ಅಪ್ರಾಪ್ತಗೆ ಲೈಂಗಿಕ ಕಿರುಕುಳ ಆರೋಪ. ಬೆಳಿಯೂರುಕಟ್ಟೆ ನಿವಾಸಿ ಪ್ರಸಾದ್ ಬಂಧನ

ಸುದ್ದಿಗಳು News

Posted by vidyamaana on 2024-07-24 10:52:54 |

Share: | | | | |


ಅಪ್ರಾಪ್ತಗೆ ಲೈಂಗಿಕ ಕಿರುಕುಳ ಆರೋಪ. ಬೆಳಿಯೂರುಕಟ್ಟೆ ನಿವಾಸಿ ಪ್ರಸಾದ್ ಬಂಧನ

ಪುತ್ತೂರು : ಅಪ್ರಾಪ್ತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬೆಳಿಯೂರುಕಟ್ಟೆ ನಿವಾಸಿಯೋರ್ವನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದು ಬಂದಿದೆ.

ಬೆಳಿಯೂರುಕಟ್ಟೆ ನಿವಾಸಿ ಅಪ್ರಾಪ್ತೆಗೆ ವಿವಾಹಿತ ಪ್ರಸಾದ್ ಎಂಬ ವ್ಯಕ್ತಿ ಲೈಂಗಿಕ ಕಿರುಕುಳ ನೀಡಿದ್ದಾಗಿ ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿರುವುದಾಗಿ ತಿಳಿದು ಬಂದಿದೆ.

 Share: | | | | |


ಬಜರಂಗದಳ ಕಾರ್ಯಕರ್ತರಿಗೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ; ಆರ್. ಅಶೋಕ್

Posted by Vidyamaana on 2024-02-23 14:48:48 |

Share: | | | | |


ಬಜರಂಗದಳ ಕಾರ್ಯಕರ್ತರಿಗೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ; ಆರ್. ಅಶೋಕ್

ಮಂಗಳೂರು: ಬಜರಂಗದಳ ಕಾರ್ಯಕರ್ತರ ಮೇಲೆ ಗೂಂಡಾ ಕಾಯ್ದೆ ಹಾಕಿದ್ದೆ ಎಂದು ಹೇಳಿ ಹಿಂದು ಸಂಘಟನೆಗಳ ಆಕ್ರೋಶಕ್ಕೆ ಗುರಿಯಾಗಿದ್ದ ಬಿಜೆಪಿಯ ವಿಪಕ್ಷ ನಾಯಕ ಆರ್. ಅಶೋಕ್, ವಿಶ್ವ ಹಿಂದು ಪರಿಷತ್ ಮತ್ತು ಬಜರಂಗದಳ ಕಾರ್ಯಕರ್ತರ ಕ್ಷಮೆ ಕೇಳಿದ್ದಾರೆ.


ಜ್ಞಾನವಾಪಿ ದೇವಸ್ಥಾನದ ಬಗ್ಗೆ ರಾಮನಗರದ ವಕೀಲರೊಬ್ಬರು ಅವಹೇಳನಕಾರಿ ಶಬ್ದ ಹಾಕಿದ್ದರು. ಅಧಿವೇಶನದಲ್ಲಿ ಈ ವಿಚಾರ ಚರ್ಚೆಗೆ ಬಂದಾಗ, ನಾನು ಕೂಡ ಗೃಹ ಸಚಿವನಾಗಿದ್ದೆ. ನೀವು ಮುಸ್ಲಿಮರಿಂದ ಒತ್ತಡ ಇದೆಯೆಂದು ಕ್ರಮ ಜರುಗಿಸದೇ ಇರಬಾರದು. ಮುಲಾಜಿಲ್ಲದೇ ಕ್ರಮ ತೆಗೆದುಕೊಳ್ಳಬೇಕು. ಹಿಂದೆ ಪಬ್ ದಾಳಿ ಸಂದರ್ಭದಲ್ಲಿ ಬಜರಂಗದಳ ಕಾರ್ಯಕರ್ತರ ಮೇಲೂ ಗೂಂಡಾ ಕಾಯ್ದೆ ಹಾಕಿದ್ದೆ. ಒತ್ತಡ ಇದೆಯೆಂದು ಸುಮ್ಮನೆ ಬಿಡಲಿಲ್ಲ ಎಂದು ಹೇಳಿದ್ದೆ. ಇದರಿಂದ ಬಜರಂಗದಳ ಕಾರ್ಯಕರ್ತರಿಗೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ.


ನಾನು ಕೂಡ ಹತ್ತು ವರ್ಷ ಬಜರಂಗದಳ ಕಾರ್ಯಕರ್ತನಾಗಿದ್ದೆ. ಕ್ಷಮೆ ಕೇಳುವುದರಿಂದ ಯಾವುದೇ ವಿಷಾದನೂ ಇಲ್ಲ, ನೋವೂ ಇಲ್ಲ. ಬಜರಂಗದಳ ಕಾರ್ಯಕರ್ತರೂ ನಮ್ಮವರೇ. ಆದ್ದರಿಂದ ಈ ವಿಚಾರವನ್ನು ಇಲ್ಲಿಗೆ ಮುಕ್ತಾಯ ಮಾಡಿ ಎಂದು ಅಶೋಕ್ ಮಾಧ್ಯಮಕ್ಕೆ ಪ್ರತಿಕ್ರಿಯಿಸುತ್ತಾ ಹೇಳಿದ್ದಾರೆ. ಅಶೋಕ್ ಅವರನ್ನು ವಿಪಕ್ಷ ನಾಯಕ ಸ್ಥಾನದಿಂದ ಕಿತ್ತು ಹಾಕಬೇಕೆಂದು ಕರಾವಳಿ ಮತ್ತು ಮಲೆನಾಡಿನಲ್ಲಿ ಬಜರಂಗದಳ ಕಾರ್ಯಕರ್ತರು ಅಭಿಯಾನ ಆರಂಭಿಸಿದ್ದರು. ಅಲ್ಲದೆ, ವಿಶ್ವಹಿಂದು ಪರಿಷತ್, ಬಜರಂಗದಳ ಪ್ರಮುಖರು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರನ್ನು ಭೇಟಿಯಾಗಿ ಕ್ರಮಕ್ಕೆ ಆಗ್ರಹಿಸಿದ್ದರು.

ಮಂಗಳೂರು ಮಾದಕ ವಸ್ತು ಕೊಕೇನ್ ಪತ್ತೆ: ಇಬ್ಬರು ಆರೋಪಿಗಳ ಬಂಧನ

Posted by Vidyamaana on 2024-03-19 08:03:50 |

Share: | | | | |


ಮಂಗಳೂರು ಮಾದಕ ವಸ್ತು ಕೊಕೇನ್ ಪತ್ತೆ: ಇಬ್ಬರು ಆರೋಪಿಗಳ ಬಂಧನ

ಮಂಗಳೂರು, ಮಾ.20: ಗೋವಾದಿಂದ ಮಂಗಳೂರು ನಗರ ಹಾಗೂ ಕೇರಳ ರಾಜ್ಯಕ್ಕೆ ಮಾದಕ ವಸ್ತುವಾದ ಕೊಕೇನ್ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಪತ್ತೆ ಹಚ್ಚಿ 35 ಗ್ರಾಂ ಕೊಕೇನ್ ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಅಂಬ್ಲಮೊಗರು ಕೊಳಂಜಹಿಟ್ಟು ಸದಕತ್.ಯು ಯಾನೆ ಶಾನ್ ನವಾಝ್(31) ಮತ್ತು ಅಂಬ್ಲಮೊಗರು ಸೇನರಬೆಟ್ಟು ಅಶ್ಫಕ್ ಯಾನೆ ಅಶ್ಫಾ (25) ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತ ಆರೋಪಿಗಳ ವಶದಲ್ಲಿದ್ದ ದ್ವಿಚಕ್ರ ವಾಹನ ಮತ್ತು ಅದರಲ್ಲಿ ಸಾಗಾಟ ಮಾಡುತ್ತಿದ್ದ 2,72,000 ರೂ. ಮೌಲ್ಯದ 35 ಗ್ರಾಂ ನಿಷೇಧಿತ ಮಾದಕ ವಸ್ತು ಕೊಕೇನ್, 3 ಮೊಬೈಲ್ ಫೋನ್ ಗಳು, ಡಿಜಿಟಲ್ ತೂಕ ಮಾಪಕ, ನಗದು ರೂ. 5560 ನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 4,00,000 ಆಗಿರುತ್ತದೆ. ಈ ಬಗ್ಗೆ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.ಮಂಗಳೂರು ನಗರಕ್ಕೆ ಗೋವಾದಿಂದ ಮಾದಕ ವಸ್ತುವಾದ ಕೊಕೇನ್ ಅನ್ನು ಖರೀದಿಸಿಕೊಂಡು ಸಾಗಾಟ, ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಇನ್ಸ್‌ಪೆಕ್ಟರ್ ಶ್ಯಾಮ್ ಸುಂದರ್ ಎಚ್ ಎಂ ನೇತೃತ್ವದ ಸಿಸಿಬಿ ಪೊಲೀಸರು ಉಳ್ಳಾಲ ತಾಲೂಕು ಆಂಬ್ಲಮೊಗರು ಗ್ರಾಮದ ಎಲಿಯಾರ್ ಪದವು ಮೈದಾನದ ಬಳಿ ದ್ವಿಚಕ್ರ ವಾಹನದಲ್ಲಿ ಕೊಕೇನ್ ಮಾರಾಟ ಮತ್ತು ಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು ಪತ್ತೆ ಹಚ್ಚಿದರು.

ಮಾದಕ ವಸ್ತು ಮಾರಾಟ ಮತ್ತು ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆರೋಪಿಗಳ ಪೈಕಿ ನವಾಝ್ ವಿರುದ್ಧ ಈ ಹಿಂದೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಸಾಗಾಟದ ಪ್ರಕರಣ ಹಾಗೂ ಹಲ್ಲೆ ಪ್ರಕರಣ ದಾಖಲಾಗಿರುತ್ತದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.ನಿರೀಕ್ಷಕರಾದ ಶ್ಯಾಮ್ ಸುಂದರ್ ಎಚ್ ಎಂ, ಪಿಎಸ್‌ಐ ಗಳಾದ ಶರಣಪ್ಪ ಭಂಡಾರಿ ಮತ್ತು ಸಿಸಿಬಿ ಸಿಬ್ಬಂದಿ ಪಾಲ್ಗೊಂಡಿದ್ದರು.

ನಕಲಿ ಚಿನ್ನ ದ ಆಸೆಗೆ ತುಮಕೂರಿನಲ್ಲಿ ಬಲಿಯಾದರೇ ಬೆಳ್ತಂಗಡಿಯ ಮೂವರು?

Posted by Vidyamaana on 2024-03-23 10:38:46 |

Share: | | | | |


ನಕಲಿ ಚಿನ್ನ ದ ಆಸೆಗೆ ತುಮಕೂರಿನಲ್ಲಿ ಬಲಿಯಾದರೇ ಬೆಳ್ತಂಗಡಿಯ ಮೂವರು?

ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿ ಕೆರೆಗೆ ತಳ್ಳಿದ ಪ್ರಕರಣದಲ್ಲಿ ಮೂವರು ಸಾವನ್ನಪ್ಪಿದ ಸಂಬಂಧಪಟ್ಟಂತೆ ಆರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಪ್ರಕರಣದ‌ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಮತ್ತು ಐದು ಜನರನ್ನು ಕೋರಾ ಪೊಲೀಸರು ಮಾ.22 ರಂದು ರಾತ್ರಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ತುಮಕೂರಿಗೆ ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56) , ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ಹೋಗಿದ್ದರು ಎಂದು ಗುರುತಿಸಿದ್ದಾರೆ.

ಇನ್ನು ಮೂರು ಜನ ಮೃತರೆಲ್ಲಾ ನಕಲಿ ಚಿನ‌್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಅನ್ನೋದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಕಡಿಮೆ ಚಿನ್ನವನ್ನು ಬೆಲೆಗೆ ನೀಡುತ್ತೇವೆ ಎಂದು ಸುಳ್ಳು ಹೇಳಿ ಮೂವರನ್ನು ಕರೆಸಿ ಹಣ ದೋಚುವ ಪ್ಲ್ಯಾನ್ ಮಾಡಿ ಕರೆಸಿಕೊಂಡು ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಲಾಗಿದೆ ಎನ್ನಲಾಗಿದೆ.

ಪ್ರಕರಣದ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಮತ್ತು ಇತರ ಐದು ಜನ ಸೇರಿ ಒಟ್ಟು ಆರು ಜನರನ್ನು ವಶಕ್ಕೆ ಪಡೆದಿರುವ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. 


ಕೋರಾ ಪೊಲೀಸ್ ಠಾಣೆಯಲ್ಲಿ ಮಾ.22 ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು. ಇನ್ನು ಮೂವರ ಶವ ಸಂಪೂರ್ಣವಾಗಿ ಸುಟ್ಟಿರುವ ಕಾರಣ ಗುರುತು ಪತ್ತೆಹಚ್ಚಲು ಡಿಎನ್ಎ ಪರೀಕ್ಷೆ ಬಳಿಕ ಮನೆಮಂದಿಗೆ ಶವ ಬಿಟ್ಟು ಕೊಡಲಿದ್ದಾರೆ. ಡಿಎನ್ಎ ವರದಿ ಬರಲು ಸುಮಾರು ಒಂದು ವಾರ ಬೇಕಾಗುತ್ತದೆ ಎಂದು ಪೊಲೀಸರು ಮನೆಯವರಿಗೆ ತಿಳಸಿದ್ದಾರೆ.

ಉಪ್ಪಿನಂಗಡಿ: ಮನೆಯ ಕಿಟಕಿಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಬಾಲಕ

Posted by Vidyamaana on 2024-04-20 15:41:19 |

Share: | | | | |


ಉಪ್ಪಿನಂಗಡಿ: ಮನೆಯ ಕಿಟಕಿಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಬಾಲಕ

ಉಪ್ಪಿನಂಗಡಿ: ಬಾಲಕನೋರ್ವ ಮನೆಯ ಕಿಟಕಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕರಾಯ ಗ್ರಾಮದ ಶಿವಗಿರಿ ದುಗಲಾಡಿ ಎಂಬಲ್ಲಿ ನಡೆದಿದೆ.


ಆತ್ಮಹತ್ಯೆ ಮಾಡಿಕೊಂಡ ಬಾಲಕ ಇಲ್ಲಿನ ಖಾಸಗಿ ಶಾಲೆಯ ಮುಂದಿನ ಅವಧಿಯಲ್ಲಿ 8ನೇ ತರಗತಿಯ ವಿದ್ಯಾರ್ಥಿಯಾಗಿದ್ದ ಕರಾಯ ಗ್ರಾಮದ ಶಿವಗಿರಿ ದುಗಲಾಡಿ ಮನೆ ನಿವಾಸಿ ನಂದನ್ (13) ಎಂದು ಗುರುತಿಸಲಾಗಿದೆ.

ಪಂಜದ ದಿವಂಗತ ರೋಹಿತ್ ಗೌಡ ಎಂಬವ ರ ಮಗನಾಗಿದ್ದ ಈತ ತನ್ನ ತಂದೆಯ ನಿಧನದ ನಂತರ ದುಗಲಾಡಿಯ ತನ್ನ ಮಾವನ ಮನೆಯಲ್ಲಿದ್ದು ಉಪ್ಪಿನಂಗಡಿಯ ಖಾಸಗಿ ಶಾಲೆಯಲ್ಲಿ ಕಲಿಯುತ್ತಿದ್ದ. ಈತ ಏಳನೇ ತರಗತಿ ಉತ್ತೀರ್ಣನಾಗಿದ್ದು, ಮುಂದಿನ ಶೈಕ್ಷಣಿಕ ವರ್ಷದಲ್ಲಿ 8 ನೇ ತರಗತಿಗೆ ತೇರ್ಗಡೆ ಹೊಂದಿದ್ದ.

ಪುತ್ತೂರು ನಗರ ಠಾಣೆಯ ಎಎಸ್ ಐ ಸುಂದರ ಕಾನಾವು ನಿಧನ

Posted by Vidyamaana on 2024-07-22 11:26:34 |

Share: | | | | |


ಪುತ್ತೂರು ನಗರ ಠಾಣೆಯ ಎಎಸ್ ಐ ಸುಂದರ ಕಾನಾವು ನಿಧನ

ಮುಕ್ಕೂರು : ಪೆರುವಾಜೆ ಗ್ರಾಮದ ಕಾನಾವು ನಿವಾಸಿ, ಪುತ್ತೂರು ನಗರ ಠಾಣೆಯ ಎಎಸ್ ಐ ಸುಂದರ ಕಾನಾವು ಜು.22 ರಂದು ಬೆಳಗ್ಗೆ ನಿಧನ ಹೊಂದಿದರು. ಮೃತರು ಪತ್ನಿ, ಪುತ್ರ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.



ಪುತ್ತೂರು : ಯುವ ವಿಜ್ಞಾನಿ ಭರತ್ ಕಲ್ಲರ್ಪೆ ಆತ್ಮಹತ್ಯೆ

Posted by Vidyamaana on 2023-12-14 12:43:20 |

Share: | | | | |


ಪುತ್ತೂರು : ಯುವ ವಿಜ್ಞಾನಿ ಭರತ್ ಕಲ್ಲರ್ಪೆ ಆತ್ಮಹತ್ಯೆ

ಪುತ್ತೂರು : ಯುವ ವಿಜ್ಞಾನಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರಿನಲ್ಲಿ ನಡೆದಿದೆ. 


ಆರ್ಯಾಪು ಕಲ್ಲರ್ಪೆಯ ಭರತ್ ಆಚಾರ್ಯ ಆತ್ಮಹತ್ಯೆ ಮಾಡಿಕೊಂಡವರು.  


ಹೈದರಾಬಾದಿನಲ್ಲಿ ವಿಜ್ಞಾನಿಯಾಗಿದ್ದ ಭರತ್ ನಿನ್ನೆ ರಾತ್ರಿ ಮನೆಗೆ ಬಂದಿದ್ದು,  ಬೆಳಿಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.


ವಿದ್ಯಾಭ್ಯಾಸ ಮುಗಿಸಿ ಕಳೆದ ತಿಂಗಳಷ್ಟೇ ಉದ್ಯೋಗ ಪಡೆದಿದ್ದರು. 


ಮೃತರು ಸಹೋದರ ಪತ್ರಕರ್ತ ಗಣೇಶ್ ಕಲ್ಲರ್ಪೆ ಸಹೋದರಿ ಹಾಗೂ ತಂದೆಯನ್ನು ಅಗಲಿದ್ದಾರೆ.

Recent News


Leave a Comment: