ಚಾಲಕನ ನಿಯಂತ್ರಣ ತಪ್ಪಿ ಮನೆ ಮೇಲೆ ಬಿದ್ದ ಪಿಕಪ್ ವಾಹನ

ಸುದ್ದಿಗಳು News

Posted by vidyamaana on 2023-07-14 03:02:36 | Last Updated by Vidyamaana on 2023-09-05 09:08:10

Share: | | | | |


ಚಾಲಕನ ನಿಯಂತ್ರಣ ತಪ್ಪಿ ಮನೆ ಮೇಲೆ ಬಿದ್ದ ಪಿಕಪ್ ವಾಹನ

ವಿಟ್ಲ: ಪರಿಯಲ್ಲಡ್ಕ – ಸಾರಡ್ಕ ರಸ್ತೆಯ ಕೂರೇಲು ಎಂಬಲ್ಲಿ ಪಿಕಪ್ ರಸ್ತೆಯಿಂದ ಮನೆಯ ಮೇಲೆ ಬಿದ್ದಿದ್ದು, ಮನೆಯ ಒಳಗೆ ಮಹಿಳೆ ಸಿಲುಕಿ ಹಾಕಿಕೊಂಡಿದ್ದಾರೆ.ಕೂರೇಲು ಮಧ್ಯದ ಅಂಗಡಿಯ ಸಮೀಪದಲ್ಲಿ ರಸ್ತೆಯಿಂದ ಕೆಳಗಿದ್ದ ಮನೆಗೆ ಜು.14 ರ ಬೆಳಗ್ಗಿನ ಜಾವ ಚಾಲಕ ನಿಯಂತ್ರಣ ತಪ್ಪಿದ ಪಿಕಪ್ ಮನೆಯ ಮೇಲೆ ಬಿದ್ದಿದೆಅಪಘಾತದಿಂದ ಹಂಚಿನ ಮನೆ ಸಂಪೂರ್ಣ ಹಾನಿಯಾಗಿದೆ. ಪಿಕಪ್ ಕೋಳಿ ಸಾಗಟ ನಡೆಸುತಿತ್ತು. ಅಪಘಾತದಿಂದ ನೂರಾರು ಕೋಳಿಗಳು ಸತ್ತಿದೆ. ಅಪಘಾತ ನಡೆದಾಗ ಮನೆಯ ಒಳಗೆ ಮಹಿಳೆ ಮಲಗಿದ್ದರು, ಮಹಿಳೆಗೆ ಗಂಭೀರ ಗಾಯವಾದ ಪರಿಸ್ಥಿಯಲಿದ್ದಾರೆ.ಪಿಕಪ್ ವಾಹನವನ್ನು ತೆರವು ಮಾಡಡೆ, ಮಹಿಳೆಯನ್ನು ಹೊರಗೆ ತೆಗೆಯಲು ಸಾಧ್ಯವಿಲ್ಲದ ಸ್ಥಿತಿ ನಿರ್ಮಾಣವಾಗಿದೆ.

ಸ್ಥಳದಲ್ಲಿ ವಿಟ್ಲ ಪೊಲೀಸರು, ತುರ್ತು ಸೇವಾ ವಾಹನ ಬೀಡು ಬಿಟ್ಟಿದ್ದು, ಕ್ರೇನ್ ಬಳಸಿ ವಾಹನ ಮೇಲೆತ್ತುವ ಕಾರ್ಯಾಚರಣೆ ನಡೆಯುತ್ತಿದೆ.

 Share: | | | | |


ತನ್ನದೇ ಬಸ್ಸಿನಡಿಗೆ ಬಿದ್ದು ಮಾಂಡವಿ ಬಸ್ ಮಾಲಕ ದಯಾನಂದ ಶೆಟ್ಟಿ ಮೃತ್ಯು

Posted by Vidyamaana on 2024-03-14 15:14:13 |

Share: | | | | |


ತನ್ನದೇ ಬಸ್ಸಿನಡಿಗೆ ಬಿದ್ದು ಮಾಂಡವಿ ಬಸ್ ಮಾಲಕ ದಯಾನಂದ ಶೆಟ್ಟಿ ಮೃತ್ಯು

ಉಡುಪಿ, ಮಾ.14: ತನ್ನದೇ ಬಸ್ಸಿನಡಿಗೆ ಬಿದ್ದು ಬಸ್ ಮಾಲಕರೊಬ್ಬರು ಸಾವನ್ನಪ್ಪಿದ ದಾರುಣ ಘಟನೆ ಮಣಿಪಾಲದಲ್ಲಿ ನಡೆದಿದೆ. ಮಾಂಡವಿ ಖಾಸಗಿ ಬಸ್ ಮಾಲೀಕ ದಯಾನಂದ ಶೆಟ್ಟಿ(65) ಮೃತರು. 

ಮಾಂಡವಿ ಸಂಸ್ಥೆ ಸುಮಾರು ವರ್ಷಗಳಿಂದ ಉಡುಪಿ ಜಿಲ್ಲೆಯಲ್ಲಿ ಬಸ್‌ ಸೇವೆ ನೀಡುತ್ತಿದ್ದು, ಇತ್ತೀಚಿಗೆ ಒಂದು ಬಸ್‌ ಕೆಟ್ಟು ನಿಂತಿತ್ತು. ಈ ಹಿನ್ನೆಲೆಯಲ್ಲಿ ಮಾಲಕ ದಯಾನಂದ ಶೆಟ್ಟಿ ಬಸ್ಸನ್ನು ಮಣಿಪಾಲದ 80 ಬಡಗಬೆಟ್ಟುವಿನ ಗ್ಯಾರೇಜ್‌ ಒಂದರಲ್ಲಿ ರಿಪೇರಿಗೆ ನೀಡಿದ್ದರು. 


ಬಸ್‌ ರಿಪೇರಿಗೆ ನೀಡಿ ಕೆಲವು ದಿನ ಕಳೆದ ಹಿನ್ನೆಲೆಯಲ್ಲಿ ದಯಾನಂದ ಶೆಟ್ಟಿ ನಿನ್ನೆ ( ಮಾರ್ಚ್ 13 ) ಬಸ್‌ ನೋಡಲೆಂದು ಗ್ಯಾರೇಜ್‌ಗೆ ತೆರಳಿದ್ದು ಮುಂಭಾಗದಲ್ಲಿ ನಿಂತಿದ್ದರು. ಈ ವೇಳೆ ಅವರನ್ನು ನೋಡದೆ ಬಸ್ಸನ್ನು ಏಕಾಏಕಿ ಚಲಾಯಿಸಿದ್ದು ದಯಾನಂದ ಶೆಟ್ಟಿ ಬಸ್ಸಿನ ಚಕ್ರದಡಿಗೆ ಸಿಲುಕಿದ್ದಾರೆ. ಗ್ಯಾರೇಜ್​ನ ಮೆಕ್ಯಾನಿಕ್ ಅಜಾಗರೂಕತೆಯಿಂದ ಎಂಜಿನ್ ಸ್ಟಾರ್ಟ್ ಮಾಡಿದ್ದರಿಂದ ಬಸ್ ಮುಂದಕ್ಕೆ ಚಲಿಸಿದೆ ಎನ್ನುವ ಆರೋಪ ಕೇಳಿಬಂದಿದೆ. ಕೂಡಲೇ ಸ್ಥಳದಲ್ಲಿದ್ದವರು ದಯಾನಂದ ಶೆಟ್ಟಿ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ಮಣಿಪಾಲ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಚಂದ್ರಯಾನ ಯಶಸ್ಸಿಗೆ ಗಲ್ಫ್ ಟೂರ್ಸ್ ಉಮ್ರಾ ಯಾತ್ರಾರ್ಥಿಗಳಿಂದ ಮದೀನಾದಲ್ಲಿ ವಿಶೇಷ ಪ್ರಾರ್ಥನೆ

Posted by Vidyamaana on 2023-08-23 11:47:14 |

Share: | | | | |


ಚಂದ್ರಯಾನ ಯಶಸ್ಸಿಗೆ  ಗಲ್ಫ್ ಟೂರ್ಸ್ ಉಮ್ರಾ ಯಾತ್ರಾರ್ಥಿಗಳಿಂದ ಮದೀನಾದಲ್ಲಿ  ವಿಶೇಷ ಪ್ರಾರ್ಥನೆ

ಸೌದಿ : ಪವಿತ್ರ ಉಮ್ರಾ ನಿರ್ವಹಣೆಯಲ್ಲಿರುವ ಆಗಸ್ಟ್ ತಿಂಗಳ ಗಲ್ಫ್ ಟೂರ್ಸ್ ಉಮ್ರಾ ಯಾತ್ರಾರ್ಥಿಗಳ ತಂಡವು ಭಾರತದ  ಬಹು ನಿರೀಕ್ಷಿತ್ ಚಂದ್ರಯಾನ _3  ವಿಕ್ರಮ್ ಲ್ಯಾಂಡರ್  ಗುರಿ ತುಲಪುವಂತಾಗಳು ವಿಶೇಷ ಪ್ರಾರ್ಥನೆ ನಡೆಸಿತು.

ಯಾತ್ರಾ ತಂಡದ ಚೀಫ್ ಅಮೀರ್ ಉಸ್ತಾದ ಸಿರಾಜುದ್ದೀನ್ ಫೈಝಿ ಈ ಸಂದರ್ಭದಲ್ಲಿ

ವಿಶೇಷ ಪ್ರಾರ್ಥನೆಗೆ ನೇತೃತ್ವ ನೀಡಿದರು.

 ಟೂರ್ಸ್ ಮಾಲಕರಾದ ಸುಲೈಮಾನ್ ಹಾಜಿ,ಇಸ್ಮಾಯಿಲ್ ಹಾಜಿ ಸೌತ್ ಇಂಡಿಯಾ,ಅಬ್ಬಾಸ್ ದಾರಿಮಿ ಕೆಲಿಂಜ,ಅಬ್ದುರ್ರಹ್ಮಾನ್ ಪೈಝಿ ಫಲಿಮಾರ್,ಖಾಲಿದ್ ಸಅದಿ ಬೇಂಗಿಲ,ಸೈದಾಲಿ ಮುಸ್ಲಿಯಾರ್, ಹಲವಾರು ಮೊಹಲ್ಲಾಗಳಿಂದ ಯಾತ್ರಾರ್ಥಿಗಳಾಗಿ ಬಂದ ಜಮಾಅತ್ ಸಮಿತಿ ಸಾರಥಿ ಗಳು, ವಿವಿಧ ಸಂಘ ಸಂಸ್ಥೆಗಳ ಯುವ ಕಾರ್ಯಕರ್ತರು ಸೇರಿದಂತೆ ಎರಡು ಯಾತ್ರಾ ತಂಡಗಳಲ್ಲಿದ್ದ ಸುಮಾರು ತೊಂಭತ್ತರಷ್ಟು ಯಾತ್ರಾರ್ಥಿಗಳು ಪಾಲ್ಗೊಂಡಿದ್ದರು.

ವೀಲಿಂಗ್ ಮಾಡಿ ವೃದ್ದನ ಬಲಿ ಪಡೆದ ಪಿಎಸ್‌ಐ ಪುತ್ರ!

Posted by Vidyamaana on 2023-09-17 14:21:32 |

Share: | | | | |


ವೀಲಿಂಗ್ ಮಾಡಿ ವೃದ್ದನ ಬಲಿ ಪಡೆದ ಪಿಎಸ್‌ಐ ಪುತ್ರ!

ನಂಜನಗೂಡು : ಪಿಎಸ್‌ಐ ಪುತ್ರನ ಪುಂಡಾಟಕ್ಕೆ‌ ಅಮಾಯಕ ವೃದ್ಧನೊಬ್ಬ ಬಲಿಯಾಗಿರುವ ಘಟನೆ ನಂಜನಗೂಡು ತಾಲೂಕಿನ ಇಮ್ಮಾವು ಗ್ರಾಮದ ಬಳಿ ನಡೆದಿದೆ.ಹುಳಿಮಾವು ಗ್ರಾಮದ 68 ವರ್ಷದ ಗುರುಸ್ವಾಮಿ ಮೃತ ವೃದ್ದನಾಗಿದ್ದಾನೆ. ಗುರುಸ್ವಾಮಿ ಹಸುಗಳನ್ನು ಮೇಯಿಸಿ ಮನೆಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.ಯುವಕ ಸೈಯಾದ್ ಐಮಾನ್ ವೀಲಿಂಗ್ ಮಾಡಿಕೊಂಡು ಬಂದು ವೃದ್ಧನಿಗೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿ ಹೊಡೆದ ಪರಿಣಾಮ ಗುರುಸ್ವಾಮಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.


ಸೈಯದ್ ಐಮಾನ್ ಮೈಸೂರಿನ ಉದಯಗಿರಿ ನಿವಾಸಿಯಾಗಿದ್ದಾನೆ. ಈ ಯುವಕ ನಂಜನಗೂಡು ಸಂಚಾರಿ ಪೊಲೀಸ್ ಠಾಣೆಯ ಪಿಎಸ್‌ಐ ಪುತ್ರನಾಗಿದ್ದು, ಕಳೆದ ಕೆಲ ದಿನಗಳ ಹಿಂದೆ ವೀಲಿಂಗ್ ವಿಚಾರಕ್ಕೆ ವಶಕ್ಕೆ ಪಡೆದು ದಂಡ ಹಾಕಲಾಗಿತ್ತು. ಇದಷ್ಟೆ ಅಲ್ಲದೆ ಈತನ ವಿರುದ್ಧ ಕಳ್ಳತನ ಆರೋಪ ಕೂಡ ಇತ್ತು. ಸದ್ಯ ಆರೋಪಿ‌ ಸೈಯದ್ ಐಮಾನ್ ಗೆ ಸಣ್ಣಪುಟ್ಟ ಗಾಯಗಳಾಗಿವೆ.

ಮೈಸೂರಿನ ಕೆಆರ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ನಮಗೆ ನ್ಯಾಯ ಕೊಡಿಸಿ ಎಂದು ಮೃತ ವೃದ್ಧನ ಕುಟುಂಬಸ್ಥರು ಆಗ್ರಹಿಸಿದ್ದಾರೆ. ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

5 ಮತ್ತು 8ನೇ ತರಗತಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸಲು ಹೈಕೋರ್ಟ್ ಗ್ರೀನ್ ಸಿಗ್ನಲ್ ಮಾ. 27ರಿಂದ ಪರೀಕ್ಷೆ ನಡೆಸಲು ಸೂಚನೆ

Posted by Vidyamaana on 2023-03-15 14:20:07 |

Share: | | | | |


5 ಮತ್ತು 8ನೇ ತರಗತಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸಲು ಹೈಕೋರ್ಟ್ ಗ್ರೀನ್ ಸಿಗ್ನಲ್  ಮಾ. 27ರಿಂದ ಪರೀಕ್ಷೆ ನಡೆಸಲು ಸೂಚನೆ

ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ 5 ಮತ್ತು 8ನೇ ತರಗತಿಗೆ ಇದೇ ಮಾರ್ಚ್ 27ರಿಂದ ಪಬ್ಲಿಕ್ ಪರೀಕ್ಷೆ ನಡೆಸಲು ರಾಜ್ಯ ಹೈಕೋರ್ಟ್‌ ಗ್ರೀನ್ ಸಿಗ್ನಲ್ ನೀಡಿದೆ.ಈ ಬಾರಿ ಪಬ್ಲಿಕ್ ಪರೀಕ್ಷೆ ನಡೆಸಬಾರದು ಎಂದು ಖಾಸಗಿ ಶಾಲೆಗಳ ಒಕ್ಕೂಟವು ಹೈಕೋರ್ಟ್‌ ಮೆಟ್ಟಿಲೇರಿತ್ತು. ಇದೀಗ ಕೋರ್ಟ್ ಆದೇಶದಿಂದ ಒಕ್ಕೂಟದ ನಿಲುವಿಗೆ ಹಿನ್ನಡೆಯಾದಂತಾಗಿದೆ.ನ್ಯಾ.ನರೇಂದರ್ ಹಾಗೂ ಅಶೋಕ್ ಕಿಣಗಿ ಅವರನ್ನೊಳಗೊಂಡ ವಿಭಾಗೀಯ ಪೀಠದಲ್ಲಿ ಬುಧವಾರ ಸಂಜೆ ವಿಚಾರಣೆ ನಡೆದು ಕೋರ್ಟ್ ಪರೀಕ್ಷೆಗೆ ಅನುಮತಿ ನೀಡಿದೆ. ಈ ಬಾರಿಯಿಂದಲೇ ಪಬ್ಲಿಕ್ ಪರೀಕ್ಷೆ ನಡೆಸುವ ನಿರ್ಧಾರವನ್ನು ಏಕಸದಸ್ಯ ಪೀಠ ರದ್ದುಪಡಿಸಿತ್ತು. ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು. ಅದರ ವಿಚಾರಣೆ ಎರಡು ದಿನಗಳ ಕಾಲ ನಡೆದು ಬುಧವಾರ ಸಂಜೆ ಕೋರ್ಟ್ ತನ್ನ ಅಭಿಪ್ರಾಯವನ್ನು ತಿಳಿಸಿದೆ.

ಮಂಗಳೂರು: ಜೆಡಿಎಸ್ ಮಹಿಳಾ ಘಟಕದ ಮಾಜಿ ಜಿಲ್ಲಾಧ್ಯಕ್ಷೆಯಾಗಿದ್ದ ಸುಮತಿ SDPI ಸೇರ್ಪಡೆ

Posted by Vidyamaana on 2023-06-22 01:51:24 |

Share: | | | | |


ಮಂಗಳೂರು: ಜೆಡಿಎಸ್ ಮಹಿಳಾ ಘಟಕದ ಮಾಜಿ ಜಿಲ್ಲಾಧ್ಯಕ್ಷೆಯಾಗಿದ್ದ ಸುಮತಿ SDPI ಸೇರ್ಪಡೆ

ಮಂಗಳೂರು : ಜೆಡಿಎಸ್ ಗೆ ಇತ್ತೀಚೆಗೆ ರಾಜೀನಾಮೆ ನೀಡಿದ್ದ ಸುಮತಿ ಹೆಗ್ಡೆ ಎಸ್.ಡಿ.ಪಿ.ಐ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.ಜೆಡಿಎಸ್ ಮಹಿಳಾ ಘಟಕದ ಮಾಜಿ ಜಿಲ್ಲಾಧ್ಯಕ್ಷೆಯಾಗಿದ್ದ ಸುಮತಿ ಅವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಬಳಿಕ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು.ಎಸ್.ಡಿ.ಪಿ. ಐ ಪಕ್ಷದ ಸಂಸ್ಥಾಪನಾ ದಿನಾಚರಣೆ ಸಂಬಂಧಿಸಿದ ನಾಯಕರ ಸ್ನೇಹ ಸಮ್ಮಿಲನ ಕಾರ್ಯಕ್ರಮದಲ್ಲಿ ಸುಮತಿ ಹೆಗ್ಡೆ ಎಸ್.ಡಿ.ಪಿ.ಐಗೆ ಸೇರ್ಪಡೆಗೊಂಡರು.


ಸುಮತಿ ಹೆಗ್ಡೆಯವರೊಂದಿಗೆ ಮಹಿಳಾ ಜೆಡಿಎಸ್ ಮಾಜಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕವಿತಾ, ಜೆಡಿಎಸ್ ಮಂಗಳೂರು ನಗರ ಕಾರ್ಯದರ್ಶಿ ಅಲ್ತಾಫ್ ತುಂಬೆ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ ಎಂದು ವರದಿಯಾಗಿದೆ.

ಕಾರ್ಯಕ್ರಮದಲ್ಲಿ ಎಸ್.ಡಿ.ಪಿ.ಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಮಹಮ್ಮದ್ ತುಂಬೆ ,ರಾಷ್ಟ್ರೀಯ ಕಾರ್ಯದರ್ಶಿಗಳಾದ ರಿಯಾಝ್ ಫರಂಗಿಪೇಟೆ, ಅಲ್ಫೋನ್ಸ್ ಫ್ರಾಂಕೊ, ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು, ರಾಜ್ಯ ಕಾರ್ಯದರ್ಶಿ ಅಶ್ರಫ್ ಮಾಚಾರ್ ,ರಾಜ್ಯ ಮುಖಂಡರಾದ ಅಥಾವುಲ್ಲ ಜೋಕಟ್ಟೆ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು.

ಕಡಬ : ಹೊಳೆಗೆ ಬಿದ್ದು ಕೃಷಿಕ ಕೃಷ್ಣಪ್ಪ ಮೃತ್ಯು

Posted by Vidyamaana on 2023-07-10 16:28:58 |

Share: | | | | |


ಕಡಬ : ಹೊಳೆಗೆ ಬಿದ್ದು ಕೃಷಿಕ ಕೃಷ್ಣಪ್ಪ ಮೃತ್ಯು

ಕಡಬ : ಹೊಳೆನೀರಿಗೆ ಬಿದ್ದು ಕೃಷಿಕ ಸಾವನ್ನಪ್ಪಿರುವ ಘಟನೆ ಕಡಬ ಸಮೀಪದ ಇಚ್ಚಂಪಾಡಿ ಗ್ರಾಮದಲ್ಲಿ ನಡೆದಿದೆ.ಇಚ್ಚಂಪಾಡಿ ಗ್ರಾಮದ ಕುಡಾಲ ನಿವಾಸಿ ಕೃಷ್ಣಪ್ಪ ಗೌಡ(ಕಿಟ್ಟಣ್ಣ) ಮೃತ ದುರ್ದೈವಿ.

ಜು.9ರಂದು ಮಧ್ಯಾಹ್ನ ಇಚ್ಚಂಪಾಡಿಯ ಕೊಕ್ಕೊ ಕಾಡಿನ ಹೊಳೆಬದಿಗೆ ಹೋದವರು ಸಂಜೆಯಾದರೂ ಮನೆಗೆ ಬಂದಿರಲಿಲ್ಲ. ಈ ಹಿನ್ನೆಲೆಯಲ್ಲಿ ಮನೆಯವರು ಹೊಳೆಯಲ್ಲಿ ಹುಡುಕಾಟ ನಡೆಸಿದ್ದ ವೇಳೆ ಅವರ ಚಪ್ಪಲಿ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ರಾತ್ರಿ ತನಕ ಹೊಳೆ ಬದಿ ಹುಡುಕಾಟ ನಡೆಸಿದ್ದರೂ ಯಾವುದೇ ಸುಳಿವು ದೊರೆತಿರಲಿಲ್ಲ.

ಜು.10ರಂದು ಬೆಳಿಗ್ಗೆ ಹೊಳೆಬದಿ ಮತ್ತೆ ಹುಡುಕಾಟ ನಡೆಸಿದಾಗ ಗುಂಡ್ಯಹೊಳೆ ಸೇರುವಲ್ಲಿ ಮೃತದೇಹ ಪತ್ತೆಯಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



Leave a Comment: