ಎಫ್‌ಐಆರ್ ರದ್ದು ಕೋರಿ ಶಾಸಕ ಹರೀಶ್ ಪೂಂಜ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಸುದ್ದಿಗಳು News

Posted by vidyamaana on 2024-07-05 17:03:24 |

Share: | | | | |


ಎಫ್‌ಐಆರ್ ರದ್ದು ಕೋರಿ ಶಾಸಕ ಹರೀಶ್ ಪೂಂಜ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಳ್ತಂಗಡಿ : ಅಕ್ರಮ ಕಲ್ಲು ಕೊರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್‌ ಠಾಣೆಗೆ ಹೋಗಿ ಪೊಲೀಸರಿಗೆ ಬೆದರಿಕೆ ಹಾಕಿದ ಪ್ರಕರಣ ಹಾಗೂ ಅನುಮತಿ ಪಡೆಯದೆ ಪ್ರತಿಭಟನೆ ಮಾಡಿದ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಹಾಕಿದ್ದ ಅರ್ಜಿಯನ್ನು ಹೈಕೋರ್ಟ್ ನ ಜನಪ್ರತಿನಿಧಿಗಳ ಕೋರ್ಟ್ ಇಂದು ವಜಾಗೊಳಿಸಿದೆ.

ಎರಡು ಪ್ರಕರಣವನ್ನು ರದ್ದು ಕೋರಿ ಹಾಕಿದ ಅರ್ಜಿಯ ಬಗ್ಗೆ ಜೂ. 5 ರಂದು(ಇಂದು) ಬೆಂಗಳೂರಿನ ಹೈಕೋರ್ಟ್ ನ ಜನಪ್ರತಿನಿಧಿಗಳ ಕೋರ್ಟ್ ನಲ್ಲಿ ವಿಚಾರಣೆ ನಡೆಯಿತು. ಈ ವೇಳೆ ಕೋರ್ಟ್ ಎರಡು ಪ್ರಕರಣವನ್ನು ರದ್ದು ಮಾಡಲು ಸಾಧ್ಯವಿಲ್ಲ ಎಂದು ಅರ್ಜಿಯನ್ನು ವಜಾಗೊಳಿಸಿದೆ ಹಾಗೂ ಈ ಪ್ರಕರಣದಲ್ಲಿ ಹೈಕೋರ್ಟ್ ಮಧ್ಯಪ್ರದೇಶಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ.

 Share: | | | | |


ಶಾಸಕರ ಇಂದಿನ ಕಾರ್ಯಕ್ರಮ ಜು 16

Posted by Vidyamaana on 2023-07-15 23:16:57 |

Share: | | | | |


ಶಾಸಕರ ಇಂದಿನ ಕಾರ್ಯಕ್ರಮ ಜು 16

ಪುತ್ತೂರು ಶಾಸಕ ಅಶೋಕ್ ಕುಮಾರ್ ಅವರು ಜುಲೈ 16 ರಂದು...

ಬೆಳ್ಳಗ್ಗೆ 10 ಗಂಟೆಗೆ  ಕೆಮ್ಮಾಯಿಯಲ್ಲಿ ವಿಘ್ನೇಶ್ ಇಂಟರ್ಲಾಕ್ಸ್ ಶಾಪ್ ಉಧ್ಘಾಟನಾ ಸಮಾರಂಭ

ಬೆಳ್ಳಗ್ಗೆ  10:30 ಕ್ಕೆ ಪಡ್ನೂರ್ ವಲಯ ದಿಂದ ಶಾಸಕರಿಗೆ ಅಭಿನಂದನಾ ಸಭೆಯಲ್ಲಿ ಭಾಗವಹಿಸಲಿದ್ದಾರೆ

ವಿಶ್ವ ಜಾಂಬೂರಿಗೆ ತೆರಳುವ ಬಿ.ಎಂ.ತುಂಬೆ ಅವರಿಗೆ ಬಂಟ್ವಾಳ ಜಮೀಯತ್ತುಲ್ ಫಲಾಹ್ ವತಿಯಿಂದ ಬೀಳ್ಕೊಡುಗೆ

Posted by Vidyamaana on 2023-07-21 14:45:46 |

Share: | | | | |


ವಿಶ್ವ ಜಾಂಬೂರಿಗೆ ತೆರಳುವ ಬಿ.ಎಂ.ತುಂಬೆ ಅವರಿಗೆ ಬಂಟ್ವಾಳ ಜಮೀಯತ್ತುಲ್ ಫಲಾಹ್ ವತಿಯಿಂದ ಬೀಳ್ಕೊಡುಗೆ

ಬಂಟ್ವಾಳ : ದಕ್ಷಿಣ ಕೊರಿಯಾದ ಸೀಮನ್ ಗಾಮ್ ನಲ್ಲಿ 15 ದಿವಸದ ಕಾಲ ನಡೆಯುವ ಸ್ಕೌಟ್ ಮತ್ತು ಗೈಡ್ಸ್ 25 ನೇ ವಿಶ್ವ ಜಾಂಬೂರಿಯಲ್ಲಿ ಭಾಗವಹಿಸಲು ಭಾರತದ ಪ್ರತಿನಿಧಿಯಾಗಿ ತೆರಳುತ್ತಿರುವ ನಿವೃತ್ತ ಶಿಕ್ಷಕರೂ, ಬಂಟ್ವಾಳ ಜಮೀಯತ್ತುಲ್ ಫಲಾಹ್ ನ ಪೂರ್ವಾಧ್ಯಕ್ಷರೂ ಆಗಿರುವ ಬಿ. ಮೊಹಮ್ಮದ್ ತುಂಬೆ ಅವರನ್ನು ಸನ್ಮಾನಿಸಲಾಯಿತು.


    ಮೆಲ್ಕಾರ್ ಎಂ.ಎಚ್. ಕಂಪೌಂಡ್ ನಲ್ಲಿ ಶುಕ್ರವಾರ ನಡೆದ ಬಂಟ್ವಾಳ ತಾಲೂಕು ಜಮೀಯತುಲ್ ಫಲಾಹ್ ನ ಸಭೆ ಹಾಗೂ ಬೀಳ್ಕೊಡುವ ಸಮಾರಂಭದಲ್ಲಿ ಸಭಾಧ್ಯಕ್ಷತೆ ವಹಿಸಿದ್ದ ಘಟಕದ ಅಧ್ಯಕ್ಷ ರಶೀದ್ ವಿಟ್ಲ ಅವರು ಬಿ. ಮೊಹಮ್ಮದ್ ತುಂಬೆ ಅವರನ್ನು ಸನ್ಮಾನಿಸಿದರು.


   ಉಪನ್ಯಾಸಕ ಅಬ್ದುಲ್ ರಝಾಕ್ ಅನಂತಾಡಿ ಅವರು ಅಭಿನಂದನಾ ಮಾತುಗಳನ್ನಾಡಿದರು. ಜಮೀಯತ್ತುಲ್ ಫಲಾಹ್ ಜಿಲ್ಲಾ ಕೇಂದ್ರ ಸಮಿತಿಯ ಪೂರ್ವಾಧ್ಯಕ್ಷ ಮಹಮ್ಮದ್ ಹನೀಫ್ ಹಾಜಿ ಗೋಳ್ತಮಜಲು, ಘಟಕದ ಕೋಶಾಧಿಕಾರಿ ಎಂ.ಎಚ್. ಇಕ್ಬಾಲ್, ಘಟಕದ ಪೂರ್ವಾಧ್ಯಕ್ಷರುಗಳಾದ ರಫೀಕ್ ಹಾಜಿ ಆಲಡ್ಕ, ನೋಟರಿ ಅಬೂಬಕರ್ ವಿಟ್ಲ, ಸುಲೈಮಾನ್ ಸೂರಿಕುಮೇರು, ಪಿ.ಮಹಮ್ಮದ್ ಪಾಣೆಮಂಗಳೂರು, ಆಸಿಫ್ ಇಕ್ಬಾಲ್ ಫರಂಗಿಪೇಟೆ, ಉಪಾಧ್ಯಕ್ಷ ಶೇಖ್ ರಹ್ಮತುಲ್ಲಾ ಕಾವಳಕಟ್ಟೆ, ಅಬ್ಬಾಸ್ ಅಲಿ ಬೋಳಂತೂರು, ಮಹಮ್ಮದ್ ನಾರಂಕೋಡಿ, ಅಹ್ಮದ್ ಮುಸ್ತಫಾ ಗೋಳ್ತಮಜಲು ಈ ಸಂದರ್ಭ ಉಪಸ್ಥಿತರಿದ್ದರು. 


ಪ್ರಧಾನ ಕಾರ್ಯದರ್ಶಿ ಕೆ.ಕೆ. ಶಾಹುಲ್ ಹಮೀದ್ ಸ್ವಾಗತಿಸಿದರು. ಉಪಾಧ್ಯಕ್ಷ ಲತೀಫ್ ನೇರಳಕಟ್ಟೆ ವಂದಿಸಿದರು.

ಪುತ್ತೂರು ವಕೀಲರ ಸಂಘದ ಚುನಾವಣೆ: ಅಧ್ಯಕ್ಷ,ಜಿ.ಜಗನ್ನಾಥ ರೈ ಉಪಾಧ್ಯಕ್ಷ, ಮೋನಪ್ಪ ಎಂ.ಅಳಿಕೆ, ಕಾರ್ಯದರ್ಶಿ ಚಿನ್ಮಯ್ ರೈ,ಕೋಶಾಧಿಕಾರಿಮಹೇಶ್ ಕೆ. ಸವಣೂರು ಆಯ್ಕೆ

Posted by Vidyamaana on 2024-04-06 18:42:37 |

Share: | | | | |


ಪುತ್ತೂರು ವಕೀಲರ ಸಂಘದ ಚುನಾವಣೆ: ಅಧ್ಯಕ್ಷ,ಜಿ.ಜಗನ್ನಾಥ ರೈ  ಉಪಾಧ್ಯಕ್ಷ, ಮೋನಪ್ಪ ಎಂ.ಅಳಿಕೆ, ಕಾರ್ಯದರ್ಶಿ ಚಿನ್ಮಯ್ ರೈ,ಕೋಶಾಧಿಕಾರಿಮಹೇಶ್ ಕೆ. ಸವಣೂರು ಆಯ್ಕೆ

ಪುತ್ತೂರು :ಏ 6 : ಪ್ರತಿಷ್ಠಿತ ಪುತ್ತೂರು ವಕೀಲರ ಸಂಘದ ಅಧ್ಯಕ್ಷರಾಗಿ ಜಿ.ಜಗನ್ನಾಥ ರೈ  ಅವರು ಚುನಾಯಿತರಾಗಿದ್ದಾರೆ. ಇಂದು ನಡೆದ ಚುನಾವಣೆಯಲ್ಲಿ ಉಪಾಧ್ಯಕ್ಷರಾಗಿ ಮೋನಪ್ಪ ಎಂ.ಅಳಿಕೆ, ಕಾರ್ಯದರ್ಶಿಯಾಗಿ ಚಿನ್ಮಯ್ ರೈ(ಅವಿರೋಧ ), ಜೊತೆ ಕಾರ್ಯದರ್ಶಿಯಾಗಿ ಮಮತಾ ಸುವರ್ಣ ಹಾಗೂ ಕೋಶಾಧಿಕಾರಿಯಾಗಿ ಮಹೇಶ್ ಕೆ. ಸವಣೂರು  ಚುನಾಯಿತರಾಗಿದ್ದಾರೆ.

ಏ 6ರಂದು ಪುತ್ತೂರು ವಕೀಲರ ಸಂಘದ ಪದಾಧಿಕಾರಿಗಳನ್ನು ಆಯ್ಕೆ ಮಾಡಲು ಚುನಾವಣೆ ನಡೆದಿತ್ತು . ಬೆಳಿಗ್ಗೆ 10 ಗಂಟೆಯಿಂದ 4 ಗಂಟೆಯವರೆಗೆ ಚುನಾವಣೆ ನಡೆದು ಬಳಿಕ ಮತ ಎಣಿಕೆ ನಡೆದಿತ್ತು.

ಫೆ.27ಕ್ಕೆ ಕರ್ನಾಟಕದ 4 ಸ್ಥಾನ ಸೇರಿ 15 ರಾಜ್ಯಗಳ 56 ರಾಜ್ಯಸಭಾ ಸ್ಥಾನ ಗಳಿಗೆ ಚುನಾವಣೆ : ECI ಘೋಷಣೆ

Posted by Vidyamaana on 2024-01-29 15:46:42 |

Share: | | | | |


ಫೆ.27ಕ್ಕೆ ಕರ್ನಾಟಕದ 4 ಸ್ಥಾನ ಸೇರಿ 15 ರಾಜ್ಯಗಳ 56 ರಾಜ್ಯಸಭಾ ಸ್ಥಾನ ಗಳಿಗೆ ಚುನಾವಣೆ : ECI ಘೋಷಣೆ

ನವದೆಹಲಿ : ಇದೇ ಫೆಬ್ರವರಿ 27ರಂದು 15 ರಾಜ್ಯಗಳ 56 ಸ್ಥಾನಗಳಿಗೆ ರಾಜ್ಯಸಭಾ ಚುನಾವಣೆ ನಡೆಸಲಾಗುವುದು ಎಂದು ಭಾರತದ ಚುನಾವಣಾ ಆಯೋಗ ಘೋಷಿಸಿದೆ. ನಾಮಪತ್ರ ಸಲ್ಲಿಸಲು ಫೆ.15 ಕೊನೆಯ ದಿನವಾಗಿದ್ದು, ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ.ಉತ್ತರಪ್ರದೇಶದಲ್ಲಿ 10, ಬಿಹಾರ ಮತ್ತು ಮಹಾರಾಷ್ಟ್ರದಲ್ಲಿ ತಲಾ 6, ಮಧ್ಯಪ್ರದೇಶ ಮತ್ತು ಪಶ್ಚಿಮ ಬಂಗಾಳದಲ್ಲಿ ತಲಾ 5, ಗುಜರಾತ್ ಮತ್ತು ಕರ್ನಾಟಕದಲ್ಲಿ ತಲಾ 4, ಒಡಿಶಾ, ಆಂಧ್ರಪ್ರದೇಶ ಮತ್ತು ರಾಜಸ್ಥಾನದಲ್ಲಿ ತಲಾ 3 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.


13 ರಾಜ್ಯಗಳ 50 ರಾಜ್ಯಸಭಾ ಸಂಸದರ ಅಧಿಕಾರಾವಧಿ ಏಪ್ರಿಲ್ 2 ರಂದು ಕೊನೆಗೊಳ್ಳಲಿದ್ದು, ಎರಡು ರಾಜ್ಯಗಳ ಉಳಿದ ಆರು ಸದಸ್ಯರ ಅಧಿಕಾರಾವಧಿ ಏಪ್ರಿಲ್ 3 ರಂದು ಪೂರ್ಣಗೊಳ್ಳಲಿದೆ.

ಮಂಗಳೂರಿನಲ್ಲಿ ಪತ್ರಕರ್ತನ ಮೇಲೆ ನೈತಿಕ ಪೊಲೀಸ್ ಗಿರಿ - ಇಬ್ಬರ ಬಂಧನ

Posted by Vidyamaana on 2023-07-31 13:11:07 |

Share: | | | | |


ಮಂಗಳೂರಿನಲ್ಲಿ ಪತ್ರಕರ್ತನ ಮೇಲೆ ನೈತಿಕ ಪೊಲೀಸ್ ಗಿರಿ - ಇಬ್ಬರ ಬಂಧನ

ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಅನೈತಿಕ ಪೊಲೀಸ್‌ಗಿರಿ ಅಂಕೆ ಮೀರಿ ಬೆಳೆಯುತ್ತಿದ್ದು, ವಿಟ್ಲದಲ್ಲಿ ಪೊಲೀಸ್ ಸಿಬ್ಬಂದಿಯನ್ನು ಅಡ್ಡಗಟ್ಟಿ ನಿಂದಿಸಿದ ಪ್ರಕರಣದ ಸಂದರ್ಭದಲ್ಲೇ ನಗರದ ಯುವ ವರದಿಗಾರನನ್ನು ತಡೆದು ಧರ್ಮದ ಹೆಸರೆತ್ತಿ ಅವಾಚ್ಯವಾಗಿ ನಿಂದಿಸಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.


ನಗರದ ವೆಬ್‌ಸೈಟ್‌ ಒಂದರ ಯುವ ವರದಿಗಾರ ಅಭಿಜಿತ್ ಅವರು, ಜು. 26ರಂದು ಮಧ್ಯಾಹ್ನ 3 ಗಂಟೆಯ ಸುಮಾರಿಗೆ ಕಾವೂರು ಜಂಕ್ಷನ್ ಬಳಿಯ ಹೊಟೇಲೊಂದರಲ್ಲಿ ತನ್ನ ಕಾಲೇಜಿನ ಸಹಪಾಠಿಯಾಗಿದ್ದ ಯುವತಿ ಜತೆ ಊಟ ಮುಗಿಸಿ ಹೊರ ಬರುತ್ತಿದ್ದಾಗ ಅಪರಿಚಿತ ವ್ಯಕ್ತಿಯೊಬ್ಬ ಬಂದು ನೀನು ಬ್ಯಾರಿಯೊಂದಿಗೆ ಏನು ಮಾತನಾಡುತ್ತಿ, ನೀನು ಬ್ಯಾರಿಯ ಇಲ್ಲಿಂದ ಹೊರಡು ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಈ ಸಂದರ್ಭ ಅಭಿಜಿತ್ ಅವರು ತಾನು ದೈಜಿವರ್ಲ್ಡ್ ವರದಿಗಾರ ಎಂದು ತನ್ನ ಐಡಿ ಕಾರ್ಡ್ ತೋರಿಸಿದರೂ ಮತ್ತೆ ಅವಾಚ್ಯ ಶಬ್ದಗಳಿಂದ ಆ ಅಪರಿಚಿತ ವ್ಯಕ್ತಿಈ ಬಗ್ಗೆ ಅಭಿಜಿತ್ ಅದೇ ದಿನ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಆ ಸಂದರ್ಭದಲ್ಲಿ ಆ ವ್ಯಕ್ತಿಯ ಕಾರಿನ ನಂಬರ್ ನೋಟ್ ಮಾಡಿದ್ದರು. ಪೊಲೀಸ್ ಆಯುಕ್ತ ಕುಲದೀಪ್ ಆರ್. ಜೈನ್ ಅವರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದರಿಂದ ಅವರ ನಿರ್ದೇಶನದ ಮೇರೆಗೆ ಆರೋಪಿ ಚೇತನ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಗೊಳಪಡಿಸಿದ್ದಾರೆ. ಜು. 28ರಂದು ಎಫ್‌ಐಆರ್ ದಾಖಲಾಗಿದ್ದು, ಬಳಿಕ ಪ್ರಕರಣದ ಆರೋಪಿ, ಕೋಟೆಕಾರ್ ನಿವಾಸಿ ಚೇತನ್ ಎಂಬಾತನನ್ನು ಬಂಧಿಸಿ, ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಗಿದೆ

ಯುವತಿ ನಾಪತ್ತೆ

Posted by Vidyamaana on 2024-02-29 04:29:14 |

Share: | | | | |


ಯುವತಿ ನಾಪತ್ತೆ

ಕಾರ್ಕಳ; ಮನೆಯಿಂದ ಹೊರಗೆ ಹೋದ ಯುವತಿ ಮನೆಗೆ ಬಾರದೇ ನಾಪತ್ತೆಯಾಗಿರುವ ಘಟನೆ ಕಾರ್ಕಳ ತಾಲೂಕು ಎಳ್ಳಾರೆ ಗ್ರಾಮದಲ್ಲಿ ನಡೆದಿದೆ. ಅಸಲ್ ಜಡ್ಡು ನಿವಾಸಿ ಪ್ರಮೀಳಾ (24) ಫೆಬ್ರವರಿ 24 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.

5 ಅಡಿ ಎತ್ತರ, ಸಾಧಾರಣ ಶರೀರ, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿರುವ ಪ್ರಮೀಳಾ, ಕನ್ನಡ, ತುಳು, ಇಂಗ್ಲೀಷ್ ಹಾಗೂ ಕುಡುಬಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಅಜೆಕಾರು ಪೊಲೀಸ್ ಠಾಣೆ A.: 08253-271100, ಸಂಖ್ಯೆ 9480805470, 9480805471, ಕಾರ್ಕಳ ಪೊಲೀಸ್ ವೃತ್ತ ನಿರೀಕ್ಷಕರು A.: 08258-231083, .: 9480805435, ಜಿಲ್ಲಾ ಪೊಲೀಸ್‌ ಕಚೇರಿ ದೂ.ಸಂಖ್ಯೆ: 0820-2534777 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅಜೆಕಾರು ಪೊಲೀಸ್‌ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Recent News


Leave a Comment: