ನೆಟ್ಟೇ ಕಮ್ಮಿ ಆಪುಂಡು ನನ ಬರೋಡ್ಚಿ.. ಎಂದು ಹೇಳಿ ಮದ್ದು ಕೊಡ್ತಿದ್ದ ನರಸಿಂಹ ಭಟ್ ರಿಟೈರ್ಡ್

ಸುದ್ದಿಗಳು News

Posted by vidyamaana on 2023-07-10 07:10:00 | Last Updated by Vidyamaana on 2023-09-05 06:51:23

Share: | | | | |


ನೆಟ್ಟೇ ಕಮ್ಮಿ ಆಪುಂಡು ನನ ಬರೋಡ್ಚಿ.. ಎಂದು ಹೇಳಿ ಮದ್ದು ಕೊಡ್ತಿದ್ದ ನರಸಿಂಹ ಭಟ್ ರಿಟೈರ್ಡ್

ಪುತ್ತೂರು: “ನೆಟ್ಟೇ ಕಮ್ಮಿ. ನನ ಬರೋಡ್ಚಿ…”

ಹೀಗೆ ಹೇಳಿ ಔಷಧಿ ನೀಡಿದರೆಂದರೆ, ಯಾರದೇ ರೋಗವಾದರೂ ವಾಸಿಯಾಗಲೇಬೇಕು. ಆಸ್ಪತ್ರೆಗೆ ಹೋಗಿ ತಾಸುಗಟ್ಟಲೇ ಕಾಯಬೇಕೆಂದಿಲ್ಲ. ಹೆದರಿಕೆಯಾಗುವ ಬಿಲ್ ಕೂಡ ಇಲ್ಲ. ಯಾರೇ ಬಂದರೂ ಅವರ ನಗುವೇ ದಿವ್ಯೌಷಧ.

ಇದು ಎರಡೇ ಸಾಲಿನಲ್ಲಿ ವಿವರಣೆ ಕೊಡಬಹುದಾದ ಕಾಂಪೌಂಡರ್ ಖ್ಯಾತಿಯ ನರಸಿಂಹ ಭಟ್ ಅವರ ಪರಿಚಯ. ತನ್ನ 16ನೇ ವಯಸ್ಸಿಗೇ ಡಾ. ಶಿವರಾಮ ಭಟ್ ಅವರ ಜೊತೆಗೆ ಕಾಂಪೌಂಡರ್ ಆಗಿ ಸೇರಿಕೊಂಡ ಅವರು, ಇದುವರೆಗೆ ಸುದೀರ್ಘ 68 ವರ್ಷಗಳ ಸೇವೆ ಸಲ್ಲಿಸಿದ್ದಾರೆ. ಹಾರಾಡಿಯಲ್ಲಿ ವಾಸವಾಗಿರುವ ಇವರ ತಂದೆ ಶಂಕರ್ ಭಟ್, ತಾಯಿ ಕಾವೇರಮ್ಮ. ಸರಸ್ವತಿ ಇವರ ಪತ್ನಿ. ಸಾಫ್ಟ್ ವೇರ್ ಇಂಜಿನಿಯರ್ ಆಗಿರುವ ಪುತ್ರ ಕಾರ್ತಿಕ್ ತನ್ನ ಪತ್ನಿ - ಮಗನೊಂದಿಗೆ ಲಂಡನಿನಲ್ಲಿ ವಾಸವಾಗಿದ್ದಾರೆ.

ಇದೀಗ ತನ್ನ 82ನೇ ವಯಸ್ಸಿನಲ್ಲಿ ವಿಶ್ರಾಂತ ಜೀವನಕ್ಕೆ ತೆರಳಿದ್ದಾರೆ. ವಯೋ ಸಹಜ ಸಮಸ್ಯೆಗಳ ಕಾರಣದಿಂದಾಗಿ ಡಾ. ಶಿವರಾಮ ಭಟ್ ಅವರ ಕ್ಲಿನಿಕ್ ಅನ್ನು ಬಂದ್ ಮಾಡಲಾಗಿದೆ ಎಂದು ಕ್ಲಿನಿಕ್ ಮುಂದುಗಡೆ ಬೋರ್ಡ್ ಹಾಕಲಾಗಿದೆ.

ಹಾಗಾಗಿ, ಔಷಧಕ್ಕೆಂದು ಆಗಮಿಸುವ ಜನರು ಬೋರ್ಡ್ ನೋಡಿ, ಹ್ಯಾಪ್ ಮೋರೆ ಹಾಕಿಕೊಂಡು ವಾಪಾಸ್ ಹೋಗುತ್ತಿದ್ದಾರೆ. ದಿನಕ್ಕೆ ಸುಮಾರು 300 ಮಂದಿಯಂತೆ ತಿಂಗಳಿಗೆ 10 ಸಾವಿರದಷ್ಟು ಮಂದಿ ಇವರ ಔಷಧವನ್ನೇ ಅವಲಂಬಿತರಾಗಿದ್ದರು. ಇದೀಗ ಇಷ್ಟು ಮಂದಿ ಬೇರೆ ವೈದ್ಯರ ಮೊರೆ ಹೋಗಲೇಬೇಕಾದ ಅನಿವಾರ್ಯತೆ ಎದುರಾಗಿದೆ.

ಮಳೆಗಾಲ ಆರಂಭವಾಯಿತೆಂದರೆ ಜ್ವರ, ಶೀತ, ಕೆಮ್ಮು ಸಿದ್ಧ. ಇದಕ್ಕೆಲ್ಲಾ ಕಾಂಪೌಂಡರ್ ನೀಡುವ 3 ಹೊತ್ತಿನ ಮದ್ದು ಸಾಕು. ಕಡಿಮೆ ಶುಲ್ಕ ಮಾತ್ರವಲ್ಲ, ಸುಲಭದಲ್ಲಿ ಸಿಗುವ ವೈದ್ಯರು ಎಂಬ ಕಾರಣಕ್ಕೆ ಜನರೂ ಇಲ್ಲಿಗೆ ಆಗಮಿಸುತ್ತಿದ್ದರು. ಇನ್ನು ಮುಂದೆ ಪುತ್ತೂರಿನ ಹೃದಯ ಭಾಗದಲ್ಲಿ ಇದ್ದ ಡಾ. ಶಿವರಾಮ ಭಟ್ ಅವರ ಕ್ಲಿನಿಕಿನಲ್ಲಿ ಕಾಂಪೌಂಡರ್ ಮದ್ದು ನೀಡುವುದಿಲ್ಲ!

ಡಾ. ಶಿವರಾಮ ಭಟ್ ಗುರು:

ಡಾ. ಶಿವರಾಮ ಭಟ್ ಅವರನ್ನೇ ಗುರುವಾಗಿ ನೆಚ್ಚಿಕೊಂಡಿದ್ದ ಕಾಂಪೌಂಡರ್ ಖ್ಯಾತಿಯ ನರಸಿಂಹ ಭಟ್ ಅವರು, ಸುದೀರ್ಘ ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಡಾ. ಶಿವರಾಮ ಭಟ್ ಅವರ ನಿಧನದ ನಂತರವೂ ಅವರ ಹೆಸರಿನಲ್ಲೇ ಕ್ಲಿನಿಕ್ ನಡೆಯುತ್ತಿತ್ತು. ಆಗ ಕಾಂಪೌಂಡರ್ ಅವರೇ ಔಷಧ ನೀಡುತ್ತಿದ್ದರು. ಕ್ಲಿನಿಕಿಗೆ ಆಗಮಿಸಿದ ಹೆಚ್ಚಿನ ಜನರಿಗೆ ಇವರೇ ಡಾ‌. ಶಿವರಾಮ ಭಟ್ ಎಂದು ನಂಬಿದ್ದರು.

ಸರ್ಕಾರಿ ಉದ್ಯೋಗದ ಅವಕಾಶವನ್ನೇ ಕೈಚೆಲ್ಲಿದರು!

ನರಸಿಂಹ ಭಟ್ ಅವರಿಗೆ ಸರ್ಕಾರಿ ಉದ್ಯೋಗದ ಅವಕಾಶವೂ ಕೈಬೀಸಿ ಕರೆಯಿತು. ಆದರೆ ಡಾ. ಶಿವರಾಮ್ ಭಟ್ ಅವರನ್ನೇ ಮಾನಸ ಗುರುವಾಗಿ ಸ್ವೀಕರಿಸಿದ್ದರಿಂದ, ಸರ್ಕಾರಿ ಉದ್ಯೋಗದ ಅವಕಾಶವನ್ನು ಕೈಚೆಲ್ಲಿದರು. ಡಾ. ಶಿವರಾಮ ಭಟ್ ಅವರು ಇರುವವರೆಗೂ ಹಾಗೂ ಅವರು ಇಲ್ಲದ ಬಳಿಕವೂ ತನ್ನ ಗುರುವಿನ ಹೆಸರಿನಲ್ಲಿಯೇ ಔಷಧ ನೀಡಿತ್ತಿದ್ದರು ಎನ್ನುವುದು ಕಾಂಪೌಂಡರ್ ಅವರ ವಿಶೇಷತೆ.

 Share: | | | | |


ಕಾಸರಗೋಡಿನ ಶೇಣಿಯಲ್ಲಿ ಬಾಲಿವುಡ್ ತಾರೆ ಸನ್ನಿ ಲಿಯೋನ್

Posted by Vidyamaana on 2024-04-27 16:51:17 |

Share: | | | | |


ಕಾಸರಗೋಡಿನ ಶೇಣಿಯಲ್ಲಿ ಬಾಲಿವುಡ್ ತಾರೆ ಸನ್ನಿ ಲಿಯೋನ್

ಕಾಸರಗೋಡು : ನಟಿ ಸನ್ನಿ ಲಿಯೋನ್ ಕಾಸರಗೋಡಿನಲ್ಲಿ ಪ್ರತ್ಯಕ್ಷವಾಗಿದ್ದಾರೆ. ಕಾಸರಗೋಡಿನ ಸೀತಂಗೋಳಿ ಸಮೀಪದ ಶೇಣಿಯಲ್ಲಿ ಸಿನಿಮಾ ಸನ್ನಿ ಲಿಯೋನ್ ಅವರ ಹಿಂದಿ ಸಿನಿಮಾ ಶೂಟಿಂಗ್ ನಡೆಯುತ್ತಿದ್ದು ಅದರಲ್ಲಿ ಭಾಗಿಯಾಗಿದ್ದಾರೆ.ನೆಚ್ಚಿನ ತಾರೆಯನ್ನು ನೋಡಲು ಅಭಿಮಾನಿಗಳು ಮುಗಿ ಬಿದ್ದಿದ್ದಾರೆ.

ಪಾಕ್‌ನಿಂದ ಹಾರಿಬಂತು ಮತ್ತೊಂದು ಪ್ರೇಮಪಕ್ಷಿ!

Posted by Vidyamaana on 2023-12-07 08:34:38 |

Share: | | | | |


ಪಾಕ್‌ನಿಂದ ಹಾರಿಬಂತು ಮತ್ತೊಂದು ಪ್ರೇಮಪಕ್ಷಿ!

ಭಾರತದಲ್ಲಿರೋ ತನ್ನ ಪ್ರಿಯಕರನೊಂದಿಗೆ ಮದುವೆಯಾಗೋಕೆ ಪಾಕಿಸ್ತಾನದ ಯುವತಿಯೊಬ್ರು ಬಾರ್ಡರ್‌ ದಾಟಿರೋ ಮತ್ತೊಂದು ಪ್ರೇಮಕಥೆ ವರದಿಯಾಗಿದೆ. ಆದ್ರೆ ಈ ಬಾರಿ ಬಂದಿರೋ ಯುವತಿ ಲೀಗಲ್ಲಾಗಿ 45 ದಿನಗಳ ವೀಸಾ ಪಡೆದು ಭಾರತಕ್ಕೆ ಬಂದಿದ್ದಾರೆ. ಕರಾಚಿ ಮೂಲದ ಜಾವೆರಿಯಾ ಕನ್ನುಂ ಅನ್ನೋ ಈ ಯುವತಿ ಕೊಲ್ಕತ್ತಾ ಮೂಲದ ಸಮೀರ್‌ ಖಾನ್‌ರನ್ನ ವರಿಸೋಕೆ ವಾಗಾ-ಅಟ್ಟಾರಿ ಬಾರ್ಡರ್‌ ದಾಟಿ ಬಂದಿದ್ದಾರೆ.ಸಮೀರ್‌ ಕುಟುಂಬ ಇವರನ್ನ ವಾದ್ಯಘೋಷ್ಠಿ ಜೊತೆ ಸ್ವಾಗತ ಮಾಡಿದೆ. ಬರುವ ಜನವರಿಯಲ್ಲಿ ಮದುವೆಯಾಗೋಕೆ ಈ ಜೋಡಿ ಪ್ಲಾನ್‌ ಮಾಡಿದೆ ಎನ್ನಲಾಗ್ತಿದೆ. ಭಾರತಕ್ಕೆ ಬಂದ ಕೂಡ್ಲೆ ಹರ್ಷ ವ್ಯಕ್ತಪಡಿಸಿದ ಕನ್ನುಂ ʻಸತತ 5 ವರ್ಷಗಳ ಪ್ರಯತ್ನದ ನಂತರ ವೀಸಾ ಸಿಕ್ತು. ಇದೊಂತರ ಹ್ಯಾಪಿ ಎಂಡಿಂಗ್‌ ಹಾಗೂ ಹ್ಯಾಪಿ ಬಿಗಿನಿಂಗ್.‌ ನಮ್ಮ ಕುಟುಂಬದ ಒಪ್ಪಿಗೆಯೊಂದಿಗೆ ಮದುವೆ ಆಗ್ತಿದ್ದೇನೆ" ಅಂದಿದ್ದಾರೆ. 2018ರಲ್ಲಿ ತಮ್ಮ ತಾಯಿಯ ಮೊಬೈಲ್‌ನಲ್ಲಿ ಕನ್ನುಂರ ಫೋಟೋ ನೋಡಿದ್ದ ಸಮಿರ್‌ ಖಾನ್‌, ಅವ್ರನ್ನ ಮದುವೆಯಾಗೋ ಇಂಟ್ರಸ್ಟ್‌ ತೋರಿದ್ದಾಗಿ ಹೇಳಿಕೊಂಡಿದ್ದಾರೆ.

BMTC ಯಲ್ಲಿ 17 ಕೋಟಿ ವಂಚನೆ : ಮುಖ್ಯ ಟ್ರಾಫಿಕ್ ಮ್ಯಾನೇಜರ್ ಶ್ರೀರಾಮ್ ಮುಲ್ಕವನ ಬಂಧನ

Posted by Vidyamaana on 2023-10-04 19:35:09 |

Share: | | | | |


BMTC ಯಲ್ಲಿ 17 ಕೋಟಿ ವಂಚನೆ : ಮುಖ್ಯ ಟ್ರಾಫಿಕ್ ಮ್ಯಾನೇಜರ್ ಶ್ರೀರಾಮ್ ಮುಲ್ಕವನ ಬಂಧನ

ಬೆಂಗಳೂರು: ಮಹಾನಗರ ಸಾರಿಗೆ ಸಂಸ್ಥೆಯ(BMTC) ಮಾಜಿ ಮುಖ್ಯ ಟ್ರಾಫಿಕ್ ಮ್ಯಾನೇಜರ್ ಒಬ್ಬರನ್ನು ಹಿರಿಯ ಅಧಿಕಾರಿಗಳ ನಕಲಿ ಸಹಿ ಮತ್ತು ಕಳೆದ ಮೂರು ವರ್ಷಗಳಲ್ಲಿ ಅನರ್ಹ ಸಂಸ್ಥೆಗಳಿಗೆ ಗುತ್ತಿಗೆ ನೀಡಿ ಬಿಎಂಟಿಸಿಗೆ 17 ಕೋಟಿ ರೂ.ಗೂ ಹೆಚ್ಚು ನಷ್ಟ ಉಂಟುಮಾಡಿದ ಆರೋಪದ ಮೇಲೆ ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.


💥 *ವಿದ್ಯಮಾನ Youtube Channel* *Subscribe ಆಗಿಲ್ವಾ..?*

ಬಂಧಿತ ಆರೋಪಿ ಶ್ರೀರಾಮ್ ಮುಲ್ಕವನ ಎನ್ನುವವರಾಗಿದ್ದು, ಆಪಾದಿತ ವಂಚನೆಗೆ ಸಂಬಂಧಿಸಿದಂತೆ ಬಿಎಂಟಿಸಿ ನಡೆಸಿದ ಆಂತರಿಕ ತನಿಖೆಯ ಸಮಯದಲ್ಲಿ ಹೆಸರು ಹೊರಬಂದ ನಂತರ ಬಿಎಂಟಿಸಿಯ ವಾಣಿಜ್ಯ ವಿಭಾಗದಲ್ಲಿ ಕೆಲಸ ಮಾಡಿದ ಶ್ರೀರಾಮ್ ಸೇರಿ ಇತರ ಆರು ಸಹೋದ್ಯೋಗಿಗಳನ್ನು ಅಮಾನತುಗೊಳಿಸಲಾಗಿತ್ತು.


ಅಸಿಸ್ಟೆಂಟ್ ಸೆಕ್ಯುರಿಟಿ ಮತ್ತು ವಿಜಿಲೆನ್ಸ್ ಅಧಿಕಾರಿ ರಮ್ಯಾ ಸಿ.ಕೆ. ಗಂಭೀರ ವಂಚನೆಯನ್ನು ಪತ್ತೆ ಹಚ್ಚಿದ ನಂತರ ಅಕ್ಟೋಬರ್ 2 ರಂದು ಅಮಾನತುಗೊಂಡ ಏಳು ಬಿಎಂಟಿಸಿ ಅಧಿಕಾರಿಗಳ ವಿರುದ್ಧ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು. ದೂರುದಾರರ ಪ್ರಕಾರ, ಆಪಾದಿತ ವಂಚನೆಯಿಂದಾಗಿ ನಿಗಮವು ಒಟ್ಟು 17 ಕೋಟಿ ರೂ.ಗೂ ಹೆಚ್ಚು ನಷ್ಟವನ್ನು ಅನುಭವಿಸಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.


ಎಫ್‌ಐಆರ್‌ನಲ್ಲಿ ಮಾರ್ಚ್ 2020 ರಿಂದ ಸೆಪ್ಟೆಂಬರ್ 2023 ರ ನಡುವೆ ವಂಚನೆ ನಡೆದಿದೆ ಎಂದು ಹೇಳಲಾಗಿದೆ, ಇದರಿಂದಾಗಿ ನಿಗಮವು ಎರಡು ವಿಭಿನ್ನ ಪ್ರಕರಣಗಳಲ್ಲಿ 10.5 ಕೋಟಿ ರೂ. ಮತ್ತು 6.91 ಕೋಟಿ ರೂ. ನಷ್ಟವನ್ನು ಅನುಭವಿಸಿದೆ.

ವಿಪಕ್ಷ ನಾಯಕನಾಗಿ ಬಿಜೆಪಿ ಶಾಸಕ ಆರ್ ಅಶೋಕ್ ಆಯ್ಕೆ

Posted by Vidyamaana on 2023-11-17 20:45:08 |

Share: | | | | |


ವಿಪಕ್ಷ ನಾಯಕನಾಗಿ ಬಿಜೆಪಿ ಶಾಸಕ ಆರ್ ಅಶೋಕ್ ಆಯ್ಕೆ

ಬೆಂಗಳೂರು: ಪದ್ಮನಾಭನಗರ ಬಿಜೆಪಿ ಶಾಸಕ ಆರ್ ಅಶೋಕ್ ಅವರನ್ನು ವಿಪಕ್ಷ ನಾಯಕನಾಗಿ ಆಯ್ಕೆ ಮಾಡಲಾಗಿದೆ. ವಿಪಕ್ಷ ನಾಯಕನ ಆಯ್ಕೆ ವಿಚಾರವಾಗಿ ಪಕ್ಷದೊಳಗೆ ಅಸಮಾಧಾನ ಉಂಟಾಗಿರುವ ಹಿನ್ನೆಲೆಯಲ್ಲಿ ಇಂದು ಸಂಜೆ ನಡೆದ ಶಾಸಕಾಂಗ ಪಕ್ಷದ ಸಭೆಗೆ ವೀಕ್ಷಕರಾಗಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದುಶ್ಯಂತ್ ಕುಮಾರ್ ಗೌತಮ್ ಆಗಮಿಸಿದ್ದರು.ಶಾಸಕರ ಅಭಿಪ್ರಾಯಗಳನ್ನು ಆಲಿಸಿದ ವೀಕ್ಷಕರು ವಿರೋಧದ ನಡುವೆಯೂ ವಿಪಕ್ಷ ನಾಯಕನಾಗಿ ಆರ್ ಅಶೋಕ್ ಅವರನ್ನು ನೇಮಿಸಿದ್ದಾರೆ. ಇನ್ನು ಇದೇ ವೇಳೆ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಆರ್ ಅಶೋಕ್ ಅವರು, ಪಕ್ಷ ದೊಡ್ಡ ಜವಾಬ್ದಾರಿಯನ್ನು ನೀಡಿದೆ. ಅದನ್ನು ಸರಿಯಾಗಿ ನಿಭಾಯಿಸುತ್ತೇನೆ.ಸಾಮಾನ್ಯ ಕಾರ್ಯಕರ್ತನಾಗಿ 45 ವರ್ಷಗಳಿಂದ ಕೆಲಸ ಮಾಡಿದ್ದೇನೆ.


ಕಾಂಗ್ರೆಸ್ ನ ದುರಾಳಿತವ್ನನು ಜನರ ಮುಂದಿಡಲು ಪ್ರಯತ್ನಿಸುತ್ತೇವೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ 28 ಸ್ಥಾನಗಳನ್ನು ಗೆಲ್ಲುವ ಗುರಿ ಹಾಕಿಕೊಳ್ಳತ್ತೇವೆ ಎಂದು ಹೇಳಿದರು. ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಆಯ್ಕೆ ವಿಚಾರವಾಗಿ ಒಳಗೊಳಗೆ ಅಸಮಾಧಾನ ಭುಗಿಲೆದ್ದಿತ್ತು. ವಿಪಕ್ಷ ನಾಯಕ ಸ್ಥಾನ ಕೈತಪ್ಪಲಿದೆ ಎಂಬ ಸೂಚನೆ ಸಿಕ್ಕಿದ್ದರಿಂದ ಬಿಜೆಪಿ ಪಾಳಯದ ಅತೃಪ್ತ ನಾಯಕ, ಶಾಸಕ ಬಸನ ಗೌಡ ಪಾಟೀಲ ಯತ್ನಾಳ್ ಬಹಿರಂಗವಾಗಿಯೇ ಸಿಡಿದೆದ್ದಿದ್ದರು.

ಕುಕ್ಕುಜಡ್ಕದ ನವೀನ್ ಸಂಕೇಶ ಭೀಕರ ಅಪಘಾತಕ್ಕೆ ಬಲಿ

Posted by Vidyamaana on 2023-05-23 15:30:40 |

Share: | | | | |


ಕುಕ್ಕುಜಡ್ಕದ ನವೀನ್ ಸಂಕೇಶ ಭೀಕರ ಅಪಘಾತಕ್ಕೆ ಬಲಿ

ಪುತ್ತೂರು: ಕಾರೊಂದು ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಅರಂತೋಡು ಗೂನಡ್ಕದಲ್ಲಿ ಮಂಗಳವಾರ ಬೆಳಿಗ್ಗೆ ನಡೆದಿದೆ

ಕೌಡಿಚ್ಚಾರು : ಕೃಷಿಕರಿಗೆ ಉಚಿತ ವಿದ್ಯುತ್ ಕೊಟ್ಟದ್ದು ಕಾಂಗ್ರೆಸ್ ಸರಕಾರ: ಅಶೋಕ್ ಕುಮಾರ್

Posted by Vidyamaana on 2023-04-26 06:50:07 |

Share: | | | | |


ಕೌಡಿಚ್ಚಾರು : ಕೃಷಿಕರಿಗೆ ಉಚಿತ ವಿದ್ಯುತ್ ಕೊಟ್ಟದ್ದು ಕಾಂಗ್ರೆಸ್ ಸರಕಾರ: ಅಶೋಕ್ ಕುಮಾರ್

ಪುತ್ತೂರು: ಉಳುವವನೇ ಭೂಮಿಯ ಒಡೆಯ ಎಂಬ ಕಾನೂನು ಜಾರಿಗೆ ತಂದು ಬಡವ ತಲೆ ಎತ್ತಿ ನಿಲ್ಲುವಂತೆ ಮಾಡಿದ್ದು ಕಾಂಗ್ರೆಸ್ಸಿನ ಇಂದಿರಾ ಗಾಂದಿ,ಅದೇ ರೀತಿ ರಾಜ್ಯದಲ್ಲಿ ಕೃಷಿ ಪಂಪ್ ಸೆಟ್ ಗೆ ಉಚಿತ ವಿದ್ಯುತ್ ಕೊಟ್ಟದ್ದು ಕಾಂಗ್ರೆಸ್ ಸರಕಾರವಾಗಿದೆ ಎಂಬುದನ್ನು ಪ್ರತೀಯೊಬ್ಬರೂ ತಿಳಿದುಕೊಳ್ಳಬೇಕು. ಕಾಂಗ್ರೆಸ್ ದೇಶವನ್ನು ಆಳದೇ ಇರುತ್ತಿದ್ದರೆ ಇಂದು ದೇಶ ಏನಾಗುತ್ತಿತ್ತು ಎಂಬುದನ್ನು ಊಹಿಸಲೂ ಸಾಧ್ಯವಿಲ್ಲ ಎಂದು ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಹೇಳಿದರು. ಕೌಡಿಚ್ಚಾರ್ ಜಂಕ್ಷನ್ ನಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದರು.

ಕಾಂಗ್ರೆಸ್ ಜನಪರ ಯೋಜನೆಯನ್ನೇ ಜಾರಿಗೆ ತರುತ್ತಿದೆ. ಕಾಂಗ್ರೆಸ್ ದೇಶದ ಜನರ ಜೀವನಾಡಿ. ಕಾಂಗ್ರೆಸ್ ಸರಕಾರ ಇದ್ದರೆ ಮಾತ್ರ ಜನ ನೆಮ್ಮದಿಯಿಂದ ಬದುಕಲು ಸಾಧ್ಯವಾಗಿದೆ. ಬಡಜನರಿಗಾಗಿಯೇ ಕಾಂಗ್ರೆಸ್ ಗ್ಯಾರಂಟಿ ಯೋಜನೆಯನ್ನು ಜಾರಿಗೆ ತಂದಿದೆ ಎಂದು ಹೇಳಿದರು.ನಾಳೆಯ ನೆಮ್ಮದಿಗಾಗಿ ಕಾಂಗ್ರೆಸ್ ಬೆಂಬಲಿಸಿ. ನಾನು ಎಂದೂ ಕೊಟ್ಟ ಮಾತನ್ನು ತಪ್ಪಿ ನಡೆಯಲಾರೆ ಕಾಂಗ್ರೆಸ್ ಗೆ ಮತ ಹಾಕುವ ಮೂಲಕ ಕ್ಷೇತ್ರದ ಅಭಿವೃದ್ದಿಗಾಗಿ ಆಶೀರ್ವಾದ ಮಾಡಿ ಎಂದು ಮನವಿ ಮಾಡಿದರು.

New Categories
Recent News
Popular News


Leave a Comment: