನೆ ಎಂದು ಮೋದಿ ಬರೆದಿದ್ದಾರೆ.

ಎದೆ ಝಲ್​ ಎನಿಸುವ ಹುಡುಗಿಯ ಡೇಂಜರಸ್ ಸ್ಟಂಟ್! ವೈರಲ್​ ವೀಡಿಯೋ

Posted by Vidyamaana on 2024-06-20 16:47:02 |

Share: | | | | |


ಎದೆ ಝಲ್​ ಎನಿಸುವ ಹುಡುಗಿಯ ಡೇಂಜರಸ್ ಸ್ಟಂಟ್! ವೈರಲ್​ ವೀಡಿಯೋ

ನವದೆಹಲಿ: ಪುಣೆಯ ಜಂಬೂಲ್ ವಾಡಿ ಸ್ವಾಮಿ ನಾರಾಯಣ ದೇವಸ್ಥಾನದ ಬಳಿ ಯುವತಿಯೊಬ್ಬಳು ಸಾಹಸ ಪ್ರದರ್ಶಿಸಿದ್ದಾಳೆ. ಹಾನಿಗೊಳಗಾದ ಕಟ್ಟಡದ ಮೇಲಕ್ಕೆ ಯುವತಿ ಮತ್ತು ಇಬ್ಬರು ಯುವಕರು ಹತ್ತಿದ್ದಾರೆ. ಒಬ್ಬ ಕ್ಯಾಮೆರಾ ಹಿಡಿದಿದ್ದರೆ, ಇನ್ನೊಬ್ಬ ಕಟ್ಟಡದ ಮೇಲೆ ನೇರವಾಗಿ ಮಲಗಿದ್ದಾನೆ.ಹುಡುಗಿ ಸಾಹಸ ಮಾಡಲು ಪ್ರಾರಂಭಿಸಿ, ಮೇಲಿಂದ ಕೆಳಕ್ಕೆ ಇಳಿದಿದ್ದು, ಆ ವೇಳೆ ಯುವಕ ಯುವತಿಯ ಕೈ ಹಿಡಿದಿದ್ದ. ಆಗ ಒಂದು ಕೈಯಿಂದ ಹುಡುಗನ ಕೈ ಹಿಡಿದುಕೊಂಡು ವಿಡಿಯೋ ತೆಗೆದಿದ್ದಾಳೆ.



Leave a Comment: