ಲಿಂಗನಮಕ್ಕಿ ಜಲಾಶಯದಿಂದ ಯಾವುದೇ ಕ್ಷಣದಲ್ಲಿ ನದಿಗೆ ನೀರು

ಸುದ್ದಿಗಳು News

Posted by vidyamaana on 2024-07-25 16:34:52 |

Share: | | | | |


ಲಿಂಗನಮಕ್ಕಿ ಜಲಾಶಯದಿಂದ ಯಾವುದೇ ಕ್ಷಣದಲ್ಲಿ ನದಿಗೆ ನೀರು

ಶಿವಮೊಗ್ಗ: ಲಿಂಗನಮಕ್ಕಿ ಜಲಾಶಯದಿಂದ ಯಾವುದೇ ಕ್ಷಣದಲ್ಲಿ ನದಿಗೆ ನೀರು ಹರಿಸಲಾಗುತ್ತದೆ. ಹೀಗಾಗಿ ನದಿ ಪಾತ್ರದಲ್ಲಿ ವಾಸಿಸುತ್ತಿರುವ ಜನರು ತಮ್ಮ ಜಾನುವಾರುಗಳೊಂದಿಗೆ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಕರ್ನಾಟಕ ವಿದ್ಯುತ್ ನಿಗಮದ ಕಾರ್ಯ ನಿರ್ವಾಹಕ ಎಂಜಿನಿಯರ್ ಬುಧವಾರ ಮುನ್ನೆಚ್ಚರಿಕೆ ನೀಡಿದ್ದಾರೆ

ಕಾರ್ಗಲ್ ನ ಲಿಂಗನಮಕ್ಕಿ ಜಲಾಶಯದ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ಜಲಾಶಯಕ್ಕೆ ಸದ್ಯ 60 ಸಾವಿರ ಕ್ಯುಸೆಕ್ ಒಳಹರಿವು ಇದೆ.

Additional Image


ಜಲಾಶಯದ ಗರಿಷ್ಠ ಮಟ್ಟ 1819 ಅಡಿಗಳು ಇದ್ದು, ಜಲಾಶಯದಲ್ಲಿ ಈಗ 1801. 20 ಅಡಿ ನೀರಿನ ಸಂಗ್ರಹ ಇದೆ. ಮಳೆ ಹೆಚ್ಚಿರುವುದರಿಂದ ಜಲಾಶಯದ ಮಟ್ಟ ಶೀಘ್ರವೇ ಗರಿಷ್ಠ ಮಟ್ಟ ತಲುಪುವ ಸಾಧ್ಯತೆ ಇದೆ.


ಅಣೆಕಟ್ಟೆಯ ಸುರಕ್ಷತೆಯ ದೃಷ್ಟಿಯಿಂದ ಯಾವುದೇ ಕ್ಷಣದಲ್ಲಿ ನದಿಗೆ ನೀರು ಹರಿಸಬಹುದು ಎಂದು ಕೆಪಿಸಿಎಲ್‌ ಪ್ರಕಟಣೆಯಲ್ಲಿ ತಿಳಿಸಿದೆ.

 Share: | | | | |


ನೇರಳಕಟ್ಟೆ : ರಸ್ತೆಗೆ ಅಡ್ಡಲಾಗಿ ಬಿದ್ದ ಮರ

Posted by Vidyamaana on 2023-07-22 05:28:42 |

Share: | | | | |


ನೇರಳಕಟ್ಟೆ : ರಸ್ತೆಗೆ ಅಡ್ಡಲಾಗಿ ಬಿದ್ದ ಮರ

ಪುತ್ತೂರು: ನೇರಳಕಟ್ಟೆಯಲ್ಲಿ ಮರವೊಂದು ರಸ್ತೆಗೆ ಅಡ್ಡವಾಗಿ ಬಿದ್ದಿದ್ದು, ಸಂಚಾರಕ್ಕೆ ತೊಡಕಾಗಿದೆಭಾರೀ ಮಳೆಗೆ ಮರ ಹೆದ್ದಾರಿಗೆ ಅಡ್ಡವಾಗಿ ಬಿದ್ದ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ.


ಮರ ಬೀಳುವಾಗ ಅದರೊಂದಿಗೆ ವಿದ್ಯುತ್ ಕಂಬಗಳು, ತಂತಿ ನೆಲದ ಮೇಲೆ ಬಿದ್ದಿದೆ.


ಘಟನೆಯಿಂದಾಗಿ ಮಾಣಿ-ಮೈಸೂರು ಹೆದ್ದಾರಿ ರಸ್ತೆ ಸಂಚಾರಕ್ಕೆ ತೊಡಕಾಗಿದ್ದು, ಸುಮಾರು ಒಂದು ತಾಸುಗಿಂತಲೂ ಹೆಚ್ಚು ಕಾಲ ವಾಹನ ಸಂಚಾರ ಅಸ್ತವ್ಯಸ್ತವಾಗಿದೆ. ಎರಡು ಬದಿಯ ವಾಹನಗಳು ರಸ್ತೆಯುದ್ದಕ್ಕೂ ಸಾಲುಗಟ್ಟಿ ನಿಂತಿವೆ

ಕಾರ್ಕಳ ನಗರ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೇಬಲ್‌ ಶೃತಿನ್ ಶೆಟ್ಟಿ ನಾಪತ್ತೆ

Posted by Vidyamaana on 2023-10-21 10:10:13 |

Share: | | | | |


ಕಾರ್ಕಳ ನಗರ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೇಬಲ್‌ ಶೃತಿನ್ ಶೆಟ್ಟಿ ನಾಪತ್ತೆ

ಕಾರ್ಕಳ ನಗರ ಠಾಣೆಯ ಹೆಡ್‌ಕಾನ್‌ಸ್ಟೇಬಲ್ ಶೃತಿನ್ ಶೆಟ್ಟಿ (35) ನಾಪತ್ತೆಯಾಗಿರುವ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಕಾಪು ಜನಾರ್ದನ ದೇವಸ್ಥಾನ ಬಳಿಯಿರುವ ಅಂಗಡಿಮನೆ ನಿವಾಸಿಯಾಗಿರುವ ಶೃತಿನ್ ಶೆಟ್ಟಿ ಗುರುವಾರ ರಾತ್ರಿ 7.30ಕ್ಕೆ ಪತ್ನಿಗೆ ಕರೆ ಮಾಡಿ ನಾನು ನಂದಿಕೂರಿನಲ್ಲಿದ್ದು, ಮನೆಗೆ ಬರುತ್ತಿರುವುದಾಗಿ ಹೇಳಿದ್ದರು. ಬಳಿಕ ಅವರ ಫೋನ್ ಸ್ವಿಚ್ ಆಫ್ ಆಗಿತ್ತು. ರಾತ್ರಿಯಿಡೀ ಮನೆಗೆ ಬಾರದಿರುವ ಹಿನ್ನೆಲೆಯಲ್ಲಿ ಗಾಬರಿಯಾಗಿರುವ ಪತ್ನಿ ಪೂಜಾ ಶೆಟ್ಟಿಯವರು ಶುಕ್ರವಾರ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದಾರೆ.


2008ರ ಬ್ಯಾಚಿನಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಯಾಗಿದ್ದ ಶೃತಿನ್ ಶೆಟ್ಟಿ ಎರಡು ತಿಂಗಳ ಹಿಂದೆಯಷ್ಟೇ ಬಡ್ತಿಯಾಗಿ ಕಾರ್ಕಳ ನಗರ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೆಬಲ್ ಆಗಿ ಬಂದಿದ್ದರು.


ಅ.17ರಂದು ಕರ್ತವ್ಯಕ್ಕೆ ಹಾಜರಾಗಿದ್ದರು. ಅ.18ಕ್ಕೆ ವಾರದ ರಜೆಯಿತ್ತು ಅ.19ರಂದು ಸಿ.ಎಲ್ ರಜೆ ಹಾಕಿದ್ದರು. ದೃಢಕಾಯ, 178 ಸೆ. ಮೀ. ಎತ್ತರವಿರುವ ಶೃತಿನ್ ಶೆಟ್ಟಿ ಅವರನ್ನು ಕಂಡವರು 0820-2555452 ನಂಬರ್ ನ್ನು ಸಂಪರ್ಕಿಸಲು ಕೋರಲಾಗಿದೆ. ಶೃತಿನ್ ಶೆಟ್ಟಿ ಇಂಗ್ಲಿಷ್, ಕನ್ನಡ, ತುಳು, ಹಿಂದಿ ಭಾಷೆ ಮಾತನಾಡುತ್ತಾರೆ

ರೋಟರಿಪುರ : ಮನೆ ಮನೆ ಮತ ಚೀಟಿ ವಿತರಣೆಗೆ ತೆರಳಿದ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Posted by Vidyamaana on 2024-04-16 14:15:00 |

Share: | | | | |


ರೋಟರಿಪುರ : ಮನೆ ಮನೆ ಮತ ಚೀಟಿ ವಿತರಣೆಗೆ ತೆರಳಿದ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

ಪುತ್ತೂರು: ಲೋಕಸಭಾ ಚುನಾವಣೆ ಕರ್ತವ್ಯ ನಿರತ ಮನೆ ಮನೆಗೆ ಮತ ಚೀಟಿ ವಿತರಣೆಗೆ ತೆರಳಿದ ರೋಟರಿಪುರ ಅಂಗನವಾಡಿ ಕಾರ್ಯಕರ್ತೆಗೆ ಮಹಿಳೆಯೊಬ್ಬರು ಹಲ್ಲೆ ನಡೆಸಿದ ಘಟನೆ ಎ.16 ರಂದು ಬೆಳಿಗ್ಗೆ ನಡೆದಿದೆ

ಬಂಟ್ವಾಳ ; ದೇವಸ್ಥಾನದ ಬಾಗಿಲು ಮುರಿದು ಲಕ್ಷಾಂತರ ರೂ.ಮೌಲ್ಯದ ನಗನಗದು ಕಳವು

Posted by Vidyamaana on 2024-07-28 07:45:30 |

Share: | | | | |


ಬಂಟ್ವಾಳ ; ದೇವಸ್ಥಾನದ ಬಾಗಿಲು ಮುರಿದು ಲಕ್ಷಾಂತರ ರೂ.ಮೌಲ್ಯದ ನಗನಗದು ಕಳವು

ಬಂಟ್ವಾಳ: ಬಾಗಿಲು ಮುರಿದು ದೇವಸ್ಥಾನವೊಂದಕ್ಕೆ ನುಗ್ಗಿದ ಕಳ್ಳರು ಲಕ್ಷಾಂತರ ರೂ.ಮೌಲ್ಯದ ನಗನಗದು ಕಳವು ಮಾಡಿದ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಮೂಡುನಡುಗೋಡು ಗ್ರಾಮದಲ್ಲಿ ನಡೆದಿದೆ.

ಮೂಡುನಡುಗೋಡು ಗ್ರಾಮದ ಕರೆಂಕಿ ಎಂಬಲ್ಲಿರುವ ದುರ್ಗಾಪರಮೇಶ್ವರಿ ದೇವಸ್ಥಾನದಿಂದ ಸುಮಾರು 2.5 ಪವನ್ ತೂಕದ 1.40.000 ಸಾವಿರ ಮೌಲ್ಯದ ಚಿನ್ನದ ಕರಿಮಣಿ ಮತ್ತು ದೇವಸ್ಥಾನದ ಒಳಾಂಗಣದಲ್ಲಿದ್ದ ಕಾಣಿಕೆ ಡಬ್ಬಿಯಿಂದ ಅಂದಾಜು ರೂ.2000 ಹಣವನ್ನು ಕಳವು ಮಾಡಿದ ಬಗ್ಗೆ ಠಾಣೆಗೆ ದೂರು ನೀಡಲಾಗಿದೆ. ಒಟ್ಟು 1.42,000 ಸಾವಿರ ಮೌಲ್ಯದ ಸೊತ್ತುಗಳನ್ನು ಕಳವು ಮಾಡಲಾಗಿದೆ.

ಪೊಲೀಸ್ ವಾಹನ ಬಳಸಿ ರೀಲ್ಸ್; ವಿಡಿಯೋ ವೈರಲ್‌ ಬಳಿಕ ಯುವಕನ ಬಂಧನ

Posted by Vidyamaana on 2024-02-19 09:48:32 |

Share: | | | | |


ಪೊಲೀಸ್ ವಾಹನ ಬಳಸಿ ರೀಲ್ಸ್; ವಿಡಿಯೋ ವೈರಲ್‌ ಬಳಿಕ ಯುವಕನ ಬಂಧನ

ಲಕ್ನೋ: ಪೊಲೀಸ್‌ ವಾಹನವನ್ನು ಬಳಸಿಕೊಂಡು ಇನ್ಸ್ಟಾಗ್ರಾಮ್‌ ರೀಲ್ಸ್‌ ಮಾಡಿದ ಯುವಕನೊಬ್ಬ ಪೊಲೀಸರ ಅತಿಥಿಯಾಗಿದ್ದಾನೆ.ಉತ್ತರ ಪ್ರದೇಶದ ಗಾಜಿಯಾಬಾದ್‌ ನಲ್ಲಿ ಈ ಘಟನೆ ನಡೆದಿದ್ದು, ರೀಲ್ಸ್‌ ಮಾಡಿದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.ಇಂದಿರಾಪುರಂ ಪ್ರದೇಶದಲ್ಲಿ ಪೊಲೀಸರು ಟ್ರಾಫಿಕ್ ಕ್ಲಿಯರ್ ಮಾಡುವಲ್ಲಿ ನಿರತರಾಗಿದ್ದಾಗ ಮೊಯಿನ್ ಖಾನ್ ಎಂಬಾತ ಖಾಲಿಯಿದ್ದ ಪೊಲೀಸ್‌ ವಾಹನವನ್ನು ಬಳಸಿಕೊಂಡು ಅದರಲ್ಲಿ ಕೂತು ಸ್ಟೈಲಿಸ್ಟ್‌  ಆಗಿ ರೀಲ್ಸ್‌ ಮಾಡಿದ್ದಾನೆ.

ಪೊಲೀಸ್ ವಾಹನ ಬಳಸಿ ರೀಲ್ಸ್; ವಿಡಿಯೋ ವೈರಲ್‌ ಬಳಿಕ ಯುವಕನ ಬಂಧನ

ಪೊಲೀಸ್‌ ವಾಹನದ ಸೀಟಿನಿಂದ ಕೆಳಗಿಳಿದು, ಕೋಲ್ಡ್‌ ಡ್ರಿಂಕ್‌ ಕುಡಿಯುತ್ತಾ ಬರುವ ದೃಶ್ಯಕ್ಕೆ ಮ್ಯೂಸಿಕ್‌ ವೊಂದನ್ನು ಹಾಕಿ ರೀಲ್ಸ್‌ ಮಾಡಿ ಫೆ.15 ರಂದು ಇನ್ಸ್ಟಾಗ್ರಾಮ್‌ ನಲ್ಲಿ ಪೋಸ್ಟ್‌ ಮಾಡಿದ್ದಾರೆ. ಈ ವಿಡಿಯೋ ವೇಗದಲ್ಲಿ ವೈರಲ್‌ ಆಗಿದೆ.ಇಂದಿರಾಪುರಂನ ಕಣವಾಣಿ ಸೇತುವೆಯ ಬಳಿ ಟ್ರಾಫಿಕ್ ಜಾಮ್ ತೆರವುಗೊಳಿಸಲು ತೊಡಗಿದ್ದಾಗ, ಖಾಲಿ ಪೊಲೀಸ್ ವಾಹನವನ್ನು ಗಮನಿಸಿದ ಯುವಕ ಅದನ್ನು ಬಳಸಿ ರೀಲ್ ಮಾಡಿದ್ದಾರೆ. ವಿಡಿಯೋ ವೈರಲ್‌ ಆಗಿ ನಮ್ಮ ಗಮನಕ್ಕೆ ಬಂದ ಬಳಿಕ ಯುವಕನನ್ನು ಬಂಧಿಸಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ.

ಪುತ್ತಿಲ ಪರಿವಾರದಿಂದ ಪುತ್ತೂರಿನಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ – ಬೃಹತ್ ಸಂತ ಸಮ್ಮೇಳನ : ಪೂರ್ವಭಾವಿ ಸಭೆ

Posted by Vidyamaana on 2023-11-20 20:02:34 |

Share: | | | | |


ಪುತ್ತಿಲ ಪರಿವಾರದಿಂದ ಪುತ್ತೂರಿನಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ – ಬೃಹತ್ ಸಂತ ಸಮ್ಮೇಳನ : ಪೂರ್ವಭಾವಿ ಸಭೆ

ಪುತ್ತೂರು: ಪುತ್ತಿಲ ಪರಿವಾರದ ವತಿಯಿಂದ ಡಿ.24 ಮತ್ತು 25 ರಂದು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಲೋಕಕಲ್ಯಾಣರ್ಥವಾಗಿ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಬೃಹತ್ ಸಂತ ಸಮ್ಮೇಳನ ನಡೆಯುವ ಬಗ್ಗೆ ಪೂರ್ವಭಾವಿ ಸಭೆ ಮುಕ್ರಂಪಾಡಿಯ ಸುಭದ್ರ ಕಲ್ಯಾಣಮಂಟಪದಲ್ಲಿ ನಡೆಯಿತು.



ಸಭೆಯಲ್ಲಿ ಮಾತನಾಡಿದ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ಡಿ.24 ರ ಸಂಜೆ ಬೊಳುವಾರಿನಿಂದ ತಿರುಪತಿಯಿಂದ ಆಗಮಿಸುವ ದೇವರ ವೈಭವದ ಮೆರವಣಿಗೆ, ನಂತರ ರಾತ್ರಿ ಪೂಜೆ ನಂತರ ಸಾಂಸ್ಕೃತಿಕ ಕಾರ್ಯಕ್ರಮ, ಮರುದಿನ ಬೆಳಿಗ್ಗೆ ವಿಶೇಷ ಉದಯಾಸ್ತಮಾನ ಪೂಜೆ , ನಂತರ ರಾಮಕೃಷ್ಣ ಕಾಟುಕುಕ್ಕೆ ಅವರಿಂದ ಭಜನೋತ್ಸವ ಸಂಜೆ ಬೃಹತ್ ಸಂತ ಸಮ್ಮೇಳನ ನಡೆಯಲಿದೆ.



ಸಭೆಯ ನಂತರ ಶ್ರೀನಿವಾಸ ಕಲ್ಯಾಣೋತ್ಸವ ಜರುಗಲಿದೆ. ನಂತರ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದರು.


ಎರಡು ದಿನದ ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ಅಂದಾಜು 1 ಲಕ್ಷಕ್ಕೂ ಅಧಿಕ ಜನ ಸೇರಲಿದ್ದು, ಎರಡು ದಿನವೂ ಅನ್ನದಾನ ಇರಲಿದೆ ಎಂದರು.



ಪೂರ್ವಭಾವಿ ಸಭೆಯಲ್ಲಿ ಸಮಿತಿ ರಚನೆ ನಡೆಯಿತು.


ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಮಾರ್ತ, ಶ್ರೀನಿವಾಸ ಕಲ್ಯಾಣೋತ್ಸವದ ಅಧ್ಯಕ್ಷರಾದ ಶಶಾಂಕ್ ಕೊಟೇಚಾ, ಪ್ರಧಾನ ಕಾರ್ಯದರ್ಶಿ ಮನೀಶ್ ಕುಲಾಲ್, ಮಹಿಳಾ ಘಟಕದ ಅಧ್ಯಕ್ಷೆ ಮಲ್ಲಿಕಾ ಪ್ರಸಾದ್, ಗಣೇಶ್ ಭಟ್ ಮಕರಂದ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಪುತ್ತಿಲ ಪರಿವಾರದ ಕಾರ್ಯದರ್ಶಿ ರವಿಕುಮಾರ್ ರೈ ಕೆದಂಬಾಡಿ ಮಠ ಕಾರ್ಯಕ್ರಮ ನಿರೂಪಿಸಿದರು.



Leave a Comment: