ಜೋಕಟ್ಟೆ: ಮನೆ ಮೇಲೆ ತಡೆಗೋಡೆ ಕುಸಿತ; ಬಾಲಕ ಮೃತ್ಯು

ಸುದ್ದಿಗಳು News

Posted by vidyamaana on 2024-07-25 12:27:06 |

Share: | | | | |


ಜೋಕಟ್ಟೆ: ಮನೆ ಮೇಲೆ ತಡೆಗೋಡೆ ಕುಸಿತ; ಬಾಲಕ ಮೃತ್ಯು

ಪಣಂಬೂರು: ಇಲ್ಲಿನ ಜೋಕಟ್ಟೆ ಗ್ರಾಮ ಪಂಚಾಯತ್ ಗುಡ್ಡೆ ಎಂಬಲ್ಲಿ ಮನೆಯ ಮೇಲೆ� ತಡೆಗೋಡೆ ಕುಸಿದು ಬಿದ್ದು ಯುವಕ ಮೃತಪಟ್ಟಿರುವ ಘಟನೆ ಬುಧವಾರ ರಾತ್ರಿ ನಡೆದಿರುವ ಬಗ್ಗೆ ವರದಿಯಾಗಿದೆ‌.ಮುಲ್ಕಿ ಕೊಲ್ನಾಡು ನಿವಾಸಿ ಶಂಕರ ಎಂಬವರ ಪುತ್ರ ಶೈಲೇಶ್ (17) ಮೃತ ಯುವಕ. ಜೋಕಟ್ಟೆಯಲ್ಲಿರುವ ತನ್ನ ದೊಡಮ್ಮನ ಮಗಳ ಮನೆಗೆ ಬಂದಿದ್ದ ಶೈಲೇಶ್, ಇಲ್ಲಿಯೇ ಉಳಿದುಕೊಂಡಿದ್ದ.

ಮನೆಯಲ್ಲಿ ಶೈಲೇಶ್ ರವರ ದೊಡ್ಡಮನ ಮಗಳು ಸವಿತಾ, ಆಕೆಯ ಗಂಡ ಸುರೇಶ್ ಮತ್ತು ಮಗು ಸಾಕ್ಷಿ ಮನೆಯ ಒಂದು ಕೋಣೆಯಲ್ಲಿ ಮಲಗಿದ್ದು, ಶೈಲೇಶ್ ಇನ್ನೊಂದು ಕಡೆ ಮಲಗಿದ್ದ. ತಡೆಗೋಡೆ ಕುಸಿದು ಹಂಚಿನ ಮನೆಯ ಮೇಲೆ ಬಿದ್ದಿದ್ದರಿಂದ ಅಲ್ಲಿ ಮಲಗಿದ್ದ ಶೈಲೇಶ್ ತೀವ್ರ ಗಾಯಗೊಂಡು ಮೃತಪಟ್ಟಿದ್ದಾನೆ. ಇನ್ನೊಂದು ಕೋಣೆಯಲ್ಲಿ ಮಲಗಿದ್ದ ಇತರ ಮೂರು ಜನರಲ್ಲಿ ಸವಿತಾ ಅವರಿಗೆ ಸಣ್ಣ ಗಾಯವಾಗಿದ್ದು‌, ಚಿಕಿತ್ಸೆ ಪಡೆದಿದ್ದಾರೆ‌ ಎಂದು ತಿಳಿದು ಬಂದಿದೆ.

ಶೈಲೇಶ್ ಅವರ ಮೃತದೇಹವನ್ನು ನಗರದ ಎ.ಜೆ.ಆಸ್ಪತ್ರೆಯ ಶವಗಾರದಲ್ಲಿಡಲಾಗಿದ್ದು, ಸ್ಥಳಕ್ಕೆ ಪಣಂಬೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ

 Share: | | | | |


ಬಜ್ಪೆ : ಯುವಕನಿಗೆ ಚೂರಿ ಇರಿತ

Posted by Vidyamaana on 2023-09-03 16:44:35 |

Share: | | | | |


ಬಜ್ಪೆ : ಯುವಕನಿಗೆ ಚೂರಿ ಇರಿತ

ಬಜ್ಜೆ: ಮೈದಾನದಲ್ಲಿ ಆಟವಾಡಿ ಮನೆಗೆ ಹೋಗುತ್ತಿದ್ದ ಯುವಕನೋರ್ವನಿಗೆ ಚೂರಿ ಇರಿದಿರುವ ಘಟನೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕಳವಾರು ಎಂಬಲ್ಲಿ ರವಿವಾರ ಸಂಜೆ ವರದಿಯಾಗಿದೆ.


ಬಜೈ ಕಳವಾರು ಶಾಂತಿಗುಡ್ಡೆ ನಿವಾಸಿ ಸಫ್ಘಾನ್ (23) ಚೂರಿ ಇರಿತಕ್ಕೆ ಒಳಗಾದ ಯುವಕ ಎಂದು ತಿಳಿದು ಬಂದಿದೆ.


ಸಫ್ಘಾನ್ ಅವರ ಕತ್ತು, ಕೈಗೆ ಹಾಗೂ ಬೆನ್ನಿಗೆ ಚೂರಿಯಿಂದ ಇರಿಯಲಾಗಿದೆ. ಗಾಯಾಳುವನ್ನು ಬಜ್ಜೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಮಂಗಳೂರಿಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.ಸಫ್ಘಾನ್ ಅವರ ಕತ್ತು, ಕೈಗೆ ಹಾಗೂ ಬೆನ್ನಿಗೆ ಚೂರಿಯಿಂದ ಇರಿಯಲಾಗಿದೆ. ಗಾಯಾಳುವನ್ನು ಬಜ್ಜೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಮಂಗಳೂರಿಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.

ಸಫ್ಘಾನ್ ಗೆಳೆಯರೊಂದಿಗೆ ಆಟವಾಡಿ ಮನೆಗೆ ತೆರಳುತ್ತಿದ್ದ ವೇಳೆ ಸ್ಥಳೀಯನೇ ಆಗಿರುವ ಯುವಕ ಚೂರಿ ಇರಿದಿರುವುದಾಗಿ ಹೇಳಲಾಗುತ್ತಿದೆ.

ಕೆಲದಿನಗಳಿಂದ ಕಳವಾರು ಭಾಗದಲ್ಲಿ ಮದ್ಯವ್ಯಸನಿಯೋರ್ವ ಹಲ್ಲೆ ನಡೆಸಿದ್ದ ಪ್ರಕರಣ ದಾಖಲಾಗಿತ್ತು.

ಇದೇ ಹಿನ್ನೆಲೆಯಲ್ಲಿ ಚೂರಿ ಇರಿತ ಸಂಭವಿಸಿರಬಹುದು ಎಂದು ಸ್ಥಳೀಯರು ಶಂಕೆ ವ್ಯಕ್ತ ಪಡಿಸಿದ್ದಾರೆ. ಹಲ್ಲೆ ಘಟನೆಯ ಸಂಬಂಧ ಸುರತ್ಕಲ್ ಪೊಲೀಸರು ಇಂದಿನವರೆಗೂ ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದರು ಎನ್ನಲಾಗಿದ್ದು, ಇಂದು ಪೊಲೀಸರನ್ನು ಸ್ಥಳಕ್ಕೆನಿಯೋಜಿಸಿರಲಿಲ್ಲ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಸದ್ಯ ಸುರತ್ಕಲ್ ಪೊಲೀಸರು ಸ್ಥಳಕ್ಕೆ ಧಾವಿಸುತ್ತಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ

ಪೌರತ್ವ ಕಾಯಿದೆ ಜಾರಿ ವಿರೋಧಿಸಿ ಎಸ್‌ ಡಿಪಿಐ ವತಿಯಿಂದ ಪುತ್ತೂರಿನಲ್ಲಿ ಪ್ರತಿಭಟನೆ

Posted by Vidyamaana on 2024-03-14 12:49:33 |

Share: | | | | |


ಪೌರತ್ವ ಕಾಯಿದೆ ಜಾರಿ ವಿರೋಧಿಸಿ ಎಸ್‌ ಡಿಪಿಐ ವತಿಯಿಂದ ಪುತ್ತೂರಿನಲ್ಲಿ ಪ್ರತಿಭಟನೆ

ಪುತ್ತೂರು: ಕೇಂದ್ರ ಸರಕಾರ ಅಸಾಂವಿಧಾನಿಕ CAA ಜಾರಿ ಮಾಡಿದರ ವಿರುದ್ಧ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದೇಶದಾದ್ಯಂತ ಕರೆ ನೀಡಿದ್ದ ಪ್ರತಿಭಟನೆಯ ಭಾಗವಾಗಿ  ಎಸ್‌ ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಪುತ್ತೂರಿನ ದರ್ಬೆ ವೃತ್ತದಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ  ಅಧ್ಯಕ್ಷರಾದ ಹಾಜಿ ಇಬ್ರಾಹಿಂ ಸಾಗರ್ ರವರ ನೇತೃತ್ವದಲ್ಲಿ  ಬೃಹತ್ ಪ್ರತಿಭಟನೆ ನಡೆಯಿತು.

ಸಭೆಯಲ್ಲಿ ಪ್ರಾಸ್ತಾವಿಕವಾಗಿ ಕ್ಷೇತ್ರ ಸಮಿತಿಯ ಉಪಾಧ್ಯಕ್ಷರಾದ ಅಬ್ದುಲ್ ಹಮೀದ್ ಸಾಲ್ಮರ ಮಾತಾಡಿ  CAA ಕಾಯ್ದೆಯು ಈ ದೇಶದ ಜಾತ್ಯಾತೀತ ಪರಂಪರೆಗೆ ಮಾರಕ ಮತ್ತು ಇದನ್ನು ಯಾವುದೇ ಕಾರಣಕ್ಕೂ ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದರು.


ದಿಕ್ಸೂಚಿ ಭಾಷಣ ಮಾಡಿದ ಪಕ್ಷದ ಜಿಲ್ಲಾ ಸಮಿತಿ ಸದಸ್ಯರೂ ಕ್ಷೇತ್ರ ಸಮಿತಿಯ ಉಸ್ತುವಾರಿಯೂ ಆಗಿರುವ ಅಬೂಬಕ್ಕರ್ ಸಿದ್ದೀಕ್ ಪುತ್ತೂರು ರವರು ಮಾತಾಡಿ ಈ ದೇಶವು ಸರ್ವ ಜನಾಂಗದ ಶಾಂತಿಯ ತೋಟವಾಗಬೇಕಾದರೆ ಸಂವಿಧಾನದ ಆಶಯಗಳನ್ನು ಉಪಯೋಗಿಸಿಕೊಂಡು ಅಧಿಕಾರಕ್ಕೆ ಬಂದ ಬಿಜೆಪಿ ಪಕ್ಷವು ಇಂದು ಅದೇ ಸಂವಿಧಾನದ ಆಶಯಗಳನ್ನು ಗಾಳಿಗೆ ತೂರಿ ದೇಶವನ್ನು ಒಡೆಯುವ ಕಾರ್ಯ ಮಾಡುತ್ತಿದೆ.ಆದುದರಿಂದ ಈ ದೇಶದಿಂದಲೇ ಬಿಜೆಪಿ ಪಕ್ಷವನ್ನು ನಿರ್ನಾಮ ಮಾಡಬೇಕೆಂದು ಆಕ್ರೋಶ ವ್ಯಕ್ತಪಡಿಸಿದರು.


ಕಾರ್ಯಕ್ರಮದ ಸಮಾರೋಪ ಭಾಷಣವನ್ನು ಕ್ಷೇತ್ರ ಸಮಿತಿ ಅಧ್ಯಕ್ಷರಾದ ಹಾಜಿ ಇಬ್ರಾಹಿಂ ಸಾಗರ್ ಮಾತಾಡಿ  ಈ ಜನವಿರೋಧಿ ಕಾನೂನನ್ನು ಹಿಂಪಡೆಯದಿದ್ದರೆ SDPI ಪಕ್ಷವು ಯಾವುದೇ ರಾಜಿ ಇಲ್ಲದೆ ದೇಶಾದ್ಯಂತ ಹೋರಾಟ ಮಾಡಲಿದೆ ಎಂದು ಎಚ್ಚರಿಸಿದರು.


ಪ್ರತಿಭಟನಾ ಸಭೆಯಲ್ಲಿ ಕ್ಷೇತ್ರ ಸಮಿತಿಯ ಕಾರ್ಯದರ್ಶಿ ಉಸ್ಮಾನ್ ಏ.ಕೆ,ಜೊತೆ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಕೊಡಿಪ್ಪಾಡಿ, ಕೋಶಾಧಿಕಾರಿ ವಿಶ್ವನಾಥ ಪುಂಚತ್ತಾರು, ಕ್ಷೇತ್ರ ಸಮಿತಿ ಸದಸ್ಯರಾದ ಡಿ.ಬಿ. ಮುಸ್ತಫಾ ವಿಟ್ಲ, ಅಶ್ರಫ್ ಬಾವು ಪಡೀಲ್, ಹಾಗೂ ಬ್ಲಾಕ್ ಮಟ್ಟದ ಮತ್ತು ಪಟ್ಟಣ ಸಮಿತಿ ಮತ್ತು ನಗರ ಸಮಿತಿಯ ನಾಯಕರು ಮತ್ತು ವ್ಯಾಪ್ತಿಯ ಹಲವಾರು ಕಾರ್ಯಕರ್ತರು,ಬೆಂಬಲಿಗರು ಭಾಗವಹಿಸಿದ್ದರು.


 ಪುತ್ತೂರು ಕ್ಷೇತ್ರ ಪಕ್ಷ ಸಂಘಟನಾ ಕಾರ್ಯದರ್ಶಿ ರಿಯಾಝ್ ಬಳಕ್ಕ ರವರು ಕಾರ್ಯಕ್ರಮ ನಿರೂಪಿಸಿದರು

9ನೇ ತರಗತಿ ವಿದ್ಯಾರ್ಥಿನಿಗೆ ಹೆರಿಗೆ ಪ್ರಕರಣ: ಹಾಸ್ಟೆಲ್ ವಾರ್ಡನ್ ಅಮಾನತು

Posted by Vidyamaana on 2024-01-11 16:42:11 |

Share: | | | | |


9ನೇ ತರಗತಿ ವಿದ್ಯಾರ್ಥಿನಿಗೆ ಹೆರಿಗೆ ಪ್ರಕರಣ: ಹಾಸ್ಟೆಲ್ ವಾರ್ಡನ್ ಅಮಾನತು

ತುಮಕೂರು: ಇಲ್ಲಿನ ಹಾಸ್ಟೆಲ್​ನಲ್ಲಿ ಉಳಿದುಕೊಂಡಿದ್ದ 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಮಗುವಿಗೆ ಜನ್ಮನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಹಾಸ್ಟೆಲ್ ವಾರ್ಡನ್ ನಿವೇದಿತಾರನ್ನು (Nivedita) ಜಿಲ್ಲಾ ಪಂಚಾಯತ್ ಸಿಇಒ‌ ಜಿ.ಪ್ರಭು (CEO G.Prabhu) ಅಮಾನತು ಮಾಡಿದ್ದಾರೆ.ತುಮಕೂರು (Tumkur) ಜಿಲ್ಲೆಯ ಮಧುಗಿರಿ (M

non

hugiri) ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಮೂಲತಃ ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆಯ ಬಾಗೇಪಲ್ಲಿ‌ (Bagepalli) ನಿವಾಸಿಯಾಗಿರುವ ಬಾಲಕಿ ಮಧುಗಿರಿ ಪಟ್ಟಣದ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿದ್ದುಕೊಂಡು 9 ನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು. ಹೊಟ್ಟೆ ನೋವೆಂದು ತಾಯಿಯ ಜೊತೆಗೆ ಬಾಗೆಪಲ್ಲಿ ಆಸ್ಪತ್ರೆಗೆ ತೆರಳಿದಾಗ ಬಾಲಕಿಗೆ ಹೆರಿಗೆ ಆಗಿದೆ.


ಸ್ಥಳೀಯ ಯುವಕನ ಜೊತೆ ಬಾಲಕಿ ಲೈಗಿಂಕ ಸಂರ್ಪಕದಲ್ಲಿದ್ದಳು ಎನ್ನಲಾಗುತ್ತಿದೆ. ಆದರೆ ಹಾಸ್ಟೆಲ್​ನಲ್ಲಿ ಬಾಲಕಿ ಚಲನವಲನವನ್ನು ಹಾಸ್ಟೆಲ್ ವಾರ್ಡನ್ ನಿವೇದಿತ ಗಮನಿಸಿಲ್ಲ, ಗರ್ಭಿಣಿಯಾದರೂ ಗೊತ್ತಾಗಿಲ್ಲ. ಹೀಗಾಗಿ ಕರ್ತವ್ಯ ಲೋಪ ಹಿನ್ನೆಲೆ ವಾರ್ಡನ್ ನಿವೇದಿತಾರನ್ನು ಅಮಾನತು ಮಾಡಲಾಗಿದೆ.

ಉಡುಪಿಯ ಗ್ಯಾಂಗ್‌ವಾರ್ ಪ್ರಕರಣ; ಗಾಯಾಳು ಆರೋಪಿಗೆ ಚಿಕಿತ್ಸೆ ನೀಡಿದ ವೈದ್ಯರ ವಿರುದ್ಧ FIR

Posted by Vidyamaana on 2024-05-29 05:40:08 |

Share: | | | | |


ಉಡುಪಿಯ ಗ್ಯಾಂಗ್‌ವಾರ್ ಪ್ರಕರಣ; ಗಾಯಾಳು ಆರೋಪಿಗೆ ಚಿಕಿತ್ಸೆ ನೀಡಿದ ವೈದ್ಯರ ವಿರುದ್ಧ FIR

ಉಡುಪಿಯ ಗ್ಯಾಂಗ್‌ವಾ‌ರ್ ಪ್ರಕರಣದಲ್ಲಿ ಗಾಯಗೊಂಡ ಗಾಯಾಳು ಆರೋಪಿಗೆ ಚಿಕಿತ್ಸೆ ನೀಡಿದ ಡಾಕ್ಟರ್ ವಿರುದ್ಧ ಎಫ್ ಐಆರ್ ದಾಖಲಾಗಿದೆ.

ಮೇ 18ರಂದು ನಸುಕಿನ ವೇಳೆ ನಡೆದ ಗ್ಯಾಂಗ್‌ವಾರ್‌ನಲ್ಲಿ ಕಾರು ಢಿಕ್ಕಿ ಹೊಡೆದು ರಸ್ತೆಗೆ ಬಿದ್ದ ಶರೀಫ್‌ನ ಮೇಲೆ ದುಷ್ಕರ್ಮಿಗಳು ತಲವಾರಿನಿಂದ ದಾಳಿ ನಡೆಸಿದ್ದರು.ಇದರಿಂದ ಶರೀಫ್‌ನ ಎಡಕಾಲು, ಬಲ ಕಿವಿ ಹಿಂಬದಿ, ಬಲಕೈಗೆ ಗಾಯವಾಗಿತ್ತು.ನಂತರ ಶರೀಫ್‌ನನ್ನು ಇತರೆ ಆರೋಪಿಗಳಾದ ಅಲ್ಪಾಝ್, ಮಜೀದ್ ಚಿಕಿತ್ಸೆಗಾಗಿ ಪಡುಬಿದ್ರಿಯಲ್ಲಿರುವ ಸಿದ್ದಿ ವಿನಾಯಕ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು.

ಅಂಕೋಲಾ : ಭಾರೀ ಪ್ರಮಾಣದ ಗುಡ್ಡ ಕುಸಿತ: 9 ಮಂದಿ ಮಣ್ಣಿನಡಿಯಲ್ಲಿ ಸಿಲುಕಿರುವ ಶಂಕೆ

Posted by Vidyamaana on 2024-07-16 11:39:47 |

Share: | | | | |


ಅಂಕೋಲಾ : ಭಾರೀ ಪ್ರಮಾಣದ ಗುಡ್ಡ ಕುಸಿತ: 9 ಮಂದಿ ಮಣ್ಣಿನಡಿಯಲ್ಲಿ ಸಿಲುಕಿರುವ ಶಂಕೆ

ಕಾರವಾರ, ಜು.16: ಅಂಕೋಲಾ ತಾಲೂಕಿನ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ ಬಳಿ ಭಾರೀ ಪ್ರಮಾಣ ಗುಡ್ಡ ಕುಸಿತ ಸಂಭವಿಸಿದ್ದು ಒಂದೇ ಕುಟುಂಬದ ಐವರು ಸೇರಿ ಒಟ್ಟು 9 ಮಂದಿ ಮಣ್ಣನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ರಾಷ್ಟ್ರೀಯ ಹೆದ್ದಾರಿಯ 66ರಲ್ಲಿ ಐಆರ್ ಬಿ ಕಂಪೆನಿ ಹೆದ್ದಾರಿ ಅಗಲೀಕರಣಕ್ಕಾಗಿ ರಸ್ತೆ ಪಕ್ಕದ ಗುಡ್ಡವನ್ನು ಭಾರೀ ಪ್ರಮಾಣದಲ್ಲಿ ಅಗೆಯಲಾಗಿತ್ತು. ಕಳೆದೆರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ ಕಾರಣ ಈ ಗುಡ್ಡ ಭಾರೀ ಪ್ರಮಾಣದಲ್ಲಿ ಕುಸಿದಿದೆ. ಮನೆಯ ಮೇಲೆ ಭಾರೀ ಪ್ರಮಾಣದ ಮಣ್ಣು

ನಗರಸಭೆ ಬೈ ಎಲೆಕ್ಷನ್ - ಬಿಜೆಪಿ ಅಭ್ಯರ್ಥಿಗಳ ಜೊತೆ ಕಾಣಿಸಿಕೊಂಡ ಡಾ. ಸುರೇಶ್ ಪುತ್ತೂರಾಯರು

Posted by Vidyamaana on 2023-12-15 15:30:12 |

Share: | | | | |


ನಗರಸಭೆ ಬೈ ಎಲೆಕ್ಷನ್ - ಬಿಜೆಪಿ ಅಭ್ಯರ್ಥಿಗಳ ಜೊತೆ ಕಾಣಿಸಿಕೊಂಡ ಡಾ. ಸುರೇಶ್ ಪುತ್ತೂರಾಯರು

ಪುತ್ತೂರು : ನಗರ ಸಭಾ ಸದಸ್ಯರಿಬ್ಬರ ಮರಣದಿಂದ ತೆರವಾದ ಎರಡು ಸ್ಥಾನಗಳಿಗೆ ಡಿ.27 ರಂದು ನಡೆಯಲಿರುವ ಉಪ ಚುನಾವಣೆಗೆ ಸಂಬಂಧಿಸಿದಂತೆ ಈಗಾಗಲೇ ಅಧಿಸೂಚನೆ ಹೊರಡಿಸಿದ್ದು, ಬಿಜೆಪಿ ಪಕ್ಷದಿಂದ ಅಭ್ಯರ್ಥಿಗಳ ಹೆಸರು ಈಗಾಗಲೇ ಘೋಷಣೆಯಾಗಿದ್ದು, ಇಂದು ನಾಮಪತ್ರ ಸಲ್ಲಿಕೆ ನಡೆಯಲಿದೆ.ಈ ಹಿನ್ನೆಲೆ ಅಭ್ಯರ್ಥಿಗಳು ಹಾಗೂ ಪಕ್ಷದ ಪ್ರಮುಖರು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಭೇಟಿ ನೀಡಿ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಿದರು.ಮಾಜಿ ಶಾಸಕ ಸಂಜೀವ ಮಠಂದೂರು, ಜೀವಂಧರ್ ಜೈನ್ ಸಹಿತ ಹಲವು ಬಿಜೆಪಿ ಪ್ರಮುಖರು ಉಪಸ್ಥಿತರಿದ್ದರು.


ಅರುಣ್ ಕುಮಾರ್ ಪುತ್ತಿಲ ಅವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರು ಕ್ಷೇತ್ರದಿಂದ ಪಕ್ಷೇತರರಾಗಿ ಸ್ಪರ್ಧೆಗೆ ಇಳಿದ ಸಂದರ್ಭದಲ್ಲಿ ಅವರ ಜತೆಗೆ ಪ್ರಮುಖ ನಾಯಕರಾಗಿ ಕಾಣಿಸಿಕೊಂಡಿದ್ದ ಸುರೇಶ್ ಪುತ್ತೂರಾಯ ಅವರು ದಿಢೀರ್ ಆಗಿ ಬಿಜೆಪಿ ಪಾಳಯದಲ್ಲಿ ಕಾಣಿಸಿಕೊಂಡಿದ್ದಾರೆ 


ಬಿಜೆಪಿಯಿಂದ ವಾರ್ಡ್ 1ರ ಅಭ್ಯರ್ಥಿಯಾಗಿ ಸುನೀತಾ ಹಾಗೂ ವಾರ್ಡ್ 11ರ ಅಭ್ಯರ್ಥಿಯಾಗಿ ರಮೇಶ್ ರೈ ಅವರು ಇಂದು ನಾಮಪತ್ರ ಸಲ್ಲಿಸಲಿದ್ದಾರೆ.


ನಗರ ಸಭೆಯ ವಾರ್ಡ್ 1 ರಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಶಿವರಾಮ ಸಪಲ್ಯ ಹಾಗೂ ವಾರ್ಡ್ 11ರಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯ ಶಕ್ತಿ ಸಿನ್ಹಾ ರವರ ನಿಧನದಿಂದ ತೆರವಾದ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.


ಡಿ.8 ರಂದು ಜಿಲ್ಲಾಧಿಕಾರಿಗಳು ಅದಿಸೂಚನೆ ಪ್ರಕಟಗೊಳಿಸಲಿದ್ದು, ಅದೇ ದಿನ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಪ್ರಾರಂಭಗೊಂಡಿದೆ. ಡಿ.15 ನಾಮಪತ್ರ ಸಲ್ಲಿಸಲು ಅಂತಿಮ ದಿನವಾಗಿದೆ. ಡಿ.16ರಂದು ನಾಮಪತ್ರ ಪರಿಶೀಲನೆ, ಡಿ.18ರಂದು ನಾಮಪತ್ರ ಹಿಂತೆಗೆದುಕೊಳ್ಳಲು ಅಂತಿಮ ದಿನವಾಗಿದೆ.


ಡಿ.27 ರಂದು ಮತದಾನ ಪ್ರಕ್ರಿಯೆ ನಡೆಯಲಿದ್ದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯ ತನಕ ಮತದಾನ ನಡೆಯಲಿದೆ. ಅವಶ್ಯವಿದ್ದರೆ ಡಿ.29ರಂದು ಮರು‌ಮತದಾನ ನಡೆದು ಡಿ.30 ರಂದು ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಪ್ರಕ್ರಿಯೆ ನಡೆದು ಫಲಿತಾಂಶ ಘೋಷಣೆಯಾಗಲಿದೆ.



Leave a Comment: