ಖ್ಯಾತ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ ರಾವ್ ಹೃದಾಯಘಾತದಿಂದ ನಿಧನ

ಸುದ್ದಿಗಳು News

Posted by vidyamaana on 2024-07-05 17:20:19 |

Share: | | | | |


ಖ್ಯಾತ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ ರಾವ್ ಹೃದಾಯಘಾತದಿಂದ ನಿಧನ

ಪುತ್ತೂರು: ಖ್ಯಾತ ಯಕ್ಷಗಾನ ಕಲಾವಿದರಾಗಿದ್ದಂತ ಕುಂಬ್ಳೆ ಶ್ರೀಧರ ರಾವ್ ಅವರು ಇಂದು ಹೃದಯಾಘಾತಕ್ಕೆ ಒಳಗಾಗಿ ನಿಧನರಾಗಿರುವುದಾಗಿ ತಿಳಿದು ಬಂದಿದೆ.

ಇಂದು ನೆಕ್ಕಿಲಾಡಿ ಗ್ರಾಮದ ಶಾಂತಿನಗರದ ಸಮೀಪದಲ್ಲಿನ ಬೇರಿಕೆ ನಿವಾಸಿಯಾಗಿದ್ದಂತ ಶ್ರೀಧರ ರಾವ್ ಅವರಿಗೆ ಇಂದು ಬೆಳಿಗ್ಗೆ ತೀವ್ರ ಎದೆನೋವು ಕಾಣಿಸಿಕೊಂಡಿತ್ತು.

ಕೂಡಲೇ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿಲಾಗಿತ್ತು. ಆದ್ರೇ ಚಿಕಿತ್ಸೆ ಫಲಿಸದೇ ಅವರು ಇಂದು ನಿಧನರಾಗಿದ್ದಾರೆ.

ಮೃತರು ಶಾಂತಿನಗರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸಿ ನಿವೃತ್ತರಾಗಿರುವ ಪತ್ನಿ ಸುಲೋಚನಾ, ಪುತ್ರರಾದ ಬೆಂಗಳೂರಿನಲ್ಲಿ ಪತ್ರಕರ್ತರಾಗಿರುವ ಗಣೇಶ್ ಪ್ರಸಾದ್, ಕೃಷ್ಣಪ್ರಸಾದ್ ಮತ್ತು ದೇವಿಪ್ರಸಾದ್, ಸೊಸೆಯಂದಿರು ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.

 Share: | | | | |


ಆಸ್ತಿ ವಿವಾದದಿಂದ ಕಲಬುರಗಿ ವಕೀಲ ಈರಣ್ಣಗೌಡ ಕೊಲೆ : ಆರೋಪಿ ದಂಪತಿ ಅರೆಸ್ಟ್​

Posted by Vidyamaana on 2023-12-11 07:47:50 |

Share: | | | | |


ಆಸ್ತಿ ವಿವಾದದಿಂದ ಕಲಬುರಗಿ ವಕೀಲ ಈರಣ್ಣಗೌಡ ಕೊಲೆ : ಆರೋಪಿ ದಂಪತಿ ಅರೆಸ್ಟ್​

ಕಲಬುರಗಿ: ನ್ಯಾಯವಾದಿ ಈರಣ್ಣಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ನೀಲಕಂಠರಾವ್ ಪಾಟೀಲ್ ಹಾಗೂ ಇವರ ಪತ್ನಿ ಸಿದ್ದಮ್ಮ ಪಾಟೀಲ್ ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ.ಡಿಸೆಂಬರ್​​ 7 ರಂದು ಕಲಬುರಗಿ ನಗರದ ಗಂಗಾವಿಹಾರ ಅಪಾರ್ಟ್​ಮೆಂಟ್​ನಲ್ಲಿ ನ್ಯಾಯವಾದಿ ಈರಣ್ಣಗೌಡ ಪಾಟೀಲ್ ಅವರನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ವಿಶ್ವವಿದ್ಯಾಲಯ ಠಾಣೆ ಪೊಲೀಸರು ಇದೀಗ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.


ಹತ್ಯೆಯ ನಾಲ್ಕೈದು ದಿನದ ಹಿಂದೆ ಕೊಲೆಗೆ ಪ್ಲಾನ್ ಮಾಡಿ ಎಲ್ಲಾ ವ್ಯವಸ್ಥೆ ಮಾಡಿದ್ರು ಎಂಬ ಆರೋಪ ಗಂಡ-ಹೆಂಡತಿ ಮೇಲಿದೆ. ಅಲ್ಲದೆ ಈರಣ್ಣಗೌಡ ಹತ್ಯೆಯಾದ ಬಳಿಕ ಆರೋಪಿ ಮಲ್ಲಿನಾಥ್ ನಾಯ್ಕೋಡಿಗೆ, ಸಿದ್ದಮ್ಮ 50 ಸಾವಿರ ಹಣ ಕೊಟ್ಟಿದ್ರು. ಕೊಲೆಯ ನಂತರ ಆರೋಪಿ ಮಲ್ಲಿನಾಥ್ ನಾಯ್ಕೋಡಿ ರಕ್ತದ ಕಲೆಯಲ್ಲಿಯೇ ಸಿದ್ದಮ್ಮ ಮನೆಗೆ ಬಂದು ಹಣ ತೆಗೆದುಕೊಂಡು ಹೋಗಿದ್ದನೆಂದು ತನಿಖೆಯಲ್ಲಿ ಬಯಲಾಗಿದೆ.ಬಂಧಿತ ನೀಲಕಂಠ ಪಾಟೀಲ್ ಹಾಗೂ ಕೊಲೆಯಾದ ನ್ಯಾಯವಾದಿ ಈರಣ್ಣಗೌಡ ಪಾಟೀಲ್ ಸಹೋದರ ಸಂಬಂಧಿಯಾಗಿದ್ದಾರೆ. ಕಲಬುರಗಿ ನಗರಕ್ಕೆ ಹೊಂದಿಕೊಂಡಂತೆ ಎಕರೆಗೆ 3ಕೋಟಿ ರೂ. ಬೆಲೆ ಬಾಳುವ 12 ಎಕರೆ ಜಮೀನು ಈರಣ್ಣಗೌಡ ಪಾಟೀಲ್​ ಅವರ ಹೆಸರಿನಲ್ಲಿ ಇತ್ತು. ಈ ಜಮೀನನ್ನು ಆರೋಪಿ ಮಲ್ಲಿನಾಥ ನಾಯ್ಕೋಡಿ ಕುಟುಂಬದವರು ನೋಡಿಕೊಳ್ಳುತ್ತಿದ್ದರು. ಈ ನಡುವೆ ಸೈಟ್ ಹಾಕಿ ಮಾರಾಟ ಮಾಡಿದ್ರೆ ಒಂದೊಂದು 30x40 ಸೈಜ್ ಸೈಟ್‌ಗೆ ಕನಿಷ್ಠ ಅಂದ್ರೂ 20 ರಿಂದ 30 ಲಕ್ಷ ರೂ. ಬೆಲೆ ಬಾಳುತ್ತದೆ. ಹೀಗಾಗಿ ತಮ್ಮ ಜಮೀನಿಗೆ ನಾನ್ ಅಗ್ರಿಕಲ್ಚರ್ (ಎನ್‌ಎ), ಜಿಡಿಎ ಮಾಡಿಸಿ ಸೈಟ್ ಆಗಿ ಪರಿವರ್ತನೆ ಮಾಡಲು ಈರಣ್ಣಗೌಡ ಪಾಟೀಲ್​ ಯೋಜಿಸಿದ್ದರು. ಆದ್ರೆ ಜಮೀನಿನಲ್ಲಿ ಪಾಲು ಬೇಕು ಎಂದು ನೀಲಕಂಠ ಪಾಟೀಲ್ ಹಾಗೂ ನಾಯ್ಕೋಡಿ ಕುಟುಂಬದವರು ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು.ಕೋಟಿ ಕೋಟಿ ಮೌಲ್ಯದ ಆಸ್ತಿ‌ ಆಗಿರೋದ್ರಿಂದ ಈ ಮುಂಚೆ‌ ಕೂಡಾ ಇದೆ ವಿಚಾರವಾಗಿ ಗಲಾಟೆ, ರಾಜಿ-ಪಂಚಾಯಿತಿಗಳು ನಡೆದಿದ್ದವು. 12 ಎಕೆರೆಯಲ್ಲಿ 2 ರಿಂದ 3 ಎಕರೆನಾದರೂ ನೀಡುವಂತೆ ಆರೋಪಿಗಳು ದುಂಬಾಲು ಬಿದ್ದಿದ್ದರು. ಆದರೆ ಇದಕ್ಕೆ ಈರಣ್ಣಗೌಡ ಪಾಟೀಲ್​ ಸುತಾರಾಂ ಒಪ್ಪಿರಲಿಲ್ಲ. ಈರಣ್ಣಗೌಡ ಒಬ್ಬನೇ ಮಗ, ಹೀಗಾಗಿ ಅವನನ್ನು ಮುಗಿಸಿದರೆ ಕೋಟಿ ಕೋಟಿ ಬೆಲೆಬಾಳುವ ಜಮೀನು ತಮ್ಮದಾಗುತ್ತೆಂದು ಹಂತಕರು ಕೊಲೆಗೆ ಯೋಜನೆ ರೂಪಿಸಿದ್ದರು ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.


ಡಿಸೆಂಬರ್​ 7 ರಂದು ಜಮೀನು ವ್ಯಾಜ್ಯ ಸಂಬಂಧ ಅಂತಿಮ ತೀರ್ಪು ಇತ್ತು. ಆ ದಿನ ಈರಣ್ಣಗೌಡ ಪಾಟೀಲ್ ಕೋರ್ಟ್​ಗೆ ಹೋಗುತ್ತಿದ್ದರು. ಇತ್ತ ನೀಲಕಂಠ ಪಾಟೀಲ್​ ಮತ್ತು ಅವರ ಪತ್ನಿ ಸಿದ್ದಮ್ಮ ಪಾಟೀಲ್​ ತಮ್ಮ ಹೊಸ ಕಾರ್ ಪೂಜೆಗೆಂದು ಗಾಣಗಾಪುರಕ್ಕೆ ತೆರಳಿದ್ದರು. ಪ್ರೀ ಪ್ಲಾನ್​ನಂತೆ ಮಲ್ಲಿನಾಥ, ಅವಣ್ಣ, ಭಾಗೇಶ ನಾಯ್ಕೋಡಿ ದಾರಿಯಲ್ಲಿ ಈರಣ್ಣಗೌಡ ಪಾಟೀಲ್​ ಅವರನ್ನು ಅಡ್ಡಹಾಕಿ, ಕೈಯಲ್ಲಿ ಮಚ್ಚು ಹಿಡಿದುಕೊಂಡು ಅಟ್ಟಾಡಿಸಿ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ್ದರು.


ಘಟನೆ ಸಂಭವಿಸಿದ 24 ಗಂಟೆಯಲ್ಲೇ ಮೂವರು ಆರೋಪಿಗಳನ್ನು ಬಂಧನ ಮಾಡಲಾಗಿದೆ. ನಿನ್ನೆ ದಿನ ಮತ್ತಿಬ್ಬರು ಆರೋಪಿಗಳನ್ನು ಬಂಧನ ಮಾಡಲಾಗಿದೆ. ಸದ್ಯ ಎಲ್ಲಾ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಪಡೆಯಲಾಗಿದೆ. ಬಂಧಿತರನ್ನು ಸಂಪೂರ್ಣವಾಗಿ ವಿಚಾರಣೆ ಮಾಡಿದ ಬಳಿಕ ನ್ಯಾಯಾಲಯಕ್ಕೆ ಅಂತಿಮ ವರದಿ ನೀಡಲಾಗುತ್ತದೆ ಎಂದು ನಗರ ಪೊಲೀಸ್ ಆಯುಕ್ತ ಚೇತನ್ ಆರ್​ ತಿಳಿಸಿದ್ದಾರೆ.

ಕೊಹ್ಲಿ ರಾಹುಲ್ ಅಬ್ಬರ-ಕುಲ್ದೀಪ್ ಮ್ಯಾಜಿಕ್ ಪಾಕ್​ ವಿರುದ್ಧ ಐತಿಹಾಸಿಕ ಜಯ ಸಾಧಿಸಿದ ಭಾರತ

Posted by Vidyamaana on 2023-09-12 08:22:27 |

Share: | | | | |


ಕೊಹ್ಲಿ ರಾಹುಲ್ ಅಬ್ಬರ-ಕುಲ್ದೀಪ್ ಮ್ಯಾಜಿಕ್ ಪಾಕ್​ ವಿರುದ್ಧ ಐತಿಹಾಸಿಕ ಜಯ ಸಾಧಿಸಿದ ಭಾರತ

ಕೊಲಂಬೊ: ಇಲ್ಲಿನ ಆರ್.ಪ್ರೇಮದಾಸ ಕ್ರೀಡಾಂಗಣದಲ್ಲಿ ಸೋಮವಾರ ಮುಂದುವರಿದ ಏಷ್ಯಾ ಕಪ್ ಸೂಪರ್‌ ಫೋರ್‌ ಏಕದಿನ ಪಂದ್ಯದಲ್ಲಿ ಭಾರತ ತಂಡ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ಅತ್ಯಮೋಘ ನಿರ್ವಹಣೆ ತೋರಿ ಪಾಕಿಸ್ಥಾನಕ್ಕೆ ಭಾರಿ ಸೋಲಿನ ಶಾಕ್ ನೀಡಿದೆ.


ಮಳೆ ಅಡ್ಡಿಯ ನಡುವೆ ಸಾಗಿದ ಮೀಸಲು ದಿನದ ಪಂದ್ಯದಲ್ಲಿ 357 ರನ್ ಗಳ ಸವಾಲು ಪಡೆದ ಪಾಕಿಸ್ಥಾನ 32 ಓವರ್ ಗಳಲ್ಲಿ 128 ರನ್ ಗಳಿಗೆ 8 ವಿಕೆಟ್ ಕಳೆದುಕೊಂಡಿತು. ಭಾರತ 228 ರನ್ ಗಳ ಭಾರಿ ಗೆಲುವು ಸಾಧಿಸಿತು. ಪಾಕ್ ನ ಕೊನೆಯಲ್ಲಿ ಬರಬೇಕಾದ ನಸೀಮ್ ಮತ್ತು ಹ್ಯಾರಿಸ್ ಫೀಲ್ಡಿಂಗ್ ಮಾಡುವಾಗ ಗಾಯದೊಂದಿಗೆ ಹೊರ ಹೋಗಿದ್ದು ,ಅವರು ಬ್ಯಾಟಿಂಗ್‌ಗೆ ಬರದ ಕಾರಣ 8 ವಿಕೆಟ್ ಕಳೆದುಕೊಂಡಾಗಲೇ ಆಟ ಮುಗಿಯಿತು.


ಕುಲದೀಪ್ ಯಾದವ್ ಅವರು 5 ವಿಕೆಟ್ ಪಡೆದು ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದರು. 8 ಓವರ್ ಗಳಲ್ಲಿ 25 ರನ್ ಬಿಟ್ಟುಕೊಟ್ಟರು. 9 ರನ್ ಗಳಿಸಿದ್ದ ವೇಳೆ ಇಮಾಮ್-ಉಲ್-ಹಕ್ ಅವರನ್ನು ಬುಮ್ರಾ ಔಟ್ ಮಾಡಿದರು. ಬುಮ್ರಾ ಎಸೆದ ಚೆಂಡು ಹಕ್ ಬ್ಯಾಟ್ ಗೆ ತಗುಲಿ ಶುಭ್ ಮನ್ ಗಿಲ್ ಅವರ ಕೈಸೇರಿತು. 10 ರನ್ ಗಳಿಸಿದ್ದ ನಾಯಕ ಬಾಬರ್ ಆಜಂ ಅವರನ್ನು ಹಾರ್ದಿಕ್ ಪಾಂಡ್ಯ ಬೌಲ್ಡ್ ಮಾಡಿ ಶಾಕ್ ನೀಡಿದರು.


ಪಾಕಿಸ್ಥಾನದ ಪ್ರಮುಖ ಬ್ಯಾಟ್ಸ್ ಮ್ಯಾನ್ ಗಳು ಭಾರತದ ಬಿಗು ಬೌಲಿಂಗ್ ವ್ಯೂಹ ದೊಳಗೆ ಸಿಲುಕಿ ನಲುಗಿದರು. 9 ರನ್ ಗಳಿಸಿದ್ದ ವೇಳೆ ಇಮಾಮ್-ಉಲ್-ಹಕ್ ಅವರನ್ನು ಬುಮ್ರಾ ಔಟ್ ಮಾಡಿದರು. ಬುಮ್ರಾ ಎಸೆದ ಚೆಂಡು ಹಕ್ ಬ್ಯಾಟ್ ಗೆ ತಗುಲಿ ಶುಭ್ ಮನ್ ಗಿಲ್ ಅವರ ಕೈಸೇರಿತು. 10 ರನ್ ಗಳಿಸಿದ್ದ ನಾಯಕ ಬಾಬರ್ ಆಜಂ ಅವರನ್ನು ಹಾರ್ದಿಕ್ ಪಾಂಡ್ಯ ಬೌಲ್ಡ್ ಮಾಡಿ ಶಾಕ್ ನೀಡಿದರು. 27 ರನ್ ಗಳಿಸಿದ್ದ ಫಖರ್ ಜಮಾನ್ ಅವರನ್ನು ಕುಲದೀಪ್ ಯಾದವ್ ಬೌಲ್ಡ್ ಮಾಡಿದರು. ಮೊಹಮ್ಮದ್ ರಿಜ್ವಾನ್ 2 ರನ್ ಗಳಿಗೆ ನಿರ್ಗಮಿಸಿದರು.ಶಾರ್ದೂಲ್ ಠಾಕೂರ್ ಎಸೆದ ಚೆಂಡನ್ನು ರಾಹುಲ್ ಕೈಗಿತ್ತು ಪೆವಿಲಿಯನ್ ಕಡೆಗೆ ಮರಳಿದರು.ಶತಕದ ಜುಗಲ್ ಬಂದಿ

ವಿರಾಟ್ ಕೊಹ್ಲಿ ಮತ್ತು ಕೆ.ಎಲ್. ರಾಹುಲ್ ಅತ್ಯಮೋಘ ಶತಕಗಳನ್ನು ಸಿಡಿಸಿ ಭಾರತದ ಬ್ಯಾಟಿಂಗ್ ಬಲ ಸಾಬೀತುಪಡಿಸಿದ್ದಾರೆ. ಭಾರತ 50 ಓವರ್ ಗಳಲ್ಲಿ ಕೇವಲ 2 ವಿಕೆಟ್ ನಷ್ಟಕ್ಕೆ 356 ರನ್ ಗಳ ಸವಾಲಿನ ಮೊತ್ತವನ್ನು ಕಲೆಹಾಕಿತು. ಕೊಹ್ಲಿ 122 ರನ್ ಗಳಿಸಿ ಅಜೇಯರಾಗಿ ಉಳಿದರು.93 ಎಸೆತಗಳಲ್ಲಿ ಆಕರ್ಷಕ 9 ಬೌಂಡರಿ ಮತ್ತು 3 ಸಿಕ್ಸರ್ ಅವರ ಇನ್ನಿಂಗ್ಸ್ ನ ಆಕರ್ಷಣೆಯಾಗಿತ್ತು. ಜವಾಬ್ದಾರಿಯುತ ಆಟವಾಡಿದ ರಾಹುಲ್ ಅಜೇಯ 111 ರನ್ ಗಳಿಸಿದರು.106 ಎಸೆತಗಳಲ್ಲಿ 12 ಬೌಂಡರಿ ಮತ್ತು 2 ಸಿಕ್ಸರ್ ಅವರ ಆಟದ ಆಕರ್ಷಣೆಯಾಗಿತ್ತು. 3 ನೇ ವಿಕೆಟ್ ಗೆ ಇಬ್ಬರು 233 ರನ್ ಜತೆಯಾಟವಾಡಿದ್ದು ಇದು ಏಷ್ಯಾ ಕಪ್ ಇತಿಹಾಸದಲ್ಲಿ ಭಾರತದ ಅತೀ ದೊಡ್ಡ ಜತೆಯಾಟವಾಗಿದೆ.ನಿನ್ನೆ ಭಾರಿ ಮಳೆಯಿಂದ ಪಂದ್ಯ ಮುಂದೂಡಿಕೆಯಾದ ವೇಳೆ 24.1 ಓವರ್ ಗಳಲ್ಲಿ ಭಾರತ 2 ವಿಕೆಟ್ ನಷ್ಟಕ್ಕೆ 147 ರನ್ ಗಳಿಸಿತ್ತು. 8 ರನ್ ಗಳಿಸಿದ್ದ ಕೊಹ್ಲಿ ಮತ್ತು 17 ರನ್ ಗಳಿಸಿದ್ದ ರಾಹುಲ್ ಇಂದು ಆಕರ್ಷಕ ಜತೆಯಾಟವನ್ನು ಆಡಿದರು. ಪಾಕಿಸ್ಥಾನ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿತ್ತು. ನಾಯಕ ರೋಹಿತ್ ಶರ್ಮಾ 56 ರನ್ ಶುಭಮನ್ ಗಿಲ್ 58 ರನ್ ಗಳಿಸಿ ಔಟಾಗಿದ್ದರು.

ಐದು ದಶಕಗಳ ಸಾರ್ಥಕ ಸೇವೆ – ಶಿವರಾತ್ರಿಯಂದೇ ಲತಾ ಶಿವೈಕ್ಯ

Posted by Vidyamaana on 2024-03-09 05:12:48 |

Share: | | | | |


ಐದು ದಶಕಗಳ ಸಾರ್ಥಕ ಸೇವೆ – ಶಿವರಾತ್ರಿಯಂದೇ ಲತಾ  ಶಿವೈಕ್ಯ

ಬೆಳ್ತಂಗಡಿ: ಧರ್ಮಸ್ಥಳ ಕ್ಷೇತ್ರದಲ್ಲಿ ಕಳೆದ 50 ವರ್ಷಗಳಿಂದ ಮಂಜುನಾಥನ ಸೇವೆ ಸಲ್ಲಿಸುತ್ತಿದ್ದ ಆನೆ ಲತಾ ಶಿವರಾತ್ರಿಯಂದೇ ಶಿವೈಕ್ಯಳಾಗಿದ್ದಾಳೆ. ಶುಕ್ರವಾರ ಮಧ್ಯಾಹ್ನ ಹೃದಾಯಾಘಾತದಿಂದ ಗಜರಾಣಿ ಲತಾ ಇಹಲೋಕ ತ್ಯಜಿಸಿ ಶಿವನ ಪಾದ ಸೇರಿದ್ದಾಳೆ. 60 ವರ್ಷ ಪ್ರಾಯವಾಗಿರುವ ಲತಾ ಧರ್ಮಸ್ಥಳ ಕ್ಷೇತ್ರದ ಜಾತ್ರೋತ್ಸವ, ಲಕ್ಷಾದೀಪೋತ್ಸವ, ಶಿವರಾತ್ರಿ ಉತ್ಸವ ಹೀಗೆ ಎಲ್ಲಾ ಉತ್ಸವದಲ್ಲೂ ಮುಂಚೂಣಿಯಲ್ಲಿದ್ದಳು.

ಉತ್ಸವಗಳು ನಡೆಯುವಾಗ ಸೊಂಡಿಲು ಎತ್ತಿ ನಮಸ್ಕರಿಸುತ್ತಾ ಸಾಗುವುದನ್ನು ನೋಡುವುದೇ ಒಂದು ಖುಷಿಯಾಗಿತ್ತು. ಭಕ್ತಾದಿಗಳಿಗೂ ಯಾವುದೇ ತೊಂದರೆ ನೀಡದೆ ಏನನ್ನೂ ಅಪೇಕ್ಷಿಸದೇ ಇದ್ದ ಲತಾ ಧರ್ಮಸ್ಥಳ ಧರ್ಮಾಧಿಕಾರಿಗಳಿಗೂ ಅಚ್ಚುಮೆಚ್ಚಿನವಳಾಗಿದ್ದಳು.

ಶಿವಾನಿ ಹಾಗೂ ಲಕ್ಷ್ಮಿ ಕ್ಷೇತ್ರದಲ್ಲಿ ಇದ್ದರೂ ಕೂಡಾ ಲತಾ ನಡೆದುಕೊಂಡಂತೆ ಆಕೆಯನ್ನು ಅನುಸರಿಸುತ್ತಿದ್ದವು. ಲತಾಳಿಗೆ ಜನಿಸಿದವಳು ಲಕ್ಷ್ಮಿಯಾಗಿದ್ದರೆ, ಲಕ್ಷ್ಮಿಯಲ್ಲಿ ಜನಿಸಿದ ಆನೆ ಶಿವಾನಿ. ಶಿವಾನಿ ಜನನವಾದ ಬಳಿಕ ಲಕ್ಷ್ಮೀ ಉತ್ಸವದಲ್ಲಿ ಭಾಗವಹಿಸುತ್ತಿರಲಿಲ್ಲವಾಗಿದ್ರೂ, ಲತಾ ಮಾತ್ರ ನಿರಂತರವಾಗಿ ದೇವರ ಸೇವೆಯಲ್ಲಿ ಭಾಗಿಯಾಗಿದ್ದಳು.


ವಯಸ್ಸಾಗಿರೋ ಲತಾ ಶಿವರಾತ್ರಿಯಂದೇ ಶಿವನ ಪಾದ ಸೇರಿದ್ದು, ಧರ್ಮಸ್ಥಳ ಕ್ಷೇತ್ರದ ಜನರು ಕಂಬನಿ ಮಿಡಿದಿದ್ದಾರೆ. ಶುಕ್ರವಾರ ಸಂಜೆ ಧರ್ಮಸ್ಥಳದಲ್ಲಿ ಲತಾ ಅಂತ್ಯಕ್ರಿಯೆ ನಡೆಯಲಿದೆ.

ಪೆರ್ನೆ ಬಿಳಿಯೂರು ಗ್ರಾಮದಲ್ಲಿ ವಿವಿಧ ಕಾಮಗಾರಿಗೆ ಶಾಸಕರಿಂದ ಗುದ್ದಲಿಪೂಜೆ

Posted by Vidyamaana on 2024-02-07 08:19:53 |

Share: | | | | |


ಪೆರ್ನೆ ಬಿಳಿಯೂರು ಗ್ರಾಮದಲ್ಲಿ ವಿವಿಧ ಕಾಮಗಾರಿಗೆ ಶಾಸಕರಿಂದ ಗುದ್ದಲಿಪೂಜೆ

ಪುತ್ತೂರು: ಗ್ರಾಮೀಣ ರಸ್ತೆಗಳು ಅಭಿವೃದ್ದಿಯಾದರೆ ಮಾತ್ರ ಗ್ರಾಮಗಳು ಅಭಿವೃದ್ದಿಯಾಗಲು ಸಾಧ್ಯ ಈ ನಿಟ್ಟಿನಲ್ಲಿ ಗ್ರಾಮದ ಕಟ್ಟಕಡೇಯ ರಸ್ತೆಯನ್ನೂ ಅಭಿವೃದ್ದಿ ಮಾಡುವ ಉದ್ದೇಶದಿಂದ ಹೆಚ್ಚು ಅನುದಾನವನ್ನು ನೀಡಲಾಗುತ್ತದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು.


ಅವರು ಪೆರ್ನೆ ಹಗೂ ಬಿಳಿಯೂರು ಗ್ರಾಮದಲ್ಲಿ ವಿವಿಧ ರಸ್ತೆ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದರು. ಪೆರ್ನೆ ಗ್ರಾಮದ ಕಡಂಬು ಕೋಡಿ ರಸ್ತೆ ಹಾಗೂ ಬೆಳಿಯೂರು ಗ್ರಾಮದಪೂಜಾರಿಪಾಲು ಕಲ್ಕುಡ ದೈವಸ್ಥಾನ ರಸ್ತೆಗೆ ಒಟ್ಟು ೩೦ ಲಕ್ಷ ಕಾಮಗಾರಿಗೆ ಶಿಲಾನ್ಯಾಸ ನಡೆದಿದೆ.ಈ ರಸ್ತೆಗೆ ಇದುವರೆಗೂ ಅನುದಾನ ನೀಡದೇ ಇದ್ದು ಗ್ರಾಮಸ್ಥರ ಬೇಡಿಕೆಯನ್ನು ಈ ಬರಿ ಈಡೇರಿಸಲಾಗಿದೆ ಎಂದು ಹೇಳಿದರು.


ವಿಟ್ಲ ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷರಾದ ಡಾ. ರಾಜಾರಾಂ ಕೆ ಬಿ ಮಾತನಾಡಿ ಗ್ರಾಮೀಣ ರಸ್ತೆಗಳು ದೇಹದ ನರಗಳಿದ್ದಂತೆ . ಗ್ರಾಮದ ಎಲ್ಲಾ ರಸ್ತೆಗಳು ಉತ್ತಮವಾಗಿದ್ದರೆ ಆ ಗ್ರಾಮ ಅಭಿವೃದ್ದಿಯಾಗುತ್ತದೆ. ಪೆರ್ನೆ ಗ್ರಾಮದಲ್ಲಿ ಅನೇಕ ರಸ್ತೆಗಳು ಕಾಂಕ್ರೀಟ್ ಮಾಡಲು ಬಾಕಿ ಇದ್ದು ಶಾಸಕರಾದ ಅಶೋಕ್ ರೈಯವರು ತನ್ನ ಅವಧಿಯಲ್ಲಿ ಎಲ್ಲಾ ರಸ್ತೆಗಳಿಗೂ ಅನುದಾನ ನೀಡಲಿದ್ದಾರೆ ಎಂದು ಹೇಳಿದರು.


ಕಾರ್ಯಕ್ರಮದಲ್ಲಿ ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷರಾದ ಮುರಳೀಧರ್ ರೈ ಮಠಂತಬೆಟ್ಟು, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಉಮಾನಾಥ ಶೆಟ್ಟಿ,ಕೆಪಿಸಿಸಿ ಅಲ್ಪಸಂಖ್ಯಾತ ಕಾರ್ಯದರ್ಶಿ ನಝೀರ್ ಮಠ ಯುವ ಕಾಂಗ್ರೆಸ್ ಅಧ್ಯಕ್ಷರಾದ ಫಾರೂಕ್ ಪೆರ್ನೆ, ವಲಯಾಧ್ಯಕ್ಷರಾದ ಅಬ್ದುಲ್ಲ ಶಾಫಿ, ಗ್ರಾಪಂ ಸದಸ್ಯರುಗಳಾದ ತನಿಯಪ್ಪ ಪೂಜಾರಿ, ಸುನಿಲ್ ನಲ್ಸನ್ ಪಿಂಟೋ, ವನಿತಾ,  ಉಮೇಶ್ ಬಾಕಿಮಾರು, ಸುಂದರ್ ಮಲ್ಲಡ್ಕ, ಪುಷ್ಕರ ಪೂಜಾರಿ, ಚನ್ನಕೇಶವ, ಅಶ್ರಫ್ ಮರ್ದೆಲು, ಹಕೀಂ ಕರ್ವೆಲು, ಚೇತನ್ ಕರ್ವೆಲು, ವಂದನಾ ಟೀಚರ್, ರಾಕೇಶ್ ಪೂಜಾರಿಪಾಲು, ಕಬೀರ್ ಕರ್ವೆಲು, ಸಲೀಂ ಕರ್ವೆಲು, ಬೂತ್ ಅಧ್ಯಕ್ಷರಾದ ಮಿತ್ರದಾಸ ರೈ, ಸುನಿಲ್, ಸುರೇಶ್ ರೈ, ಲೀಲೇಶ್, ಸುಮಿತ್ರ, ವಿದ್ಯಾ ಹರೀಶ್, ರಾಜೇಶ್, ಕುಸುಮಾ, ರಮಾನಂದ ಮೂಲ್ಯ, ಗಣೇಶ್, ಉದಯಕುಮಾರ್, ಕೃಷ್ಣಪ್ಪ ಪೂಜಾರಿ, ಸುರೇಶ್ ಆಚಾರ್ಯ, ಕುಶಾಲಪ್ಪ, ಮುಝಮ್ಮಿಲ್ ಮೊದಲಾದವರು ಉಪಸ್ಥಿತರಿದ್ದರು.

ಕೇರಳದ ಹನಿಟ್ರ್ಯಾಪ್ ಗ್ಯಾಂಗ್ ಮಂಗಳೂರಿನಲ್ಲಿ ಅರೆಸ್ಟ್

Posted by Vidyamaana on 2024-02-02 14:36:15 |

Share: | | | | |


ಕೇರಳದ ಹನಿಟ್ರ್ಯಾಪ್ ಗ್ಯಾಂಗ್ ಮಂಗಳೂರಿನಲ್ಲಿ ಅರೆಸ್ಟ್

ಕಾಸರಗೋಡು, ಫೆ.2 ಕಾಸರಗೋಡಿನ ವ್ಯಕ್ತಿಯೊಬ್ಬರನ್ನು ಮಂಗಳೂರಿಗೆ ಕರೆದೊಯ್ದು ಹನಿಟ್ರ್ಯಾಪ್ ಮಾಡಿರುವ ಪ್ರಕರಣದ ಬೆನ್ನತ್ತಿದ ಮೇಲ್ಪರಂಬ ಪೊಲೀಸರು ಇಬ್ಬರು ಮಹಿಳೆಯರು ಸೇರಿ ಏಳು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಮಾಂಗಾಡ್‌ ನಿವಾಸಿಯನ್ನು ಹನಿಟ್ರ್ಯಾಪ್‌ನಲ್ಲಿ ಸಿಲುಕಿಸಿ 5 ಲಕ್ಷ ರೂ. ಲಪಟಾಯಿಸಿದ ಬಗ್ಗೆ ಕಾಸರಗೋಡು ಜಿಲ್ಲೆಯ ಮೇಲ್ಪರಂಬ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.  

ಕೋಜಿಕ್ಕೋಡ್ ಮೂಲದ ಎಂ.ಪಿ‌.ರುಬೀನಾ(29), ಆಕೆಯ ಪತಿ ಪ್ರಕರಣದ ಸೂತ್ರಧಾರ ಫೈಝಲ್‌ (37), ಕಾಸರಗೋಡು ಶಿರಿಬಾಗಿಲು ನಿವಾಸಿ ಎನ್‌. ಸಿದ್ದಿಕ್‌ (48), ಮಾಂಗಾಡ್‌ನ‌ ದಿಲ್ಶಾದ್‌ (40), ಮುಟ್ಟತ್ತೋಡಿಯ ನಫೀಸತ್‌ ಮಿಸ್ರಿಯ (40), ಮಾಂಗಾಡ್‌ನ‌ ಅಬ್ದುಲ್ಲ ಕುಂಞಿ (32), ಪಡನ್ನಕ್ಕಾಡ್‌ನ‌ ರಫೀಕ್‌ ಮಹಮ್ಮದ್ (42) ಬಂಧಿತ ಆರೋಪಿಗಳು. 

ಜನವರಿ 23 ರಂದು ರುಬಿನಾ ಎಂಬಾಕೆ ಮೊಬೈಲ್ ಮೂಲಕ 59 ವರ್ಷದ ವ್ಯಕ್ತಿಯ ಪರಿಚಯ ಮಾಡಿಕೊಂಡಿದ್ದಳು. ಶೈಕ್ಷಣಿಕ ಉದ್ದೇಶಕ್ಕಾಗಿ ಲ್ಯಾಪ್ ಟಾಪ್ ಖರೀದಿಸಿದ್ದು ಅದು ಹಾಳಾಗಿದೆ. ನಿಮ್ಮ ಸಮಾಜ ಸೇವೆ ಬಗ್ಗೆ ತಿಳಿದುಕೊಂಡಿದ್ದೇನೆ. ಅದಕ್ಕಾಗಿ ಸಹಾಯ ಮಾಡಬೇಕೆಂದು ಬೇಡಿಕೆ ಇಟ್ಟಿದ್ದಳು. ಅದರಂತೆ ಯುವತಿಯೊಂದಿಗೆ ಕಾಸರಗೋಡಿಗೆ ಆಗಮಿಸಿದ ಅವರು ಲ್ಯಾಪ್ ಟಾಪ್ ರಿಪೇರಿ ಸಾಧ್ಯವಿಲ್ಲ. ಹೊಸ ಲ್ಯಾಪ್ ಟಾಪ್ ಖರೀದಿಸಿ ಕೊಡುವುದಾಗಿ ಹೇಳಿದ್ದರು. 

ಲ್ಯಾಪ್‌ಟಾಪ್ ಖರೀದಿಸುವ ನೆಪದಲ್ಲಿ ಆರೋಪಿ ಯುವತಿ ರುಬಿನಾ ಮಂಗಳೂರಿಗೆ ಬಂದಿದ್ದಳು. ಈ ವೇಳೆ, ಆ ವ್ಯಕ್ತಿಯೊಂದಿಗೆ ಸಲುಗೆಯಲ್ಲಿದ್ದ ವಸತಿ ಗೃಹವೊಂದಕ್ಕೆ ತೆರಳಿದ್ದರು. ಅಷ್ಟರಲ್ಲಿ ರುಬಿನಾ ಪತಿ ಸೇರಿದಂತೆ ಐದಾರು ಮಂದಿಯ ತಂಡ ಎಂಟ್ರಿಯಾಗಿದ್ದು ಬಲವಂತದಿಂದ ನಗ್ನ ಫೋಟೊ ತೆಗೆದುಕೊಂಡಿದ್ದಾರೆ. ಬಳಿಕ ಆರೋಪಿಗಳು ಆ ವ್ಯಕ್ತಿಯನ್ನು ಕಾಸರಗೋಡಿಗೆ ಕರೆದೊಯ್ದು ಕೂಡಿಹಾಕಿ ಬೆದರಿಸಿ ₹5 ಲಕ್ಷ ಸುಲಿಗೆ ಮಾಡಿದ್ದಾರೆ. ಆನಂತರವೂ, ಆರೋಪಿಗಳು ಹಣಕ್ಕಾಗಿ ಬ್ಲಾಕ್ಮೇಲ್ ಮಾಡಿದ್ದರು. 

ಈ ಬಗ್ಗೆ ಸಂತ್ರಸ್ತ ವ್ಯಕ್ತಿ ಕಾಸರಗೋಡು ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣದ ತನಿಖೆ ನಡೆಸಿದ್ದ ಮೇಲ್ಪರಂಬ ಠಾಣಾ ಎಸ್‌ ಐ ಸುರೇಶ್ ಮತ್ತು ಅರುಣ್ ಮೋಹನ್ ಹನಿಟ್ರಾಪ್ ತಂಡದ ಏಳು ಆರೋಪಿಗಳನ್ನು ಬಂಧಿಸಿದ್ದಾರೆ.

ಜಿಪಂ ಟಿಕೆಟ್ ಕೊಡಿಸುವುದಾಗಿ 2 ಲಕ್ಷ ರೂ.ವಂಚನೆ; ಡ್ರೋನ್‌ ಪ್ರತಾಪ್‌ ವಿರುದ್ಧ ಕೇಸ್

Posted by Vidyamaana on 2024-02-03 18:18:08 |

Share: | | | | |


ಜಿಪಂ ಟಿಕೆಟ್ ಕೊಡಿಸುವುದಾಗಿ 2 ಲಕ್ಷ ರೂ.ವಂಚನೆ; ಡ್ರೋನ್‌ ಪ್ರತಾಪ್‌ ವಿರುದ್ಧ ಕೇಸ್

ಬೆಂಗಳೂರು: ಬಿಗ್‌ ಬಾಸ್‌ ರನ್ನರ್‌ ಅಪ್‌ ಡ್ರೋನ್‌ ಪ್ರತಾಪ್‌ ವಿರುದ್ಧ ಮತ್ತೊಂದು ಆರೋಪ ಕೇಳಿ ಬಂದಿದ್ದು, ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ  ಹೇಳಿಕೊಂಡು ಜಿಲ್ಲಾ ಪಂಚಾಯಿತಿ ಟಿಕೆಟ್‌ ಕೊಡಿಸುವುದಾಗಿ ತನ್ನಿಂದ 2 ಲಕ್ಷ ರೂ.ಪಡೆದುಕೊಂಡು ವಂಚಿಸಿರುವುದಾಗಿ ಚಂದನ್‌ ಕುಮಾರ್‌ ಗೌಡ ಎಂಬುವವರು ನಗರ ಪೊಲೀಸ್ ಆಯುಕ್ತ ದಯಾನಂದ್ ಅವರಿಗೆ ದೂರು ನೀಡಿದ್ದಾರೆ.

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ತಳಗವಾದಿ ಜಿಲ್ಲಾ ಪಂಚಾಯಿತಿ ಟಿಕೆಟ್ ಕೊಡಿಸುವುದಾಗಿ ಪ್ರತಾಪ್‌ ತನ್ನಿಂದ 2 ಲಕ್ಷ ರೂ. ಪಡೆದುಕೊಂಡಿದ್ದಾರೆ. ತನಗೆ ಹೆಚ್‌.ಡಿ. ಕುಮಾರಸ್ವಾಮಿ ಅವರ ಪರಿಚಯವಿದೆ. ಆಗಾಗ ನಾನು ಅವರ ಫಾರ್ಮ್‌ ಹೌಸ್‌ ಗೆ ಭೇಟಿ ನೀಡುತ್ತೇನೆ ಎಂದಿದ್ದಾನೆ. ಇದರೊಂದಿಗೆ ತಾನು ಬಿಗ್‌ ಬಾಸ್‌ ಮನೆಯಲ್ಲಿರುವ ವೇಳೆ ಪ್ರಚಾರಬೇಕೆಂದು  ನನ್ನಿಂದ ಸಹಾಯ ಕೇಳಿದ್ದಾನೆ. ನಾನು ನನ್ನಿಂದಾಗುವಷ್ಟು ಸಹಾಯವನ್ನು ಮಾಡಿದ್ದು, ಅವನ ಪರವಾಗಿ ಪ್ರಚಾರವನ್ನು ಕೂಡ ಮಾಡಿದ್ದೇನೆ. ಬಿಗ್‌ ಬಾಸ್‌ ರನ್ನರ್‌ ಅಪ್‌ ಆದ ಬಳಿಕ ಪ್ರತಾಪ್‌ ನನ್ನ ಕರೆ ಹಾಗೂ ಮೆಸೇಜ್‌ ಗೆ ಯಾವುದೇ ರೀತಿಯ ಪ್ರತಿಕ್ರಿಯೆ ನೀಡುತ್ತಿಲ್ಲ. ತನಗೆ ಆಗಿರುವ ಮೋಸಕ್ಕೆ ನ್ಯಾಯ ಒದಗಿಸಬೇಕೆಂದು ಚಂದನ್‌ ದೂರಿನಲ್ಲಿ ತಿಳಿಸಿದ್ದಾರೆ.

ಇದರೊಂದಿಗೆ ಚಂದನ್‌ ಕುಮಾರ್‌ ರೊಂದಿಗೆ ಪ್ರತಾಪ್ ಮಾತನಾಡಿರುವ ಎನ್ನಲಾದ ಆಡಿಯೋವನ್ನು ಕೂಡ ರಿಲೀಸ್‌ ಮಾಡಲಾಗಿದೆ.ಆಡಿಯೋದಲ್ಲಿ ಏನಿದೆ?: ನನ್ನನ್ನು ಕಾಂಗ್ರೆಸ್‌ಗೆ ಬನ್ನಿ ಯೂತ್ ಕಾಂಗ್ರೆಸ್ ಪ್ರೆಸಿಡೆಂಟ್ ಮಾಡ್ತೀನಿ ಅಂದಿದ್ದರು. ಆಗ ನಾನು ಕುಮಾರಸ್ವಾಮಿಯವರ ಜೊತೆ ಓಡಾಡುತ್ತಿದ್ದೆನು. ಈಗಲೂ ಕುಮಾರಸ್ವಾಮಿಯವರನ್ನು ಭೇಟಿ ಮಾಡಲು ಹೋಗುತ್ತೇನೆ. ಆದರೆ, ಕುಮಾರಸ್ವಾಮಿಯವರ ಜೊತೆಗಿನ ಫೋಟೋ ಹಾಕಲ್ಲ. ನನ್ನ ಜೊತೆ ಕುಮಾರಸ್ವಾಮಿಯವರ ತೋಟದ ಮನೆಗೆ ಬಾ ಪರಿಚಯ ಮಾಡಿಸುತ್ತೇನೆ. ಅವರು ಕೆಟ್ಟ ಪದದಿಂದ ಬೈಯಬಹುದು, ಆದರೆ ತುಂಬಾ ಒಳ್ಳೆಯ ಮನುಷ್ಯ. ಡಿಸಿಎಂ ಡಿ.ಕೆ. ಶಿವಕುಮಾರ್ ತರ ಪೇಪರ್ ಎಸೆಯೋದು ಮಾಡಲ್ಲ. ಕುಮಾರಸ್ವಾಮಿ ಯಾರೇ ಹೋದ್ರು ದುಡ್ಡು ಕೊಡ್ತಾರೆ ಎಂದು ಹೇಳಿ ವಂಚನೆ ಮಾಡಿದ್ದಾರೆ ಎಂದು ಆರೋಪ ಮಾಡಿದ್ದಾರೆ.

Recent News


Leave a Comment: