ನೆಟ್ಟೇ ಕಮ್ಮಿ ಆಪುಂಡು ನನ ಬರೋಡ್ಚಿ.. ಎಂದು ಹೇಳಿ ಮದ್ದು ಕೊಡ್ತಿದ್ದ ನರಸಿಂಹ ಭಟ್ ರಿಟೈರ್ಡ್

ಸುದ್ದಿಗಳು News

Posted by vidyamaana on 2023-07-10 07:10:00 | Last Updated by Vidyamaana on 2023-09-05 06:51:23

Share: | | | | |


ನೆಟ್ಟೇ ಕಮ್ಮಿ ಆಪುಂಡು ನನ ಬರೋಡ್ಚಿ.. ಎಂದು ಹೇಳಿ ಮದ್ದು ಕೊಡ್ತಿದ್ದ ನರಸಿಂಹ ಭಟ್ ರಿಟೈರ್ಡ್

ಪುತ್ತೂರು: “ನೆಟ್ಟೇ ಕಮ್ಮಿ. ನನ ಬರೋಡ್ಚಿ…”

ಹೀಗೆ ಹೇಳಿ ಔಷಧಿ ನೀಡಿದರೆಂದರೆ, ಯಾರದೇ ರೋಗವಾದರೂ ವಾಸಿಯಾಗಲೇಬೇಕು. ಆಸ್ಪತ್ರೆಗೆ ಹೋಗಿ ತಾಸುಗಟ್ಟಲೇ ಕಾಯಬೇಕೆಂದಿಲ್ಲ. ಹೆದರಿಕೆಯಾಗುವ ಬಿಲ್ ಕೂಡ ಇಲ್ಲ. ಯಾರೇ ಬಂದರೂ ಅವರ ನಗುವೇ ದಿವ್ಯೌಷಧ.

ಇದು ಎರಡೇ ಸಾಲಿನಲ್ಲಿ ವಿವರಣೆ ಕೊಡಬಹುದಾದ ಕಾಂಪೌಂಡರ್ ಖ್ಯಾತಿಯ ನರಸಿಂಹ ಭಟ್ ಅವರ ಪರಿಚಯ. ತನ್ನ 16ನೇ ವಯಸ್ಸಿಗೇ ಡಾ. ಶಿವರಾಮ ಭಟ್ ಅವರ ಜೊತೆಗೆ ಕಾಂಪೌಂಡರ್ ಆಗಿ ಸೇರಿಕೊಂಡ ಅವರು, ಇದುವರೆಗೆ ಸುದೀರ್ಘ 68 ವರ್ಷಗಳ ಸೇವೆ ಸಲ್ಲಿಸಿದ್ದಾರೆ. ಹಾರಾಡಿಯಲ್ಲಿ ವಾಸವಾಗಿರುವ ಇವರ ತಂದೆ ಶಂಕರ್ ಭಟ್, ತಾಯಿ ಕಾವೇರಮ್ಮ. ಸರಸ್ವತಿ ಇವರ ಪತ್ನಿ. ಸಾಫ್ಟ್ ವೇರ್ ಇಂಜಿನಿಯರ್ ಆಗಿರುವ ಪುತ್ರ ಕಾರ್ತಿಕ್ ತನ್ನ ಪತ್ನಿ - ಮಗನೊಂದಿಗೆ ಲಂಡನಿನಲ್ಲಿ ವಾಸವಾಗಿದ್ದಾರೆ.

ಇದೀಗ ತನ್ನ 82ನೇ ವಯಸ್ಸಿನಲ್ಲಿ ವಿಶ್ರಾಂತ ಜೀವನಕ್ಕೆ ತೆರಳಿದ್ದಾರೆ. ವಯೋ ಸಹಜ ಸಮಸ್ಯೆಗಳ ಕಾರಣದಿಂದಾಗಿ ಡಾ. ಶಿವರಾಮ ಭಟ್ ಅವರ ಕ್ಲಿನಿಕ್ ಅನ್ನು ಬಂದ್ ಮಾಡಲಾಗಿದೆ ಎಂದು ಕ್ಲಿನಿಕ್ ಮುಂದುಗಡೆ ಬೋರ್ಡ್ ಹಾಕಲಾಗಿದೆ.

ಹಾಗಾಗಿ, ಔಷಧಕ್ಕೆಂದು ಆಗಮಿಸುವ ಜನರು ಬೋರ್ಡ್ ನೋಡಿ, ಹ್ಯಾಪ್ ಮೋರೆ ಹಾಕಿಕೊಂಡು ವಾಪಾಸ್ ಹೋಗುತ್ತಿದ್ದಾರೆ. ದಿನಕ್ಕೆ ಸುಮಾರು 300 ಮಂದಿಯಂತೆ ತಿಂಗಳಿಗೆ 10 ಸಾವಿರದಷ್ಟು ಮಂದಿ ಇವರ ಔಷಧವನ್ನೇ ಅವಲಂಬಿತರಾಗಿದ್ದರು. ಇದೀಗ ಇಷ್ಟು ಮಂದಿ ಬೇರೆ ವೈದ್ಯರ ಮೊರೆ ಹೋಗಲೇಬೇಕಾದ ಅನಿವಾರ್ಯತೆ ಎದುರಾಗಿದೆ.

ಮಳೆಗಾಲ ಆರಂಭವಾಯಿತೆಂದರೆ ಜ್ವರ, ಶೀತ, ಕೆಮ್ಮು ಸಿದ್ಧ. ಇದಕ್ಕೆಲ್ಲಾ ಕಾಂಪೌಂಡರ್ ನೀಡುವ 3 ಹೊತ್ತಿನ ಮದ್ದು ಸಾಕು. ಕಡಿಮೆ ಶುಲ್ಕ ಮಾತ್ರವಲ್ಲ, ಸುಲಭದಲ್ಲಿ ಸಿಗುವ ವೈದ್ಯರು ಎಂಬ ಕಾರಣಕ್ಕೆ ಜನರೂ ಇಲ್ಲಿಗೆ ಆಗಮಿಸುತ್ತಿದ್ದರು. ಇನ್ನು ಮುಂದೆ ಪುತ್ತೂರಿನ ಹೃದಯ ಭಾಗದಲ್ಲಿ ಇದ್ದ ಡಾ. ಶಿವರಾಮ ಭಟ್ ಅವರ ಕ್ಲಿನಿಕಿನಲ್ಲಿ ಕಾಂಪೌಂಡರ್ ಮದ್ದು ನೀಡುವುದಿಲ್ಲ!

ಡಾ. ಶಿವರಾಮ ಭಟ್ ಗುರು:

ಡಾ. ಶಿವರಾಮ ಭಟ್ ಅವರನ್ನೇ ಗುರುವಾಗಿ ನೆಚ್ಚಿಕೊಂಡಿದ್ದ ಕಾಂಪೌಂಡರ್ ಖ್ಯಾತಿಯ ನರಸಿಂಹ ಭಟ್ ಅವರು, ಸುದೀರ್ಘ ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಡಾ. ಶಿವರಾಮ ಭಟ್ ಅವರ ನಿಧನದ ನಂತರವೂ ಅವರ ಹೆಸರಿನಲ್ಲೇ ಕ್ಲಿನಿಕ್ ನಡೆಯುತ್ತಿತ್ತು. ಆಗ ಕಾಂಪೌಂಡರ್ ಅವರೇ ಔಷಧ ನೀಡುತ್ತಿದ್ದರು. ಕ್ಲಿನಿಕಿಗೆ ಆಗಮಿಸಿದ ಹೆಚ್ಚಿನ ಜನರಿಗೆ ಇವರೇ ಡಾ‌. ಶಿವರಾಮ ಭಟ್ ಎಂದು ನಂಬಿದ್ದರು.

ಸರ್ಕಾರಿ ಉದ್ಯೋಗದ ಅವಕಾಶವನ್ನೇ ಕೈಚೆಲ್ಲಿದರು!

ನರಸಿಂಹ ಭಟ್ ಅವರಿಗೆ ಸರ್ಕಾರಿ ಉದ್ಯೋಗದ ಅವಕಾಶವೂ ಕೈಬೀಸಿ ಕರೆಯಿತು. ಆದರೆ ಡಾ. ಶಿವರಾಮ್ ಭಟ್ ಅವರನ್ನೇ ಮಾನಸ ಗುರುವಾಗಿ ಸ್ವೀಕರಿಸಿದ್ದರಿಂದ, ಸರ್ಕಾರಿ ಉದ್ಯೋಗದ ಅವಕಾಶವನ್ನು ಕೈಚೆಲ್ಲಿದರು. ಡಾ. ಶಿವರಾಮ ಭಟ್ ಅವರು ಇರುವವರೆಗೂ ಹಾಗೂ ಅವರು ಇಲ್ಲದ ಬಳಿಕವೂ ತನ್ನ ಗುರುವಿನ ಹೆಸರಿನಲ್ಲಿಯೇ ಔಷಧ ನೀಡಿತ್ತಿದ್ದರು ಎನ್ನುವುದು ಕಾಂಪೌಂಡರ್ ಅವರ ವಿಶೇಷತೆ.

 Share: | | | | |


ಬೆಳ್ತಂಗಡಿ : ಸಾರ್ವಜನಿಕ ಸ್ಥಳಗಳಲ್ಲಿ ಮಚ್ಚು ತೋರಿಸಿ ಬೆದರಿಕೆ

Posted by Vidyamaana on 2023-10-11 14:36:06 |

Share: | | | | |


ಬೆಳ್ತಂಗಡಿ : ಸಾರ್ವಜನಿಕ ಸ್ಥಳಗಳಲ್ಲಿ ಮಚ್ಚು ತೋರಿಸಿ ಬೆದರಿಕೆ

ಬೆಳ್ತಂಗಡಿ: ವೇಣೂರು ಶ್ರೀ ಬಾಹುಬಲಿ ಕ್ಷೇತ್ರದ ಪರಿಸರದಲ್ಲಿ ಆಕ್ಟೋಬರ್ 10 ರಂದು ಸಂಜೆ ಮಹಾಮಸ್ತಕಾಭಿಷೇಕದ ಪ್ರಯುಕ್ತ ಜಿನ ಭಜನಾ ಸ್ಪರ್ಧೆಗೆ ತರಬೇತಿ ಪಡೆಯುತ್ತಿದ್ದಾಗ ವ್ಯಕ್ತಿಯೊರ್ವ ಸ್ಥಳಕ್ಕೆ ತೆರಳಿ ಅವಾಚ್ಯ ಶಬ್ದಗಳಿಂದ ಬೈದಿರುವುದಲ್ಲದೆ, ಮಚ್ಚು ತೋರಿಸಿ ಜೀವ ಬೆದರಿಕೆ ಹಾಕಿರುವುದಾಗಿ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಬೆಳ್ತಂಗಡಿ ತಾಲೂಕಿನ ಮುಂಡೂರಿನ ಆನಂದ ಆಚಾರ್ಯ (38) ಎಂಬಾತನು ಅಕ್ಟೋಬರ್ 10 ರಂದು ಸಂಜೆ ವೇಣೂರು ಬಾಹುಬಲಿ ಕ್ಷೇತ್ರದಲ್ಲಿ ವಲಯ ಮಟ್ಟದ ಜಿನ ಭಜನಾ ಸ್ಪರ್ದೆಗೆ ಮಹಿಳೆಯರು,ಮಕ್ಕಳು ಸೇರಿ ಸುಮಾರು 70 ಮಂದಿ ಅಭ್ಯಾಸ ನಡೆಸುತ್ತಿದ್ದರು,ಪ್ರವಾಸಿಗರು ಕೂಡ ಇದ್ದರು. ಈ ಸಂದರ್ಭ ಅಲ್ಲಿಗೆ ತೆರಳಿ ಮಚ್ಚು ತೋರಿಸಿ, ಬೊಬ್ಬೆ ಹಾಕಿ ಬೆದರಿಕೆ ಹಾಕಿದ್ದು ಕೂಡಲೇ ಸ್ಥಳಿಯರು ವೇಣೂರು ಪೋಲಿಸ್ ಠಾಣೆಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಪೋಲೀಸರು ಆಗಮಿಸಿ ಮಚ್ಚನ್ನು ವಶಪಡಿಸಿಕೊಂಡು.ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮೆಡಿಕಲ್ ಕಾಲೇಜು ಸೀಟ್ ಕೊಡಿಸುವುದಾಗಿ ಹೇಳಿ ವಂಚನೆ

Posted by Vidyamaana on 2023-11-01 17:08:34 |

Share: | | | | |


ಮೆಡಿಕಲ್ ಕಾಲೇಜು ಸೀಟ್ ಕೊಡಿಸುವುದಾಗಿ ಹೇಳಿ ವಂಚನೆ

ಬೆಂಗಳೂರು, ನ 01: ಮೆಡಿಕಲ್‌ ಸೀಟು ಆಕಾಂಕ್ಷಿಗಳಿಗೆ ಅತೀ ಕಡಿಮೆ ಮೊತ್ತದಲ್ಲಿ ನೆರೆ ರಾಜ್ಯದಲ್ಲಿ ಸೀಟ್ ಕೊಡಿಸುವುದಾಗಿ ಹೇಳಿ ವಂಚಿಸಿದ್ದ ಹೈದ್ರಾಬಾದ್‌ ಮೂಲದ ಆರೋಪಿ ಈಗ ಸಂಜಯನಗರ ಪೊಲೀಸರ ಬಲೆಗೆ ಬಿದ್ದಿದ್ದಾನೆ.


ಶರತ್‌ಗೌಡ್‌(45) ಬಂಧಿತ ಆರೋಪಿಯಾಗಿದ್ದು ಪೊಲೀಸರು ಸುಮಾರು 47 ಲಕ್ಷ ರೂ. ನಗದು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿ ಸಂಜಯನಗರದ ನ್ಯೂಬಿಇಎಲ್‌ ರಸ್ತೆಯಲ್ಲಿ "ನೆಕ್ಸಸ್‌ ಎಡು" ಎಂಬ ಸಂಸ್ಥೆ ತೆರೆದು ವಿದ್ಯಾರ್ಥಿಗಳನ್ನು ವಂಚಿಸುವ ಕಾರ್ಯದಲ್ಲಿ ತೊಡಗಿಕೊಂಡಿದ್ದ. 


ಆ್ಯಪ್‌ನಲ್ಲಿ ಅಭ್ಯರ್ಥಿಗಳ ಪಟ್ಟಿ:


ಹೈದ್ರಾಬಾದ್‌ ಮೂಲದ ಶರತ್‌ಗೌಡ ಎಂಬಿಎ ಪದವೀಧರನಾಗಿದ್ದು, ಎರಡು ವರ್ಷಗಳ ಹಿಂದೆ ಬೆಂಗಳೂರಿಗೆ ಬಂದಿದ್ದಾನೆ. ನ್ಯೂಬಿಇಎಲ್‌ ರಸ್ತೆಯಲ್ಲಿ ನೆಕ್ಸಸ್‌ ಎಡು ಎಂಬ ಸಂಸ್ಥೆ ನಡೆಸುತ್ತಿದ್ದ. ಅದರಲ್ಲಿ ಕೆಲ ಯುವತಿಯರಿಗೆ ಉದ್ಯೋಗ ನೀಡಿದ್ದ. ಏಜೆನ್ಸಿಯೊಂದು ಸಿದ್ಧಪಡಿಸಿರುವ ಆ್ಯಪ್‌ನಲ್ಲಿ ರಾಜ್ಯ ಹಾಗೂ ನೆರೆರಾಜ್ಯದ ವೈದ್ಯಕೀಯ ಸೀಟು ಆಕಾಂಕ್ಷಿಗಳ ಪಟ್ಟಿ ದಾಖಲಾಗಿತ್ತು.


ಇತ್ತೀಚೆಗೆ ತಿಮ್ಮೇಗೌಡ ಎಂಬವರ ಪುತ್ರನಿಗೆ ಕೇರಳದ ಪಿ.ಕೆ.ದಾಸ್‌ ಇನ್‌ಸ್ಟಿಟ್ಯೂಟ್‌ ಆಫ್ ಮೆಡಿಕಲ್‌ಸೈನ್ಸ್‌ನಲ್ಲಿ ಸೀಟು ಕೊಡಿಸುವುದಾಗಿ ನಂಬಿಸಿ 10 ಲಕ್ಷ ರೂ. ಪಡೆದುಕೊಂಡು ವಂಚಿಸಿದ್ದ. ಈ ಸಂಬಂಧ ತಿಮ್ಮೇಗೌಡ ನೀಡಿದ ದೂರಿನ ಮೇರೆಗೆ ವಂಚನೆ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ತೆಲಂಗಾಣದ ಹೈದರಾಬಾದ್‌ನ ಆತನ ಅಪಾರ್ಟ್‌ಮೆಂಟ್‌ನಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.


18 ಮಂದಿಗೆ 62 ಲಕ್ಷ ರೂ. ವಂಚನೆ:


ಆರೋಪಿ ವಿಚಾರಣೆ ವೇಳೆ ಇದುವರೆಗೂ 18 ಮಂದಿಗೆ 62 ಲಕ್ಷ ರೂ. ವಂಚಿಸಿದ್ದಾನೆ ಎಂಬುದು ಗೊತ್ತಾಗಿದೆ. ಈ ಪೈಕಿ 47.80 ಲಕ್ಷ ರೂ. ಜಪ್ತಿ ಮಾಡಲಾಗಿದೆ. ಬಾಕಿ ಹಣವನ್ನು ಆರೋಪಿ ಬಳಸಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದರು.


ಉತ್ತರವಿಭಾಗ ಡಿಸಿಪಿ ಸೈದುಲು ಅಡಾವತ್‌, ಜೆ.ಸಿ.ನಗರ ಉಪವಿಭಾಗದ ಎಸಿಪಿ ಮನೋಜ್‌ಕುಮಾರ್‌ ನೇತೃತ್ವದಲ್ಲಿ ಸಂಜಯನಗರ ಠಾಣೆ ಇನ್‌ಸ್ಪೆಕ್ಟರ್‌ ಭಾಗ್ಯವತಿ ಜೆ.ಬಂಟಿ ಮತ್ತು ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ.

ಏ 19:ಪುತ್ತೂರು ಜೆಡಿಎಸ್ ಅಭ್ಯರ್ಥಿ ದಿವ್ಯಪ್ರಭಾ ಚಿಲ್ತಡ್ಕ ನಾಮಪತ್ರ ಸಲ್ಲಿಕೆ

Posted by Vidyamaana on 2023-04-18 15:37:50 |

Share: | | | | |


ಏ 19:ಪುತ್ತೂರು ಜೆಡಿಎಸ್ ಅಭ್ಯರ್ಥಿ ದಿವ್ಯಪ್ರಭಾ ಚಿಲ್ತಡ್ಕ ನಾಮಪತ್ರ ಸಲ್ಲಿಕೆ

: ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ದಿವ್ಯಪ್ರಭಾ ಗೌಡ ಏ.19 ರಂದು ನಾಮಪತ್ರ ಸಲ್ಲಿಸಲಿದ್ದಾರೆ.

ನಾಳೆ ಬೆಳಗ್ಗೆ 8 ಗಂಟೆಗೆ  ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಬಳಿಕ  ಜೆ ಡಿ ಎಸ್ ಕಾರ್ಯಕರ್ತರು , ಬೆಂಬಲಿಗರು ಹಾಗೂ ಹಿತೈಷಿಗಳೊಂದಿಗೆ ಬೆಳಗ್ಗೆ 10 ಗಂಟೆಗೆ ದರ್ಬೆ ಸರ್ಕಲ್ ನಿಂದ ಬೃಹತ್ ರ‍್ಯಾಲಿಯ ಮೂಲಕ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ.

ಕಾಂಗ್ರೆಸ್ ಪಕ್ಷದಿಂದ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಸಿಗದ ಹಿನ್ನಲೆಯಲ್ಲಿ  ಇತ್ತೀಚೆಗೆ ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್‍ ಪಕ್ಷಕ್ಕೆ ಸೇರಿದ್ದರು.

ನೇಣು ಬಿಗಿದುಕೊಂಡು ರೌಡಿ ಶೀಟರ್ ಅರುಣ್ ಆತ್ಮಹತ್ಯೆ

Posted by Vidyamaana on 2024-04-07 19:26:58 |

Share: | | | | |


ನೇಣು ಬಿಗಿದುಕೊಂಡು ರೌಡಿ ಶೀಟರ್ ಅರುಣ್ ಆತ್ಮಹತ್ಯೆ

ಬೆಂಗಳೂರು : ನೇಣು ಬಿಗಿದುಕೊಂಡು ರೌಡಿ ಶೀಟರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ಪಟ್ಟಣದ ದಿನ್ನೂರಿನಲ್ಲಿ ನಡೆದಿದೆ. ಅರುಣ್ ಅಲಿಯಾಸ್ ಚಿನ್ನಿ(28) ಆತ್ಮಹತ್ಯೆಗೆ ಶರಣಾದ ರೌಡಿ ಶೀಟರ್ ಆಗಿದ್ದು, 2019ರಲ್ಲಿ ಲೋಕನಾಥ್ ಎಂಬಾತನ ಕೊಲೆ ಪ್ರಕರಣದಲ್ಲಿ ಅರುಣ್‌ ಜೈಲುಪಾಲಾಗಿದ್ದ.ನಂತರ ಜಾಮೀನಿನ ಪಡೆದು ಜೈಲಿನಿಂದ ಬಿಡುಗಡೆಯಾಗಿದ್ದ. ಇತ್ತೀಚಿಗೆ ಅರುಣ್ ಮಾನಸಿಕ ಖಿನ್ನತೆಗೊಳಗಾಗಿದ್ದ ಎನ್ನಲಾಗಿದೆ.

ಗೆದ್ದರೆ ಒಂದೇ ತಿಂಗಳಲ್ಲಿ ಅಕ್ರಮ ಸಕ್ರಮ ಫೈಲ್ ವಿಲೇವಾರಿ ಗ್ಯಾರಂಟಿ: ಅಶೋಕ್ ಕುಮಾರ್ ರೈ

Posted by Vidyamaana on 2023-04-25 17:19:51 |

Share: | | | | |


ಗೆದ್ದರೆ ಒಂದೇ ತಿಂಗಳಲ್ಲಿ ಅಕ್ರಮ ಸಕ್ರಮ ಫೈಲ್ ವಿಲೇವಾರಿ  ಗ್ಯಾರಂಟಿ: ಅಶೋಕ್ ಕುಮಾರ್ ರೈ

ಪುತ್ತೂರು : ಈ ಬಾರಿ ಆಶೀರ್ವಾದ ಮಾಡಿ, ನಾನು ಗೆದ್ದು ಬಂದರೆ ಒಂದೇ ತಿಂಗಳಲ್ಲಿ ಎಷ್ಟು ಆಕ್ರಮಸಕ್ರಮ ಫೈಲ್‌ಗಳು ಪೆಂಡಿಗೆ ಇದೆ ಅದೆಲ್ಲವನ್ನೂ ನಯಾ ಪೈಸೆ ಖರ್ಚಿಲ್ಲದ ಅರ್ಜಿದಾರರಿಗೆ ಮಾಡಿಕೊಡಲಿದ್ದೇನೆ. ತಾಲೂಕಿನಲ್ಲಿ ಮೂರು ಸಾವಿರಕ್ಕೂ ಮಿಕ್ಕಿ 94 ಸಿ ಅರ್ಜಿ ಪೆಂಡಿಂಗ್ ಇದೆ ಅದನ್ನು ಎಲ್ಲರಿಗೂ ಬರೆದು ಕೂಡಲಿದ್ದೇನೆ ಎಂದು ಕುಂಬ್ರ ಜಂಕ್ಷನ್‌ನಲ್ಲಿ ಎ.24  ರಂದು ನಡೆದ ಕಾಂಗ್ರೆಸ್ ಚುನಾವಣಾ - ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

 ಫ್ಲಾಟಿಂಗ್ , ಸರ್ವ ಆಗದೆ ಜನರಿಗೆ ತೊಂದರೆ ನೀಡುತ್ತಿದ್ದು ಅದೆಲ್ಲವನ್ನೂ ತಿಂಗಳೊಳಗೆ ಸರಿಪಡಿಸಲಿದ್ದೇನೆ ಎಂದು ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ವಾಗ್ದಾನ ಮಾಡಿದರು. ನನ್ನ ರಾಜಕೀಯ ಅವಧಿಯಲ್ಲಿ ನಾನು ಯಾವ ರಾಜಕೀಯ ನಾಯಕರನ್ನೂ ಇದುವರೆಗೆ ಯಾವುದೇ ವೇದಿಕೆಯಲ್ಲಿ ಅಪಹಾಸ್ಯ 6 ಮಾಡಿಲ್ಲ, ಮಾಡುವುದೂ ಇಲ್ಲ, ನನ್ನ ಬಗ್ಗೆ ಸಾಮಾಜಿಕ ತಾಣದಲ್ಲಿ ಇಲ್ಲ ಸಲ್ಲದಆರೋಪಗಳನ್ನು ಬಿಜೆಪಿ ಹರಿಯಬಿಡುತ್ತಿದೆ ಇದಕ್ಕೆಲ್ಲಾ ಜನ ತಕ್ಕ ಉತ್ತರ ನೀಡಲಿದ್ದಾರೆ. ನಾನು ಆರೆಸ್ಸೆಸ್ ಎಂದು ನನ್ನ ಮಗನ ಜೊತೆ ಇರುವ ಫೊಟೋವನ್ನು ಎಸ್‌ಡಿಪಿಐಯವರು ಸೋಶಿಯಲ್ ಮೀಡಿಯಾದಲ್ಲಿ ಹಾಕುತ್ತಿದ್ದಾರೆ. ನನ್ನ ಜೊತೆ ಚರ್ಚೆಗೆ ಬರಲಿ ಮುಸ್ಲಿಂ ಸಮುದಾಯಕ್ಕೆ ಎಸ್‌ಡಿಪಿಐ ಎನು ಮಾಡಿದೆ ಎಂಬುದನ್ನು ತಿಳಿಸಲಿ. ನಾನು 2300 ಮುಸ್ಲಿಂ ಕುಟುಂಬಗಳಿಗೆ ನೆರವು ನೀಡಿದ್ದೇನೆ, 42 ಬಡ ಕುಟುಂಬಗಳಿಗೆ ಮನೆ ಸಹಾಯ ಮಾಡಿದ್ದೇನೆ ಎಂದು ಹೇಳಿದರು. ಎಲ್ಲರೂ ಒಟ್ಟಾಗಿ ಈ ಬಾರಿ ಕಾಂಗ್ರೆಸ್ ಗೆಲ್ಲಿಸುವಂತೆ ಅವರು ಮನವಿ ಮಾಡಿದರು.

ಪ್ರಮಾಣವಚನ ಸ್ವೀಕಾರ ಸಮಾರಂಭ

Posted by Vidyamaana on 2023-05-20 04:04:58 |

Share: | | | | |


ಪ್ರಮಾಣವಚನ ಸ್ವೀಕಾರ ಸಮಾರಂಭ

ಬೆಂಗಳೂರು : ಇಂದು ರಾಜ್ಯದ 31ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು 2 ನೇ ಬಾರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್  ಅವರು ಮೊದಲ ಬಾರಿಗೆ ಉಪ ಮುಖ್ಯಮಂತ್ರಿಯಾಗಿ  ಇಂದು ಮಧ್ಯಾಹ್ನ 12.30 ಕ್ಕೆ ಬೆಂಗಳೂರಿನ ಕಂಠೀರ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.ಇಂದು ಮಧ್ಯಾಹ್ನ 12.30 ಕ್ಕೆ ರಾಜ್ಯಪಾಲ ಥಾವತ್ ಚಂದ್ ಗೆಹಲೋತ್ ಅವರು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರತಿಜ್ಞೆ ಬೋಧಿಸಲಿದ್ದಾರೆ. ಇಂದು ಮಧ್ಯಾಹ್ನ 12.30 ಕ್ಕೆ ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಲಿದ್ದು, ಪ್ರಮಾಣ ವಚನ ಸಮಾರಂಭಕ್ಕೆ ಕಾಂಗ್ರೆಸ್‌ ನಾಯಕರಾದ ಸೋನಿಯಾ ಗಾಂಧಿ ಸೇರಿದಂತೆ ಹಲವು ಗಣ್ಯರಿಗೆ ಆಹ್ವಾನ ನೀಡಲಾಗಿದೆ.



Leave a Comment: