ನಕಲಿ ಚಿನ್ನ ದ ಆಸೆಗೆ ತುಮಕೂರಿನಲ್ಲಿ ಬಲಿಯಾದರೇ ಬೆಳ್ತಂಗಡಿಯ ಮೂವರು?

ಸುದ್ದಿಗಳು News

Posted by vidyamaana on 2024-03-23 10:38:46 |

Share: | | | | |


ನಕಲಿ ಚಿನ್ನ ದ ಆಸೆಗೆ ತುಮಕೂರಿನಲ್ಲಿ ಬಲಿಯಾದರೇ ಬೆಳ್ತಂಗಡಿಯ ಮೂವರು?

ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿ ಕೆರೆಗೆ ತಳ್ಳಿದ ಪ್ರಕರಣದಲ್ಲಿ ಮೂವರು ಸಾವನ್ನಪ್ಪಿದ ಸಂಬಂಧಪಟ್ಟಂತೆ ಆರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಪ್ರಕರಣದ‌ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಮತ್ತು ಐದು ಜನರನ್ನು ಕೋರಾ ಪೊಲೀಸರು ಮಾ.22 ರಂದು ರಾತ್ರಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ತುಮಕೂರಿಗೆ ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56) , ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ಹೋಗಿದ್ದರು ಎಂದು ಗುರುತಿಸಿದ್ದಾರೆ.

ಇನ್ನು ಮೂರು ಜನ ಮೃತರೆಲ್ಲಾ ನಕಲಿ ಚಿನ‌್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಅನ್ನೋದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಕಡಿಮೆ ಚಿನ್ನವನ್ನು ಬೆಲೆಗೆ ನೀಡುತ್ತೇವೆ ಎಂದು ಸುಳ್ಳು ಹೇಳಿ ಮೂವರನ್ನು ಕರೆಸಿ ಹಣ ದೋಚುವ ಪ್ಲ್ಯಾನ್ ಮಾಡಿ ಕರೆಸಿಕೊಂಡು ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಲಾಗಿದೆ ಎನ್ನಲಾಗಿದೆ.

ಪ್ರಕರಣದ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಮತ್ತು ಇತರ ಐದು ಜನ ಸೇರಿ ಒಟ್ಟು ಆರು ಜನರನ್ನು ವಶಕ್ಕೆ ಪಡೆದಿರುವ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. 


ಕೋರಾ ಪೊಲೀಸ್ ಠಾಣೆಯಲ್ಲಿ ಮಾ.22 ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು. ಇನ್ನು ಮೂವರ ಶವ ಸಂಪೂರ್ಣವಾಗಿ ಸುಟ್ಟಿರುವ ಕಾರಣ ಗುರುತು ಪತ್ತೆಹಚ್ಚಲು ಡಿಎನ್ಎ ಪರೀಕ್ಷೆ ಬಳಿಕ ಮನೆಮಂದಿಗೆ ಶವ ಬಿಟ್ಟು ಕೊಡಲಿದ್ದಾರೆ. ಡಿಎನ್ಎ ವರದಿ ಬರಲು ಸುಮಾರು ಒಂದು ವಾರ ಬೇಕಾಗುತ್ತದೆ ಎಂದು ಪೊಲೀಸರು ಮನೆಯವರಿಗೆ ತಿಳಸಿದ್ದಾರೆ.

 Share: | | | | |


ಬನ್ನೇರುಘಟ್ಟ ದಸರಾದ ಆನೆಯನ್ನು ಸಾಗಿಸುತ್ತಿದ್ದ ಲಾರಿ ತಮಿಳುನಾಡಿನಲ್ಲಿ ಅಪಘಾತ; ಚಾಲಕ ಸಾವು

Posted by Vidyamaana on 2023-10-25 16:32:41 |

Share: | | | | |


ಬನ್ನೇರುಘಟ್ಟ ದಸರಾದ ಆನೆಯನ್ನು ಸಾಗಿಸುತ್ತಿದ್ದ ಲಾರಿ ತಮಿಳುನಾಡಿನಲ್ಲಿ  ಅಪಘಾತ; ಚಾಲಕ ಸಾವು

ಮೈಸೂರು : ದಸರಾ ಮಹೋತ್ಸವಕ್ಕೆ ತರಲಾಗಿದ್ದ ಆನೆಯನ್ನು ವಾಪಸ್‌ ಲಾರಿಯಲ್ಲಿ ಕೊಂಡೊಯ್ಯುತ್ತಿದ್ದಾಗ ಅಪಘಾತ ಸಂಭವಿಸಿ ಲಾರಿ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಆದರೆ, ಅದೃಷ್ಟವಶಾತ್‌ ಲಾರಿಯಲ್ಲಿದ್ದ ಆನೆ ಪ್ರಾಣಾಪಾಯದಿಂದ ಪಾರಾಗಿದೆ. ನಂತರ, ಕ್ರೇನ್‌ ತರಿಸಿ ಆನೆಯನ್ನು ರಕ್ಷಣೆ ಮಾಡಲಾಗಿದೆ.


ಬೆಂಗಳೂರಿನ ಹೊರವಲಯ ಬನ್ನೇರುಘಟ್ಟ ಬಳಿ ದಸರಾ ಉತ್ಸವಕ್ಕೆ ತರಲಾಗಿದ್ದ ತಮಿಳುನಾಡಿನ ತಿರುಚ್ಚಿಯ ಆನೆಯನ್ನು ವಾಪಸ್‌ ಲಾರಿಯಲ್ಲಿ ಕೊಂಡೊಯ್ಯುತ್ತಿದ್ದಾಗ ಲಾರಿ ಅಪಘಾತ ಸಂಭವಿಸಿದೆ. ರಸ್ತೆ ಬದಿಯಲ್ಲಿ ಲಾರಿಯನ್ನು ನಿಲ್ಲಿಸಿ ಚಾಲಕ ಮೂತ್ರ ವಿಸರ್ಜನೆಗೆ ತೆರಳಿದಾಗ ಲಾರಿಯನ್ನು ಹ್ಯಾಂಡ್‌ ಬ್ರೇಕ್‌ ಮಾಡದ ಹಿನ್ನೆಲೆಯಲ್ಲಿ ಲಾರಿ ಮುಂದಕ್ಕೆ ಚಲಿಸಿ ಮುಂಭಾಗದಲ್ಲಿದ್ದ ಚಾಲಕನ ಮೇಲೆ ಹರಿದಿದೆ. ಇದರಿಂದ ಲಾರಿ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಇನ್ನು ರಸ್ತೆ ಬದಿಯ ತಗ್ಗು ಪ್ರದೇಶಕ್ಕೆ ಇಳಿದಿದ್ದ ಲಾರಿಯಲ್ಲಿ ಆನೆ ನಿಂತುಕೊಂಡಿದ್ದು, ಅದನ್ನು ಕ್ರೇನ್‌ ಮೂಲಕ ಸಂರಕ್ಷಣೆ ಮಾಡಲಾಗಿದೆ.ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಶಾನಮಾವು ಅರಣ್ಯ ಪ್ರದೇಶದಲ್ಲಿ ಘಟನೆ ನಡೆದಿದೆ. ತಮಿಳುನಾಡಿನ ಪುದುಕ್ಕೊಟ್ಟೈ ಮೂಲದ ಆರೋಗ್ಯ ಸ್ವಾಮಿ ಮೃತಪಟ್ಟ ದುರ್ದೈವಿ ಆಗಿದ್ದಾನೆ. ಲಾರಿ ಮುಂದೆ ಮೂತ್ರ ವಿಸರ್ಜನೆಗೆ ಮಾಡುವಾಗ ಡ್ರೈವರ್ ಧಾರಣ ಸಾವನ್ನಪ್ಪಿದ್ದಾರೆ. ರಸ್ತೆಬದಿಯಲ್ಲಿ ಲಾರಿಯನ್ನು ನಿಲ್ಲಿಸಿ ಮೂತ್ರ ವಿಸರ್ಜನೆ ಮಾಡುವಾಗ ಘಟನೆ ನಡೆದಿದೆ. ಲಾರಿಯ ಹ್ಯಾಂಡ್‌ ಬ್ರೇಕ್‌ ಮಾಡದ ಹಿನ್ನೆಲೆಯಲ್ಲಿ ಲಾರಿಯಲ್ಲಿದ್ದ ಆನೆ ಸ್ವಲ್ಪ ಅಲುಗಾಡಿದ್ದರಿಂದ ಲಾರಿ ಸೀದಾ ಮುಂದಕ್ಕೆ ಹೋಗಿ ಚಾಲಕನ ಮೇಲೆ ಹರಿದಿದೆ.ತಿರುಚ್ಚಿ ಜಿಲ್ಲೆಯ ಶ್ರೀ ರಂಗಂ ಪ್ರದೇಶಕ್ಕೆ ಸೇರಿದ ಭಾಸ್ಕರನ್ ಬಳಿ 3 ಸಾಕಾನೆಗಳು ಇದ್ದವು. ಇದರಲ್ಲಿ ಕರ್ನಾಟಕ ರಾಜ್ಯದ ಬನ್ನೇರುಘಟ್ಟ ಪ್ರದೇಶದ ಪೆರುಮಾಳ್ ದೇವಸ್ಥಾನದಲ್ಲಿ ದಸರಾ ಹಬ್ಬವನ್ನು ಆಚರಿಸಲು ರಾಣಿ ಆನೆಯನ್ನು ಕರೆದೊಯ್ಯಲಾಗಿತ್ತು. 6 ಜನರು ರಾತ್ರಿ ಈಚರ್ ವಾಹನದಲ್ಲಿ ತಿರುಚ್ಚಿಗೆ ತೆರಳಿದರು. ಆದರೆ, ಆನೆಯಿರುವ ಸ್ಥಳಕ್ಕೆ ತೆರಳುವ ಮುನ್ನವೇ ದುರಂತ ಸಂಭವಿಸಿದೆ. ಆನೆಯ ರಕ್ಷಣಾ ಕಾರ್ಯದ ವೇಳೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ಸ್ಥಗಿತ ಮಾಡಲಾಗಿತ್ತು.ಎರಡು ಕ್ರೇನ್‌ಗಳ ಸಹಾಯದಿಂದ ಆನೆ ಯನ್ನ ಸುರಕ್ಷಿತವಾಗಿ ಹೊರತೆಗೆಯಲಾಯಿತು. ನಂತರ ಲಾರಿ ಚಾಲಕ ಆರೋಗ್ಯಸ್ವಾಮಿ ಅವರ ಮೃತದೇಹವನ್ನು ಹೂಸೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಇದರಿಂದ ಮಧ್ಯರಾತ್ರಿ ಸುಮಾರು 1 ಗಂಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಹೂಸೂರು, ಅನ್ನೋ ಪೊಲೀಸರು ಭೇಟಿ ಮಾಡಿ ಪರಿಶೀಲನೆ ಮಾಡುತ್ತಿದ್ದಾರೆ.

ಮಹಾದೇವ್ ಬೆಟ್ಟಿಂಗ್ ಆ್ಯಪ್‌ ಮಾಲೀಕ ರವಿ ಉಪ್ಪಲ್ ದುಬೈನಲ್ಲಿ ಬಂಧನ

Posted by Vidyamaana on 2023-12-13 11:25:21 |

Share: | | | | |


ಮಹಾದೇವ್ ಬೆಟ್ಟಿಂಗ್ ಆ್ಯಪ್‌ ಮಾಲೀಕ ರವಿ ಉಪ್ಪಲ್ ದುಬೈನಲ್ಲಿ ಬಂಧನ

ನವದೆಹಲಿ: ಮಹಾದೇವ್ ಆನ್‌ಲೈನ್ ಬೆಟ್ಟಿಂಗ್ ಆ್ಯಪ್‌ನ ಇಬ್ಬರು ಪ್ರಮುಖ ಮಾಲೀಕರಲ್ಲಿ ಒಬ್ಬರಾದ ರವಿ ಉಪ್ಪಲ್ ಅವರನ್ನು ಇಡಿ ಆದೇಶದ ಮೇರೆಗೆ ಇಂಟರ್‌ಪೋಲ್ ಹೊರಡಿಸಿದ ರೆಡ್ ನೋಟಿಸ್ ಆಧಾರದ ಮೇಲೆ ಸ್ಥಳೀಯ ಪೊಲೀಸರು ದುಬೈನಲ್ಲಿ ಬಂಧಿಸಿದ್ದಾರೆ ಎಂದು ಅಧಿಕೃತ ಮೂಲಗಳು ಬುಧವಾರ ತಿಳಿಸಿವೆ.



ರವಿ ಉಪ್ಪಲ್ ಜೊತೆಗೆ ಇನ್ನಿಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗುತ್ತಿದೆ. ಉಪ್ಪಲ್ ಅವರನ್ನು ಕಳೆದ ವಾರ ದುಬೈನಲ್ಲಿ ಬಂಧಿಸಲಾಗಿದ್ದು ಇದೀಗ ಅವರನ್ನು ಭಾರತಕ್ಕೆ ಗಡೀಪಾರು ಮಾಡಲು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದುಬೈ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದಾರೆ ಎನ್ನಲಾಗಿದೆ.


ರವಿ ಉಪ್ಪಲ್ ಅವರು 6,000 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಹಣ ವರ್ಗಾವಣೆ ಪ್ರಕರಣದ ಮಾಸ್ಟರ್ ಮೈಂಡ್ ಆಗಿದ್ದು, ಇದರಲ್ಲಿ ನಿರ್ಗಮಿತ ಛತ್ತೀಸ್‌ಗಢ ಸಿಎಂ ಭೂಪೇಶ್ ಬಘೇಲ್ ಅವರ ಹೆಸರೂ ಕೂಡಾ ಕೇಳಿಬಂದಿದ್ದು. ಮೂಲಗಳ ಪ್ರಕಾರ, ಇಡಿ ಹೊರಡಿಸಿದ ರೆಡ್ ಕಾರ್ನರ್ ನೋಟಿಸ್‌ನಿಂದ ಉಪ್ಪಲ್ ಅವರನ್ನು ಬಂಧಿಸಲಾಗಿದೆ. ರವಿಯನ್ನು ಹಸ್ತಾಂತರಿಸಲು ಸಿದ್ಧ ಎಂದು ದುಬೈ ಅಧಿಕಾರಿಗಳು ಭಾರತಕ್ಕೆ ಮಾಹಿತಿ ನೀಡಿದ್ದಾರೆ.


ಮಹಾದೇವ್ ಆ್ಯಪ್‌ನ ಎರಡನೇ ಪ್ರವರ್ತಕ ಸೌರಭ್ ಚಂದ್ರಕರ್ ಕೂಡ ಶೀಘ್ರದಲ್ಲೇ ಯುಎಇಯಲ್ಲಿ ಬಂಧಿಸುವ ಸಾಧ್ಯತೆ ಇದೆ ಎನ್ನಲಾಗಿದ್ದು. ಆತನ ಬಂಧನದ ಬಳಿಕ ಆತನನ್ನೂ ಭಾರತಕ್ಕೆ ಹಸ್ತಾಂತರಿಸಲಾಗುವುದು ಎಂದು ಹೇಳಿದ್ದಾರೆ.ರಾಯ್‌ಪುರದ ವಿಶೇಷ ನ್ಯಾಯಾಲಯದಿಂದ ಇಡಿ ಇಬ್ಬರ ವಿರುದ್ಧವೂ ಜಾಮೀನು ರಹಿತ ವಾರಂಟ್ ತೆಗೆದುಕೊಂಡಿದೆ. ಆ ಬಳಿಕ ಅಕ್ಟೋಬರ್‌ನಲ್ಲಿ ಇಬ್ಬರ ವಿರುದ್ಧವೂ ರೆಡ್ ಕಾರ್ನರ್ ನೋಟಿಸ್ ಜಾರಿ ಮಾಡಲಾಗಿತ್ತು.

ಪುತ್ತೂರು ಜಾತ್ರೋತ್ಸವದಲ್ಲಿ ಯುವಶಕ್ತಿ ಸೇವಾಪಥದ ಪುತ್ತೂರು ಸೇವಾಯಜ್ಞ

Posted by Vidyamaana on 2024-04-17 10:24:57 |

Share: | | | | |


ಪುತ್ತೂರು ಜಾತ್ರೋತ್ಸವದಲ್ಲಿ ಯುವಶಕ್ತಿ ಸೇವಾಪಥದ ಪುತ್ತೂರು ಸೇವಾಯಜ್ಞ

ಪುತ್ತೂರು : ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ನಡೆಯುತ್ತಿದ್ದು, ಏ.17 ರಂದು ಬ್ರಹ್ಮರಥೋತ್ಸವ ಜರುಗಲಿದೆ. ಈ ವೇಳೆ ಬಡ ಕುಟುಂಬಗಳ ಸಂಕಷ್ಟಕ್ಕೆ ಕೈ ಜೋಡಿಸುವ ದೃಷ್ಟಿಯಿಂದ ಯುವಶಕ್ತಿ ಸೇವಾಪಥದ ‘ಪುತ್ತೂರು ಸೇವಾಯಜ್ಞ’ ಹಮ್ಮಿಕೊಳ್ಳಲಾಗಿದೆ.

ಗುಂಡ್ಯ : ಹೊಳೆಯಲ್ಲಿ ಸ್ನಾನಕ್ಕಿಳಿದ ವೇಳೆ ನೀರು ಪಾಲಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ

Posted by Vidyamaana on 2023-11-15 17:29:50 |

Share: | | | | |


ಗುಂಡ್ಯ : ಹೊಳೆಯಲ್ಲಿ ಸ್ನಾನಕ್ಕಿಳಿದ ವೇಳೆ ನೀರು ಪಾಲಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ

ನೆಲ್ಯಾಡಿ : ಗುಂಡ್ಯ ಹೊಳೆಗೆ ಸ್ನಾನಕ್ಕೆ ಹೋಗಿದ್ದ ವೇಳೆ ಕಾಲು ಜಾರಿ ನೀರು ಪಾಲಾಗಿದ್ದ ಕಡಬ ತಾಲೂಕು ಸಿರಿಬಾಗಿಲು ಗ್ರಾಮದ ಬರ್ಚಿನಾಳ ನಿವಾಸಿ ಸೋಮಶೇಖರ (34) ರವರ ಮೃತದೇಹ ನ.15 ರಂದು ಮಧ್ಯಾಹ್ನ ಪತ್ತೆಯಾಗಿದೆ.ಅಗ್ನಿಶಾಮಕ ಹಾಗೂ ಶೌರ್ಯ ವಿಪತ್ತು ತಂಡದವರು ಮೃತದೇಹ ಪತ್ತೆ ಹಚ್ಚಿದ್ದಾರೆ.


ಸೋಮಶೇಖರ ರವರು ನ.14 ರಂದು ಸಂಜೆ ಗುಂಡ್ಯ ಹೊಳೆಗೆ ಸ್ನಾನಕ್ಕೆ ಹೋಗಿದ್ದ ವೇಳೆ ಕಾಲು ಜಾರಿ ನೀರು ಪಾಲಾಗಿದ್ದರು.


ಕೊಂಬಾರು ಮೂಲದ ಸೋಮಶೇಖರ್ ರೆಂಜಿಲಾಡಿಯಲ್ಲಿ ವಾಸ್ತವ್ಯವಿದ್ದರು.


ಮೃತರು ಪತ್ನಿ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.

ವಿದ್ಯುತ್‌ ತಂತಿ ತುಳಿದು ತಾಯಿ-ಮಗು ಸಾವು ಪ್ರಕರಣ; ಇಬ್ಬರು ಅಧಿಕಾರಿಗಳ ಅಮಾನತು

Posted by Vidyamaana on 2023-11-20 07:40:32 |

Share: | | | | |


ವಿದ್ಯುತ್‌ ತಂತಿ ತುಳಿದು ತಾಯಿ-ಮಗು ಸಾವು ಪ್ರಕರಣ; ಇಬ್ಬರು ಅಧಿಕಾರಿಗಳ ಅಮಾನತು

ಬೆಂಗಳೂರು: ವಿದ್ಯುತ್‌ ತಂತಿ ತುಳಿದು ತಾಯಿ-ಮಗು ಸಾವು ಪ್ರಕರಣದಲ್ಲಿ ಈಗಾಗಲೇ ಐವರು ಬೆಸ್ಕಾಂ ಅಧಿಕಾರಿಗಳು, ಸಿಬ್ಬಂದಿಯನ್ನು ಪೊಲೀಸರು ಬಂದಿಸಿದ್ದಾರೆ. ಇನ್ನು ಪ್ರಕರಣದಲ್ಲಿ ನಿರ್ಲಕ್ಷ್ಯದ ಆರೋಪದಲ್ಲಿ ಇಬ್ಬರು ಬೆಸ್ಕಾಂ ಅಧಿಕಾರಿಗಳನ್ನು ಇಂಧನ ಇಲಾಖೆ ಅಮಾನತು ಮಾಡಿದ್ದು, ಮೃತರಿಗೆ ರಾಜ್ಯ ಸರ್ಕಾರದಿಂದ ತಲಾ 5 ಲಕ್ಷ ಪರಿಹಾರ ಘೋಷಿಸಲಾಗಿದೆ.ಈ ಬಗ್ಗೆ ಇಂಧನ ಸಚಿವ ಕೆ.ಜೆ. ಜಾರ್ಜ್‌ ಪ್ರತಿಕ್ರಿಯಿಸಿ, ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿರುವ ಹೋಪ್ ಫಾರ್ಮ್ ಬಳಿ ವಿದ್ಯುತ್ ಶಾಕ್‌ಗೆ ಒಬ್ಬ ಮಹಿಳೆ ಮತ್ತು ಒಂದು ಮಗು ಸಾವನ್ನಪ್ಪಿರುವ ದುರ್ದೈವದ ಘಟನೆ ನಡೆದಿದೆ. ಈ ದುರದೃಷ್ಟಕರ ಸಾವುಗಳಿಗೆ ಕಾರಣವಾದ ಘಟನೆಯ ಕುರಿತು ನಾವು ವಿಚಾರಣೆಯನ್ನು ಕೈಗೆತ್ತಿಕೊಂಡಿದ್ದೇವೆ. ಇದರ ವರದಿಯನ್ನು ಎದುರು ನೋಡುತ್ತಿದ್ದೇವೆ. ಈ ಅಪಘಾತಕ್ಕೆ ಕಾರಣರಾದ AE ಮತ್ತು AEE ಯನ್ನು ಅಮಾನತುಗೊಳಿಸಲಾಗಿದೆ ಮತ್ತು ಇದಕ್ಕೆ ಕಾರಣಾದವರು ಮತ್ತಾರೇ ಇದ್ದರೂ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು. ಈ ದುರ್ಘಟನೆಯಲ್ಲಿ ಸಂಬಂಧಿಕರನ್ನು ಕಳೆದುಕೊಂಡ ಕುಟುಂಬ ಸದಸ್ಯರಿಗೆ ರಾಜ್ಯ ಸರ್ಕಾರ ತಲಾ 5 ಲಕ್ಷ ರೂ ಪರಿಹಾರ ನೀಡಲಿದೆ ಎಂದು ತಿಳಿಸಿದ್ದಾರೆ.

ಐವರ ಬಂಧನ

ವಿದ್ಯುತ್‌ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಕಾಡುಗುಡಿ ಪೊಲೀಸರು ಬಂಧಿಸಿದ್ದಾರೆ. ನಿರ್ಲಕ್ಷ್ಯದ ಆರೋಪದಡಿ ಬೆಸ್ಕಾಂ ವೈಟ್‌ಫೀಲ್ಡ್‌ ವಿಭಾಗದ ಎಕ್ಸಿಕ್ಯೂಟಿವ್ ಎಂಜಿನಿಯರ್ ಶ್ರೀರಾಮ್‌,ಅಸಿಸ್ಟೆಂಟ್‌ ಎಂಜಿನಿಯರ್‌ ಚೇತನ್‌, ಎಇಇ ಸುಬ್ರಮಣ್ಯ, ಜೂನಿಯರ್‌ ಎಂಜಿನಿಯರ್‌ ರಾಜಣ್ಣ ಹಾಗೂ ಸ್ಟೇಷನ್‌ ಆಪರೇಟರ್ ಮಂಜು ಅವರನ್ನು ಪೊಲೀಸರು ಬಂಧಿಸಿದ್ದಾರೆ.


ಇಬ್ಬರ ಸಾವಿಗೆ ಬಿಎಂಟಿಸಿ ಬಸ್ ಡ್ರೈವರ್ ಕೂಡ ಕಾರಣ?


ವಿದ್ಯುತ್‌ ತಗುಲಿ ತಾಯಿ-ಮಗು ಮೃತಪಡಲು ಬಿಎಂಟಿಸಿ ಬಸ್ ಡ್ರೈವರ್ ಕೂಡ ಕಾರಣ ಎಂಬ ಆರೋಪ ಕೇಳಿಬಂದಿದೆ. ಸಿಗ್ನಲ್ ಬಿದ್ದಿದೆ ಎಂದು ಘಟನೆ ನಡೆದಿದ್ದ ಸ್ಥಳದಲ್ಲಿ ಬಸ್ ಚಾಲಕ ಡೋರ್ ಓಪನ್ ಮಾಡಿದ್ದ. ಸ್ಥಳದಿಂದ ನೂರು ಮೀಟರ್ ದೂರದಲ್ಲಿ ಬಸ್ ನಿಲ್ದಾಣವಿತ್ತು. ಆದರೂ ಮೊದಲೇ ನಿಲ್ಲಿಸಿದ್ದರಿಂದ ತಾಯಿ-ಮಗು ಇಳಿದು ನಡೆದುಕೊಂಡು ಹೋಗಿದ್ದರಿಂದ ವಿದ್ಯುತ್‌ ತಂತಿ ತುಳಿದು ದರಂತಕ್ಕೆ ಕಾರಣವಾಗಿದೆ. ಹೀಗಾಗಿ ಬಸ್‌ ಚಾಲಕನ ವಿರುದ್ಧವೂ ಕ್ರಮಕ್ಕೆ ಆಗ್ರಹ ಕೇಳಿಬಂದಿದೆ.


ನ್ಯಾಯಕ್ಕಾಗಿ ಆಗ್ರಹಿಸಿ ಸಂಬಂಧಿಕರ ಪ್ರತಿಭಟನೆ


ವಿದ್ಯುತ್‌ ತಂತಿ ತುಳಿದು ತಾಯಿ-ಮಗು ಸಾವಿಗೀಡಾದ್ದಕ್ಕೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ. ಹೀಗಾಗಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಂಡು, ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿ ಮೃತರ ಕುಟುಂಬಸ್ಥರು, ಸ್ಥಳೀಯರು ಕಾಡುಗುಡಿಯಲ್ಲಿ ಪ್ರತಿಭಟನೆ ನಡೆಸಿದರು. ಬೆಸ್ಕಾಂಗೆ ಧಿಕ್ಕಾರ ಕೂಗಿದ ಪ್ರತಿಭಟನಾಕಾರರು ನ್ಯಾಯಕ್ಕಾಗಿ ರಸ್ತೆ ತಡೆ ನಡೆಸಿ ಆಕ್ರೋಶ ಹೊರಹಾಕಿದರು. ಇದರಿಂದ ರಸ್ತೆಯಲ್ಲಿ ಸಂಚಾರ ಅಸ್ತವ್ಯಸ್ತವಾಯಿತು. ಸ್ಥಳಕ್ಕೆ ಪೊಲೀಸರು ದೌಡಾಯಿಸಿ, ಪರಿಸ್ಥಿತಿಯನ್ನು ನಿಯಂತ್ರಿಸಿದರು.ರಸ್ತೆಯಲ್ಲಿ ಬಿದ್ದ ವಿದ್ಯುತ್‌ ತಂತಿ ಮೆಟ್ಟಿ ತಾಯಿ-ಮಗು ಸುಟ್ಟು ಕರಕಲು


ಬೆಂಗಳೂರು: ಬೆಳ್ಳಂಬೆಳಗ್ಗೆಯೇ ರಾಜಧಾನಿಯಲ್ಲಿ ಅತ್ಯಂತ ಆತಂಕಕಾರಿ ಮತ್ತು ಹೃದಯ ಹಿಂಡುವ ಘಟನೆ ನಡೆದಿದೆ. ತನ್ನ ಪುಟ್ಟ ಮಗುವನ್ನು ಕಂಕುಳಲ್ಲಿ ಎತ್ತಿಕೊಂಡು ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರು ವಿದ್ಯುತ್‌ ಆಘಾತಕ್ಕೆ (Electricuted) ಒಳಗಾಗಿ ಮಗುವಿನೊಂದಿಗೆ ಸುಟ್ಟು ಕರಕಲಾಗಿದ್ದಾರೆ (Mother and Child de

non

). ಬೆಸ್ಕಾಂ ಅಧಿಕಾರಿಗಳ‌ ನಿರ್ಲಕ್ಷ್ಯ (BESCOM Negligence) ಕ್ಕೆ ತಾಯಿ-ಮಗು ಬಲಿಯಾಗಿದ್ದಾರೆ.


ತಾಯಿ ಸೌಂದರ್ಯ ಮತ್ತು ಪುಟ್ಟ ಮಗಳು ಲಿಯಾ ಮೃತಪಟ್ಟ ದುರ್ದೈವಿಗಳು. ವೈಟ್‌ ಫೀಲ್ಡ್‌ ಸಮೀಪದ ಹೋಪ್ ಫಾರ್ಮ್ ಸರ್ಕಲ್‌ ಬಳಿ ದುರ್ಘಟನೆ ನಡೆದಿದೆ.


ಬೆಂಗಳೂರಿನಲ್ಲಿ ವಾಸವಾಗಿದ್ದ ಸೌಂದರ್ಯ ಅವರು ತಮ್ಮ ಪತಿ ಸಂತೋಷ್ ಮತ್ತು ಮಗುವಿನೊಂದಿಗೆ ತಮಿಳುನಾಡಿನ ತಾಯಿ ಮನೆಗೆ ಹೋಗಿದ್ದರು. ಶನಿವಾರ ರಾತ್ರಿ ಅವರು ಅಲ್ಲಿಂದ ಹೊರಟು ಬೆಳಗ್ಗೆ ಬೆಂಗಳೂರಿನ ವೈಟ್‌ ಫೀಲ್ಡ್‌ ಬಳಿ ಬಸ್ಸಿನಿಂದ ಇಳಿದಿದ್ದರು. ಬೆಳಗ್ಗೆ ಐದು ಗಂಟೆಯ ಹೊತ್ತಿಗೆ ಬಸ್ಸಿನಿಂದ ಇಳಿದು‌ ಸಂತೋಷ್‌, ಸೌಂದರ್ಯ ಪುಟ್ಟ ಮಗುವನ್ನು ಕಂಕುಳಲ್ಲಿಇಟ್ಟುಕೊಂಡು ಅವರು ವೈಟ್ ಫೀಲ್ಡ್ ಸಮೀಪದ ಓಫಾರ್ಮ್ ಸರ್ಕಲ್ ಬಳಿ ಮನೆ ಕಡೆಗೆ ಸಾಗುತ್ತಿದ್ದರು. ಅವರು ಎ.ಕೆ ಗೋಪಾಲ್ ಕಾಲೋನಿಯಲ್ಲಿ ವಾಸಿಸುತ್ತಿದ್ದರು.ಈ ವೇಳೆ ರಸ್ತೆ ಬದಿ ತುಂಡಾಡಿ ನೆಲದಲ್ಲಿ ಬಿದ್ದಿದ್ದ ವಿದ್ಯುತ್‌ ತಂತಿ ಅವರಿಗೆ ಕಾಣಿಸಲಿಲ್ಲ . ಕತ್ತಲಲ್ಲಿ ಅವರು ವಿದ್ಯುತ್‌ ತಂತಿಯನ್ನು ತುಳಿದಿದ್ದರು. ಮತ್ತು ಒಮ್ಮೆಗೇ ವಿದ್ಯುತ್‌ ಅವರ ದೇಹದಲ್ಲಿ ಪ್ರವಹಿಸಿ ತಾಯಿ ಮತ್ತು ಮಗು ಸ್ಥಳದಲ್ಲೇ ಸುಟ್ಟು ಕರಕಲಾಗಿ ಹೋಗಿದ್ದಾರೆ.

ಬಂಟ್ವಾಳ: ಪ್ರಪಾತಕ್ಕೆ ಉರುಳಿ ಬಿದ್ದ ಬೈಕ್: ಸಿಟಿ ಸೆಂಟರ್ ಉದ್ಯೋಗಿ ಯಶೋದರ್ ಮೃತ್ಯು

Posted by Vidyamaana on 2023-04-10 05:53:42 |

Share: | | | | |


ಬಂಟ್ವಾಳ: ಪ್ರಪಾತಕ್ಕೆ ಉರುಳಿ ಬಿದ್ದ ಬೈಕ್: ಸಿಟಿ ಸೆಂಟರ್ ಉದ್ಯೋಗಿ ಯಶೋದರ್ ಮೃತ್ಯು

ಬಂಟ್ವಾಳ: ಬೈಕ್ ಪ್ರಪಾತಕ್ಕೆ ಬಿದ್ದು ಬೈಕಿನಲ್ಲಿ ಹಿಂಬದಿ ಸವಾರನಾಗಿ ಪ್ರಯಾಣಿಸುತ್ತಿದ್ದ ಚಿಕ್ಕ ಮಂಗಳೂರು ಮೂಲದ ಯುವಕ ಮೃತಪಟ್ಟ ಘಟನೆ ಮುಂಜಾವಿನ ವೇಳೆ ಬಿಸಿರೋಡಿನ ಕೈಕಂಬ ಸಮೀಪದ ತಲಪಾಡಿ ಎಂಬಲ್ಲಿ ನಡೆದಿದೆ.

ಚಿಕ್ಕಮಗಳೂರು ನಿವಾಸಿ ಮಂಗಳೂರು ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಯಶೋಧರ ಮೃತಪಟ್ಟ ದುರ್ದೈವಿ ಯುವಕ.ಈತನ ಸ್ನೇಹಿತ ಬೈಕ್ ಚಲಾಯಿಸುತ್ತಿದ್ದ ಅವಿನಾಶ್ ಅಲ್ಪಸ್ವಲ್ಪ ಗಾಯಗಳೊಂದಿಗೆ ಯಾವುದೇ ಪ್ರಾಣಾಪಯವಿಲ್ಲದೆ ಪಾರಾಗಿದ್ದಾನೆ.

ಇವರಿಬ್ಬರೂ ಮಂಗಳೂರು ಸಿಟಿ ಸೆಂಟರ್ ನಲ್ಲಿ ಉದ್ಯೋಗಿಗಳಾಗಿದ್ದು, ಬೆಳ್ತಂಗಡಿಯಲ್ಲಿ ಸ್ನೇಹಿತನ ಮನೆಯಲ್ಲಿ ನಡೆಯುವ ಕೋಲಕ್ಕೆ ಹೋಗಿ ಅಲ್ಲಿಂದ ಸುಮಾರು 3.30 ಗಂಟೆ ವೇಳೆಗೆ ಬರುತ್ತಿರುವಾಗ ಬಿಸಿರೋಡಿನ ಕೈಕಂಬ ಸಮೀಪದ ಕೆ.ಎಸ್.ಆರ್.ಟಿ.ಸಿ.ಬಸ್ ಡಿಪೋ ದ ಬಳಿ ತಲಪಾಡಿ ಎಂಬಲ್ಲಿ ಸುಮಾರು ಹತ್ತಕ್ಕೂ ಅಧಿಕ ಅಡಿ ಇರುವ ಆಳಕ್ಕೆ ಬಿದ್ದು ಬೈಕಿನ ಹಿಂಬದಿಯಲ್ಲಿ ಇದ್ದ ಸಹಸವಾರ ಯಶೋಧರ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.



Leave a Comment: