ಜೋಕಟ್ಟೆ: ಮನೆ ಮೇಲೆ ತಡೆಗೋಡೆ ಕುಸಿತ; ಬಾಲಕ ಮೃತ್ಯು

ಸುದ್ದಿಗಳು News

Posted by vidyamaana on 2024-07-25 12:27:06 |

Share: | | | | |


ಜೋಕಟ್ಟೆ: ಮನೆ ಮೇಲೆ ತಡೆಗೋಡೆ ಕುಸಿತ; ಬಾಲಕ ಮೃತ್ಯು

ಪಣಂಬೂರು: ಇಲ್ಲಿನ ಜೋಕಟ್ಟೆ ಗ್ರಾಮ ಪಂಚಾಯತ್ ಗುಡ್ಡೆ ಎಂಬಲ್ಲಿ ಮನೆಯ ಮೇಲೆ� ತಡೆಗೋಡೆ ಕುಸಿದು ಬಿದ್ದು ಯುವಕ ಮೃತಪಟ್ಟಿರುವ ಘಟನೆ ಬುಧವಾರ ರಾತ್ರಿ ನಡೆದಿರುವ ಬಗ್ಗೆ ವರದಿಯಾಗಿದೆ‌.ಮುಲ್ಕಿ ಕೊಲ್ನಾಡು ನಿವಾಸಿ ಶಂಕರ ಎಂಬವರ ಪುತ್ರ ಶೈಲೇಶ್ (17) ಮೃತ ಯುವಕ. ಜೋಕಟ್ಟೆಯಲ್ಲಿರುವ ತನ್ನ ದೊಡಮ್ಮನ ಮಗಳ ಮನೆಗೆ ಬಂದಿದ್ದ ಶೈಲೇಶ್, ಇಲ್ಲಿಯೇ ಉಳಿದುಕೊಂಡಿದ್ದ.

ಮನೆಯಲ್ಲಿ ಶೈಲೇಶ್ ರವರ ದೊಡ್ಡಮನ ಮಗಳು ಸವಿತಾ, ಆಕೆಯ ಗಂಡ ಸುರೇಶ್ ಮತ್ತು ಮಗು ಸಾಕ್ಷಿ ಮನೆಯ ಒಂದು ಕೋಣೆಯಲ್ಲಿ ಮಲಗಿದ್ದು, ಶೈಲೇಶ್ ಇನ್ನೊಂದು ಕಡೆ ಮಲಗಿದ್ದ. ತಡೆಗೋಡೆ ಕುಸಿದು ಹಂಚಿನ ಮನೆಯ ಮೇಲೆ ಬಿದ್ದಿದ್ದರಿಂದ ಅಲ್ಲಿ ಮಲಗಿದ್ದ ಶೈಲೇಶ್ ತೀವ್ರ ಗಾಯಗೊಂಡು ಮೃತಪಟ್ಟಿದ್ದಾನೆ. ಇನ್ನೊಂದು ಕೋಣೆಯಲ್ಲಿ ಮಲಗಿದ್ದ ಇತರ ಮೂರು ಜನರಲ್ಲಿ ಸವಿತಾ ಅವರಿಗೆ ಸಣ್ಣ ಗಾಯವಾಗಿದ್ದು‌, ಚಿಕಿತ್ಸೆ ಪಡೆದಿದ್ದಾರೆ‌ ಎಂದು ತಿಳಿದು ಬಂದಿದೆ.

ಶೈಲೇಶ್ ಅವರ ಮೃತದೇಹವನ್ನು ನಗರದ ಎ.ಜೆ.ಆಸ್ಪತ್ರೆಯ ಶವಗಾರದಲ್ಲಿಡಲಾಗಿದ್ದು, ಸ್ಥಳಕ್ಕೆ ಪಣಂಬೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ

 Share: | | | | |


ಶಾಸಕರ ಇಂದಿನ ಕಾರ್ಯಕ್ರಮ ಆ 5

Posted by Vidyamaana on 2023-08-04 23:22:01 |

Share: | | | | |


ಶಾಸಕರ ಇಂದಿನ ಕಾರ್ಯಕ್ರಮ ಆ 5

ಪುತ್ತೂರು ಶಾಸಕ ಅಶೋಕ್ ಕುಮಾರ್ ಅವರು ಆಗಸ್ಟ್ 5 ರಂದು

ಬೆಳಿಗ್ಗೆ 10 to 2.30 ರವರೆಗೆ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ

(ಬೆಳಿಗ್ಗೆ  11 ಗಂಟೆಗೆ ಬ್ರಹ್ಮಶ್ರೀ ಸಭಾಭವನದಲ್ಲಿ ದಿ. ಸಂಸದ ದ್ರುವನಾರಾಯಣ ಸ್ಮರಣಾರ್ಥ ನಡೆಯುವ ರಕ್ತದಾನ ಶಿಬಿರದಲ್ಲಿ ಭಾಗವಹಿಸುವರು)

ಸಂಜೆ 3 ಗಂಟೆಗೆ ತಾಲೂಕು ಕಚೇರಿಯಲ್ಲಿ ಸ್ವಾತಂತ್ರ್ಯೋತ್ಸವ ಪೂರ್ವ ಭಾವಿ ಸಭೆ

ಸಂಜೆ 4 ಗಂಟೆಗೆ ಈಶ್ವರಮಂಗಲದಲ್ಲಿ ಕರ್ನಾಟಕ‌ಮುಸ್ಲಿಂ ಜಮಾತ್ ಪ್ರತಿನಿಧಿ ಸಭೆಯಲ್ಲಿ  ಭಾಗವಹಿಸಲಿದ್ದಾರೆ

ಯಡಿಯೂರಪ್ಪ ಧರ್ಮ ದ್ವೇಷಿಯಲ್ಲ: ಕಾಂಗ್ರೆಸ್‌ ಶಾಸಕ

Posted by Vidyamaana on 2024-03-10 12:54:02 |

Share: | | | | |


ಯಡಿಯೂರಪ್ಪ ಧರ್ಮ ದ್ವೇಷಿಯಲ್ಲ: ಕಾಂಗ್ರೆಸ್‌ ಶಾಸಕ

ಚಿಕ್ಕಮಗಳೂರು: ಬಿ.ಎಸ್‌. ಯಡಿಯೂರಪ್ಪ ಬಿಜೆಪಿಯಲ್ಲಿದ್ದರೂ ಎಂದಿಗೂ ಯಾವುದೇ ಧರ್ಮವನ್ನು ದ್ವೇಷಿಸಲಿಲ್ಲ ಎಂದು ಕಾಂಗ್ರೆಸ್‌ ಶಾಸಕ ಎಚ್‌.ಡಿ. ತಮ್ಮಯ್ಯ ಹೇಳಿದರು.

ಜಿಲ್ಲಾ ಉರ್ದು ಅದಬ್, ರಾಜ್ಯ ಅಂಜುಮನ್ ತಾರಕಿ ಉರ್ದು ವತಿಯಿಂದ ನಗರದಲ್ಲಿ ಶನಿವಾರ ಏರ್ಪಡಿಸಿದ್ದ ಉರ್ದು ಸಮ್ಮೇಳನ ಹಾಗೂ ಗಜಲ್-ಕವಾಲಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಶಿಕಾರಿಪುರದಲ್ಲಿ ಯಡಿಯೂರಪ್ಪ ಅನಭಿಶಕ್ತ ದೊರೆ ಇದ್ದಂತೆ. ಯಾವ ವ್ಯಕ್ತಿ ತನ್ನ ಧರ್ಮದೊಂದಿಗೆ ಇತರೆ ಧರ್ಮವನ್ನು ಪ್ರೀತಿಸುತ್ತಾನೆಯೋ ಆ ವ್ಯಕ್ತಿಯನ್ನು ಎಲ್ಲರೂ ಗೌರವಿಸುತ್ತಾರೆ ಎಂದರು.

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪುತ್ತೂರು ವಾಣಿಜ್ಯ ಮತ್ತುಕೈಗಾರಿಕಾ ಸಂಘದಿಂದ ಶಾಸಕರಿಗೆ ಮನವಿ

Posted by Vidyamaana on 2023-09-04 15:15:25 |

Share: | | | | |


ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪುತ್ತೂರು ವಾಣಿಜ್ಯ ಮತ್ತುಕೈಗಾರಿಕಾ ಸಂಘದಿಂದ ಶಾಸಕರಿಗೆ ಮನವಿ

ಪುತ್ತೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಅಗ್ರಹಿಸಿ ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಗದ ವತಿಯಿಂದ ಪುತ್ತೂರು ಶಾಸಕರಿಗೆ ಮನವಿ ಸಲ್ಲಿಸಲಾಯಿತು.ಪ್ರಮುಖವಾಗಿ ಜಿಎಸ್‌ಟಿ ನೋಂದಾಯಿತ ವರ್ತಕರಿಗೆ ಮತ್ತು ಸಣ್ಣ ಉದ್ದಿಮೆದಾರರಿಗೆ ಆರೋಗ್ಯ ವಿಮೆ ೫ ಲಕ್ಷದವರೆಗೆ ಕುಟುಂಬ ಸದಸ್ಯರಿಗೂ ದೊರೆಯುವಂತೆ ಸರಕರದ ಗಮನಸೆಳೆಯುವುದು, ಪ್ಲಾಸ್ಟಿಕ್ ಏಕಬಳಕೆ ಚೀಲಗಳ ನಿಷೇಧ ಸಲುವಾಗಿ ವರ್ತಕರಿಗೆ ಪಾರದರ್ಶಕವಾದ ಕಾನೂನಿನ ತೊಡಕಿನಿಂದಾಗಿ ವರ್ತಕರಿಗೆ ದಂಡ ವಿನಾಯಿತಿ, ಪುತ್ತೂರು ನಗರದ ಮುಖ್ಯ ರಸ್ತೆಗಳಲ್ಲಿ ಸರಕು ಸಮಾಗ್ರಿ ಇಳಿಸಲು ಜನದಟ್ಟನೆ ಸಮಯ ಬಿಟ್ಟು ಉಳಿದ ಸಮಯದಲ್ಲಿ ಅವಕಾಶ ನೀಡುವುದು, ಪೇಟೆಯ ವ್ಯವಹಾರಗಳಿಗೆ ಸಾರ್ವಜನಿಕರಿಗೆ ನೆರವಾಗುವ ರೀತಿಯಲ್ಲಿ ಎಂ ಟಿ ರಸ್ತೆಯಲ್ಲಿ ಲಘು ವಾಹನಗಳ ಸಂಚಾರಕ್ಕೆ ಅನುಮತಿ , ಸರಕಾರಿ ಮತ್ತು ಖಾಸಗಿ ಬಸ್ಸುಗಳನ್ನು ಮುಖ್ಯ ರಸ್ತೆಯಲ್ಲೇ ಓಡಾಟಕ್ಕೆ ಅವಕಾಶ ಕಲ್ಪಿಸುವುದು, ವಿದ್ಯುತ್ ಕಡಿತದ ಸಂದರ್ಭದಲ್ಲಿ ಕೈಗಾರಿಕಾ ಉದ್ದಿಮೆಗಳಿಗೆ ತೊಂದರೆಯಾಗುತ್ತಿದ್ದು ನಿಯಮಿತ ಸಮಯದಲ್ಲಿ ದುರಸ್ಥಿ ಮಾಡುವ ಕುರಿತು ಮನವಿಯಲ್ಲಿ ಉಲ್ಲೇಖಿಸಲಾಗಿದೆ.


ನೆಲ್ಲಿಕಟ್ಟೆ ಸರಕರಿ ಶಾಲೆಯನ್ನು ಮೇಲ್ದರ್ಜೆಗೇರಿಸಿ

ನೆಲ್ಲಿಕಟ್ಟೆ ಸರಕಾರಿ ಹಿ ಪ್ರಾ ಶಾಲೆಯನ್ನು ಮೇಲ್ದಜೆಗೇರಿಸಬೇಕು, ೧೫೦ ವರ್ಷಗಳ ಇತಿಹಾಸ ಹೊಂದಿರುವ ಈ ಶಾಲೆಯಲ್ಲಿ ಕೊಠಡಿಗಳ ಕೊರತೆ ಮತ್ತು ಶಿಕ್ಷಕರ ಕೊರತೆಯೂ ಇದ್ದು , ಶಾಲೆಗೆ ತೆರಳಲು ಸುಕ್ತವಾದ ರಸ್ತೆಯ ವ್ಯವಸ್ಥೆಯನ್ನು ಮಾಡುವಂತೆಯೂ ಶಾಸಕರಲ್ಲಿ ಮನವಿ ಮಾಡಿದರು.  


ಶಾಸಕರಿಗೆ ಸನ್ಮಾನ

ಇದೇ ಸಂದರ್ಭದಲ್ಲಿ ಸಂಗದ ವತಿಯಿಂದ ಶಾಸಕರನ್ನು ಶಾಲು ಹೊದಿಸಿ ಸ್ಮರಣಿಕೆ ನೀಡಿ ಸನ್ಮಾನ ಮಾಡಲಾಯಿತು. ಈ ಸಂದರ್ಭದಲ್ಲಿ ಸಂಗದ ಅಧ್ಯಕ್ಷರಾದ ಜಾನ್ ಕುಟನ್ಹಾ, ಪ್ರಧಾನ ಕಾರ್ಯದರ್ಶಿ ಉಲ್ಲಾಸ್ ಪೈ, ಉಪಾಧ್ಯಕ್ಷರುಗಳಾ ವಾಮನ ಪೈ, ಸೂರ್ಯನಾಥ ಆಳ್ವ, ಕಾರ್ಯದರ್ಶಿ ಮಹಮ್ಮದ್ ನೌಶಾದ್, ಶ್ರೀಕಾಂತ್ ಕೊಳತ್ತಾಯ,ಕೋಶಾಧಿಕಾರಿ ರಾಜೇಶ್ ಕಾಮತ್ ಸುದಾಕರ ಶೆಟ್ಟಿ, ಮಾಜಿ ಅಧ್ಯಕ್ಷರಾದ ಭಾಸ್ಕರ ಬಾರ್ಯ, ಸದಾನಂದ ನಾಯ್ಕ್ ಬೊಳುವಾರು, ಎಂ ಯು ಗೋಪಾಲಕೃಷ್ಣ, ಲಾರೆನ್ಸ್ ಗೋನ್ಸಾಲಿಸ್,  ಉಪಸ್ಥಿತರಿದ್ದರು.

BREAKING : ಉಪಚುನಾವಣೆ : 13 ಸ್ಥಾನಗಳ ಪೈಕಿ 10ರಲ್ಲಿ ಇಂಡಿಯಾ ಮೈತ್ರಿಕೂಟ ಜಯಭೇರಿ, ಬಿಜೆಪಿಗೆ 2 ಸ್ಥಾನ

Posted by Vidyamaana on 2024-07-13 18:19:05 |

Share: | | | | |


BREAKING : ಉಪಚುನಾವಣೆ : 13 ಸ್ಥಾನಗಳ ಪೈಕಿ 10ರಲ್ಲಿ ಇಂಡಿಯಾ ಮೈತ್ರಿಕೂಟ ಜಯಭೇರಿ, ಬಿಜೆಪಿಗೆ 2 ಸ್ಥಾನ

ನವದೆಹಲಿ: ಏಳು ರಾಜ್ಯಗಳ 13 ವಿಧಾನಸಭಾ ಸ್ಥಾನಗಳಿಗೆ ಶನಿವಾರ ನಡೆದ ಉಪಚುನಾವಣೆಯ ಮತ ಎಣಿಕೆಯಲ್ಲಿ ಇಂಡಿಯಾ ಮೈತ್ರಿಕೂಟ 10 ಸ್ಥಾನಗಳನ್ನ ಗೆದ್ದರೆ, ಬಿಜೆಪಿ ಎರಡು ಕ್ಷೇತ್ರಗಳಲ್ಲಿ ಜಯಗಳಿಸಿದೆ.

ಜುಲೈ 10 ರಂದು ಮತದಾನ ನಡೆದ ವಿಧಾನಸಭಾ ವಿಭಾಗಗಳಲ್ಲಿ, ಹಿಮಾಚಲ ಪ್ರದೇಶದ ಡೆಹ್ರಾಡೂನ್ ಮತ್ತು ನಲಘರ್ ಸ್ಥಾನಗಳನ್ನ ಕಾಂಗ್ರೆಸ್ ಗೆದ್ದಿದೆ ಆದರೆ ಹಮೀರ್ಪುರವನ್ನ ಬಿಜೆಪಿಗೆ ಕಳೆದುಕೊಂಡಿದೆ

ಬಂಟ್ವಾಳ ಸಂಬಂಧಿ ಯುವತಿಯ ಮೇಲೆ ಅತ್ಯಾಚಾರ: ಆರೋಪಿ ಬಂಧನ

Posted by Vidyamaana on 2024-07-27 07:09:23 |

Share: | | | | |


ಬಂಟ್ವಾಳ ಸಂಬಂಧಿ ಯುವತಿಯ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಬಂಟ್ವಾಳ : ಸಂಬಂಧಿ ಯುವತಿಯನ್ನು ಅತ್ಯಾಚಾರ ಮಾಡಿ ಗರ್ಭವತಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ನಗರ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ವಿವಾಹಿತನಾಗಿರುವ ಗುರುಪ್ರಸಾದ್‌ ಬಂಧಿತ ಆರೋಪಿಯಾಗಿದ್ದು, ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ರೈಲ್ವೆ ಮಂಡಳಿಯ CEO ಆಗಿ ಜಯ ವರ್ಮಾ ಸಿನ್ಹಾ ನೇಮಕ

Posted by Vidyamaana on 2023-09-01 01:56:48 |

Share: | | | | |


ರೈಲ್ವೆ ಮಂಡಳಿಯ CEO ಆಗಿ ಜಯ ವರ್ಮಾ ಸಿನ್ಹಾ ನೇಮಕ

ಹೊಸದಿಲ್ಲಿ: ಭಾರತೀಯ ರೈಲ್ವೇ ಮಂಡಳಿಯ ನೂತನ ಅಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ (CEO) ಜಯ ವರ್ಮಾ ಸಿನ್ಹಾ ಅವರನ್ನು ಕೇಂದ್ರ ಸರ್ಕಾರ ನೇಮಿಸಿದೆ.


ರೈಲ್ವೆ ಇತಿಹಾಸದಲ್ಲಿ ಈ ಹುದ್ದೆಗೇರಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೂ ಇವರು ಪಾತ್ರರಾಗಿದ್ದಾರೆ. ಆಗಸ್ಟ್ 31 ರ ದಿನಾಂಕದ ಆದೇಶದಲ್ಲಿ, ಜಯ ಸಿನ್ಹಾ ಅವರು ಸೆಪ್ಟೆಂಬರ್ 1ರಂದು ಅಥವಾ ನಂತರ ಅಧಿಕಾರ ವಹಿಸಿಕೊಳ್ಳುತ್ತಾರೆ ಎಂದು ಸರ್ಕಾರ ಹೇಳಿದೆ. ಅವರ ಅಧಿಕಾರಾವಧಿಯು ಆಗಸ್ಟ್ 31, 2024 ರಂದು ಕೊನೆಗೊಳ್ಳಲಿದೆ. ಈ ಹಿಂದೆ ಅಧ್ಯಕ್ಷರು ಮತ್ತು ಸಿಇಒ ಆಗಿದ್ದ ಅನಿಲ್ ಕುಮಾರ್ ಲಹೋಟಿ ಅಧಿಕಾರವಧಿಯ ನಂತರ ಸಿನ್ಹಾ ಅಧಿಕಾರ ವಹಿಸಿಕೊಳ್ಳಲಿದ್ದಾರೆ.


ಜಯ ವರ್ಮಾ ಸಿನ್ಹಾ ಅವರು ಭಾರತೀಯ ರೈಲ್ವೆ ಸಂಚಾರ ಸೇವೆಯ 1986 ರ ಬ್ಯಾಚ್ ಅಧಿಕಾರಿ. ಅವರು ಪ್ರಸ್ತುತ ರೈಲ್ವೆ ಮಂಡಳಿಯಲ್ಲಿ ಸದಸ್ಯ (ಕಾರ್ಯಾಚರಣೆ ಮತ್ತು ವ್ಯವಹಾರ ಅಭಿವೃದ್ಧಿ) ಸ್ಥಾನವನ್ನು ಹೊಂದಿದ್ದಾರೆ. ಸಿನ್ಹಾ ಅವರು ರೈಲ್ವೇ ಮಂಡಳಿಯ (ಸಂಚಾರ ಸಾರಿಗೆ) ಹೆಚ್ಚುವರಿ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ.


ಅಲಹಾಬಾದ್ ವಿಶ್ವವಿದ್ಯಾನಿಲಯದಿಂದ ಪದವಿ ಪಡೆದಿರುವ ಸಿನ್ಹಾ 35 ವರ್ಷಗಳಿಂದ ರೈಲ್ವೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ವಿಜಿಲೆನ್ಸ್, ಮಾಹಿತಿ ತಂತ್ರಜ್ಞಾನ ಮತ್ತು ಭಾರತೀಯ ರೈಲ್ವೆಯ ಕಾರ್ಯಾಚರಣೆಯ ಅಂಶಗಳನ್ನು ಒಳಗೊಂಡಂತೆ ರೈಲ್ವೆಯ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.


ಬಾಲಸೋರ್ ರೈಲು ಅಪಘಾತದ ನಂತರ ಜಯಾ ಅವರು ಸದಸ್ಯರಾಗಿ (ಕಾರ್ಯಾಚರಣೆಗಳು ಮತ್ತು ವ್ಯವಹಾರ ಅಭಿವೃದ್ಧಿ) ರೈಲ್ವೆಯ ಮಾಧ್ಯಮ ತೊಡಗಿಸಿಕೊಳ್ಳುವಿಕೆಗಳಲ್ಲಿ ಮುಂಚೂಣಿಯಲ್ಲಿದ್ದರು. ಸುಮಾರು 300 ಜನರ ಸಾವಿಗೆ ಕಾರಣವಾದ ರೈಲು ಅಪಘಾತದ ನಂತರದ ಸಂಕೀರ್ಣ ಸಿಗ್ನಲಿಂಗ್ ವ್ಯವಸ್ಥೆಯನ್ನು ಅವರು ವಿವರಿಸಿದ್ದರು.


ಸಿನ್ಹಾ ಅವರು ಬಾಂಗ್ಲಾದೇಶದ ಢಾಕಾದಲ್ಲಿರುವ ಭಾರತದ ಹೈ ಕಮಿಷನ್‌ನಲ್ಲಿ ರೈಲ್ವೇ ಸಲಹೆಗಾರರ ಪಾತ್ರವನ್ನು ವಹಿಸಿಕೊಂಡು ಅಲ್ಲಿ ಅವರು ನಾಲ್ಕು ವರ್ಷಗಳ ಕಾಲ ಕೆಲಸ ಮಾಡಿದರು. ಕೋಲ್ಕತ್ತಾ ಮತ್ತು ಢಾಕಾ ನಡುವೆ ಕಾರ್ಯನಿರ್ವಹಿಸುವ ಮೈತ್ರೀ ಎಕ್ಸ್‌ಪ್ರೆಸ್‌ನ ಉದ್ಘಾಟನೆಯು ಬಾಂಗ್ಲಾದೇಶದಲ್ಲಿ ಅವರ ಅಧಿಕಾರಾವಧಿಯಲ್ಲಿ ನಡೆಯಿತು. ಹೆಚ್ಚುವರಿಯಾಗಿ, ಅವರು ಪೂರ್ವ ರೈಲ್ವೆಯೊಳಗಿನ ಸೀಲ್ದಾ ವಿಭಾಗಕ್ಕೆ ವಿಭಾಗೀಯ ರೈಲ್ವೆ ವ್ಯವಸ್ಥಾಪಕರ ಸ್ಥಾನವನ್ನು ಹೊಂದಿದ್ದರು.


2017 ರಲ್ಲಿ, ಜಯ ವರ್ಮ ಸಿನ್ಹಾ ಅವರು ಆಗ್ನೇಯ ರೈಲ್ವೆಯ ಪ್ರಧಾನ ಮುಖ್ಯ ವಾಣಿಜ್ಯ ವ್ಯವಸ್ಥಾಪಕರಾಗಿ ಅಧಿಕಾರ ವಹಿಸಿಕೊಂಡರು. ಇದಕ್ಕೂ ಮೊದಲು, ಅವರು ಆಗ್ನೇಯ ರೈಲ್ವೆಯ ಹಿರಿಯ ಉಪ ಜನರಲ್ ಮ್ಯಾನೇಜರ್ ಮತ್ತು ಮುಖ್ಯ ವಿಜಿಲೆನ್ಸ್ ಅಧಿಕಾರಿಯಾಗಿದ್ದರು.



Leave a Comment: