ನೇರಳಕಟ್ಟೆ : ಪಂತಡ್ಕ ನಿವಾಸಿ ಬಾತಿಷಾ ನಿಧನ

ಸುದ್ದಿಗಳು News

Posted by vidyamaana on 2024-07-25 19:32:58 | Last Updated by Vidyamaana on 2024-07-25 19:32:58

Share: | | | | |


ನೇರಳಕಟ್ಟೆ : ಪಂತಡ್ಕ ನಿವಾಸಿ ಬಾತಿಷಾ ನಿಧನ

ಬಂಟ್ವಾಳ : ಜ್ವರದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಸಂಜೆ ಮೃತಪಟ್ಟಿದ್ದಾರೆ. 

 ನೇರಳಕಟ್ಟೆ ಸಮೀಪದ ಪಂತಡ್ಕ ನಿವಾಸಿ ಅಟೋ ರಿಕ್ಷಾ ಮೆಕೇನಿಕ್ ಸಿ.ಎಚ್. ಹನೀಫ್ ಅವರ ಪುತ್ರ

ಬಾತಿಷಾ( 22) ಮೃತಪಟ್ಟವರು.ಮಂಗಳೂರಿನ ಬಟ್ಟೆ ಅಂಗಡಿಯೊಂದರಲ್ಲಿ ಸೇಲ್ಸ್ ಮೇನ್ ಆಗಿ ಕೆಲಸ ಮಾಡುತ್ತಿದ್ದ ಈತನಿಗೆ ವಾರದ ಹಿಂದೆ ಜ್ವರ ಬಂದಿದ್ದು ಚಿಕಿತ್ಸೆ ಪಡೆಯುತ್ತಿದ್ದ, ಗುರುವಾರ ಬೆಳಿಗ್ಗೆ ಜ್ವರ ಉಲ್ಬಣಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಂಜೆ ವೇಳೆಗೆ ಮೃತಪಟ್ಟಿದ್ದಾರೆ.

 Share: | | | | |


ಬೆಂಗಳೂರು: ವಿದ್ಯಾರ್ಥಿನಿಯ ಅತ್ಯಾಚಾರಕ್ಕೆ ಯತ್ನ ಪ್ರಕರಣ: ತಮಿಳುನಾಡು ಮೂಲದ ಕೊರಿಯೋಗ್ರಾಫರ್ ಬಂಧನ

Posted by Vidyamaana on 2024-08-20 07:29:13 |

Share: | | | | |


ಬೆಂಗಳೂರು: ವಿದ್ಯಾರ್ಥಿನಿಯ ಅತ್ಯಾಚಾರಕ್ಕೆ ಯತ್ನ ಪ್ರಕರಣ: ತಮಿಳುನಾಡು ಮೂಲದ ಕೊರಿಯೋಗ್ರಾಫರ್ ಬಂಧನ

ಬೆಂಗಳೂರು : ಲಿಫ್ಟ್ ಪಡೆದಿದ್ದ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ಪ್ರಕರಣ ಸಂಬಂಧ ಆರೋಪಿಯನ್ನು ಇಲ್ಲಿನ ಎಚ್‍ಎಸ್‍ಆರ್ ಲೇಔಟ್ ಠಾಣೆ ಪೊಲೀಸರು ಬಂಧಿಸಿರುವುದಾಗಿ ತಿಳಿಸಿದ್ದಾರೆ.ಬಂಧಿತನನ್ನು ತಮಿಳುನಾಡು ಮೂಲದ ಮುಕೇಶ್ವರನ್(24) ಎಂದು ಗುರುತಿಸಲಾಗಿದೆ.ಆರೋಪಿಯು ನಗರದಲ್ಲಿ ಡ್ಯಾನ್ಸ್ ಕೊರಿಯೋಗ್ರಾಫರ್ ಆಗಿ ಕೆಲಸ ಮಾಡಿಕೊಂಡಿದ್ದ. ಕೃತ್ಯದ ಬಳಿಕ ಆಡುಗೋಡಿಯ ತನ್ನ ಮನೆಯಲ್ಲಿದ್ದ ಎಂದು ಪೊಲೀಸರು ಹೇಳಿದ್ದಾರೆ.

BREAKING : ಬಿಜೆಪಿಯ ಅಭ್ಯರ್ಥಿಗಳ 5ನೆ ಪಟ್ಟಿ ಬಿಡುಗಡೆ : ಅನಂತ್ ಕುಮಾರ್ ಹೆಗಡೆ ಬದಲು ಕಾಗೇರಿಗೆ ಮಣೆ ಹಾಕಿದ ಹೈಕಮಾಂಡ್

Posted by Vidyamaana on 2024-03-24 21:28:06 |

Share: | | | | |


BREAKING : ಬಿಜೆಪಿಯ ಅಭ್ಯರ್ಥಿಗಳ 5ನೆ ಪಟ್ಟಿ ಬಿಡುಗಡೆ : ಅನಂತ್ ಕುಮಾರ್ ಹೆಗಡೆ ಬದಲು ಕಾಗೇರಿಗೆ ಮಣೆ ಹಾಕಿದ ಹೈಕಮಾಂಡ್

ಬೆಂಗಳೂರು : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಇದೀಗ ಬಿಜೆಪಿ 5ನೇ ಪಟ್ಟಿ ಬಿಡುಗಡೆ ಮಾಡಿದ್ದು ರಾಜ್ಯದ ನಾಲ್ಕು ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ.ಕಾಂಗ್ರೆಸ್ ಸರ್ಕಾರದ ವಿರುದ್ಧ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತೀವ್ರವಾಗಿ ಹಾಗೂ ವಿವಾದಾತ್ಮಕ ಹೇಳಿಕೆ ನೀಡಿದ್ದ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಅನಂತ್ ಕುಮಾರ್ ಹೆಗಡೆ ಬದಲು ಇದೀಗ ಹೈಕಮಾಂಡ್ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಟಿಕೆಟ್ ನೀಡಿದೆ.ಅಲ್ಲದೆ ಇದೇ ವೇಳೆ ಇತ್ತೀಚಿಗೆ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರಿದ ಜಗದೀಶ್ ಶೆಟ್ಟರಿಗೆ ಹಾವೇರಿ ಲೋಕಸಭಾ ಕ್ಷೇತ್ರದ ಬದಲು ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಟಿಕೆಟ್ ನೀಡಲಾಗಿದೆ. ಅಲ್ಲದೆ ಹೈಕಮಾಂಡ್ ವಿಶ್ವಾಸ ಗಳಿಸುವಲ್ಲಿ ಯಶಸ್ವಿಯಾಗಿರುವ ಬಿಜೆಪಿಯ ಮಾಜಿ ಸಚಿವ ಸುಧಾಕರ್ ಅವರಿಗೆ ಕೂಡ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಟಿಕೆಟ್ ಸಿಕ್ಕಿದೆ.ಬಿಜೆಪಿ 5ನೇ ಪಟ್ಟೆ ಬಿಡುಗಡೆಯಾಗಿದ್ದು, ಕರ್ನಾಟಕದ ನಾಲ್ಕು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದ್ದು, ಅಭ್ಯರ್ಥಿಗಳ ಪಟ್ಟಿ ಇಲ್ಲಿದೆ


1)ಉತ್ತರ ಕನ್ನಡ ಲೋಕಸಭಾ ಕ್ಷೇತ್ರ - ವಿಶ್ವೇಶ್ವರ ಹೆಗಡೆ ಕಾಗೇರಿ

2)ಚಿಕ್ಕಬಳ್ಳಾಪುರ ಕ್ಷೇತ್ರ -ಡಾ. ಕೆ ಸುಧಾಕರ್

3) ಬೆಳಗಾವಿ ಲೋಕಸಭಾ ಕ್ಷೇತ್ರ- ಜಗದೀಶ್ ಶೆಟ್ಟರ್

4). ರಾಯಚೂರು ಲೋಕಸಭಾ ಕ್ಷೇತ್ರ-ರಾಜಾಅಮರೇಶ್ವರ ನಾಯಕಗೆ ಬಿಜೆಪಿ ಟಿಕೇಟ್ ನೀಡಿದೆ.

ಆ. 15ರಂದು ಮಿನಾಜ್ ನಗರ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಸನ್ಮಾನ

Posted by Vidyamaana on 2023-08-14 15:02:31 |

Share: | | | | |


ಆ. 15ರಂದು ಮಿನಾಜ್ ನಗರ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಸನ್ಮಾನ

ಬೆಂಗಳೂರು: ಇಲ್ಲಿನ ಮಿನಾಜ್’ನಗರ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಆ. 15ರಂದು ಬೆಳಿಗ್ಗೆ 9 ಗಂಟೆಗೆ ಸ್ವಾತಂತ್ರ್ಯ ದಿನಾಚರಣೆ ಹಾಗೂ ಸನ್ಮಾನ ಕಾರ್ಯಕ್ರಮ ನಡೆಯಲಿದೆ.

9 ಗಂಟೆಗೆ ಸರಿಯಾಗಿ ಧ್ವಜಾರೋಹಣ ನಡೆಯಲಿದೆ. ಲೋಕಾಯುಕ್ತ ನಿವೃತ್ತ ಸರ್ಕಾರಿ ಅಭಿಯೋಜಕ ಟಿ.ಆರ್. ಅಲಾವುದ್ದೀನ್ ಎಕ್’ಸಾಂಬಿ ಧ್ವಜಾರೋಹಣ ನೆರವೇರಿಸಲಿದ್ದಾರೆ. ಧ್ವಜಾರೋಹಣದ ಬಳಿಕ ರಾಷ್ಟ್ರಗೀತೆ, ನಾಡ ಗೀತೆ, ಕೀರತ್, ಹುಮ್ದ ಮತ್ತು ನಾಟ್ ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮ, ಅತಿಥಿಗಳಿಗೆ ಗೌರವಾರ್ಪಣೆ, ಪ್ರಶಸ್ತಿ ವಿತರಣೆ, ಮೆರವಣಿಗೆ ನಡೆಯಲಿದೆ.

ರಾಜ್ಯ ಸರ್ಕಾರದ ಕೆ.ಎಂ.ಡಿ.ಸಿ. ಆಡಳಿತ ನಿರ್ದೇಶಕ ಮೊಹಮ್ಮದ್ ನಜೀರ್ ಮುಖ್ಯ ಅತಿಥಿಯಾಗಿರುವರು.

ಲೋಕಾಯುಕ್ತ ನಿವೃತ್ತ ಸರ್ಕಾರಿ ಅಭಿಯೋಜಕ ಟಿ.ಆರ್. ಅಲಾವುದ್ದೀನ್ ಎಕ್ಸಂಬಿ, ಮಿನ್ಜಾ ವೆಲ್ಫೇರ್ ಅಸೋಸಿಯೇಶನ್ ಉಪಾಧ್ಯಕ್ಷ ಟಿ.ಆರ್. ಅಬ್ದುಲ್ ಗಫೂರ್, ಖಲೀಲ್ ಉರ್ ರೆಹಮಾನ್, ಮಿನ್ಜಾ ವೆಲ್ಫೇರ್ ಅಸೋಸಿಯೇಶನ್ ಕಾರ್ಯದರ್ಶಿ ನಜೀರ್ ಬೇಗ್, ಸಯ್ಯದ್ ಸಾಜಿದ್ ಹುಸೈನ್, ನಯಾಜ್ ಪಾಶಾ, ಇಂಜಿನಿಯರ್ ಹುಲಿವಾನ ಶಿವರಾಮ್, ಎಂಡಬ್ಲ್ಯೂಇಡಿ ಟ್ರಸ್ಟಿನ ಉಪಾಧ್ಯಕ್ಷ ನಯಾಜ್ ಬೇಗ್, ಕನ್ನಡ ಶಿಕ್ಷಕಿ ರಾಧಾ, ಮುಖ್ಯಶಿಕ್ಷಕಿ ಕೌಸರ್ ತಾಜ್ ಅವರನ್ನು ಇದೇ ಸಂದರ್ಭ ಸನ್ಮಾನಿಸಲಾಗುವುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ದ.ಕ.ಜಿಲ್ಲೆಯಲ್ಲಿ ಭಾರೀ ಮಳೆ ಸಾಧ್ಯತೆ: ಜೂ.11ರವರೆಗೆ ಮುನ್ನೆಚ್ಚರಿಕೆ ವಹಿಸಲು: ಡಿಸಿ ರವಿಕುಮಾರ್ ಸೂಚನೆ

Posted by Vidyamaana on 2023-06-07 10:53:10 |

Share: | | | | |


ದ.ಕ.ಜಿಲ್ಲೆಯಲ್ಲಿ ಭಾರೀ ಮಳೆ ಸಾಧ್ಯತೆ: ಜೂ.11ರವರೆಗೆ ಮುನ್ನೆಚ್ಚರಿಕೆ ವಹಿಸಲು: ಡಿಸಿ ರವಿಕುಮಾರ್ ಸೂಚನೆ

ಮಂಗಳೂರು:ಭಾರತೀಯ ಹವಾಮಾನ ಇಲಾಖೆಯು ನೀಡಿದ ಮುನ್ಸೂಚನೆಯಂತೆ ದ.ಕ. ಸಹಿತ ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹಾಗಾಗಿ ಜೂ.11ರವರೆಗೆ ಮುನ್ನೆಚ್ಚರಿಕೆ ವಹಿಸಲು ದ.ಕ. ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ದ.ಕ.ಜಿಲ್ಲಾಧಿಕಾರಿ ರವಿಕುಮಾರ್ ಸೂಚನೆ ನೀಡಿದ್ದಾರೆ.

ಮಳೆಯೊಂದಿಗೆ ಸಮುದ್ರದ ಅಲೆಗಳು ಏಳುವ ಸಾಧ್ಯತೆ ಇದೆ. ಹಾಗಾಗಿ ನದಿ, ಸಮುದ್ರ ಕಿನಾರೆಯ ಬಳಿ ತೆರಳಬಾರದು. ಮೀನುಗಾರರು ಈ ಅವಧಿಯಲ್ಲಿ ಮೀನುಗಾರಿಕೆಗೂ ತೆರಳದಂತೆ ಡಿಸಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಕೇಂದ್ರ ಸಚಿವೆ ಸ್ಮೃತಿ ಇರಾನಿ ಅಮೇಥಿ ಲೋಕಸಭಾ ಕ್ಷೇತ್ರದಿಂದ ಹೀನಾಯ ಸೋಲು

Posted by Vidyamaana on 2024-06-04 21:05:34 |

Share: | | | | |


ಕೇಂದ್ರ ಸಚಿವೆ ಸ್ಮೃತಿ ಇರಾನಿ ಅಮೇಥಿ ಲೋಕಸಭಾ ಕ್ಷೇತ್ರದಿಂದ ಹೀನಾಯ ಸೋಲು

ಲಕ್ನೋ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಉತ್ತರಪ್ರದೇಶದಲ್ಲಿ ಬಿಜೆಪಿಗೆ ದೊಡ್ಡ ಆಘಾತ ಉಂಟಾಗಿದೆ. ಕಳೆದ ಎರಡು ಸರ್ಕಾರಗಳಲ್ಲಿ ಬಿಜೆಪಿಯಲ್ಲಿ ಶಾಶ್ವತ ಸ್ಥಾನ ಪಡೆದಿರುವ ಪಕ್ಷದ ದೊಡ್ಡ ನಾಯಕಿ ಮತ್ತು ಕೇಂದ್ರ ಸಚಿವೆ ಸ್ಮೃತಿ ಇರಾನಿ ಅಮೇಥಿ ಲೋಕಸಭಾ ಕ್ಷೇತ್ರದಿಂದ ಸೋಲನುಭವಿಸಿದ್ದಾರೆ.

ಸಾವಿನ ಬಗ್ಗೆ ಅನುಮಾನ : ದಫನ ಮಾಡಿದ 18 ದಿನಗಳ ಬಳಿಕ ಮರಣೋತ್ತರ ಪರೀಕ್ಷೆ

Posted by Vidyamaana on 2024-05-24 11:06:49 |

Share: | | | | |


ಸಾವಿನ ಬಗ್ಗೆ ಅನುಮಾನ : ದಫನ ಮಾಡಿದ 18 ದಿನಗಳ ಬಳಿಕ ಮರಣೋತ್ತರ ಪರೀಕ್ಷೆ

ಕನ್ಯಾನ : ಸಂಶಯಾಸ್ಪದವಾಗಿ ಮೃತಪಟ್ಟ ವ್ಯಕ್ತಿಯೊಬ್ಬರ ಶವ ದಫನ ಮಾಡಿದ ಬಳಿಕ, ಸಾವಿನಲ್ಲಿ ಸಂಶಯವಿದೆ ಎಂದು ಮೃತ ವ್ಯಕ್ತಿಯ ಸಹೋದರ ಮಂಜೇಶ್ವರ ಠಾಣೆಗೆ ದೂರು ನೀಡಿದ್ದು, ನ್ಯಾಯಾಲಯದ ಆದೇಶದಂತೆ ಕನ್ಯಾನ ಬಂಡಿತ್ತಡ್ಕ ಮಸೀದಿ ಆವರಣದಲ್ಲಿ ದಫನ ಮಾಡಿದ್ದ ಶವವನ್ನು 18 ದಿನಗಳ ಬಳಿಕ ಮೇಲೆತ್ತಿ ಮರಣೋತ್ತರ ಪರೀಕ್ಷೆಯನ್ನು ಗುರುವಾರ ನಡೆಸಲಾಯಿತು.

ಕೇರಳದ ಸುಂಕದಕಟ್ಟೆ ಮಜೀರ್ಪಳ್ಳ ನಿವಾಸಿ ಅಶ್ರಫ್ (44) ಅವರ ದೇಹವನ್ನು ಕನ್ಯಾನದ ಬಂಡಿತ್ತಡ್ಕದಲ್ಲಿರುವ ರಹ್ಮಾನಿಯಾ ಜುಮಾ ಮಸೀದಿ ಆವರಣದಲ್ಲಿ ದಫನ ಮಾಡಲಾಗಿತ್ತು. ಆ ಶವವನ್ನು ಬಂಟ್ವಾಳ ತಹಶೀಲ್ದಾರ್ ಡಿ.ಅರ್ಚನಾ ಭಟ್, ಮಂಜೇಶ್ವರ ಸಿಪಿಐ ರಾಜೀವ್ ಕುಮಾರ್ ಕೆ., ಕೇರಳ ಆರೋಗ್ಯ ಇಲಾಖೆಯ ಡಾ.ಹರಿಕೃಷ್ಣ ಕಾಸರಗೋಡು, ಯೆನೆಪೋಯ ವಿಧಿವಿಜ್ಞಾನ ವಿಭಾಗ ಮುಖ್ಯಸ್ಥ ಡಾ.ಕಿಶೋರ್ ಕುಮಾರ್ ಬಿ., ವಿಟ್ಲ ಪೊಲೀಸರ ಸಮ್ಮುಖದಲ್ಲಿ ಮೇಲೆತ್ತಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು.

ದೇಹದ ಅಂಗಾಗಳ ಮಾದರಿಯನ್ನು ವಿಧಿವಿಜ್ಞಾನ ತಂಡ ಪಡೆದುಕೊಂಡಿದ್ದು, ತನಿಖೆಗಾಗಿ ಯೆನೆಪೋಯ ಆಸ್ಪತ್ರೆಗೆ ತೆಗೆದುಕೊಂಡು ಹೋಗಿದ್ದಾರೆ. ಅಧಿಕಾರಿಗಳ ಸೂಚನೆಯಂತೆ ಬಂದಿದ್ದು, ವರದಿಯನ್ನು ಕೇರಳದ ನ್ಯಾಯಾಲಯಕ್ಕೆ ಸಲ್ಲಿಸುವುದಾಗಿ ವಿಧಿವಿಜ್ಞಾನ ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ.



Leave a Comment: