ಪುತ್ತೂರು :ಭೀಕರ ಅಪಘಾತ - 10 ಕ್ಕೂ ಹೆಚ್ಚು ವಾಹನಗಳು ಪುಡಿ ಪುಡಿ

ಸುದ್ದಿಗಳು News

Posted by vidyamaana on 2024-05-27 18:41:30 |

Share: | | | | |


ಪುತ್ತೂರು :ಭೀಕರ ಅಪಘಾತ - 10 ಕ್ಕೂ  ಹೆಚ್ಚು ವಾಹನಗಳು ಪುಡಿ ಪುಡಿ

ಪುತ್ತೂರು : ಪುತ್ತೂರಿನ ಹೊರ ವಲಯದ ಸಂಟ್ಯಾರಿನಲ್ಲಿ ಭೀಕರ ಅಪಘಾತ ನಡೆದು 10ಕ್ಕೂ ಹೆಚ್ಚು ವಾಹನಗಳು ಪುಡಿ ಪುಡಿಯಾದ ಘಟನೆ ಮೇ.27ರಂದು ಸಂಜೆ ನಡೆದಿದೆ. 

ಪಾಣಾಜೆ - ಸಂಟ್ಯಾರ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಸಂಟ್ಯಾರ್ ಜಂಕ್ಷನ್ ನಲ್ಲಿ ನಿಲ್ಲಿಸಿದ್ದ ಹತ್ತಕ್ಕೂ ಹೆಚ್ಚು ಬೈಕ್ ಗಳು ಪುಡಿ ಪುಡಿಯಾಗಿ ಚೆಲ್ಲಪಿಲ್ಲಿಯಾಗಿದೆ. 


ಪಾಣಾಜೆ ಕಡೆಯಿಂದ ಅತೀ ವೇಗದಲ್ಲಿ ಬರುತಿದ್ದ ಕಾರೊಂದು  ಈ ಹತ್ತಕ್ಕೂ ಹೆಚ್ಚು ದ್ವಿಚಕ್ರ ವಾಹನಗಳಿಗೆ ಡಿಕ್ಕಿಯಾಗಿದೆ. ಸಂಟ್ಯಾರ್ ಜಂಕ್ಷನ್ ನಲ್ಲಿ   ವಾಹನ ನಿಲ್ಲಿಸಿ ಬಸ್ ನಲ್ಲಿ ಉದ್ಯೋಗಕ್ಕೆ ತೆರಳುವವರ 10 ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಪುಡಿ ಪುಡಿಯಾಗಿ ಚೆಲ್ಲಪಿಲ್ಲಿಯಾಗಿದೆ.

 Share: | | | | |


ಕಂಪನಿಯ ರಜತ ಮಹೋತ್ಸವ ವೇದಿಕೆಯಲ್ಲಿ ಅವಘಡ: ಸಿಇಒ ಮೃತ್ಯು

Posted by Vidyamaana on 2024-01-20 16:45:29 |

Share: | | | | |


ಕಂಪನಿಯ ರಜತ ಮಹೋತ್ಸವ ವೇದಿಕೆಯಲ್ಲಿ ಅವಘಡ: ಸಿಇಒ ಮೃತ್ಯು

ಹೈದರಬಾದ್: ಅಮೆರಿಕದಲ್ಲಿ ನೆಲೆಸಿರುವ ಭಾರತೀಯ ಮೂಲದ ಸಿಇಓ ಹಾಗೂ ಬಹುರಾಷ್ಟ್ರೀಯ ಸಾಫ್ಟ್ ವೇರ್ ಕಂಪನಿಯ ಸಂಸ್ಥಾಪಕ ಕಂಪನಿಯ ರಜತ ಮಹೋತ್ಸವದ ಸಂದರ್ಭದಲ್ಲಿ ಸಮಾರಂಭದ ವೇಳೆ ವೇದಿಕೆಯಲ್ಲಿ ನಡೆದ ದುರಂತದಲ್ಲಿ ಮೃತಪಟ್ಟಿದ್ದಾರೆ.


ಇಲಿನೊಯಿಸ್ ಮೂಲದ ಸಿಇಓ ಸಂಜಯ್ ಶಾ (56) ಮೃತರು ಎಂದು ಗುರುತಿಸಲಾಗಿದೆ.


ರಜತ ಮಹೋತ್ಸವವ ಸಮಾರಂಭವನ್ನು ರಾಮೋಜಿ ಫಿಲ್ಮ್ ಸಿಟಿಯಲ್ಲಿ ಆಯೋಜಿಸಲಾಗಿತ್ತು.


ಸಮಾರಂಭಕ್ಕೆ ಚಾಲನೆ ನೀಡಲು ಶಾ ಹಾಗೂ ರಾಜು ಕಬ್ಬಿಣದ ಗೂಡಿನಿಂದ ಕೆಳಗಿಳಿದು ವೇದಿಕೆಗೆ ಬರಬೇಕಿತ್ತು. ಅವರನ್ನು ರೋಪ್ ಬಳಸಿ ಕಬ್ಬಿಣದ ಗೂಡಿನ ಮೂಲಕ ಕೆಳಗಿದ್ದ ವೇದಿಕೆಗೆ ಕರೆತರಲು ಉದ್ದೇಶಿಸಲಾಗಿತ್ತು. ಸಂಗೀತದ ಹಿಮ್ಮೇಳದಲ್ಲಿ ಶಾ ಹಾಗೂ ರಾಜು ಸಿಬ್ಬಂದಿಗೆ ಕೈಬೀಸುತ್ತಾ ಇಳಿಯುತ್ತಿದ್ದರು. ಆದರೆ ದಿಢೀರನೇ ಈ ಕಬ್ಬಿಣದ ಗೂಡಿಗೆ ಜೋಡಿಸಿದ್ದ ಎರಡು ವೈರ್ ಗಳ ಪೈಕಿ ಒಂದು ತುಂಡಾಯಿತು. ಇಬ್ಬರೂ 15 ಅಡಿ ಕೆಳಕ್ಕೆ ಬಿದ್ದು, ಕಾಂಕ್ರಿಟ್ ವೇದಿಕೆಗೆ ಅಪ್ಪಳಿಸಿದರು. ಗಂಭೀರ ಗಾಯಗೊಂಡ ಇವರನ್ನು ತಕ್ಷಣ ಆಸ್ಪತ್ರೆಗೆ ಆಸ್ಪತ್ರೆಗೆ ಸೇರಿಸಲಾಯಿತಾದರೂ ಶಾ ಮೃತಪಟ್ಟಿದ್ದಾರೆ.

ಪುತ್ತೂರು : ಪ್ರಜ್ವಲ್‌ ರೈ ಪಾತಾಜೆ ಗಡಿಪಾರಿಗೆ ಎಸಿ ಶಿಫಾರಸ್ಸು

Posted by Vidyamaana on 2024-04-07 07:54:48 |

Share: | | | | |


ಪುತ್ತೂರು : ಪ್ರಜ್ವಲ್‌ ರೈ ಪಾತಾಜೆ ಗಡಿಪಾರಿಗೆ ಎಸಿ ಶಿಫಾರಸ್ಸು

ಪುತ್ತೂರು : ಎ.ಆರ್ ವಾರಿಯರ್ಸ್ ಮುಖ್ಯಸ್ಥ ಪ್ರಜ್ವಲ್ ರೈ ಪಾತಾಜೆ ಅವರ ಗಡಿಪಾರಿಗೆ ಆದೇಶ ಹೊರಡಿಸಿ ಪುತ್ತೂರು ಉಪ ವಿಭಾಗದ ಸಹಾಯಕ ಆಯುಕ್ತರು ಹಾಗೂ ಉಪವಿಭಾಗದ ದಂಡಾಧಿಕಾರಿ ಏ.2ರಂದು ಆದೇಶಕ್ಕೆ ಶಿಫಾರಸ್ಸು ಮಾಡಿದ್ದಾರೆ.

ಕರ್ನಾಟಕ ಪೊಲೀಸ್ ಅಧಿನಿಯಮ 1963ರ ಕಲಂ 55ರಂತೆ ಬಳ್ಳಾರಿ ಜಿಲ್ಲೆಯ ಬ್ರೂಸ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಗೆ ಅವರನ್ನು ಗಡಿಪಾರು ಮಾಡಲು ಶಿಫಾರಸ್ಸು ಮಾಡಲಾಗಿದೆ.

ಉಡುಪಿ : ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ನಾಮಪತ್ರ ಸಲ್ಲಿಕೆ

Posted by Vidyamaana on 2024-04-03 16:49:20 |

Share: | | | | |


ಉಡುಪಿ : ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ನಾಮಪತ್ರ ಸಲ್ಲಿಕೆ

ಉಡುಪಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಅವರು ಇಂದು ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

ಕೋಟ ಶ್ರೀನಿವಾಸ್ ಪೂಜಾರಿ ಅವರು ನಾಮಪತ್ರ ಸಲ್ಲಿಸುವ ಮುನ್ನ ಪಕ್ಷದ ಕಾರ್ಯಕರ್ತರ ಬೃಹತ್‌ ಸಮಾವೇಶ ಹಮ್ಮಿಕೊಳ್ಳಲಾಗಿತ್ತು.

ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಘೋಷಣೆ: ರಾಮಲಿಂಗಾರೆಡ್ಡಿಗೆ ಕೆಯುಡಬ್ಲ್ಯೂಜೆ ವತಿಯಿಂದ ಸನ್ಮಾನ

Posted by Vidyamaana on 2024-02-23 15:05:42 |

Share: | | | | |


ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಘೋಷಣೆ: ರಾಮಲಿಂಗಾರೆಡ್ಡಿಗೆ ಕೆಯುಡಬ್ಲ್ಯೂಜೆ ವತಿಯಿಂದ ಸನ್ಮಾನ

ಬೆಂಗಳೂರು: ರಾಜ್ಯ ಬಜೆಟ್​ನಲ್ಲಿ ರಾಜ್ಯದ ಪತ್ರಕರ್ತರಿಗೆ ಉಚಿತ ಗ್ರಾಮೀಣ ಬಸ್​ ಪಾಸ್ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಸಾರಿಗೆ ಸಚಿವ‌ ರಾಮಲಿಂಗಾರೆಡ್ಡಿ‌ ಅವರನ್ನು ವಿಧಾನಸೌಧದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ)ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಸನ್ಮಾನಿಸಿದರು.


ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ, ಬೆಂಗಳೂರು ನಗರ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ನರೇಂದ್ರ ಪಾರೆಕಟ್, ಜಿಲ್ಲಾ ಘಟಕದ ಉಪಾಧ್ಯಕ್ಷ ಕೆ.ಎಂ. ಜಿಕ್ರಿಯಾ ಉಪಸ್ಥಿತರಿದ್ದರು.


ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ದಾವಣಗೆರೆಯಲ್ಲಿ ಹಮ್ಮಿಕೊಂಡಿದ್ದ 38 ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿಯವರು ಕೆಯುಡಬ್ಲ್ಯೂಜೆ ಬೇಡಿಕೆಗೆ ಸ್ಪಂದಿಸಿ ಭರವಸೆ ನೀಡಿದ್ದರು.

ಕಡೇಶಿವಾಲಯ ಗ್ರಾಮದ ನೆಲ್ಲಿಗುಡ್ಡೆ ನಿವಾಸಿ ಸಚಿನ್ ನೇಣಿಗೆ ಶರಣು

Posted by Vidyamaana on 2023-10-20 18:37:44 |

Share: | | | | |


ಕಡೇಶಿವಾಲಯ ಗ್ರಾಮದ ನೆಲ್ಲಿಗುಡ್ಡೆ ನಿವಾಸಿ ಸಚಿನ್ ನೇಣಿಗೆ ಶರಣು

ಬಂಟ್ವಾಳ: ಪ್ರೇಮ ವೈಫಲ್ಯ ಕಂಡ ಕಾರಣಕ್ಕಾಗಿ ಮಾನಸಿಕವಾಗಿ ನೊಂದುಕೊಂಡ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯ ಕಾಮಾಜೆ ಎಂಬಲ್ಲಿ ನಡೆದಿದೆ.ಕಡೇಶಿವಾಲಯ ಗ್ರಾಮದ ನೆಲ್ಲಿ ಗುಡ್ಡೆ ನಿವಾಸಿ ಸಚಿನ್ (24) ಆತ್ಮಹತ್ಯೆ ಮಾಡಿಕೊಂಡ ಯುವಕ.


ಕಡೇಶಿವಾಲಯ ಗ್ರಾಮದ ನೆಲ್ಲಿಗುಡ್ಡೆ ನಿವಾಸಿ ದಿ.ಸುಂದರ ಎಂಬವರ ಮಗ ಸಚಿನ್ ಜೀವನದಲ್ಲಿ ಜಿಗುಪ್ಸೆ ಹೊಂದಿ ಆತ್ಮಹತ್ಯೆ ಮಾಡಿಕೊಂಡಿರುವ ಯುವಕ.

ಸಚಿನ್ ಬಂಟ್ವಾಳದ ಲೆವಿನ್ ಇಲೆಕ್ಟ್ರಿಕಲ್ ಕಂಪೆನಿಯಲ್ಲಿ ಇಲೆಕ್ಟ್ರೀಷಿಯನ್ ಆಗಿ ಕೆಲಸ ಮಾಡುತ್ತಿದ್ದ. ಅ.18 ರಂದು ಕೆಲಸಕ್ಕೆ ಹೋದವನು ರಾತ್ರಿಯಾದರೂ ಮನೆಗೆ ಬರದ ಹಿನ್ನೆಲೆಯಲ್ಲಿ ಈತನನ್ನು ಹುಡುಕಲು ಶುರು ಮಾಡಿದ್ದರು.


ಪೋನ್ ಮಾಡಿದಾಗ ರಿಂಗ್ ಆಗುತ್ತಿತ್ತು ವಿನಹ ರಿಸೀವ್ ಮಾಡದ ಇರುವಾಗ ಬಂಟ್ವಾಳದ ಕಾಮಾಜೆ ಮಾವನ ಮನೆಯರವಲ್ಲಿ ವಿಚಾರಿಸಿದ್ದಾರೆ. ಅವರು ಹುಡುಕಿದಾಗ ಮುಂಜಾನೆ ಸುಮಾರು 3 ಗಂಟೆಯ ವೇಳೆ ಈತನ ಸ್ಕೂಟರ್ ಬಿ.ಮೂಡ ಗ್ರಾಮದ ಮಿತ್ತಕೋಡಿ ಎಂಬಲ್ಲಿರುವ ಮೈದಾನದ ಬಳಿ ನಿಲ್ಲಿಸಲಾಗಿತ್ತು.


ಆದರೆ ಸಚಿನ್ ಅಲ್ಲಿ ಕಾಣದ ಹಿನ್ನೆಲೆಯಲ್ಲಿ ಪೋನ್ ಮಾಡಿದಾಗ ಅಲ್ಲೇ ಸಮೀಪದ ಗುಡ್ಡವೊಂದರಲ್ಲಿ ಪೋನ್ ರಿಂಗು ಕೇಳುತ್ತಿತ್ತು ಎಂದು ಹೋಗಿ ನೋಡಿದಾಗ ಆತ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಗಮನಕ್ಕೆ ಬಂದಿದೆ.


ಆತ್ಮಹತ್ಯೆ ಮಾಡುವ ಮೊದಲು ಈತ ಚೀಟಿಯನ್ನು ಬರೆದು ಕಿಸೆಯಲ್ಲಿಟ್ಟಿದ್ದು, ಇದೀಗ ಚೀಟಿ ಪೋಲೀಸರ ಕೈ ಸೇರಿದೆ. ಪ್ರೇಮ ವೈಫಲ್ಯ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಈತ ಚೀಟಿಯಲ್ಲಿ ಬರೆದಿದ್ದ ಎಂದು ಹೇಳಲಾಗಿದ್ದು,ಮರಣೋತ್ತರ ಪರೀಕ್ಷಾ ವರದಿಯ ಬಳಿಕ ಪೋಲೀಸ್ ತನಿಖೆಯಿಂದ ಸತ್ಯಾಸತ್ಯತೆ ಹೊರ ಬರಲಿದೆ.


ನಗರ ಠಾಣಾ ಇನ್ಸ್ ಪೆಕ್ಟರ್ ಆನಂತ ಪದ್ಮನಾಭ ಮತ್ತು ಎಸ್. ಐ.ರಾಮಕೃಷ್ಣ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣದಾಖಲಿಸಿಕೊಂಡಿದ್ದಾರೆ.

ಪುತ್ತೂರು: ಲಾರಿ - ಸ್ಕೂಟರ್ ನಡುವೆ ಭೀಕರ ಅಪಘಾತ :ಮಿತ್ತೂರು ನಿವಾಸಿ ಶಿವರಾಮ ನಾಯ್ಕ ಮೃತ್ಯು

Posted by Vidyamaana on 2024-07-24 08:25:31 |

Share: | | | | |


ಪುತ್ತೂರು: ಲಾರಿ - ಸ್ಕೂಟರ್ ನಡುವೆ ಭೀಕರ ಅಪಘಾತ :ಮಿತ್ತೂರು ನಿವಾಸಿ ಶಿವರಾಮ ನಾಯ್ಕ ಮೃತ್ಯು

ಪುತ್ತೂರು: ನೆಹರುನಗರ ಮಂಜಲ್ಪಡ್ಪು ಬಳಿಯ ಮಂಗಲ ಸ್ಟೋರ್ಸ್ ಮುಂಭಾಗ ಜು.23 ರಂದು  ಲಾರಿ ಮತ್ತು ತ್ರಿವೀಲ್ಡರ್ ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿ ಮಿತ್ತೂರು ಏಮಾಜೆಯ ವಿಕಲಚೇತನ ಶಿವರಾಮ ನಾಯ್ಕ (50ವ) ಎಂಬವರು ಮೃತಪಟ್ಟ ಬಗ್ಗೆ ವರದಿಯಾಗಿದೆ



Leave a Comment: