ಅಟಲ್ ಸೇತು ಮೇಲೆ ಕಾರು ನಿಲ್ಲಿಸಿ ಸಮುದ್ರಕ್ಕೆ ಹಾರಿದ ಇಂಜಿನಿಯರ್: ಕೃತ್ಯ ಸಿಸಿಟಿವಿಯಲ್ಲಿ ಸೆರೆ

ಸುದ್ದಿಗಳು News

Posted by vidyamaana on 2024-07-25 16:43:22 |

Share: | | | | |


ಅಟಲ್ ಸೇತು ಮೇಲೆ ಕಾರು ನಿಲ್ಲಿಸಿ ಸಮುದ್ರಕ್ಕೆ ಹಾರಿದ ಇಂಜಿನಿಯರ್: ಕೃತ್ಯ ಸಿಸಿಟಿವಿಯಲ್ಲಿ ಸೆರೆ

 ಮುಂಬೈ: ಇಂಜಿನಿಯರ್ ಒಬ್ಬರು ತಮ್ಮ ಕಾರನ್ನು ಅಟಲ್ ಸೇತುವಿನಲ್ಲಿ ನಿಲ್ಲಿಸಿ ಸೇತುವೆಯಿಂದ ಕೆಳಗೆ ಹಾರಿದ್ದಾರೆ. ಈ ದೃಶ್ಯ ಅಲ್ಲಿ ಇದ್ದ ಸಿಸಿ ಕ್ಯಾಮರಾದಲ್ಲಿ ರೆಕಾರ್ಡ್ ಆಗಿದ್ದು, ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ನಿನ್ನೆ ಮಧ್ಯಾಹ್ನ ಈ ಘಟನೆ ನಡೆದಿದೆ.

ಸೇತುವೆಯಿಂದ ಕೆಳಗೆ ಹಾರಿದವರನ್ನು ಡೊಂಬಿವಿಲಿಯ ಪಲ್ಲವ ನಗರದ ನಿವಾಸಿ ಕರ್ತುರಿ ಶ್ರೀನಿವಾಸ್ ಎಂದು ಗುರುತಿಸಲಾಗಿದೆ. ಇವರು ತಮ್ಮ ಪತ್ನಿ ಹಾಗೂ ಮಗಳೊಂದಿಗೆ ವಾಸ ಮಾಡುತ್ತಿದ್ದರು.

ಮಧ್ಯಾಹ್ನ 12.35ರ ಸುಮಾರಿಗೆ ಇವರು ತಮ್ಮ ಕಾರಿನಲ್ಲಿ ಆಟಲ್ ಸೇತು ಬ್ರಿಡ್ಜ್ ಮೇಲೆ ಬಂದಿದ್ದು, ಸೇತುವೆ ಮೇಲೆ ಕಾರು ನಿಲ್ಲಿಸಿ ಸಮುದ್ರಕ್ಕೆ ಹಾರಿದ್ದಾರೆ. ಇದು ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದ್ದು, ಟೋಲ್ ಕಂಟ್ರೋಲ್‌ ರೂಮ್‌ನವರ ಗಮನಕ್ಕೆ ಬಂದಿದೆ. ಕೂಡಲೇ ಅವರು ನವಶೇವ ಪೊಲೀಸರಿಗೆ ವಿಚಾರ ಮುಟ್ಟಿಸಿದ್ದಾರೆ.

ಕೂಡಲೇ ಎಂಟಿಹೆಚ್‌ಎಲ್‌ನಿಂದ ರಕ್ಷಣಾ ತಂಡ ಹಾಗೂ ಕರಾವಳಿ ಭದ್ರತಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಯುವಕನಿಗಾಗಿ ಹುಡುಕಾಟ ನಡೆಸಿದ್ದಾರೆ. ಹಣಕಾಸಿನ ತೊಂದರೆಯಿಂದಲೇ ಶ್ರೀನಿವಾಸ್ ಈ ನಿರ್ಧಾರ ತೆಗೆದುಕೊಂಡಿರಬಹುದು ಎಂದು ಶಂಕಿಸಲಾಗಿದೆ. ಕಾರಿನಲ್ಲಿ ಕೇವಲ ತನ್ನ ಪರ್ಸ್ ಮಾತ್ರ ಬಿಟ್ಟು ಶ್ರೀನಿವಾಸ್ ಸಮುದ್ರಕ್ಕೆ ಹಾರಿದ್ದಾರೆ. ಈ ಪರ್ಸ್‌ನಲ್ಲಿ ಆಧಾರ್ ಕಾರ್ಡ್‌, ತಾನು ಕೆಲಸ ಮಾಡುತ್ತಿದ್ದ ಸಂಸ್ಥೆಯ ಐಡಿ ಕಾರ್ಡ್ ಇತ್ತು. ಡೆತ್‌ನೋಟ್ ಆಗಲಿ, ಫೋನ್ ಆಗಲಿ ಕಾರಿನಲ್ಲಿ ಪತ್ತೆಯಾಗಿಲ್ಲ ಎಂದ ಪೊಲೀಸ್ ಇನ್ಸ್‌ಪೆಕ್ಟರ್ ಅಂಜುಮನ್ ಬಾಗ್ವಾನ್ ಹೇಳಿದ್ದಾರೆ.

ಬಿಟೆಕ್ ಮಾಡಿದ್ದ ಶ್ರೀನಿವಾಸ್ ಮುಂಬೈನ ಲೋಧಾದಲ್ಲಿ 2023ರಲ್ಲಿ ಕೆಲ ಕಾಲ ಕೆಲಸ ಮಾಡಿದ್ದರು. ಇದಕ್ಕೂ ಮೊದಲು ಅರಬ್ ರಾಷ್ಟ್ರ ಕುವೈತ್‌ನಲ್ಲಿ ಕೆಲಸ ಮಾಡಿದ್ದರು. 2023ರಲ್ಲಿ ಮುಂಬೈಗೆ ವಾಪಸಾದ ಅವರು ಲೋಧಾ ಗ್ರೂಪ್‌ಗೆ ಕೆಲಸಕ್ಕೆ ಸೇರಿದ್ದರು. ಇದಾದ ನಂತರ ಇವರು ತಮ್ಮ ಪಾಲುದಾರರ ಜೊತೆಗೂಡಿ ಇಲೆಕ್ಟ್ರಿಕ್ ಕಂಟ್ರಾಕ್ಟ್ ಕೆಲಸ ಶುರು ಮಾಡಿದ್ದರು. ಶ್ರೀನಿವಾಸ್ ಪತ್ನಿಯಿಂದಲೂ ಪೊಲೀಸರು ಹೇಳಿಕೆ ಪಡೆದುಕೊಂಡಿದ್ದು, ಶ್ರೀನಿವಾಸ್ ಈ ಹಿಂದೆಯೂ ಕುವೈತ್‌ನಲ್ಲಿ ಕೆಲಸ ಮಾಡುತ್ತಿದ್ದಾಗ ಜೀವ ಕಳೆದುಕೊಳ್ಳಲು ಮುಂದಾಗಿದ್ದರು. ಈ ವೇಳೆ ಸಮಯಕ್ಕೆ ಸರಿಯಾಗಿ ಯಾರೋ ಪಾರು ಮಾಡಿದ್ದರಿಂದ ಅವರ ಜೀವ ಉಳಿದಿತ್ತು ಎಂದು ಪತ್ನಿ ಹೇಳಿದ್ದಾರೆ.

ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ

ಶ್ರೀನಿವಾಸ್ ಕಡೆಯದಾಗಿ ಸಂಬಂಧಿಕರೊಬ್ಬರ ಜೊತೆ ಮಾತನಾಡಿದ್ದು, ಈ ವೇಳೆ ಅವರು ಸಹಜವಾಗಿ ಮಾತನಾಡಿದ್ದರು ಎಂದು ತಿಳಿದು ಬಂದಿದೆ ಎಂದು ಪೊಲೀಸರು ಹೇಳಿದ್ದಾರೆ. ಆದರೆ ಇದುವರೆಗೂ ನೀರಿಗೆ ಹಾರಿದ ಶ್ರೀನಿವಾಸ್ ಅವರನ್ನು ಪತ್ತೆ ಮಾಡಲು ಸಾಧ್ಯವಾಗಿಲ್ಲ. ಇದು ಮೊದಲ ಪ್ರಕರಣ ಅಲ್ಲ ಈ ಹಿಂದೆ ಮಹಿಳಾ ವೈದ್ಯರೊಬ್ಬರು ಅಟಲ್ ಸೇತುವಿನಿಂದ ಕೆಳಗೆ ಹಾರಿ ತಮ್ಮ ಜೀವನವನ್ನು ಅಂತ್ಯಗೊಳಿಸಿದ್ದರು.

 Share: | | | | |


ಯುವನಿಧಿ ಯೋಜನೆ ಇಂದಿನಿಂದ ಜಾರಿ : ಅರ್ಜಿ ಸಲ್ಲಿಸುವುದು ಹೇಗೆ ? ಯಾರೆಲ್ಲ ಅರ್ಹರು ?

Posted by Vidyamaana on 2023-12-26 11:53:42 |

Share: | | | | |


ಯುವನಿಧಿ ಯೋಜನೆ ಇಂದಿನಿಂದ ಜಾರಿ : ಅರ್ಜಿ ಸಲ್ಲಿಸುವುದು ಹೇಗೆ ? ಯಾರೆಲ್ಲ ಅರ್ಹರು ?

ಬೆಂಗಳೂರು : ಕರ್ನಾಟಕಸರಕಾರ ಪಂಚ ಗ್ಯಾರಂಟಿ ಯೋಜನೆಯ ಪೈಕಿ ಕೊನೆಯ ಗ್ಯಾರಂಟಿ ಯುವನಿಧಿ ಯೋಜನೆಯನ್ನು ಇಂದಿನಿಂದ ಜಾರಿಗೊಳಿಸಲಿದೆ. ಗೃಹಲಕ್ಷ್ಮೀ, ಗೃಹಜ್ಯೋತಿ, ಶಕ್ತಿ ಹಾಗೂ ಅನಭಾಗ್ಯ ಯೋಜನೆಯನ್ನು ಜಾರಿಗೊಳಿಸಿರುವ ಸರಕಾರ ಇದೀಗ ಯುವನಿಧಿ ಯೋಜನೆ ಜಾರಿಗೆ ಮುಂದಾಗಿದೆ.ಡಿಸೆಂಬರ್‌ 26 ರಿಂದ ಯುವನಿಧಿ ಯೋಜನೆ ಕರ್ನಾಟಕ ರಾಜ್ಯದಲ್ಲಿ ಅಧಿಕೃತವಾಗಿ ಜಾರಿಗೆ ಬರಲಿದೆ. ಪದವೀಧರರು ಹಾಗೂ ಡಿಪ್ಲೊಮಾ ಶಿಕ್ಷಣ ಪಡೆದವರು ಈ ಯೋಜನೆಯ ಲಾಭವನ್ನು ಪಡೆಯಲು ಅರ್ಹರಾಗಿದ್ದಾರೆ. ಶಿಕ್ಷಣ ಪಡೆದು ಉದ್ಯೋಗ ಸಿಗದೇ ಇರುವ ನಿರುದ್ಯೋಗಿಗಳಿಗೆ ಆರ್ಥಿಕ ನೆರವು ನೀಡುವುದು ಯುವನಿಧಿ ಯೋಜನೆಯ ಉದ್ದೇಶವಾಗಿದೆ.ಯುವನಿಧಿ ಯೋಜನೆಗೆ ಆನ್‌ಲೈನ್‌ ಹಾಗೂ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. sevasindhugs.Karnataka.gov.in ವೆಬ್‌ಸೈಟ್‌ಗೆ ಲಾಗಿನ್‌ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಪದವಿ/ಡಿಪ್ಲೋಮಾ ತೇರ್ಗಡೆಯಾದ ಅಭ್ಯರ್ಥಿಗಳ ಶೈಕ್ಷಣಿಕ ಪ್ರಮಾಣ ಪತ್ರವನ್ನು ಎನ್ ಎಡಿ ಪೋರ್ಟಲ್ ಸಂಬಂಧಪಟ್ಟ ವಿವಿಗಳು, ಶೈಕ್ಷಣಿಕ ಸಂಸ್ಥೆಗಳು ಮಂಡಳಿಗಳು ಧೃಡಿಕರಿಸಲು n

non

.karnataka.gov.in/#/YuvaNidhi ಜಾಲತಾಣದಲ್ಲಿ ಲಾಗಿನ್ ಮಾಡಬೇಕು.


ಯುವನಿಧಿ ಯೋಜನೆಗೆ (Yuva Nidhi Scheme) ಯಾರೆಲ್ಲಾ ಅರ್ಹರು ?


ಕಳೆದ ಆರು ವರ್ಷಗಳಿಂದ ಕರ್ನಾಟಕದಲ್ಲಿ ವಾಸವಾಗಿರಬೇಕು

ಕರ್ನಾಟಕದಲ್ಲಿಯೇ ಪದವಿ ಅಥವಾ ಡಿಪ್ಲೋಮಾ ಹಾಗೂ ತತ್ಸಮಾನ ಶಿಕ್ಷಣವನ್ನು ಪಡೆದಿರಬೇಕು.

ಕರ್ನಾಟಕ ನಿವಾಸಿ ಪ್ರಮಾಣ ಪತ್ರಕ್ಕಾಗಿ ಎಸ್‌ಎಸ್‌ಎಲ್‌ಸಿ, ಪಿಯುಸಿ, ಸಿಇಟಿ ನೋಂದಣಿ ಸಂಖ್ಯೆ ಅಥವಾ ಪಡಿತರ ಚೀಟಿ ಹೊಂದಿರಬೇಕು.

ಡಿಪ್ಲೊಮಾ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ, ೮ ಅಥವಾ ೯ನೇ ತರಗತಿ ಅಂಕಪಟ್ಟಿ ಅಥವಾ ರೇಷನ್‌ ಕಾರ್ಡ್‌ ಹೊಂದಿರಬೇಕು.

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಅಂಕಪಟ್ಟಿ ಕಡ್ಡಾಯ


Yuva Nidhi Scheme : ಎಲ್ಲಿ ಅರ್ಜಿ ಸಲ್ಲಿಸಬಹುದು ?


ಯುವನಿಧಿ ಯೋಜನೆಗೆ ಇಂದಿನಿಂದ ಅರ್ಜಿ ಸಲ್ಲಿಸಲು ಕರ್ನಾಟಕ ಸರಕಾರ ಅವಕಾಶವನ್ನು ಕಲ್ಪಿಸಿದೆ. ಕರ್ನಾಟಕ ಒನ್‌, ಬಾಪೂಜಿ ಸೇವಾ ಕೇಂದ್ರ, ಗ್ರಾಮ ಒನ್‌ ಕೇಂದ್ರಗಳಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಸೇವಾ ಸಿಂಧು ಪೋರ್ಟಲ್‌ ಮೂಲಕವೂ ಯುವನಿಧಿ ಯೋಜನೆ ಅರ್ಜಿ ಸಲ್ಲಿಸಲು ಅವಕಾಶವಿದೆ.


Yuva Nidhi Scheme : ಏನಿದು ಯುವನಿಧಿ ಯೋಜನೆ ?


ಸಿಎಂ ಸಿದ್ದರಾಮಯ್ಯ ಸರಕಾರ ನೇತೃತ್ವದ ಕಾಂಗ್ರೆಸ್‌ ಸರಕಾರ 5ನೇ ಗ್ಯಾರಂಟಿ ಯೋಜನೆಯನ್ನು ಜಾರಿಗೊಳಿಸಿದೆ. ಯುವನಿಧಿ ಯೋಜನೆ ಡಿಸೆಂಬರ್‌ ೨೬ರಿಂದ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಈ ಯೋಜನೆಯ ಮೂಲಕ ಪದವೀಧರರಿಗೆ ಮಾಸಿಕ 3,000 ರೂಪಾಯಿ ಹಾಗೂ ಡಿಪ್ಲೋಮಾ ಪದವೀಧರರಿಗೆ ಮಾಸಿಕ 1,500 ರೂಪಾಯಿಯನ್ನು ನೀಡಲಾಗುತ್ತದೆ.


ಡಿಪ್ಲೋಮಾ ಅಥವಾ ಪದವಿ ಶಿಕ್ಷಣವನ್ನು ಪಡೆದು 180 ದಿನಗಳು ಕಳೆದರೂ ಕೂಡ ಉದ್ಯೋಗ ಸಿಗದೇ ಇರುವವರು ಮಾತ್ರವೇ ಯುವನಿಧಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಅರ್ಹರಾಗಿರುತ್ತಾರೆ. ಅಭ್ಯರ್ಥಿಗಳು ಉತೀರ್ಣರಾದ ದಿನದಿಂದ 6 ತಿಂಗಳವರೆಗಿನ ತಮ್ಮ ಬ್ಯಾಂಕ್ ಖಾತೆಯ ವಹಿವಾಟು ಪ್ರತಿ ನೀಡಬೇಕು. ಒಂದೊಮ್ಮೆ ಪದವಿ, ಡಿಪ್ಲೊಮಾ ಶಿಕ್ಷಣ ಪಡೆದ ಬಳಿಕ ಉನ್ನತ ಶಿಕ್ಷಣ ಮುಂದುವರಿಸಿದ್ರೆ ಅಂತಹ ಅಭ್ಯರ್ಥಿಗಳು ಯೋಜನೆಗೆ ಅರ್ಹತೆ ಪಡೆಯುವುದಿಲ್ಲ.


ಯೋಜನೆಗೆ ಅರ್ಹತೆಯನ್ನು ಪಡೆದಿರುವ ಅಭ್ಯರ್ಥಿಗಳಿಗೆ ಉದ್ಯೋಗ ಸಿಗುವವರೆಗೆ ಮಾತ್ರವೇ ಈ ಯೋಜನೆಯ ಲಾಭ ದೊರೆಯಲಿದೆ. ಅಲ್ಲದೇ ಅರ್ಜಿ ಸಲ್ಲಿಸಿದ ದಿನದಿಂದ ಗರಿಷ್ಠ 2 ವರ್ಷಗಳ ಅವಧಿಗೆ ಮಾತ್ರವೇ ಯುವನಿಧಿ ಯೋಜನೆಯ ಭತ್ಯೆ ದೊರೆಯಲಿದೆ.

BREAKING : ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಫಸ್ಟ್, ಗದಗ ಲಾಸ್ಟ್!

Posted by Vidyamaana on 2024-04-10 11:00:26 |

Share: | | | | |


BREAKING : ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಫಸ್ಟ್, ಗದಗ ಲಾಸ್ಟ್!

ಬೆಂಗಳೂರು : ಬಹುನಿರೀಕ್ಷಿತ 2024 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ವಿದ್ಯಾರ್ಥಿಗಳು karresults.nic.in ನಲ್ಲಿ ಫಲಿತಾಂಶ ನೋಡಬಹುದು. ಈ ಬಾರಿ ರಾಜ್ಯದಾದ್ಯಂತ ಸುಮಾರು 1,124 ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆದಿತ್ತು.

ಬಂಟ್ವಾಳ ಸಂಬಂಧಿ ಯುವತಿಯ ಮೇಲೆ ಅತ್ಯಾಚಾರ: ಆರೋಪಿ ಬಂಧನ

Posted by Vidyamaana on 2024-07-27 07:09:23 |

Share: | | | | |


ಬಂಟ್ವಾಳ ಸಂಬಂಧಿ ಯುವತಿಯ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಬಂಟ್ವಾಳ : ಸಂಬಂಧಿ ಯುವತಿಯನ್ನು ಅತ್ಯಾಚಾರ ಮಾಡಿ ಗರ್ಭವತಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ನಗರ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ವಿವಾಹಿತನಾಗಿರುವ ಗುರುಪ್ರಸಾದ್‌ ಬಂಧಿತ ಆರೋಪಿಯಾಗಿದ್ದು, ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ನಮ್ಮ ಸಂಕಷ್ಟಕ್ಕೆ ಸ್ಪಂದಿಸದೆ ಈಗ ಬಂದು ಏನು ಪ್ರಯೋಜನ ?ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರನ್ನು ತರಾಟೆಗೆ ತೆಗೆದುಕೊಂಡ ಸ್ಥಳೀಯರು

Posted by Vidyamaana on 2024-08-17 04:59:32 |

Share: | | | | |


ನಮ್ಮ ಸಂಕಷ್ಟಕ್ಕೆ ಸ್ಪಂದಿಸದೆ ಈಗ ಬಂದು ಏನು ಪ್ರಯೋಜನ ?ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರನ್ನು ತರಾಟೆಗೆ ತೆಗೆದುಕೊಂಡ ಸ್ಥಳೀಯರು

ಬೆಳ್ತಂಗಡಿ: ಇತ್ತೀಚಿಗೆ ಸುರಿದ ಭಾರೀ ಮಳೆಗೆ ಬೆಳ್ತಂಗಡಿ ತಾಲೂಕಿನ ಸವಣಾಲು ಗ್ರಾಮದ ಪಿಲಿಕಲ ರಸ್ತೆ ವ್ಯಾಪಕವಾಗಿ ಬಿರುಕು ಬಿಟ್ಟು ಜನ, ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಆ ಪ್ರದೇಶಕ್ಕೆ ಭೇಟಿ ನೀಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರನ್ನು ಸ್ಥಳೀಯ ಜನರು ತರಾಟೆಗೆ ತೆಗೆದುಕೊಂಡ ಘಟನೆ ಶುಕ್ರವಾರ ನಡೆಯಿತು.

ದ.ಕ ಜಿಲ್ಲೆಯಾದ್ಯಂತ ಕಳೆದ ಒಂದು ತಿಂಗಳಿಂದ ಭಾರೀ ಮಳೆಯಾಗಿ ತಾಲೂಕಿನಾದ್ಯಂತ ವ್ಯಾಪಕವಾಗಿ ಪ್ರಾಕೃತಿಕ ವಿಕೋಪ ಸಂಭವಿಸಿತ್ತು. ಸವಣಾಲು ಗ್ರಾಮದ ಪಿಲಿಕಲ ಪ್ರದೇಶ ಸೇರಿದಂತೆ ವಿವಿಧೆಡೆ ದ.ಕ ಜಿಲ್ಲಾಧಿಕಾರಿ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳ ತಂಡ ಭೇಟಿ ನೀಡಿದ್ದರು. ಆದರೆ ಶಾಸಕ ಹರೀಶ್ ಪೂಂಜ ಅವರು ಮಾತ್ರ ಇಲ್ಲಿಗೆ ಭೇಟಿ ನೀಡಿರಲಿಲ್ಲ. ಬಳಿಕ ಈ ಪ್ರದೇಶದ ಜನರನ್ನು ತಾತ್ಕಾಲಿಕವಾಗಿ ಕಾಳಜಿ ಕೇಂದ್ರಕ್ಕೆ ಹೋಗಲು ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಿದ್ದರೂ ಅಲ್ಲಿನ ಜನರು ಸಾಕುಪ್ರಾಣಿಗಳನ್ನು ಬಿಟ್ಟು ನಾವು ಕಾಳಜಿ ಕೇಂದ್ರಕ್ಕೆ ಬರಲು ಸಾಧ್ಯವಿಲ್ಲ ಎಂದು ಅಧಿಕಾರಿಗಳಿಗೆ ತಿಳಿಸಿದ್ದರು. ಬಳಿಕ ಅಧಿಕಾರಿಗಳು ಪರ್ಯಾಯ ರಸ್ತೆ ನಿರ್ಮಾಣ ಕಾರ್ಯಕ್ಕೆ ಸಂಬಂಧಿಸಿದಂತೆ ಇಂಜಿನಿಯರ್ ಗಳು ಆಗಮಿಸಿ ಅಂದಾಜು ಪಟ್ಟಿ ತಯಾರಿಸಿದ್ದರು.

ಕಾಸರಗೋಡಿನಲ್ಲಿ ಇಬ್ಬರು ಯುವಕರಿಗೆ ರೈಲು ಢಿಕ್ಕಿ; ಯುವಕರು ಮೃತ್ಯು

Posted by Vidyamaana on 2024-01-30 18:39:39 |

Share: | | | | |


ಕಾಸರಗೋಡಿನಲ್ಲಿ ಇಬ್ಬರು ಯುವಕರಿಗೆ ರೈಲು ಢಿಕ್ಕಿ; ಯುವಕರು ಮೃತ್ಯು

ಕಾಸರಗೋಡು: ಪಳ್ಳಂ ರೈಲ್ವೇ ಸೇತುವೆ ಬಳಿ ಮುಂಜಾನೆ ಸಮಯದಲ್ಲಿ ಇಬ್ಬರು ಯುವಕರಿಗೆ ರೈಲು ಢಿಕ್ಕಿಯಾಗಿ ಮೃತಪಟ್ಟ ದಾರುಣ ಘಟನೆ ಸಂಭವಿಸಿದೆ.


ಯುವಕರಿಬ್ಬರು 20ರಿಂದ 25 ವರ್ಷದೊಳಗಿನವರಾಗಿದ್ದು, ಅವರ ಗುರುತು ಪತ್ತೆಯಾಗಿಲ್ಲ. ಇಂದು ಮುಂಜಾನೆ 5:30ರ ಸುಮಾರಿಗೆ ಇಬ್ಬರು ಯುವಕರ ಮೃತದೇಹಗಳು ರೈಲು ಹಳಿಯಲ್ಲಿ ಪತ್ತೆಯಾಗಿವೆ ಎಂದು ತಿಳಿದು ಬಂದಿದೆ.


ಇನ್ನು ಘಟನಾ ಸ್ಥಳಕ್ಕೆ ಸ್ಥಳೀಯರು ನೀಡಿದ ಮಾಹಿತಿಯಂತೆ ರೈಲ್ವೆ ಪೊಲೀಸರು ಹಾಗೂ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಇಂದಿನ ಪ್ರಚಾರ ಸಭೆಗಳು

Posted by Vidyamaana on 2023-04-26 03:18:31 |

Share: | | | | |


ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಇಂದಿನ ಪ್ರಚಾರ ಸಭೆಗಳು

ಪುತ್ತೂರು: ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರ ಚುನಾವಣಾ ಪ್ರಚಾರ ಕಾರ್ಯ ಬಿರುಸಿನಿಂದ ಸಾಗುತ್ತಿದ್ದು, ಗ್ರಾಮಾಂತರ ಭಾಗಗಳಲ್ಲಿ ಪ್ರಚಾರ ಸಭೆಗಳನ್ನು ಆಯೋಜಿಸಲಾಗುತ್ತಿದೆ.

ಅಶೋಕ್ ಕುಮಾರ್ ರೈ ಅವರ ಇಂದಿನ ಪ್ರಚಾರ ಸಭೆಗಳು ಹೀಗಿವೆ -

ಬೆಳಿಗ್ಗೆ 9.30ಕ್ಕೆ ಅರಿಯಡ್ಕ, 10.30ಕ್ಕೆ ಮಾಡ್ನೂರು, 11.30ಕ್ಕೆ ಕೊಳ್ತಿಗೆ, ಮಧ್ಯಾಹ್ನ 2.30ಕ್ಕೆ ನೆಟ್ಟಣಿಗೆ ಮುಡ್ನೂರು, 3.30ಕ್ಕೆ ಪಡುವನ್ನೂರು, 4.30ಕ್ಕೆ ಬಡಗನ್ನೂರು, ಸಂಜೆ 6ಕ್ಕೆ ಬೆಟ್ಟಂಪಾಡಿ, 7 ಗಂಟೆಗೆ ನಗರದಲ್ಲಿ ಪ್ರಚಾರ ಸಭೆಗಳು ನಡೆಯಲಿವೆ ಎಂದು ತಿಳಿದುಬಂದಿದೆ.



Leave a Comment: