ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೊಂದು ರೋಚಕ ಟ್ವಿಸ್ಟ್!

ಸುದ್ದಿಗಳು News

Posted by vidyamaana on 2024-03-23 15:52:34 | Last Updated by Vidyamaana on 2024-03-23 15:52:34

Share: | | | | |


ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೊಂದು ರೋಚಕ ಟ್ವಿಸ್ಟ್!

ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಕಾರಿನೊಳಗಿದ್ದ ಮೂವರು ಸಾವನ್ನಪ್ಪಿದ ಸಂಬಂಧಿಸಿದಂತೆ ಮೂವರು ಸೇರಿ 50 ಲಕ್ಷ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಕುಟುಂಬ ಸದಸ್ಯರು ಕೋರಾ ಪೊಲೀಸರ ವಿಚಾರಣೆ ವೇಳೆ ಮಾಹಿತಿ ನೀಡಿದ್ದಾರೆ.

*💥Whats App Group ಗೆ ಸೇರಲು ಕ್ಲಿಕ್ ಮಾಡಿ

*ಹಣ ತೆಗೆದುಕೊಂಡು ಹೋದ ವಿಚಾರ*:  ಇನ್ನೂ ಕಾರಿನಲ್ಲಿ ಹೋಗುವಾಗ ಮದಡ್ಕದ ಇಸಾಕ್ ಉಜಿರೆಯಲ್ಲಿದ್ದ ಸ್ವಂತ ಮನೆಯನ್ನು ಮಾರಾಟ ಮಾಡಿದ ಹಣ ಮತ್ತು ಮಗಳ ಚಿನ್ನವನ್ನು ಅಡವಿಟ್ಟು ಸುಮಾರು 35 ಲಕ್ಷ ಹಣವನ್ನು ತೆಗೆದುಕೊಂಡು ಹೋಗಿದ್ದರು ಎಂದು ಇಸಾಕ್ ಪತ್ನಿ ಕೋರಾ ಪೊಲೀಸ್ ಠಾಣೆಯಲ್ಲಿ ಮಾ.23 ರಂದು ಪೊಲೀಸ್ ವಿಚಾರಣೆ ವೇಳೆ ಹೇಳಿಕೆಯನ್ನು ನೀಡಿದ್ದಾರೆ. ಇನ್ನೂ ಶಿರ್ಲಾಲು ಸಿದ್ದಿಕ್ ಮತ್ತು ಟಿ.ಬಿ.ಕ್ರಾಸ್ ಸಾಹುಲ್ ಹಮೀದ್ ಕೂಡ ಸ್ನೇಹಿತರ ಮೂಲಕ ಪಡೆದ ಸುಮಾರು 15 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಮನೆಯವರು ಹೇಳಿಕೆ ನೀಡಿದ್ದಾರೆ. ಒಟ್ಟು ಮೂವರ ಬಳಿ 50 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ಇತ್ತು ಎನ್ನಲಾಗಿದೆ.

ತುಮಕೂರಿಗೆ ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56) , ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ಹೋಗಿದ್ದರು ಎಂದು ಹೇಳಲಾಗಿದೆ.

ಮೂವರು ಕೂಡ ನಕಲಿ ಚಿನ‌್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಅನ್ನೋದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಕಡಿಮೆ ಚಿನ್ನವನ್ನು ಬೆಲೆಗೆ ನೀಡುತ್ತೇವೆ ಎಂದು ಸುಳ್ಳು ಹೇಳಿ ಮೂವರನ್ನು ಕರೆಸಿ ಹಣ ದೋಚುವ  ಪ್ಲ್ಯಾನ್ ಮಾಡಿ ಕರೆಸಿಕೊಂಡು ಮಾ.21 ರಂದು ರಾತ್ರಿ ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಿ ನಂತರ ಹಣವನ್ನು ದೋಚಿದ್ದಾರೆ ಎನ್ನಲಾಗಿದೆ. ಇನ್ನೂ ಪ್ರಕರಣ ಸಂಬಂಧ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಸೇರಿ ಆರು ಜನರನ್ನು ಮೊಬೈಲ್ ಕಾಲ್ ಡಿಟೈಲ್ಸ್ ಮೂಲಕ  ಕಾರ್ಯಾಚರಣೆ ನಡೆಸಿ ಮಾ.22 ರಂದು ರಾತ್ರಿ ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಕೋರಾ ಪೊಲೀಸ್ ಠಾಣೆಯಲ್ಲಿ ಮಾ.22 ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಬೆಂಕಿಗಾಹುತಿಯಾದ ಕಾರನ್ನು ಕೋರಾ ಪೊಲೀಸ್ ಠಾಣೆಗೆ ತೆಗೆದುಕೊಂಡು ಬಂದಿದ್ದು. ಮೂವರ ಶವ ಸರಕಾರಿ ಆಸ್ಪತ್ರೆಯಲ್ಲಿ ಡಿಎನ್ಎ ಪರೀಕ್ಷೆ ಮಾಡಿದ ಬಳಿಕ ಮುಂದಿನ ಗುರುವಾರ ಅಥವಾ ಶುಕ್ರವಾರ ಮೃತದೇಹವನ್ನು ಗುರುತು ಪತ್ತೆಯಾದ ಬಳಿಕ ಅವರ ಕಟುಂಬ ಸದಸ್ಯರಿಗೆ ನೀಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.


 Share: | | | | |


ಮಂಗನ ಕಾಯಿಲೆಗೆ ಶಿವಮೊಗ್ಗದ ಯುವತಿ ಬಲಿ

Posted by Vidyamaana on 2024-01-09 09:59:52 |

Share: | | | | |


ಮಂಗನ ಕಾಯಿಲೆಗೆ ಶಿವಮೊಗ್ಗದ ಯುವತಿ ಬಲಿ

ಶಿವಮೊಗ್ಗ, ಜ 09: ಮಾರಣಾಂತಿಕ ರೋಗ ಮಂಗನ ಕಾಯಿಲೆಗೆ ಹೊಸನಗರ ತಾಲೂಕು ಅರಮನೆ ಕೊಪ್ಪ ಗ್ರಾಮದ 18 ವರ್ಷ ಯುವತಿ ಸಾವನ್ನಪ್ಪಿದ್ದಾರೆ.


ಕಳೆದ ವಾರ ಯುವರಿಗೆ ಜ್ವರ ಕಾಣಿಸಿಕೊಂಡಿತ್ತು. ನಂತರ ತೀವ್ರ ಜ್ವರಕ್ಕೆ ತುತ್ತಾಗಿದ್ದ ಯುವತಿಯನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ, ಐಸಿಯುನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಜ್ವರ ಕಡಿಮೆಯಾಗದ ಕಾರಣಕ್ಕೆ ಯುವತಿಯನ್ನು ಶುಕ್ರವಾರ ಮಣಿಪಾಲಕ್ಕೆ ಶಿಫ್ಟ್ ಮಾಡಲಾಗಿತ್ತು. ಯುವತಿಯು ಅರಮನೆಕೊಪ್ಪದ ನಿವಾಸಿಯಾಗಿದ್ದು, ಈಕೆಗೆ ಜ್ವರ ಬಂದು ಒಂದೆರಡು ದಿನವಾದರೂ ಕಡಿಮೆಯಾಗದ ಕಾರಣಕ್ಕೆ ಹೊಸನಗರ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆ ಬಂದಾಗ ತಪಾಸಣೆ ನಡೆಸಿ ವೈದ್ಯರು, ಅನುಮಾನಗೊಂಡು ರಕ್ತ ಪರೀಕ್ಷೆ ನಡೆಸಿದಾಗ ಯುವತಿಯ ರಕ್ತದಲ್ಲಿ ಪ್ಲೇಟ್​ಲೆಟ್ ಕಡಿಮೆಯಾಗಿತ್ತು. ಆರ್​ಟಿಪಿಸಿಆರ್ ನಲ್ಲಿ ಮೊದಲು ಪರೀಕ್ಷಿಸಿದಾಗ ನೆಗೆಟಿವ್ ಬಂದಿತ್ತು. ಮತ್ತೆರಡು ಬಾರಿ ಪರೀಕ್ಷಿಸಿದಾಗ ಕೆಎಫ್​ಡಿ(ಕ್ಯಾಸನೂರು ಫಾರೆಸ್ಟ್ ಡಿಸೀಸ್) ಪಾಸಿಟಿವ್ ಬಂದಿತ್ತು ಎಂದರು. ದುರಾದೃಷ್ಟವಶಾತ್​ ಯುವತಿ ಸೋಮವಾರ ಸಂಜೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ.


ಯುವತಿಯಲ್ಲಿ ರಕ್ತದಲ್ಲಿ‌ ಪ್ಲೇಟ್ಲೆಟ್ ಕಡಿಮೆ ಆದಾಗ ಇವರಲ್ಲಿ ಮೆದುಳು ಜ್ವರ ಕಾಣಿಸಿಕೊಂಡಿತ್ತು. ಇದಕ್ಕೂ ಸಹ ಚಿಕಿತ್ಸೆ ಕೊಡಲಾಗಿತ್ತು. ಶಿವಮೊಗ್ಗದ ಆಸ್ಪತ್ರೆಯಲ್ಲಿ ಇದ್ದಾಗ ಯುವತಿಗೆ ರಕ್ತವನ್ನು ನೀಡಲಾಗಿತ್ತು. ಎಬಿಕೆ ಆರೋಗ್ಯ ಕಾರ್ಡ್​ ಮೂಲಕ ಯುವತಿಗೆ ಚಿಕಿತ್ಸೆಗೆ ಕೊಡಿಸಲಾಗಿತ್ತು. ಇನ್ನು ಅರಮನೆಕೊಪ್ಪ ಭಾಗದಲ್ಲಿ ಕೆಎಫ್​ಡಿಯ ಬಗ್ಗೆ ಜಾಗೃತಿ ಮೂಡಿಸಲಾಗಿದೆ. ಈ ಭಾಗದಲ್ಲಿ ಸುಮಾರು 10 ವರ್ಷಗಳ ನಂತರ ಕೆಎಫ್​ಡಿ ಕಾಣಿಸಿಕೊಂಡಿದೆ. ಈ ಮೂಲಕ ಕೆಎಫ್​ಡಿಗೆ ಮೊದಲ ಸಾವು ಇದಾಗಿದೆ ಎಂದು ತಿಳಿಸಿದರು.

ಮಂಗಳೂರಿನಲ್ಲಿ ಪ್ರಜಾಧ್ವನಿ ಕಾರ್ಯಕ್ರಮ: ಅಶೋಕ್ ರೈ ಕಾಂಗ್ರೆಸ್ ಸೇರ್ಪಡೆಗೆ ಸಿದ್ಧತೆ ; ಅಶೋಕ್ ರೈ ಅಭಿಮಾನಿಗಳು ಮಂಗಳೂರಿಗೆ.

Posted by Vidyamaana on 2023-01-22 11:23:28 |

Share: | | | | |


ಮಂಗಳೂರಿನಲ್ಲಿ ಪ್ರಜಾಧ್ವನಿ ಕಾರ್ಯಕ್ರಮ: ಅಶೋಕ್ ರೈ ಕಾಂಗ್ರೆಸ್ ಸೇರ್ಪಡೆಗೆ ಸಿದ್ಧತೆ ; ಅಶೋಕ್ ರೈ ಅಭಿಮಾನಿಗಳು  ಮಂಗಳೂರಿಗೆ.

ಪುತ್ತೂರು: ಮಂಗಳೂರಿನ ಕರಾವಳಿ ಮೈದಾನದಲ್ಲಿ ಜ.22ರಂದು ಸಂಜೆ ನಡೆಯುವ ಕಾಂಗ್ರೆಸ್ ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಅಶೋಕ್ ಕುಮಾರ್ ರೈ ಕಾಂಗ್ರೆಸ್ ಪಕ್ಷ ಸೇರ್ಪಡೆಗೆ ಸಿದ್ಧತೆ ನಡೆದಿದೆ.ದರ್ಬೆಯಲ್ಲಿರುವ ರೈ ಎಸ್ಟೇಟ್ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಕಛೇರಿಯಿಂದ ಬಸ್ ಸೇರಿದಂತೆ ಹಲವು ವಾಹನಗಳಲ್ಲಿ ನೂರಾರು ಮಂದಿ ಮೆರವಣಿಗೆಯಲ್ಲಿ ಮಂಗಳೂರಿಗೆ ತೆರಳುತ್ತಿದ್ದಾರೆ.

ಬನ್ನೂರು ಶಾಲಾ ವಠಾರದಲ್ಲಿ ವನಮಹೋತ್ಸವ

Posted by Vidyamaana on 2023-07-05 11:07:29 |

Share: | | | | |


ಬನ್ನೂರು ಶಾಲಾ ವಠಾರದಲ್ಲಿ ವನಮಹೋತ್ಸವ

ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್,

ರೋಟರಿ ಕ್ಲಬ್ ಪುತ್ತೂರು ಯುವ, ಇನ್ನರ್ ವೀಲ್ ಕ್ಲಬ್ ಪುತ್ತೂರು, ಬನ್ನೂರು ಸರಕಾರಿ ಪ್ರಾಥಮಿಕ ಶಾಲೆ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ, ದಕ್ಷಿಣ ಕನ್ನಡ ಜಿಲ್ಲಾ ತೆಂಗು ರೈತ ಉತ್ಪಾದಕರ ಕಂಪೆನಿ, ಬನ್ನೂರು ಸ್ಪೂರ್ತಿ ಯುವ ಸಂಸ್ಥೆ, ಕರ್ನಾಟಕ ರಾಜ್ಯ ಅರಣ್ಯ ಇಲಾಖೆ

ಇದರ ಸಂಯುಕ್ತ ಆಶ್ರಯದಲ್ಲಿ ಬನ್ನೂರು ಸರಕಾರಿ ಪ್ರಾಥಮಿಕ ಶಾಲೆಯ ವಠಾರದಲ್ಲಿ ಗಿಡ ನೆಡುವ ಕಾರ್ಯಕ್ರಮ ಜರಗಿತು.

ಪುತ್ತೂರು ನಗರಸಭೆಯ ಸದಸ್ಯರಾಗಿದ್ದ ಗೌರಿ ಬನ್ನೂರು ಅವರು ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. 

ಪುತ್ತೂರು ವಲಯ ಅರಣ್ಯಾಧಿಕಾರಿ ಕಿರಣ್ ಬಿ.ವಿ, ರೋಟರಿ ಕ್ಲಬ್ ಪುತ್ತೂರು ಯುವದ ಅಧ್ಯಕ್ಷ ಪಶುಪತಿ ಶರ್ಮ, ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರ ಕಂಪೆನಿ ಅಧ್ಯಕ್ಷ ಕುಸುಮಾಧರ್, ಸ್ಫೂರ್ತಿ ಯುವ ಸಂಸ್ಥೆಯ ದಿನೇಶ್ ಸಾಲಿಯಾನ್, ಎಸ್ ಡಿ ಎಂ ಸಿ ಅಧ್ಯಕ್ಷ ಗುರು ಪ್ರಸಾದ್, ಮುಖ್ಯ ಶಿಕ್ಷಕ ರಾಮಚಂದ್ರ, ಶಿಕ್ಷಕ ಕೋಟಿಯಪ್ಪ ಪೂಜಾರಿ, ಅಶ್ರಫ್, ಉಪವಲಯಾರಣ್ಯ ಅಧಿಕಾರಿ ಶಿವಾನಂದ ಆಚಾರ್ಯ, ರೋಟರಿ ಸೆಂಟ್ರಲ್ ನಿರ್ದೇಶಕ ರಾಕೇಶ್ ಶೆಟ್ಟಿ  ಉಪಸ್ಥಿತರಿದ್ದರು. 

ರೋಟರಿ ಸೆಂಟ್ರಲ್ ಅಧ್ಯಕ್ಷ ಡಾ. ರಾಜೇಶ್ ಬೆಜ್ಜಂಗಳ ಸ್ವಾಗತಿಸಿ, ಪೂರ್ವಾಧ್ಯಕ್ಷ ರಫೀಕ್ ದರ್ಬೆ ವಂದಿಸಿದರು.

ಶಾಸಕರ ಇಂದಿನ ಕಾರ್ಯಕ್ರಮ ಆ 7

Posted by Vidyamaana on 2023-08-06 23:16:09 |

Share: | | | | |


ಶಾಸಕರ ಇಂದಿನ ಕಾರ್ಯಕ್ರಮ ಆ 7

ಪುತ್ತೂರು ಶಾಸಕ ಅಶೋಕ್ ಕುಮಾರ್ ಅವರು ಆಗಸ್ಟ್ 7 ರಂದು

ಮಧ್ಯಾಹ್ನ 2.30ಪೆರುವಾಯಿಯಲ್ಲಿ ಕಾರ್ಯಕರ್ತರ ಸಭೆ


ಸಂಜೆ 4 ಗಂಟೆಗೆ ಕೊಡಿಪ್ಪಾಡಿಯಲ್ಲಿ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಲಿದ್ದಾರೆ

ಮಾ 10 ಡಿವೈಎಸ್ಪಿ ನೇತೃತ್ವದಲ್ಲಿ ಮಾದಕ ದ್ರವ್ಯಗಳ ದುಷ್ಪರಿಣಾಮದ ಜಾಗೃತಿ ಜಾಥಾ

Posted by Vidyamaana on 2024-03-07 21:26:06 |

Share: | | | | |


ಮಾ 10  ಡಿವೈಎಸ್ಪಿ ನೇತೃತ್ವದಲ್ಲಿ ಮಾದಕ ದ್ರವ್ಯಗಳ ದುಷ್ಪರಿಣಾಮದ ಜಾಗೃತಿ ಜಾಥಾ

ಪುತ್ತೂರು: ಕರ್ನಾಟಕ ರಾಜ್ಯ ಪೊಲೀಸ್ ಸುವರ್ಣ ಮಹೋತ್ಸವದ ಅಂಗವಾಗಿ ಮಾದಕ ದ್ರವ್ಯಗಳ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕರ್ನಾಟಕ ಪೊಲೀಸ್ ರನ್ 2024 ಮಾರ್ಚ್ 10ರಂದು ಬೆಳಿಗ್ಗೆ 8.30ಕ್ಕೆ ನಡೆಯಲಿದೆ.

ಸೇ ಯಸ್ ಟು ಲೈಫ್, ನೋ ಟು ಡ್ರಗ್ಸ್ ಎಂಬ ಹೆಸರಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಜಾಗೃತಿ ಜಾಥಾ ಹಮ್ಮಿಕೊಂಡಿದೆ.

ದರ್ಬೆ ಫಾ. ಪತ್ರಾವೋ ವೃತ್ತದಿಂದ ಆರಂಭಗೊಳ್ಳುವ ಕರ್ನಾಟಕ ಪೊಲೀಸ್ ರನ್ 2024 ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಸಮಾಪನಗೊಳ್ಳಲಿದೆ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್ ಅವರು ನೇತೃತ್ವ ವಹಿಸಲಿದ್ದು, ಅಡಿಷನಲ್ ಎಸ್ ಪಿ, ಹಾಗೂ ,ಡಿವೈಎಸ್ಪಿ ಅರುಣ್ ನಾಗೇಗೌಡ  ಉಪಸ್ಥಿತರಿರುವರು. ಪುತ್ತೂರು ನಗರ ಪೊಲೀಸ್ ಠಾಣೆ, ಟ್ರಾಫಿಕ್ ಠಾಣೆ, ಮಹಿಳಾ ಪೊಲೀಸ್ ಠಾಣೆಯ ಪೊಲೀಸರ ಜೊತೆಗೆ ವಿವೇಕಾನಂದ ಕಾಲೇಜು, ಸಂತ ಫಿಲೋಮಿನಾ, ಉಪ್ಪಿನಂಗಡಿ ಕಾಲೇಜು, ಸಂಪ್ಯ ಅಕ್ಷಯ ಕಾಲೇಜಿನ ವಿದ್ಯಾರ್ಥಿಗಳು ಪೊಲೀಸ್ ರನ್ನಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಕುಡಿದ ಅಮಲಿನಲ್ಲಿ ಶಾಲೆಗೆ ಬಂದ ಶಿಕ್ಷಕನನ್ನು ಒದ್ದು, ಚಪ್ಪಲಿ ಎಸೆದು ಓಡಿಸಿದ ವಿದ್ಯಾರ್ಥಿಗಳು

Posted by Vidyamaana on 2024-03-27 07:56:00 |

Share: | | | | |


ಕುಡಿದ ಅಮಲಿನಲ್ಲಿ ಶಾಲೆಗೆ ಬಂದ ಶಿಕ್ಷಕನನ್ನು ಒದ್ದು, ಚಪ್ಪಲಿ ಎಸೆದು ಓಡಿಸಿದ ವಿದ್ಯಾರ್ಥಿಗಳು

ಛತ್ತೀಸ್‌ಗಢ: ಕುಡಿದ ಅಮಲಿನಲ್ಲಿ ಶಾಲೆಗೆ ಬಂದ ಶಿಕ್ಷಕನನ್ನು ವಿದ್ಯಾರ್ಥಿಗಳು ಒದೆಯುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​ ಆಗುತ್ತಿದೆ. ಛತ್ತೀಸ್​ಗಢದ ಬಸ್ತಾರ್ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಈ ಘಟನೆ ನಡೆದಿದ್ದು, ಪಾಠ ಮಾಡಬೇಕಿದ್ದ ಶಿಕ್ಷಕನೇ ಕುಡಿತದ ಅಮಲಿನಲ್ಲಿ ಬಂದಿದ್ದರಿಂದ ಮಕ್ಕಳಿಗೆ ಸಹಿಸಲಾಗಲಿಲ್ಲ. ಆತನ ಮೇಲೆ ಚಪ್ಪಲಿ ಎಸೆದು ಓಡಿಸಿದ್ದಾರೆ.


ಸ್ನೇಹಾ ಮೊರ್ದಾನಿ ಎಂಬವರು ಎಕ್ಸ್‌ನಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಸರ್ಕಾರಿ ಶಾಲೆಯ ಶಿಕ್ಷಕ ಕುಡಿದು ಬಂದಿದ್ದಲ್ಲದೆ, ಮಕ್ಕಳ ಮೇಲೆ ದೌರ್ಜನ್ಯ ಎಸಗಿದ್ದಾರೆ. ಆಗ ವಿದ್ಯಾರ್ಥಿಗಳು ಸರಿಯಾಗಿ ಬುದ್ಧಿ ಹೇಳಿದ್ದಾರೆ. ವಿದ್ಯಾರ್ಥಿಗಳ ಕ್ರಿಯೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ಮೆಚ್ಚುಗೆ ವ್ಯಕ್ತವಾಗುತ್ತಿದೆ.


ವಿಡಿಯೋದಲ್ಲಿ, ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಗುಂಪು ಶಿಕ್ಷಕನ ಮೇಲೆ ಕಲ್ಲು, ಚಪ್ಪಲಿ ಎಸೆದಿರುವುದು ಕಂಡುಬರುತ್ತದೆ. ಶಿಕ್ಷಕ ಕುಡಿದ ಅಮಲಿನಲ್ಲಿ ಶಾಲೆಯ ಆವರಣಕ್ಕೆ ಪ್ರವೇಶಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಮಕ್ಕಳ ಆಕ್ರೋಶಕ್ಕೆ ಹೆದರಿದ ಕುಡುಕ ಶಿಕ್ಷಕ ಕೊನೆಗೆ ಬೈಕ್ ನಲ್ಲಿ ಪರಾರಿಯಾಗಲು ಯತ್ನಿಸಿದ್ದಾನೆ. ಎಕ್ಸ್‌ನಲ್ಲಿ ಇದೇ ವೀಡಿಯೊವನ್ನು ಹಂಚಿಕೊಂಡ ಪತ್ರಕರ್ತರೊಬ್ಬರು ಹೀಗೆ ಬರೆದಿದ್ದಾರೆ, ಬಸ್ತಾರ್‌ನಲ್ಲಿ ಶಿಕ್ಷಕರೊಬ್ಬರು ಕುಡಿದು ಶಾಲೆಗೆ ಬಂದಾಗ ಹತಾಶೆಗೊಂಡ ಮಕ್ಕಳು ಚಪ್ಪಲಿ ಎಸೆದು ಓಡಿಸಿದ್ದಾರೆ. ಘಟನೆ ಸಾಮಾಜಿಕ ಜಾಲತಾಣದಲ್ಲಿ ಸಂಚಲನ ಮೂಡಿಸಿದೆ.



Leave a Comment: