ಪುತ್ತೂರು :ಭೀಕರ ಅಪಘಾತ - 10 ಕ್ಕೂ ಹೆಚ್ಚು ವಾಹನಗಳು ಪುಡಿ ಪುಡಿ

ಸುದ್ದಿಗಳು News

Posted by vidyamaana on 2024-05-27 18:41:30 |

Share: | | | | |


ಪುತ್ತೂರು :ಭೀಕರ ಅಪಘಾತ - 10 ಕ್ಕೂ  ಹೆಚ್ಚು ವಾಹನಗಳು ಪುಡಿ ಪುಡಿ

ಪುತ್ತೂರು : ಪುತ್ತೂರಿನ ಹೊರ ವಲಯದ ಸಂಟ್ಯಾರಿನಲ್ಲಿ ಭೀಕರ ಅಪಘಾತ ನಡೆದು 10ಕ್ಕೂ ಹೆಚ್ಚು ವಾಹನಗಳು ಪುಡಿ ಪುಡಿಯಾದ ಘಟನೆ ಮೇ.27ರಂದು ಸಂಜೆ ನಡೆದಿದೆ. 

ಪಾಣಾಜೆ - ಸಂಟ್ಯಾರ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಸಂಟ್ಯಾರ್ ಜಂಕ್ಷನ್ ನಲ್ಲಿ ನಿಲ್ಲಿಸಿದ್ದ ಹತ್ತಕ್ಕೂ ಹೆಚ್ಚು ಬೈಕ್ ಗಳು ಪುಡಿ ಪುಡಿಯಾಗಿ ಚೆಲ್ಲಪಿಲ್ಲಿಯಾಗಿದೆ. 


ಪಾಣಾಜೆ ಕಡೆಯಿಂದ ಅತೀ ವೇಗದಲ್ಲಿ ಬರುತಿದ್ದ ಕಾರೊಂದು  ಈ ಹತ್ತಕ್ಕೂ ಹೆಚ್ಚು ದ್ವಿಚಕ್ರ ವಾಹನಗಳಿಗೆ ಡಿಕ್ಕಿಯಾಗಿದೆ. ಸಂಟ್ಯಾರ್ ಜಂಕ್ಷನ್ ನಲ್ಲಿ   ವಾಹನ ನಿಲ್ಲಿಸಿ ಬಸ್ ನಲ್ಲಿ ಉದ್ಯೋಗಕ್ಕೆ ತೆರಳುವವರ 10 ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಪುಡಿ ಪುಡಿಯಾಗಿ ಚೆಲ್ಲಪಿಲ್ಲಿಯಾಗಿದೆ.

 Share: | | | | |


ಅಂಕಪಟ್ಟಿ ನೈಜತೆ ಪರಿಶೀಲನೆ ಶುಲ್ಕದಲ್ಲಿ ವಿನಾಯಿತಿ: ಶಾಸಕ ಅಶೋಕ್ ಕುಮಾರ್ ರೈ ಕಾರ್ಯಕ್ಕೆ ಅಭಿನಂದನೆ

Posted by Vidyamaana on 2023-05-26 10:10:57 |

Share: | | | | |


ಅಂಕಪಟ್ಟಿ ನೈಜತೆ ಪರಿಶೀಲನೆ ಶುಲ್ಕದಲ್ಲಿ ವಿನಾಯಿತಿ: ಶಾಸಕ ಅಶೋಕ್ ಕುಮಾರ್ ರೈ ಕಾರ್ಯಕ್ಕೆ ಅಭಿನಂದನೆ

ಪುತ್ತೂರು: ಅಂಕಪಟ್ಟಿ ನೈಜತೆ ಪರಿಶೀಲನೆಯ ದುಬಾರಿ ಶುಲ್ಕದ ಬಗ್ಗೆ ಶಾಸಕ ಅಶೋಕ್ ಕುಮಾರ್ ರೈ ಅವರ ಗಮನಕ್ಕೆ ತಂದಾಗ, ಕುಲ ಸಚಿವರ ಜೊತೆ ಮಾತನಾಡಿ ಶುಲ್ಕ ಕಡಿಮೆ ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಡ ವಿದ್ಯಾರ್ಥಿಗಳ, ಬಡ ಉದ್ಯೋಗ ಆಕಾಂಕ್ಷಿತರ ಪರವಾಗಿ ಧ್ವನಿ ಎತ್ತಿದ ಅಶೋಕ್ ಕುಮಾರ್ ರೈ ಅವರ ಕಾರ್ಯ ಅಭಿನಂದನಾರ್ಹ ಎಂದು ಜಿ.ಪಿ.ಎಸ್.ಟಿ.ಆರ್. (ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷಾ) ಅಭ್ಯರ್ಥಿ ಗಣೇಶ್ ತಿಳಿಸಿದ್ದಾರೆ.

ಉದ್ಯೋಗಕ್ಕಾಗಿ ಅಂಕಪಟ್ಟಿ ನೈಜತೆ ಪರಿಶೀಲನೆಯನ್ನು ವಿಶ್ವವಿದ್ಯಾಲಯ ಮಾಡುತ್ತದೆ. ಹೀಗೆ ಒಂದು ಅಂಕಪಟ್ಟಿಯ ಪರಿಶೀಲನೆಗೆ 1500 ರೂ. ಶುಲ್ಕ ವಿಧಿಸಲಾಗುತ್ತದೆ. ಅಂದರೆ ಎಲ್ಲಾ ಅಂಕಪಟ್ಟಿಗಳ ನೈಜತೆ ಪರಿಶೀಲನೆಗೆ 13500 ರೂ. ಶುಲ್ಕ ತಗುಲುತ್ತದೆ. ಉದ್ಯೋಗಕ್ಕಾಗಿ ಹಾತೊರೆಯುವ ಅಭ್ಯರ್ಥೀಗಳು ಇಷ್ಟು ದೊಡ್ಡ ಮೊತ್ತವನ್ನು ಪಾವತಿಸಲು ಪರದಾಡುವ ಪರಿಸ್ಥಿತಿ ಇದೆ. ಆದ್ದರಿಂದ ಇದರ ಬಗ್ಗೆ ಸಂಬಂಧಪಟ್ಟವರ ಗಮನಕ್ಕೆ ತಂದು, ಶುಲ್ಕ ಕಡಿಮೆ ಮಾಡುವಂತೆ ಶಾಸಕರಾಗಿ ಆಯ್ಕೆಯಾಗಿರುವ ಅಶೋಕ್ ಕುಮಾರ್ ರೈ ಅವರಿಗೆ ಫೋನ್ ಮಾಡಿ ತಿಳಿಸಲಾಗಿತ್ತು.

ಕೂಡಲೇ ಸ್ಪಂದಿಸಿದ ಶಾಸಕ ಅಶೋಕ್ ಕುಮಾರ್ ರೈ ಅವರು, ಮಂಗಳೂರು ವಿಶ್ವವಿದ್ಯಾಲಯದ ಕುಲ ಸಚಿವರ ಜೊತೆ ಮಾತನಾಡಿದ್ದರು. ಇದರ ಪರಿಣಾಮ ಎಂಬಂತೆ ನಿನ್ನೆ ನಡೆದ ಸಿಂಡಿಕೇಟ್ ಸಭೆ ಅಂಕಪಟ್ಟಿ ನೈಜತೆ ಪರಿಶೀಲನೆಯ ಶುಲ್ಕವನ್ನು ಕಡಿಮೆ ಮಾಡಲು ಅನುಮೋದನೆ ನೀಡಲಾಗಿದೆ. ಹೀಗಾಗಿ 1500 ರೂ. ಇದ್ದ ಶುಲ್ಕವನ್ನು 500 ರೂ.ಗೆ ಇಳಿಸಲಾಗಿದೆ. ಇದಕ್ಕೆ ಕಾರಣರಾದ ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಅಭಿನಂದನೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೆಟ್ಟದ ತುದಿಯಲ್ಲಿ ಸ್ಟಂಟ್ ಮಾಡಿ ಪ್ರಪಾತಕ್ಕೆ ಬಿದ್ದ ಯುವಕ; ವಿಡಿಯೋ ವೈರಲ್

Posted by Vidyamaana on 2024-04-11 19:15:04 |

Share: | | | | |


ಬೆಟ್ಟದ ತುದಿಯಲ್ಲಿ ಸ್ಟಂಟ್ ಮಾಡಿ ಪ್ರಪಾತಕ್ಕೆ ಬಿದ್ದ ಯುವಕ; ವಿಡಿಯೋ ವೈರಲ್

ವೈರಲ್:‌ ಯುವಕನೋರ್ವ ಬೆಟ್ಟದ ತುದಿಯಲ್ಲಿ ನಿಂತು ಸ್ಟಂಟ್​ ಮಾಡುವಾಗ ಬ್ಯಾಲೆನ್ಸ್ ಸಿಗದೆ ಮುಂದಕ್ಕೆ ಹೋಗಿ ಪಾತಾಳಕ್ಕೆ ಬಿದ್ದಿರುವ ಘಟನೆಯೊಂದು ನಡೆದಿದೆ.ಯುವಕರಿಬ್ಬರು ಬೆಟ್ಟದ ತುದಿಗೆ ಹೋಗಿದ್ದಾರೆ. ಈ ವೇಳೆ ಅಲ್ಲಿ ಸ್ಟಂಟ್​ಗಳನ್ನ ಮಾಡುತ್ತಿರುತ್ತಾರೆ. ಆಗ ಇಬ್ಬರ ಪೈಕಿ ಒಬ್ಬ ಯುವಕ ಬೆಟ್ಟದ ತುದಿಯಲ್ಲಿ ನಿಂತು ಬ್ಯಾಕ್ ಫ್ಲಿಪ್​ ಹೊಡೆಯುತ್ತಾನೆ.

ಪುತ್ತೂರಿನಲ್ಲಿ ಇಂದು ಬೆಳಿಗ್ಗೆಯಿಂದ ಕರೆಂಟ್ ಕಟ್

Posted by Vidyamaana on 2023-09-12 04:47:25 |

Share: | | | | |


ಪುತ್ತೂರಿನಲ್ಲಿ ಇಂದು ಬೆಳಿಗ್ಗೆಯಿಂದ ಕರೆಂಟ್ ಕಟ್

ಪುತ್ತೂರು: 110/33/11ಕೆವಿ ಮಾಡಾವು ವಿದ್ಯುತ್‌ ಉಪಕೇಂದ್ರದಲ್ಲಿ 110ಕೆ.ವಿ ಮತ್ತು 33 ಕೆ.ವಿ ಲೈನ್ ಬೇ ಯ ಪಾಲನಾ ಕಾರ್ಯ ಹಮ್ಮಿಕೊಂಡಿರುವುದರಿಂದ ಸೆ.12ರಂದು ಮಂಗಳವಾರ ಪೂರ್ವಾಹ್ನ 10ರಿಂದ ಸಾಯಂಕಾಲ 4 ಗಂಟೆಯವರೆಗೆ 336.0 ಮಾಡಾವು–ಬೆಳ್ಳಾರೆ, 33ಕೆವಿ ಮಾಡಾವು-ಬೆಳ್ಳಾರೆ ಗುತ್ತಿಗಾರು, 33ಕೆವಿ ಮಾಡಾವು-ಕಾವು-ಸುಳ್ಯ ವಿದ್ಯುತ್ ಮಾರ್ಗಗಳ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದ್ದರಿಂದ 110/33/11 ಕೆವಿ ಮಾಡಾವು ಹಾಗೂ 33/11ಕಪ್ ಸುಳ್ಯ, ಕಾವು, ಬೆಳ್ಳಾರೆ ಮತ್ತು ಗುತ್ತಿಗಾರು ವಿದ್ಯುತ್‌ ಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್‌ಗಳಿಂದ ವಿದ್ಯುತ್‌ ಸರಬರಾಜಾಗುವ ವಿದ್ಯುತ್‌ ಬಳಕೆದಾರರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಯತ್ನಾಳ್ ಒಬ್ಬ ದ್ವೇಷದ ರಾಜಕಾರಣಿ: ಸಿಎಂ ಸಿದ್ದರಾಮಯ್ಯ

Posted by Vidyamaana on 2023-12-07 13:15:26 |

Share: | | | | |


ಯತ್ನಾಳ್ ಒಬ್ಬ ದ್ವೇಷದ ರಾಜಕಾರಣಿ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಯತ್ನಾಳ್ ಒಬ್ಬ ದ್ವೇಷದ ರಾಜಕಾರಣಿ, ಮಹಾನ್ ಸುಳ್ಳುಗಾರ, ಚುನಾವಣೆ ಗೆಲ್ಲಲು ಈ ರೀತಿ ಮಾತಾಡಬಾರದು ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.


ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಐಸಿಸ್ ನಂಟಿರುವ ಪೀರಾ ಮೌಲಿ ಜೊತೆ ವೇದಿಕೆ ಹಂಚಿಕೊಂಡಿದ್ದಾರೆ ಎಂಬ ಬಿಜೆಪಿ ನಾಯಕ ಯತ್ನಾಳ್ ಆರೋಪಕ್ಕೆ ತಿರುಗೇಟು ಕೊಟ್ಟಿದ್ದಾರೆ. ಅವರ ಜೊತೆಗೆ ನನಗೆ ಬಹಳ ವರ್ಷಗಳ ಸಂಬಂಧ ಇದೆ. ಆಗೆಲ್ಲ ಯಾಕೆ ಅವರು ಸುಮ್ಮನಿದ್ದರು? ಪೀರಾ ಮೌಲಿ ಅವರು ಆರೋಪ ಸಾಬೀತು ಮಾಡಿ ಎಂದು ಹೇಳಿದ್ದಾರೆ.


ಕೇಂದ್ರದಲ್ಲಿ ಅವರದ್ದೇ ಸರ್ಕಾರ ಇದೆ ಅದನ್ನು ಸಾಬೀತು ಮಾಡಲಿ ಎಂದು ಸವಾಲು ಹಾಕಿದ್ದಾರೆ. ಈಗ ಆರೋಪ ಮಾಡುತ್ತಿರುವ ಯತ್ನಾಳ್, ಅವರದ್ದೇ ಸರ್ಕಾರ ಇದ್ದಾಗ ಏನು ಮಾಡ್ತಿದ್ರು? ಅವರು ಬಿಜೆಪಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದರು. ವಿರೋಧ ಪಕ್ಷದ ನಾಯಕನ ಸ್ಥಾನಕ್ಕೂ ಪ್ರಯತ್ನ ಮಾಡಿದ್ದರು. ಎರಡೂ ಸಿಗಲಿಲ್ಲ ಅದಕ್ಕೆ ಈಗ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಬೆಂಗಳೂರು: ವಿದ್ಯಾರ್ಥಿನಿಯ ಅತ್ಯಾಚಾರಕ್ಕೆ ಯತ್ನ ಪ್ರಕರಣ: ತಮಿಳುನಾಡು ಮೂಲದ ಕೊರಿಯೋಗ್ರಾಫರ್ ಬಂಧನ

Posted by Vidyamaana on 2024-08-20 07:29:13 |

Share: | | | | |


ಬೆಂಗಳೂರು: ವಿದ್ಯಾರ್ಥಿನಿಯ ಅತ್ಯಾಚಾರಕ್ಕೆ ಯತ್ನ ಪ್ರಕರಣ: ತಮಿಳುನಾಡು ಮೂಲದ ಕೊರಿಯೋಗ್ರಾಫರ್ ಬಂಧನ

ಬೆಂಗಳೂರು : ಲಿಫ್ಟ್ ಪಡೆದಿದ್ದ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ಪ್ರಕರಣ ಸಂಬಂಧ ಆರೋಪಿಯನ್ನು ಇಲ್ಲಿನ ಎಚ್‍ಎಸ್‍ಆರ್ ಲೇಔಟ್ ಠಾಣೆ ಪೊಲೀಸರು ಬಂಧಿಸಿರುವುದಾಗಿ ತಿಳಿಸಿದ್ದಾರೆ.ಬಂಧಿತನನ್ನು ತಮಿಳುನಾಡು ಮೂಲದ ಮುಕೇಶ್ವರನ್(24) ಎಂದು ಗುರುತಿಸಲಾಗಿದೆ.ಆರೋಪಿಯು ನಗರದಲ್ಲಿ ಡ್ಯಾನ್ಸ್ ಕೊರಿಯೋಗ್ರಾಫರ್ ಆಗಿ ಕೆಲಸ ಮಾಡಿಕೊಂಡಿದ್ದ. ಕೃತ್ಯದ ಬಳಿಕ ಆಡುಗೋಡಿಯ ತನ್ನ ಮನೆಯಲ್ಲಿದ್ದ ಎಂದು ಪೊಲೀಸರು ಹೇಳಿದ್ದಾರೆ.

ವರಿಷ್ಠರ ಭೇಟಿಗೆ ವಿಜಯೇಂದ್ರ, ಅಶೋಕ್‌ ಡಿ.1ರಂದು ದೆಹಲಿಗೆ

Posted by Vidyamaana on 2023-11-28 17:08:52 |

Share: | | | | |


ವರಿಷ್ಠರ ಭೇಟಿಗೆ ವಿಜಯೇಂದ್ರ, ಅಶೋಕ್‌ ಡಿ.1ರಂದು ದೆಹಲಿಗೆ

ಬೆಂಗಳೂರು (ನ.28) ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್ ಅವರು ಡಿ.1ರಂದು ಶುಕ್ರವಾರ ಪಕ್ಷದ ವರಿಷ್ಠರನ್ನು ಭೇಟಿ ಮಾಡುವ ಸಂಬಂಧ ದೆಹಲಿಗೆ ತೆರಳಲಿದ್ದಾರೆ. ವಿಜಯೇಂದ್ರ ಅವರು ರಾಜ್ಯಾಧ್ಯಕ್ಷರಾದ ಬಳಿಕ ಮತ್ತು ಅಶೋಕ್ ಅವರು ಪ್ರತಿಪಕ್ಷದ ನಾಯಕರಾದ ನಂತರ ಇದೇ ಮೊದಲ ಬಾರಿಗೆ ದೆಹಲಿಗೆ ಭೇಟಿ ನೀಡುತ್ತಿದ್ದಾರೆ.ಪಕ್ಷದ ವರಿಷ್ಠರನ್ನು ಭೇಟಿ ಮಾಡಿ ಧನ್ಯವಾದ ತಿಳಿಸುವುದರ ಜತೆಗೆ ಕೋರ್ ಕಮಿಟಿ ಪುನಾರಚನೆ, ರಾಜ್ಯ ಘಟಕಕ್ಕೆ ನೂತನ ಪದಾಧಿಕಾರಿಗಳ ನೇಮಕ, ವಿಧಾನಸಭೆಯ ಉಪನಾಯಕ, ಮುಖ್ಯ ಸಚೇತಕ, ವಿಧಾನಪರಿಷತ್ತಿನ ಪ್ರತಿಪಕ್ಷದ ನಾಯಕ, ಉಪನಾಯಕ ಮತ್ತು ಮುಖ್ಯ ಸಚೇತಕ ಹುದ್ದೆಗಳಿಗೆ ಯಾರನ್ನು ಆಯ್ಕೆ ಮಾಡಬೇಕು ಎಂಬುದರ ಬಗ್ಗೆ ಸಮಾಲೋಚನೆ ನಡೆಸುವ ಸಾಧ್ಯತೆಯಿದೆ ಎಂದು ಮುೂಲಗಳು ತಿಳಿಸಿವೆ.ಅಲ್ಲದೆ, ಉಭಯ ನಾಯಕರ ನೇಮಕಕ್ಕೆ ಸಂಬಂಧಿಸಿದಂತೆ ಬೃಹತ್ ಸಮಾವೇಶ ಆಯೋಜಿಸುವ ಉದ್ದೇಶವನ್ನು ಹೊಂದಲಾಗಿದೆ. ಹೀಗಾಗಿ, ಈ ಸಮಾವೇಶದ ದಿನಾಂಕ, ರಾಷ್ಟ್ರೀಯ ನಾಯಕರ ಲಭ್ಯತೆ ಆಧರಿಸಿ ಅವರನ್ನು ಆಹ್ವಾನಿಸುವ ಬಗ್ಗೆಯೂ ಚರ್ಚೆ ನಡೆಯುವ ನಿರೀಕ್ಷೆಯಿದೆ.


ಜತೆಗೆ ಪಕ್ಷದ ಸಂಘಟನೆ ಬಲಪಡಿಸುವ ಕುರಿತಂತೆ ಹೋರಾಟಗಳನ್ನು ಹಮ್ಮಿಕೊಳ್ಳುವ ಬಗ್ಗೆ ವರಿಷ್ಠರಿಂದ ಸಲಹೆ- ಸೂಚನೆಗಳನ್ನು ಪಡೆಯಬಹುದು. ಮುಖ್ಯವಾಗಿ ಪಕ್ಷ ತೊರೆಯಲು ಸಜ್ಜಾಗಿರುವ ಕೆಲವು ನಾಯಕರನ್ನು ಹೇಗೆ ಉಳಿಸಿಕೊಳ್ಳಬೇಕು ಎಂಬುದರ ಬಗ್ಗೆ ವಿಜಯೇಂದ್ರ ಅವರು ವರಿಷ್ಠರೊಂದಿಗೆ ಮಾತುಕತೆ ನಡೆಸುವ ಸಂಭ‍ವ ಹೆಚ್ಚಾಗಿದೆ ಎನ್ನಲಾಗಿದೆ.



Leave a Comment: