ಶಾಲಾ ಆವರಣದಲ್ಲಿ ಸಾರ್ವಜನಿಕ ಕೃಷ್ಣಾಷ್ಠಮಿ, ಗಣೇಶೋತ್ಸವ, ಹಬ್ಬಗಳ ಆಚರಣೆಗೆ ನಿರ್ಬಂಧ : ಬಿಜೆಪಿ ಆಡಳಿತಾವಧಿಯಲ್ಲೇ ಆದೇಶ

ಸುದ್ದಿಗಳು News

Posted by vidyamaana on 2024-07-24 17:19:41 |

Share: | | | | |


ಶಾಲಾ ಆವರಣದಲ್ಲಿ ಸಾರ್ವಜನಿಕ ಕೃಷ್ಣಾಷ್ಠಮಿ, ಗಣೇಶೋತ್ಸವ, ಹಬ್ಬಗಳ ಆಚರಣೆಗೆ ನಿರ್ಬಂಧ : ಬಿಜೆಪಿ ಆಡಳಿತಾವಧಿಯಲ್ಲೇ ಆದೇಶ

ರಾಜ್ಯದ ಸರಕಾರಿ ಶಾಲೆ ಮತ್ತು ಕಾಲೇಜು ಕ್ಯಾಂಪಸ್‌ ಗಳಲ್ಲಿ ಧಾರ್ಮಿಕ ಆಚರಣೆ ಸೇರಿದಂತೆ ಶೈಕ್ಷಣಿಕೇತರ ಚಟುವಟಿಕೆ ನಡೆಸದಂತೆ ರಾಜ್ಯ ಸರಕಾರ ಆದೇಶ ಹೊರಡಿಸಿದ್ದು, ಇದು ಭಾರೀ ಸಂಚಲನವನ್ನೇ ಹುಟ್ಟುಹಾಕಿದೆ. ಇದರಿಂದ ಸಾರ್ವಜನಿಕ ಕೃಷ್ಣಾಷ್ಟಮಿ, ಗಣೇಶೋತ್ಸವ, ಶಾರದೋತ್ಸವ ಆಚರಣೆಯ ಸಂಘಟಕರು ಗೊಂದಲದಲ್ಲಿದ್ದಾರೆ.

ಬೆಂಗಳೂರು ಶಾಲಾ ಶಿಕ್ಷಣ ಇಲಾಖೆ ಆಯುಕ್ತರ ಕಚೇರಿಯಿಂದ 2013ರ ಫೆ.7 ರಂದು ಮತ್ತು 2023ರ ಡಿ.1ರಂದು ರಾಜ್ಯದ ಎಲ್ಲ ಡಿಡಿಪಿಐ ಕಚೇರಿಗಳಿಗೆ ಖಾಸಗಿ ಕಾರ್ಯಕ್ರಮಗಳಿಗೆ ಶಾಲಾ ಕಟ್ಟಡ ಅಥವಾ ಶಾಲಾ ಮೈದಾನ ಅನುಮತಿ ನೀಡಬಾರದೆಂದು ಸುತ್ತೋಲೆ ಬಂದಿತ್ತು. ಈ ಆಧಾರದಲ್ಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಡಿಡಿಪಿಐ ವೆಂಕಟೇಶ್ ಪಟಗಾರ ಅವರು ಜು.16ರಂದು ಜ್ಞಾಪನಾ ಪತ್ರವನ್ನು ಎಲ್ಲ ಬಿಇಒಗಳಿಗೆ ರವಾನಿಸಿದ್ದಾರೆ.

ಜ್ಞಾಪನಾ ಪತ್ರದಲ್ಲಿ ಏನಿದೆ?

ಸರಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳಲ್ಲಿ, ಶಾಲಾ ಮೈದಾನ ಅಥವಾ ಆವರಣವನ್ನು ಶೈಕ್ಷಣಿಕೇತರ ಚಟುವಟಿಕೆ ಅಥವಾ ಉದ್ದೇಶಕ್ಕೆ ಬಳಸಬಾರದು ಮತ್ತು ಅನುಮತಿಯನ್ನು ನೀಡಬಾರದೆಂದು ಸೂಚಿಸಲಾಗಿದೆ. ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಸಂಬಂಧಿತ ಶಾಲಾ ಮುಖ್ಯಸ್ಥರೇ ಹೊಣೆಯಾಗುತ್ತಾರೆ ಎಂದು ಜ್ಞಾಪನಾ ಪತ್ರದಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ.

ಬಿಜೆಪಿಯಿಂದ ಹೋರಾಟ :

ರಾಜ್ಯಾದ್ಯಂತ ಹಲವು ದಶಕಗಳಿಂದ ಶಾಲೆಯ ಕ್ಯಾಂಪಸ್, ಶಾಲಾ ಕಟ್ಟಡದಲ್ಲಿ ಕೃಷ್ಣಾಷ್ಟಮಿ, ಗಣೇಶೋತ್ಸವ, ಶಾರದೋತ್ಸವ ಆಚರಿಸಿಕೊಂಡು ಬರಲಾಗುತ್ತಿದೆ. ಆದರೆ ಈಗ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರಕಾರ ರಾಜಕೀಯ ಮಾಡಲು ಹೊರಟಿದ್ದು, ಶಾಲಾ ವಠಾರದಲ್ಲಿ ಧಾರ್ಮಿಕ ಆಚರಣೆ ನಡೆಸದಂತೆ ಆದೇಶ ಹೊರಡಿಸಿದೆ. ಇದು ಖಂಡನೀಯವಾಗಿದ್ದು, ಈ ಹಿಂದೆ ನಿಗದಿತ ಸ್ಥಳದಲ್ಲೇ ಕಾರ್ಯಕ್ರಮ ಆಯೋಜಿಸುತ್ತೇವೆ. ಇದನ್ನು ತಡೆಯಲು ಬಂದರೆ ಸುಮ್ಮನಿರಲ್ಲ ಎಂದು ಬಿಜೆಪಿ ತಾಕೀತು ಮಾಡಿದೆ. ಇದೇ ರೀತಿ ಜಿಲ್ಲಾದ್ಯಂತ ಹೋರಾಟ ನಡೆಯುತ್ತಿದೆ.

ಬಿಜೆಪಿ ಸರಕಾರದಲ್ಲೇ ಆದೇಶ :

2013ರಲ್ಲಿ ರಾಜ್ಯದಲ್ಲಿ ಬಿಜೆಪಿ ಸರಕಾರ ಆಡಳಿತದಲ್ಲಿದ್ದು, ಜಗದೀಶ್ ಶೆಟ್ಟರ್ ಮುಖ್ಯಮಂತ್ರಿಯಾಗಿದ್ದ ಸಂದರ್ಭ ಶಿಕ್ಷಣೇತರ ಚಟುವಟಿಕೆ ನಡೆಸದಂತೆ ಆದೇಶ ಹೊರಡಿಸಿತ್ತು ಆದೇ ಆದೇಶದಡಿ ನಿಯಮದಂತೆ ದಕ್ಷಿಣ ಕನ್ನಡ ಶಿಕ್ಷಣಾಧಿಕಾರಿಯವರು ಬಿಇಒ ಮೂಲಕ ಜ್ಞಾಪನಾ ಪತ್ರ ಹೊರಡಿಸಿದ್ದಾರೆ. ಆದರೆ ಅಧಿಕಾರದಲ್ಲಿದ್ದಾಗ ಆದೇಶ ಹೊರಡಿಸಿದ್ದ ಬಿಜೆಪಿಯವರೇ ಈಗ ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ಇದರಿಂದ ಈ ವಿವಾದವೂ ಜಿಲ್ಲೆಯಲ್ಲಿ ದಿನ ಹೋದಂತೆ ರಾಜಕೀಯ ಬಣ್ಣ ಪಡೆದು ಕಾವೇರತೊಡಗಿದೆ.

 Share: | | | | |


ICC ODI World Cup: ಟೀಂ ಇಂಡಿಯಾ ಪ್ರಕಟ - ಯಾರಿಗೆಲ್ಲಾ ಸಿಕ್ತು ಚಾನ್ಸ್??

Posted by Vidyamaana on 2023-09-05 15:31:58 |

Share: | | | | |


ICC ODI World Cup: ಟೀಂ ಇಂಡಿಯಾ ಪ್ರಕಟ - ಯಾರಿಗೆಲ್ಲಾ ಸಿಕ್ತು ಚಾನ್ಸ್??

ಮುಂಬೈ: ಅಕ್ಟೋಬರ್ 5ರಿಂದ ತವರಿನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಕೂಟಕ್ಕೆ ಭಾರತ ತಂಡವನ್ನು ಅಂತಿಮಗೊಳಿಸಲಾಗಿದೆ. 15 ಜನರ ತಂಡವನ್ನು ಆಯ್ಕೆ ಮಾಡಿದ್ದು, ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸಲಿದ್ದಾರೆ.

ಪುರುಷರ ಕ್ರಿಕೆಟ್ ತಂಡದ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಅವರು ತಂಡದ ಆಯ್ಕೆ ಬಗ್ಗೆ ಪ್ರಕಟಿಸಿದರು.


ಏಷ್ಯಾ ಕಪ್ ನಲ್ಲಿ ಆಡುತ್ತಿರುವ ತಂಡವೇ ಬಹುತೇಕ ಅಂತಿಮವಾಗಿದೆ. ವಿಶ್ವಕಪ್ ಗೆ 15 ಜನರ ತಂಡ ಪ್ರಕಟಿಸಬೇಕಾದ ಕಾರಣ 17 ಜನರ ಏಷ್ಯಾ ಕಪ್ ತಂಡದಲ್ಲಿದ್ದ ಯುವ ಆಟಗಾರರಾದ ತಿಲಕ್ ವರ್ಮಾ ಮತ್ತು ಕನ್ನಡಿಗ ಪ್ರಸಿಧ್ ಕೃಷ್ಣ ವಿಶ್ವಕಪ್ ಕೂಟಕ್ಕೆ ಸ್ಥಾನ ಪಡೆದಿಲ್ಲ.


ಕನ್ನಡಿಗ ಕೆ.ಎಲ್ ರಾಹುಲ್ ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯಲು ಯಶಸ್ವಿಯಾಗಿದ್ದಾರೆ. ಕಳೆದ ಐಪಿಎಲ್ ವೇಳೆ ಗಾಯಗೊಂಡು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಕೆಎಲ್ ರಾಹುಲ್ ಹಲವು ತಿಂಗಳ ಚೇತರಿಕೆಯ ಬಳಿಕ ಏಷ್ಯಾ ಕಪ್ ಗೆ ಆಯ್ಕೆಯಾಗಿದ್ದರು. ಆದರೆ ಸರಿಯಾಗಿ ಫಿಟ್ ಆಗದ ಕಾರಣ ಮೊದಲೆರಡು ಪಂದ್ಯಕ್ಕೆ ಅಲಭ್ಯರಾಗಿದ್ದಾರೆ.ವಿಕೆಟ್ ಕೀಪರ್ ಕೋಟಾದಲ್ಲಿ ಕೆಎಲ್ ರಾಹುಲ್ ಮತ್ತು ಎಡಗೈ ಆಟಗಾರ ಇಶಾನ್ ಕಿಶನ್ ಆಯ್ಕೆಯಾಗಿದ್ದಾರೆ. ಏಷ್ಯಾ ಕಪ್ ಗೆ ಬ್ಯಾಕಪ್ ಆಟಗಾರನಾಗಿದ್ದ ಸಂಜು ಸ್ಯಾಮ್ಸನ್ ರನ್ನು ವಿಶ್ವಕಪ್ ನಿಂದ ಕೈಬಿಡಲಾಗಿದೆ.



ಬ್ಯಾಟಿಂಗ್ ವಿಭಾಗದಲ್ಲಿ ನಾಯಕ ರೋಹಿತ್ ಶರ್ಮಾ, ಅನುಭವಿ ವಿರಾಟ್ ಕೊಹ್ಲಿ ಜೊತೆಗೆ ಶುಭಮನ್ ಗಿಲ್, ಶ್ರೇಯಸ್ ಅಯ್ಯರ್ ಮತ್ತು ಸೂರ್ಯಕುಮಾರ್ ಯಾದವ್ ಆಯ್ಕೆಯಾಗಿದ್ದಾರೆ. ಏಕದಿನ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡದ ಹೊರತಾಗಿಯೂ ಸೂರ್ಯ ವಿಶ್ವಕಪ್ ಸ್ಕ್ಯಾಡ್ ನಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.



ಆಲ್ ರೌಂಡರ್ ಗಳಾಗಿ ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್ ಮತ್ತು ಅಕ್ಷರ್ ಪಟೇಲ್ ಆಯ್ಕೆಯಾಗಿದ್ದಾರೆ.


ತಂಡದಲ್ಲಿ ಸ್ಪಿನ್ನರ್ ಗಳಾಗಿ ಕುಲದೀಪ್ ಯಾದವ್ ಸ್ಥಾನ ಪಡೆದಿದ್ದಾರೆ. ಉಳಿದಂತೆ ರವೀಂದ್ರ ಜಡೇಜಾ ಮತ್ತು ಅಕ್ಷರ್ ಪಟೇಲ್ ಅವರು ಸ್ಪಿನ್ನರ್ ಗಳಾಗಿದ್ದಾರೆ. ಏಷ್ಯಾಕಪ್ ನಲ್ಲಿ ಸ್ಥಾನ ಪಡೆಯದ ಅನುಭವಿ ಸ್ಪಿನ್ನರ್ ಗಳಾದ ಯುಜುವೇಂದ್ರ ಚಾಹಲ್ ಮತ್ತು ರವಿಚಂದ್ರನ್ ಅಶ್ವಿನ್ ಅವರಿಗೆ ವಿಶ್ವಕಪ್ ಗೂ ಅವಕಾಶ ಸಿಕ್ಕಿಲ್ಲ.


ವೇಗದ ಬೌಲಿಂಗ್ ವಿಭಾಗದಲ್ಲಿ ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್ ಮತ್ತು ಮೊಹಮ್ಮದ್ ಶಮಿ ಇದ್ದಾರೆ.


ವಿಶ್ವಕಪ್ ಗೆ ಭಾರತ ತಂಡ


ರೋಹಿತ್ ಶರ್ಮಾ (ನಾ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ  ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮತ್ತು ಮೊಹಮ್ಮದ್ ಸಿರಾಜ್.

ಶಿರಾಡಿ ಘಾಟ್ ಗುಡ್ಡ ಕುಸಿತ : ಸ್ಥಳಕ್ಕೆ ಬಂದ ಸಿಎಂ ಸಿದ್ದರಾಮಯ್ಯ

Posted by Vidyamaana on 2024-08-03 22:27:12 |

Share: | | | | |


ಶಿರಾಡಿ ಘಾಟ್ ಗುಡ್ಡ ಕುಸಿತ : ಸ್ಥಳಕ್ಕೆ ಬಂದ ಸಿಎಂ ಸಿದ್ದರಾಮಯ್ಯ

ಹಾಸನ: ರಾಜ್ಯದಲ್ಲಿ ಮಳೆರಾಯನ ಆರ್ಭಟದಿಂದ ಜನತೆ ಬೆಚ್ಚಿ ಬಿದ್ದಿದ್ದಾರೆ. ಚಿಕ್ಕಮಗಳೂರು, ಶಿರೂರು ಈಗ ಶಿರಾಡಿ ಘಾಟ್ ಕೂಡ ಗುಡ್ಡ ಕುಸಿತದಿಂದ ಹೊರತಾಗಿಲ್ಲ. ಇಂದು ಸಿಎಂ ಸಿದ್ದರಾಮಯ್ಯ ಅವರು ಶಿರಾಡಿ ಘಾಟ್ ನಲ್ಲಿ ಗುಡ್ಡ ಕುಸಿತಗೊಂಡ ಪ್ರದೇಶಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಅಧಿಕಾರಿಗಳ ತಂಡದೊಂದಿಗೆ ಗುಡ್ಡ ಕುಸಿತದ‌ ಸ್ಥಳಕ್ಕೆ‌ ಬಂದಿದ್ದಾರೆ. ಈ ವೇಳೆ ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡಿದ್ದಾರೆ.

ಡೆಂಘೀ ಕೇಸ್ ಹೆಚ್ಚಳ.. ರಾಜ್ಯದಲ್ಲಿ ದಾಖಲಾದ ಒಟ್ಟು ಪ್ರಕರಣ ಎಷ್ಟು ಗೊತ್ತಾ!?

Posted by Vidyamaana on 2024-06-26 13:03:34 |

Share: | | | | |


ಡೆಂಘೀ ಕೇಸ್ ಹೆಚ್ಚಳ.. ರಾಜ್ಯದಲ್ಲಿ ದಾಖಲಾದ ಒಟ್ಟು ಪ್ರಕರಣ ಎಷ್ಟು ಗೊತ್ತಾ!?

ಬೆಂಗಳೂರು, ಚಿಕ್ಕಮಗಳೂರು, ಮೈಸೂರು, ಹಾವೇರಿ, ಶಿವಮೊಗ್ಗ, ಚಿತ್ರದುರ್ಗ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಕರಣಗಳು ಕಾಣಿಸಿಕೊಂಡಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ ಬರೋಬ್ಬರಿ 1230 ಪ್ರಕರಣಗಳು ವರದಿಯಾಗಿರೋ ಬಗ್ಗೆ ಮಾಹಿತಿ ನೀಡಿದರು.

ರಾಜ್ಯದಲ್ಲಿ ಡೆಂಘೀ ನಿಯಂತ್ರಣಕ್ಕೆ ಆಗತ್ಯ ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ‌ಅಗತ್ಯ ಚಿಕಿತ್ಸೆ, ಚುಚ್ವು ಮದ್ದು, ಪ್ಲೇಟ್ ಲೆಟ್ಸ್ ಗಳ ಸಂಗ್ರಹ, ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಚಿಕಿತ್ಸಾ ಸೌಲಭ್ಯಗಳು, ಔಷಧಿಗಳು ಲಭ್ಯವಿರುವುದನ್ನು ಖಾತರಿಪಡಿಸಿಕೊಳ್ಳಲೂ ಸೂಚಿಸಿದರು.

BREAKING : ಅಧಿಕೃತವಾಗಿ ಬಿಜೆಪಿ ಪಕ್ಷ ಸೇರ್ಪಡೆಗೊಂಡ ಸಂಸದೆ ಸುಮಲತಾ ಅಂಬರೀಶ್

Posted by Vidyamaana on 2024-04-05 14:00:14 |

Share: | | | | |


BREAKING : ಅಧಿಕೃತವಾಗಿ ಬಿಜೆಪಿ ಪಕ್ಷ ಸೇರ್ಪಡೆಗೊಂಡ ಸಂಸದೆ ಸುಮಲತಾ ಅಂಬರೀಶ್

ಬೆಂಗಳೂರು : ಲೋಕಸಭೆ ಚುನಾವಣೆ ಹಿನ್ನೆಲೆ ಇಂದು ಮಂಡ್ಯ ಸಂಸದೆ ಅಂಬರೀಶ್ ಅವರು ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಅಧಿಕೃತವಾಗಿ ಬಿಜೆಪಿ ಪಕ್ಷವನ್ನು ಸೇರ್ಪಡೆಗೊಂಡರು.ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಕೇಸರಿ ಶಾಲು ಹಾಕಿ ಬಿಜೆಪಿ ಪಕ್ಷದ ಬಾವುಟ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.

ಪುತ್ತಿಲ ಅಭಿಮಾನಿ ಬಳಗದ ವಾಟ್ಸಪ್ ಗ್ರೂಪ್ ನಲ್ಲಿ ತೇಜೋವಧೆ, ಕೋಮು ಪ್ರಚೋದನಕಾರಿ ಸಂದೇಶ : ಗೌರವಾಧ್ಯಕ್ಷರಿಂದ ಬಂಟ್ವಾಳ ನಗರ ಠಾಣೆಗೆ ದೂರು

Posted by Vidyamaana on 2023-06-01 16:23:14 |

Share: | | | | |


ಪುತ್ತಿಲ ಅಭಿಮಾನಿ ಬಳಗದ ವಾಟ್ಸಪ್ ಗ್ರೂಪ್ ನಲ್ಲಿ ತೇಜೋವಧೆ, ಕೋಮು ಪ್ರಚೋದನಕಾರಿ ಸಂದೇಶ : ಗೌರವಾಧ್ಯಕ್ಷರಿಂದ ಬಂಟ್ವಾಳ  ನಗರ ಠಾಣೆಗೆ ದೂರು

ಬಂಟ್ವಾಳ : ಅರುಣ್ ಪುತ್ತಿಲ ಅಭಿಮಾನಿ ಬಳಗ ಎಂಬ ವಾಟ್ಸಪ್ ಗ್ರೂಪ್ ನಲ್ಲಿ ಅದರ ಗ್ರೂಪ್ ಲಿಂಕನ್ನು ಬಳಸಿಕೊಂಡು ಗ್ರೂಪ್ ಸೇರಿದ ವ್ಯಕ್ತಿಯೋರ್ವ ಪುತ್ತೂರಿನಲ್ಲಿ ಹಲ್ಲೆಗೊಳಗಾದ ವ್ಯಕ್ತಿಗಳ ಖಾಸಗಿ ಫೋಟೋಗಳನ್ನು ಬಳಸಿಕೊಂಡು ಅರುಣ್ ಪುತ್ತಿಲರ ತೇಜೋವಧೆಯ ಜೊತೆಗೆ ಕೋಮು ಪ್ರಚೋದನೆಗೆ ಪ್ರೇರೆಪಿಸಿರುವುದಾಗಿ ಆರೋಪಿಸಿ ಬಂಟ್ವಾಳ ನಗರಠಾಣೆಗೆ ದೂರು ನೀಡಿದ ಘಟನೆ ನಡೆದಿದೆ.ಅರುಣ್ ಪುತ್ತಿಲ ಅಭಿಮಾನಿ ಸಂಘದ ಗೌರವಾಧ್ಯಕ್ಷರಾದ ರಾಜಶೇಖರ ಕೋಟ್ಯಾನ್ ಎಂಬವರು ಈ ಬಗ್ಗೆ ಠಾಣೆಗೆ ದೂರು ನೀಡಿದ್ದಾರೆ.ಬಂಟ್ವಾಳ ತಾಲೂಕಿನಲ್ಲಿ ಅರುಣ್ ಕುಮಾರ್ ಪುತ್ತಿಲರ ಅಸಂಖ್ಯಾತ ಅಭಿಮಾನಿ ಬಳಗವಿದ್ದು, ಇದಕ್ಕೆ ಪೂರಕವಾಗಿ ಅರುಣ್ ಕುಮಾರ್ ಪುತ್ತಿಲ ಅಭಿಮಾನಿ ಬಳಗ ಬಂಟ್ವಾಳ ಎಂಬ ವಾಟ್ಸಪ್ ಗ್ರೂಪ್ ಇದ್ದು, ಈ ಗ್ರೂಪ್ನಲ್ಲಿ ಸಮಾಜದ ಅಶಕ್ತರ ಏಳಿಗೆಗೆ ದುಡಿಯುವ ಧ್ಯೇಯೋದ್ದೇಶವನ್ನು ಇಟ್ಟುಕೊಂಡು ಸದ್ರಿ ವಾಟ್ಸಪ್ ಗ್ರೂಪ್ ನ ಅಡ್ಮಿನ್ ಗಳಲ್ಲಿ ಒಬ್ಬನಾಗಿರುತ್ತೇನೆ.

ಅದರಂತೆ ಸದ್ರಿ ಗ್ರೂಪ್ ನ ಇನ್ ವೈಟ್ ಲಿಂಕನ್ನು ಬಳಸಿಕೊಂಡು “ಯಾ ಅಲ್ಲಾಹ್” ಎಂಬ ನಾಮಾಂಕಿತ ಹೊಂದಿರುವ ವ್ಯಕ್ತಿಯು ಮೊಬೈಲ್ ನಂಬರ್ ನಿಂದ ಇತ್ತೀಚಿಗೆ ಪುತ್ತೂರಿನಲ್ಲಿ ಪೊಲೀಸರಿಂದ ದೌರ್ಜನ್ಯಕ್ಕೊಳಗಾದ ವ್ಯಕ್ತಿಗಳ ಖಾಸಗಿ ಭಾಗಗಳ ಫೋಟೋಗಳನ್ನು ಬಳಸಿಕೊಂಡು ಅರುಣ್ ಕುಮಾರ್ ಪುತ್ತಿಲರಿಗೆ ಅವಮಾನವಾಗುವ ರೀತಿಯಲ್ಲಿ ಹಾಗೂ ಹಿಂದೂ ಧರ್ಮದ ಶ್ರೇಷ್ಠತೆಯನ್ನು ಎತ್ತಿ ಸಾರುವ ಭಗವಾಧ್ವಜದ ಚಿತ್ರವನ್ನು ಜೋಡಿಸಿ ಸದ್ರಿ ಫೋಟೋಗಳ ಜೊತೆ ನಿಂದನಾತ್ಮಕ ಬರಹಗಳನ್ನು ನಮೂದಿಸಿ ಗ್ರೂಪ್ ಗೆ ಕಳುಹಿಸಿದ್ದು, ಅಲ್ಲದೆ ಕೆಲವೊಂದು ಸ್ವರ ಸಂದೇಶಗಳನ್ನು ಕಳುಹಿಸಿ ಹಿಂದೂ ಧರ್ಮಕ್ಕೆ ಧಕ್ಕೆಯನ್ನುಂಟು ಮಾಡುವ ಹಾಗೂ ಕೋಮು ಪ್ರಚೋದನೆಯನ್ನು ಉಂಟು ಮಾಡಿರುತ್ತಾರೆ. ಈ ರೀತಿ ಕೃತ್ಯವೆಸಗಿದ ವ್ಯಕ್ತಿಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ತಿಳಿಸಲಾಗಿದೆ.

ಈ ವೇಳೆ ವಕೀಲರಾದ ಶಿವಾನಂದ್, ಸುಮಿತ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಮಂಗಳೂರು: ಪಡೀಲ್ ಅಂಡರ್‌ಪಾಸ್‌ನಲ್ಲಿ ಅಪಘಾತ ಬಜಾಲ್ ಪಲ್ಲಕೆರೆ ನಿವಾಸಿ ಭವಿನ ಮೃತ್ಯು - ಇಬ್ಬರಿಗೆ ತೀವ್ರ ಗಾಯ

Posted by Vidyamaana on 2023-09-14 22:22:47 |

Share: | | | | |


ಮಂಗಳೂರು: ಪಡೀಲ್ ಅಂಡರ್‌ಪಾಸ್‌ನಲ್ಲಿ ಅಪಘಾತ ಬಜಾಲ್ ಪಲ್ಲಕೆರೆ ನಿವಾಸಿ ಭವಿನ ಮೃತ್ಯು - ಇಬ್ಬರಿಗೆ ತೀವ್ರ ಗಾಯ

ಮಂಗಳೂರು: ನಗರದ ಪಡೀಲ್ ಅಂಡ‌ ಪಾಸ್‌ನಲ್ಲಿ ಗುರುವಾರ ನಡೆದ ರಸ್ತೆ ಅಫಘಾತದಲ್ಲಿ ವಿದ್ಯಾರ್ಥಿಯೊಬ್ಬ ಮೃತಪಟ್ಟು ಇಬ್ಬರು ಗಾಯಗೊಂಡಿರುವುದಾಗಿ ಸಂಚಾರ ಠಾಣೆಯ ಪೊಲೀಸರು ಮಾಹಿತಿ ನೀಡಿದ್ದಾರೆ.


ಮೃತಪಟ್ಟ ಯುವಕನನ್ನು ಬಜಾಲ್ ಸಮೀಪದ ಪಲ್ಲಕೆರೆಯ ನಿವಾಸಿ ಭವಿನ್ ರಾಜ್ (20) ಎಂದು ಗುರುತಿಸಲಾಗಿದೆ. ಗಾಲ್ವಿನ್ (19) ಮತ್ತು ಆಶಿತ್ 17) ಎಂಬವರು ಗಾಯಗೊಂಡಿದ್ದು, ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.


ನಗರದ ಖಾಸಗಿ ಕಾಲೇಜಿನಲ್ಲಿ ಪ್ರಥಮ ವರ್ಷದ ಪದವಿ ಕಲಿಯುತ್ತಿದ್ದ ಭವಿನ್ ರಾಜ್ ಗುರುವಾರ ಮಧ್ಯಾಹ್ನ ತನ್ನ ಗೆಳೆಯರ ಜತೆ ಬೈಕ್‌ನಲ್ಲಿ ಸಂಚರಿಸುತ್ತಿದ್ದಾಗ ಪಡೀಲ್ ಅಂಡರ್‌ಪಾಸ್ ಬಳಿ ಬೈಕ್ ನಿಯಂತ್ರಣ ತಪ್ಪಿ ಅಂಡರ್‌ಪಾಸ್‌ ಫುಟ್‌ಪಾತ್‌ಗೆ ಡಿಕ್ಕಿಯಾಗಿದೆ ಎನ್ನಲಾಗಿದೆ. ಇದರಿಂದ ಮೂವರು ಕೂಡ ಗಾಯಗೊಂಡಿದ್ದು, ಈ ಪೈಕಿ ಭವಿನ್ ರಾಜ್ ಮೃತಪಟ್ಟಿದ್ದಾರೆ.


ಮಂಗಳೂರು ದಕ್ಷಿಣ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Recent News


Leave a Comment: