ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೊಂದು ರೋಚಕ ಟ್ವಿಸ್ಟ್!

ಸುದ್ದಿಗಳು News

Posted by vidyamaana on 2024-03-23 15:52:34 | Last Updated by Vidyamaana on 2024-03-23 15:52:34

Share: | | | | |


ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೊಂದು ರೋಚಕ ಟ್ವಿಸ್ಟ್!

ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಕಾರಿನೊಳಗಿದ್ದ ಮೂವರು ಸಾವನ್ನಪ್ಪಿದ ಸಂಬಂಧಿಸಿದಂತೆ ಮೂವರು ಸೇರಿ 50 ಲಕ್ಷ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಕುಟುಂಬ ಸದಸ್ಯರು ಕೋರಾ ಪೊಲೀಸರ ವಿಚಾರಣೆ ವೇಳೆ ಮಾಹಿತಿ ನೀಡಿದ್ದಾರೆ.

*💥Whats App Group ಗೆ ಸೇರಲು ಕ್ಲಿಕ್ ಮಾಡಿ

*ಹಣ ತೆಗೆದುಕೊಂಡು ಹೋದ ವಿಚಾರ*:  ಇನ್ನೂ ಕಾರಿನಲ್ಲಿ ಹೋಗುವಾಗ ಮದಡ್ಕದ ಇಸಾಕ್ ಉಜಿರೆಯಲ್ಲಿದ್ದ ಸ್ವಂತ ಮನೆಯನ್ನು ಮಾರಾಟ ಮಾಡಿದ ಹಣ ಮತ್ತು ಮಗಳ ಚಿನ್ನವನ್ನು ಅಡವಿಟ್ಟು ಸುಮಾರು 35 ಲಕ್ಷ ಹಣವನ್ನು ತೆಗೆದುಕೊಂಡು ಹೋಗಿದ್ದರು ಎಂದು ಇಸಾಕ್ ಪತ್ನಿ ಕೋರಾ ಪೊಲೀಸ್ ಠಾಣೆಯಲ್ಲಿ ಮಾ.23 ರಂದು ಪೊಲೀಸ್ ವಿಚಾರಣೆ ವೇಳೆ ಹೇಳಿಕೆಯನ್ನು ನೀಡಿದ್ದಾರೆ. ಇನ್ನೂ ಶಿರ್ಲಾಲು ಸಿದ್ದಿಕ್ ಮತ್ತು ಟಿ.ಬಿ.ಕ್ರಾಸ್ ಸಾಹುಲ್ ಹಮೀದ್ ಕೂಡ ಸ್ನೇಹಿತರ ಮೂಲಕ ಪಡೆದ ಸುಮಾರು 15 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಮನೆಯವರು ಹೇಳಿಕೆ ನೀಡಿದ್ದಾರೆ. ಒಟ್ಟು ಮೂವರ ಬಳಿ 50 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ಇತ್ತು ಎನ್ನಲಾಗಿದೆ.

ತುಮಕೂರಿಗೆ ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56) , ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ಹೋಗಿದ್ದರು ಎಂದು ಹೇಳಲಾಗಿದೆ.

ಮೂವರು ಕೂಡ ನಕಲಿ ಚಿನ‌್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಅನ್ನೋದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಕಡಿಮೆ ಚಿನ್ನವನ್ನು ಬೆಲೆಗೆ ನೀಡುತ್ತೇವೆ ಎಂದು ಸುಳ್ಳು ಹೇಳಿ ಮೂವರನ್ನು ಕರೆಸಿ ಹಣ ದೋಚುವ  ಪ್ಲ್ಯಾನ್ ಮಾಡಿ ಕರೆಸಿಕೊಂಡು ಮಾ.21 ರಂದು ರಾತ್ರಿ ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಿ ನಂತರ ಹಣವನ್ನು ದೋಚಿದ್ದಾರೆ ಎನ್ನಲಾಗಿದೆ. ಇನ್ನೂ ಪ್ರಕರಣ ಸಂಬಂಧ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಸೇರಿ ಆರು ಜನರನ್ನು ಮೊಬೈಲ್ ಕಾಲ್ ಡಿಟೈಲ್ಸ್ ಮೂಲಕ  ಕಾರ್ಯಾಚರಣೆ ನಡೆಸಿ ಮಾ.22 ರಂದು ರಾತ್ರಿ ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಕೋರಾ ಪೊಲೀಸ್ ಠಾಣೆಯಲ್ಲಿ ಮಾ.22 ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಬೆಂಕಿಗಾಹುತಿಯಾದ ಕಾರನ್ನು ಕೋರಾ ಪೊಲೀಸ್ ಠಾಣೆಗೆ ತೆಗೆದುಕೊಂಡು ಬಂದಿದ್ದು. ಮೂವರ ಶವ ಸರಕಾರಿ ಆಸ್ಪತ್ರೆಯಲ್ಲಿ ಡಿಎನ್ಎ ಪರೀಕ್ಷೆ ಮಾಡಿದ ಬಳಿಕ ಮುಂದಿನ ಗುರುವಾರ ಅಥವಾ ಶುಕ್ರವಾರ ಮೃತದೇಹವನ್ನು ಗುರುತು ಪತ್ತೆಯಾದ ಬಳಿಕ ಅವರ ಕಟುಂಬ ಸದಸ್ಯರಿಗೆ ನೀಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.


 Share: | | | | |


ಡಾ .ನಝೀರ್‍ಸ್ ಡಯಾಬೆಟ್ಸ್ ಸೆಂಟರ್ 10ನೇ ವರ್ಷಕ್ಕೆ ಪಾದಾರ್ಪಣೆ ಉಚಿತ ಆರೋಗ್ಯ ತಪಾಸಣೆ

Posted by Vidyamaana on 2023-04-09 08:31:43 |

Share: | | | | |


ಡಾ .ನಝೀರ್‍ಸ್ ಡಯಾಬೆಟ್ಸ್ ಸೆಂಟರ್ 10ನೇ ವರ್ಷಕ್ಕೆ ಪಾದಾರ್ಪಣೆ  ಉಚಿತ ಆರೋಗ್ಯ ತಪಾಸಣೆ

ಪುತ್ತೂರು: ಕಲ್ಲಾರೆ ಕೃಷ್ಣಾ ಆರ್ಕೆಡ್‌ನಲ್ಲಿ ಕಾರ್ಯಾಚರಿಸುತ್ತಿರುವ ವೈದ್ಯಕೀಯ ಹಾಗೂ ಮಧುಮೇಹ ತಜ್ಞ ಡಾ.ನಝೀರ್ ಅಹಮದ್ ಕೆ.ರವರ ಡಾ.ನಝೀರ್‍ಸ್ ಡಯಾಬೆಟ್ಸ್ ಸೆಂಟರ್ ನ ದಶಮಾನೋತ್ಸವಕ್ಕೆ ಕಾಲಿಟ್ಟ ಅಂಗವಾಗಿ ಉಚಿತ ಆರೋಗ್ಯ ತಪಾಸಣೆ ನಡೆಯಿತು.

ಒಂದೇ ಕುಟುಂಬದ ನಾಲ್ವರನ್ನು ಕೊಂದ ಹಂತಕ ಪ್ರವೀಣ್ ಅರೆಸ್ಟ್

Posted by Vidyamaana on 2023-11-14 19:01:09 |

Share: | | | | |


ಒಂದೇ ಕುಟುಂಬದ ನಾಲ್ವರನ್ನು ಕೊಂದ ಹಂತಕ ಪ್ರವೀಣ್ ಅರೆಸ್ಟ್

ಬೆಳಗಾವಿ/ಉಡುಪಿ: ಉಡುಪಿಯ ನೇಜಾರಿನಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ, ಉಡುಪಿ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.



ಬೆಳಗಾವಿಯ ಕುಡುಚಿಯಲ್ಲಿ ಬಂಧಿಸಿದ ಉಡುಪಿ ಪೊಲೀಸರು ಪ್ರವೀಣ್​​​​ ಅರುಣ್​​​ ಚೌಗಲೆ  ಎಂಬಾತನನ್ನು ಬಂಧಿಸಿದ್ದಾರೆ. ಈತ ಮಂಗಳೂರು ಏರ್​​ ಏರ್​ಪೋರ್ಟ್​ ಸೆಕ್ಯೂರಿಟಿಯಲ್ಲಿಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಸಿಆರ್‌ ಪಿಎಫ್‌ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. . ಆರೋಪಿ ಮಹಾರಾಷ್ಟ್ರ ಸಾಂಗ್ಲಿ ಮೂಲದವನಾಗಿದ್ದಾನೆ ಎನ್ನಲಾಗಿದೆ.


ಕುಡಚಿಯಲ್ಲಿರುವ ಸಂಬಂಧಿಯೊಬ್ಬರ ಮನೆಯಲ್ಲಿ ಆರೋಪಿ ಅವಿತುಕೊಂಡಿದ್ದು,  ಮೊಬೈಲ್​​ ಟವರ್​ ಲೊಕೇಶನ್​​​ ಆಧರಿಸಿ ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.


ನವೆಂಬರ್​ 12ರಂದು ನೇಜಾರಿನ ತೃಪ್ತಿ ಲೇಔಟ್‌ ನಲ್ಲಿರುವ  ಮನೆಗೆ ಬಂದು ತಾಯಿ ಮೂವರು ಮಕ್ಕಳನ್ನು ಕೊಲೆ ಮಾಡಿದ್ದ.

ಪುತ್ತಿಲ ಪರಿವಾರ ಅಸ್ತಿತ್ವಕ್ಕೆ

Posted by Vidyamaana on 2023-05-21 14:53:25 |

Share: | | | | |


ಪುತ್ತಿಲ ಪರಿವಾರ ಅಸ್ತಿತ್ವಕ್ಕೆ

ಪುತ್ತೂರು: ವಿಧಾನಸಭಾ ಚುನಾವಣೆಯಲ್ಲಿ ಹೊಸ ಮನ್ವಂತರ ಸೃಷ್ಟಿಯ ಬಳಿಕ ಇದೀಗ ಪುತ್ತಿಲ ಪರಿವಾರ ಅಸ್ತಿತ್ವಕ್ಕೆ ಬಂದಿದೆ. ದರ್ಬೆಯಿಂದ ದೇವರಮಾರು ಗದ್ದೆಯವರೆಗೆ ನಡೆದ ನಮ್ಮ ನಡಿಗೆ ಮಹಾಲಿಂಗೇಶ್ವರನ ನಡೆಗೆ ಕಾಲ್ನಡಿಗೆ ಜಾಥಾದ ನಂತರ ನಡೆದ ಸೇವಾ ಸಮರ್ಪಣಾ ಸಮಾರಂಭದಲ್ಲಿ ಪುತ್ತಿಲ ಪರಿವಾರದ ಲೋಗೋ ಅನಾವರಣ ಮಾಡಲಾಯಿತು.

ಟಿ.ವಿ.9 ದ.ಕ. ಜಿಲ್ಲಾ ವರದಿಗಾರ ಅಶೋಕ್ ಬಡಾವು

Posted by Vidyamaana on 2023-09-30 22:58:20 |

Share: | | | | |


ಟಿ.ವಿ.9 ದ.ಕ. ಜಿಲ್ಲಾ ವರದಿಗಾರ ಅಶೋಕ್ ಬಡಾವು

ಪುತ್ತೂರು: ಕೃಷ್ಣನಗರ ಬಡಾವು ನಿವಾಸಿ ಮೋನಪ್ಪ ಪೂಜಾರಿ(63ವ ) ಸೆ. 30ರಂದು ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ಪತ್ನಿ ಕಮಲ, ಮಕ್ಕಳಾದ ಯಶೋದ, ಪ್ರಮೀಳಾ ಮತ್ತು ಟಿ.ವಿ.9 ದ.ಕ. ಜಿಲ್ಲಾ ವರದಿಗಾರ ಅಶೋಕ್ ಬಡಾವು ಅವರನ್ನು ಅಗಲಿದ್ದಾರೆ.

ಸವಾದ್ ನ ಕೊಲೆಗೈದು ಪ್ರಕರಣ

Posted by Vidyamaana on 2023-06-22 06:15:32 |

Share: | | | | |


ಸವಾದ್ ನ ಕೊಲೆಗೈದು  ಪ್ರಕರಣ

ಮೂಡಿಗೆರೆ : ಬಂಟ್ವಾಳದ ಸವಾದ್ ಎಂಬಾತನನ್ನು ಕೊಲೆ ಮಾಡಿ ಮೂಡಿಗೆರೆ ಪ್ರವಾಸಿ ತಾಣ ದೇವರಮನೆ ಗಡ್ಡೆಯ ಬಳಿ ಸುಟ್ಟು ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಬಂಟ್ವಾಳ ಮೂಲದ ರಿಜ್ವಾನ್ ಮತ್ತು ಝನುಲ್ಲಾ ಎಂದು ಗುರುತಿಸಲಾಗಿದೆ. 

ಪ್ರಕರಣದಲ್ಲಿ ಆರೋಪಿಗಳು ತಲೆಮರೆಸಿಕೊಂಡಿದ್ದರು. ಮೃತದೇಹದ ಪತ್ತೆಯ ಬಳಿಕ ಪ್ರಕರಣದ ತನಿಖೆ ಕೈಗೊಂಡಿದ್ದ ಮೂಡಿಗೆರೆ ವೃತ್ತ ನಿರೀಕ್ಷಕ ಸೋಮಶೇಖರ್ ಮತ್ತು ಬಣಕಲ್ ಎಸ್.ಐ. ಜಂಜೂರಾಜ್ ಮಹಾಜನ್ ನೇತೃತ್ವದ ಪೊಲೀಸ್ ತಂಡವು ಆರೋಪಿಗಳನ್ನು ಗುರುವಾಯನಕೆರೆ ಎಂಬಲ್ಲಿ ಬಂಧಿಸಿ ಮೂಡಿಗೆರೆ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

 ಆರೋಪಿಗಳನ್ನು ವಿಚಾರಣೆ ನಡೆಸಿದಾಗ ಗಾಂಜಾ ವ್ಯವಹಾರಕ್ಕೆ ಸಂಬಂಧಿಸಿದಂತೆ ಗಲಾಟೆಯಾಗಿ ಸವಾದ್ ನನ್ನು ಬೆಂಗ್ರೆ ಎಂಬಲ್ಲಿ ಕೊಲೆ ಮಾಡಿ ಹೆಣವನ್ನು ತಂದು ದೇವರಮನೆ ಗುಡ್ಡದಲ್ಲಿ ಎಸೆದು ಹೋಗಿದ್ದರು ಎಂದು ತಿಳಿದು ಬಂದಿದೆ. ಜೂನ್ 8 ರಂದು ದೇವರಮನೆ ಸಮೀಪ ರಸ್ತೆಯಂಚಿನಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿತ್ತು. ಆ ಬಳಿಕ ಬಂಟ್ವಾಳ ಮೂಲದ ಸವಾದ್ ಕುಟುಂಬ ಮಗನ ಮೃತದೇಹದ ಗುರುತು ಪತ್ತೆ ಮಾಡಿತ್ತು.

ಪ್ರವೀಣ್ ನೆಟ್ಟಾರು ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಭೇಟಿ

Posted by Vidyamaana on 2023-04-30 13:36:11 |

Share: | | | | |


ಪ್ರವೀಣ್ ನೆಟ್ಟಾರು ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಭೇಟಿ

ಪುತ್ತೂರು : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಅವರು ದಿ. ಪ್ರವೀಣ್ ನೆಟ್ಟಾರು ರವರ ಮನೆಗೆ ಭೇಟಿ ನೀಡಿದರು.

ಸುಳ್ಯದಲ್ಲಿ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಅವರ ಪರವಾಗಿ ಚುನಾವಣಾ ಪ್ರಚಾರ ಸಭೆಗೆ ಆಗಮಿಸಿದ ಅವರು ಕೊಡಿಯಾಲ ಬೈಲಿನ ಹೆಲಿಪ್ಯಾಡ್ ನಿಂದ ರಸ್ತೆ ಮಾರ್ಗವಾಗಿ ನೆಟ್ಟಾರಿಗೆ ಆಗಮಿಸಿ, ದಿ. ಪ್ರವೀಣ್ ನೆಟ್ಟಾರು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಪ್ರವೀಣ್ ನೆಟ್ಟಾರು ಅವರ ತಂದೆ ಶೇಖರ ಪೂಜಾರಿ, ತಾಯಿ ರತ್ನಾವತಿ, ಪತ್ನಿ ನೂತನ ಅವರಿಗೆ ಸಾಂತ್ವನ ಹೇಳಿದರು.ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರದ ಬಿಜೆಪಿ ಸರಕಾರ ಈಗಾಗಲೇ

ಪಿ.ಎಫ್.ಐ.ಯನ್ನು ನಿಷೇಧಿಸಿದ್ದು, ಪ್ರವೀಣ್ ಕುಟುಂಬದೊಂದಿಗೆಬಿಜೆಪಿ ಸದಾ ಇರಲಿದೆ ಎಂದರು.ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಅಭ್ಯರ್ಥಿ ಭಾಗೀರಥಿ ಮುರುಳ್ಯ ಸೇರಿದಂತೆ ಸುಳ್ಯದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು

New Categories
Recent News
Popular News


Leave a Comment: