ಅಟಲ್ ಸೇತು ಮೇಲೆ ಕಾರು ನಿಲ್ಲಿಸಿ ಸಮುದ್ರಕ್ಕೆ ಹಾರಿದ ಇಂಜಿನಿಯರ್: ಕೃತ್ಯ ಸಿಸಿಟಿವಿಯಲ್ಲಿ ಸೆರೆ

ಸುದ್ದಿಗಳು News

Posted by vidyamaana on 2024-07-25 16:43:22 |

Share: | | | | |


ಅಟಲ್ ಸೇತು ಮೇಲೆ ಕಾರು ನಿಲ್ಲಿಸಿ ಸಮುದ್ರಕ್ಕೆ ಹಾರಿದ ಇಂಜಿನಿಯರ್: ಕೃತ್ಯ ಸಿಸಿಟಿವಿಯಲ್ಲಿ ಸೆರೆ

 ಮುಂಬೈ: ಇಂಜಿನಿಯರ್ ಒಬ್ಬರು ತಮ್ಮ ಕಾರನ್ನು ಅಟಲ್ ಸೇತುವಿನಲ್ಲಿ ನಿಲ್ಲಿಸಿ ಸೇತುವೆಯಿಂದ ಕೆಳಗೆ ಹಾರಿದ್ದಾರೆ. ಈ ದೃಶ್ಯ ಅಲ್ಲಿ ಇದ್ದ ಸಿಸಿ ಕ್ಯಾಮರಾದಲ್ಲಿ ರೆಕಾರ್ಡ್ ಆಗಿದ್ದು, ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ನಿನ್ನೆ ಮಧ್ಯಾಹ್ನ ಈ ಘಟನೆ ನಡೆದಿದೆ.

ಸೇತುವೆಯಿಂದ ಕೆಳಗೆ ಹಾರಿದವರನ್ನು ಡೊಂಬಿವಿಲಿಯ ಪಲ್ಲವ ನಗರದ ನಿವಾಸಿ ಕರ್ತುರಿ ಶ್ರೀನಿವಾಸ್ ಎಂದು ಗುರುತಿಸಲಾಗಿದೆ. ಇವರು ತಮ್ಮ ಪತ್ನಿ ಹಾಗೂ ಮಗಳೊಂದಿಗೆ ವಾಸ ಮಾಡುತ್ತಿದ್ದರು.

ಮಧ್ಯಾಹ್ನ 12.35ರ ಸುಮಾರಿಗೆ ಇವರು ತಮ್ಮ ಕಾರಿನಲ್ಲಿ ಆಟಲ್ ಸೇತು ಬ್ರಿಡ್ಜ್ ಮೇಲೆ ಬಂದಿದ್ದು, ಸೇತುವೆ ಮೇಲೆ ಕಾರು ನಿಲ್ಲಿಸಿ ಸಮುದ್ರಕ್ಕೆ ಹಾರಿದ್ದಾರೆ. ಇದು ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದ್ದು, ಟೋಲ್ ಕಂಟ್ರೋಲ್‌ ರೂಮ್‌ನವರ ಗಮನಕ್ಕೆ ಬಂದಿದೆ. ಕೂಡಲೇ ಅವರು ನವಶೇವ ಪೊಲೀಸರಿಗೆ ವಿಚಾರ ಮುಟ್ಟಿಸಿದ್ದಾರೆ.

ಕೂಡಲೇ ಎಂಟಿಹೆಚ್‌ಎಲ್‌ನಿಂದ ರಕ್ಷಣಾ ತಂಡ ಹಾಗೂ ಕರಾವಳಿ ಭದ್ರತಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಯುವಕನಿಗಾಗಿ ಹುಡುಕಾಟ ನಡೆಸಿದ್ದಾರೆ. ಹಣಕಾಸಿನ ತೊಂದರೆಯಿಂದಲೇ ಶ್ರೀನಿವಾಸ್ ಈ ನಿರ್ಧಾರ ತೆಗೆದುಕೊಂಡಿರಬಹುದು ಎಂದು ಶಂಕಿಸಲಾಗಿದೆ. ಕಾರಿನಲ್ಲಿ ಕೇವಲ ತನ್ನ ಪರ್ಸ್ ಮಾತ್ರ ಬಿಟ್ಟು ಶ್ರೀನಿವಾಸ್ ಸಮುದ್ರಕ್ಕೆ ಹಾರಿದ್ದಾರೆ. ಈ ಪರ್ಸ್‌ನಲ್ಲಿ ಆಧಾರ್ ಕಾರ್ಡ್‌, ತಾನು ಕೆಲಸ ಮಾಡುತ್ತಿದ್ದ ಸಂಸ್ಥೆಯ ಐಡಿ ಕಾರ್ಡ್ ಇತ್ತು. ಡೆತ್‌ನೋಟ್ ಆಗಲಿ, ಫೋನ್ ಆಗಲಿ ಕಾರಿನಲ್ಲಿ ಪತ್ತೆಯಾಗಿಲ್ಲ ಎಂದ ಪೊಲೀಸ್ ಇನ್ಸ್‌ಪೆಕ್ಟರ್ ಅಂಜುಮನ್ ಬಾಗ್ವಾನ್ ಹೇಳಿದ್ದಾರೆ.

ಬಿಟೆಕ್ ಮಾಡಿದ್ದ ಶ್ರೀನಿವಾಸ್ ಮುಂಬೈನ ಲೋಧಾದಲ್ಲಿ 2023ರಲ್ಲಿ ಕೆಲ ಕಾಲ ಕೆಲಸ ಮಾಡಿದ್ದರು. ಇದಕ್ಕೂ ಮೊದಲು ಅರಬ್ ರಾಷ್ಟ್ರ ಕುವೈತ್‌ನಲ್ಲಿ ಕೆಲಸ ಮಾಡಿದ್ದರು. 2023ರಲ್ಲಿ ಮುಂಬೈಗೆ ವಾಪಸಾದ ಅವರು ಲೋಧಾ ಗ್ರೂಪ್‌ಗೆ ಕೆಲಸಕ್ಕೆ ಸೇರಿದ್ದರು. ಇದಾದ ನಂತರ ಇವರು ತಮ್ಮ ಪಾಲುದಾರರ ಜೊತೆಗೂಡಿ ಇಲೆಕ್ಟ್ರಿಕ್ ಕಂಟ್ರಾಕ್ಟ್ ಕೆಲಸ ಶುರು ಮಾಡಿದ್ದರು. ಶ್ರೀನಿವಾಸ್ ಪತ್ನಿಯಿಂದಲೂ ಪೊಲೀಸರು ಹೇಳಿಕೆ ಪಡೆದುಕೊಂಡಿದ್ದು, ಶ್ರೀನಿವಾಸ್ ಈ ಹಿಂದೆಯೂ ಕುವೈತ್‌ನಲ್ಲಿ ಕೆಲಸ ಮಾಡುತ್ತಿದ್ದಾಗ ಜೀವ ಕಳೆದುಕೊಳ್ಳಲು ಮುಂದಾಗಿದ್ದರು. ಈ ವೇಳೆ ಸಮಯಕ್ಕೆ ಸರಿಯಾಗಿ ಯಾರೋ ಪಾರು ಮಾಡಿದ್ದರಿಂದ ಅವರ ಜೀವ ಉಳಿದಿತ್ತು ಎಂದು ಪತ್ನಿ ಹೇಳಿದ್ದಾರೆ.

ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ

ಶ್ರೀನಿವಾಸ್ ಕಡೆಯದಾಗಿ ಸಂಬಂಧಿಕರೊಬ್ಬರ ಜೊತೆ ಮಾತನಾಡಿದ್ದು, ಈ ವೇಳೆ ಅವರು ಸಹಜವಾಗಿ ಮಾತನಾಡಿದ್ದರು ಎಂದು ತಿಳಿದು ಬಂದಿದೆ ಎಂದು ಪೊಲೀಸರು ಹೇಳಿದ್ದಾರೆ. ಆದರೆ ಇದುವರೆಗೂ ನೀರಿಗೆ ಹಾರಿದ ಶ್ರೀನಿವಾಸ್ ಅವರನ್ನು ಪತ್ತೆ ಮಾಡಲು ಸಾಧ್ಯವಾಗಿಲ್ಲ. ಇದು ಮೊದಲ ಪ್ರಕರಣ ಅಲ್ಲ ಈ ಹಿಂದೆ ಮಹಿಳಾ ವೈದ್ಯರೊಬ್ಬರು ಅಟಲ್ ಸೇತುವಿನಿಂದ ಕೆಳಗೆ ಹಾರಿ ತಮ್ಮ ಜೀವನವನ್ನು ಅಂತ್ಯಗೊಳಿಸಿದ್ದರು.

 Share: | | | | |


Breaking: ಬಿಜೆಪಿಯಿಂದ ಮಾಜಿ ಸಚಿವ ಕೆಎಸ್‌ ಈಶ್ವರಪ್ಪ ಆರು ವರ್ಷ ಉಚ್ಛಾಟನೆ

Posted by Vidyamaana on 2024-04-22 21:31:47 |

Share: | | | | |


Breaking: ಬಿಜೆಪಿಯಿಂದ ಮಾಜಿ ಸಚಿವ ಕೆಎಸ್‌ ಈಶ್ವರಪ್ಪ ಆರು ವರ್ಷ ಉಚ್ಛಾಟನೆ

ಬೆಂಗಳೂರು; ಬಿಜೆಪಿಯಿಂದ ಮಾಜಿ ಸಚಿವ ಕೆ ಎಸ್ಈಶ್ವರಪ್ಪ ಅವರನ್ನು 6 ವರ್ಷಗಳ ಕಾಲ ಉಚ್ಛಾಟನೆ ಮಾಡಿ ಬಿಜೆಪಿ ಶಿಸ್ತು ಸಮಿತಿ ಆದೇಶ ಹೊರಡಿಸಿದೆ.

ಪುತ್ತೂರು ಜಾತ್ರೋತ್ಸವಕ್ಕೆ ಸೇವಾ ರೂಪದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನೀಡ ಬಯಸುವವರಿಂದ ಅರ್ಜಿ ಆಹ್ವಾನ

Posted by Vidyamaana on 2024-03-22 08:14:00 |

Share: | | | | |


ಪುತ್ತೂರು ಜಾತ್ರೋತ್ಸವಕ್ಕೆ ಸೇವಾ ರೂಪದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನೀಡ ಬಯಸುವವರಿಂದ ಅರ್ಜಿ ಆಹ್ವಾನ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವವು ಎ.10 ರಿಂದ 20 ರ ತನಕ ನಡೆಯಲಿದ್ದು, ಈ ಸಂದರ್ಭ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಉಚಿತವಾಗಿ ಸೇವಾ ರೂಪದಲ್ಲಿ ನಡೆಸಲು ಇಚ್ಚಿಸುವವರು ದೇವಳದ ಕಚೇರಿಗೆ ಅರ್ಜಿ ನೀಡುವಂತೆ ತಿಳಿಸಲಾಗಿದೆ.ಅರ್ಜಿಯಲ್ಲಿ ಸಂಸ್ಥೆಯ ಹೆಸರು, ವಿಳಾಸ, ದೂರವಾಣಿ ಸಂಖ್ಯೆ, ಕಾರ್ಯಕ್ರಮದ ವಿವರ, ತಂಡದಲ್ಲಿ ಭಾಗವಹಿಸುವ ಸದಸ್ಯರ ಸಂಖ್ಯೆಯನ್ನು ನಮೂದಿಸಬೇಕು. ತಂಡಗಳು ನೀಡುವ ಕಾರ್ಯಕ್ರಮ ಭಾರತೀಯ ಸಂಸ್ಕೃತಿಯದ್ದಾಗಿದ್ದು, ಪಾಶ್ಚಾತ್ಯ ಶೈಲಿಗೆ ಅವಕಾಶವಿರುವುದಿಲ್ಲ. ಆಸಕ್ತರು ಮಾ.25ರ ಒಳಗೆ ಅರ್ಜಿಯನ್ನು ದೇವಳದ ಕಚೇರಿಗೆ ನೀಡುವಂತೆ ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್‌ ಸಂಖ್ಯೆ 9448732414 ಅನ್ನು ಸಂಪರ್ಕಿಸುವುದು. ಸ್ವೀಕೃತಗೊಂಡ ಅರ್ಜಿಗಳನ್ನು ಪರಿಶೀಲಿಸಿ ಅರ್ಹ ತಂಡಗಳಿಗೆ ಮಾತ್ರ ಅವಕಾಶ ನೀಡಲಾಗುವುದೆಂದು ದೇವಳದ ಕಾರ್ಯನಿರ್ವಾಹಣಾಧಿಕಾರಿ ಕೆ.ವಿ.ಶ್ರೀನಿವಾಸ ಅವರು ತಿಳಿಸಿದ್ದಾರೆ.

ಜಿಲ್ಲೆಗೆ ಮುಖ್ಯಮಂತ್ರಿಗಳ ಭೇಟಿ ಹಿನ್ನೆಲೆ - ಪೂರ್ವಭಾವಿ ಸಿದ್ಧತಾ ಸಭೆ

Posted by Vidyamaana on 2023-07-31 16:47:45 |

Share: | | | | |


ಜಿಲ್ಲೆಗೆ ಮುಖ್ಯಮಂತ್ರಿಗಳ ಭೇಟಿ ಹಿನ್ನೆಲೆ - ಪೂರ್ವಭಾವಿ ಸಿದ್ಧತಾ ಸಭೆ

ಮಂಗಳೂರು : ನಗರದ ಜಿಲ್ಲಾ ಪಂಚಾಯತ್‍ನ ನೇತ್ರಾವತಿ ಸಭಾಂಗಣದಲ್ಲಿ ಆ.1ರ ಮಂಗಳವಾರ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆಯುವ ದಕ್ಷಿಣ ಕನ್ನಡ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳು ತಮ್ಮ ಇಲಾಖೆಗೆ ಸಂಬಂಧಿಸಿದ ನಿಖರ ಮಾಹಿತಿ ಹಾಗೂ ಸ್ಪಷ್ಟ ಅಂಕಿ ಅಂಶಗಳನ್ನು ನೀಡಬೇಕು ಎಂದು ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಅವರು ಸೂಚಿಸಿದರು.

 ಅವರು ಜು.31ರ ಸೋಮವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಜಿಲ್ಲೆಗೆ ಮುಖ್ಯಮಂತ್ರಿಗಳ ಭೇಟಿ ಹಿನ್ನೆಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

 ಎಲ್ಲಾ ಇಲಾಖೆಗಳ ಮುಖ್ಯಸ್ಥರೇ ಸಭೆಯಲ್ಲಿ ಕಡ್ಡಾಯವಾಗಿ ಹಾಜರಿರಬೇಕು,  ಯಾವುದೇ ಕಾರಣಕ್ಕೂ ಗೊಂದಲಕ್ಕೆ ಆಸ್ಪದ ನೀಡುವ ಮಾಹಿತಿಯನ್ನು ಸಭೆಗೆ ನೀಡಬಾರದು, ನೂತನ ಸರ್ಕಾರದ ಯೋಜನೆಗಳಾದ ಗೃಹಜ್ಯೋತಿ, ಗೃಹಲಕ್ಷ್ಮಿ, ಶಕ್ತಿ, ಅನ್ನ ಭಾಗ್ಯದ ಅನುಷ್ಠಾನಗಳ ಬಗ್ಗೆ ಸಂಬಂಧಿಸಿ ಇಲಾಖೆಗಳ ಅಧಿಕಾರಿಗಳು ನಿಖರ ಮಾಹಿತಿ ನೀಡಬೇಕು, ಕೃಷಿ, ತೋಟಗಾರಿಕೆ, ಮೀನುಗಾರಿಕೆ, ಬಂದರು ಇಲಾಖೆಗಳ ಸಮಗ್ರ ಮಾಹಿತಿ ಕಡಲ್ಕೊರೆತದ ಸಮಸ್ಯೆಗಳು, ಪ್ರಾಕೃತಿಕ ವಿಕೋಪ ಹಾಗೂ ನೀಡಲಾದ ಪರಿಹಾರ, ಕೈಗೊಳ್ಳಲಾಗಿರುವ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಸಂಬಂಧಿಸಿದವರು ಸೂಕ್ತ ಮಾಹಿತಿ ನೀಡುವಂತೆ ಅವರು ತಿಳಿಸಿದರು.

 ಅಲ್ಲದೇ ಮುಖ್ಯಮಂತ್ರಿಯವರು ಜಿಲ್ಲೆಯ ಕಡಲ್ಕೊರೆತ ಸ್ಥಳಗಳಿಗೆ ಭೇಟಿ ನೀಡುವ ಸಾಧ್ಯತೆಗಳು ಇರಬಹುದು, ಸಂಬಂಧಿಸಿದ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಪೆÇಲೀಸ್ ಸಿಬ್ಬಂದಿಯೊಂದಿಗೆ ಸಿದ್ಧತೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಮುಲೈ ಮುಗಿಲನ್ ಅವರು ಸಭೆಯ ಅಧ್ಯಕ್ಷತೆ ವಹಿಸಿದ್ದರು.

ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಅತಿ ವೇಗವಾಗಿ ಬಂದು ಮಹಿಳೆಗೆ ಡಿಕ್ಕಿ ಹೊಡೆದ ಟ್ಯಾಕ್ಸಿ; ವಿಡಿಯೊ ನೋಡಿ

Posted by Vidyamaana on 2024-07-23 19:43:42 |

Share: | | | | |


ಅತಿ ವೇಗವಾಗಿ ಬಂದು ಮಹಿಳೆಗೆ ಡಿಕ್ಕಿ ಹೊಡೆದ ಟ್ಯಾಕ್ಸಿ; ವಿಡಿಯೊ ನೋಡಿ

ಪುಣೆ: ಅತಿ ವೇಗ ಅಪಘಾತಕ್ಕೆ ಕಾರಣವೆಂದು ತಿಳಿದರೂ ಕೂಡ ಕೆಲವು ಚಾಲಕರು ಅವಸರದಲ್ಲಿ ವೇಗವಾಗಿ ವಾಹನ ಚಲಾಯಿಸಿ ಜನರ ಜೀವಕ್ಕೆ ಆಪತ್ತು ತರುತ್ತಿದ್ದಾರೆ. ಎಲ್ಲೆಂದರಲ್ಲಿ ನಿಂತ ಜನರ ಮೇಲೂ ವಾಹನವನ್ನು ಹಾರಿಸಿಕೊಂಡು ಹೋಗುತ್ತಾರೆ. ಇದೀಗ ಅಂತಹದೊಂದು ಘಟನೆ ಮಹಾರಾಷ್ಟ್ರದಲ್ಲಿ ನಡೆದಿದ್ದು, ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Hit and Run Case)ಆಗಿದೆ.ಪ್ರಿ-ಚಿಂಚ್ವಾಡ್‍ನಲ್ಲಿ ಅತಿವೇಗವಾಗಿ ಚಲಿಸುತ್ತಿದ್ದ ಟ್ಯಾಕ್ಸಿ ಮಹಿಳೆಗೆ ಡಿಕ್ಕಿ ಹೊಡೆದು ನಂತರ ಚಾಲಕ ಅಪಘಾತದ ಸ್ಥಳದಿಂದ ಓಡಿಹೋದ ಹೊಸ ಹಿಟ್ ಅಂಡ್ ರನ್ ಪ್ರಕರಣ ವರದಿಯಾಗಿದೆ. ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಆಕೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂಬುದಾಗಿ ತಿಳಿದುಬಂದಿದೆ. ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಪುತ್ತೂರಿನ ಫ್ಯಾಶನ್ ಲೋಕದ ಮಹಾ ಉತ್ಸವ ರಾಧಾಸ್ ಮಾನ್ಸೂನ್ ಮೇಳಕ್ಕೆ ಭರ್ಜರಿ ರೆಸ್ಪಾನ್ಸ್

Posted by Vidyamaana on 2024-08-09 19:03:56 |

Share: | | | | |


ಪುತ್ತೂರಿನ ಫ್ಯಾಶನ್ ಲೋಕದ ಮಹಾ ಉತ್ಸವ ರಾಧಾಸ್ ಮಾನ್ಸೂನ್ ಮೇಳಕ್ಕೆ ಭರ್ಜರಿ ರೆಸ್ಪಾನ್ಸ್

ಪ್ರತ್ತೂರು: ಕಳೆದ 29 ವರ್ಷಗಳಿಂದ ಜವುಳಿ ಉದ್ಯಮದಲ್ಲಿ ಪುತ್ತೂರಿನ ಜನತೆಗೆ ಹೊಸತನವನ್ನು ಪರಿಚಯಿಸುತ್ತಾ ಮನೆ ಮಾತಾಗಿರುವ ಪ್ರತಿಷ್ಠಿತ ಜವುಳಿ ಮಳಿಗೆ ಕೋರ್ಟ್ ರಸ್ತೆಯ ರಾಧಾಸ್ನಲ್ಲಿ ಫ್ಯಾಶನ್ ಲೋಕದ ಮಹಾಉತ್ಸವ ಮಾನ್ಸೂನ್ ಮೇಳ ಆ.3ರಂದು ಪ್ರಾರಂಭಗೊಂಡಿದೆ. ಮದುವೆ ಜವುಳಿ ಸೇರಿದಂತೆ ಮಕ್ಕಳ, ಮಹಿಳೆಯರ ಹಾಗೂ ಪುರುಷರ ಎಲ್ಲಾ ರೀತಿಯ ರೆಡಿಮೇಡ್‌ ಉಡುಪುಗಳನ್ನು ಅತೀ ಕಡಿಮೆ ಬೆಲೆಯಲ್ಲಿ ತಮ್ಮದಾಗಿಸಿಕೊಳ್ಳುವ ಸುವರ್ಣಾವಕಾಶವನ್ನು ಗ್ರಾಹಕರಿಗೆ ಸಮರ್ಪಿಸಿದೆ.

ಗ್ರಾಹಕರಿಂದ ತುಂಬಿ ತುಳುಕಿದ ಮಳಿಗೆ:

ಪ್ರತಿ ವರ್ಷ ಮಳೆಗಾಲದಲ್ಲಿ ತನ್ನ ಗ್ರಾಹಕರಿಗಾಗಿ ಕಡಿಮೆ ಬೆಲೆಯಲ್ಲಿ ತಮ್ಮ ಮನದಿಚ್ಛೆಯ ಉಡುಪುಗಳನ್ನು ಕೊಂಡುಕೊಳ್ಳುವ ವಿಪುಲ ಅವಕಾಶಗಳನ್ನು ರಾಧಾಸ್‌ ಮಳಿಗೆಯು ಮಾನ್ಸೂನ್ ಮೇಳದ ಮೂಲಕ ನೀಡುತ್ತಿದೆ. ಪುತ್ತೂರಿನ ಫ್ಯಾಷನ್ ಲೋಕದ ಮಹಾಉತ್ಸವವೆಂದೇ ಖ್ಯಾತಿ ಪಡೆದ ಮಾನ್ಸೂನ್ ಮೇಳ ಈ ವರ್ಷವೂ ಪ್ರಾರಂಭಗೊಂಡಿದ್ದು ಈಗಾಗಲೇ ಗ್ರಾಹಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿ ಮಳಿಗೆಯು ಗ್ರಾಹಕರಿಂದ ತುಂಬಿ ತುಳುಕುತ್ತಿದೆ. ಬೆಳಗಿನಿಂದಲೇ ಗ್ರಾಹಕರು ಮಳಿಗೆಗೆ ಭೇಟಿ ನೀಡಿ ತಮ್ಮ ಇಚ್ಚೆಯ ಉಡುಪುಗಳನ್ನು ಖರೀದಿಸುವ ಭರಾಟೆಯಲ್ಲಿ ತೊಡಗಿದ್ದಾರೆ.

ಪ್ರತೀ ದಿನವೂ ಬಟ್ಟೆಗಳ ಹೊಸ ಸಂಗ್ರಹ, ಹೊಸ ವಿನ್ಯಾಸ:

ಗ್ರಾಹಕರಿಗಾಗಿ ಮಳಿಗೆಯಲ್ಲಿ ಪ್ರತೀ ದಿನವೂ ಹೊಸ ಹೊಸ ಬಟ್ಟೆಗಳ ಸಂಗ್ರಹ ಹಾಗೂ ಹೊಸ ವಿನ್ಯಾಸಗಳು ಲಭ್ಯವಿದೆ. ವಿನೂತನ ಶೈಲಿಯ, ಕಣ್ಮನ ಸೆಳೆಯುವ ನವನವೀಶ ಮಾದರಿಯ ಉಡುತ್ತುಗಳು, ಅತೀ ಕಡಿಮೆ ಬೆಲೆಗೆ ದೊರೆಯಲಿದ್ದು ಗ್ರಾಹಕರು ತಮಗೆ ಒಪ್ಪುದ ವಿವಿಧ ಉಡುಪುಗಳನ್ನು ಖರೀದಿಸಲು ಇದು ಸಕಾಲವಾಗಿದೆ. ಈ ಅವಕಾಶದ ಮೂಲಕ ತಮಗೆ ಬೇಕಾದ ಬಟ್ಟೆಗಳನ್ನು ಇಂದೇ ಖರೀದಿಸಿ ಇಟ್ಟುಕೊಳ್ಳಬಹುದು.

ಮೂರು ಅಂತಸ್ತಿನ ಮಳಿಗೆಯಲ್ಲಿ ವ್ಯವಹಾರ:

ರಾಧಾಸ್ ಮಳಿಗೆಯು ಮೂರು ಅಂತಸ್ತಿನಲ್ಲಿ ವ್ಯವಹರಿಸುತ್ತಿದ್ದು ಮಕ್ಕಳ, ಮಹಿಳೆಯರ ಹಾಗೂ ಪುರುಷರ ಉಡುಪಗಳು ಪ್ರತ್ಯೇಕ ವಿಭಾಗಗಳಲ್ಲಿ ಗ್ರಾಹಕರಿಗೆ ಲಭ್ಯವಿದೆ. ನೆಲ ಅಂತಸ್ತಿನಲ್ಲಿ ಮಕ್ಕಳ ಉಡುಪುಗಳು, ಪ್ರಥಮ ಅಂತಸ್ತಿನಲ್ಲಿ ಮಹಿಳೆಯರ ಎಲ್ಲಾ ತರಹದ ಉಡುಪುಗಳು, ಎರಡನೇ ಅಂತಸ್ತಿನಲ್ಲಿ ಮಹಿಳೆಯರ ಅಚ್ಚುಮೆಚ್ಚಿನ ಸೀರೆಗಳು ಹಾಗೂ ಮೂರನೇ ಅಂತಸ್ತಿನಲ್ಲಿ ಪುರುಷರ ವಿವಿಧ ಉಡುಪುಗಳ ಸಂಗ್ರಹವಿದೆ, ಕುಟುಂಬ ಸಮೇತ ಆಗಮಿಸಿ ಎಲ್ಲರಿಗೂ ಒಪ್ಪುವ ಬಟ್ಟೆಗಳನ್ನು ಖರೀದಿಸಲು ಸೂಕ್ತವಾದ ಮಳಿಗೆಯಾಗಿದೆ.

ಗ್ರಾಹಕರ ನಂಬಿಕೆ ವಿಶ್ವಾಸದಿಂದ ಮೇಲೆ ಬಂದಿದ್ದೇವೆ:ಪ್ರಥಮ್

ಇಂದು (ಜೂ 18) ಶಾಸಕ ಅಶೋಕ್ ಕುಮಾರ್ ರೈರವರಿಗೆ ಹುಟ್ಟೂರ ಸನ್ಮಾನ

Posted by Vidyamaana on 2023-06-18 03:26:18 |

Share: | | | | |


ಇಂದು (ಜೂ 18) ಶಾಸಕ ಅಶೋಕ್ ಕುಮಾರ್ ರೈರವರಿಗೆ  ಹುಟ್ಟೂರ ಸನ್ಮಾನ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈರವರಿಗೆ ಹೂಟ್ಟೂರ ಸನ್ಮಾನ ಕಾರ್ಯಕ್ರಮ ಕೋಡಿಂಬಾಡಿಯ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಚಿನ್ಮಯಿ ಸಭಾಂಗಣದಲ್ಲಿ ಜೂ.18ರಂದು ಸಂಜೆ 6.30ಕ್ಕೆ ಜರಗಲಿದೆ. ಈ ಸಂದರ್ಭದಲ್ಲಿ ಶ್ರೀಮಹಿಷಮರ್ದಿನಿ ದೇವರಿಗೆ ವಿಶೇಷ ಪೂಜೆ ನಡೆಯಲಿದ್ದು ಸಭಾ ಕಾರ್ಯಕ್ರಮದ ಬಳಿಕ ಸಹಭೋಜನ ವ್ಯವಸ್ಥೆ ಇದೆ ಎಂದು ಸಂಘಟಕರು ತಿಳಿಸಿದ್ದಾರೆ.



Leave a Comment: