ಶಿರೂರು ದುರಂತ: ಮಾನವೀಯ ನೆರವು ನೀಡಿದ ಪತ್ರಕರ್ತರಿಗೆ ಅಭಿನಂದನೆ ಸಲ್ಲಿಸಿದ ಜಿಲ್ಲಾಧಿಕಾರಿ

ಸುದ್ದಿಗಳು News

Posted by vidyamaana on 2024-07-24 22:11:50 |

Share: | | | | |


ಶಿರೂರು ದುರಂತ: ಮಾನವೀಯ ನೆರವು ನೀಡಿದ ಪತ್ರಕರ್ತರಿಗೆ ಅಭಿನಂದನೆ ಸಲ್ಲಿಸಿದ ಜಿಲ್ಲಾಧಿಕಾರಿ

‌ಮಂಗಳೂರು: ಶಿರೂರು ಗುಡ್ಡ ಕುಸಿತ ದುರಂತದಲ್ಲಿ ಮೃತಪಟ್ಟಿದ್ದ ವೃದ್ಧೆಯ ಅಂತ್ಯ ಸಂಸ್ಕಾರಕ್ಕೆ ಮಾನವೀಯತೆ ನೆಲೆಯಲ್ಲಿ ನೆರವು ನೀಡಿದ್ದ ಮಂಗಳೂರಿನ ಪತ್ರಕರ್ತರನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ತಮ್ಮ ಕಚೇರಿಗೆ ಆಹ್ವಾನಿಸಿ ಸನ್ಮಾನಿಸಿದರು.ಶಿರೂರು ಗುಡ್ಡ ದುರಂತದಲ್ಲಿ ಉಳುವರೆ ಗ್ರಾಮದ ಸಣ್ಣಿ ಹನುಮಂತ ಗೌಡ ಎಂಬ ವೃದ್ಧೆಯ ಮೃತದೇಹ 8 ದಿನಗಳ ಬಳಿಕ ಮಂಗಳವಾರ ಸಿಕ್ಕಿದ್ದು ಪೋಸ್ಟ್ ಮಾರ್ಟಂ ಬಳಿಕ ಮೃತದೇಹವನ್ನು ಮನೆಯಿದ್ದ ಜಾಗಕ್ಕೆ ಸಾಗಿಸಿ ಅಂತಿಮ ಸಂಸ್ಕಾರ ನಡೆಸಲು ಪತ್ರಕರ್ತರಾದ ಶಶಿ ಬೆಳ್ಳಾಯರು, ಮೋಹನ್ ಕುತ್ತಾರ್, ಆರಿಫ್ ಯು.ಆರ್. ಗಿರೀಶ್ ಮಳಲಿ ಹಾಗೂ ಶಿವಶಂಕರ್ ನೆರವಾಗಿದ್ದರು

ಈ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದ್ದನ್ನು ಗಮನಿಸಿದ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅವರಿಂದ ಪತ್ರಕರ್ತರ ಮಾಹಿತಿ ಪಡೆದು ಕಚೇರಿಯಲ್ಲಿ ಸನ್ಮಾನಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ಇಂದಾಜೆ ಅವರು ಜಿಲ್ಲಾಧಿಕಾರಿಯವರಿಗೆ ಪತ್ರಕರ್ತರ ಪರಿಚಯ ಮಾಡಿಕೊಟ್ಟರು.


ಬಳಿಕ ಮಾತಾಡಿದ ಜಿಲ್ಲಾಧಿಕಾರಿ ಅವರು, ನಿಮ್ಮ ಈ ಕಾರ್ಯ ಶ್ಲಾಘನೀಯವಾಗಿದೆ. ಇದೊಂದು ದಕ್ಷಿಣ ಕನ್ನಡ ಜಿಲ್ಲೆಗೆ ಹೆಮ್ಮೆ ತರುವಂತಹ ಕಾರ್ಯ. ಮುಂದೆಯೂ ಇಂತಹ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಳ್ಳಿ, ಏನಾದರೂ ಅಗತ್ಯ ನೆರವು ಬೇಕಾದಲ್ಲಿ ಜಿಲ್ಲಾಡಳಿತ ನಿಮ್ಮ ಜೊತೆಗಿದೆ. ನಿಮ್ಮಂತಹ ಉತ್ಸಾಹಿ ತರುಣರ ಅವಶ್ಯಕತೆ ಸಮಾಜಕ್ಕೆ ಇದೆ ಎಂದು ಬೆನ್ನುತಟ್ಟಿದರು. ಅಲ್ಲದೇ ಶಿರೂರು ಮತ್ತು ಉಳುವರೆ ಗ್ರಾಮದ ಸದ್ಯದ ಸ್ಥಿತಿಗತಿಯ ಬಗ್ಗೆ ಪತ್ರಕರ್ತರಿಂದ ಮಾಹಿತಿ ಪಡೆದರು

 Share: | | | | |


ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆಯಿಂದ ಕೃಷಿಕ ಪ್ರಗತಿ ಬಂಧುಗಳಿಗೆ ಕೃಷಿ ಸಲಕರಣೆ ವಿತರಣೆ - ಯಾಂತ್ರೀಕೃತ ಭತ್ತನಾಟಿಗೆ ಚಾಲನೆ

Posted by Vidyamaana on 2024-09-01 12:03:57 |

Share: | | | | |


ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆಯಿಂದ ಕೃಷಿಕ ಪ್ರಗತಿ ಬಂಧುಗಳಿಗೆ ಕೃಷಿ ಸಲಕರಣೆ ವಿತರಣೆ - ಯಾಂತ್ರೀಕೃತ ಭತ್ತನಾಟಿಗೆ ಚಾಲನೆ

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಪುತ್ತೂರು ತಾಲೂಕು , ಪ್ರಗತಿಬಂಧು ಒಕ್ಕೂಟಗಳು ಪುತ್ತೂರು ತಾಲೂಕು ಇದರ ಸಹಯೋಗದಲ್ಲಿ 96 ಕೃಷಿಕ ಪ್ರಗತಿಬಂಧು ಸಂಘಗಳಿಗೆ ಕೃಷಿ ಸಲಕರಣೆಗಳ ವಿತರಣೆ ಮತ್ತು 192 ವಿದ್ಯಾರ್ಥಿಗಳಿಗೆ ಸುಜ್ಞಾನ ನಿಧಿ ಶಿಷ್ಯವೇತನ ಮಂಜೂರಾತಿ ಪತ್ರಗಳ ವಿತರಣಾ ಕಾರ್ಯಕ್ರಮವು ಬೊಳ್ವಾರು ವಿಶ್ವಕರ್ಮ ಸಭಾಭವನದಲ್ಲಿ ನಡೆಯಿತು.

ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ದೀಪ ಬೆಳಗಿಸಿ ಉದ್ಘಾಟಿಸಿ, ಕೃಷಿಕ ಪ್ರಗತಿ ಬಂದು ಸಂಘಗಳಿಗೆ ಕೃಷಿ ಸಲಕರಣೆ, ಸುಜ್ಞಾನ ನಿಧಿ ಶಿಷ್ಯವೇತನ ಮಂಜೂರಾದ ವಿದ್ಯಾರ್ಥಿಗಳಿಗೆ ಶಿಷ್ಯವೇತನದ ಮಂಜೂರಾತಿ ಪತ್ರವನ್ನು ವಿತರಿಸಿದರು. ಬಳಿಕ ಮಹಾಲಿಂಗೇಶ್ವರ ದೇವಳದ ಎದುರು ಭಾಗದ ಗದ್ದೆಯಲ್ಲಿ ಯಾಂತ್ರಿಕೃತ ಭತ್ತ ನಾಟಿಗೆ ಚಾಲನೆ ನೀಡಿ ಮಾತನಾಡಿ, ಯೋಜನೆಯ ಯಾವುದೇ ಕಾರ್ಯಕ್ರಮಗಳು ಅರ್ಥಪೂರ್ಣವಾಗಿ ಮತ್ತು ಸಮಾಜದ ಏಳಿಗೆಗಾಗಿ ಜನರ ಪರಿವರ್ತನೆಗಾಗಿ ರೂಪಗೊಂಡ ಕಾರ್ಯಕ್ರಮಗಳು ಮತ್ತು ಪರಿಣಾಮಕಾರಿ ಕಾರ್ಯಕ್ರಮಗಳು ಎಂದು ಹೇಳಿದರು.

ಉಪ್ಪಿನಂಗಡಿಯಲ್ಲಿ ಇಂದು ಶಾಸಕರ ಅಧ್ಯಕ್ಷತೆಯಲ್ಲಿ ಪ್ರಾಕೃತಿಕ ವಿಕೋಪ ತಡೆ ಸಭೆ

Posted by Vidyamaana on 2023-06-06 07:41:54 |

Share: | | | | |


ಉಪ್ಪಿನಂಗಡಿಯಲ್ಲಿ ಇಂದು ಶಾಸಕರ ಅಧ್ಯಕ್ಷತೆಯಲ್ಲಿ ಪ್ರಾಕೃತಿಕ ವಿಕೋಪ ತಡೆ ಸಭೆ

ಪುತ್ತೂರು: ಪ್ರಾಕೃತಿಕ ವಿಕೋಪದಿಂದಾಗುವ ಹಾನಿಯನ್ನು ತಡೆಗಟ್ಟುವ ಸಲುವಾಗಿ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಜೂನ್ 6ರಂದು ಮಧ್ಯಾಹ್ನ 3.30ಕ್ಕೆ ಪೂರ್ವಭಾವಿ ಸಭೆ ನಡೆಯಲಿದೆ.

ಫೆಲಸ್ತೀನ್ ಗೆ ಬೆಂಬಲ ಸೂಚಿಸಿ ಎಸ್.ಡಿ.ಪಿ.ಐ ವತಿಯಿಂದ ಪುತ್ತೂರು ತಾಲೂಕಿನ ವಿವಿಧೆಡೆ ಭಿತ್ತಿಪತ್ರ ಪ್ರದರ್ಶನ

Posted by Vidyamaana on 2023-10-20 16:35:47 |

Share: | | | | |


ಫೆಲಸ್ತೀನ್ ಗೆ ಬೆಂಬಲ ಸೂಚಿಸಿ ಎಸ್.ಡಿ.ಪಿ.ಐ ವತಿಯಿಂದ ಪುತ್ತೂರು ತಾಲೂಕಿನ ವಿವಿಧೆಡೆ ಭಿತ್ತಿಪತ್ರ ಪ್ರದರ್ಶನ

ಪುತ್ತೂರು: ಮಾತೃ ಭೂಮಿಗಾಗಿ ಇಸ್ರೇಲ್ ವಿರುದ್ಧ ಹೋರಾಡುತ್ತಿರುವ ಫೆಲೆಸ್ತೀನಿಗೆ ಭಾರತದ ಬೆಂಬಲ ಮುಂದುವರಿಸಬೇಕು ಮತ್ತು ಫೆಲಸ್ತೀನ್ ಹೋರಾಟಕ್ಕೆ ಭಾರತೀಯರಾದ ನಮ್ಮ ಬೆಂಬಲವಿದೆ ಎಂದು ಸೂಚಿಸಿ ತಾಲೂಕಿನ ವಿವಿಧ ಕಡೆಗಳಲ್ಲಿ ಭಿತ್ತಿಪತ್ರ ಪ್ರದರ್ಶನ ಮಾಡಲಾಯಿತು. ಕೂರ್ನಡ್ಕ, ಪರ್ಲಡ್ಕ, ಬನ್ನೂರು, ಸಾಲ್ಮರ, ಕಬಕ, ಬೀಟಿಕೆ ಮುರ,ಉರಿಮಜಲು, ಉಪ್ಪಿನಂಗಡಿ, ನೆಕ್ಕಿಲಾಡಿ, ಹಿರೇಬಂಡಾಡಿ, ಕೊಲ್ಪೆ ವಲಯದ ವತಿಯಿಂದ ಭಿತ್ತಿ ಪತ್ರ ಪ್ರದರ್ಶಿಸಲಾಯಿತು.

ಫೈನಲ್ ನಲ್ಲಿ ಹೈದರಾಬಾದ್ ಗೆ ಹೀನಾಯ ಸೋಲು.. ಬಿಕ್ಕಿ-ಬಿಕ್ಕಿ ಕಣ್ಣೀರು ಹಾಕಿದ ಕಾವ್ಯ ಮಾರನ್

Posted by Vidyamaana on 2024-05-27 08:25:45 |

Share: | | | | |


ಫೈನಲ್ ನಲ್ಲಿ ಹೈದರಾಬಾದ್ ಗೆ ಹೀನಾಯ ಸೋಲು.. ಬಿಕ್ಕಿ-ಬಿಕ್ಕಿ ಕಣ್ಣೀರು ಹಾಕಿದ ಕಾವ್ಯ ಮಾರನ್

IPL ನ ಅಂತಿಮ ಹಣಾಹಣಿಯಲ್ಲಿ ಎಸ್​ಆರ್​ಹೆಚ್​ ತಂಡವನ್ನು 8 ವಿಕೆಟ್​ಗಳಿಂದ ಮಣಿಸಿ ಕೆಕೆಆರ್ 3ನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿದೆ. ಇದಕ್ಕೂ ಮುನ್ನ ಈ ಪಂದ್ಯದಲ್ಲಿ ಟಾಸ್ ಗೆದ್ದ ಎಸ್​ಆರ್​ಹೆಚ್ ನಾಯಕ ಪ್ಯಾಟ್ ಕಮಿನ್ಸ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಸನ್​ರೈಸರ್ಸ್ ಹೈದರಾಬಾದ್​ ತಂಡಕ್ಕೆ ಮೊದಲ ಓವರ್​ನಲ್ಲೇ ಮಿಚೆಲ್ ಸ್ಟಾರ್ಕ್ ಆಘಾತ ನೀಡಿದ್ದರು.ಮೊದಲ ಓವರ್​ನ 5ನೇ ಎಸೆತದಲ್ಲಿ ಅಭಿಷೇಕ್ ಶರ್ಮಾ (2) ರನ್ನು ಕ್ಲೀನ್ ಬೌಲ್ಡ್ ಮಾಡುವ ಮೂಲಕ ಸ್ಟಾರ್ಕ್ ಶುಭಾರಂಭ ಮಾಡಿದ್ದರು. ಇದಾದ ಬಳಿಕ ಟ್ರಾವಿಸ್ ಹೆಡ್ (0) ವೈಭವ್ ಅರೋರಾಗೆ ವಿಕೆಟ್ ಒಪ್ಪಿಸಿದರು. ಪವರ್​ಪ್ಲೇನಲ್ಲೇ ಪ್ರಮುಖ 2 ವಿಕೆಟ್ ಕಳೆದುಕೊಂಡ ಸನ್​ರೈಸರ್ಸ್ ಹೈದರಾಬಾದ್ ಈ ಆಘಾತದಿಂದ ಪಾರಾಗುವ ಮುನ್ನವೇ ಬ್ಯಾಕ್ ಟು ಬ್ಯಾಕ್ ವಿಕೆಟ್ ಕಳೆದುಕೊಂಡಿತು. ಅಂತಿಮವಾಗಿ ಸನ್​ರೈಸರ್ಸ್ ಹೈದರಾಬಾದ್ ತಂಡವು 18.3 ಓವರ್​ಗಳಲ್ಲಿ 113 ರನ್​ಗಳಿಸಿ ಆಲೌಟ್ ಆಯಿತು

ಪುತ್ತೂರು : ಟೆಕ್ಸ್ ಟೈಲ್ ಸೆಂಟರ್ ಮಾಲಕ‌ ಯಹ್ಯಾ ಹಾಜಿ ನಿಧನ

Posted by Vidyamaana on 2024-02-23 20:53:06 |

Share: | | | | |


ಪುತ್ತೂರು : ಟೆಕ್ಸ್ ಟೈಲ್ ಸೆಂಟರ್ ಮಾಲಕ‌ ಯಹ್ಯಾ  ಹಾಜಿ ನಿಧನ

ಪುತ್ತೂರು: ಮೂಲತಃ ಚಿಕ್ಕಪುತ್ತೂರು ನಿವಾಸಿ,, ಕೋರ್ಟ್ ರಸ್ತೆಯ ಟೆಕ್ಸ್ಟೈಲ್ ಸೆಂಟರ್ ಮಾಲಕ‌ ಯಾಹೀಯಾ ಹಾಜಿ  ಅವರು ಫೆ. 23ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅಸೌಖ್ಯದಿಂದ ನಿಧನರಾದರು.

ಇವರು ಕಂಬಳಬೆಟ್ಟು ದಿ. ಮಹಮ್ಮದ್ ಮುಸ್ಲಿಯಾರ್ ಅವರ ಪುತ್ರ. ಮುಸ್ಲಿಂ ಸಮುದಾಯದ ಅಂತ್ಯಸಂಸ್ಕಾರಕ್ಕೆ ಬೇಕಾಗುವ ವಸ್ತ್ರ (ಕಫನ್)ಗಳ ಮಾರಟಕ್ಕೆ ಟೆಕ್ಸ್ಟೈಲ್ ಸೆಂಟರ್ ಹೆಸರುವಾಸಿಯಾಗಿತ್ತು.

ಮೃತರು ಪತ್ನಿ, ಪುತ್ರ ಸಮೀರ್ ಅವರನ್ನು ಅಗಲಿದ್ದಾರೆ.

BREAKING :ರಾಜ್ಯದಲ್ಲಿ ಡೆಂಗ್ಯೂ ಗೆ ಆರೋಗ್ಯ ಇಲಾಖೆ ಸಿಬ್ಬಂದಿ ಯೇ ಬಲಿ

Posted by Vidyamaana on 2024-06-13 20:00:22 |

Share: | | | | |


BREAKING :ರಾಜ್ಯದಲ್ಲಿ ಡೆಂಗ್ಯೂ ಗೆ ಆರೋಗ್ಯ ಇಲಾಖೆ ಸಿಬ್ಬಂದಿ ಯೇ ಬಲಿ

ಶಿವಮೊಗ್ಗ : ರಾಜ್ಯದಲ್ಲಿ ಡೆಂಗ್ಯೂ ಜ್ವರ ಪ್ರಕರಣಗಳಲ್ಲಿ ಹೆಚ್ಚಳವಾಗುತ್ತಿದ್ದು, ಇದೀಗ ಡೆಂಗ್ಯೂ ಜ್ವರಕ್ಕೆ ಆರೋಗ್ಯ ಇಲಾಖೆಯ ಸಿಬ್ಬಂದಿಯೇ ಬಲಿಯಾಗಿರುವ ಘಟನೆ ನಡೆದಿದೆ.

ಶಿವಮೊಗ್ಗ ಜಿಲ್ಲೆಯ ಸಾಗರ ಸರ್ಕಾರಿ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಘಟಕದ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನಾಗರಾಜ್ ಗೆ ಡೆಂಗ್ಯೂ ಜ್ವರ ದೃಢಪಟ್ಟಿದ್ದು, ಕೂಡಲೇ ಅವರನ್ನು ಸಾಗರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.



Leave a Comment: