ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ವರಿಷ್ಟಾಧಿಕಾರಿಯಾಗಿ ಯತೀಶ್ N. IPS ಅಧಿಕಾರ ಸ್ವೀಕಾರ

ಸುದ್ದಿಗಳು News

Posted by vidyamaana on 2024-07-05 10:22:02 |

Share: | | | | |


ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ವರಿಷ್ಟಾಧಿಕಾರಿಯಾಗಿ ಯತೀಶ್ N. IPS ಅಧಿಕಾರ ಸ್ವೀಕಾರ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಯಾಗಿ ಯತೀಶ್ N. IPS ಇಂದು ಮಂಗಳೂರಿನ ಜಿಲ್ಲಾ ಕೇಂದ್ರ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.

ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ರಿಷ್ಯಂತ್ ಬೆಂಗಳೂರು ವೈರ್ ಲೆಸ್ ವಿಭಾಗದ ಎಸ್ಪಿಯಾಗಿ ವರ್ಗಾವಣೆಯಾಗಿದ್ದರು.

2016 ರ ಕರ್ನಾಟಕ ಕೇಡರ್ ನ IPS ಅಧಿಕಾರಿ ಯತೀಶ್ ಎನ್ ಈ ಹಿಂದೆ ಮಂಡ್ಯ ಎಸ್ಪಿಯಾಗಿ ಕರ್ತವ್ಯ ನಿರ್ವಹಣೆ ಮಾಡಿದ್ದರು. ಇನ್ನೂ ಹಲವಾರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

 Share: | | | | |


ಬಿಕಾಂ ಪದವೀಧರನ ಆಯುರ್ವೇದಿಕ್ ಕ್ಲಿನಿಕ್ ಮೇಲೆ ದಾಳಿ – ಕ್ಲಿನಿಕ್ ಸೀಝ್

Posted by Vidyamaana on 2023-12-17 16:18:09 |

Share: | | | | |


ಬಿಕಾಂ ಪದವೀಧರನ ಆಯುರ್ವೇದಿಕ್ ಕ್ಲಿನಿಕ್ ಮೇಲೆ ದಾಳಿ – ಕ್ಲಿನಿಕ್ ಸೀಝ್

ಉಡುಪಿ: ಆರೋಗ್ಯ ಇಲಾಖೆಯ ಅಧಿಕಾರಿಗಳು ರಾಜ್ಯದ ವಿವಿಧ ಜಿಲ್ಲೆಗಳ ಆಸ್ಪತ್ರೆ, ಕ್ಲಿನಿಕ್, ಲ್ಯಾಬ್ ಗಳ ಮೇಲೆ ದಾಳಿ ನಡೆಸಿ ಬಿಕಾಂ ಪದವೀಧರ ‘ಆಯುರ್ವೇದಿಕ್ ಡಾಕ್ಟರ್’ನ್ನು ಅರೆಸ್ಟ್‌ ಮಾಡಿದ್ದಾರೆ. ದಾಳಿಯಲ್ಲಿ ಇತರ ನಕಲಿ ವೈದ್ಯರು ಸಿಕ್ಕಿ ಬಿದ್ದಿದ್ದಾರೆ ಎಂದೂ ವರದಿಯಾಗಿದೆ.

ಉಡುಪಿ ಜಿಲ್ಲೆಯಲ್ಲಿ 7 ಕಡೆಗಳಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ ಬಿಕಾಂ ಪದವೀಧರನೇ ಆಯುರ್ವೇದಿಕ್, ಆಲೋಪತಿ ವೈದ್ಯನಾಗಿ ಕಾರ್ಯನಿರ್ವಹಿಸುತ್ತಿದ್ದುದು ಬಯಲಾಗಿದೆ.


ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕುಂಜಾಲು ಎಂಬಲ್ಲಿ ಆಯುರ್ವೇದಿಕ್ ಕ್ಲಿನಿಕ್ ಮೇಲೆ ದಾಳಿ ನಡೆಸಿದಾಗ ಬಿಕಾಂ ಪದವೀಧರನಾಗಿರುವ ಸಂದೇಶ್ ರಾವ್ ತಾನು ಆಯುರ್ವೇದಿಕ್ ವೈದ್ಯ ಎಂದು ಆಯುರ್ವೇದಿಕ್ ಸೆಂಟರ್ ತೆಗೆದಿರುವುದು ಪತ್ತೆಯಾಗಿದೆ.ಆಯುರ್ವೇದಿಕ್ ಸೆಂಟರ್ ಸೀಜ್ ಮಾಡಿರುವ ಅಧಿಕಾರಿಗಳು ಬ್ರಹ್ಮಾವರ ಠಾಣೆಯಲ್ಲಿ ಎಫ್ ಐ ಆರ್ ದಾಖಲಿಸಿದ್ದಾರೆ

ನವಜಾತ ಶಿಶುವಿಗಾಗಿ ಮಿಡಿದ ಸಿದ್ದು ಹೃದಯ ಪ್ರಧಾನಿಗೆ ಮನವಿ

Posted by Vidyamaana on 2023-11-01 19:52:31 |

Share: | | | | |


ನವಜಾತ ಶಿಶುವಿಗಾಗಿ ಮಿಡಿದ ಸಿದ್ದು ಹೃದಯ  ಪ್ರಧಾನಿಗೆ ಮನವಿ

ಬೆಂಗಳೂರು : ರಾಜ್ಯದ ಕೆಲವು ವಿಚಾರಗಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಯವರು ಪ್ರಧಾನಮಂತ್ರಿಯವರಲ್ಲಿ ಕೆಲವೊಮ್ಮೆ ಮನವಿ ಮಾಡಿಕೊಳ್ಳುವುದಿರುತ್ತದೆ. ಆದರೆ ಈ ಸಲ ಒಂದು ವಿಶೇಷ ಕಾರಣಕ್ಕಾಗಿ ಪ್ರಧಾನಿ ಮೋದಿಯವರಲ್ಲಿ ಸಿಎಂ ಸಿದ್ದರಾಮಯ್ಯ ಮನವಿ ಮಾಡಿಕೊಂಡಿದ್ದಾರೆ.


ಪ್ರಧಾನಿ ಮೋದಿಗೆ ಸಿಎಂ ಸಿದ್ದು ಮಾಡಿದ ಕಳಕಳಿಯ ಮನವಿ ಪತ್ರ

ರಾಜ್ಯದಲ್ಲಿನ 15 ತಿಂಗಳ ಮಗುವೊಂದರ ಚಿಕಿತ್ಸೆಗಾಗಿ ಔಷಧಕ್ಕೆ ಸಂಬಂಧಿಸಿದಂತೆ ಆಮದು ಸುಂಕ ವಿನಾಯಿತಿ ನೀಡುವಂತೆ ಸಿದ್ದರಾಮಯ್ಯ ಅವರು ಪ್ರಧಾನಿಯವರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಈ ಕುರಿತು ಅವರು ತಮ್ಮ ಸೋಷಿಯಲ್ ಮೀಡಿಯಾದಲ್ಲೂ ಮಾಹಿತಿ ಹಂಚಿಕೊಂಡಿದ್ದಾರೆ.ಕರ್ನಾಟಕದ 15 ತಿಂಗಳ ಮೌರ್ಯ ಎಂಬ ಪುಟ್ಟ ಕಂದ ಸ್ಪೈನಲ್ ಮಸ್ಕ್ಯುಲರ್ ಅಟ್ರೋಪಿ ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದಾನೆ. ಈ ಮಗುವಿನ ಖಾಯಿಲೆ ಗುಣಪಡಿಸಬಹುದಾದ ಝೋಲ್ಗೆನ್‌ಸ್ಮ ಎಂಬ ಚುಚ್ಚುಮದ್ದನ್ನು ವಿದೇಶದಿಂದ ಆಮದು ಮಾಡಿಕೊಳ್ಳಬೇಕಾಗಿದ್ದು, ಅದರ ಬೆಲೆ ರೂ. 17.5 ಕೋಟಿ ಇದೆ. ಕೇಂದ್ರ ಸರ್ಕಾರವು ಇದನ್ನು ಮಾನವೀಯ ನೆಲೆಗಟ್ಟಿನಲ್ಲಿ ವಿಶೇಷ ಪ್ರಕರಣವೆಂದು ಪರಿಗಣಿಸಿ ಆಮದು ಸುಂಕದಿಂದ ವಿನಾಯಿತಿ ನೀಡುವ ಮೂಲಕ ಕರುನಾಡಿನ ಪುಟ್ಟ ಕಂದನ ಪ್ರಾಣ ಉಳಿಸಲು ನೆರವಾಗಬೇಕು ಎಂದು ಮನವಿ ಮಾಡುತ್ತಿದ್ದೇನೆ ಎಂಬುದಾಗಿ ಸಿಎಂ ಮನವಿ ಮಾಡಿಕೊಂಡಿದ್ದಾರೆ.

ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ:ಆರೋಪಿ ಪ್ರವೀಣ್‌ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್

Posted by Vidyamaana on 2023-12-01 15:58:50 |

Share: | | | | |


ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ:ಆರೋಪಿ ಪ್ರವೀಣ್‌ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್

ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಪ್ರವೀಣ್ ನನ್ನು ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ ಮಾಡಲಾಗಿದೆ. ಉಡುಪಿ ಸಬ್ ಜೈಲಿನಿಂದ ಆರೋಪಿ ಪ್ರವೀಣ್‌ ಚೌಗಲೆಯನ್ನು ಬೆಂಗಳೂರಿನ ಪರಪ್ಪನ ಅಗ್ರಹಾರಕ್ಕೆ ಸ್ಥಳಾಂತರಿಸಲಾಗಿದೆ.


ನ್ಯಾಯಾಂಗ ಬಂಧನದಲ್ಲಿರುವ ಪ್ರವೀಣ್ ನನ್ನು ಉಡುಪಿಯ ಸಬ್ ಜೈಲಿಗೆ ರವಾನಿಸಲಾಗಿತ್ತು. ಆದರೆ ಈ ಜೈಲಿನಲ್ಲಿ ಈತನಿಗೆ ಭದ್ರತೆ ನೀಡುವುದು ಸವಾಲಾಗಿದೆ. ಸಹಕೈದಿಗಳೇ ಈತ ಮಾಡಿದ ಹೀನ ಕೆಲಸಕ್ಕೆ ಆತನಿಗೆ ಹಲ್ಲೆ ಮಾಡುವ ಸಾಧ್ಯತೆ ಇದೆ. ಹಾಗಾಗಿ ಸೀಮಿತ ವ್ಯವಸ್ಥೆಯಲ್ಲಿ ಪ್ರತ್ಯೇಕ ಸೆಲ್ ನಲ್ಲಿ ಇರಿಸುವುದು ಕಷ್ಟಸಾಧ್ಯ. ಈ ಹಿನ್ನೆಲೆ ಸದ್ಯ ಆರೋಪಿಯನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರ ಮಾಡಲಾಗಿದೆ. ಡಿಸೆಂಬರ್ 5ರ ತನಕ ಈತನಿಗೆ ನ್ಯಾಯಾಂಗ ಬಂಧನವಿದ್ದು, ವಿಡಿಯೋ ಕಾನ್ನರೆನ್ಸ್ ಮೂಲಕವೇ ವಿಚಾರಣೆಯಲ್ಲಿ ಭಾಗವಹಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ನಿಮ್ಮ ಸ್ವಂತ ಮನೆಯ ಕನಸನ್ನು ಇನ್ನಷ್ಟು ಬ್ರೈಟಾಗಿಸಿ

Posted by Vidyamaana on 2023-09-12 10:26:32 |

Share: | | | | |


ನಿಮ್ಮ ಸ್ವಂತ ಮನೆಯ ಕನಸನ್ನು ಇನ್ನಷ್ಟು ಬ್ರೈಟಾಗಿಸಿ

ಪುತ್ತೂರು: ಪುತ್ತೂರು ಸುಳ್ಯ ಭಾಗದಲ್ಲಿ ಪ್ರಪ್ರಥಮ ಬಾರಿಗೆ, ನಾಲ್ಕು ಮನೆಯ ವಿಶಿಷ್ಟ ಸ್ಕೀಮ್ ಯೋಜನೆಯೊಂದನ್ನು ಬ್ರೈಟ್ ಭಾರತ್ ಆರಂಭಿಸಿದೆ.

ಸೇರಿದ ಯಾವ ಗ್ರಾಹಕರಿಗೂ ನಷ್ಟವಿಲ್ಲದ ರೀತಿಯಲ್ಲಿ, ಪ್ರತೀ ತಿಂಗಳು ಕೂಡ ಲಕ್ಷಾಂತರ ಮೌಲ್ಯದ ಬಂಪರ್ ಬಹುಮಾನಗಳಿರುವ ವಿಭಿನ್ನ ಯೋಜನೆ ಇದಾಗಿದ್ದು. ಬಡವರ ಸ್ವಂತ ಮನೆಯ ಕನಸನ್ನು ಬ್ರೈಟ್ ಭಾರತ್‌ನ ಈ ಯೋಜನೆ ನನಸು ಮಾಡಲಿದೆ.

*ಬ್ರೈಟ್ ಭಾರತ್ ಸದಸ್ಯರಾಗುವುದು ಹೇಗೆ!?*

ಬ್ರೈಟ್ ಭಾರತ್ ಸದಸ್ಯರಾಗಲು ನಿಮ್ಮ ಹೆಸರು, ಸ್ಥಳ, ಮೊಬೈಲ್ ನಂಬರ್, ಇಷ್ಟು ಮಾಹಿತಿಯನ್ನು 6360253651 ಈ ನಂಬರ್‌ಗೆ ವಾಟ್ಸಪ್ ಮಾಡಬಹುದು ಅಥವಾ ಕರೆಮಾಡಿ ಮಾಹಿತಿ ಪಡೆದುಕೊಳ್ಳಬಹುದು.

*ಬ್ರೈಟ್ ಭಾರತ್ ಯೋಜನೆಯ ಬಗ್ಗೆ ಮಾಹಿತಿ*

ವಿಶೇಷವಾಗಿ ಇದೊಂದು ಉಳಿತಾಯ ಯೋಜನೆಯಾಗಿದ್ದು, ಪ್ರತಿ ತಿಂಗಳ ತಮ್ಮ ಉಳಿತಾಯದ ಸಾವಿರ ರೂಪಾಯಿಯನ್ನು ಇಪ್ಪತ್ತು ತಿಂಗಳು ಪಾವತಿಸಿ, ನಾಲ್ಕು ಮನೆ ಸೇರಿದಂತೆ, ಆರು ಆಕ್ವೀವಾ, ಎರಡು ಬೈಕ್, ಚಿನ್ನ, ಡೈಮಂಡ್, ನಗದು ಸೇರಿದಂತೆ, ಪ್ರತೀ ತಿಂಗಳು ಕೂಡ ಲಕ್ಷಾಂತರ ಬೆಲೆಯ ಬಹುಮಾನಗಳನ್ನು ಗೆಲ್ಲುವ ಅವಕಾಶವನ್ನು ಬ್ರೈಟ್ ಭಾರತ್ ನೀಡಿದೆ. ಕೊನೆಯವರೆಗೆ ಯಾವುದೇ  ಬಹುಮಾನ ಗೆಲ್ಲದ ಸದಸ್ಯರಿಗೆ ಅವರು ಕಟ್ಟಿದ ಹಣಕ್ಕೆ ಹೊಂದುವಂತ ಬೆಲೆಯ ಪ್ರೋತ್ಸಾಹಕ ಬಹುಮಾನಗಳು ಸೇರಿದ ಪ್ರತಿಯೊಬ್ಬ ಸದಸ್ಯರಿಗೂ ಲಭಿಸಲಿದೆ‌. ಜೊತೆಗೆ ಎಲ್ಲಾ ಸರ್ಕಾರಿ ತೆರಿಗೆಗಳನ್ನು ಪಾವತಿಸಿ, ಪಾರದರ್ಶಕವಾಗಿ ನಡೆಯುವ ಬಡವರ ಕನಸಿನ ಯೋಜನೆ ಇದಾಗಿದ್ದು. ಪ್ರತಿಯೊಬ್ಬರಿಗೂ ಇದರ ಸದಸ್ಯತ್ವವನ್ನು ಪಡೆಯಬಹುದು.


ಈಗಾಗಲೇ ಸಾವಿರಾರು ಮಂದಿ ತಮ್ಮ ಹೆಸರು ನೋಂದಾಯಿಸಿ ರಿಜಿಸ್ಟರ್ ಆಗಿದ್ದು, ಈ ಕನಸಿನ ಯೋಜನೆಯಲ್ಲಿ ನಿಮಗೂ ಸದಸ್ಯರಾಗಬಹುದು.


ಸ್ವಂತ ಮನೆ ಅನ್ನುವುದು ಹಲವರಿಗೆ ಕನಸು ಮಾತ್ರವಾಗಿ ಉಳಿದಿರುವ ಈ ದಿನದಲ್ಲಿ, ಅವರ ಕನಸಿನ ಮನೆಯನ್ನು ಈ ಯೋಜನೆಯ ಮೂಲಕ ನೀಡಬೇಕು, ಅದರ ಜೊತೆಗೆ ಯಾರಿಗೂ ನಷ್ಟವಿಲ್ಲದ ರೀತಿಯಲ್ಲಿ, ಸೇರಿದ ಪ್ರತಿಯೊಬ್ಬ ಸದಸ್ಯರಿಗೂ, ಅವರು ಕಟ್ಟಿದ ಹಣಕ್ಕೆ ಸರಿಸಮಾನವಾದ ಪ್ರೋತ್ಸಾಹಕ ಬಹುಮಾನಗಳನ್ನು ನೀಡಿ, ಲಾಭದ ಉದ್ದೇಶಕ್ಕಿಂತಲೂ, ಅವರ ನಂಬಿಕೆಯನ್ನು ಉಳಿಸಿಕೊಳ್ಳಬೇಕು ಅನ್ನುವುದು ಬ್ರೈಟ್ ಭಾರತ್‌ನ ಪಾಲುದಾರರ ಮಾತು.


ಬ್ರೈಟ್ ಭಾರತ್‌ನ ಮೊದಲ ಡ್ರಾ ನವೆಂಬರ್ ತಿಂಗಳಲ್ಲಿ ನಡೆಯಲಿದ್ದು, ಮೊದಲ ತಿಂಗಳಲ್ಲೇ ಮೂರು ಅದೃಷ್ಟಶಾಲಿಗಳಿಗೆ ಆಕ್ಟೀವಾ ಗೆಲ್ಲುವ ಅವಕಾಶವಿದೆ. ಜೊತೆಗೆ ಪ್ರತಿ ತಿಂಗಳು ಕೂಡ ಬೈಕು, ಆಕ್ಟೀವಾ, ಚಿನ್ನ, ಡೈಮಂಡ್, ನಗದು ಬಹುಮಾನವಿದ್ದು, ಹದಿನಾರನೇ ತಿಂಗಳಿನಲ್ಲಿ ಕಾರು ಗೆಲ್ಲುವ ಅವಕಾಶವಿದೆ. ಜೊತೆಗೆ 17-18-19-20 ಈ ನಾಲ್ಕು ತಿಂಗಳಿನಲ್ಲಿ ನಾಲ್ಕು ಸುಸಜ್ಜಿತ ಮನೆ ಗೆಲ್ಲುವ ಅವಕಾಶವನ್ನು ಬ್ರೈಟ್ ಭಾರತ್ ನೀಡಿದ್ದು, ಅದೃಷ್ಟವಂತರು ಎರಡು ಬೆಡ್‌ರೂಮಿನ ಹೊಸ ಮನೆಯನ್ನು ಹೊಸ ಮನೆಯನ್ನು ತಮ್ಮದಾಗಿಸಿಕೊಳ್ಳಲಿದ್ದಾರೆ.


ಬ್ರೈಟ್ ಭಾರತ್ ನ ಪ್ರಧಾನ ಕಚೇರಿಯೂ ಪುತ್ತೂರಿನಲ್ಲಿ ಸಧ್ಯದಲ್ಲೇ ಗಣ್ಯ ವ್ಯಕ್ತಿಗಳ ಸಮ್ಮುಖದಲ್ಲಿ ಶುಭಾರಂಭಗೊಳ್ಳಲಿದ್ದು, ಪ್ರತಿಯೊಬ್ಬರಿಗೂ ಬ್ರೈಟ್ ಭಾರತ್ ಸದಸ್ಯರಾಗಲು ಮುಕ್ತ ಅವಕಾಶವಿದೆ.

ಸದಸ್ಯರಾಗಲು ಅಥವಾ ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ್ನ ನಂಬರನ್ನು ಸಂಪರ್ಕಿಸಬಹುದು.

6360253651,7019843134

ಗಾಂಜಾ ನಶೆಯಲ್ಲಿ ಚೂರಿ ಹಿಡಿದು ರಸ್ತೆ ಮಧ್ಯೆ ಯುವಕನ ಧಾಂದಲೆ ! ಸಿನಿಮೀಯ ರೀತಿಯಲ್ಲಿ ಲಾಕ್ ಮಾಡಿದ ಕೊಣಾಜೆ ಪೊಲೀಸರು

Posted by Vidyamaana on 2023-08-20 09:45:26 |

Share: | | | | |


ಗಾಂಜಾ ನಶೆಯಲ್ಲಿ ಚೂರಿ ಹಿಡಿದು ರಸ್ತೆ ಮಧ್ಯೆ  ಯುವಕನ ಧಾಂದಲೆ ! ಸಿನಿಮೀಯ ರೀತಿಯಲ್ಲಿ ಲಾಕ್ ಮಾಡಿದ ಕೊಣಾಜೆ ಪೊಲೀಸರು

ಉಳ್ಳಾಲ: ಅಮಲು ಪದಾರ್ಥ ಸೇವಿಸಿ ನಶೆಯಲ್ಲಿ ತೇಲುತ್ತಿದ್ದ ಯುವಕನೋರ್ವ ನಾಟೆಕಲ್ ಎಂಬಲ್ಲಿ ರಸ್ತೆ ಡಿವೈಡರ್ ನಲ್ಲಿ ದಾಂಧಲೆ ನಡೆಸಿದ್ದು ಸ್ಥಳಕ್ಕೆ ಬಂದ ಕೊಣಾಜೆ ಪೊಲೀಸರು ಯುವಕನನ್ನ ಸಿನಿಮೀಯ ರೀತಿಯಲ್ಲಿ ಲಾಕ್ ಮಾಡಿ ಜೈಲಿಗಟ್ಟಿದ್ದಾರೆ. 


ಉಳ್ಳಾಲ ಮುಕ್ಕಚ್ಚೇರಿ, ಕೈಕೋ ರೋಡ್ ನಿವಾಸಿ ಅಬ್ಬೂಬಕ್ಕರ್ ಸಿದ್ಧೀಕ್(24) ಬಂಧಿತ ಯುವಕ. ನಿನ್ನೆ ದೇರಳಕಟ್ಟೆ ಸಮೀಪದ ನಾಟೆಕಲ್ ಜಂಕ್ಷನ್ ನಲ್ಲಿ ಘಟನೆ ನಡೆದಿದೆ. ಅಮಲು ಪದಾರ್ಥ ಸೇವಿಸಿ ನಶೆಯಲ್ಲಿದ್ದ ಸಿದ್ಧೀಕ್ ರಸ್ತೆ ಮಧ್ಯದ ಡಿವೈಡರ್ ನಲ್ಲಿ ಕಲ್ಲು ಮತ್ತು ಚೂರಿ ಹಿಡಿದು ಧಾಂದಲೆ ನಡೆಸುತ್ತಿದ್ದ. ಈ ವೇಳೆ ಯಾರೋ ಪೊಲೀಸರಿಗೆ ದೂರು ನೀಡಿದ್ದು ಸ್ಥಳಕ್ಕೆ ಬಂದ ಕೊಣಾಜೆ ಮತ್ತು ಟ್ರಾಫಿಕ್ ಪೊಲೀಸರು ಕಾರ್ಯಾಚರಣೆ ನಡೆಸಿ ಸಿನಿಮೀಯ ರೀತಿಯಲ್ಲಿ ಸಿದ್ಧೀಕನ್ನ ಲಾಕ್ ಮಾಡಿ ಪೊಲೀಸ್ ವಾಹನಕ್ಕೆ ತಳ್ಳಿದ್ದಾರೆ.ಕೊಣಾಜೆ ಠಾಣೆಯ ಪೊಲೀಸ್ ಸಿಬ್ಬಂದಿ ಮಾಜಿ ಯೋಧ ಸಂತೋಷ್ ಎಂಬವರು ಚಾಣಾಕ್ಷತನದಿಂದ ಸಿದ್ಧೀಕನ್ನ ಲಾಕ್ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಪೊಲೀಸ್ ಕಾರ್ಯಾಚರಣೆಯನ್ನ ಯಾರೋ ಮೊಬೈಲಲ್ಲಿ ರೆಕಾರ್ಡ್ ಮಾಡಿದ್ದು ವೀಡಿಯೋ ತುಣುಕು ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆರೋಪಿ ಅಬ್ಬೂಬಕ್ಕರ್ ಸಿದ್ಧೀಕ್ ನನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಿದ್ದು ಅಮಲು ಪದಾರ್ಥ ಸೇವಿಸಿದ್ದು ಧೃಢಪಟ್ಟ ಮೇಲೆ ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.


ಸ್ನೇಹಿತನನ್ನು ಕೊಲೆಗೈದು ಗುಹೆಯಲ್ಲಿ ಶವ ಸುಟ್ಟು ಹಾಕಿದ ದುಷ್ಕರ್ಮಿಗಳು!

Posted by Vidyamaana on 2024-01-16 04:45:51 |

Share: | | | | |


ಸ್ನೇಹಿತನನ್ನು ಕೊಲೆಗೈದು ಗುಹೆಯಲ್ಲಿ ಶವ ಸುಟ್ಟು ಹಾಕಿದ ದುಷ್ಕರ್ಮಿಗಳು!

ಚಿಕ್ಕಬಳ್ಳಾಪುರ, ಜ.16: ತಲೆ ಮೇಲೆ ಕಲ್ಲು ಎತ್ತಿ ಹಾಕಿ ಆಂಧ್ರಪ್ರದೇಶ ಮೂಲದ ತನ್ನ ಸ್ನೇಹಿತನನ್ನೇ ದುಷ್ಕರ್ಮಿಗಳು ಕೊಲೆ (Murder)ಮಾಡಿ ಮೃತದೇಹವನ್ನು ಗುಹೆಯಲ್ಲಿ ಸುಟ್ಟುಹಾಕಿ ತಲೆಮರೆಸಿಕೊಂಡಿದ್ದರು. ಆದರೆ ಆರೋಪಿಗಳು ಚಾಪೆ ಕೆಳಗೆ ತೂರಿದರೆ ಪೊಲೀಸರು ರಂಗೋಲಿ ಕೆಳಗೆ ತೂರುತ್ತಾರೆ ಎಂಬಂತೆ ಆರೋಪಿಯೊಬ್ಬನನ್ನು ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆಯ ಪಾತಪಾಳ್ಯ ಠಾಣಾ ಪೊಲೀಸರು ಬಂಧಿಸಿದ್ದಾರೆ. ಇನ್ನೊಬ್ಬ ಆರೋಪಿ ಪೊಲೀಸರ ತನಿಖೆಗೆ ಹೆದರಿ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾನೆ.


ನೆರೆರಾಜ್ಯ ಆಂಧ್ರಪ್ರದೇಶದ ದಾದಿವಾರಪಲ್ಲಿ ನಿವಾಸಿ ವೆಂಕಟರಮಣ ನಾಯ್ಕ ಎಂಬಾತ ಕಾಣೆಯಾಗಿದ್ದ. ಈ ಬಗ್ಗೆ ವೆಂಕಟರಮಣನ ತಂದೆ ಜನವರಿ 7 ರಂದು ಅಮ್ಮಡಗೂರು ಪೊಲೀಸ್ ಠಾಣೆಗೆ ನಾಪತ್ತೆ ಪ್ರಕರಣ ದಾಖಲಿಸಿದ್ದರು. ತನಿಖೆ ಆರಂಭಿಸಿದ್ದ ಪೊಲೀಸರಿಗೆ ವೆಂಕಟರಮಣನ ಸ್ನೇಹಿತರಾದ ಸ್ವಗ್ರಾಮದ ಬಾಬು ಮತ್ತು ಪ್ರಭಾಕರ್ ಮೇಲೆ ಅನುಮಾನ ಬಂದಿತ್ತು.ನೆರೆರಾಜ್ಯ ಆಂಧ್ರಪ್ರದೇಶದ ದಾದಿವಾರಪಲ್ಲಿ ನಿವಾಸಿ ವೆಂಕಟರಮಣ ನಾಯ್ಕ ಎಂಬಾತ ಕಾಣೆಯಾಗಿದ್ದ. ಈ ಬಗ್ಗೆ ವೆಂಕಟರಮಣನ ತಂದೆ ಜನವರಿ 7 ರಂದು ಅಮ್ಮಡಗೂರು ಪೊಲೀಸ್ ಠಾಣೆಗೆ ನಾಪತ್ತೆ ಪ್ರಕರಣ ದಾಖಲಿಸಿದ್ದರು. ತನಿಖೆ ಆರಂಭಿಸಿದ್ದ ಪೊಲೀಸರಿಗೆ ವೆಂಕಟರಮಣನ ಸ್ನೇಹಿತರಾದ ಸ್ವಗ್ರಾಮದ ಬಾಬು ಮತ್ತು ಪ್ರಭಾಕರ್ ಮೇಲೆ ಅನುಮಾನ ಬಂದಿತ್ತು.


ಸ್ನೇಹಿತನಿಂದ ಕೊಲೆ ರಹಸ್ಯ ಬಹಿರಂಗ


ಮೃತನ ಸ್ನೇಹಿತ ಬಾಬುನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಈ ವೇಳೆ ವೆಂಕಟರಮಣನನ್ನು ಕರ್ನಾಟಕದ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ವಂಡಮಾನ್ ಜಲಾಶಯದ ಬಳಿ ನಿರ್ಜನ ಪ್ರದೇಶದಲ್ಲಿ ಕೊಂದು ಶವ ಸುಟ್ಟು ಹಾಕಿರುವ ಬಗ್ಗೆ ಬಾಯಿ ಬಿಟ್ಟಿದ್ದಾನೆ. ಈ ಬಗ್ಗೆ ಪೊಲೀಸರು ಕರ್ನಾಟಕದ ಪಾತಪಾಳ್ಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಬಾಬುನನ್ನು ವಶಕ್ಕೆ ಪಡೆದು ಸ್ಥಳ ಪರಿಶೀಲನೆ ನಡೆಸಿದ್ದಾರೆ.ಕೊಲೆ ಆರೋಪಿ ಪ್ರಭಾಕರ್ ಆತ್ಮಹತ್ಯೆ


ಆಂಧ್ರದ ಪೊಲೀಸರು ಆರೋಪಿ ಬಾಬುವನ್ನು ವಶಕ್ಕೆ ಪಡೆದು ತನಿಖೆ ಆರಂಬಿಸುತ್ತಿರುವ ವಿಚಾರ ತಿಳಿದ ಮತ್ತೊಬ್ಬ ಆರೋಪಿ ಪ್ರಭಾಕರ್ ಪೊಲೀಸರ ತನಿಖೆಗೆ ಹೆದರಿ ಸ್ವಗ್ರಾಮದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.


ವೆಂಕಟರಮಣ ನಾಯ್ಕ ಕೊಲೆಗೆ ಕಾರಣ


ವೆಂಕಟರಮಣ ನಾಯ್ಕ, ಬಾಬು, ಪ್ರಭಾಕರ್ ಮೂವರು ಸ್ನೇಹಿರಾಗಿದ್ದರು. ಬಾಬು ಹಾಗೂ ವೆಂಕಟರಮಣ ನಾಯ್ಕ ಮಧ್ಯೆ ಜಮೀನು ವಿವಾದ ಇತ್ತು. ಈ ವಿಚಾರವಾಗಿ ವೆಂಕಟರಮಣ ನಾಯ್ಕ್ ಪದೆ ಪದೆ ಕ್ಯಾತೆ ತೆಗೆಯುತ್ತಿದ್ದನಂತೆ. ಇದರಿಂದ ಕುಪಿತನಾದ ಬಾಬು ವೆಂಕಟರಮಣನನ್ನು ಗಡಿನಾಡು ವಂಡಮಾನ್ ಬಳಿ ಕರೆತಂದು ಮದ್ಯಪಾನ ಮಾಡಿಸಿದ್ದಾರೆ. ನಂತರ ಆತನ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾರೆ. ಈ ಬಗ್ಗೆ ಸ್ವತಃ ಆರೋಪಿ ಬಾಬು ಪೊಲೀಸರು ಮುಂದೆ ಬಾಯಿ ಬಿಟ್ಟಿದ್ದಾನೆ.


ಕೊಲೆ ಮಾಡಿದ ಸ್ಥಳ ಕರ್ನಾಟಕ ರಾಜ್ಯಕ್ಕೆ ಸೇರಿರುವ ಕಾರಣ ಆಂಧ್ರ ಪೊಲೀಸರು ಕೊಲೆ ಪ್ರಕರಣವನ್ನು ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲೂಕಿನ ಪಾತಪಾಳ್ಯ ಪೊಲೀಸರಿಗೆ ವರ್ಗಾವಣೆ ಮಾಡಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Recent News


Leave a Comment: