ಉಳಾಯಿಬೆಟ್ಟು ದರೋಡೆ ಪ್ರಕರಣ ; ಕೋಟ್ಯಾನ್ ಲಾರಿ ಚಾಲಕ ವಸಂತ ಸೂತ್ರಧಾರ, ಕೇರಳದ ತಂಡ ಸೇರಿ ಹತ್ತು ಮಂದಿ ಅರೆಸ್ಟ್

ಸುದ್ದಿಗಳು News

Posted by vidyamaana on 2024-07-05 07:31:37 |

Share: | | | | |


ಉಳಾಯಿಬೆಟ್ಟು ದರೋಡೆ ಪ್ರಕರಣ  ; ಕೋಟ್ಯಾನ್ ಲಾರಿ ಚಾಲಕ ವಸಂತ ಸೂತ್ರಧಾರ,  ಕೇರಳದ ತಂಡ ಸೇರಿ ಹತ್ತು ಮಂದಿ ಅರೆಸ್ಟ್

ಮಂಗಳೂರು: ಮಂಗಳೂರು ನಗರದ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಂಗಳೂರು ಹೊರವಲಯದ ಪೆರ್ಮಂಕಿ ಪರಿಸರದಲ್ಲಿ ಉದ್ಯಮಿ ಹಾಗೂ ಸಾಮಾಜಿಕ ಮುಖಂಡ ಪದ್ಮನಾಭ ಕೋಟ್ಯಾನ್ ಮನೆ ದರೋಡೆ ನಡೆಸಿದ ಆರೋಪದಲ್ಲಿ ಮಂಗಳೂರು ಪೊಲೀಸರು 10 ಮಂದಿಯನ್ನು ಸೆರೆಹಿಡಿದಿದ್ದಾರೆ. ಇವರಲ್ಲಿ ಉದ್ಯಮಿಯ ಲಾರಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ನೀರಮಾರ್ಗ ಗ್ರಾಮ ನಿವಾಸಿ ವಸಂತಕುಮಾರ್ (42) ಒಳಗೊಂಡಿದ್ದಾನೆ.

ಮಾಧ್ಯಮಗಳೊಂದಿಗೆ ಮಾತನಾಡಿದ ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್, ಬಂಧಿತರನ್ನು ನೀರಮಾರ್ಗದ ವಸಂತಕುಮಾರ್ (42), ನೀರಮಾರ್ಗದ ರಮೇಶ್ (42), ಬಂಟ್ವಾಳದ ಬಾಲಕೃಷ್ಣ ರೇಮಂಡ್ ಡಿಸೋಜಾ (47) ಎಂದು ಗುರುತಿಸಲಾಗಿದೆ. ಕಾಸರಗೋಡಿನಿಂದ (48), ತ್ರಿಶೂರಿನ ಜಾಕೀರ್ ಹುಸೇನ್ (56), ತ್ರಿಶೂರ್‌ನಿಂದ ವಿನೋಜ್ (38), ತ್ರಿಶೂರ್‌ನಿಂದ ಸಜೀಶ್ ಎಂಎಂ (32), ತಿರುವನಂತಪುರದಿಂದ ಬಿಜು ಜಿ (41), ತ್ರಿಶೂರ್‌ನಿಂದ ಸತೀಶ್ ಬಾಬು (44), ಮತ್ತು ಶಿಜೋ ದೇವಸಿ (38) ಇದರಲ್ಲಿ 7 ಮಂದಿ ಕೇರಳ ಮೂಲದವರಾಗಿದ್ದಾರೆ.

ಮಂಗಳೂರು ನಗರದ ಉಳಾಯಿಬೆಟ್ಟು ಪೆರ್ಮಂಕಿ ನಿವಾಸಿ ಉದ್ಯಮಿ ಪದ್ಮನಾಭ ಕೋಟ್ಯಾನ್ ಅವರು ಜೂನ್ 21ರಂದು ಸಂಜೆ ಸುಮಾರು 7.45ಕ್ಕೆ ಮನೆಯಲ್ಲಿದ್ದ ವೇಳೆ ಸುಮಾರು 10ರಿಂದ 12 ಮಂದಿ ಆರೋಪಿಗಳು ಆಗಮಿಸಿ, ಚೂರಿಯಿಂದ ಪದ್ಮನಾಭ ಕೋಟ್ಯಾನ್ ಮೇಲೆ ಹಲ್ಲೆ ನಡೆಸಿ, ನಂತರ, ಅವರ ಪತ್ನಿ ಮತ್ತು ಮಗನನ್ನು ಕಟ್ಟಿಹಾಕಿ, ನಗದು, ಹಣ, ಒಡವೆ ಸೇರಿ ಬೆಲೆಬಾಳುವ ಸೊತ್ತುಗಳನ್ನು ದರೋಡೆ ಮಾಡಿದ್ದರು.


ಘಟನೆಯಲ್ಲಿ ವಸಂತಕುಮಾರ್, ಉದ್ಯಮಿಯ ವ್ಯವಹಾರ ಮತ್ತು ಮನೆಯ ಮಾಹಿತಿಯನ್ನು ಇನ್ನೋರ್ವ ಆರೋಪಿ ರಮೇಶ್ ಪೂಜಾರಿಗೆ ನೀಡಿದ್ದು, ಆರೋಪಿ ರಮೇಶ್ ಪೂಜಾರಿ ಮತ್ತು ರೇಮಂಡ್ ಡಿಸೋಜಾ ಇನ್ನೋರ್ವ ಆರೋಪಿ ಬಾಲಕೃಷ್ಣ ಶೆಟ್ಟಿಗೆ ಉದ್ಯಮಿಯ ಮನೆಯ ಹಾಗೂ ವ್ಯವಹಾರದ ಮಾಹಿತಿ ನೀಡಿದ್ದಾರೆ. ಅದರಂತೆ ಬಾಲಕೃಷ್ಣ ಶೆಟ್ಟಿ ತನ್ನ ಸ್ನೇಹಿತ ಕೇರಳದ ವ್ಯಕ್ತಿಯೊಂದಿಗೆ ದರೋಡೆ ನಡೆಸಲು ಸಂಚು ರೂಪಿಸಿ,ಮನೆಯ ಮಾಹಿತಿಯನ್ನು ನೀಡಿ, ಆರೋಪಿಗಳನ್ನು ಮಂಗಳೂರಿಗೆ ಕರೆಯಿಸಿಕೊಂಡು ದರೋಡೆ ನಡೆಸಿದ್ದಾಗಿ ತಿಳಿದುಬಂದಿದೆ ಎಂದು ಕಮೀಷನರ್ ಹೇಳಿದ್ದಾರೆ.ಕೃತ್ಯದಲ್ಲಿ 15ಕ್ಕೂ ಅಧಿಕ ಆರೋಪಿಗಳು ಭಾಗಿಯಾಗಿರುವುದು ತನಿಖೆಯಿಂದ ಕಂಡುಬಂದಿದೆ. ಆರೋಪಿಗಳ ಪೈಕಿ ಬಿಜು ಹಾಗೂ ಸತೀಶ್ ಬಾಬು ಎರಡು ತಂಡ ಗಳನ್ನು ಮಂಗಳೂರಿಗೆ ಕಳಿಸಿ, ದರೋಡೆಗೆ ಸಂಚು ರೂಪಿಸಿ ದರೋಡೆ ಕೃತ್ಯ ನಡೆಸಿದ್ದಾರೆ.

ಮೊದಲೇ ಕೇಸ್ ಇತ್ತು

ಆರೋಪಿಗಳ ಪೈಕಿ ವಸಂತ ಕುಮಾರ್ ವಿರುದ್ಧ 2011ನೇ ಇಸವಿಯಲ್ಲಿ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಿಡ್ನಾಪ್ ಪ್ರಕರಣ ದಾಖಲಾಗಿದ್ದರೆ, ಜಾಕೀರ್ ಎಂಬಾತನ ವಿರುದ್ಧ ಕೇರಳದಲ್ಲಿ ಹಲ್ಲೆ ಪ್ರಕರಣ ದಾಖಲಾಗಿದೆ. ಸತೀಶ್ ಬಾಬು ವಿರುದ್ಧ ತ್ರಿಶೂರ್ ಜಿಲ್ಲೆಯಲ್ಲಿ ಶಾಜಿ ಎಂಬಾತನ ಕೊಲೆ ಪ್ರಕರಣ ದಾಖಲಾಗಿದೆ. ಬಿಜು ವಿರುದ್ಧ ಅಬಕಾರಿ ಕಾಯ್ದೆಗೆ ಸಂಬಂಧಿಸಿದ ಪ್ರಕರಣಗಳು ದಾಖಲಾಗಿವೆ.

ಜೂನ್ 21ರಂದು ಎಂಟರಿಂದ ಒಂಬತ್ತು ಮಂದಿ ಮುಸುಕುಧಾರಿಗಳು ಮನೆಗೆ ನುಗ್ಗಿ ಗುತ್ತಿಗೆದಾರ ಪದ್ಮನಾಭ ಕೋಟ್ಯಾನ್ ರವರನ್ನು ಕಟ್ಟಿ ಹಾಕಿ ಥಳಿಸಿದ್ದು ಹಾಗೂ ಪತ್ನಿ, ಮಕ್ಕಳನ್ನು ಬೆದರಿಸಿ 9 ಲಕ್ಷ ಮೌಲ್ಯದ ನಗದು ಹಾಗೂ ಚಿನ್ನಾಭರಣ ದೋಚಿ ಮನೆಯ ವಾಹನದಲ್ಲೇ ಅಲ್ಪ ದೂರದ ವರೆಗೆ ಪ್ರಯಾಣಿಸಿ ನಂತರ ಅವರ ವಾಹನವನ್ನು ಮಧ್ಯದಲ್ಲೇ ಬಿಟ್ಟು ಇನ್ನೋವಾದಲ್ಲಿ ಪರಾರಿಯಾಗಿದರು. ನಾಲ್ವರು ಸ್ಥಳೀಯ ಆರೋಪಿಗಳಾದ ವಸಂತ್, ರಮೇಶ್, ರೇಮಂಡ್ ಮತ್ತು ಬಾಲಕೃಷ್ಣ ದರೋಡೆಗೆ ಯೋಜನೆ ರೂಪಿಸಿದ್ದರು. ಬಾಲಕೃಷ್ಣ ನಂತರ ಜಾನ್ ಬಾಸ್ಕೋ ನೇತೃತ್ವದ ಕೇರಳ ತಂಡದೊಂದಿಗೆ ಸಂಪರ್ಕ ಹೊಂದಿದ್ದರು.

ಎಂಟು ತಿಂಗಳ ಹಿಂದೆಯೇ ಯೋಜನೆ ರೂಪಿಸಲಾಗಿತ್ತು. ಕೇರಳದ ತಂಡ ಮಂಗಳೂರಿಗೆ ಭೇಟಿ ನೀಡಿದ್ದು, ದರೋಡೆಗೆ ಪ್ರದೇಶದ ಸ್ಕೆಚ್ ಮತ್ತು ನಕ್ಷೆಯನ್ನು ಸಿದ್ಧಪಡಿಸುವಂತೆ ರಮೇಶ್ ಮತ್ತು ವಸಂತ್ ಅವರನ್ನು ಕೇಳಿದ್ದರು ಅದರಂತೆಯೇ ಗುತ್ತಿಗೆದಾರನ ಬಳಿ 100 ರಿಂದ 300 ಕೋಟಿ ರೂ.ಗೂ ಹೆಚ್ಚು ಹಣವಿದೆ ಎಂದು ಸ್ಥಳೀಯ ಆರೋಪಿಗಳು ಕೇರಳ ತಂಡಕ್ಕೆ ತಿಳಿಸಿದ್ದು ಲೂಟಿಹೊಡೆಯಲು ಎಲ್ಲಾ ರೀತಿಯ ಸ್ಕೆಚ್ ತಯಾರಿಸಿದ್ದರು.

ಈ ಪ್ರಕರಣದಲ್ಲಿ ಇನ್ನೂ 4-5 ಮಂದಿಯನ್ನು ಬಂಧಿಸಬೇಕಿದ್ದು 100ರಿಂದ 300 ಕೋಟಿ ಲೂಟಿ ಮಾಡಬಹುದೆಂದು ನಂಬಿಸಿ ಮಾಸ್ಟರ್‌ ಬೆಡ್‌ರೂಮ್‌ನ ಟೈಲ್ಸ್‌ ತೆಗೆಯಲು 20ಕ್ಕೂ ಹೆಚ್ಚು ಗೋಣಿ ಚೀಲಗಳು ಮತ್ತು ಸಲಕರಣೆಗಳನ್ನು ತಂದಿದ್ದರು. ಒಂದೇ ಒಂದು ಸುಳಿವೇ ಇಲ್ಲದ ಕುರುಡು ಪ್ರಕರಣವಾಗಿರುವುದರಿಂದ ಆರೋಪಿಗಳ ಪತ್ತೆಗೆ ಪೊಲೀಸರು ಮೂರು ತಂಡಗಳನ್ನು ರಚಿಸಿದ್ದರು. ಕಳೆದ 15 ದಿನಗಳಿಂದ ಈ ಪ್ರಕರಣವನ್ನು ಭೇದಿಸಲು ಅವಿರತವಾಗಿ ಶ್ರಮಿಸಿದ ಡಿಸಿಪಿ, ಎಸಿಪಿ ಮತ್ತು ಸಿಸಿಬಿ ಸಿಬ್ಬಂದಿಯನ್ನು ನಾನು ಅಭಿನಂದಿಸುತ್ತೇನೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

 Share: | | | | |


ಬಡವರ ಪರ ವಿಧಾನಸಭೆಯಲ್ಲಿ ಧ್ವನಿ ಶಾಸಕ ಅಶೋಕ್ ರೈಗೆ ಸೇವಾಭಾರತಿ ಅಭಿನಂದನೆ

Posted by Vidyamaana on 2023-07-27 10:37:01 |

Share: | | | | |


ಬಡವರ ಪರ ವಿಧಾನಸಭೆಯಲ್ಲಿ ಧ್ವನಿ  ಶಾಸಕ ಅಶೋಕ್ ರೈಗೆ ಸೇವಾಭಾರತಿ ಅಭಿನಂದನೆ

ಪುತ್ತೂರು: ಬೆನ್ನುಮೂಲೆ ಮುರಿತಕ್ಕೊಳಗಾಗಿ ಬೆಡ್ ನಲ್ಲೇ ಕಾಲ ಕಳೆಯುತ್ತಿರುವವರ ನೋವನ್ನು ವಿಧಾನಸಭೆಯಲ್ಲಿ ಪ್ರಸ್ತಾಪ ಮಡಿದ್ದೀರಿ, ಇದೇ ವಿಚಾರವನ್ನು ವಿಧಾನಸಭೆಯಲ್ಲಿ ಮಾತನಾಡಿ ಎಂದು ನಮ್ಮ ಸಂಸ್ಥೆಯ ವತಿಯಿಂದ ೪೦ ಶಾಸಕರಲ್ಲಿ ವಿನಂತಿ ಮಾಡಿದ್ದೆವು ಆದರೆ ಯಾರೂ ಇವರ ಪರ ಧ್ವನಿ ಎತ್ತಿರಲಿಲ್ಲ, ಯಾರೂ ಹೇಳದೆ ಸ್ವಯಂ ಆಗಿ ಬಡವರ ಪರ ಮಾತನಾಡಿದ್ದೀರಿ ಎಂದು ಪುತ್ತೂರು ಶಾಸಕರಾದ ಅಶೋಕ್ ರೈಯವರನ್ನು ಕನ್ಯಾಡಿಯ ಸೇವಾ ಭಾರತಿ ಸಂಸ್ಥೆಯವರು ಕಚೇರಿಗೆ ಆಗಮಿಸಿ ಅಭಿನಂದನೆಯನ್ನು ಸಲ್ಲಿಸಿದ್ದಾರೆ.

ಪುತ್ತೂರಿನಲ್ಲಿರುವ ಶಾಸಕರ ಚುನಾವಣಾ ಕಚೇರಿಗೆ ಭೇಟಿ ನೀಡಿದ ಸಂಸ್ಥೆಯ ಪ್ರಮುಖರು ಬೆನ್ನುಮುಲೆ ಮುರಿತಕ್ಕೊಳಗಾದವರ ಜೀವನದ ಸಂಕಷ್ಟ ಅರಿತು ಅವರಿಗೆ ತಿಂಗಳಿಗೆ ೫ ಸಾವಿರ ಮಾಸಾಶನ ನೀಡಬೇಕೆಂದು ವಿಧನಸಭೆಯಲ್ಲಿ ಮೊದಲ ಬಾರಿಗೆ ಪ್ರಸ್ತಾಪ ಮಾಡಲಾಗಿದೆ. ಈ ಪ್ರಸ್ತಾಪವನ್ನು ಸರಕಾರ ಬೆಂಬಲಿಸಿ ಅವರಿಗೆ ಮಾಸಾಶನ ಬಂದಲ್ಲಿ ಅವರಿಗೊಂದು ಉತ್ತಮ ಜೀವನ ದೊರೆಯಲಿದೆ ಎಂದು ಸಂಸ್ಥೆಯ ಪ್ರಮುಖರು ಶಾಸಕರಲ್ಲಿ ಹೇಳಿಕೊಂಡರು. ಈ ಸಂದರ್ಭದಲ್ಲಿ ಸೇವಾ ಭಾರತಿ ಸಂಸ್ಥೆಯ ಸ್ಥಾಪಕಾಧ್ಯಕ್ಷ ವಿನಾಯಕ ರಾವ್,  ಕಾರ್ಯದರ್ಶಿಬಾಲಕೃಷ್ಣ, ವ್ಯವಸ್ಥಾಪಕ ಚರಣ್‌ಕುಮಾರ್ ಉಪಸ್ಥಿತರಿದ್ದರು.

ವಂಚನೆ ಪ್ರಕರಣ ; ಆರೋಪಿ ಚೈತ್ರಾ ಜೊತೆಗೆ ಕುಂದಾಪುರ ಸ್ಥಳನಾಮ ಬಳಸದಂತೆ ಮಾಧ್ಯಮಗಳಿಗೆ ಕೋರ್ಟ್​​ ತಡೆಯಾಜ್ಞೆ

Posted by Vidyamaana on 2023-09-24 07:16:32 |

Share: | | | | |


ವಂಚನೆ ಪ್ರಕರಣ ; ಆರೋಪಿ ಚೈತ್ರಾ ಜೊತೆಗೆ ಕುಂದಾಪುರ ಸ್ಥಳನಾಮ ಬಳಸದಂತೆ ಮಾಧ್ಯಮಗಳಿಗೆ ಕೋರ್ಟ್​​ ತಡೆಯಾಜ್ಞೆ

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಟಿಕೆಟ್​ ಕೊಡಿಸುವುದಾಗಿ ಹೇಳಿ ಉದ್ಯಮಿಯೊಬ್ಬರಿಂದ ಕೋಟ್ಯಾಂತರ ರೂ. ವಂಚನೆ ನಡೆಸಿರುವ ಪ್ರಕರಣದಲ್ಲಿ ಆರೋಪಿಯಾಗಿರುವ ಚೈತ್ರಾ ಹೆಸರಿನ ಜೊತೆಗೆ ‘ಕುಂದಾಪುರ’ ಎಂಬ ಸ್ಥಳನಾಮ ಬಳಸದಂತೆ ಬೆಂಗಳೂರು ನಗರದ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.


ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ಆರೋಪಿ ಜೊತೆಗಿನ ಕುಂದಾಪುರ ಹೆಸರು ತೆಗೆದುಹಾಕುವಂತೆ ಕೋರಿ ನ್ಯಾಯಾಲಯಕ್ಕೆ ಉಡುಪಿ ಜಿಲ್ಲೆಯ ಕುಂದಾಪುರ ಮೂಲದ ಉದ್ಯಮಿ, ಪ್ರಸ್ತುತ ಬೆಂಗಳೂರು ಹನುಮಂತ ನಗರದ ನಿವಾಸಿ ಗಣೇಶ್​ ಶೆಟ್ಟಿ ಅರ್ಜಿ ಸಲ್ಲಿಸಿದ್ದರು.


ವಂಚನೆ ಪ್ರಕರಣದಲ್ಲಿ ಆರೋಪಿಯಾಗಿರುವ ಚೈತ್ರಾ ಅವರ ಸುದ್ದಿ ಪ್ರಸಾರ ಮಾಡುವಾಗ ಹೆಸರಿನ ಜೊತೆಗೆ ಕುಂದಾಪುರ ಹೆಸರನ್ನು ಬಳಸುವುದರಿಂದ ಕುಂದಾಪುರ ಊರಿನ ಹೆಸರಿಗೆ ಘಾಸಿಯಾಗುತ್ತದೆ. ಈ ಒಂದು ಘಟನೆಯಿಂದ ಭವಿಷ್ಯದ ಪೀಳಿಗೆಯನ್ನು ಕೆಟ್ಟ ದೃಷ್ಟಿಯಿಂದ ನೋಡುವಂತಾಗಬಹುದು. ಕುಂದಾಪುರ ದೇವಾಲಯಗಳಿರುವ ಮತ್ತು ಪ್ರಕೃತಿ ಸೊಬಗಿನ ಊರು. ಈ ಊರಿನ ಹೆಸರು ಆರೋಪಿಯೊಬ್ಬರ ಹೆಸರಿನ ಜೊತೆಗೆ ಥಳುಕು ಹಾಕಿದ ಕಾರಣಕ್ಕೆ ಹಾಳಾಗಬಾರದು ಎಂದು ಅರ್ಜಿಯಲ್ಲಿ ಕೋರಲಾಗಿತ್ತು.


ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರಾ ಮತ್ತು ತಂಡದ ವಿಚಾರಣೆಯನ್ನು ಸಿಸಿಬಿ ಪೊಲೀಸರು ನಡೆಸುತ್ತಿದ್ದು ಈ ನಡುವೆ ಚೈತ್ರಾ ಪ್ರಕರಣದಲ್ಲಿ ಕುಂದಾಪುರ ಹೆಸರನ್ನು ಪದೇ ಪದೇ ಬಳಸುತ್ತಿರುವುದರಿಂದ ಅಲ್ಲಿನ ನಿವಾಸಿಗಳ, ಸ್ಥಳೀಯರ ಭಾವನೆಗೆ ಧಕ್ಕೆಯಾಗುತ್ತಿರುವುದರಿಂದ ಮಾದ್ಯಮಗಳಿಗೆ ಕುಂದಾಪುರ ಹೆಸರನ್ನು ಬಳಸದಂತೆ ನಿರ್ಬಂಧ ನೀಡುವಂತೆ ಕೋರ್ಟ್​ ಮೊರೆ ಹೋಗಿದ್ದರು. ಅದರಂತೆ ಕೋರ್ಟ್ ತಡೆಯಾಜ್ಞೆ ವಿಧಿಸಿದ್ದು, ಹೆಸರಿನ ಜೊತೆಗೆ ಸ್ಥಳನಾಮ ಬಳಸದಂತೆ ಸಮನ್ಸ್ ನೀಡಿದೆ, ಅಲ್ಲದೆ, ವಿಚಾರಣೆಯನ್ನು ಡಿಸೆಂಬರ್ 5ಕ್ಕೆ ಕಾಯ್ದಿರಿಸಿದೆ. ಈ ಬಗ್ಗೆ ಹೈಕೋರ್ಟ್ ವಕೀಲರಾದ ಎಚ್. ಪವನಚಂದ್ರ ಶೆಟ್ಟಿ ವಾದಿಸಿದ್ದರು.

ಗ್ಯಾರಂಟಿಗಳಿಂದ ಹಳ್ಳಿ ಹೆಣ್ಮಕ್ಕಳು ದಾರಿ ತಪ್ಪಿದ್ದಾರೆ ಎಂದ ಕುಮಾರಸ್ವಾಮಿ: ಸಿದ್ದರಾಮಯ್ಯ ಏನಂದ್ರು?

Posted by Vidyamaana on 2024-04-14 17:37:40 |

Share: | | | | |


ಗ್ಯಾರಂಟಿಗಳಿಂದ ಹಳ್ಳಿ ಹೆಣ್ಮಕ್ಕಳು ದಾರಿ ತಪ್ಪಿದ್ದಾರೆ ಎಂದ ಕುಮಾರಸ್ವಾಮಿ: ಸಿದ್ದರಾಮಯ್ಯ ಏನಂದ್ರು?

ಬೆಂಗಳೂರು , ಏಪ್ರಿಲ್‌ 14: ಕಾಂಗ್ರೆಸ್​ ಸರ್ಕಾರದ ಉಚಿತ ಗ್ಯಾರಂಟಿ ಯೋಜನೆಗಳಿಂದ ಹಳ್ಳಿಯ ಹೆಣ್ಣು ಮಕ್ಕಳು ದಾರಿ ತಪ್ಪಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ಅವರು ವಿವಾದಿತ ಹೇಳಿಕೆ ನೀಡಿದ್ದು, ಹೆಣ್ಣುಮಕ್ಕಳ ಬಗ್ಗೆ ಕುಮಾರಸ್ವಾಮಿಯವರ ಮನಸ್ಥಿತಿ ಏನು ಎಂದು ಅರ್ಥವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ನರಿಮೊಗರು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷ- ಉಪಾಧ್ಯಕ್ಷರಿಗೆ ಪುತ್ತೂರು ಬಿಜೆಪಿ ಕಚೇರಿಯಲ್ಲಿ ಅಭಿನಂದನೆ

Posted by Vidyamaana on 2023-12-20 16:48:10 |

Share: | | | | |


ನರಿಮೊಗರು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷ- ಉಪಾಧ್ಯಕ್ಷರಿಗೆ ಪುತ್ತೂರು ಬಿಜೆಪಿ ಕಚೇರಿಯಲ್ಲಿ ಅಭಿನಂದನೆ

ಪುತ್ತೂರು: ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ನವೀನ್ ಡಿ. ಹಾಗೂ ಉಪಾಧ್ಯಕ್ಷರಾಗಿ ಪವಿತ್ರ ಕೆ.ಪಿ. ಆಯ್ಕೆಯಾಗಿದ್ದು, ಅವರನ್ನು ಪುತ್ತೂರು ಬಿಜೆಪಿ ಕಚೇರಿಯಲ್ಲಿ ಅಭಿನಂದಿಸಲಾಯಿತು.


ಕಳೆದ ವಾರದಲ್ಲಿ ಆಡಳಿತ ಮಂಡಳಿಗೆ ಚುನಾವಣೆ ನಡೆದಿದ್ದು, ಚುನಾವಣೆಯಲ್ಲಿ ಸಹಕಾರ ಭಾರತಿ ಜಯಗಳಿಸಿತ್ತು.ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು, ಮುಖಂಡರಾದ ಸಾಜ ರಾಧಾಕೃಷ್ಣ ಆಳ್ವ, ಪುರುಷೋತ್ತಮ ಮುಂಗ್ಲಿಮನೆ, ಹರಿಪ್ರಸಾದ್ ಯಾದವ್, ನವೀನ್ ಪಡ್ನರು ಮತ್ತಿತರರು ಉಪಸ್ಥಿತರಿದ್ದರು.

ಗ್ಯಾರಂಟಿ ಗಳಿಗೆ ಅರ್ಜಿ ಸಲ್ಲಿಸುವ ಮುನ್ನಾ ಎಚ್ಚರ : ಅಪ್ಪಿ ತಪ್ಪಿ ಈ ಲಿಂಕ್ ಕ್ಲಿಕ್ ಮಾಡಿದ್ರೆ ನಿಮ್ಮ ಬ್ಯಾಂಕ್ ಖಾತೆಯೇ ಖಾಲಿ

Posted by Vidyamaana on 2023-06-17 09:18:29 |

Share: | | | | |


ಗ್ಯಾರಂಟಿ ಗಳಿಗೆ ಅರ್ಜಿ ಸಲ್ಲಿಸುವ ಮುನ್ನಾ ಎಚ್ಚರ : ಅಪ್ಪಿ ತಪ್ಪಿ ಈ ಲಿಂಕ್ ಕ್ಲಿಕ್ ಮಾಡಿದ್ರೆ ನಿಮ್ಮ ಬ್ಯಾಂಕ್ ಖಾತೆಯೇ ಖಾಲಿ

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರವು ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳಿಗೆ ಅರ್ಜಿ ಸಲ್ಲಿಸುವ ಮುನ್ನಾ ಎಚ್ಚರವಾಗಿರಿ, ಗ್ಯಾರಂಟಿಗೆ ಅರ್ಜಿ ಸಲ್ಲಿಸುವವರ ಮಾಹಿತಿ ಕದಿಯಲು ಸೈಬರ್ ಕದೀಮರು ಕಾಯುತ್ತಿದ್ದಾರೆ ಎಂದು ಸೈಬರ್ ತಜ್ಞರು ಎಚ್ಚರಿಕೆ ನೀಡಿದ್ದಾರೆಕರ್ನಾಟಕ ಸರ್ಕಾರವು ಗೃಹಜ್ಯೋತಿ, ಗೃಹಲಕ್ಷ್ಮೀ, ಯುವನಿಧಿ, ಶಕ್ತಿ ಯೋಜನೆಗಳನ್ನು ಜಾರಿಗೆ ತಂದಿದ್ದು, ಈ ಯೋಜನೆಗೆ ಅರ್ಜಿ ಸಲ್ಲಿಕೆಗೆ ಸೇವಾಸಿಂಧು ಪೋರ್ಟಲ್ ಇದೆ. ಆದರೆ ಇದನ್ನೇ ಬಂಡವಾಳ ಮಾಡಿಕೊಂಡಿರುವ ಸೈಬರ್ ಕಳ್ಳರು, ಈಗ ಸಾಮಾಜಿಕ ಜಾಲತಾಣದಲ್ಲಿ ನಕಲಿ ಲಿಂಕ್‌ಗಳನ್ನು ಹರಿಯಬಿಡುತ್ತಿದ್ದಾರೆ.


ಹೌದು, ಸೈಬರ್ ಕಳ್ಳರು ಸೋಶಿಯಲ್ ಮೀಡಿಯದಲ್ಲಿ ನಕಲಿ ಲಿಂಕ್ ಗಳನ್ನು ಹರಿಬಿಡುತ್ತಿದ್ದಾರೆ. ಅಪ್ಪಿ ತಪ್ಪಿ ಈ ಲಿಂಕ್ ದ್ರೆ ಬ್ಯಾಂಕ್‌ನಲ್ಲಿರುವ ನಿಮ್ಮ ಹಣ ಸೈಬರ್ ಕಳ್ಳರ ಪಾಲಾಗಲಿದೆ. ಹೀಗಾಗಿ ಗ್ಯಾರಂಟಿ ಯೋಜನೆಗಳಿಗೆ ಅರ್ಜಿ ಸಲ್ಲಿಸುವವರು ಎಚ್ಚರಿಕೆಯಿಂದ ಅರ್ಜಿ ಸಲ್ಲಿಕೆ ಮಾಡಬೇಕು. ಸರ್ಕಾರ ಕೂಡ ಈ ವಿಚಾರದಲ್ಲಿ ವ್ಯಾಪಕ ಜಾಗೃತಿ ಮೂಡಿಸುವ ಕೆಲಸವನ್ನು ಮಾಡಬೇಕು ಎಂದು ಸೈಬರ್ ತಜ್ಞರು ಎಚ್ಚರಿಕೆ ನೀಡಿದ್ದಾರೆ.

ಮೋದಿ ಮತ್ತೊಮ್ಮೆ ಪ್ರಧಾನಿಯಾದ ಸಂಭ್ರಮ ಅನ್ನದಾನ ಮಾಡಿದ ಪಂಚಮುಖಿ ಫ್ರೆಂಡ್ಸ್

Posted by Vidyamaana on 2024-06-15 11:22:21 |

Share: | | | | |


ಮೋದಿ ಮತ್ತೊಮ್ಮೆ ಪ್ರಧಾನಿಯಾದ ಸಂಭ್ರಮ  ಅನ್ನದಾನ ಮಾಡಿದ ಪಂಚಮುಖಿ ಫ್ರೆಂಡ್ಸ್

ಪುತ್ತೂರು: ಕೋರ್ಟ್ ರಸ್ತೆ ಪಂಚಮುಖಿ ಫ್ರೆಂಡ್ಸ್ ವತಿಯಿಂದ ಬಿರುಮಲೆ ಪ್ರಜ್ಞಾ ಆಶ್ರಮದಲ್ಲಿ ಶುಕ್ರವಾರ ಮಧ್ಯಾಹ್ನ ಅನ್ನದಾನ ಸೇವೆ ಜರಗಿತು.


Recent News


Leave a Comment: