ಸಿಎಂ ಸಿದ್ದರಾಮಯ್ಯರನ್ನು‌ ಭೇಟಿಯಾದ ಶಾಸಕ ಆಶೋಕ್ ರೈ

ಸುದ್ದಿಗಳು News

Posted by vidyamaana on 2024-07-03 19:44:44 |

Share: | | | | |


ಸಿಎಂ ಸಿದ್ದರಾಮಯ್ಯರನ್ನು‌ ಭೇಟಿಯಾದ ಶಾಸಕ ಆಶೋಕ್ ರೈ

ಪುತ್ತೂರು: ಪುತ್ತೂರು ಶಾಸಕರಾದ ಅಶೋಕ್ ರೈ ಯವರು ಬುಧವಾರದಂದು ಬೆಂಗಳೂರಿನಲ್ಲಿ ಸಿ ಎಂ‌ನಿವಾಸದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಪುತ್ತೂರಿಗೆ‌ಮೆಡಿಕಲ್ ಕಾಲೇಜು ಮತ್ತು ಕ್ಷೇತ್ರಕ್ಕೆ ಹೆಚ್ಚು ಅನುದಾನ ನೀಡುವಂತೆ ಮನವಿ ಮಾಡಿದರು.

   ಸಿದ್ದರಾಮಯ್ಯ ಅವರೊಂದಿಗೆ ಮಾತುಕತೆ ನಡೆಸಿದ ಶಾಸಕರು ಪುತ್ತೂರಿಗೆ ಮೆಡಿಕಲ್ ಕಾಲೇಜು ಬೇಡಿಕೆಯನ್ನು ನೆನಪಿಸಿದರು. ಬಜೆಟ್ ನಲ್ಲಿ ಈ ಬಾರಿ ಅನುಮೋದನೆಯಾಗಬೇಕು ಮತ್ತು ತನ್ನ ಕ್ಷೇತ್ರದ ಜನರ ಬಹುಕಾಲದ ಬೇಡಿಕೆಯಾದ ಮೆಡಿಕಲ್ ಕಾಲೇಜನ್ನು ಮಂಜೂರು ಮಾಡುವಂತೆ ಮನವಿ ಮಾಡಿದರು. ಕಳೆದ ಬಜೆಟ್ ನಲ್ಲಿ ಅನುಮೋದನೆಯಾಗಬಹುದು ಎಂಬ ನಿರೀಕ್ಷೆ ಇತ್ತು ಆದರೆ ಗ್ಯಾರಂಟಿ ಯೋಜನೆಗೆ ಬಜೆಟ್ ನಲ್ಲಿ ಹೆಚ್ಚು ಅನುದಾನ ಇರಿಸಿದ ಕಾರಣ ನಾನು ಹೆಚ್ಚು ಒತ್ತಡ ಹಾಕಿರಲಿಲ್ಲ. ಮೆಡಿಕಲ್ ಕಾಲೇಜು ಆಗಬೇಕು‌ಎಂಬುದು‌ ನನ್ನ ಮತ್ತು ನನ್ನ ಕ್ಷೇತ್ರದ ಜನರ ಕನಸಾಗಿದೆ ಅದನ್ನು ನನಸು‌ಮಾಡಿಕೊಡಬೇಕು ಎಂದು ಸಿ ಎಂ ಅವರಲ್ಲಿ ಶಾಸಕರು ವಿನಂತಿಸಿದರು.

ಕಾಲೇಜು‌ನಿರ್ಮಾಣಕ್ಕೆ ಈಗಾಗಲೇ ಜಾಗ ಗುರುತಿಸಲಾಗಿದೆ ಎಂದೂ ಶಾಸಕರು ಸಿಎಂ ಅವರಲ್ಲಿ ತಿಳಿಸಿದರು.

ಹೆಚ್ಚು‌ಅನುದಾನ ಕೊಡಿ

ನನ್ನ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ದಿ ಕೆಲಸಗಳು ಆಗಬೇಕಿದೆ. ರಸ್ತೆ, ಸರಕಾರಿ ಕಟ್ಟಡಗಳು, ಶಾಲಾ ,ಕಾಲೇಜು ಕಟ್ಟಡಗಳು, ತಡೆಗೋಡೆ ,ಬೃಹತ್ ಅಣೆಕಟ್ಟುಗಳು ಸೇರಿದಂತೆ ಕ್ಷೇತ್ರದ ಜನರಿಂದ ದಿನದಿಂದ ದಿನಕ್ಕೆ ಕಾಮಗಾರಿಯ ಬೇಡಿಕೆಗಳು ಬರುತ್ತಿದ್ದು ಈಗ ಬರುತ್ತಿರುವ ಅನುದಾನವನ್ನು ಹೆಚ್ಚು ಪ್ರಮಾಣದಲ್ಲಿ ಹಂಚಿಕೆ ಮಾಡಲು ಸಾಧ್ಯವಾಗುತ್ತಿಲ್ಲ. ಅನೇಕ ವರ್ಷಗಳಿಂದ ಇರುವ ಕೆಲವೊಂದು ಕಾಮಗಾರಿ ಬೇಡಿಕೆಗಳಿಗೆ ಅನುದಾನವನ್ನು‌ನೀಡಬೇಕಿದೆ ಈ ಕಾರಣಕ್ಕೆ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಹೆಚ್ಚು ಅನುದಾನ ನೀಡುವಂತೆ ಶಾಸಕರು‌ಮನವಿ ಸಲ್ಲಿಸಿದರು.

 Share: | | | | |


ಬೃಹತ್ ಮರ ರಸ್ತೆಗೆ: ಮಡಿಕೇರಿ-ಮಂಗಳೂರು ಹೆದ್ದಾರಿ ಸಂಚಾರಕ್ಕೆ ಮುಕ್ತ

Posted by Vidyamaana on 2023-07-24 16:48:04 |

Share: | | | | |


ಬೃಹತ್ ಮರ ರಸ್ತೆಗೆ: ಮಡಿಕೇರಿ-ಮಂಗಳೂರು ಹೆದ್ದಾರಿ ಸಂಚಾರಕ್ಕೆ ಮುಕ್ತ

ಮಡಿಕೇರಿ: ಮಡಿಕೇರಿ -ಮಂಗಳೂರು ಹೆದ್ದಾರಿ ಮದೆ ಸಮೀಪದ ಕರತೋಜಿ ಬಳಿ ಹೆಚ್ಚಿನ ಮಳೆಯಿಂದಾಗಿ ಬೃಹತ್ ಮರ ರಸ್ತೆಗೆ ಬಿದ್ದ ಪರಿಣಾಮ ಸಾರಿಗೆ ಸಂಚಾರದಲ್ಲಿ‌ ವ್ಯತ್ಯಯ ಉಂಟಾಗಿತ್ತು.

ಈ ಸಂಬಂಧ ಉಪ ವಿಭಾಗಾಧಿಕಾರಿ ಡಾ.ಯತೀಶ್‌ ಉಲ್ಲಾಳ್, ತಹಶೀಲ್ದಾರರಾದ ಕಿರಣ್ ಗೌರಯ್ಯ, ರಾಷ್ಟ್ರೀಯ ಹೆದ್ದಾರಿ ವಿಭಾಗದ ಅಭಿಯಂತರರು, ಅರಣ್ಯ ಇಲಾಖೆಯ ಸಿಬಂದಿಯವರು, ಸ್ಥಳೀಯರ ಸಹಕಾರದೊಂದಿಗೆ ಮರವನ್ನು ತೆರವುಗೊಳಿಸಿ ಸುಗಮ ಸಾರಿಗೆ ಸಂಚಾರ ಕಲ್ಪಿಸಲಾಯಿತು.

ದಾಂಪತ್ಯದಲ್ಲಿ ಜಗಳವಾಡಿ ಬೇರ್ಪಟ್ಟವರ ಎಲೆಕ್ಷನ್ ಕಾದಾಟ

Posted by Vidyamaana on 2024-03-11 12:14:11 |

Share: | | | | |


ದಾಂಪತ್ಯದಲ್ಲಿ ಜಗಳವಾಡಿ ಬೇರ್ಪಟ್ಟವರ ಎಲೆಕ್ಷನ್ ಕಾದಾಟ

ಕೊಲ್ಕತ್ತಾ: ಬಂಗಾಳದಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಪಕ್ಷ ಲೋಕಸಭೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ಪಟ್ಟಿಯನ್ನು ಭಾನುವಾರ ಬಿಡುಗಡೆ ಮಾಡಿದ್ದು, ವಿಚ್ಛೇದಿತ ಪತಿ- ಪತ್ನಿ ಪರಸ್ಪರ ಸೆಣೆಸಲು ಅನುವು ಮಾಡಿಕೊಟ್ಟಿದೆ. ಸುಜಾತಾ ಮಂಡಲ್ ಅವರು ತಮ್ಮ ಮಾಜಿ ಪತಿ ಹಾಗೂ ಬಿಷ್ಣುಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸೌಮಿತ್ರಾ ಖಾನ್ ವಿರುದ್ಧ ಟಿಎಂಸಿ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ.


ಬಿಷ್ಣುಪುರದ ಸೌಮಿತ್ರಾ ಖಾನ್ ಅವರನ್ನು ಬಿಜೆಪಿ ಅಭ್ಯರ್ಥಿಯಾಗಿ ಈ ತಿಂಗಳ ಆರಂಭದಲ್ಲಿ ಘೋಷಿಸಲಾಗಿತ್ತು. ಇಂದು ಮಂಡಲ್ ಅವರನ್ನು ತೃಣಮೂಲ ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರಕಟಿಸಲಾಗಿದೆ.


ತೃಣಮೂಲ ಕಾಂಗ್ರೆಸ್ ಪಕ್ಷ ಅಭೂತಪೂರ್ವ ಗೆಲುವು ಸಾಧಿಸಿದ್ದ 2021ರ ರಾಜ್ಯ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಈ ದಂಪತಿ ಬೇರ್ಪಟ್ಟಿತ್ತು. ಪತ್ನಿ ತೃಣಮೂಲ ಕಾಂಗ್ರೆಸ್ ಸದಸ್ಯೆಯಾಗಿ ರಾಜಕೀಯಕ್ಕೆ ಧುಮುಕಿದ ತಕ್ಷಣ ಕ್ಯಾಮೆರಾ ಮುಂದೆಯೇ ಖಾನ್ ವಿಚ್ಛೇದನ ಘೋಷಿಸಿದ್ದರು.


ಬಿಷ್ಣುಪುರ ಮೂಲದ ಖಾನ್ 2019ರ ಲೋಕಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷದಿಂದ ಬಿಜೆಪಿಗೆ ಪಕ್ಷಾಂತರಗೊಂಡಿದ್ದರು. ಆ ಸಮಯದಲ್ಲಿ ಅವರ ಪತ್ನಿ ಅವರ ಪರವಾಗಿ ಪ್ರಚಾರ ಕೈಗೊಂಡಿದ್ದರು. ರಾಜ್ಯದ 42 ಸ್ಥಾನಗಳಿಗೆ ತೃಣಮೂಲ ಕಾಂಗ್ರೆಸ್ ಭಾನುವಾರ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ರಾಜ್ಯದಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲು ಪಕ್ಷ ಮುಂದಾಗಿದೆ.


ಚುನಾವಣಾ ಫಲಿತಾಂಶ ಬಂದ ಬಳಿಕವಷ್ಟೇ ವಿರೋಧ ಪಕ್ಷಗಳ ಕೂಟವನ್ನು ಸೇರುವ ಬಗ್ಗೆ ನಿರ್ಧಾರ ಕೈಗೊಳ್ಳುವುದಾಗಿ ಮಮತಾ ಬ್ಯಾನರ್ಜಿ ಸ್ಪಷ್ಟಪಡಿಸಿರುವುದು ಕಾಂಗ್ರೆಸ್ ಪಾಲಿಗೆ ದೊಡ್ಡ ಹಿನ್ನಡೆಯಾಗಿದೆ.

ತೆಂಗಿನ ಮರದಿಂದ ಬಿದ್ದು ಧರ್ಮಸ್ಥಳ ಮೂಲದ ವಿಶ್ವಾಂಬರನ್ ಮೃತ್ಯು

Posted by Vidyamaana on 2024-01-22 21:17:53 |

Share: | | | | |


ತೆಂಗಿನ ಮರದಿಂದ ಬಿದ್ದು  ಧರ್ಮಸ್ಥಳ ಮೂಲದ ವಿಶ್ವಾಂಬರನ್ ಮೃತ್ಯು

ಉಳ್ಳಾಲ: ತೆಂಗಿನ ಮರದಿಂದ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ನೇತ್ರಾವತಿ ನದಿ ಸಮೀಪದ ಸೋಮನಾಥ ಉಳಿಯ ಎಂಬಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ.


ಮೂಲತ: ಧರ್ಮಸ್ಥಳ ಪುದುವೆಟ್ಟು ನಿವಾಸಿ ಸದ್ಯ ಸಂತೋಷ ನಗರ ದಲ್ಲಿ ನೆಲೆಸಿರುವ ವಿಶ್ವಾಂಬರನ್ (58) ಮೃತಪಟ್ಟವರು.ಎಂದಿನಂತೆ ಇಂದು ಬೆಳಿಗ್ಗೆ ತಾನು ಗುತ್ತಿಗೆ ವಹಿಸಿಕೊಂಡ ಕುತ್ತಾರು ಸೋಮನಾಥ ಉಳಿಯ ಸಮೀಪದ ತೆಂಗಿನಮರಕ್ಕೆ ಹತ್ತಿದ್ದವರು ಕಾಲುಜಾರಿ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.


ಮೃತರು ಪತ್ನಿ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ. ಕೊಣಾಜೆ ಮೂರ್ತೆದಾರರ ಸಂಘದ ನಿರ್ದೇಶಕರಾಗಿದ್ದ ಇವರು, ಮೂರು ತಿಂಗಳ ಹಿಂದಷ್ಟೇ ರಾಜೀನಾಮೆ ನೀಡಿ ಸದಸ್ಯರಾಗಿ ಮುಂದುವರಿದಿದ್ದರು. ಈ ಬಗ್ಗೆ ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಟ್ಲ: ಬೊರ್ ವೆಲ್ ಲಾರಿ ಹಾಗೂ ದ್ವಿಚಕ್ರ ವಾಹನ ಮಧ್ಯೆ ಭೀಕರ ಅಪಘಾತ - ಸವಾರ ರಂಜಿತ್ ಮೃತ್ಯು

Posted by Vidyamaana on 2023-03-18 10:49:06 |

Share: | | | | |


ವಿಟ್ಲ: ಬೊರ್ ವೆಲ್ ಲಾರಿ ಹಾಗೂ ದ್ವಿಚಕ್ರ ವಾಹನ ಮಧ್ಯೆ ಭೀಕರ ಅಪಘಾತ - ಸವಾರ ರಂಜಿತ್ ಮೃತ್ಯು

ವಿಟ್ಲ:ಮಾ 18 ಕಡೂರು ಕಾಂಞಗಾಡ್ ಅಂತರಾಜ್ಯ ಹೆದ್ದಾರಿಯವಿಟ್ಲ ಸಮೀಪದ ಕಾಶಿ ಮಠ ಬಳಿ ಕೊಳವೆ ಬಾವಿ ಕೊರೆಯುವ ಯಂತ್ರ ಹೊತ್ತ ವಾಹನ ಹಾಗೂ ದ್ವಿಚಕ್ರ ವಾಹನ ನಡುವೆ ಬೀಕರ ಅಪಘಾತ ಸಂಭವಿಸಿದ್ದು, ವಾಹನ ಸಹ ಸವಾರ ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಮಾ 18 ರಂದು ಮಧ್ಯಾಹ್ನ ದುರ್ಘಟನೆ ನಡೆದಿದೆ.ಅಲಂಗಾರು ಬ್ರಾಣ ಪಾದೆ ನಿವಾಸಿ ರಂಜಿತ್ (19) ಸ್ಥಳದಲ್ಲೆ ಮೃತಪಟ್ಟ ಯುವಕ. ಸವಾರ ನಿತಿನ್ (28) ಗಂಭೀರವಾಗಿ ಗಾಯಗೊಂಡಿದ್ದಾರೆ ಕೊಳವೆ ಬಾವಿ ಕೊರೆಯುವ ಯಂತ್ರವಿದ್ದ ಲಾರಿಯ ಚಾಲಕ ಅಜಾಗರೂಕತೆಯಿಂದ ಹಾಗೂ ನಿರ್ಲಕ್ಷ್ಯತನದಿಂದ, ಘನ ವಾಹನವೆಂದು ಲೆಕ್ಕಿಸದೆ ಚಲಾಯಿಸಿದೆ ಅಪಘಾತಕ್ಕೆ ಕಾರಣವೆಂದು ಸ್ಥಳೀಯರು ಅರೋಪಿಸಿದ್ದಾರೆ.ಢಿಕ್ಕಿಯ ಬಳಿಕ ಲಾರಿಯು ಬೈಕ್ ಸವಾರರನ್ನು ಕೆಲ ಮೀಟರುಗಳ ದೂರ ಎಳೆದೊಯ್ದಿದಿದೆ. ಅಪಘಾತದ ತೀವ್ರತೆಗೆ ಬೈಕ್ ಸವಾರನ ತಲೆ ಛಿದ್ರವಾಗಿದೆ. ವಿಟ್ಲ ಪೊಲೀಸರು ಸ್ಥಳಕ್ಕೆ ಧಾವಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆಂದು ತಿಳಿದು ಬಂದಿದೆ.

3 ನೇ ಮಹಾಯುದ್ಧದ ಭೀತಿ : ಇಸ್ರೇಲ್ ಮೇಲೆ ದಾಳಿಗೆ ಇರಾನ್, ಯೆಮೆನ್, ಸಿರಿಯಾ ಮತ್ತು ಇರಾಕ್ ಸಜ್ಜು

Posted by Vidyamaana on 2024-04-14 12:55:15 |

Share: | | | | |


3 ನೇ ಮಹಾಯುದ್ಧದ ಭೀತಿ : ಇಸ್ರೇಲ್ ಮೇಲೆ ದಾಳಿಗೆ ಇರಾನ್, ಯೆಮೆನ್, ಸಿರಿಯಾ ಮತ್ತು ಇರಾಕ್ ಸಜ್ಜು

ಇಸ್ರೇಲ್ : ಇಂದು ಮುಂಜಾನೆ ಇಸ್ರೇಲ್ ಮೇಲೆ ಇರಾನ್ ನಡೆಸಿದ ದಾಳಿಯು ಮೂರನೇ ಮಹಾಯುದ್ಧದ ಗಂಟೆಯನ್ನು ಬಾರಿಸಿದೆ. ಅನಿರೀಕ್ಷಿತ ಬೆಳವಣಿಗೆಯೊಂದರಲ್ಲಿ, ಇರಾನ್ ಭಾನುವಾರ ಮುಂಜಾನೆ ಇಸ್ರೇಲ್ ಮೇಲೆ ತೀವ್ರ ದಾಳಿ ನಡೆಸಿತು. ಈ ಸಮಯದಲ್ಲಿ, ಇರಾನ್ ಇಸ್ರೇಲ್ ಮೇಲೆ ನೂರಾರು ಡ್ರೋನ್ಗಳು, ಬ್ಯಾಲಿಸ್ಟಿಕ್ ಕ್ಷಿಪಣಿಗಳು ಮತ್ತು ಕ್ರೂಸ್ ಕ್ಷಿಪಣಿಗಳನ್ನು ಹಾರಿಸುವ ಮೂಲಕ ಕೋಲಾಹಲವನ್ನು ಸೃಷ್ಟಿಸಿತು.ಇಂದು ಮುಂಜಾನೆ, ಇರಾನ್ ಮತ್ತು ಯೆಮೆನ್, ಸಿರಿಯಾ ಮತ್ತು ಇರಾಕ್ನ ಅನುಕಂಪ ಹೊಂದಿರುವವರು ಇಸ್ರೇಲ್ನಲ್ಲಿನ ಮಿಲಿಟರಿಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದರು. ಸಂಪೂರ್ಣ ದಾಳಿಯಿಂದ ಇಸ್ರೇಲ್ ಆಘಾತಕ್ಕೊಳಗಾಗಿದೆ. ಆದಾಗ್ಯೂ, ಇಸ್ರೇಲಿ ಸೈನ್ಯವು ಈ ಹೆಚ್ಚಿನ ದಾಳಿಗಳನ್ನು ಹಿಮ್ಮೆಟ್ಟಿಸಿತು. ಇರಾನ್ ಸೇರಿದಂತೆ ಇತರ ದೇಶಗಳ ಡ್ರೋನ್ಗಳು ಮತ್ತು ಕ್ಷಿಪಣಿಗಳನ್ನು ಹೊಡೆದುರುಳಿಸಲು ಯುಎಸ್ ಇಸ್ರೇಲ್ಗೆ ಸಹಾಯ ಮಾಡಿತು.

ಕುಮಾರಧಾರೆಯ ಒಡಲಿಂದ ಅಕ್ರಮ ಮರಳು ತೆಗದು ಸಾಗಾಟದ ಆರೋಪ

Posted by Vidyamaana on 2024-05-11 22:37:29 |

Share: | | | | |


ಕುಮಾರಧಾರೆಯ ಒಡಲಿಂದ ಅಕ್ರಮ ಮರಳು ತೆಗದು ಸಾಗಾಟದ ಆರೋಪ

ಕಾಣಿಯೂರು: ಕುಮಾರಧಾರ ನದಿಯಿಂದ ಅಕ್ರಮವಾಗಿ ಮರಳು ಕಳ್ಳತನ ಮಾಡಿ ಟಿಪ್ಪರ್‌ಗಳಲ್ಲಿ ತುಂಬಿಸಿ ಸಾಗಾಟ ಮಾಡುತ್ತಿದ್ದುದನ್ನು ವಿವಿಧ ಕಡೆಗಳಲ್ಲಿ ಪತ್ತೆ ಮಾಡಿರುವ ಬೆಳ್ಳಾರೆ ಪೊಲೀಸರು ಈ ಸಂಬಂಧ ಆರು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿಕೊಂಡು 70 ಲಕ್ಷ ರೂ.ಮೌಲ್ಯದ 6 ಟಿಪ್ಪರ್, 1 ಇಟಾಚಿ ಮತ್ತು 60 ಸಾವಿರ ರೂ.ಮೌಲ್ಯದ ಮರಳನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ.





Leave a Comment: