ಹೃದಯಾಘಾತದಿಂದ ವಿರಕ್ತ ಮಠದ ಶ್ರೀ ಸಿದ್ದರಾಮ ಮಹಾಸ್ವಾಮಿಗಳು ವಿಧಿವಶ

ಸುದ್ದಿಗಳು News

Posted by vidyamaana on 2024-07-08 15:11:53 |

Share: | | | | |


ಹೃದಯಾಘಾತದಿಂದ ವಿರಕ್ತ ಮಠದ ಶ್ರೀ ಸಿದ್ದರಾಮ ಮಹಾಸ್ವಾಮಿಗಳು ವಿಧಿವಶ

ಕಲಬುರಗಿ: ಹೃದಯಾಘಾತವಾದ ಹಿನ್ನೆಲೆಯಲ್ಲಿ ವಿರಕ್ತ ಮಠದ ಶ್ರೀ ಸಿದ್ದರಾಮ ಮಹಾಸ್ವಾಮಿ (35) ವಿಧಿವಶರಾಗಿದ್ದಾರೆ.

ಕಲಬುರಗಿ ಜಿಲ್ಲೆ ಕಾಳಗಿ ತಾಲೂಕಿನ ರಟಕಲ್ ಗ್ರಾಮದಲ್ಲಿರುವ ವಿರಕ್ತ ಮಠದ್ದಲ್ಲಿ ಇಂದು ಮುಂಜಾನೆ ತೀವ್ರ ಹೃದಯಾಘಾತದಿಂದ ಮಹಾಸ್ವಾಮಿಗಳು ಇಹಲೋಕ ತ್ಯಜಿಸಿದ್ದಾರೆ.

ಇಂದು ಸಂಜೆ 5 ಗಂಟೆಗೆ ರಟಕಲ್ ಗ್ರಾಮದಲ್ಲಿ ಧಾರ್ಮಿಕ ವಿಧಿ-ವಿಧಾನದ ಪ್ರಕಾರ ಶ್ರೀಗಳ ಅಂತ್ಯಕ್ರಿಯೆ ನಡೆಯಲಿದೆ. ಭಾನುವಾರ ರಟಕಲ್ ಗ್ರಾಮದಲ್ಲಿ ನಡೆದ ವಚನ ಸಂಗಮ ಕಾರ್ಯಕ್ರಮದಲ್ಲಿ ಶ್ರೀಗಳು ಭಾಗಿಯಾಗಿದ್ದರು.

 Share: | | | | |


ಸಹಾರಾ ಸಮೂಹ ದ ಸಂಸ್ಥಾಪಕ ಸುಬ್ರತಾ ರಾಯ್ ವಿಧಿವಶ

Posted by Vidyamaana on 2023-11-15 05:47:04 |

Share: | | | | |


ಸಹಾರಾ ಸಮೂಹ ದ ಸಂಸ್ಥಾಪಕ ಸುಬ್ರತಾ ರಾಯ್ ವಿಧಿವಶ

ನವದೆಹಲಿ: ಸಹಾರಾ ಸಮೂಹದ ( Sahara Group ) ಸ್ಥಾಪಕ ಸುಬ್ರತಾ ರಾಯ್ ( Subrata Roy ) ದೀರ್ಘಕಾಲದ ಅನಾರೋಗ್ಯದ ನಂತರ ಮುಂಬೈನಲ್ಲಿ ನಿಧನರಾದರು. ಅವರಿಗೆ 75 ವರ್ಷ ವಯಸ್ಸಾಗಿತ್ತು. ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಭಾನುವಾರ ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆ ಮತ್ತು ವೈದ್ಯಕೀಯ ಸಂಶೋಧನಾ ಸಂಸ್ಥೆಗೆ (ಕೆಡಿಎಎಚ್) ದಾಖಲಿಸಲಾಗಿತ್ತು.ಆದರೇ ಚಿಕಿತ್ಸೆ ಫಲಿಸದೇ ಅವರು ನಿಧನರಾಗಿರೋದಾಗಿ ತಿಳಿದು ಬಂದಿದೆ.


ಈ ಕುರಿತಂತೆ ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿರುವಂತ ಸಹಾರಾ ಇಂಡಿಯಾ ಪರಿವಾರ್ ( Sahara India Pariwar ), ನಮ್ಮ ಗೌರವಾನ್ವಿತ ಸಹರಾಶ್ರೀ ಸುಬ್ರತಾ ರಾಯ್ ಸಹಾರಾ ಅವರ ನಿಧನದ ಬಗ್ಗೆ ಸಹಾರಾ ಇಂಡಿಯಾ ಪರಿವಾರ್ ತೀವ್ರ ದುಃಖದಿಂದ ತಿಳಿಸುತ್ತಿದೆ. ಸ್ಪೂರ್ತಿದಾಯಕ ನಾಯಕ ಮತ್ತು ದೂರದೃಷ್ಟಿಯ ಸಹರಾಶ್ರೀ ಜಿ ಅವರು ಮೆಟಾಸ್ಟಾಟಿಕ್ ಕ್ಯಾನ್ಸರ್, ಅಧಿಕ ರಕ್ತದೊತ್ತಡ ಮತ್ತು ಮಧುಮೇಹದಿಂದ ಉಂಟಾಗುವ ತೊಡಕುಗಳೊಂದಿಗೆ ದೀರ್ಘಕಾಲದ ಹೋರಾಟದ ನಂತರ ಹೃದಯ ಸ್ತಂಭನದಿಂದಾಗಿ 2023 ರ ನವೆಂಬರ್ 14 ರಂದು ರಾತ್ರಿ 10.30 ಕ್ಕೆ ನಿಧನರಾದರು ಎಂದು ತಿಳಿಸಿದೆ.ಜೂನ್ 10, 1948 ರಂದು ಬಿಹಾರದ ಅರಾರಿಯಾದಲ್ಲಿ ಜನಿಸಿದ ಸುಬ್ರತಾ ರಾಯ್ ಹಣಕಾಸು, ರಿಯಲ್ ಎಸ್ಟೇಟ್, ಮಾಧ್ಯಮ ಮತ್ತು ಆತಿಥ್ಯ ಸೇರಿದಂತೆ ವಿವಿಧ ಕ್ಷೇತ್ರಗಳನ್ನು ವ್ಯಾಪಿಸಿದ ವಿಶಾಲ ಸಾಮ್ರಾಜ್ಯವನ್ನು ಸ್ಥಾಪಿಸಿದರು.


ಸುಬ್ರತಾ ರಾಯ್ ಗೋರಖ್ಪುರದ ಸರ್ಕಾರಿ ತಾಂತ್ರಿಕ ಸಂಸ್ಥೆಯಿಂದ ಮೆಕ್ಯಾನಿಕಲ್ ಎಂಜಿನಿಯರಿಂಗ್ನಲ್ಲಿ ಪದವಿ ಪಡೆದರು. ನಂತರ ಅವರು 1976ರಲ್ಲಿ ಸಹಾರಾ ಫೈನಾನ್ಸ್ ಅನ್ನು ಸ್ವಾಧೀನಪಡಿಸಿಕೊಳ್ಳುವ ಮೊದಲು ಗೋರಖ್ಪುರದಲ್ಲಿ ವ್ಯವಹಾರಕ್ಕೆ ಕಾಲಿಟ್ಟರು.


1978 ರ ಹೊತ್ತಿಗೆ, ಅವರು ಅದನ್ನು ಸಹಾರಾ ಇಂಡಿಯಾ ಪರಿವಾರ್ ಆಗಿ ಪರಿವರ್ತಿಸಿದರು. ಇದು ಭಾರತದ ಅತಿದೊಡ್ಡ ಕಂಪನಿಗಳಲ್ಲಿ ಒಂದಾಗಿದೆ. ಸಹಾರಾ ಸಮೂಹವು 1992ರಲ್ಲಿ ರಾಷ್ಟ್ರೀಯ ಸಹಾರಾ ಎಂಬ ಹಿಂದಿ ಭಾಷೆಯ ಪತ್ರಿಕೆಯನ್ನು ಪ್ರಾರಂಭಿಸಿತು ಮತ್ತು ನಂತರ ಸಹಾರಾ ಟಿವಿಯೊಂದಿಗೆ ದೂರದರ್ಶನ ಕ್ಷೇತ್ರವನ್ನು ಪ್ರವೇಶಿಸಿತು.

ಬೆಳ್ತಂಗಡಿ : ಸಾರ್ವಜನಿಕ ಸ್ಥಳಗಳಲ್ಲಿ ಮಚ್ಚು ತೋರಿಸಿ ಬೆದರಿಕೆ

Posted by Vidyamaana on 2023-10-11 14:36:06 |

Share: | | | | |


ಬೆಳ್ತಂಗಡಿ : ಸಾರ್ವಜನಿಕ ಸ್ಥಳಗಳಲ್ಲಿ ಮಚ್ಚು ತೋರಿಸಿ ಬೆದರಿಕೆ

ಬೆಳ್ತಂಗಡಿ: ವೇಣೂರು ಶ್ರೀ ಬಾಹುಬಲಿ ಕ್ಷೇತ್ರದ ಪರಿಸರದಲ್ಲಿ ಆಕ್ಟೋಬರ್ 10 ರಂದು ಸಂಜೆ ಮಹಾಮಸ್ತಕಾಭಿಷೇಕದ ಪ್ರಯುಕ್ತ ಜಿನ ಭಜನಾ ಸ್ಪರ್ಧೆಗೆ ತರಬೇತಿ ಪಡೆಯುತ್ತಿದ್ದಾಗ ವ್ಯಕ್ತಿಯೊರ್ವ ಸ್ಥಳಕ್ಕೆ ತೆರಳಿ ಅವಾಚ್ಯ ಶಬ್ದಗಳಿಂದ ಬೈದಿರುವುದಲ್ಲದೆ, ಮಚ್ಚು ತೋರಿಸಿ ಜೀವ ಬೆದರಿಕೆ ಹಾಕಿರುವುದಾಗಿ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಬೆಳ್ತಂಗಡಿ ತಾಲೂಕಿನ ಮುಂಡೂರಿನ ಆನಂದ ಆಚಾರ್ಯ (38) ಎಂಬಾತನು ಅಕ್ಟೋಬರ್ 10 ರಂದು ಸಂಜೆ ವೇಣೂರು ಬಾಹುಬಲಿ ಕ್ಷೇತ್ರದಲ್ಲಿ ವಲಯ ಮಟ್ಟದ ಜಿನ ಭಜನಾ ಸ್ಪರ್ದೆಗೆ ಮಹಿಳೆಯರು,ಮಕ್ಕಳು ಸೇರಿ ಸುಮಾರು 70 ಮಂದಿ ಅಭ್ಯಾಸ ನಡೆಸುತ್ತಿದ್ದರು,ಪ್ರವಾಸಿಗರು ಕೂಡ ಇದ್ದರು. ಈ ಸಂದರ್ಭ ಅಲ್ಲಿಗೆ ತೆರಳಿ ಮಚ್ಚು ತೋರಿಸಿ, ಬೊಬ್ಬೆ ಹಾಕಿ ಬೆದರಿಕೆ ಹಾಕಿದ್ದು ಕೂಡಲೇ ಸ್ಥಳಿಯರು ವೇಣೂರು ಪೋಲಿಸ್ ಠಾಣೆಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಪೋಲೀಸರು ಆಗಮಿಸಿ ಮಚ್ಚನ್ನು ವಶಪಡಿಸಿಕೊಂಡು.ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಂಗಳಮುಖಿಯರ ಕಾಟಕ್ಕೆ ಬೇಸತ್ತು ಅಪ್ರಾಪ್ತ ಬಾಲಕ ಆತ್ಮಹತ್ಯೆ

Posted by Vidyamaana on 2024-06-25 09:27:24 |

Share: | | | | |


ಮಂಗಳಮುಖಿಯರ ಕಾಟಕ್ಕೆ ಬೇಸತ್ತು ಅಪ್ರಾಪ್ತ ಬಾಲಕ ಆತ್ಮಹತ್ಯೆ

ಮೈಸೂರು ಜಿಲ್ಲೆಯ ಹುಣಸೂರು ಗ್ರಾಮಾಂತರದಲ್ಲಿ ಅಪ್ರಾಪ್ತ ಬಾಲಕನೊಬ್ಬ ಮಂಗಳಮುಖಿಯ ಕಾಟದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ರಾಹುಲ್ ಮೌರ್ಯ (17) ಮೃತ ದುರ್ದೈವಿ ಎನ್ನಲಾಗಿದೆ. ಹುಣಸೂರಿನ ಕಿರಾಜಾಜಿ ಸರ್ಕಲ್ ಬಳಿ ಎಳನೀರು ವ್ಯಾಪಾರ ಮಾಡುತ್ತಿದ್ದ ರಾಹುಲ್ ಮೌರ್ಯಗೆ ಎಳನೀರು ವ್ಯಾಪಾರ ಮಾಡಿ ಜೀವನ ಕಟ್ಟಿಕೊಂಡಿದ್ದನು.

ವಿಧಾನ ಪರಿಷತ್‌ ಚುನಾವಣೆ ಕಾಂಗ್ರೆಸ್‌ನಿಂದ ಅಭ್ಯರ್ಥಿಗಳ ಘೋಷಣೆ ಯತೀಂದ್ರ ಸಿದ್ದರಾಮಯ್ಯ ಐವನ್‌ ಡಿಸೋಜಾ,ಎನ್‌.ಎಸ್.ಬೋಸರಾಜುಗೆ ಸ್ಥಾನ

Posted by Vidyamaana on 2024-06-02 17:21:29 |

Share: | | | | |


ವಿಧಾನ ಪರಿಷತ್‌ ಚುನಾವಣೆ  ಕಾಂಗ್ರೆಸ್‌ನಿಂದ ಅಭ್ಯರ್ಥಿಗಳ ಘೋಷಣೆ ಯತೀಂದ್ರ ಸಿದ್ದರಾಮಯ್ಯ ಐವನ್‌ ಡಿಸೋಜಾ,ಎನ್‌.ಎಸ್.ಬೋಸರಾಜುಗೆ ಸ್ಥಾನ

ಹೊಸದಿಲ್ಲಿ: ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಜೂನ್ 13 ರಂದು ನಡೆಯುವ ದೈವಾರ್ಷಿಕ ಚುನಾವಣೆಗೆ ಕಾಂಗ್ರೆಸ್ 8 ಸ್ಥಾನಗಳಿಗೆ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ.

ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ, ಹಾಲಿ ಸಚಿವ ಎನ್.ಎಸ್.ಬೋಸರಾಜು, ಸಿಎಂ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜು,

ಸರ್ಕಾರಿ ವೈದ್ಯನಿಂದ ₹ 20 ಲಕ್ಷ ಪಡೆದ ಆರೋಪ: ಇಡಿ ಅಧಿಕಾರಿ ಅರೆಸ್ಟ್​, ಕಚೇರಿ ಮೇಲೆ ತಮಿಳುನಾಡು ಪೊಲೀಸರಿಂದ​ ದಾಳಿ

Posted by Vidyamaana on 2023-12-02 11:59:57 |

Share: | | | | |


ಸರ್ಕಾರಿ ವೈದ್ಯನಿಂದ ₹ 20 ಲಕ್ಷ ಪಡೆದ ಆರೋಪ: ಇಡಿ ಅಧಿಕಾರಿ ಅರೆಸ್ಟ್​, ಕಚೇರಿ ಮೇಲೆ ತಮಿಳುನಾಡು ಪೊಲೀಸರಿಂದ​ ದಾಳಿ

ಚೆನ್ನೈ (ತಮಿಳುನಾಡು): ವೈದ್ಯರೊಬ್ಬರಿಂದ 20 ಲಕ್ಷ ರೂಪಾಯಿ ಲಂಚ ಸ್ವೀಕರಿದ ಆರೋಪದ ಮೇಲೆ ಜಾರಿ ನಿರ್ದೇಶನಾಲಯ (ಇಡಿ)ದ ಅಧಿಕಾರಿಯೊಬ್ಬರನ್ನು ತಮಿಳುನಾಡಿನಲ್ಲಿ ಬಂಧಿಸಲಾಗಿದೆ. ಬಂಧಿತ ಅಧಿಕಾರಿಯನ್ನು ಅಂಕಿತ್ ತಿವಾರಿ ಎಂದು ಗುರುತಿಸಲಾಗಿದೆ. ನಗದು ಸಹಿತ ಕೇಂದ್ರೀಯ ಸಂಸ್ಥೆ ನೀಡಿದ ಅಧಿಕೃತ ಗುರುತಿನ ಚೀಟಿಯನ್ನು ವಶಪಡಿಸಿಕೊಳ್ಳಲಾಗಿದೆ.


ದಿಂಡುಗಲ್ ಜಿಲ್ಲೆಯ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಅಧೀಕ್ಷಕರಾಗಿರುವ ಡಾ.ಸುರೇಶ್ ಬಾಬು ಎಂಬುವರು ಆದಾಯ ಮೀರಿ ಆಸ್ತಿ ಸಂಪಾದನೆ ಆರೋಪ ಎದುರಿಸಿದ್ದರು. 2018ರಲ್ಲಿ ಮಧ್ಯಪ್ರದೇಶದಲ್ಲಿ ಜಾರಿ ನಿರ್ದೇಶನಾಲಯ ಅಧಿಕಾರಿಯಾಗಿ ನೇಮಕಗೊಂಡಿದ್ದ ಅಂಕಿತ್ ತಿವಾರಿ, ಇದೇ ವರ್ಷ ಏಪ್ರಿಲ್​ನಲ್ಲಿ ಮಧುರೈಗೆ ವರ್ಗಾವಣೆಯಾಗಿ ಬಂದಿದ್ದಾರೆ ಡಾ.ಸುರೇಶ್ ಬಾಬು ಅವರನ್ನು ಪ್ರಕರಣದಿಂದ ರಕ್ಷಿಸಲು ಅಂಕಿತ್ ತಿವಾರಿ ಮೂರು ಕೋಟಿ ರೂಪಾಯಿ ಲಂಚ ಕೇಳಿದ್ದರು. ಈ ಹಣವನ್ನು ಜಾರಿ ನಿರ್ದೇಶನಾಲಯಕ್ಕೆ ಒಪ್ಪಿಸುವುದಾಗಿ ಹೇಳಿದ್ದರು ಎನ್ನಲಾಗಿದೆ. ಆದರೆ, ಇಷ್ಟೊಂದು ಹಣಕ್ಕೆ ಕೊಡಲು ಡಾ.ಸುರೇಶ್, ಚೌಕಾಸಿ ನಡೆಸಿ ಕೊನೆಗೆ 51 ಲಕ್ಷ ನೀಡಲು ತೀರ್ಮಾನಿಸಲಾಗಿತ್ತು. ಅಂತೆಯೇ, ನವೆಂಬರ್ 1ರಂದು 20 ಲಕ್ಷ ರೂ.ಗಳನ್ನು ನೀಡಿದ್ದರು. ಉಳಿದ ಮೊತ್ತದ ಸಂಬಂಧ ನಿನ್ನೆ, ನ.30ರಂದು ಅಂಕಿತ್ ತಿವಾರಿ ವಾಟ್ಸ್​ಆಯಪ್​ ಕರೆ ಮಾಡಿ ವೈದ್ಯರನ್ನು ಕೇಳಿದ್ದಾರೆ.


ಆದರೆ, ಈ ಬಗ್ಗೆ ಸುರೇಶ್ ಬಾಬು ದಿಂಡುಗಲ್ ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ನೀಡಿದ್ದಾರೆ. ಈ ವೇಳೆ, ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸರು ನೀಡಿದ ಸಲಹೆಯಂತೆ ಇಂದು, ಡಿಸೆಂಬರ್​ 1ರಂದು ದಿಂಡಿಗಲ್​​ನ ಮಧುರೈ ಬೈಪಾಸ್ ರಸ್ತೆಯಲ್ಲಿ 20 ಲಕ್ಷ ರೂ. ಹಣ ನೀಡುವಂತೆ ಕರೆಸಿದ್ದಾರೆ. ಆಗ ಅಧಿಕಾರಿಯ ಕಾರಿನಲ್ಲಿ ಪಡೆಯಲು ಪ್ರಯತ್ನಿಸಿದಾಗ, ಪೊಲೀಸರು ದಾಳಿ ಮಾಡಿದ್ದಾರೆ. ಆದರೆ, ಅಷ್ಟರಲ್ಲೇ, ಅಂಕಿತ್ ತಿವಾರಿ ಅಲ್ಲಿಂದ ಕಾರಿನಲ್ಲಿ ಪರಾರಿಯಾಗಿದ್ದಾರೆ.


ನಂತರ ದಿಂಡಿಗಲ್​ನಿಂದ ಮಧುರೈಗೆ ಹೋಗುವ ರಸ್ತೆಯ ಕೊಡೈ ರಸ್ತೆಯಲ್ಲಿರುವ ಟೋಲ್ ಗೇಟ್​ ಬಳಿ ಕಾರನ್ನು ತಡೆದಿದ್ದಾರೆ. ಬಳಿಕ ದಿಂಡುಗಲ್​ ಕಚೇರಿಗೆ ಇಡಿ ಅಧಿಕಾರಿಯನ್ನು ಕರೆತಂದು ಬಂಧಿಸಿದ್ದಾರೆ. ಅಲ್ಲದೇ, ಆತನಿಂದ 20 ಲಕ್ಷ ರೂಪಾಯಿ ಹಣ ವಶಪಡಿಸಿಕೊಂಡಿದ್ದಾರೆ. ಅಷ್ಟೇ ಅಲ್ಲ, ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಹೆಚ್ಚಿನ ತನಿಖೆಗಾಗಿ ಮಧುರೈನ ಜಾರಿ ನಿರ್ದೇಶನಾಲಯದ ಸಹಾಯಕ ವಲಯ ಕಚೇರಿಗೂ ಭೇಟಿ ನೀಡಿದ್ದಾರೆ. 


ಬಂಧಿತ ಇಡಿ ಅಧಿಕಾರಿ ಮಧುರೈ ಉಪವಲಯ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದರಿಂದ ಅವರು ಬಳಸುತ್ತಿದ್ದ ಕೊಠಡಿಗಳನ್ನು ಪರಿಶೀಲಿಸಲು ಅಧಿಕಾರಿಗಳು ಅನುಮತಿ ಕೋರಿದ್ದಾರೆ.ಆದರೆ, ಉನ್ನತ ಅಧಿಕಾರಿಗಳ ಅನುಪಸ್ಥಿತಿಯಲ್ಲಿ ಶೋಧಕ್ಕೆ ಅವಕಾಶ ಇಲ್ಲ ಎಂದು ಕಚೇರಿಯಲ್ಲಿದ್ದ ಇಡಿ ಅಧಿಕಾರಿಗಳು ತಿಳಿಸಿದ್ದಾರೆ. ಇದರಿಂದಾಗಿ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಬಹಳ ಹೊತ್ತು ಕಾದಿದ್ದಾರೆ. ಈ ಹಿನ್ನೆಲೆಯಲ್ಲಿ 100ಕ್ಕೂ ಹೆಚ್ಚು ಪೊಲೀಸರು ಜಮಾಯಿಸಿದ್ದರು. ಇದೇ ವೇಳೆ ಇಡಿ ಪರ ವಕೀಲರು ಕೂಡ ಕಚೇರಿಗೆ ಆಗಮಿಸಿದ್ದಾರೆ. ಅಂತಿಮವಾಗಿ ಶೋಧ ಕಾರ್ಯ ಅನುಮತಿ ನೀಡಿದ್ದು, ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸರು ತಮ್ಮ ತನಿಖೆ ಮುಂದುವರೆಸಿದ್ದಾರೆ.

ಪುತ್ತೂರಿಗೆ ಭರ್ತಿದ್ದಾರೆ ಫೈರ ಬ್ರ್ಯಾಂಡ್ ಲೀಡರ್ ಯತ್ನಾಳ್

Posted by Vidyamaana on 2023-05-19 02:44:27 |

Share: | | | | |


ಪುತ್ತೂರಿಗೆ ಭರ್ತಿದ್ದಾರೆ ಫೈರ ಬ್ರ್ಯಾಂಡ್ ಲೀಡರ್ ಯತ್ನಾಳ್

ಪುತ್ತೂರು:ಬ್ಯಾನರ್ ಪ್ರಕರಣದಲ್ಲಿ ಪೊಲೀಸರಿಂದ ದೌರ್ಜನ್ಯಕ್ಕೆ ಒಳಗಾಗಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಗಾಯಾಳುಗಳ ಯೋಗ ಕ್ಷೇಮ ವಿಚಾರಿಸಲು ಮತ್ತು ಪ್ರಕರಣದ ಕುರಿತು ಮಾಹಿತಿ ಪಡೆಯಲು ಬಿಜೆಪಿ ಶಾಸಕ, ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮೇ 19ರಂದು ಪುತ್ತೂರಿಗೆ ಭೇಟಿ ನೀಡಲಿದ್ದಾರೆ. ಎಂದು ಅರುಣ್‌ ಕುಮಾರ್‌ ಪುತ್ತಿಲ ತಿಳಿಸಿದ್ದಾರೆ.ಯತ್ನಾಳ್ ಅವರು ನನಗೆ ದೂರವಾಣಿ ಕರೆ ಮಾಡಿ, ಪುತ್ತೂರಿನಲ್ಲಿ ಪೊಲೀಸರಿಂದ

ಹಲ್ಲೆಗೊಳಗಾದ ಹಿಂದು ಕಾರ್ಯಕರ್ತರ ಯೋಗಕ್ಷೇಮ ವಿಚಾರಿಸಿದರಲ್ಲದೆ ನಾಳೆ ನಾನು

ಪುತ್ತೂರುಗೆ ಬರುತ್ತೇನೆಂದು ತಿಳಿಸಿರುವುದಾಗಿ ಅರುಣ್ ಕುಮಾರ್ ಪುತ್ತಿಲ ಅವರು ಮಾಹಿತಿ ನೀಡಿದರು.

ಪುತ್ತೂರಿನಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ನಡೆದಿರುವ ಪೊಲೀಸ್ ದೌರ್ಜನ್ಯವನ್ನು ಖಂಡಿಸುತ್ತೇನೆ.ನಾಳೆ ಬೆಳಿಗ್ಗೆ ಪುತ್ತೂರಿಗೆ ಭೇಟಿ ಕೊಟ್ಟು ನಮ್ಮ ಕಾರ್ಯಕರ್ತರ ಆರೋಗ್ಯ ವಿಚಾರಿಸಲಿದ್ದೇನೆ.ಹಿಂದೂ ಕಾರ್ಯಕರ್ತರೊಂದಿಗೆ ಸದಾ ನಿಲ್ಲಲಿದ್ದೇನೆ.ಧರ್ಮಕ್ಕಾಗಿ ಹೋರಾಟ ಮಾಡುವ ಕಾರ್ಯಕರ್ತರು ಯಾವುದೇ ಕ್ಷಣದಲ್ಲೂ ಎದೆಗುಂದಬೇಡಿ ನಿಮ್ಮೊಡನೆ ನಾವಿದ್ದೇವೆ ಎಂದು ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು ಸೋಷಿಯಲ್ ಮೀಡಿಯಾದಲ್ಲಿ ಅಭಿಪ್ರಾಯ ಹಂಚಿಕೊಂಡಿದ್ದಾರೆ.

Recent News


Leave a Comment: