ಶಿರೂರು ಗುಡ್ಡ ಕುಸಿತ ಪ್ರಕರಣ : ನಾಪತ್ತೆಯಾಗಿದ್ದ ಲಾರಿ ಪತ್ತೆ, ಚಾಲಕ ಅರ್ಜುನನಿಗೆ ಮುಂದುವರೆದ ಶೋಧ ಕಾರ್ಯ!

ಸುದ್ದಿಗಳು News

Posted by vidyamaana on 2024-07-24 19:54:18 |

Share: | | | | |


ಶಿರೂರು ಗುಡ್ಡ ಕುಸಿತ ಪ್ರಕರಣ : ನಾಪತ್ತೆಯಾಗಿದ್ದ ಲಾರಿ ಪತ್ತೆ, ಚಾಲಕ ಅರ್ಜುನನಿಗೆ ಮುಂದುವರೆದ ಶೋಧ ಕಾರ್ಯ!

ಉತ್ತರಕನ್ನಡ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ರಾಷ್ಟ್ರೀಯ ಹೆದ್ದಾರಿ 66ರ ಬಳಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದ ಕೇರಳ ಮೂಲದ ಲಾರಿ ಇದೀಗ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಆದರೆ ಲಾರಿ ಚಾಲಕ ಅರ್ಜುನ ಇನ್ನೂ ಪತ್ತೆ ಆಗಿರದ ಕಾರಣ ಶೋಧ ಕಾರ್ಯ ಮುಂದುವರೆದಿದೆ.

ಕಳೆದ 8 ದಿನಗಳಿಂದ ಶಿರೂರು ಗುಡ್ಡ ಕುಸಿತ ಸ್ಥಳದಲ್ಲಿ ಎನ್ ಡಿ ಆರ್ ಎಫ್ ಎಚ್ ಡಿ ಆರ್ ಎಫ್ ತಂಡ ಸೇರಿದಂತೆ ಮಿಲ್ಟ್ರಿ ತಂಡ ಕೂಡ ಮಣ್ಣು ತೆರವು ಕಾರ್ಯಾಚರಣೆಗೆ ಆಗಮಿಸಿತ್ತು. ಈ ವೇಳೆ ನಿನ್ನೆಯವರೆಗೆ 8 ಮೃತದೇಹಗಳನ್ನು ಪತ್ತೆ ಮಾಡಲಾಗಿದ್ದು, ಇನ್ನೂ ಹಲವರು ಮಣ್ಣಿನ ಅಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆಇದೀಗ ಗಂಗಾವಳಿ ನದಿಯಲ್ಲಿ ನಾಪತ್ತೆಯಾಗಿದ್ದ ಲಾರಿ ಪತ್ತೆಯಾಗಿದೆ. ಟಿಂಬರ್ ಲಾರಿ ನದಿಯಲ್ಲಿ ಪತ್ತೆ ಆಗಿರುವ ಸ್ಥಿತಿಯಲ್ಲಿ ಇದೆ.ಕೇರಳ ಮೂಲದ ಲಾರಿ ನದಿಯಲ್ಲಿ ಇದೀಗ ಪತ್ತೆಯಾಗಿದೆ. ಲಾರಿ ಜೊತೆಗೆ ಚಾಲಕ ಅರ್ಜುನ್ ನಾಪತ್ತೆಯಾಗಿದ್ದರು. ಲಾರಿ ಪತ್ತೆಯಾದ ಸ್ಥಳಕ್ಕೆ ಡಿಸಿ ಲಕ್ಷ್ಮಿಪ್ರಿಯ ಭೇಟಿ ನೀಡಿದ್ದಾರೆ. ಕಾರವಾರದ ಶಿರೂರು ಬಳಿ ಗುಡ್ಡ ಕುಸಿತ ಪ್ರಕರಣದ ಬಗ್ಗೆ ಇದೀಗ ಗಂಗಾವಳಿ ನದಿಯಲ್ಲಿ ನಾಪತ್ತೆಯಾಗಿದ್ದ ಲಾರಿ ಪತ್ತೆಯಾಗಿದೆ

 Share: | | | | |


ಬೆಳ್ತಂಗಡಿ : ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಭರತ್ ಬಂಧನ

Posted by Vidyamaana on 2023-06-15 23:18:55 |

Share: | | | | |


ಬೆಳ್ತಂಗಡಿ : ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಭರತ್ ಬಂಧನ

ಬೆಳ್ತಂಗಡಿ : ಜೆ.ಎಮ್.ಎಫ್.ಸಿ ನ್ಯಾಯಾಲಯ ಬೆಳ್ತಂಗಡಿ. ನ್ಯಾಯಾಲಯದ ಚೆಕ್ ಪ್ರಕರಣದ ವಾರಂಟು ಆರೋಪಿ ಸುಳ್ಯ ತಾಲೂಕಿನ ಮಡಪ್ಪಾಡಿ ಗ್ರಾಮದ ಕಡ್ಯ ನಿವಾಸಿ ಜನಾರ್ಧನ ಗೌಡರ ಮಗನಾದ ಭರತ್ ಪಿ(36) ಎಂಬವರನ್ನು ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕರು ಶಿವಕುಮಾರ್ ಹಾಗೂ ಧರ್ಮಸ್ಥಳ ಪೊಲೀಸ್ ಠಾಣಾ ಉಪನಿರೀಕ್ಷಕರಾದ ಅನೀಲ್ ಕುಮಾರ್ ರವರ ಮಾರ್ಗದರ್ಶನದಂತೆ ಜೂನ್ 15 ರ 7 ಗಂಟೆಗೆ ಸುಳ್ಯ ತಾಲೂಕಿನ ಮಡಪ್ಪಾಡಿ ಬಸ್ಸು ತಂಗುದಾಣದ ಬಳಿಯಿಂದ ಧರ್ಮಸ್ಥಳ ಠಾಣಾ ಸಿಬ್ಬಂದಿಗಳಾದ ರಾಜೇಶ್ ಮತ್ತು ರೋಶನ್ ರವರು ವಶಕ್ಕೆ ಪಡೆದು ಮಾನ್ಯ ಬೆಳ್ತಂಗಡಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು ಮಾನ್ಯ ನ್ಯಾಯಾಲಯವು ಆರೋಪಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿದೆ.

ಶಿವಮೊಗ್ಗ : ಪೋಲಿಸ್ ಸಮವಸ್ತ್ರದಲ್ಲೇ ಹೆಡ್ ಕಾನ್ಸ್‌ಟೇಬಲ್ ಆತ್ಮಹತ್ಯೆ

Posted by Vidyamaana on 2023-10-03 16:05:33 |

Share: | | | | |


ಶಿವಮೊಗ್ಗ : ಪೋಲಿಸ್ ಸಮವಸ್ತ್ರದಲ್ಲೇ ಹೆಡ್ ಕಾನ್ಸ್‌ಟೇಬಲ್ ಆತ್ಮಹತ್ಯೆ

ಶಿವಮೊಗ್ಗ ನಗರದ ಪಶ್ಚಿಮ ಸಂಚಾರ ಪೊಲೀಸ್ ಠಾಣೆಯ ಮುಖ್ಯಪೇದೆಯೊಬ್ಬರು ಸಮವಸ್ತ್ರದಲ್ಲೇ ವಿನೋಬನಗರದ ತಮ್ಮ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಇಂದು ಬೆಳಗ್ಗೆ ಕೆಲಸಕ್ಕೆ ಹಾಜರಾಗಿದ್ದ ಜಯಪ್ಪ ಅವರು ಮನೆಗೆ ವಾಪಸ್ ತೆರಳಿದ್ದರು.


ಪಡೀಲ್ ಕೆಪುಳು ಬಳಿ ಬೈಕ್ ಸ್ಕೂಟರ್ ನಡುವೆ ನಡೆದ ಅಪಘಾತದ ಸಿ ಸಿ ಟಿವಿ ದೃಶ್ಯ!



ಮೂರು ದಿನಗಳ ಹಿಂದೆ ಪತ್ನಿ ಅನಾರೋಗ್ಯದಿಂದ ಮೃತಪಟ್ಟಿದ್ದರು.ಪತ್ನಿಯ ಅಗಲಿಕೆಯಿಂದ ತೀವ್ರವಾಗಿ ಮನನೊಂದಿದ್ದ ಜಯಪ್ಪ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದು, ಸಾವಲ್ಲೂ ಪತ್ನಿಯ ಜೊತೆಯಾಗಿದ್ದಾರೆ.


ಇಂದು ಮುಂಜಾನೆ ಕರ್ತವ್ಯಕ್ಕೆ ಹಾಜರಾಗಿದ್ದ ಜಯಪ್ಪ ಹಗ್ಗ ಖರೀದಿಸಿ ವಿನೋಬನಗರ ಚೌಕಿ ಬಳಿಯ ಚೌಡಪ್ಪ ಬಡಾವಣೆಯಲ್ಲಿರುವ ತಮ್ಮ ಮನೆಗೆ ತೆರಳಿ ಮನೆ ಮೇಲುಗಡೆ ಇರುವ ಶೀಟ್‌ಗೆ ಹಾಕಲಾಗಿದ್ದ ಬೀಮ್​ ಗೆ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ರೆಸಾರ್ಟ್ ನ ಸ್ವಿಮ್ಮಿಂಗ್ ಪೂಲ್ ನಲ್ಲಿ ಮುಳುಗಿ ಬಾಲಕ ದುರ್ಮರಣ

Posted by Vidyamaana on 2024-04-12 17:01:10 |

Share: | | | | |


ರೆಸಾರ್ಟ್ ನ ಸ್ವಿಮ್ಮಿಂಗ್ ಪೂಲ್ ನಲ್ಲಿ ಮುಳುಗಿ ಬಾಲಕ ದುರ್ಮರಣ

ಕುಂದಾಪುರ, ಎ.12: ಖಾಸಗಿ ರೆಸಾರ್ಟ್ ಒಂದರ ಸ್ವಿಮ್ಮಿಂಗ್ ಪೂಲ್ ನಲ್ಲಿ ಮುಳುಗಿ ಬಾಲಕನೊಬ್ಬ ಸಾವನಪ್ಪಿದ ಘಟನೆ ಕುಂದಾಪುರ ತಾಲೂಕಿನ ಹೆಂಗವಳ್ಳಿ ಎಂಬಲ್ಲಿ ನಡೆದಿದೆ. ಹೂಡೆ ಮೂಲದ ಮುಹಮ್ಮದ್ ಅರೀಝ್ (10) ಮೃತ ಬಾಲಕ. 


ಹೂಡೆಯ ದಾರುಸ್ಸಲಾಮ್ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ನಾಲ್ಕನೇ ತರಗತಿಯಲ್ಲಿ ಓದುತ್ತಿದ್ದ ಅರೀಝ್ ಶಾಲೆಗೆ ಬೇಸಿಗೆ ರಜೆ ಇದ್ದ ಕಾರಣ ಕುಟುಂಬದ ಜೊತೆಗೆ ಹೆಂಗವಳ್ಳಿಯ ಖಾಸಗಿ ರೆಸಾರ್ಟ್ ಗೆ ತೆರಳಿದ್ದ.

ಬೆಳ್ಳಾರೆ :ಎನ್‌ಐಎ ಅಧಿಕಾರಿಗಳ ತಂಡ ಮನೆಯೊಂದಕ್ಕೆ ದಿಢೀ‌ರ್ ದಾಳಿ

Posted by Vidyamaana on 2024-03-05 10:14:24 |

Share: | | | | |


ಬೆಳ್ಳಾರೆ :ಎನ್‌ಐಎ ಅಧಿಕಾರಿಗಳ ತಂಡ ಮನೆಯೊಂದಕ್ಕೆ ದಿಢೀ‌ರ್ ದಾಳಿ

ಬೆಳ್ಳಾರೆ, ಮಾ. 05. ಎನ್‌ಐಎ ಅಧಿಕಾರಿಗಳ ತಂಡವೊಂದು ದಾಳಿ ನಡೆಸಿದ ಘಟನೆ ಬೆಳ್ಳಾರೆ ಠಾಣಾ ವ್ಯಾಪ್ತಿಯ ಎಣ್ಣೂರು ಸಮೀಪದ ಕುಲಾಯಿತೋಡು ಎಂಬಲ್ಲಿ ಮಂಗಳವಾರದಂದು ಬೆಳ್ಳಂಬೆಳಗ್ಗೆ ನಡೆದಿದೆ.ಎನ್‌ಐಎ ಅಧಿಕಾರಿಗಳ ತಂಡವು ಮನೆಯೊಂದಕ್ಕೆ ದಿಢೀ‌ರ್ ದಾಳಿ ಮಾಡಿದ್ದು, ಮಾಹಿತಿ ಕಲೆ ಹಾಕಿದೆ. ಪ್ರಕರಣವೊಂದಕ್ಕೆ ಸಂಬಂಧಿಸಿ ನಡೆದ ದಾಳಿ ಇದಾಗಿದೆ ಎನ್ನಲಾಗಿದ್ದು, . ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

ರೈಲಿನಲ್ಲಿ ಬೆಂಕಿ ಹಚ್ಚಿ ಮೂವರ ಹತ್ಯೆ ಪ್ರಕರಣ: ಆರೋಪಿ ಶಾರುಖ್ ಸೈಫಿ ಸೆರೆ

Posted by Vidyamaana on 2023-04-05 09:15:56 |

Share: | | | | |


ರೈಲಿನಲ್ಲಿ ಬೆಂಕಿ ಹಚ್ಚಿ ಮೂವರ ಹತ್ಯೆ ಪ್ರಕರಣ: ಆರೋಪಿ ಶಾರುಖ್ ಸೈಫಿ ಸೆರೆ

ಕೇರಳ :  ಕೋಯಿಕ್ಕೋಡ್‌ನಲ್ಲಿ ಚಲಿಸುತ್ತಿದ್ದ ರೈಲಿನ ಬೋಗಿಯೊಳಗೆ ಬೆಂಕಿ ಹಚ್ಚಿ ಮೂವರು ಪ್ರಯಾಣಿಕರ ಸಾವಿಗೆ ಕಾರಣವಾಗಿದ್ದ ಪ್ರಮುಖ ಆರೋಪಿ ಶಾರುಖ್ ಸೈಫಿಯನ್ನು ಮಹಾರಾಷ್ಟ್ರ ಪೊಲೀಸ್ ಮತ್ತು ಕೇಂದ್ರ ಗುಪ್ತಚರ ದಳ ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಬಂಧಿಸಿವೆ.ಮುಂಬೈ ಕೋಯಿಕ್ಕೋಡ್‌ನಲ್ಲಿ ಚಲಿಸುತ್ತಿದ್ದ ರೈಲಿನ ಬೋಗಿಯೊಳಗೆ ಬೆಂಕಿ ಹಚ್ಚಿ ಮೂವರು ಪ್ರಯಾಣಿಕರ ಸಾವಿಗೆ ಕಾರಣವಾಗಿದ್ದ ಪ್ರಮುಖ ಆರೋಪಿ ಶಾರುಖ್ ಸೈಫಿಯನ್ನು ಮಹಾರಾಷ್ಟ್ರ ಪೊಲೀಸ್ ಮತ್ತು ಕೇಂದ್ರ ಗುಪ್ತಚರ ದಳ ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಬಂಧಿಸಿವೆ.

ಈ ಭೀಕರ ಪ್ರಕರಣದಲ್ಲಿ ಮೂವರ ಸಾವು ಮಾತ್ರವಲ್ಲದೇ 9 ಜನರು ಗಾಯಗೊಂಡಿದ್ದರು. ಕೊಯಿಕ್ಕೋಡ್‌ನಲ್ಲಿ ಅಳಪುಳಾ- ಕಣ್ಣೂರ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಸಹ ಪ್ರಯಾಣಿಕರಿಗೆ ಬೆಂಕಿ ಹಚ್ಚಿದ ಆರೋಪಿ ಅಲ್ಲಿಂದ ತಪ್ಪಿಸಿಕೊಂಡಿದ್ದ. ಈತನ ಪತ್ತೆಗೆ ವಿಶೇಷ ತನಿಖಾ ದಳ ತನ್ನ ಹುಡುಕಾಟವನ್ನು ತೀವ್ರಗೊಳಿಸಿತ್ತು.

ಆರೋಪಿ ಶಾರುಖ್‌ ಸೈಫಿ ನೊಯ್ಡಾ ಮೂಲದವನಾಗಿದ್ದು, ಮಂಗಳವಾರ ಆತ ರತ್ನಗಿರಿಯಲ್ಲಿದ್ದಾನೆಂಬ ಲೊಕೇಷನ್ ಪತ್ತೆಯಾಗಿತ್ತು. ರೈಲಿಗೆ ಬೆಂಕಿ ಹಚ್ಚಿ ಅಲ್ಲಿಂದ ಕೆಳಗೆ ಜಿಗಿಯುವಾಗ ಆತನ ತಲೆಗೆ ಗಾಯಾಗಿತ್ತು. ಅದಕ್ಕೆ ಚಿಕಿತ್ಸೆ ಪಡೆಯಲು ಆತ ರತ್ನಾಗಿರಿ ಜಿಲ್ಲಾಸ್ಪತ್ರೆಗೆ ತೆರಳಿದ್ದ. ಆದರೆ, ಅಲ್ಲಿ ಪೂರ್ತಿ ಚಿಕಿತ್ಸೆಯನ್ನು ಪಡೆದುಕೊಳ್ಳದೇ ಪರಾರಿಯಾಗಿದ್ದ. ಬಳಿಕ ರತ್ನಾಗಿರಿಯಲ್ಲಿ ಆತನಿಗಾಗಿ ತೀವ್ರ ಶೋಧ ನಡೆಸಲಾಯಿತು ಕೊನೆಗೆ ಆತ ರೈಲ್ವೆ ನಿಲ್ದಾಣದಲ್ಲಿ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾನೆ. ಸದ್ಯಕ್ಕೆ ರತ್ನಾಗಿರಿ ಆರ್‌ಪಿಎಫ್ ವಶದಲ್ಲಿರುವ ಆತನನ್ನು ಕೇರಳ ಪೊಲೀಸರು ಶೀಘ್ರವೇ ತಮ್ಮ ವಶಕ್ಕೆ ಪಡೆದುಕೊಳ್ಳಲಿದ್ದಾರೆ.

ವಿಟ್ಲ : ಬಸ್-ಪಿಕಪ್‌ ಮುಖಾಮುಖಿ ಡಿಕ್ಕಿ : ಹಲವರಿಗೆ ಗಾಯ

Posted by Vidyamaana on 2024-04-04 12:53:09 |

Share: | | | | |


ವಿಟ್ಲ : ಬಸ್-ಪಿಕಪ್‌ ಮುಖಾಮುಖಿ ಡಿಕ್ಕಿ : ಹಲವರಿಗೆ ಗಾಯ

ವಿಟ್ಲ-ಕಲ್ಲಡ್ಕ ರಸ್ತೆಯ ಗೋಳ್ತಮಜಲು ಎಂಬಲ್ಲಿ ಬಸ್ಸಿಗೆ ಪಿಕಪ್ ಮುಖಾಮುಖಿ ಢಿಕ್ಕಿಯಾಗಿ ಹಲವರು ಗಾಯಗೊಂಡ ಘಟನೆ ನಡೆದಿದೆ.

Recent News


Leave a Comment: