ವಿವಾಹಿತ ಯುವಕನ ಜತೆ ವಿದ್ಯಾರ್ಥಿನಿ ಲವ್, ಕೆರೆಗೆ ಹಾರಿ ಇಬ್ಬರೂ ಆತ್ಮಹತ್ಯೆ!

ಸುದ್ದಿಗಳು News

Posted by vidyamaana on 2024-07-03 13:36:16 |

Share: | | | | |


ವಿವಾಹಿತ ಯುವಕನ ಜತೆ ವಿದ್ಯಾರ್ಥಿನಿ ಲವ್, ಕೆರೆಗೆ ಹಾರಿ ಇಬ್ಬರೂ ಆತ್ಮಹತ್ಯೆ!

ಬೆಂಗಳೂರು (ಜು.3): ಇಲ್ಲಿನ ಹೊರವಲಯದ ನೈಸ್ ರಸ್ತೆ ಸಮೀಪದ ಕೆರೆಗೆ ಹಾರಿ ಯುವ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕಾಲೇಜು ವಿದ್ಯಾರ್ಥಿನಿ ಅಂಜನಾ(20) ಮತ್ತು ಶ್ರೀಕಾಂತ್(25) ಸಾವನ್ನಪ್ಪಿರುವ ದುರ್ದೈವಿಗಳಾಗಿದ್ದಾರೆ. ಜುಲೈ 1ರಂದು ಪ್ರೇಮಿಗಳು ನಾಪತ್ತೆಯಾಗಿದ್ದರು.

ಕಳೆದ ಕೆಲ ವರ್ಷಗಳಿಂದ ಇಬ್ಬರು ಪರಸ್ಪರ ಪ್ರೀತಿಸ್ತಿದ್ದರು. ಆದರೆ ಯುವಜೋಡಿಯ ಪ್ರೀತಿಗೆ ವಿದ್ಯಾರ್ಥಿನಿ ಪೋಷಕರಿಂದ ವಿರೋಧ ವ್ಯಕ್ತವಾಗಿತ್ತು. ವಿದ್ಯಾರ್ಥಿನಿ ತಲಘಟ್ಟಪುರ ಸಮೀಪದ ಅಂಜನಾಪುರ ಬಳಿ ವಾಸವಿದ್ದಳು. ಯುವಕ ಶ್ರೀಕಾಂತ್ ಕೋಣನಕುಂಟೆ ನಿವಾಸಿಯಾಗಿದ್ದ. ಇಬ್ಬರೂ ನಾಪತ್ತೆಯಾಗಿದ್ದರು. ನಾಪತ್ತೆ ಹಿನ್ನಲೆ ಎರಡೂ ಕಡೆಯವರ ಪೋಷಕರು ಕೋಣನಕುಂಟೆ ಮತ್ತು ತಲಘಟ್ಟಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಇದೀಗ ಇಬ್ಬರೂ ಶವವಾಗಿ ಪತ್ತೆಯಾಗಿದ್ದಾರೆ. ನಮ್ಮ ಸಾವಿಗೆ ನಾವೇ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಜೋಡಿ ಆತ್ಮಹತ್ಯೆ ಮಾಡಿಕೊಂಡಿದೆ.

ಮದುವೆಯಾಗಿದ್ದ ಶ್ರೀಕಾಂತ್!

ಶ್ರೀಕಾಂತ್ ಗೆ ಬೇರೊಬ್ಬರ ಜೊತೆಗೆ ವಿವಾಹವಾಗಿದೆ. ಆದರೂ ಅಂಜನಾಳನ್ನ ಪ್ರೀತಿ ಮಾಡ್ತಿದ್ದ. ಇಬ್ಬರು ಒಟ್ಟಿಗೆ ಬದುಕಲು ಅವಕಾಶ ಇಲ್ಲ ಎಂದು ಸಾಯೋ ನಿರ್ಧಾರ ಮಾಡಿದ್ದಾರೆ. ಮೊದಲು ಶ್ರೀಕಾಂತ್ ಮೃತದೇಹ ಕೆರೆಯಲ್ಲಿ ಕಾಣಿಸಿದೆ. ಆತನನ್ನ ಮೇಲೆತ್ತಿದ್ದ ನಂತರ ಅಂಜನಾ ಮೃತದೇಹ ಕೂಡ ಮೇಲೆ ಬಂದಿದೆ. ಅಂಜನಾ ಮೃತದೇಹದ ಬಗ್ಗೆ ಪೊಲೀಸರಿಗೂ ಮಾಹಿತಿ ಇರುದಿಲ್ಲ. ಇಬ್ಬರು ಕೈಗೆ ಹಗ್ಗ ಕಟ್ಟಿಕೊಂಡಿದ್ದರಿಂದ ಇಬ್ಬರ ಮೃತದೇಹ ಒಟ್ಟಿಗೆ ಸಿಕ್ಕಿದೆ. ಮೊಬೈಲ್ ನಲ್ಲಿ ವೀಡಿಯೊ ಮಾಡಿರುವ ಯುವತಿ ಅಂಜನಾ ಅದನ್ನ ಆಟೋದಲ್ಲಿ ಬಿಟ್ಟು ಶ್ರೀಕಾಂತ್ ಜೊತೆಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನಮ್ಮ ಸಾವಿಗೆ ಯಾರು ಕಾರಣ ಅಲ್ಲ. ನಾವಿಬ್ಬರು ಒಟ್ಟಿಗೆ ಬದುಕಲು ಆಗಲ್ಲ. ಹಾಗಾಗಿ ಸಾಯ್ತಿದ್ದೇವೆ ಎಂದು ವಿಡಿಯೋ ಮಾಡಿದ್ದಾಳೆ. ಮೊಬೈಲ್ ವಶಕ್ಕೆ ಪಡೆದುಕೊಂಡಿರೊ ತಲಘಟ್ಟಪುರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

 Share: | | | | |


ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಶರಣಾದ ಸಿಟಿ ಬಸ್ ಚಾಲಕ

Posted by Vidyamaana on 2023-12-20 09:53:04 |

Share: | | | | |


ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಶರಣಾದ ಸಿಟಿ ಬಸ್ ಚಾಲಕ

ಮಂಗಳೂರು : ಸಿಟಿ ಬಸ್ ಚಾಲಕನೊಬ್ಬ ಸಮುದ್ರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮೇಶ್ವರ ಸಮುದ್ರ ತೀರದಲ್ಲಿ ನಡೆದಿದೆ. ಮೃತರನನ್ನು ಕೊಂಡಾಣ ಬೆಳರಿಂಗೆ ನಿವಾಸಿ ವೆಂಕಪ್ಪ ಶೆಟ್ಟಿ ಎಂಬವರ ಪುತ್ರ ಜಗದೀಶ್ (39) ಎಂದು ಗುರುತಿಸಲಾಗಿದೆಇವರು ಸ್ಟೇಟ್ ಬ್ಯಾಂಕ್ ಕಿನ್ಯಾ ನಡುವೆ ಚಲಿಸುವ ಸಿಟಿ ಬಸ್ ನಲ್ಲಿ ಚಾಲಕರಾಗಿದ್ದ ಇವರು, ಇಂದು ನಸುಕಿನ ಜಾವ ಸೋಮೇಶ್ವರ ರುದ್ರಪಾದೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಕೃತ್ಯ ಎಸಗುವ ಮುನ್ನ ಸಮುದ್ರ ತೀರದಲ್ಲಿ ಬೈಕನ್ನು ಇಟ್ಟು ಟವಲೊಂದರಲ್ಲಿ ಬೈಕ್ ಕೀ, ಪರ್ಸ್‌ ಚಪ್ಪಲಿಗಳನ್ನು ಇಟ್ಟು ಸಮುದ್ರಕ್ಕೆ ಹಾರಿದ್ದಾರೆ. ಅವಿವಾಹಿತರಾಗಿರುವ ಜಗದೀಶ್ ಅವರ ಪಸ್೯ನಲ್ಲಿ ಚಿನ್ನ ಅಡವಿಟ್ಟ ಚೀಟಿ, ಬ್ಯಾಂಕ್ ಖಾತೆಗೆ ಹಣ ವರ್ಗಾಯಿಸಿದ ಚೀಟಿಗಳು ಪತ್ತೆಯಾಗಿವೆ.

ಫೆ. 28ರಂದು ವಿಜ್ಡಮ್ ಸಂಸ್ಥೆಗಳ ನೆಟ್ ವರ್ಕ್ ಸೆಂಟರ್ ಪುತ್ತೂರಿನಲ್ಲಿ ಶುಭಾರಂಭ

Posted by Vidyamaana on 2024-02-27 17:43:19 |

Share: | | | | |


ಫೆ. 28ರಂದು ವಿಜ್ಡಮ್ ಸಂಸ್ಥೆಗಳ ನೆಟ್  ವರ್ಕ್ ಸೆಂಟರ್ ಪುತ್ತೂರಿನಲ್ಲಿ ಶುಭಾರಂಭ

ಪುತ್ತೂರು: ವಿಜ್ಡಮ್ ಸಂಸ್ಥೆಗಳ ನೆಟ್ ವರ್ಕ್ ಸೆಂಟರ್ ಫೆ. 28ರಂದು ಬೆಳಿಗ್ಗೆ 10ಕ್ಕೆ ದರ್ಬೆ ಸಂತ ಫಿಲೋಮಿನಾ ಕಾಲೇಜು ಎದುರುಭಾಗದಲ್ಲಿರುವ ಆರಾಧ್ಯ ಆರ್ಕೇಡಿನ ಪ್ರಥಮ ಮಹಡಿಯಲ್ಲಿ ಉದ್ಘಾಟನೆಗೊಳ್ಳಲಿದೆ.

ಶಾಸಕ ಅಶೋಕ್ ಕುಮಾರ್ ರೈ ಮುಖ್ಯಅತಿಥಿಯಾಗಿರುವರು. ಮಾಜಿ ಶಾಸಕ ಸಂಜೀವ ಮಠಂದೂರು ವಿಶೇಷ ಅತಿಥಿಯಾಗಿರುವರು. ವಿಸ್ಡಮ್ ಸಂಸ್ಥೆಯ ಸ್ಥಾಪಕ, ಎಂಡಿ, ಅಧ್ಯಕ್ಷ ಡಾ. ಫ್ರಾನ್ಸಿಸ್ಕಾ ತೇಜ್, ಸಂತ ಫಿಲೋಮಿನಾ ಕಾಲೇಜಿನ ಕ್ಯಾಂಪಸ್ ನಿರ್ದೇಶಕ ಫಾ.ಸ್ಟ್ಯಾನಿ ಪಿಂಟೊ, ಕುಂಬ್ರ ಮರ್ಕಝುಲ್ ಹುದಾ ಮಹಿಳಾ ಕಾಲೇಜಿನ ಅಧ್ಯಕ್ಷ ಅಬ್ದುಲ್ ರಹಿಮಾನ್, ಪ್ರೇರಣಾದ ಕಾರ್ಯನಿರ್ವಾಹಕ ನಿರ್ದೇಶಕ ಪ್ರವೀಣ್ ಕುಂಟ್ಯಾನ, ಆರಾಧ್ಯ ಆರ್ಕೇಡಿನ ಮಾಲಕ ಕರುಣಾಕರ್ ರೈ ಅತಿಥಿಯಾಗಿರುವರು.

ಅಕ್ಷಯ ಎಜ್ಯುಕೇಷನ್ ಚಾರಿಟೇಬಲ್ ಟ್ರಸ್ಟಿನ ಮ್ಯಾನೇಜಿಂಗ್ ಟ್ರಸ್ಟಿ ಜಯಂತ್ ನಡುಬೈಲು, ವಿಜ್ಡಮ್ ಇನ್’ಸ್ಟಿಟ್ಯೂಷನ್ ನೆಟ್ ವರ್ಕ್ ನ ಹ್ಯೂಮನ್ ರಿಸೋರ್ಸಸ್ ಗ್ಲೋಬಲ್ ಡೈರೆಕ್ಟರ್ ದೀಪಕ್ ಬೋಳೂರ್, ವಿಸ್ಡಮ್ ಇನ್’ಸ್ಟಿಟ್ಯೂಷನ್ಸ್ ನೆಟ್’ವರ್ಕಿನ ವ್ಯವಹಾರ ಪಾಲುದಾರ ವಿನಿತ್ ಕುಂದರ್ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.

ಪುತ್ತೂರು ಜಾತ್ರೆ-ಇಂದು ಬ್ರಹ್ಮರಥೋತ್ಸವ- ಪುತ್ತೂರು ಬೆಡಿ ಪ್ರದರ್ಶನ

Posted by Vidyamaana on 2024-04-17 14:36:54 |

Share: | | | | |


ಪುತ್ತೂರು ಜಾತ್ರೆ-ಇಂದು ಬ್ರಹ್ಮರಥೋತ್ಸವ- ಪುತ್ತೂರು ಬೆಡಿ ಪ್ರದರ್ಶನ

ಪುತ್ತೂರು:ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವದಲ್ಲಿ ಏ.17ರಂದು ರಾತ್ರಿ ಶ್ರೀ ದೇವರ ಬ್ರಹ್ಮರಥೋತ್ಸವ ಮತ್ತು ಪುತ್ತೂರು ಬೆಡಿ ಎಂದೇ ಪ್ರಸಿದ್ಧಿಯಾಗಿರುವ ವಿಶೇಷ ಸುಡುಮದ್ದುಗಳ ಪ್ರದರ್ಶನ ನಡೆಯಲಿದೆ.


ಜಾತ್ರಾ ಮಹೋತ್ಸವ ಸುಸೂತ್ರವಾಗಿ ನಡೆಯುವ ನಿಟ್ಟಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆಯನ್ನು ಮಾಡಲಾಗಿದೆ.ಬಂದೋಬಸ್ತ್ಗಾಗಿ ಜಿಲ್ಲೆಯ ವಿವಿಧ ಕಡೆಗಳಿಂದ ಪೊಲೀಸರನ್ನು ಕರೆಸಲಾಗಿದೆ.ಜೊತೆಗೆ ಸಶಸ ಮೀಸಲು ಪಡೆ, ಗೃಹ ರಕ್ಷಕ ದಳದವರೂ ಬಂದೋಬಸ್ತ್ ನಿರತರಾಗಿದ್ದಾರೆ.ಮಪ್ತಿಯಲ್ಲಿಯೂ ನೂರಾರು ಪೊಲೀಸರು ಕಾರ್ಯನಿರತರಾಗಿದ್ದಾರೆ. ಡಿವೈಎಸ್ಪಿ ಅರುಣ್‌ನಾಗೇಗೌಡರ ನೇತೃತ್ವದಲ್ಲಿ ಬಂದೋಬಸ್ತ್ ನಡೆಯಲಿದೆ.

ಹೈದರಾಬಾದ್ ಮೂಲದ ಮಹಿಳೆಯ ಶವ ಆಸ್ಟ್ರೇಲಿಯಾದ ಕಸದ ತೊಟ್ಟಿಯಲ್ಲಿ ಪತ್ತೆ

Posted by Vidyamaana on 2024-03-11 09:37:04 |

Share: | | | | |


ಹೈದರಾಬಾದ್ ಮೂಲದ ಮಹಿಳೆಯ ಶವ ಆಸ್ಟ್ರೇಲಿಯಾದ ಕಸದ ತೊಟ್ಟಿಯಲ್ಲಿ ಪತ್ತೆ

ಹೈದರಾಬಾದ್: ಹೈದರಾಬಾದ್ ಮೂಲದ ಮಹಿಳೆಯೊಬ್ಬರ ಶವವೊಂದು ಆಸ್ಟ್ರೇಲಿಯಾದ ಕಸದ ತೊಟ್ಟಿಯಲ್ಲಿ ಪತ್ತೆಯಾಗಿರುವ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ.


ಮೃತ ಮಹಿಳೆಯನ್ನು ಹೈದರಾಬಾದ್ ಮೂಲದ ಚೈತನ್ಯ ಮದಗಣಿ (೩೬) ಎನ್ನಲಾಗಿದ್ದು ಈಕೆಯ ಶವ ಶನಿವಾರ ಆಸ್ಟ್ರೇಲಿಯಾದ ಬಕ್ಲಿಯ ರಸ್ತೆಯ ಬದಿಯಲ್ಲಿ ಕಸದ ತೊಟ್ಟಿಯಲ್ಲಿ ಪತ್ತೆಯಾಗಿದೆ.

ಚೈತನ್ಯ ಅವರು ಅವರು ಹಲವು ವರ್ಷಗಳಿಂದ ತನ್ನ ಪತಿ ಅಶೋಕ್ ಅವರೊಂದಿಗೆ ಆಸ್ಟ್ರೇಲಿಯಾದ ಪಾಯಿಂಟ್​ ಕುಕ್ಕ್​ ಎಂಬಲ್ಲಿ ವಾಸವಾಗಿದ್ದರು ಇವರಿಗೆ ಒಂದು ಗಂಡು ಮಗು ಇದೆ.

ಕಳೆದ ಶನಿವಾರ ಆಸ್ಟ್ರೇಲಿಯಾದ ಪೊಲೀಸರು ಮಹಿಳೆಯ ಶವವನ್ನು ಪತ್ತೆಹಚ್ಚಿದ್ದು ತನಿಖೆ ಕೈಗೆತ್ತಿಕೊಂಡಿದ್ದಾರೆ ಆದರೆ ಪೊಲೀಸರ ಪ್ರಾಥಮಿಕ ತನಿಖೆ ಪ್ರಕಾರ ಪತಿಯೇ ಮಹಿಳೆಯ ಕತ್ಯೆಗೈದು ಬಳಿಕ ಕಸದ ತೊಟ್ಟಿಗೆ ಎಸೆದು ಭಾರತಕ್ಕೆ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ ಎನ್ನಲಾಗಿದೆ.ಅಶೋಕ್ ಮೇಲೆ ಅನುಮಾನ ವ್ಯಕ್ತಪಡಿಸಿದ ಕುಟುಂಬ:

ಚೈತನ್ಯ ಸಾವಿನ ಸುದ್ದಿ ಗೊತ್ತಾಗುತ್ತಿದ್ದಂತೆ ಚೈತನ್ಯ ಪೋಷಕರು ಅಳಿಯನ ವಿರುದ್ಧವೇ ಅನುಮಾನ ಇದೆ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ, ಅಲ್ಲದೆ ಪತ್ನಿ ಸಾವಿನ ಬಳಿಕ ಪತಿ ಭಾರತಕ್ಕೆ ಓಡಿ ಬಂದಿರುವ ವಿಚಾರದಲ್ಲಿ ಪತಿಯೇ ಈ ಕೃತ್ಯ ಎಸಗಿ ಪರಾರಿಯಾಗಿದ್ದಾನೆ ಎಂದು ಆರೋಪ ಮಾಡಲಾಗಿದೆ.

ಘಟನೆ ಸಂಬಂಧ ಉಪ್ಪಳ ಶಾಸಕ ಬಂಡಾರಿ ಲಕ್ಷ್ಮ ರೆಡ್ಡಿ ಮಾತನಾಡಿ, ಮಹಿಳೆ ತನ್ನ ಕ್ಷೇತ್ರದವಳಾದ ಕಾರಣ, ವಿಷಯ ತಿಳಿದ ನಂತರ ಇಂದು ಆಕೆಯ ಪೋಷಕರನ್ನು ಭೇಟಿ ಮಾಡಿದ್ದೇನೆ ಮಹಿಳೆಯ ಪೋಷಕರ ಕೋರಿಕೆಯ ಮೇರೆಗೆ ಮಹಿಳೆಯ ಮೃತದೇಹವನ್ನು ಹೈದರಾಬಾದ್‌ಗೆ ತರಲು ವಿದೇಶಾಂಗ ಕಚೇರಿಗೆ ಪತ್ರ ಬರೆದಿರುವುದಾಗಿ ತಿಳಿಸಿದ್ದಾರೆ. ಅಲ್ಲದೆ ಈ ಬಗ್ಗೆ ಕೇಂದ್ರ ಸಚಿವ ಜಿ ಕಿಶನ್ ರೆಡ್ಡಿ ಅವರ ಕಚೇರಿಗೂ ತಿಳಿಸಿರುವುದಾಗಿ ಶಾಸಕರು ಹೇಳಿದ್ದಾರೆ.

ಸದ್ಯ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಯಾರನ್ನೂ ಬಂಧಿಸಿಲ್ಲ, ತನಿಖೆ ನಡೆಯುತ್ತಿದೆ.

ಮಾಣಿ_ಪುತ್ತೂರು ರಾ. ಹೆದ್ದಾರಿ ಚತುಷ್ಪಥ ರಸ್ತೆ ನಿರ್ಮಾಣ

Posted by Vidyamaana on 2023-06-07 12:46:08 |

Share: | | | | |


ಮಾಣಿ_ಪುತ್ತೂರು ರಾ. ಹೆದ್ದಾರಿ ಚತುಷ್ಪಥ ರಸ್ತೆ ನಿರ್ಮಾಣ

ಪುತ್ತೂರು; ಮಾಣಿ-ಮೈಸೂರು ರಾ. ಹೆದ್ದಾರಿ ೨೫೭ರ ಮಾಣಿಯಿಂದ ಪುತ್ತೂರು ತನಕ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಆಗ್ರಹಿಸಿ ಪುತ್ತೂರು ಶಾಸಕರಾದ ಅಶೋಕ್ ರೈಯವರು ರಾ. ಹೆದ್ದಾರಿ ವಿಭಾಗದ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿ ಅಧಿಕಾರಿಗಳ ಮೂಲಕ ಕೇಂದ್ರ ಸರಕಾರಕ್ಕೆ ಮನವಿಯನ್ನು ಸಲ್ಲಿಸಿದ್ದಾರೆ.

ಬೆಂಗಳೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ ದಕ್ಷಿಣ ಭಾರತ ಪ್ರಾಂತೀಯ (ನ್ಯಾಷನಲ್ ಹೈವೇ ಸೌತ್ ಇಂಡಿಯಾ ಝೋನ್) ಅಧಿಕಾರಿ ಮಹೇಂದ್ರ ಶರ್ಮ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಮಾನಿಯಿಂದ ಪುತ್ತೂರು ತನಕ ಚತುಷ್ಪಥ ಕಾಮಗಾರಿ ಆರಂಭದಲ್ಲಿ ನಡೆಸುವಂತೆ ಮತ್ತು ಕಾಮಗಾರಿಯನ್ನು ಪ್ರಸಕ್ತ ಸಾಲಿನ ವಾರ್ಷಿಯ ಯೋಜನೆಯಲ್ಲಿ ಸೇರಿಸಿಕೊಳ್ಳುವಂತೆಯೂ ಮನವಿ ಮಾಡಿದ್ದಾರೆ. ಪ್ರಸಕ್ತ ಸಾಲಿನ ವಾರ್ಷಿಕ ಯೋಜನೆಯಲ್ಲಿ ಸೇರಿಸಿಕೊಂಡಲ್ಲಿ ಮಾತ್ರ ಮುಂದಿನ ಅವಧಿಗೆ ಈ ಕಾಮಗಾರಿಗೆ ಚಾಲನೆ ದೊರೆಯಬಹುದಾಗಿದ್ದು ಇಲ್ಲವಾದಲ್ಲಿ ಇನ್ನಷ್ಟು ದಿನ ಕಾಯಬೇಕಾದ ಅನಿವಾರ್ಯತೆ ಉಂಟಾಗಬಹುದು. ಈ ಕಾರಣಕ್ಕೆ ಪ್ರಸಕ್ತ ಸಾಲಿನಲ್ಲೇ ಈ ಬೇಡಿಕೆಯನ್ನು ಮಂಡಿಸುವಂತೆ ಶಾಸಕರು ಅಧಿಕಾರಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. ಶಾಸಕರ ಮನವಿಯನ್ನು ಸ್ವೀಕರಿಸಿದ ಅಧಿಕಾರಿ ಮಹೇಂದ್ರ ಶರ್ಮ ಅವರು ತಮ್ಮ ಬೇಡಿಕೆಯನ್ನು ಕೇಂದ್ರ ಸಚಿವರಿಗೆ ಮನವರಿಕೆ ಮಾಡಿಕೊಡುವುದಾಗಿಯೂ , ಕಾಮಗಾರಿಯ ಬೇಡಿಕೆಯ ಬಗ್ಗೆ ವಿವರಣೆ ನೀಡುವುದಾಗಿಯೂ ಶಾಸಕರಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಶಾಸಕರು ಮಾಣಿಯಿಂದ ಪುತ್ತೂರು ತನಕ ಚತುಷ್ಪಥ ರಸ್ತೆ ನಿರ್ಮಾಣವಾದಲ್ಲಿ ಜನರಿಗೆ ಹೆಚ್ಚು ಪ್ರಯೋಜನಕಾರಿಯಾಗಲಿದೆ. ರಾ. ಹೆದ್ದಾರಿಯಾಗಿ ಮಾಣಿ ಮೈಸೂರು ರಸ್ತೆ ಮೇಲ್ದರ್ಜೆಗೇರಿದ್ದರಿಂದ ಚತುಷ್ಪಥ ರಸ್ತೆ ಕಾಮಗಾರಿ ಬೇಡಿಕೆಯನ್ನು ಕೇಂದ್ರ ಸರಕರ ಈಡೇರಿಸಲಿದೆ ಎಂಬ ನಂಬಿಕೆ ಇದೆ. ರಸ್ತೆ ನಿರ್ಮಾಣವಾದಲ್ಲಿ ಈ ಭಾಗದ ಬಹುಕಾಲದ ಬೇಡಿಕೆಯೂ ಈಡೇರಲಿದೆ. ರಸ್ತೆ ನಿರ್ಮಾಣ ಕುರಿತು ಅಧಿಕಾರಿಗಳ ಜೊತೆ ಮಾತನಾಡಿ ಮನವಿಯನ್ನು ನೀಡಿದ್ದೇನೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.

ಎನ್ ಆರ್ ಸಿ ಸಿ- ಅಮ್ಮುಂಜ ನೂತನ ಕಾಂಕ್ರೀಟ್ ರಸ್ತೆ ಉದ್ಘಾಟನೆ

Posted by Vidyamaana on 2024-06-16 17:20:11 |

Share: | | | | |


ಎನ್ ಆರ್ ಸಿ ಸಿ- ಅಮ್ಮುಂಜ ನೂತನ ಕಾಂಕ್ರೀಟ್ ರಸ್ತೆ ಉದ್ಘಾಟನೆ

ಪುತ್ತೂರು: ಕಳೆದ ಲೋಕಸಭಾ ಚುನಾವಣೆಯ ಮೊದಲು ಶಿಲಾನ್ಯಾಸಗೈದ ಕಾಮಗಾರಿಗಳು ಆರಂಭಗೊಂಡಿದೆ, ಶೀಘ್ರದಲ್ಲೇ ಎಲ್ಲಾ ಕಾಮಗಾರಿಗಳು ಪೂರ್ಣಗೊಳ್ಳಲಿದೆ ಎಂದು ಶಾಸಕ ಅಶೋಕ್ ರೈ ಹೇಳಿದರು.

ಅವರು ಕುರಿಯ ಗ್ರಾಮದ ಎನ್ ಆರ್ ಸಿ ಸಿ - ಅಮ್ಮುಂಜ ರಸ್ತೆಯು ರೂ ೧೦ ಲಕ್ಷದಲ್ಲಿ ಕಾಂಕ್ರೀಟ್ ಆಗಿದ್ದು ಇದರ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.

ಅಧ್ಯತೆ ಮೇರೆಗೆ ಎಲ್ಲಾ ರಸ್ತೆಗಳನ್ನು ಅಭಿವೃದ್ದಿ ಮಾಡಲಾಗುವುದು. ರಸ್ತೆ ಕಾಂಕ್ರೀಟ್ ಆಗಿಲ್ಲವೆಂದು ಬೇಜಾರುಮಾಡಬೇಡಿ ಮುಂದಿನ ದಿನಗಳಲ್ಲಿ ಅಗತ್ಯ ಬೇಡಿಕೆ ಇರುವ ಎಲ್ಲಾ ರಸ್ತೆಗಳನ್ನು ಅಭಿವೃದ್ದಿ ಮಾಡಲಾಗುವುದು ಎಂದು ಹೇಳಿದರು. ಪಾಲಿಂಜೆ ಶ್ರೀ ಮಹಾವಿಷ್ಣು ದೇವಸ್ಥಾನದ ಅಭಿವೃದ್ದಿಗೆ ೧೦ ಲಕ್ಷ ಅನುದಾನ ಒದಗಿಸಲಾಗುವುದು ಎಂದು ಹೇಳಿದರು.



Leave a Comment: