ಮೃತಪಟ್ಟ ಗರ್ಭಿಣಿ ಮನೆಗೆ ಭೇಟಿ ನೀಡಿದ ಪುತ್ತಿಲ

ಸುದ್ದಿಗಳು News

Posted by vidyamaana on 2023-06-29 12:19:28 |

Share: | | | | |


ಮೃತಪಟ್ಟ ಗರ್ಭಿಣಿ ಮನೆಗೆ ಭೇಟಿ ನೀಡಿದ ಪುತ್ತಿಲ

ಪುತ್ತೂರು: ಹೊಸ ಉದ್ಯಮವೊಂದರ ಉದ್ಘಾಟನಾ ಕಾರ್ಯಕ್ರಮ ಮುಗಿಸಿ ಹಿಂದಿರುಗಿ ಬರುವಾಗ ಅರುಣ್ ಕುಮಾರ್ ಪುತ್ತಿಲ ಹೆರಿಗೆಗೆ ದಾಖಲಾಗಿದ್ದ ಗರ್ಭಿಣಿ ಮೃತಪಟ್ಟ ಮನೆಗೆ ತೆರಳಿ ಸಾಂತ್ವನ ಹೇಳಿದರು.


ಕಾರ್ಯಕ್ರಮ ಮುಗಿಸಿ ಬರುವಾಗ ರಸ್ತೆಯಲ್ಲಿ ಜನ ಸೇರಿದ್ದನ್ನು ನೋಡಿ ವಿಚಾರಿಸಿದಾಗ ಮೃತಪಟ್ಟ ಬಗ್ಗೆ ತಿಳಿದುಬಂದಿದ್ದು,  ನಂತರ ಮನೆಗೆ ತೆರಳಿ ಸಾಂತ್ವನ ಹೇಳಿದರು. 

ಶೇಕಮಲೆ ಬೊಳ್ಳಾಡಿ ಇಬ್ರಾಹಿಂ ಎಂಬವರ ಪತ್ನಿ 9 ತಿಂಗಳ ಗರ್ಭಿಣಿ ಹಸೀನಾ (29) ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಾಗಿದ್ದರು.  ಜೂ.28 ರಂದು ಹೆರಿಗೆ ಸಂದರ್ಭ ಹೃದಯಾಘಾತದಿಂದ ನಿಧನರಾದರು. 

ಹೆರಿಗೆಯಲ್ಲಿ ಮಗು ಜೀವಂತವಾಗಿದ್ದು, ಎಜೆ ಆಸ್ಪತ್ರೆಯ ವೈದ್ಯರಿಗೆ ಕರೆ ಮಾಡಿ ಅರುಣ್ ಪುತ್ತಿಲರು ಮಗುವಿನ ಆರೋಗ್ಯ ವಿಚಾರಿಸಿದರು. 

ಈ ಹಿಂದೆಯೂ ಅಪಘಾತ ನಡೆದ ಸಂದರ್ಭ ಧರ್ಮ ನೋಡದೆ ತನ್ನದೇ  ಕಾರಿನಲ್ಲಿ ರಕ್ತದ ಮಡುವಿನಲ್ಲಿದ್ದ  ಗಾಯಳುಗಳನ್ನು ಹಾಕಿಕೊಂಡು ಹೋದ ಉದಾಹರಣೆಯೂ ಇದೆ. ಅವರ ಕಾರಿನಲ್ಲಿ ಅಪಘಾತಗೊಂಡ  ಮುಸ್ಲಿಂ ಮಗುವೊಂದು ಮೃತಪಟ್ಟಿದೆ. 

ಮೊನ್ನೆಯಷ್ಟೇ ಮಂಗಳೂರಿನಿಂದ ಬರುತಿದ್ದಾಗ ರಸ್ತೆ ಬದಿಯ ಚರಂಡಿಗೆ ಬಿದ್ದಿದ್ದ ಕಾರನ್ನು ಮೇಲೆತ್ತಲು ಸಹಾಯ ಮಾಡಿದ್ದರು.

 Share: | | | | |


ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಎನ್ಎಸ್ಎಸ್ನಿಂದ ೨೦೨೨-೨೩ರ ಕಾರ್ಯಾಚಟುವಟಿಕೆಗಳಿಗೆ ಚಾಲನೆ

Posted by Vidyamaana on 2022-12-15 10:02:15 |

Share: | | | | |


ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಎನ್ಎಸ್ಎಸ್ನಿಂದ ೨೦೨೨-೨೩ರ ಕಾರ್ಯಾಚಟುವಟಿಕೆಗಳಿಗೆ ಚಾಲನೆ

    ಪುತ್ತೂರು: ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳಿಗೆ ಲೋಕಸೇವೆಯ ಮೂಲಕ ರಾಷ್ಟç ನಿರ್ಮಾಣದ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವ ಅನುಭವವನ್ನು ನೀಡುವುದು ಹಾಗೂ ಇದರೊಂದಿಗೆ ರಾಷ್ಟ್ರಪ್ರೇಮ ಮತ್ತು ಸೇವಾ ಭಾವನೆಗಳನ್ನು ಬೆಳೆಸುವ ಗುರಿಯನ್ನು ಅದು ಹೊಂದಿದೆ. ವಿದ್ಯಾರ್ಥಿಗಳ ಬದುಕಿಗೊಂದು ಸ್ಪಷ್ಟ ಸ್ವರೂಪವನ್ನು ನೀಡುವ ಜೊತೆಗೆ ವಿದ್ಯಾರ್ಥಿಗಳ ವ್ಯಕ್ತಿತ್ವವು ಎನ್ಎಸ್ಎಸ್ನಿಂದ ಅಭಿವೃದ್ಧಿಯಾಗುತ್ತದೆ ಎಂದು ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಹರಿಪ್ರಸಾದ್ ಎಸ್ ಹೇಳಿದರು.


ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಎನ್ಎಸ್ಎಸ್ ಘಟಕದ ೨೦೨೨-೨೩ರ ಕಾರ್ಯಾಚಟುವಟಿಕೆಗಳಿಗೆ ಚಾಲನೆ ನೀಡಿ, ಯಶಸ್ವಿ ಜೀವನಕ್ಕೆ ದಾರಿದೀಪವಾಗಿ ರಾಷ್ಟ್ರೀಯ ಸೇವಾ ಯೋಜನೆ ಎಂಬ ವಿಷಯದಲ್ಲಿ ಉಪನ್ಯಾಸ ನೀಡಿದರು.


ವಿದ್ಯಾರ್ಥಿಗಳು ಹೇಗೆ ತಮ್ಮ ಜೀವನವನ್ನು ರೂಪಿಸಬೇಕೆಂದು ಬದುಕಲು ಕಲಿಸುವ ಗರಡಿಮನೆಯಾಗಿ ಇಂದು ಎನ್ಎಸ್ಎಸ್ ಕಾರ್ಯ ನಿರ್ವಹಿಸುತ್ತಿದೆ. ಎನ್ಎಸ್ಎಸ್ ಘಟಕಗಳು ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ, ಸಾಮಾಜಿಕ ಜವಾಬ್ದಾರಿ, ನಾಯಕತ್ವಗುಣ, ಸಾಮಾಜಿಕ ಪ್ರಜ್ಞೆಯನ್ನು ಬೆಳೆಸುವ ಮೂಲಕ ಉತ್ತಮ ಪ್ರಜೆಯನ್ನು ರೂಪಿಸುವ ಮಹತ್ತರ ಕಾರ್ಯವನ್ನು ಮಾಡುತ್ತಿದೆ ಎಂದರು.


ಅಧ್ಯಕ್ಷತೆ ವಹಿಸಿದ್ದ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಪ್ರಾಂಶುಪಾಲೆ ಅಕ್ಷತಾ ಎ.ಪಿ. ಮಾತನಾಡಿ, ಕಲಿಕಾ ಸಮಯದಲ್ಲಿ ವಿದ್ಯಾರ್ಥಿಯು ಪಠ್ಯೇತರ ಚಟುವಟಿಕೆಗಳಲ್ಲಿ ತನ್ನನ್ನು ತೊಡಗಿಕೊಂಡು ಅಲ್ಲಿ ಸಿಗುವ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡರೆ ಆತನ ಸರ್ವತೋಮುಖ ಅಭಿವೃದ್ಧಿ ಸಾಧ್ಯ ಎನ್ನುವುದಕ್ಕೆ ಜೀವಂತ ನಿದರ್ಶನವೇ ಎನ್.ಎಸ್.ಎಸ್. ನನಗಲ್ಲ ನಿನಗೆ ಎಂಬ ಧ್ಯೇಯ ವಾಕ್ಯದೊಂದಿಗೆ ಸೇವೆಯ ಮೂಲಕ ಶಿಕ್ಷಣ - ಶಿಕ್ಷಣದ ಮೂಲಕ ಸೇವೆ ಎಂಬ ಮೂಲಮಂತ್ರವನ್ನು ಎನ್.ಎಸ್.ಎಸ್. ಹೊಂದಿದೆ ಎಂದ ಅವರು ಎನ್ಎಸ್ಎಸ್ ಘಟಕದ ಎಲ್ಲಾ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಸೂಚಿಸಿದರು.


ಇದೇ ವೇಳೆ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಎನ್ಎಸ್ಎಸ್ ಘಟಕದ `ಸೇವಾಬಿಂಬ ಬಿತ್ತಿಪತ್ರಿಕೆಯ ಈ ಶೈಕ್ಷಣಿಕ ವರ್ಷದ ಮೊದಲ ಸಂಚಿಕೆಯನ್ನು ಅನಾವರಣಗೊಳಿಸಲಾಯಿತು. ವಿವೇಕಾನಂದ ಕಾನೂನು ಮಹಾವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜಕರಾದ ಲಕ್ಷ್ಮೀಕಾಂತ ಎ ಪ್ರಾಸ್ತವಿಕವಾಗಿ ಮಾತನಾಡಿ, ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಎನ್ಎಸ್ಎಸ್ ಘಟಕದ ಧ್ಯೇಯ ಹಾಗೂ ಕಾರ್ಯಕ್ರಮಗಳ ಬಗ್ಗೆ ತಿಳಿಸಿದರು.


ನಂತರ ಎನ್.ಎಸ್.ಎಸ್ ಸ್ವಯಂಸೇವಕರಿಗೆ "ಎನ್.ಎಸ್.ಎಸ್ ಸ್ವಯಂಸೇವಕರ ಕರ್ತವ್ಯಗಳು ಮತ್ತು ಅವಕಾಶಗಳು" ಎಂಬ ವಿಷಯದ ಕುರಿತು ವಿಶೇಷ ಕಾರ್ಯಾಗಾರ ನಡೆಯಿತು. ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಹರಿಪ್ರಸಾದ್ ಎಸ್ ಹಾಗೂ ಬಿಕಾಂ ವಿದ್ಯಾರ್ಥಿ ಸಾರ್ಥಕ್ ಟಿ ಕಾರ್ಯಾಗಾರ ನಡೆಸಿದರು. ಎನ್ಎಸ್ಎಸ್ ಸ್ವಯಂಸೇವಕರಾದ ಅಭಿಜಿತ್ ವಿಭಾಸ್ ಸ್ವಾಗತಿಸಿ, ಎನ್ಎಸ್ಎಸ್ ಘಟಕದ ನಾಯಕಿ ವೃಂದಾ ಭಂಡಾರಿ ವಂದಿಸಿದರು. ಕಾರ್ಯಕ್ರಮವನ್ನು ಸ್ವಯಂಸೇವಕರಾದ ನವನೀತ್ ಡಿ.ಕೆ ಹಾಗೂ ನೇಮಿಕಾ ಸಾಂತ ನಿರೂಪಿಸಿದರು. ಕಾರ್ಯಕ್ರಮದಲ್ಲಿ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಬೋಧಕ- ಬೋಧಕೇತರ ಸಿಬ್ಬಂದಿಗಳು ಹಾಗೂ ಎನ್ಎಸ್ಎಸ್ ಸ್ವಯಂಸೇವಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಬಿಗ್​ಬಾಸ್​ನಲ್ಲಿ ಮತ್ತೊಂದು ಅವಾಂತರ;​ ಸ್ಪರ್ಧಿ ತನಿಷಾ ಕುಪ್ಪಂಡ ವಿರುದ್ಧ ಪ್ರಕರಣ ದಾಖಲು

Posted by Vidyamaana on 2023-11-15 05:58:49 |

Share: | | | | |


ಬಿಗ್​ಬಾಸ್​ನಲ್ಲಿ ಮತ್ತೊಂದು ಅವಾಂತರ;​ ಸ್ಪರ್ಧಿ ತನಿಷಾ ಕುಪ್ಪಂಡ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು : ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್​ ಬಾಸ್​ ಸೀಸನ್​-10 ಈ ಬಾರಿ ಒಂದಿಲ್ಲೊಂದು ವಿಚಾರಕ್ಕೆ ಹೆಚ್ಚು ಸದ್ದು ಮಾಡುತ್ತಿದ್ದು, ಇದೀಗ ಬಿಗ್ ಬಾಸ್​ ಮನೆಯ ಸ್ಪರ್ಧಿ ವಿರುದ್ಧ ಎರಡನೇ ಪ್ರಕರಣ ದಾಖಲಾಗಿದೆ. ಈ ಹಿಂದೆ ಹುಲಿ ಉಗುರು ಧರಿಸಿದ್ದರೆಂಬ ಕಾರಣಕ್ಕೆ ಬಿಗ್​ ಬಾಸ್​ ಸ್ಪರ್ಧಿ ವರ್ತೂರು ಸಂತೋಷ್​ ಅವರನ್ನು ಬಂಧಿಸಲಾಗಿತ್ತು.ಇದೀಗ ಬಿಗ್​ಬಾಸ್​ ಸ್ಪರ್ಧಿ, ನಟಿ ತನಿಷಾ ಕುಪ್ಪಂಡ ಅವಹೇಳನಕಾರಿಯಾಗಿ ಮಾತನಾಡಿದ್ದಾರ ಎಂದು ಆರೋಪಿಸಿ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಎಸ್​ಸಿ-ಎಸ್​ಟಿ ದೌರ್ಜನ್ಯ ತಡೆ ಕಾಯ್ದೆಯಡಿ ನಟಿ ತನಿಷಾ ವಿರುದ್ಧ ಕುಂಬಳಗೋಡು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.


ತನಿಷಾ, ವಡ್ಡ ಎಂಬ ಪದ ಬಳಸೂವ ಮೂಲಕ ಭೋವಿ ಸಮುದಾಯಕ್ಕೆ ಅಪಮಾನ ಎಸಗಿದ್ದಾರೆ. ಭೋವಿ ಸಮುದಾಯವು ಪರಿಶಿಷ್ಟ ಜಾತಿಗೆ ಸೇರಿದೆ ಎಂದು ತಿಳಿದೂ ಸಹ ಅಪಮಾನ ಮಾಡಲಾಗಿದೆ. ತನಿಷಾ ಅವರನ್ನು ಈ ಕೂಡಲೇ ಬಿಗ್​ಬಾಸ್ ಮನೆಯಿಂದ ಹೊರಗೆ ಕಳಿಸಬೇಕು, ಪೊಲೀಸರು ತನಿಷಾರನ್ನು ಬಂಧಿಸಬೇಕು. ಭೋವಿ ಸಮುದಾಯಕ್ಕೆ ಮಾಡಲಾದ ಅಪಮಾನದ ವಿರುದ್ಧ ಎಲ್ಲ ತಾಲ್ಲೂಕು ಕೇಂದ್ರಗಳಲ್ಲಿ ಭೋವಿ ಸಮುದಾಯವು ಪ್ರತಿಭಟನೆ ನಡೆಸಲಿದೆ ಎಂದು ಉಲ್ಲೇಖಿಸಲಾಗಿದೆ. ಇತ್ತೀಚಿನ ಸಂಚಿಕೆಯೊಂದರಲ್ಲಿ ನಟಿ ತನಿಷಾ ಡ್ರೋನ್​ ಪ್ರತಪಾ​ ಅವರೊಂದಿಗೆ ಮಾತನಾಡುವ ವೇಳೆ ಬೋವಿ ಜನಾಂಗದ ಬಗ್ಗೆ ಅವಮಾನಕರ ಪದ ಬಳಸಿದ್ದಾರೆ ಎಂದು ಆರೋಪಿಸಿ ದೂರು ನೀಡಲಾಗಿದೆ. ಅಖಿಲ ಕರ್ನಾಟಕ ಬೋವಿ ಸಮಾಜದ ರಾಜ್ಯಾಧ್ಯಕ್ಷೆ ಪಿ.ಪದ್ಮಾ ಎಂಬುವವರು ಕುಂಬಳಗೋಡು ಪೊಲೀಸ್​ ಠಾಣೆಯಲ್ಲಿ ಜಾತಿ ನಿಂದನೆ (Atrocity), ಎಸ್​ಸಿ-ಎಸ್​ಟಿ ದೌರ್ಜನ್ಯ ತಡೆ ಕಾಯ್ದೆಯಡಿ ದೂರು ದಾಖಲಿಸಿದ್ದಾರೆ. 


ಖಾಸಗಿ ವಾಹಿನಿಯ ಬಿಗ್ ಬಾಸ್ ರಿಯಾಲಿಟಿ ಶೋ ನಲ್ಲಿ ಅವಹೇಳನಕಾರಿ ಪದ ಬಳಕೆ ಆರೋಪ ಮಾಡಲಾಗಿದೆ. ಪದಬಳಕೆ ಮಾಡಿ ಬೋವಿ ಜನಾಂಗಕ್ಕೆ ಅವಮಾನ ಮಾಡಿದ್ದಾರೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಪುತ್ತೂರು ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿಯರೊಂದಿಗೆ ಅನುಚಿತ ವರ್ತನೆ: ಕಡಬ ಮೂಲದ ಪ್ರವೀಣ್ ಪೊಲೀಸ್ ವಶಕ್ಕೆ

Posted by Vidyamaana on 2023-07-19 15:11:32 |

Share: | | | | |


ಪುತ್ತೂರು ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿಯರೊಂದಿಗೆ ಅನುಚಿತ ವರ್ತನೆ: ಕಡಬ ಮೂಲದ ಪ್ರವೀಣ್ ಪೊಲೀಸ್ ವಶಕ್ಕೆ

ಪುತ್ತೂರು; ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿಯರೊಂದಿಗೆ ಅನುಚಿತವಾಗಿ ವರ್ತಿಸಿದ ಯುವಕನನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಪುತ್ತೂರಿನ ಕಲ್ಲಿಮಾರು ಎಂಬಲ್ಲಿ ನಡೆದಿದೆ.


ನಿನ್ನೆ ಬೆಳಿಗ್ಗೆ ಎಂದಿನಂತೆ ವಿದ್ಯಾರ್ಥಿನಿಯರಿಬ್ಬರು ಮನೆಯಿಂದ ಕಾಲೇಜಿಗೆ ತೆರಳುತ್ತಿದ್ದಾಗ ದಾರಿಯಲ್ಲಿ ಬಂದ ಯುವಕನೊಬ್ಬ ವಿದ್ಯಾರ್ಥಿನಿಯರೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ. ಆತನಿಂದ ತಪ್ಪಿಸಿಕೊಂಡು ಬಂದ ವಿದ್ಯಾರ್ಥಿನಿಯರು ಕಾಲೇಜಿಗೆ ಬಂದು ಕಾಲೇಜಿನ ಉಪನ್ಯಾಸಕಿಗೆ ಮಾಹಿತಿ ನೀಡಿದ್ದಾರೆ.


ಇನ್ನು ಈ ಯುವಕ ಕಡಬ ತಾಲೂಕಿನ ಬೆಳಂದೂರು ಮೂಲದ ಪ್ರವೀಣ್ ಯಾನೆ ಸೀತಾರಾಮ ಎನ್ನಲಾಗಿದೆ. ಈ ಬಗ್ಗೆ ಕಾಲೇಜಿನ ಉಪನ್ಯಾಸಕಿ ನೀಡಿದ ದೂರಿನಂತೆ ಪುತ್ತೂರು ನಗರ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ

ಆ.14 : ವಿದ್ಯಾರಶ್ಮಿಸಮೂಹ ಶಿಕ್ಷಣ ಸಂಸ್ಥೆಗಳ 12ನೇ ವರ್ಷದ ಸ್ಥಾಪಕರ ದಿನಾಚರಣೆ ಶೀಂಟೂರು ಸ್ಮೃತಿ 2023

Posted by Vidyamaana on 2023-08-08 03:44:30 |

Share: | | | | |


ಆ.14 : ವಿದ್ಯಾರಶ್ಮಿಸಮೂಹ ಶಿಕ್ಷಣ ಸಂಸ್ಥೆಗಳ 12ನೇ ವರ್ಷದ ಸ್ಥಾಪಕರ ದಿನಾಚರಣೆ  ಶೀಂಟೂರು ಸ್ಮೃತಿ 2023

ಪುತ್ತೂರು: ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ 12ನೇ ವರ್ಷದ ಸ್ಥಾಪಕರ ದಿನಾಚರಣೆ : ಶೀಂಟೂರು ಸ್ಮೃತಿ-2023" ಆ.14 ಸೋಮವಾರ ಬೆಳಿಗ್ಗೆ 10 ಗಂಟೆಗೆ ವಿದ್ಯಾರಶ್ಮಿ ವಿದ್ಯಾಲಯದ ವಿದ್ಯಾಚೇತನ ಸಭಾಂಗಣದಲ್ಲಿ ನಡೆಯಲಿದೆ ಎಂದು ವಿದ್ಯಾರಶ್ಮಿ ವಿದ್ಯಾಲಯದ ಸಂಚಾಲಕ ಸವಣೂರು ಸೀತಾರಾಮ ರೈ ಹೇಳಿದರು.


ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸ್ವತಃ ಸೇನಾನಿ, ಶಿಕ್ಷಕರೂ ಆಗಿದ್ದ ದಿ.ಶೀಂಟೂರು ಆದರ್ಶ ಕೃಷಿಕರೂ ಆಗಿದ್ದರು. ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳು ಅವರು ಕಂಡಿದ್ದ ಕನಸ್ಸಾಗಿತ್ತು.ಈ ನಿಟ್ಟಿನಲ್ಲಿ ಅವರ ಸ್ಮೃತಿಯನ್ನು ಪ್ರತೀ ವರ್ಷ ಹಮ್ಮಿಕೊಂಡು ಬರಲಾಗುತ್ತಿದೆ ಎಂದು ತಿಳಿಸಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಹಿಸಲಿದ್ದು, ಭಾರತೀಯ ನೌಕಾದಳದ ನಿವೃತ್ತ ಸೇನಾಧಿಕಾರಿ ವಿಕ್ರಂ ದತ್ತಾ ಅವರನ್ನು ಮುಂಬಯಿ ಹೇರಂಭ ಇಂಡಸ್ಟ್ರೀಸ್ ಅಧ್ಯಕ್ಷ ಕನ್ಯಾನ ಸದಾಶಿವ ಶೆಟ್ಟಿ ಸನ್ಮಾನಿಸುವರು.ಮಂಗಳೂರು ಕಾಲೇಜ್ ಆಫ್ ಫಿಷರೀಸ್ ನ ನಿವೃತ್ತ ಡೈರೆಕ್ಟರ್ ಆಫ್ ಇನ್ ಸ್ಟ್ರಕ್ಷನ್ ಪ್ರೊ.ಡಾ.ಡಿ.ಎಸ್.ಶೇಷಪ್ಪ ಶೀಂಟೂರು ಸ್ಮರಣೆ ಮಾಡುವರು. ಅತಿಥಿಗಳಾಗಿ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಗುಜರಾತ್ ಗ್ರೀನ್ ಹೀರೋ ಆಪ್ ಇಂಡಿಯಾದ ಸಹಸಂಸ್ಥಾಪಕ ಡಾ.ಆರ್.ಕೆ.ನಾಯರ್, ದುಬೈ ಉದ್ಯಮಿ ಅಶ್ರಫ್ ಶಾ ಮಾಂತೂರು ದುಬೈ ಪಾಲ್ಗೊಳ್ಳಲಿದ್ದಾರೆ. ಸವಣೂರು ಎಸ್ಎನ್ ಆರ್ ರೂರಲ್ ಎಜ್ಯುಕೇಶನ್ ಟ್ರಸ್ಟ್ ವಿಶ್ವಸ್ಥ ಎನ್.ಸುಂದರ ರೈ ಸವಣೂರು, ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಅಶ್ವಿನ್ ಎಲ್. ಶೆಟ್ಟಿ ಗೌರವ ಉಪಸ್ಥಿತರಿರುವರು ಎಂದು ಅವರು ತಿಳಿಸಿದರು.ಶೀಂಟೂರು ಸ್ಮೃತಿ ಕಾರ್ಯಕ್ರಮದ ಅಂಗವಾಗಿ ವಿದ್ಯಾರಶ್ಮಿ ವಿದ್ಯಾಲಯದ ಆರ್ಥಿಕವಾಗಿ ಹಿಂದುಳಿದ ಕುಟುಂಬದ ಪ್ರತಿಭಾನ್ವಿತ 10 ವಿದ್ಯಾರ್ಥಿಗಳಿಗೆ ತಲಾ 5 ಸಾವಿರ ರೂ. ಶೀಂಟೂರು ಶಿಷ್ಯ ವೇತನ ವಿತರಿಸಲಾಗುವುದು ಎಂದು ತಿಳಿಸಿದರು.


ಪತ್ರಿಕಾಗೋಷ್ಠಿಯಲ್ಲಿ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಅಶ್ವಿನ್ ಎಲ್. ಶೆಟ್ಟಿ, ಸವಣೂರು ಎಸ್ ಎನ್ ಆರ್ ರೂರಲ್ ಎಜ್ಯುಕೇಶನ್ ಟ್ರಸ್‌ಟ್ ಟ್ರಸ್ಟಿ ಎನ್.ಸುಂದರ ರೈ, ವಿದ್ಯಾರಶ್ಮಿ ವಿದ್ಯಾಲಯದ ಪ್ರಾಂಶುಪಾಲ ಸೀತಾರಾಮ ಕೇವಳ, ಸವಣೂರು ಪ್ರಥಮದರ್ಜೆ ಕಾಲೇಜು ಉಪಪ್ರಾಂಶುಪಾಲ ಎಂ.ಶೇಷಗಿರಿ ಉಪಸ್ಥಿತರಿದ್ದರು.

ಸುಬ್ರಹ್ಮಣ್ಯದಲ್ಲಿ ನವವಿವಾಹಿತ ಸಿಡಿಲಿನ ಹೊಡೆತಕ್ಕೆ ಬಲಿ

Posted by Vidyamaana on 2024-05-03 22:55:41 |

Share: | | | | |


ಸುಬ್ರಹ್ಮಣ್ಯದಲ್ಲಿ ನವವಿವಾಹಿತ ಸಿಡಿಲಿನ ಹೊಡೆತಕ್ಕೆ ಬಲಿ

ಸುಬ್ರಮಣ್ಯ; ಎ 18 ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ ಘಟನೆ ಕಡಬ ತಾಲೂಕಿನ ಸುಬ್ರಹ್ಮಣ್ಯದಲ್ಲಿ ಮೇ 3 ರ ಸಂಜೆ ನಡೆದಿದೆ.ಸುಬ್ರಹ್ಮಣ್ಯ ಗ್ರಾಮದ ಹೊಸೋಳಿಕೆ ಪರ್ವತಮುಖಿ ನಿವಾಸಿ ದಿ ಸಾಂತಪ್ಪ ಗೌಡ ರವರ ಪುತ್ರ ಸೋಮ ಸುಂದರ್ (34) ಮೃತ ದುರ್ದೈವಿ.

ಬಾಲಕಿಯನ್ನು ಕೊಂದು ಆಕೆಯ ರುಂಡದೊಂದಿಗೆ ಪರಾರಿಯಾಗಿದ್ದ ಆರೋಪಿ ಪ್ರಕಾಶ್ ಆತ್ಮಹತ್ಯೆ ಮಾಡಿಕೊಂಡಿಲ್ಲ: SP ಕೆ.ರಾಮರಾಜನ್

Posted by Vidyamaana on 2024-05-11 07:03:21 |

Share: | | | | |


ಬಾಲಕಿಯನ್ನು ಕೊಂದು ಆಕೆಯ ರುಂಡದೊಂದಿಗೆ ಪರಾರಿಯಾಗಿದ್ದ ಆರೋಪಿ ಪ್ರಕಾಶ್ ಆತ್ಮಹತ್ಯೆ ಮಾಡಿಕೊಂಡಿಲ್ಲ: SP ಕೆ.ರಾಮರಾಜನ್

ಕೊಡಗು: ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನಲ್ಲಿ ಬಾಲಕಿಯನ್ನು ಕೊಂದು ಆಕೆಯ ರುಂಡದೊಂದಿಗೆ ಪರಾರಿಯಾಗಿದ್ದ ಆರೋಪಿ ಮೊನ್ನಂಡ ಪ್ರಕಾಶ್ (33) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಸುದ್ದಿಯಾಗಿತ್ತು. ಸ್ಥಳೀಯ ಮೂಲಗಳೂ ಆರೋಪಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆಂದು ತಿಳಿಸಿತ್ತು. ಆದರೆ ಈ ಸುದ್ದಿ ಖಚಿತಗೊಂಡಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ತಿಳಿಸಿದ್ದಾರೆ.



Leave a Comment: