ಪುತ್ತೂರಿನ ಪ್ರತಿಷ್ಠಿತ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ತಡರಾತ್ರಿ ಬರ್ಬರ ಹತ್ಯೆ

ಸುದ್ದಿಗಳು News

Posted by vidyamaana on 2023-11-07 04:42:13 |

Share: | | | | |


ಪುತ್ತೂರಿನ ಪ್ರತಿಷ್ಠಿತ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ತಡರಾತ್ರಿ ಬರ್ಬರ ಹತ್ಯೆ

ಪುತ್ತೂರು: ಪುತ್ತೂರಿನ ನಗರದಲ್ಲಿ ತಲವಾರ್ ನಲ್ಲಿ ಕಡಿದು ಕಲ್ಲೇಗ ಟೈಗರ್ಸ್ ನ ಪ್ರಮುಖ ನಾಯಕನನ್ನು ಹತ್ಯೆ ಮಾಡಿದ ಘಟನೆ ಇದೀಗ ನಡೆದಿದೆ.


ಟೈಗರ್ಸ್ ನ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಅವರನ್ನು ಹತ್ಯೆಗೀಡಾದ ಯುವಕ. ಈತ ಪುತ್ತೂರಿನ ನಗರದಲ್ಲಿ ಇದ್ದಾಗ ತಂಡಯೊಂದು ಆಗಮಿಸಿ ಯದ್ವಾತದ್ವ ತಲವಾರ್ ನಲ್ಲಿ ದಾಳಿ ನಡೆಸಿ, ಹತ್ಯೆ ಮಾಡಿದೆ. ಸ್ಥಳಕ್ಕೆ ಆಗಮಿಸಿದ ಪುತ್ತೂರು ನಗರ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

 Share: | | | | |


ಕಲಬುರಗಿ ಮಗಳ ಎದುರೇ ಅನೈತಿಕ ಸಂಬಂಧ: ಪ್ರಕರಣ ದಾಖಲು

Posted by Vidyamaana on 2023-12-31 19:10:51 |

Share: | | | | |


ಕಲಬುರಗಿ ಮಗಳ ಎದುರೇ ಅನೈತಿಕ ಸಂಬಂಧ: ಪ್ರಕರಣ ದಾಖಲು

ಕಲಬುರಗಿ: ಬೆಳಗಾವಿ ಜಿಲ್ಲೆಯ ಹಾಸ್ಟೆಲ್‌ನಲ್ಲಿ ವಾರ್ಡನ್ ಆಗಿರುವ ಮಹಿಳೆಯೊಬ್ಬಳು ಕೆಎಎಸ್ ಅಧಿಕಾರಿಯಾಗಿರುವ ವ್ಯಕ್ತಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದು, ಇದನ್ನು ನೋಡಿದ್ದಕ್ಕೆ ತನ್ನ ಮೇಲೆ ಹಲ್ಲೆ ನಡೆಸಿದ್ದಾಳೆ ಎಂದು ಆರೋಪಿಸಿ 9 ವರ್ಷದ ಮಗಳು ಇಲ್ಲಿನ ಬ್ರಹ್ಮಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ.ಘಟನೆ ಬೈಲಹೊಂಗಲದಲ್ಲಿ ನಡೆದಿದ್ದರಿಂದ ನಗರದ ಪೋಕ್ಸೊ ನ್ಯಾಯಾಲಯದ ಸೂಚನೆ ಮೇರೆಗೆ ಪ್ರಕರಣವನ್ನು ಬೈಲಹೊಂಗಲ ಠಾಣೆಗೆ ಶುಕ್ರವಾರ ವರ್ಗಾಯಿಸಲಾಗಿದೆ.


9 ವರ್ಷದ ಬಾಲಕಿ ನೀಡಿದ ದೂರಿನ ಅನ್ವಯ ಆಕೆಯ ತಾಯಿ ಹಾಗೂ ಕೆಎಎಸ್ ಅಧಿಕಾರಿ ರಾಮನಗೌಡ ಕನ್ನೊಳ್ಳಿ ಎಂಬುವವರ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.


ಕಲಬುರಗಿಯ ಸರಸ್ವತಿ ಗೋದಾಮು ಬಳಿಯ ನಿವಾಸಿಯಾಗಿದ್ದ ಬಾಲಕಿಯ ತಂದೆ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಆ ಬಳಿಕ ತಾಯಿಯ ಸ್ವಂತ ಊರಾದ ಬೆಳಗಾವಿ ಜಿಲ್ಲೆಯ ಪಟ್ಟಣವೊಂದರಲ್ಲಿ ವಾಸವಾಗಿದ್ದಳು. ಈ ಸಂದರ್ಭದಲ್ಲಿ ಹಾಸ್ಟೆಲ್ ವಾರ್ಡನ್ ಆಗಿರುವ ತಾಯಿ ತನ್ನ ಹಿರಿಯ ಅಧಿಕಾರಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಳು. ಹಲವು ಬಾರಿ ಖಾಸಗಿ ಕ್ಷಣಗಳನ್ನು ನನ್ನ ಎದುರೇ ಕಳೆದಿದ್ದರು. ಯಾರ ಬಳಿಯೂ ಹೇಳದಂತೆ ಸಾಕಷ್ಟು ದೈಹಿಕ, ಮಾನಸಿಕ ಹಿಂಸೆ ನೀಡಿದ್ದರು ಎಂದುಬಾಲಕಿ ದೂರಿನಲ್ಲಿ ತಿಳಿಸಿದ್ದಾಳೆ.


ನಮ್ಮ ಸಂಬಂಧಕ್ಕೆ ಮಗಳು ಅಡ್ಡಿಯಾಗುತ್ತಾಳೆ. ಹೀಗಾಗಿ, ಆಕೆಯನ್ನು ಸಾಯಿಸಿ ಬಿಡುತ್ತೇನೆ ಎಂದೂ ತಾಯಿ ಹಲವು ಬಾರಿ ಹೇಳಿದ್ದಳು. ಆಕ್ಷೇಪಾರ್ಹ ಭಂಗಿಯಲ್ಲಿ ಇದ್ದುದನ್ನು ನೋಡಿದ್ದೇನೆ. ಹೀಗಾಗಿ, ನನ್ನ ಮೇಲೆ ಬಿಸಿ ನೀರನ್ನು ಎರಚಿ ದೈಹಿಕ ಹಿಂಸೆ ನೀಡಿದ್ದಾಳೆ. ಹೊಡೆತದಿಂದ ಗಾಯವಾದರೂ ಆಸ್ಪತ್ರೆಗೆ ಸೇರಿಸಿಲ್ಲ ಎಂದು ಬಾಲಕಿ ದೂರಿನಲ್ಲಿ ತಿಳಿಸಿದ್ದಾಳೆ.


ಎರಡನೇ ಆರೋಪಿಯಾಗಿರುವ ರಾಮನಗೌಡ ವಿಜಯಪುರದ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾಗಿ ಕೆಲಸ ನಿರ್ವಹಿಸಿದ್ದರು.

ಬೈಕ್ ಸ್ಕಿಡ್ : ನಾಟಕ ಕಲಾವಿದ ಗೌತಮ್ ಸ್ಥಳದಲ್ಲೇ ಮೃತ್ಯು

Posted by Vidyamaana on 2023-12-31 11:43:08 |

Share: | | | | |


ಬೈಕ್ ಸ್ಕಿಡ್ : ನಾಟಕ ಕಲಾವಿದ ಗೌತಮ್ ಸ್ಥಳದಲ್ಲೇ ಮೃತ್ಯು

ಬಂಟ್ವಾಳ : ನಾಟಕ ಕಲಾವಿದನೋರ್ವ ಬೈಕ್ ಸ್ಕಿಡ್ ಆಗಿ ಬಿದ್ದು ಸ್ಥಳದಲ್ಲೇ ಮೃತಪಟ್ಟ ಘಟನೆ ವಗ್ಗ ಸಮೀಪದ ಕೊಡ್ಯಮಲೆ ಎಂಬಲ್ಲಿ ನಡೆದಿದೆ.‌ಕೊಡ್ಯಮಲೆ ನಿವಾಸಿ ಗೌತಮ್ ಮೃತಪಟ್ಟ ಅವಿವಾಹಿತ ಯುವಕ.‌‌ಗೌತಮ್ ಬೆಳುವಾಯಿಯಲ್ಲಿ ನಡೆದ ಕದಂಬ ನಾಟಕದಲ್ಲಿ ಭಾಗವಹಿಸಿ ಹಿಂತಿರುಗುವ ವೇಳೆ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ.


ಗೌತಮ್ ಕದಂಬ ನಾಟಕದ ಓರ್ವ ಕಲಾವಿದನಾಗಿ ಮಿಂಚುವ ಯುವಕನಾಗಿದ್ದು, ಹಗಲು ಹೊತ್ತಿನಲ್ಲಿ ಬಿಸಿರೋಡಿನ ಸಂಸ್ಥೆಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದರು.

‌ಅಪಘಾತ ನಡೆದು ಬೆಳಿಗ್ಗೆ ವರೆಗೆ ಯಾರು ನೋಡಿರಲಿಲ್ಲ. ಬೆಳಿಗ್ಗೆ ದಾರಿಯಲ್ಲಿ ಹೋಗುವವರು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಟ್ರಾಫಿಕ್ ಎಸ್.ಐ. ಸುತೇಶ್ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.

ಕ್ರಿಸ್ಮಸ್: ಬನ್ನೂರು ಚರ್ಚ್ನಲ್ಲಿ ವಾಳೆವಾರು ಸಾಂಸ್ಕೃತಿಕ ಸ್ಪರ್ಧೆ

Posted by Vidyamaana on 2022-12-16 13:37:29 |

Share: | | | | |


ಕ್ರಿಸ್ಮಸ್: ಬನ್ನೂರು ಚರ್ಚ್ನಲ್ಲಿ ವಾಳೆವಾರು ಸಾಂಸ್ಕೃತಿಕ ಸ್ಪರ್ಧೆ

ಪುತ್ತೂರು: ಬನ್ನೂರು ಸಂತ ಅಂತೋನಿ ಚರ್ಚ್ನಲ್ಲಿ ದ.11 ರಂದು ಕ್ರಿಸ್ಮಸ್ ಹಬ್ಬದ ಪ್ರಯುಕ್ತ ವಾಳೆವಾರು ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳು ನಡೆದವು.

ಸಣ್ಣ ಮಕ್ಕಳಿಂದ ಹಿಡಿದು ಹಿರಿಯರವರೆಗೆ, ಹೆಣ್ಮಕ್ಕಳಿಗೆ, ಮಹಿಳೆಯರಿಗೆ, ಪುರುಷರಿಗೆ, ಯುವಕರಿಗೆ, ವಾಲಿಬಾಲ್, ತ್ರೋಬಾಲ್, ಹಗ್ಗಜಗ್ಗಾಟ, ಲಿಂಬೆ ಚಮಚ ಓಟ, ಬಲೂನ್ ಹೊಡೆಯುವುದು, ಸ್ಟ್ರಾದ ಸಹಾಯದಿಂದ ಒಂದು ಗ್ಲಾಸಿನಿಂದ ಮತ್ತೊಂದು ಗ್ಲಾಸಿಗೆ ನೀರನ್ನು ಹಾಕುವುದು, ಚೆಂಡು ಪಾಸ್ ಮಾಡುವುದು, ಮದುವೆ ಜೋಡಿಗಳಿಗೆ ಬಲೂನ್ ಹೊಡೆಯುವ ಸ್ಪರ್ಧೆ ಮುಂತಾದ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳು ನಡೆದವು. ಚರ್ಚ್ ಪ್ರಧಾನ ಧರ್ಮಗುರು ವಂ|ಪ್ರಶಾಂತ್ ಫೆರ್ನಾಂಡೀಸ್ರವರು ಸ್ಪರ್ಧಾಕೂಟವನ್ನು ಉದ್ಘಾಟಿಸಿ ವಾಳೆಯ ಸದಸ್ಯರೊಂದಿಗೆ ಆಟದಲ್ಲಿ ತೊಡಗಿಸಿಕೊಂಡರು. ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ತೋಮಸ್ ಫೆರ್ನಾಂಡೀಸ್, ಕಾರ್ಯದರ್ಶಿ ಸಿರಿಲ್ ವಾಸ್, ವಿವಿಧ ವಾಳೆಯ ಗುರಿಕಾರರು, ಚರ್ಚ್ ಪಾಲನಾ ಸಮಿತಿ ಉಪಸ್ಥಿತರಿದ್ದರು.

ಸೌಜನ್ಯ ಕೊಲೆ ಪ್ರಕರಣಕ್ಕೆ ಹೊಸ ಟ್ವಿಸ್ಟ್‌: ಮರು ತನಿಖೆ ಸಂಬಂಧ ಸರ್ಕಾರಕ್ಕೆ ಕೋರ್ಟ್‌ ನೋಟಿಸ್

Posted by Vidyamaana on 2024-02-21 13:37:18 |

Share: | | | | |


ಸೌಜನ್ಯ ಕೊಲೆ ಪ್ರಕರಣಕ್ಕೆ ಹೊಸ ಟ್ವಿಸ್ಟ್‌: ಮರು ತನಿಖೆ ಸಂಬಂಧ ಸರ್ಕಾರಕ್ಕೆ ಕೋರ್ಟ್‌ ನೋಟಿಸ್

ಬೆಂಗಳೂರು , ಫೆಬ್ರವರಿ 21: ಹನ್ನೆರಡು ವರ್ಷಗಳ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ತಾಲೂಕಿನ ಧರ್ಮಸ್ಥಳ ಗ್ರಾಮದ ವಿದ್ಯಾರ್ಥಿನಿ ಸೌಜನ್ಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಮರು ತನಿಖೆ ನಡೆಸಲು ಆದೇಶಿಸುವಂತೆ ಕೋರಿ ಮೃತಳ ತಂದೆ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್ ರಾಜ್ಯ ಸರ್ಕಾರ ಮತ್ತು ಸಿಬಿಐಗೆ ನೋಟಿಸ್‌ ಜಾರಿ ಮಾಡಿದೆ.ಮೃತಳ ತಂದೆ ಸೌರ್ಜನ್ಯ ಚಂದಪ್ಪ ಗೌಡ ಸಲ್ಲಿಸಿದ್ದ ತಕರಾರು ಅರ್ಜಿ, ನ್ಯಾಯಮೂರ್ತಿ ಕೆ.ನಟರಾಜನ್‌ ಅವರ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು.ಕೆಲ ಕಾಲ ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ನಂತರ ಅರ್ಜಿಯಲ್ಲಿ ಪ್ರತಿವಾದಿಯಾಗಿರುವ ರಾಜ್ಯ ಗೃಹ ಇಲಾಖೆ ಕಾರ್ಯದರ್ಶಿ, ರಾಜ್ಯ ಪೊಲೀಸ್‌ ಮಹಾ ನಿರ್ದೇಶಕರು, ಸಿಐಡಿ ಎಡಿಜಿಪಿ, ಅಪರಾಧ ಮತ್ತು ತಾಂತ್ರಿಕ ಸೇವಗಳ ವಿಭಾಗದ ಎಡಿಜಿಪಿ, ದಕ್ಷಿಣ ಕನ್ನಡ ಪೊಲೀಸ್‌ ವರಿಷ್ಠಾಧಿಕಾರಿ, ಸಿಐಡಿ ಉಪ ಪೊಲೀಸ್‌ ವರಿಷ್ಠಾಧಿಕಾರಿ, ಬೆಳ್ತಂಗಡಿ ಪೊಲೀಸ್‌ ಠಾಣಾಧಿಕಾರಿ ಮತ್ತು ಸಿಬಿಐಗೆ ನೋಟಿಸ್‌ ಜಾರಿಗೊಳಿಸಿತು. ಮೇಲ್ಮನವಿ ವಿಚಾರಣೆ ಬಾಕಿಪ್ರಕರಣದಿಂದ ಸಂತೋಷ್‌ ರಾವ್‌ ಅನ್ನು ಖುಲಾಸೆಗೊಳಿಸಿ ವಿಚಾರಣಾ ನ್ಯಾಯಾಲಯ ನೀಡಿರುವ ತೀರ್ಪು ಪ್ರಶ್ನಿಸಿ ಸಿಬಿಐ ಸಲ್ಲಿಸಿರುವ ಕ್ರಿಮಿನಲ್‌ ಮೇಲ್ಮನವಿ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಾಕಿಯಿದೆ. ಮೇಲ್ಮನವಿಯೊಂದಿಗೆ ವಿಭಾಗೀಯ ಪೀಠದ ಮುಂದೆ ಈ ಅರ್ಜಿಯನ್ನು ವಿಚಾರಣೆಗೆ ನಿಗದಿಪಡಿಸಬೇಕು ಎಂದು ಅರ್ಜಿದಾರರು ಪರ ವಕೀಲರು ಮನವಿ ಮಾಡಿದರು.ಅದನ್ನು ಪರಿಗಣಿಸಿರುವ ನ್ಯಾಯಪೀಠ, ರೋಸ್ಟರ್‌ ಪ್ರಕಾರ ಸೂಕ್ತ ವಿಭಾಗೀಯ ಪೀಠದ ಮುಂದೆ ಈ ಅರ್ಜಿಯನ್ನು ವಿಚಾರಣೆಗೆ ನಿಗದಿಪಡಿಸಲು ಮುಖ್ಯ ನ್ಯಾಯಮೂರ್ತಿಗಳಿಂದ ಅನುಮತಿ ಪಡೆಯುವಂತೆ ರಿಜಿಸ್ಟ್ರಿಗೆ ನ್ಯಾಯಪೀಠ ಸೂಚಿಸಿದೆ. ಪ್ರಕರಣದಿಂದ ಖುಲಾಸೆಯಾಗಿರುವ ಸಂತೋಷ್‌ ರಾವ್‌ ಅನ್ನು ಸಹ ಪ್ರಕರಣದಲ್ಲಿ ಪ್ರತಿವಾದಿ ಮಾಡಲಾಗಿದೆ.ಅರ್ಜಿದಾರರು, ಪ್ರಾಸಿಕ್ಯೂಷನ್‌ (ತನಿಖಾಧಿಕಾರಿಗಳು) ಈ ಅಪರಾಧ ಕೃತ್ಯದಲ್ಲಿ ಆರೋಪಿಯ ಪಾತ್ರ ಇರುವುದನ್ನು ಮತ್ತು ಆತನ ವಿರುದ್ಧದ ಆರೋಪಗಳನ್ನು ಸಾಬೀತುಪಡಿಸುವಲ್ಲಿ ವಿಫಲವಾಗಿದೆ. ತನಿಖೆಯನ್ನು ಸಮರ್ಪಕವಾಗಿ ಮಾಡಿಲ್ಲವೆಂದು ಸ್ಪಷ್ಟವಾಗಿ ಹೇಳಿದೆ. ಇದರಿಂದ ಇಡೀ ತನಿಖೆ ನ್ಯಾಯೋಚಿತವಾಗಿ ತನಿಖೆ ನಡೆಸಿಲ್ಲ ಎಂಬುದು ಸ್ಪಷ್ಟವಾಗಲಿರುವ ಕಾರಣ ಮರು ತನಿಖೆ ನಡೆಸಲು ಆದೇಶಿಸಬೇಕು ಎಂದು ಕೋರಿದ್ದಾರೆ.ಪ್ರಕರಣದ ಹಿನ್ನೆಲೆ ಏನು..?2012ರ ಅ.9ರಂದು ಸೌಜನ್ಯಅನ್ನು ಅಪಹರಿಸಿ ಸಾಮೂಹಿಕವಾಗಿ ಅತ್ಯಾಚಾರ ಮಾಡಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಬೆಳ್ತಂಗಡಿ ಠಾಣಾ ಪೊಲೀಸರು ಸಂತೋಷ್‌ ರಾವ್‌ ಅನ್ನು ಬಂಧಿಸಿದ್ದರು.ನಂತರ ಪ್ರಕರಣದ ತನಿಖೆಯನ್ನು ಸಿಐಡಿ, ಆ ಬಳಿಕ ಸಿಬಿಐಗೆ ವರ್ಗಾಯಿಸಲಾಗಿತ್ತು. ಸಿಬಿಐ ತನಿಖೆ ಪೂರ್ಣಗೊಳಿಸಿ ಸಂತೋಷ್‌ ರಾವ್‌ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿತ್ತು. ಸೆಷನ್ಸ್‌ ನ್ಯಾಯಾಲಯವು ಸೂಕ್ತ ಸಾಕ್ಷ್ಯಧಾರಗಳಿಲ್ಲ ಎಂದು ಸಂತೋಷ್‌ ರಾವ್‌ ಅವರನ್ನು ಖುಲಾಸೆಗೊಳಿಸಿ 2023ರ ಜೂ.16ರಂದು ಆದೇಶಿಸಿತ್ತು.

ಝೀರೋದಿಂದ 256 ಬೆಡ್ ಆಸ್ಪತ್ರೆ ಕಟ್ಟಿದ ಸಾಮಾನ್ಯ ರೈತ ಕುಟುಂಬದ ಡಾ.ಧನಂಜಯ ಸರ್ಜಿ ; ಕಡಿಮೆ ವೆಚ್ಚದ ವೈದ್ಯಕೀಯ ಚಿಕಿತ್ಸೆ, 160 ವಿಶೇಷ ಚೇತನ ಮಕ್ಕಳ ದತ್ತು, ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜೀವನ - ಸಾಧನೆ

Posted by Vidyamaana on 2024-05-28 22:21:06 |

Share: | | | | |


ಝೀರೋದಿಂದ 256 ಬೆಡ್ ಆಸ್ಪತ್ರೆ ಕಟ್ಟಿದ ಸಾಮಾನ್ಯ ರೈತ ಕುಟುಂಬದ ಡಾ.ಧನಂಜಯ ಸರ್ಜಿ ; ಕಡಿಮೆ ವೆಚ್ಚದ ವೈದ್ಯಕೀಯ ಚಿಕಿತ್ಸೆ, 160 ವಿಶೇಷ ಚೇತನ ಮಕ್ಕಳ ದತ್ತು, ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜೀವನ - ಸಾಧನೆ

ಶಿವಮೊಗ್ಗ, ಮೇ.28: ವಿಧಾನ ಪರಿಷತ್ತಿನ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಸಾಮಾನ್ಯ ರೈತ ಕುಟುಂಬದಲ್ಲಿ ಹುಟ್ಟಿ ಬೆಳೆದು, ಸಣ್ಣ ಪ್ರಾಯದಲ್ಲೇ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಿಕ್ಷಣ ಪಡೆದು ಶಿವಮೊಗ್ಗ ಜಿಲ್ಲೆಯಲ್ಲಿ ಖ್ಯಾತ ಮಕ್ಕಳ ತಜ್ಞರಾಗಿ ಸಾವಿರಾರು ಮಂದಿಗೆ ದೃಷ್ಟಿಯಿತ್ತವರು. 

ಉತ್ಕೃಷ್ಟ ಗುಣಮಟ್ಟದ ಸೇವೆ, ಕೈಗೆಟುಕುವ ದರದಲ್ಲಿ ರೋಗಿಗಳಿಗೆ ಒಂದೇ ಸೂರಿನಡಿ ಸರ್ವ ರೀತಿಯ ಆರೋಗ್ಯ ಸೇವೆ ನೀಡುವ ಡಾ.ಧನಂಜಯ ಸರ್ಜಿ ಶಿವಮೊಗ್ಗದಲ್ಲಿ ಸ್ಥಾಪಿಸಿದ ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಲೆನಾಡಿನಲ್ಲಿ ಮನೆಮಾತಾಗಿದೆ. ಖಾಸಗಿ ಆಸ್ಪತ್ರೆ ಗಳೆಂದರೆ ಬಿಲ್ ನೋಡುತ್ತಲೇ ರೋಗಿಯ ಎದೆ ಝಲ್ ಎನ್ನುತ್ತದೆ. ಆದರೆ, ಇದಕ್ಕೆ ತದ್ವಿರುದ್ಧ ಸರ್ಜಿ ಆಸ್ಪತ್ರೆ. 2014ರಲ್ಲಿ ಝೀರೋ ಬೆಡ್ ನಿಂದ ಆರಂಭಗೊಂಡ ಆಸ್ಪತ್ರೆ ಇಂದು 256 ಬೆಡ್ ಗೆ ತಲುಪಿದ್ದು ಪ್ರಸ್ತುತ ಆರೋಗ್ಯ ಕ್ಷೇತ್ರದ ಹೀರೋ ಆಗಿ ಬೆಳೆದದ್ದು ಅಚ್ಚರಿಯ ಸಂಗತಿ.

ಸರಳ, ಸಜ್ಜನ, ಹಮ್ಮು ಬಿಮ್ಮು ಇಲ್ಲದ ಸಹೃದಯಿ ವ್ಯಕ್ತಿತ್ವದ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕರೂ ಆದ ಡಾ.ಧನಂಜಯ ಸರ್ಜಿ ಅವರು ಮೂಲತಃ ದಾವಣಗೆರೆ ಜಿಲ್ಲೆ ಚೆನ್ನಗಿರಿ ತಾಲೂಕಿನ ಗೊತ್ತೇನಹಳ್ಳಿ ಗ್ರಾಮದವರು. ಸರ್ಜಿ ರುದ್ರಪ್ಪ, ತಾಯಿ ರೇಣುಕಾ ಅವರ ಪುತ್ರ. ಇವರ ಎಲ್ಲ ಸಾಧನೆಯ ಹಿಂದೆ ಪತ್ನಿ, ಆಸ್ಪತ್ರೆಯ ನಿರ್ದೇಶಕರೂ ಆದ ನಮಿತಾ ಸರ್ಜಿ ಅವರ ಶ್ರಮವೂ ಇದೆ. 


ದಾವಣಗೆರೆಯ ಜೆಜೆಎಂ ಕಾಲೇಜಿನಲ್ಲಿ ವೈದ್ಯಕೀಯ ಶಿಕ್ಷಣದಲ್ಲಿ ಅತ್ಯುತ್ತಮ ವಿದ್ಯಾರ್ಥಿಯಾಗಿ ಹೊರಹೊಮ್ಮಿದವರು ಡಾ.ಧನಂಜಯ ಸರ್ಜಿ. ಶಿಕ್ಷಣದ ಹಂತದಲ್ಲೇ ಜಿಲ್ಲೆಯ ಆರೋಗ್ಯ ಕ್ಷೇತ್ರದ ಅಭಿವೃದ್ಧಿಯ ಬಗ್ಗೆ ಕನಸು ಕಂಡವರು. ಆ ಕನಸು ಈಗ ಸಾಕಾರಗೊಂಡಿದೆ. 2007ರ ಮಾರ್ಚ್ 18ರಂದು ಶಿವಮೊಗ್ಗದಲ್ಲಿ ಸರ್ಜಿ ಚೈಲ್ಡ್ ಕೇರ್ ಸೆಂಟರ್ ಮೂಲಕ ಇವರ ಸೇವೆ ಆರಂಭಗೊಂಡಿತ್ತು. ನಂತರ ಶಿವಮೊಗ್ಗದ ಖಾಸಗಿ ಆಸ್ಪತ್ರೆಗಳಲ್ಲಿ ತಿಂಗಳ ಸಂಬಳಕ್ಕೆ ಕೆಲಸ ಮಾಡಿದ್ದರು. 2014ರಲ್ಲಿ ಹೊಸ ಆಸ್ಪತ್ರೆ ಆರಂಭಿಸಿ, ಕೇವಲ 9 ವರ್ಷದಲ್ಲಿ 256 ಬೆಡ್ ವರೆಗೆ ತಲುಪಿದೆ.ಜಿಲ್ಲಾಡಳಿತದಿಂದ ಪ್ರಶಂಸಾ ಪತ್ರ 


ಎರಡು ವರ್ಷಗಳ ಹಿಂದೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಮಕ್ಕಳ ಐಸಿಯು ವಿಭಾಗದಲ್ಲಿ ಬೆಂಕಿ ಕಾಣಿಸಿಕೊಂಡ ಸಂದರ್ಭ ನವಜಾತ 13 ಮಕ್ಕಳನ್ನೂ ಸರ್ಜಿ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿತ್ತು. ಸರ್ಜಿ ಆಸ್ಪತ್ರೆಯಲ್ಲಿ ಈ ಶಿಶುಗಳಿಗೆ ಸೂಕ್ತ ಚಿಕಿತ್ಸೆ ನೀಡಿದ್ದು ಜೀವ ಕಾಪಾಡಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಧನಂಜಯ ಸರ್ಜಿ ಅವರಿಗೆ ಪ್ರಶಂಸಾ ಪತ್ರ ನೀಡುವ ಮೂಲಕ ಸೇವೆಗೆ ಬೆನ್ನು ತಟ್ಟಿ ಪ್ರೋತ್ಸಾಹಿಸಿತ್ತು.


ಇಂದು ಒಂದೇ ಸೂರಿನಡಿ ಎಲ್ಲಾ ರೀತಿಯ ಚಿಕಿತ್ಸಾ ಸೌಲಭ್ಯದ ಆಸ್ಪತ್ರೆಯನ್ನಾಗಿಸಿದ್ದಾರೆ. ಕೈಗೆಟಕುವ ದರ, ಉತ್ಕೃಷ್ಟ ಹಾಗೂ ನಗುಮೊಗದ ವಿಶ್ವಾಸಾರ್ಹ ಸೇವೆಯೇ ಇವರ ಯಶಸ್ಸಿಗೆ ಕಾರಣ. ಈಗ ಅವರ ಆಸ್ಪತ್ರೆಗೆ ರಾಜ್ಯದ ಧಾರವಾಡ, ಹಾವೇರಿ, ಬಳ್ಳಾರಿ, ಚಿತ್ರದುರ್ಗ, ಶಿರಸಿ, ಚಿಕ್ಕಮಗಳೂರು, ಹಾಸನ, ಅರಸೀಕರ ಹಾಗೂ ತುಮಕೂರು, ಬೆಂಗಳೂರು ಜಿಲ್ಲೆಗಳಿಂದ ನಿತ್ಯವೂ ನೂರಾರು ರೋಗಿಗಳು ಚಿಕಿತ್ಸೆಗಾಗಿ ಬರುತ್ತಿದ್ದಾರೆ. ಒಟ್ಟು 75 ಐಸಿಯು ಬೆಡ್ ಗಳು ಆಪರೇಷನ್ ಥಿಯೇಟರ್ ಗಳ ಸೌಲಭ್ಯ ಇದೆ. ಎರಡೂ ಸರ್ಜಿ ಆಸ್ಪತ್ರೆ ಸೇರಿ ವರ್ಷಕ್ಕೆ ಎರಡು ಲಕ್ಷ ರೋಗಿಗಳು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಪ್ರತಿದಿನಕ್ಕೆ ಸರಾಸರಿ 500ರಿಂದ 750 ರೋಗಿಗಳನ್ನು ತಪಾಸಣೆ ನಡೆಸಿ, ಚಿಕಿತ್ಸೆ ನೀಡಲಾಗುತ್ತಿದೆ. ಅಲ್ಲದೇ ವರ್ಷದಲ್ಲಿ 1800ರಿಂದ 2000 ವರೆಗೆ ಹೆರಿಗೆ ಆಗುತ್ತಿದ್ದು, ಚಿಕಿತ್ಸೆ ನೀಡಲಾಗುತ್ತಿದೆ

ಮುಳಿಯ ಗಾನರಥ ಸೀಸನ್-1 ಗ್ರ್ಯಾಂಡ್ ಫಿನಾಲೆ

Posted by Vidyamaana on 2023-08-29 02:07:54 |

Share: | | | | |


ಮುಳಿಯ ಗಾನರಥ ಸೀಸನ್-1 ಗ್ರ್ಯಾಂಡ್ ಫಿನಾಲೆ

ಪುತ್ತೂರು: ಗ್ರಾಮೀಣ ಪ್ರತಿಭೆಗಳಿಗೆ ವೇದಿಕೆ ಒದಗಿಸುವ ನಿಟ್ಟಿನಲ್ಲಿ ಪುತ್ತೂರಿನ ಹೆಸರಾಂತ ಮುಳಿಯ ಜ್ಯುವೆಲ್ಸ್‌ನ ವತಿಯಿಂದ ನಡೆಸಲಾದ ಮುಳಿಯ ಗಾನರಥ ಕರೋಕೆ ಹಾಡುಗಳ ಗಾಯನ ಸ್ಪರ್ಧೆಯ ಗ್ರ್ಯಾಂಡ್‌ ಫಿನಾಲೆಯು ಇನ್ನರ್‌ವೀಲ್‌ ಕ್ಲಬ್‌ನ ಸಹಯೋಗದಲ್ಲಿ ನಡೆಯಿತು.


ಜೂನಿಯರ್ ವಿಭಾಗದಲ್ಲಿ ಪಲ್ಲವಿ ಆರ್ (ಪ್ರಥಮ), ಮೃನಾಲ್ (ದ್ವಿತೀಯ), ವಿಭಾಶ್ರೀ (ತೃತೀಯ) ಹಾಗೂ ಸೀನಿಯರ್ ವಿಭಾಗದಲ್ಲಿ ಮಾಳವಿಕ (ಪ್ರಥಮ), ವಿನೋದ್ ಜಾಲ್ಸೂರ್ (ದ್ವಿತೀಯ) ಹಾಗೂ ಪವಿತ್ರ ಆರ್ (ತೃತೀಯ) ಬಹುಮಾನಗಳನ್ನು ಪಡೆದರು.


ಪ್ರಥಮ ಬಹುಮಾನ ಪಡೆದವರಿಗೆ ಗಾನ ಕೋಗಿಲೆ, ಚಿನ್ನದ ನಾಣ್ಯ ಹಾಗೂ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದವರಿಗೆ ಪ್ರಶಸ್ತಿ ಹಾಗೂ ಬೆಳ್ಳಿಯ ನಾಣ್ಯ ಮತ್ತು ಗ್ರ್ಯಾಂಡ್ ಫಿನಾಲೆಯಲ್ಲಿ ಭಾಗವಹಿಸಿದ ಸ್ಪರ್ಧಿಗಳಿಗೆ ಬೆಳ್ಳಿಯ ನಾಣ್ಯ ನೀಡಿ ಗೌರವಿಸಲಾಯಿತು. ಗಣೇಶ್ ಮಂಗಳೂರು, ಮಿಥುನ್ ರಾಜ್ ಕಬಕ ಹಾಗೂ ವಿದ್ಯಾಶ್ರೀ ಕಲ್ಲಡ್ಕ ತೀರ್ಪುಗಾರರಾಗಿದ್ದರು.


ಕಳೆದ ಎರಡು ವರ್ಷಗಳ ಹಿಂದೆ ಪ್ರಾರಂಭಗೊಂಡ ಗಾನರಥ ಗಾಯನ ಸ್ಪರ್ಧೆಯು ಕಲ್ಲಡ್ಕ, ವಿಟ್ಲ, ಈಶ್ವರಮಂಗಲ, ಕಬಕ, ಉಪ್ಪಿನಂಗಡಿ, ನೆಲ್ಯಾಡಿ, ಬೆಳ್ಳಾರೆ, ಸುಬ್ರಹ್ಮಣ್ಯ ಹಾಗೂ ಪುತ್ತೂರು ಸಹಿತ 9 ಕಡೆಗಳಲ್ಲಿ ಯಶಸ್ವಿಯಾಗಿ ನಡೆದು ಬಂದು ಒಟ್ಟು 400ಕ್ಕಿಂತಲೂ ಹೆಚ್ಚು ಸ್ಪರ್ಧಿಗಳು ಭಾಗವಹಿಸಿದ್ದರು. ಉದಯಕುಮಾರ್ ಲಾಯಿಲ ಅವರ ನೇತೃತ್ವದಲ್ಲಿ ಗಾನರಥ ಸಂಯೋಜನೆಗೊಂಡಿತು.


ಪುತ್ತೂರಿನ ಜೈನಭವನದಲ್ಲಿ ಶನಿವಾರ (ಆ.26) ನಡೆದ ಗ್ರ್ಯಾಂಡ್ ಫಿನಾಲೆಯನ್ನು ಮುಳಿಯ ಜ್ಯುವೆಲ್ಸ್‌ನ ಆಡಳಿತ ನಿರ್ದೇಶಕ ಕೃಷ್ಣ ನಾರಾಯಣ ಮುಳಿಯ ಹಾಗೂ ಇನ್ನರ್‌ವೀಲ್ ಕ್ಲಬ್‌ ಅಧ್ಯಕ್ಷೆ ಅಶ್ವಿನಿಕೃಷ್ಣ ದೀಪ ಬೆಳಗಿ ಉದ್ಘಾಟಿಸಿದರು.


ಕಾರ್ಯಕ್ರಮ ಸಂಯೋಜಕರಾದ ಆನಂದ ಕುಲಾಲ್, ರಮೇಶ್ ಕುಲಾಲ್, ಮುಳಿಯ ಜ್ಯುವೆಲ್ಸ್‌ನ ಶಾಖಾ ಪ್ರಬಂಧಕ ನಾಮದೇವ್ ಮಲ್ಯ, ಸ್ಟೋರ್ ಮ್ಯಾನೇಜರ್ ಪ್ರವೀಣ್ ಮತ್ತು ಸಂಜೀವ ಉಪಸ್ಥಿತರಿದ್ದರು.


ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿದ್ದ ನೃತ್ಯೋಪಾಸನಾ ಕಲಾ ಕೇಂದ್ರದ ನಿರ್ದೇಶಕಿ ಶಾಲಿನಿ ಆತ್ಮಭೂಷಣ್ ಮಾತನಾಡಿ, ಹಲವು ಸಾಮಾಜಿಕ ಕಾರ್ಯಕ್ರಮಗಳನ್ನು ನಡೆಸುತ್ತಿರುವ ಮುಳಿಯ ಜ್ಯುವೆಲ್ಸ್‌ ಗ್ರಾಮೀಣ ಪ್ರತಿಭೆಗಳನ್ನು ಹುಡುಕಿ ಅವರಿಗೆ ವೇದಿಕೆ ಒದಗಿಸುವ ಮಹತ್ತರವಾದ ಕಾರ್ಯ ಮಾಡಿರುವುದು ಶ್ಲಾಘನೀಯ. ಇದರಿಂದಾಗಿ ದೂರದ ಬೆಂಗಳೂರು, ಮಂಗಳೂರುಗಳಲ್ಲಿ ನಡೆಯುತ್ತಿರುವ ಕಾರ್ಯಕ್ರಮಗಳನ್ನು ಪುತ್ತೂರಿನಲ್ಲಿಯೂ ಕಾಣುವಂತಾಗಿದೆ ಎಂದರು.


ಅಧ್ಯಕ್ಷತೆ ವಹಿಸಿದ್ದ ಮುಳಿಯ ಜ್ಯುವೆಲ್ಸ್‌ನ ಮುಖ್ಯ ಆಡಳಿತ ನಿರ್ದೇಶಕ ಕೇಶವ ಪ್ರಸಾದ್ ಮುಳಿಯ ಮಾತನಾಡಿ, ಗ್ರಾಮೀಣ ಪ್ರತಿಭೆಗಳಿಗೆ ಅವಕಾಶ ನೀಡುವ ಮುಳಿಯ ಗಾನರಥ ಸೀಸನ್-1 ಮುಕ್ತಾಯಗೊಂಡಿದೆ. ಇನ್ನು ಸೀಸನ್ -2 ಸೆಪ್ಟೆಂಬರ್ ಕೊನೆಯ ವಾರದಲ್ಲಿ ಪ್ರಾರಂಭಗೊಂಡು ಡಿಸೆಂಬರ್ ಅಂತ್ಯಕ್ಕೆ ಮುಕ್ತಾಯಗೊಳ್ಳಲಿದೆ. ಗಾನ ಮತ್ತು ನೃತ್ಯ ಒಂದೇ ನಾಣ್ಯದ ಎರಡು ಮುಖಗಳು. ಪ್ರತಿಭೆಗಳು ಬೆಳೆಯಲು ಪರಿಶ್ರಮ ಮುಖ್ಯ ಎಂದರು.


ತೀರ್ಪುಗಾರರಾದ ವಿದ್ಯಾಶ್ರೀ ಕಲ್ಲಡ್ಕ ಮಾತನಾಡಿ, ಸ್ಥಳೀಯ ಪ್ರತಿಭೆಗಳಿಗೆ ಸ್ಥಳೀಯವಾಗಿ ವೇದಿಕೆ ಒದಗಿಸುತ್ತಿರುವ ಉತ್ತಮ ಕಾರ್ಯ ಮಾಡಿರುವ ಮುಳಿಯ ಜ್ಯುವೆಲ್ಸ್‌ಗೆ ಅಭಿನಂದನೆ ಸಲ್ಲಿಸಿದರು. ಗಣೇಶ್ ಮಂಗಳೂರು ಮಾತನಾಡಿ, ಸ್ಥಳೀಯ ಪ್ರತಿಭೆಗಳಿಗೆ ಮುಳಿಯ ಜ್ಯವೆಲ್ಸ್‌ ಚಿನ್ನದಂತಹ ವೇದಿಕೆ ಒದಗಿಸಿದೆ. ಇಲ್ಲಿನ ಪ್ರತಿಭೆಗಳು ಸಾಣೆ ಹಿಡಿದ ವಜ್ರದಂತೆ ಹೊಳೆಯಲಿ ಎಂದರು.


ಮುಳಿಯ ಜ್ಯುವೆಲ್ಸ್‌ನ ನಿರ್ದೇಶಕಿ ಕೃಷ್ಣವೇಣಿ ಪ್ರಸಾದ್ ಮುಳಿಯ ಮಾತನಾಡಿ, ಕಲೆ, ಸಾಹಿತ್ಯ, ರಾಗ, ತಾಳವನ್ನು ಗಮನದಲ್ಲಿಟ್ಟುಕೊಂಡು ಹಾಡಿದಾಗ ಶ್ರೋತೃಗಳಿಗೆ ರೋಮಾಂಚನ ಉಂಟುಮಾಡುತ್ತದೆ. ಈ ನಿಟ್ಟಿನಲ್ಲಿ ಕಲೆಯನ್ನು ಬೆಳೆಸಲು ಪ್ರೋತ್ಸಾಹಿಸಬೇಕು ಎಂದರು.


ನಾಯಕ್ ಕಿಚನ್ಸ್ ಯೂಟ್ಯೂಬ್ ಬ್ಲಾಗರ್ ಆಶಾ ನಾಯಕ್ ಅತಿಥಿಯಾಗಿ ಭಾಗವಹಿಸಿದ್ದರು. ತೀರ್ಪುಗಾರರಾದ ಮಿಥುನ್ ರಾಜ್, ಮುಳಿಯ ಜ್ಯುವೆಲ್ಸ್‌ನ ಪ್ರವೀಣ್‌ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಮುಳಿಯ ಜ್ಯುವೆಲ್ಸ್‌ನ ಶೋರೂಂ ಮ್ಯಾನೇಜರ್ ನಾಮದೇವ ಮಲ್ಯ ಸ್ವಾಗತಿಸಿದರು. ಸಹಪ್ರಬಂಧಕ ಯತೀಶ್, ಮೋಹಿನಿ, ನಯನಾ, ಹರಿಣಾಕ್ಷಿ ಅತಿಥಿಗಳಿಗೆ ಹೂ ನೀಡಿ ಸ್ವಾಗತಿಸಿದರು. ಮಾರ್ಕೆಟಿಂಗ್ ಮ್ಯಾನೇಜರ್ ಸಂಜೀವ ವಂದಿಸಿದರು. ನಿರೂಪಕಿ ಪ್ರಜ್ಞಾ ಓಡಿಲ್ನಾಳ ಕಾರ್ಯಕ್ರಮ ನಿರೂಪಿಸಿದರು. ನಾಟ್ಯರಂಜಿನಿ ಕಲಾವಿದರಿಂದ ವಿವಿಧ ಸಾಂಸ್ಕೃತಿಕ ನೃತ್ಯ ಕಾರ್ಯಕ್ರಮ ನಡೆದವು.

Recent News


Leave a Comment: