ಪೊಲೀಸರಿಂದ ಎಸ್ಕೆಪ್ ಆಗಲು ಹೋಗಿ ನೀರುಪಾಲಾದ ಇಬ್ಬರ ರಕ್ಷಣೆ : ಐವರು ನಾಪತ್ತೆ

ಸುದ್ದಿಗಳು News

Posted by vidyamaana on 2024-07-03 10:25:40 |

Share: | | | | |


ಪೊಲೀಸರಿಂದ ಎಸ್ಕೆಪ್ ಆಗಲು ಹೋಗಿ ನೀರುಪಾಲಾದ ಇಬ್ಬರ ರಕ್ಷಣೆ : ಐವರು ನಾಪತ್ತೆ

ವಿಜಯಪುರ: ಇಸ್ಪೀಟ್ ಆಡುವಾಗ ಪೊಲೀಸರು ದಾಳಿ ನಡೆಸಿದ್ದು, ಈ ವೇಳೆ ಎಸ್ಕೇಪ್ ಆಗಲು ಹೋಗಿ ತೆಪ್ಪ ಮಗುಚಿದ ಘಟನೆ ನಿನ್ನೆ ಬಳೂತಿ ಗ್ರಾಮದ ವ್ಯಾಪ್ತಿಯಲ್ಲಿ ನಡೆದಿದೆ. ಅಲ್ಲಿನ ಆಲಮಟ್ಟಿ ಜಲಾಶಯದ ಕೊಲ್ಹಾರ ಬಳಿಯ ಕೃಷ್ಣಾ ನದಿ ಹಿನ್ನೀರು ಪ್ರದೇಶದಲ್ಲಿ ಈ ದುರ್ಘಟನೆ ಸಂಭವಿಸಿದೆ.

ಎಂಟು ಜನ ತೆಪ್ಪದಲ್ಲಿ ಕೃಷ್ಣಾ ನದಿಯ ಮೂಲಕ ಎಸ್ಕೇಪ್ ಆಗುವ ವೇಳೆ ದುರಂತ ನಡೆದಿದೆ. ಇನ್ನು, ಮೀನುಗಾರರು ಹಾಗೂ ಸ್ಥಳೀಯರ ನೆರವಿನೊಂದಿಗೆ ಇಬ್ಬರ ರಕ್ಷಣೆ ಮಾಡಲಾಗಿದ್ದು ಇಬ್ಬರ ಇಬ್ಬರ ಮೃತದೇಹ ಸಿಕ್ಕಿದೆ.

ಪುಂಡಲೀಕ ಯಂಕಂಚಿ (35), ಮಹಮ್ಮದ್ ತೈಹದ್ ಚೌಧರಿ(45) ಸಾವನ್ನಪ್ಪಿದ್ದಾರೆ. ಸಚಿನ್ ಕಟಬರ್, ಫಾರೂಕ್ ಅಮದ ರಕ್ಷಣೆ ಮಾಡಲಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಎಂಟು ಜನ ಕೊಲ್ಹಾರ ಪಟ್ಟಣದವರಾಗಿದ್ದು, ನೀರುಪಾಲಾದವರು ದಶರಥ( 58),ಮೈಬೂಬ್ ವಾಲಿಕಾರ (35), ರಫೀಕ್ ಬಾಂಬೆ ,(40), ರಫೀಕ ಜಾಲಗಾರರಿಗಾಗಿ(48) ಹುಡುಕಾಟ ನಡೆಯುತ್ತಿದೆ.

 Share: | | | | |


ಹೆಚ್ಚು ಮತದಾರರಾಗಿರುವ ಮಹಿಳೆಯರು ಕಾಂಗ್ರೆಸ್ ಕೈ ಹಿಡಿಯಲಿದ್ದಾರೆ: ಪತ್ರಿಕಾಗೋಷ್ಠಿಯಲ್ಲಿ ಅನಿತಾ ಹೇಮನಾಥ ಶೆಟ್ಟಿ

Posted by Vidyamaana on 2024-04-23 21:56:48 |

Share: | | | | |


ಹೆಚ್ಚು ಮತದಾರರಾಗಿರುವ ಮಹಿಳೆಯರು ಕಾಂಗ್ರೆಸ್ ಕೈ ಹಿಡಿಯಲಿದ್ದಾರೆ: ಪತ್ರಿಕಾಗೋಷ್ಠಿಯಲ್ಲಿ ಅನಿತಾ ಹೇಮನಾಥ ಶೆಟ್ಟಿ

ಪುತ್ತೂರು : ಮಹಿಳೆಯರ ಪ್ರಗತಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕರ್ನಾಟಕಲ್ಲಿ ಕಾಂಗ್ರೆಸ್‌ ಸರಕಾರ ಜಾರಿಗೊಳಿಸಿದ 5 ಗ್ಯಾರಂಟಿಗಳು ಮಹಿಳೆಯರಿಗೆ ಶಕ್ತಿ ತುಂಬಿದೆ. ಪ್ರಚಾರದ ಸಂದರ್ಭದಲ್ಲಿ ಪ್ರತಿ ಮನೆ ಮನೆಗಳ ಮಹಿಳೆಯರಲ್ಲಿ ಖುಷಿ ಕಾಣಿಸುತ್ತಿದೆ. ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಅತ್ಯಧಿಕ ಸ್ಥಾನಗಳನ್ನು ಗೆಲ್ಲಲಿದೆ ಎಂದು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಅನಿತಾ ಹೇಮನಾಥ ಶೆಟ್ಟಿ ಹೇಳಿದ್ದಾರೆ.

ನಕಲಿ ಚಿನ್ನ ದ ಆಸೆಗೆ ತುಮಕೂರಿನಲ್ಲಿ ಬಲಿಯಾದರೇ ಬೆಳ್ತಂಗಡಿಯ ಮೂವರು?

Posted by Vidyamaana on 2024-03-23 10:38:46 |

Share: | | | | |


ನಕಲಿ ಚಿನ್ನ ದ ಆಸೆಗೆ ತುಮಕೂರಿನಲ್ಲಿ ಬಲಿಯಾದರೇ ಬೆಳ್ತಂಗಡಿಯ ಮೂವರು?

ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿ ಕೆರೆಗೆ ತಳ್ಳಿದ ಪ್ರಕರಣದಲ್ಲಿ ಮೂವರು ಸಾವನ್ನಪ್ಪಿದ ಸಂಬಂಧಪಟ್ಟಂತೆ ಆರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಪ್ರಕರಣದ‌ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಮತ್ತು ಐದು ಜನರನ್ನು ಕೋರಾ ಪೊಲೀಸರು ಮಾ.22 ರಂದು ರಾತ್ರಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ತುಮಕೂರಿಗೆ ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56) , ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ಹೋಗಿದ್ದರು ಎಂದು ಗುರುತಿಸಿದ್ದಾರೆ.

ಇನ್ನು ಮೂರು ಜನ ಮೃತರೆಲ್ಲಾ ನಕಲಿ ಚಿನ‌್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಅನ್ನೋದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಕಡಿಮೆ ಚಿನ್ನವನ್ನು ಬೆಲೆಗೆ ನೀಡುತ್ತೇವೆ ಎಂದು ಸುಳ್ಳು ಹೇಳಿ ಮೂವರನ್ನು ಕರೆಸಿ ಹಣ ದೋಚುವ ಪ್ಲ್ಯಾನ್ ಮಾಡಿ ಕರೆಸಿಕೊಂಡು ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಲಾಗಿದೆ ಎನ್ನಲಾಗಿದೆ.

ಪ್ರಕರಣದ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಮತ್ತು ಇತರ ಐದು ಜನ ಸೇರಿ ಒಟ್ಟು ಆರು ಜನರನ್ನು ವಶಕ್ಕೆ ಪಡೆದಿರುವ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. 


ಕೋರಾ ಪೊಲೀಸ್ ಠಾಣೆಯಲ್ಲಿ ಮಾ.22 ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು. ಇನ್ನು ಮೂವರ ಶವ ಸಂಪೂರ್ಣವಾಗಿ ಸುಟ್ಟಿರುವ ಕಾರಣ ಗುರುತು ಪತ್ತೆಹಚ್ಚಲು ಡಿಎನ್ಎ ಪರೀಕ್ಷೆ ಬಳಿಕ ಮನೆಮಂದಿಗೆ ಶವ ಬಿಟ್ಟು ಕೊಡಲಿದ್ದಾರೆ. ಡಿಎನ್ಎ ವರದಿ ಬರಲು ಸುಮಾರು ಒಂದು ವಾರ ಬೇಕಾಗುತ್ತದೆ ಎಂದು ಪೊಲೀಸರು ಮನೆಯವರಿಗೆ ತಿಳಸಿದ್ದಾರೆ.

ಈಜುಕೊಳದಲ್ಲಿ ಮುಳುಗಿ ಹರಿಯಾಣ ಮೂಲದ ಅಭಿಷೇಕ್ ಮೃತ್ಯು

Posted by Vidyamaana on 2023-12-13 11:23:22 |

Share: | | | | |


ಈಜುಕೊಳದಲ್ಲಿ ಮುಳುಗಿ ಹರಿಯಾಣ ಮೂಲದ ಅಭಿಷೇಕ್ ಮೃತ್ಯು

ಮಂಗಳೂರು : ಈಜುಕೊಳದಲ್ಲಿ ಮುಳುಗಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಮಂಗಳೂರು ಮಹಾನಗರಪಾಲಿಕೆಯ ಈಜುಕೊಳದಲ್ಲಿ ನಡೆದಿದೆ.ಮಂಗಳವಾರ ಸಂಜೆ 4 ರ ಸುಮಾರಿಗೆ ಘಟನೆ ನಡೆದಿದೆ. ಹರಿಯಾಣ ಮೂಲದ ಅಭಿಷೇಕ್ (35) ಮೃತ ವ್ಯಕ್ತಿ. ಮಂಗಳೂರು ಮಹಾನಗರ ಪಾಲಿಕೆ ನಿರ್ವಹಣೆ ಮಾಡುವ ಈಜುಕೊಳದಲ್ಲಿ ಈಜುವಾಗ ಘಟನೆ ನಡೆದಿದೆ ಎನ್ನಲಾಗಿದೆ.


15 ಅಡಿ ಆಳದಲ್ಲಿ ಸಿಲುಕಿಕೊಂಡಿದ್ದ ಅಭಿಷೇಕರನ್ನು ಈಜುಕೊಳದ ಜೀವರಕ್ಷಕರಾದ ರಾಜೇಂದ್ರ ಮತ್ತು ಪುಂಡಲಿಕ್ ಅವರು ಕೂಡಲೇ ಮೇಲಕ್ಕೆ ತಂದಿದ್ದಾರೆ. ಸ್ಥಳದಲ್ಲಿದ್ದ ಪ್ರೊ. ನರೇಂದ್ರ ನಾಯಕ್ ಮತ್ತು ಇತರರು ಸಿಪಿಆರ್ ಮಾಡಿ ಉಸಿರಾಡುವಂತೆ ಮಾಡಿದರೂ ಪ್ರಯೋಜನವಾಗಿಲ್ಲ. ಅಭಿಷೇಕ್ ಸಾವು ನೀರಲ್ಲಿ ಉಸಿರುಗಟ್ಟಿ ಸಂಭವಿಸಿದೆಯೇ ಅಥವಾ ಹೃದಯಾಘಾತದಿಂದ ಸಂಭವಿಸಿದೆಯೆ ಎಂದು ತನಿಖೆಯಿಂದ ತಿಳಿದುಬರಬೇಕಿದೆ.

ವಿದ್ಯಾಮಾತಾ ಅಕಾಡೆಮಿಯ ಮುಕುಟಕ್ಕೊಂದು ನೂತನ ಗರಿ

Posted by Vidyamaana on 2023-12-06 13:40:58 |

Share: | | | | |


ವಿದ್ಯಾಮಾತಾ ಅಕಾಡೆಮಿಯ ಮುಕುಟಕ್ಕೊಂದು ನೂತನ ಗರಿ

ಪುತ್ತೂರು : K.M.F ಬೆಂಗಳೂರು ನೇಮಕಾತಿಯಲ್ಲಿ ವಿದ್ಯಾ ಮಾತಾದಲ್ಲಿ ತರಬೇತಿ ಪಡೆದ ಶಿಲ್ಪಾ ಹೆಚ್.ಎಂ ಆಯ್ಕೆ.

ಕರ್ನಾಟಕ ಮಿಲ್ಕ್ ಫೆಡರೇಶನ್ (K.M.F) ಬೆಂಗಳೂರು ಕೇಂದ್ರ ಕಛೇರಿಗೆ ನಡೆಸಿದ ನೇಮಕಾತಿಯ ಪರೀಕ್ಷೆಯಲ್ಲಿ ಅತ್ಯುತ್ತಮ ಮೆರಿಟ್ ಅಂಕಗಳೊಂದಿಗೆ ಮೈಸೂರು ಜಿಲ್ಲೆಯ ವಿಜಯನಗರ ನಿವಾಸಿ ಶಿಲ್ಪಾ ಹೆಚ್.ಎಂ ರವರು ಆಯ್ಕೆ ಆಗಿದ್ದಾರೆ. ಈ ಮೂಲಕ ವಿದ್ಯಾಮಾತಾ ಅಕಾಡೆಮಿಯ ಸಾಧನೆಯ ಮುಕುಟಕ್ಕೆ ಇನ್ನೊಂದು ಗರಿ ಲಭಿಸಿದಂತಾಗಿದೆ. ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯಲ್ಲಿ ಸಹಕಾರ ಸಂಘಗಳ ಬಗ್ಗೆ ವಿದ್ಯಾಮಾತ ಅಕಾಡೆಮಿಯಲ್ಲಿ ವಿಶೇಷ ತರಬೇತಿಯನ್ನು ನೀಡಲಾಗುತ್ತಿದ್ದು ರಾತ್ರಿ 8 ರಿಂದ 9 ಗಂಟೆವರೆಗಿನ ನಿತ್ಯ 1 ಗಂಟೆಗಳ ಆನ್ಲೈನ್ ತರಬೇತಿಯನ್ನು ಶಿಲ್ಪಾ ರವರಿಗೆ ನೀಡಲಾಗುತ್ತಿತ್ತು ಅತ್ಯಧಿಕ ಮೆರಿಟ್ ನೊಂದಿಗೆ  ಗ್ರೇಡ್ 2 ಹುದ್ದೆಗೆ ಆಗಿರುತ್ತಾರೆ.

       

                ಸಹಕಾರ ತತ್ವ, ಸಾಮಾನ್ಯ ಜ್ಞಾನ ಇತ್ಯಾದಿಗಳ ಬಗ್ಗೆ ವಿಶೇಷ ತರಬೇತಿಯನ್ನು ನೀಡುವುದರ ಮೂಲಕ ಸ್ಥಳೀಯ ಸಹಕಾರಿ ಬ್ಯಾಂಕ್, K.M.F  ಇತ್ಯಾದಿ ಪರೀಕ್ಷೆಗಳನ್ನು ಪಾಸ್ ಮಾಡಲು ಉತ್ತೇಜಿಸಲಾಗುತ್ತಿದೆ. ಈ ಕಾರಣದಿಂದ ಕಳೆದ K.M.F ನ ಮಂಗಳೂರು ವಿಭಾಗಕ್ಕೂ 3 ಜನ ಅಭ್ಯರ್ಥಿಗಳು ಅತ್ಯಧಿಕ ಅಂಕಗಳೊಂದಿಗೆ ಆಯ್ಕೆಯಾಗಿದ್ದರು, ಇದೀಗ ಬೆಂಗಳೂರು ವಿಭಾಗಕ್ಕೆ ಆಯ್ಕೆ ಆಗಿರುವುದು ಸಂತೋಷ ಕೊಟ್ಟಿದೆ.

                                          ಭಾಗ್ಯೇಶ್ ರೈ

                    ಆಡಳಿತ ನಿರ್ದೇಶಕರು ವಿದ್ಯಾಮಾತ ಅಕಾಡೆಮಿ

ಮದುವೆ ಒಲ್ಲೆ ಎಂದ ಪ್ರಿಯಕರ - ಬಿಲ್ಡಿಂಗ್ ಏರಿದ ಪ್ರಿಯತಮೆ

Posted by Vidyamaana on 2024-03-19 16:11:46 |

Share: | | | | |


ಮದುವೆ ಒಲ್ಲೆ ಎಂದ ಪ್ರಿಯಕರ - ಬಿಲ್ಡಿಂಗ್ ಏರಿದ ಪ್ರಿಯತಮೆ

ಮೈಸೂರು : ಇನ್‌ಸ್ಟಾಗ್ರಾಂನಲ್ಲಿ(Instagram love) ಲವ್ ಮಾಡಿ ಮದುವೆ ವಿಚಾರ ಬಂದಾಗ ಭಿನ್ನಾಭಿಪ್ರಾಯ ಮೂಡಿದ್ದು ಮಹಿಳೆ ಬಿಲ್ಡಿಂಗ್‌ ಏರಿ ಆತ್ಮಹತ್ಯೆಗೆ(Suicide attempt) ಯತ್ನಿಸಿದ ಘಟನೆ ನಂಜನಗೂಡು ತಾಲೂಕಿನಲ್ಲಿ ನಡೆದಿದೆ.ಬಿಹಾರ ಮೂಲದ ವಿವಾಹಿತ ಮಹಿಳೆ ನಾಸೀಂ ಬೇಗಂ (31 ಹಾಗೂ ಅದೇ ರಾಜ್ಯದ ಸದ್ಯ ಹಿಮ್ಮಾವು ಗ್ರಾಮದಲ್ಲಿ ವಾಸವಿರುವ ಅಸಿಬೂರ್ ರೆಹಮಾನ್‌ ನಡುವೆ ಸಾಮಾಜಿಕ ಜಾಲತಾಣದಲ್ಲಿ ಲವ್‌ ಆಗಿದ್ದು , ಒಂದು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಮಹಿಳೆ ರೆಹಮಾನ್‌ನನ್ನು ಭೇಟಿಯಾಗಲಲು ಸೀದಾ ಮೈಸೂರಿಗೆ ಬಂದಿದ್ದಾಳೆ. ಮಹಿಳೆಯನ್ನು ನೋಡುತ್ತಲೇ ಆಸಿಬೂರ್‌ ರೆಹಮಾನ್‌ ವಯಸ್ಸಿನ ಅಂತರ ಹೆಚ್ಚು ಎಂಬ ಕಾರಣ ನೀಡಿ ಮದುವೆಗೆ ಒಲ್ಲೆ ಎಂದಿದ್ದಾನೆ.


ಇದರಿಂದ ಸಿಟ್ಟಾದ ನಾಸೀಂ ಬೇಗಂ ಖಾಸಗಿ ಹೊಟೇಲ್‌ ಬಿಲ್ಡಿಂಗ್ ಏರಿ ಮದುವೆ ಮಾಡಿಕೊಳ್ಳದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾಳೆ. ಸದ್ಯ ಆಕೆಯನ್ನು ಕೆಳಗೆ ಇಳಿಸಿ ನಂಜನಗೂಡು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಂಟ್ವಾಳ : ಬಿಜೆಪಿ ಸಕ್ರಿಯ ಕಾರ್ಯಕರ್ತ ಅಮ್ಟಾಡಿ ಮಹಾಶಕ್ತಿಕೇಂದ್ರದ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಬೆಳ್ಳೂರು ನಿಧನ.

Posted by Vidyamaana on 2023-09-18 15:21:19 |

Share: | | | | |


ಬಂಟ್ವಾಳ : ಬಿಜೆಪಿ ಸಕ್ರಿಯ ಕಾರ್ಯಕರ್ತ ಅಮ್ಟಾಡಿ ಮಹಾಶಕ್ತಿಕೇಂದ್ರದ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಬೆಳ್ಳೂರು ನಿಧನ.

ಬಂಟ್ವಾಳ : ಜ್ವರದಿಂದ ಬಳಲುತ್ತಿದ್ದ ವ್ಯಕ್ತಿಯೋರ್ವ ಔಷಧಿಗೆಂದು ಆಸ್ಪತ್ರೆಗೆ ಬಂದಿದ್ದ ವೇಳೆ ಸಾವನ್ನಪ್ಪಿದ ಘಟನೆ ನಡೆದಿದೆ.


ಬಿಜೆಪಿ ಸಕ್ರಿಯ ಯುವ ಕಾರ್ಯಕರ್ತ ಪ್ರಕಾಶ್ ಬೆಳ್ಳೂರು (43) ಮೃತ ವ್ಯಕ್ತಿ.



ಅಮ್ಟಾಡಿ ಮಹಾಶಕ್ತಿಕೇಂದ್ರದ ಪ್ರಧಾನ ಕಾರ್ಯದರ್ಶಿಯಾಗಿದ್ದ ಪ್ರಕಾಶ್ ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದರು ಎನ್ನಲಾಗಿದೆ.


ಔಷಧಿಗೆಂದು ಅವರು ಇಂದು‌ ಬೆಳಿಗ್ಗೆ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಬಂದಿದ್ದರು ಎಂದು ಹೇಳಲಾಗಿದೆ. ಈ ವೇಳೆ ವೈದ್ಯರು ಪರೀಕ್ಷೆ ಮಾಡುವ ಮೊದಲೇ ಆಸ್ಪತ್ರೆಯಲ್ಲಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.



Leave a Comment: