ಜೋಕಟ್ಟೆ: ಮನೆ ಮೇಲೆ ತಡೆಗೋಡೆ ಕುಸಿತ; ಬಾಲಕ ಮೃತ್ಯು

ಸುದ್ದಿಗಳು News

Posted by vidyamaana on 2024-07-25 12:27:06 |

Share: | | | | |


ಜೋಕಟ್ಟೆ: ಮನೆ ಮೇಲೆ ತಡೆಗೋಡೆ ಕುಸಿತ; ಬಾಲಕ ಮೃತ್ಯು

ಪಣಂಬೂರು: ಇಲ್ಲಿನ ಜೋಕಟ್ಟೆ ಗ್ರಾಮ ಪಂಚಾಯತ್ ಗುಡ್ಡೆ ಎಂಬಲ್ಲಿ ಮನೆಯ ಮೇಲೆ� ತಡೆಗೋಡೆ ಕುಸಿದು ಬಿದ್ದು ಯುವಕ ಮೃತಪಟ್ಟಿರುವ ಘಟನೆ ಬುಧವಾರ ರಾತ್ರಿ ನಡೆದಿರುವ ಬಗ್ಗೆ ವರದಿಯಾಗಿದೆ‌.ಮುಲ್ಕಿ ಕೊಲ್ನಾಡು ನಿವಾಸಿ ಶಂಕರ ಎಂಬವರ ಪುತ್ರ ಶೈಲೇಶ್ (17) ಮೃತ ಯುವಕ. ಜೋಕಟ್ಟೆಯಲ್ಲಿರುವ ತನ್ನ ದೊಡಮ್ಮನ ಮಗಳ ಮನೆಗೆ ಬಂದಿದ್ದ ಶೈಲೇಶ್, ಇಲ್ಲಿಯೇ ಉಳಿದುಕೊಂಡಿದ್ದ.

ಮನೆಯಲ್ಲಿ ಶೈಲೇಶ್ ರವರ ದೊಡ್ಡಮನ ಮಗಳು ಸವಿತಾ, ಆಕೆಯ ಗಂಡ ಸುರೇಶ್ ಮತ್ತು ಮಗು ಸಾಕ್ಷಿ ಮನೆಯ ಒಂದು ಕೋಣೆಯಲ್ಲಿ ಮಲಗಿದ್ದು, ಶೈಲೇಶ್ ಇನ್ನೊಂದು ಕಡೆ ಮಲಗಿದ್ದ. ತಡೆಗೋಡೆ ಕುಸಿದು ಹಂಚಿನ ಮನೆಯ ಮೇಲೆ ಬಿದ್ದಿದ್ದರಿಂದ ಅಲ್ಲಿ ಮಲಗಿದ್ದ ಶೈಲೇಶ್ ತೀವ್ರ ಗಾಯಗೊಂಡು ಮೃತಪಟ್ಟಿದ್ದಾನೆ. ಇನ್ನೊಂದು ಕೋಣೆಯಲ್ಲಿ ಮಲಗಿದ್ದ ಇತರ ಮೂರು ಜನರಲ್ಲಿ ಸವಿತಾ ಅವರಿಗೆ ಸಣ್ಣ ಗಾಯವಾಗಿದ್ದು‌, ಚಿಕಿತ್ಸೆ ಪಡೆದಿದ್ದಾರೆ‌ ಎಂದು ತಿಳಿದು ಬಂದಿದೆ.

ಶೈಲೇಶ್ ಅವರ ಮೃತದೇಹವನ್ನು ನಗರದ ಎ.ಜೆ.ಆಸ್ಪತ್ರೆಯ ಶವಗಾರದಲ್ಲಿಡಲಾಗಿದ್ದು, ಸ್ಥಳಕ್ಕೆ ಪಣಂಬೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ

 Share: | | | | |


ಮಹಿಳಾ ಪೊಲೀಸ್ ಪೇದೆ ಮಂಜುಶ್ರೀ ಆತ್ಮಹತ್ಯೆ , ಕಾರಣ ನಿಗೂಢ

Posted by Vidyamaana on 2024-02-17 21:19:17 |

Share: | | | | |


ಮಹಿಳಾ ಪೊಲೀಸ್ ಪೇದೆ ಮಂಜುಶ್ರೀ ಆತ್ಮಹತ್ಯೆ , ಕಾರಣ ನಿಗೂಢ

ರಾಮನಗರ, ಫೆ 17: ಮಹಿಳಾ ಪೊಲೀಸ್ ಕಾನ್ ಸ್ಟೇಬಲ್ ಮನೆಯಲ್ಲೇ ನೇಣಿಗೆ ಶರಣಾದ ಘಟನೆ ಹಾರೋಹಳ್ಳಿ ತಾಲೂಕಿನ ದ್ಯಾವಸಂದ್ರ ಗ್ರಾಮದಲ್ಲಿ ನಡೆದಿದೆ.


ದ್ಯಾವಸಂದ್ರ ಗ್ರಾಮದ ಮಂಜುಶ್ರೀ ( 29) ಆತ್ಮಹತ್ಯೆ ಮಾಡಿಕೊಂಡ ಕಾನ್ ಸ್ಟೇಬಲ್.


ಮಂಜುಶ್ರೀ ಅವರು ಬೆಂಗಳೂರಿನ ಮೈಕೋ ಲೆಔಟ್ ಪೋಲಿಸ್ ಠಾಣೆಯಲ್ಲಿ ಕಾನ್ ಸ್ಟೇಬಲ್ ಆಗಿ ಕೆಲಸ ಮಾಡುತ್ತಿದ್ದು ಇತ್ತೀಚೆಗೆ ನಿಯೋಜನೆಯಡಿ ಶಿವಾಜಿನಗರ ಪೋಲಿಸ್ ಠಾಣೆಗೆ ವರ್ಗಾವಣೆಗೊಂಡಿದ್ದರು ಎನ್ನಲಾಗಿದೆ.

ಶುಕ್ರವಾರ ತಡರಾತ್ರಿ ತನ್ನ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಹಾರೋಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ


ಹಾರೋಹಳ್ಳಿ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆತ್ಮಹತ್ಯೆಗೆ ಕಾರಣ ಇನ್ನಷ್ಟೇ ತಿಳಿದುಬರಬೇಕಾಗಿದೆ.

ಮಂಗಳೂರು: ಕರ್ತವ್ಯದಲ್ಲಿದ್ದ ವಾಹನದ ಬಗ್ಗೆ ಸುಳ್ಳು ಸಂದೇಶ ರವಾನಿಸಿದ ಸಾರ್ವಜನಿಕ - ಸ್ಪಷ್ಠನೆ ನೀಡಿದ ಪೊಲೀಸ್ ಇಲಾಖೆ

Posted by Vidyamaana on 2024-05-17 21:46:48 |

Share: | | | | |


ಮಂಗಳೂರು: ಕರ್ತವ್ಯದಲ್ಲಿದ್ದ ವಾಹನದ ಬಗ್ಗೆ ಸುಳ್ಳು ಸಂದೇಶ ರವಾನಿಸಿದ ಸಾರ್ವಜನಿಕ - ಸ್ಪಷ್ಠನೆ ನೀಡಿದ ಪೊಲೀಸ್ ಇಲಾಖೆ

ಮಂಗಳೂರು : ಕಳೆದ ದಿನ (ಮೇ 16) ಸಂಜೆ ಮಂಗಳೂರು ನಗರದ ಕುಂಟಿಕಾನ ಬಳಿ ಕರ್ತವ್ಯದಲ್ಲಿದ್ದ ಕೆಎ-19-ಜಿ-1023 ನೊಂದಣೆ ಸಂಖ್ಯೆಯ ಹೆದ್ದಾರಿ ಗಸ್ತು ವಾಹನದ ವೀಡಿಯೋ ಚಿತ್ರೀಕರಿಸಿದ ಸಾರ್ವಜನಿಕರೊಬ್ಬರು ಸದ್ರಿ ವಾಹನದ ವಿಮಾ ಅವಧಿಯು ಮುಕ್ತಾಯವಾಗಿರುವುದಾಗಿಯೂ, ಪೊಲೀಸ್ ಇಲಾಖೆಯು ವಿಮಾ ಕಂತು ಪಾವತಿಸದ ವಾಹನಗಳನ್ನು ಬಳಸುತ್ತಿರುವುದಾಗಿಯೂ ಸುಳ್ಳು ಸಂದೇಶವನ್ನು ಸಾರ್ವಜನಿಕವಾಗಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ.ಈ ಕುರಿತು ಸ್ಪಷ್ಠನೆ ನೀಡಿರುವ ಪೊಲೀಸ್ ಇಲಾಖೆ, ಪೊಲೀಸ್ ಇಲಾಖೆಯ ಎಲ್ಲಾ ವಾಹನಗಳೂ ಕರ್ನಾಟಕ ಗವರ್ನಮೆಂಟ್ ಇನ್ಯುರೆನ್ಸ್ ಡಿಪಾರ್ಟ್‌ಮೆಂಟ್ (ಕೆ.ಜಿ.ಐ.ಡಿ) ವಿಮೆಯನ್ನು ಕಡ್ಡಾಯವಾಗಿ ಹೊಂದಿರುತ್ತದೆ ಹಾಗೂ ಸದರಿ ವಿಮೆಯನ್ನು ಕಾಲ ಕಾಲಕ್ಕೆ ನವೀಕರಿಸಲಾಗಿದೆ.

ವಿವಾದಾತ್ಮಕ ಹೇಳಿಕೆ ವಿಚಾರ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಬಿಜೆಪಿ ಅಧ್ಯಕ್ಷ ಜಯಂತ್ ಕೋಟ್ಯಾನ್ ವಿರುದ್ಧ ಪ್ರಕರಣ ದಾಖಲು

Posted by Vidyamaana on 2023-05-24 15:27:22 |

Share: | | | | |


ವಿವಾದಾತ್ಮಕ ಹೇಳಿಕೆ ವಿಚಾರ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಬಿಜೆಪಿ ಅಧ್ಯಕ್ಷ ಜಯಂತ್ ಕೋಟ್ಯಾನ್ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮೇ.22 ರಂದು ಬೆಳ್ತಂಗಡಿಯ ಕಿನ್ಯಮ್ಮಯಾನೆ ಗುಣವತಿ ಅಮ್ಮ ಸಭಾಂಗಣದಲ್ಲಿ ಬಿಜೆಪಿ ಪಕ್ಷದ ವತಿಯಿಂದ ನಡೆದ ಅಭಿನಂದನ ಕಾರ್ಯಕ್ರಮದ ಭಾಷಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು 24 ಹಿಂದುಗಳ ಕೊಲೆ ಮಾಡಿದವರೆಂದು ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದರ ವಿರುದ್ಧ ಪ್ರಕರಣ ದಾಖಲಾಗಿದೆ.ಪೂಂಜಾ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಗ್ರಾಮೀಣ ಘಟಕದ ವತಿಯಿಂದ ಇಂದು ಬೆಳ್ತಂಗಡಿ ಪೋಲಿಸ್ ಠಾಣೆಯಲ್ಲಿ ದೂರು ನೀಡಿದರು.ಮಹಿಳಾ ಕಾಂಗ್ರೇಸ್ ಅಧ್ಯಕ್ಷೆ ಶ್ರೀಮತಿ ನಮಿತ ಕೆ ಪೂಜಾರಿ ನೀಡಿದ ದೂರಿನ ಮೇರೆಗೆ ಶಾಸಕ ಹರೀಶ್ ಪೂಂಜಾ ಹಾಗೂ ಬಿಜೆಪಿ ಅಧ್ಯಕ್ಷ ಜಯಂತ್ ಕೋಟ್ಯಾನ್ ವಿರುದ್ಧ ಐಪಿಸಿ ಸೆಕ್ಷನ್ 153, 153ಎ, 505 ರಂತೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಎನ್ ಆರ್ ಸಿ ಸಿ- ಅಮ್ಮುಂಜ ನೂತನ ಕಾಂಕ್ರೀಟ್ ರಸ್ತೆ ಉದ್ಘಾಟನೆ

Posted by Vidyamaana on 2024-06-16 17:20:11 |

Share: | | | | |


ಎನ್ ಆರ್ ಸಿ ಸಿ- ಅಮ್ಮುಂಜ ನೂತನ ಕಾಂಕ್ರೀಟ್ ರಸ್ತೆ ಉದ್ಘಾಟನೆ

ಪುತ್ತೂರು: ಕಳೆದ ಲೋಕಸಭಾ ಚುನಾವಣೆಯ ಮೊದಲು ಶಿಲಾನ್ಯಾಸಗೈದ ಕಾಮಗಾರಿಗಳು ಆರಂಭಗೊಂಡಿದೆ, ಶೀಘ್ರದಲ್ಲೇ ಎಲ್ಲಾ ಕಾಮಗಾರಿಗಳು ಪೂರ್ಣಗೊಳ್ಳಲಿದೆ ಎಂದು ಶಾಸಕ ಅಶೋಕ್ ರೈ ಹೇಳಿದರು.

ಅವರು ಕುರಿಯ ಗ್ರಾಮದ ಎನ್ ಆರ್ ಸಿ ಸಿ - ಅಮ್ಮುಂಜ ರಸ್ತೆಯು ರೂ ೧೦ ಲಕ್ಷದಲ್ಲಿ ಕಾಂಕ್ರೀಟ್ ಆಗಿದ್ದು ಇದರ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.

ಅಧ್ಯತೆ ಮೇರೆಗೆ ಎಲ್ಲಾ ರಸ್ತೆಗಳನ್ನು ಅಭಿವೃದ್ದಿ ಮಾಡಲಾಗುವುದು. ರಸ್ತೆ ಕಾಂಕ್ರೀಟ್ ಆಗಿಲ್ಲವೆಂದು ಬೇಜಾರುಮಾಡಬೇಡಿ ಮುಂದಿನ ದಿನಗಳಲ್ಲಿ ಅಗತ್ಯ ಬೇಡಿಕೆ ಇರುವ ಎಲ್ಲಾ ರಸ್ತೆಗಳನ್ನು ಅಭಿವೃದ್ದಿ ಮಾಡಲಾಗುವುದು ಎಂದು ಹೇಳಿದರು. ಪಾಲಿಂಜೆ ಶ್ರೀ ಮಹಾವಿಷ್ಣು ದೇವಸ್ಥಾನದ ಅಭಿವೃದ್ದಿಗೆ ೧೦ ಲಕ್ಷ ಅನುದಾನ ಒದಗಿಸಲಾಗುವುದು ಎಂದು ಹೇಳಿದರು.

ರಾಜ್ಯದ ಹೆಸರು ಬದಲಾಯಿಸುವ ನಿರ್ಣಯ ಅಂಗೀಕಾರ: ಇನ್ನು ಮುಂದೆ ಕೇರಳ ಎಂದು ಕರೆಯುವಂತಿಲ್ಲ

Posted by Vidyamaana on 2023-08-10 03:18:17 |

Share: | | | | |


ರಾಜ್ಯದ ಹೆಸರು ಬದಲಾಯಿಸುವ ನಿರ್ಣಯ ಅಂಗೀಕಾರ: ಇನ್ನು ಮುಂದೆ ಕೇರಳ ಎಂದು ಕರೆಯುವಂತಿಲ್ಲ

ತಿರುವನಂತಪುರಂ: ಕೇರಳ ರಾಜ್ಯದ ಅಧಿಕೃತ ಹೆಸರನ್ನು ಕೇರಳದಿಂದ ಕೇರಳಂ ಎಂದು ಬದಲಾಯಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡುವ ನಿರ್ಣಯ ಕೇರಳ ವಿಧಾನಸಭೆ ನಿನ್ನೆ ಅಂಗೀಕರಿಸಿದೆ.ತಿದ್ದುಪಡಿ ತಂದು ಕೇರಳಂ ಮಾಡುವಂತೆ ಸದನವು ಕೇಂದ್ರ ಸರಕಾರ ಕೋರಿದ್ದು, ಮುಖ್ಯಮಂತ್ರಿ ಮಂಡಿಸಿದ ನಿರ್ಣಯ ಅಂಗೀಕಾರವಾದ ನಂತರ ಸರ್ಕಾರಿ ದಾಖಲೆಗಳಲ್ಲಿ ಕೇರಳಂ ಹೆಸರು ಬಳಕೆಯಾಗುತ್ತಿದ್ದು, ಈ ಬದಲಾವಣೆಯು ಸಂವಿಧಾನದಲ್ಲಿ ಪ್ರತಿಫಲಿಸುತ್ತದೆ ಮತ್ತು ಅಧಿಕೃತವಾಗಿ ಮಲಯಾಳಂ ಮತ್ತು ಇಂಗ್ಲಿಷ್‌ನಲ್ಲಿಯೂ ಬರೆಯಲಾಗುತ್ತದೆ.ನಿರ್ಣಯ ಮುಖ್ಯಮಂತ್ರಿ ಪಿಣರಾಯಿ ವಿಜಯನ್​ ಅವರು ಕೇರಳದ ವಿಧಾನಭೆಯಲ್ಲಿ ಪ್ರಸ್ತುತಪಡಿಸಿ, ಈ ನಿರ್ಣಯ ಸರ್ವ ಸದಸ್ಯರು ಸರ್ವಾನುಮತದಿಂದ ಅಂಗೀಕರಿಸಿ ಭಾರತೀಯ ಸಂವಿಧಾನದ ಎಂಟನೇ ಶೆಡ್ಯೂಲ್ ಮತ್ತು ಎಲ್ಲ ಅಧಿಕೃತ ದಾಖಲೆಗಳಲ್ಲಿ ಹೆಸರು ಬದಲಿಸಲು ಕೇರಳ ಸರ್ಕಾರ ಕೋರಿದೆ.ಭಾರತ ಸಂವಿಧಾನದಲ್ಲಿ ರಾಜ್ಯದ ಹೆಸರನ್ನು ಕೇರಳ ಎಂದು ಬರೆಯಲಾಗಿದೆ.


ರಾಜ್ಯದ ಹೆಸರು ಮಲಯಾಳಂನಲ್ಲಿ ಕೇರಳಂ ಎಂದೇ ಕರೆಯಲಾಗುತ್ತಿದ್ದು, 1956ರ ನವೆಂಬರ್ 1ರಂದು ಭಾಷಾವಾರು ಆಧಾರದ ಮೇಲೆ ರಾಜ್ಯ ರಚಿಸಲಾಯಿತು. ಮಲಯಾಳಂ ಮಾತನಾಡುವ ಎಲ್ಲ ಜನರಿಗೆ ಅಖಂಡ ಕೇರಳ ರಾಜ್ಯ ರಚನೆಯಾಗಿದ್ದು, ಸಂವಿಧಾನದ ಮೊದಲ ಶೆಡ್ಯೂಲ್​ನಲ್ಲಿ ರಾಜ್ಯದ ಹೆಸರನ್ನು ಕೇರಳ ಎಂದು ನಮೂದಿಸಲಾಗಿದೆರಾಜ್ಯದ ಅಧಿಕೃತ ಹೆಸರನ್ನು ಎಲ್ಲ ಅಧಿಕೃತ ಭಾಷೆಗಳಲ್ಲಿ ಕೇರಳಂ ಎಂದು ಬದಲಾಯಿಸಲು ಸಂವಿಧಾನದ ಎಂಟನೇ ಶೆಡ್ಯೂಲ್ ಅಡಿಯಲ್ಲಿ ಅಗತ್ಯ ತಿದ್ದುಪಡಿಗಳನ್ನು ಮಾಡುವಂತೆ ವಿಧಾನಸಭೆಯು ಕೇಂದ್ರ ಸರ್ಕಾರ ಸರ್ವಾನುಮತದಿಂದ ವಿನಂತಿಸುತ್ತದೆ ಎಂದು ನಿರ್ಣಯ ಮಂಡಿಸುವಾಗ ಸಿಎಂ ಪಿಣರಾಯಿ ವಿಜಯನ್​ ವಿವರಿಸಿದರು.

ವಿಟ್ಲ : ಬಸ್-ಪಿಕಪ್‌ ಮುಖಾಮುಖಿ ಡಿಕ್ಕಿ : ಹಲವರಿಗೆ ಗಾಯ

Posted by Vidyamaana on 2024-04-04 12:53:09 |

Share: | | | | |


ವಿಟ್ಲ : ಬಸ್-ಪಿಕಪ್‌ ಮುಖಾಮುಖಿ ಡಿಕ್ಕಿ : ಹಲವರಿಗೆ ಗಾಯ

ವಿಟ್ಲ-ಕಲ್ಲಡ್ಕ ರಸ್ತೆಯ ಗೋಳ್ತಮಜಲು ಎಂಬಲ್ಲಿ ಬಸ್ಸಿಗೆ ಪಿಕಪ್ ಮುಖಾಮುಖಿ ಢಿಕ್ಕಿಯಾಗಿ ಹಲವರು ಗಾಯಗೊಂಡ ಘಟನೆ ನಡೆದಿದೆ.



Leave a Comment: