ಪುತ್ತೂರು :ಭೀಕರ ಅಪಘಾತ - 10 ಕ್ಕೂ ಹೆಚ್ಚು ವಾಹನಗಳು ಪುಡಿ ಪುಡಿ

ಸುದ್ದಿಗಳು News

Posted by vidyamaana on 2024-05-27 18:41:30 |

Share: | | | | |


ಪುತ್ತೂರು :ಭೀಕರ ಅಪಘಾತ - 10 ಕ್ಕೂ  ಹೆಚ್ಚು ವಾಹನಗಳು ಪುಡಿ ಪುಡಿ

ಪುತ್ತೂರು : ಪುತ್ತೂರಿನ ಹೊರ ವಲಯದ ಸಂಟ್ಯಾರಿನಲ್ಲಿ ಭೀಕರ ಅಪಘಾತ ನಡೆದು 10ಕ್ಕೂ ಹೆಚ್ಚು ವಾಹನಗಳು ಪುಡಿ ಪುಡಿಯಾದ ಘಟನೆ ಮೇ.27ರಂದು ಸಂಜೆ ನಡೆದಿದೆ. 

ಪಾಣಾಜೆ - ಸಂಟ್ಯಾರ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಸಂಟ್ಯಾರ್ ಜಂಕ್ಷನ್ ನಲ್ಲಿ ನಿಲ್ಲಿಸಿದ್ದ ಹತ್ತಕ್ಕೂ ಹೆಚ್ಚು ಬೈಕ್ ಗಳು ಪುಡಿ ಪುಡಿಯಾಗಿ ಚೆಲ್ಲಪಿಲ್ಲಿಯಾಗಿದೆ. 


ಪಾಣಾಜೆ ಕಡೆಯಿಂದ ಅತೀ ವೇಗದಲ್ಲಿ ಬರುತಿದ್ದ ಕಾರೊಂದು  ಈ ಹತ್ತಕ್ಕೂ ಹೆಚ್ಚು ದ್ವಿಚಕ್ರ ವಾಹನಗಳಿಗೆ ಡಿಕ್ಕಿಯಾಗಿದೆ. ಸಂಟ್ಯಾರ್ ಜಂಕ್ಷನ್ ನಲ್ಲಿ   ವಾಹನ ನಿಲ್ಲಿಸಿ ಬಸ್ ನಲ್ಲಿ ಉದ್ಯೋಗಕ್ಕೆ ತೆರಳುವವರ 10 ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಪುಡಿ ಪುಡಿಯಾಗಿ ಚೆಲ್ಲಪಿಲ್ಲಿಯಾಗಿದೆ.

 Share: | | | | |


ಪುತ್ತೂರು: ಸದಾಶಿವ ಪೈ ಗೆ ಚೂರಿ ಇರಿತ - ಗುಣಶೇಖರ್ ಶೆಟ್ಟಿಗೂ ಹಲ್ಲೆ ಆಸ್ಪತ್ರೆಗೆ ದಾಖಲು

Posted by Vidyamaana on 2024-06-13 16:10:46 |

Share: | | | | |


ಪುತ್ತೂರು:  ಸದಾಶಿವ ಪೈ ಗೆ  ಚೂರಿ ಇರಿತ - ಗುಣಶೇಖರ್ ಶೆಟ್ಟಿಗೂ ಹಲ್ಲೆ ಆಸ್ಪತ್ರೆಗೆ ದಾಖಲು

ಪುತ್ತೂರು : ಹಿರಿಯ ನಾಗರಿಕರ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದು ಓರ್ವರಿಗೆ ಚೂರಿಯಿಂದ ಇರಿದ ಘಟನೆ ಕೋರ್ಟ್ ರಸ್ತೆಯಲ್ಲಿ ಗುರುವಾರ ನಡೆದಿದೆ.

ಪಾರ್ಕಿಂಗ್ ವಿಚಾರಕ್ಕೆ ಸಂಬಂಧಪಟ್ಟಂತೆ ವಾಗ್ವಾದ ನಡೆದಿದೆ ಎನ್ನಲಾಗಿದೆ.

ಆ 31 ರವರೆಗೆ ಕಾಂಗ್ರೆಸ್ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ

Posted by Vidyamaana on 2023-08-29 04:22:46 |

Share: | | | | |


ಆ 31 ರವರೆಗೆ ಕಾಂಗ್ರೆಸ್ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ

ಬೆಂಗಳೂರು: ಕಾಂಗ್ರೆಸ್ ಪಕ್ಷದ ಸೇವಾ ದಳ ಯಂಗ್ ಬ್ರಿಗೇಡ್ ವಿಭಾಗದ ಸದ ಸ್ಯತ್ವ ಅಭಿಯಾನವನ್ನು ರಾಜ್ಯ ವ್ಯಾಪ್ತಿ ಆರಂ ಭವಾಗಿದ್ದು, ಆಸ ಕರು ನೋಂದಣಿ ಮಾಡಿಕೊಳ್ಳಬ ಹುದು ಎಂದು ಬ್ರಿಗೇಡ್ ರಾಜ್ಯಾ ಧ್ಯಕ್ಷ ಝುನೈದ್ ಪಿ.ಕೆ.ತಿಳಿಸಿದ್ದಾರೆ.


ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆನ್‌ಲೈನ್ ಮೂಲಕ ಸದಸ್ಯತ್ವ ನೋಂದಣಿಗೆ ಅವಕಾಶ ಕಲ್ಪಿಸಲಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9611140233 ಅನ್ನು ಸಂಪರ್ಕಿಸಬ ಹುದು. ಪ್ರತಿ ಗ್ರಾಮ ಪಂಚಾಯತ್, ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಯೂ ಈ ಅಭಿಯಾನ ನಡೆಸಲಾ ಗುತ್ತಿ ದ್ದು, 18 ವರ್ಷ ಮೇಲ್ಪಟ್ಟ ಹಾಗೂ 38 ವರ್ಷ ದೊಳಗಿನ ಯುವಕರು ಮಾತ್ರ ಸದಸ್ಯತ್ವವನ್ನು ದಾಗಿದೆ ಎಂದರು. ಪಡೆಯಬಹು


ಇದು ಸತತ ಒಂದು ತಿಂಗಳು ಕಾಲ ನಡೆ ಯಲಿದೆ. ಕಾಂಗ್ರೆಸ್‌ ಮತ್ತು ಜಾತ್ಯತೀತ ವಿಚಾರಧಾರೆ ಹೊಂದಿರುವ ಯುವ ಕರು ಬ್ರಿಗೇಡ್ ಸದಸ್ಯತ್ವವನ್ನು ಪಡೆದು ಕೊಳ್ಳಬಹುದಾಗಿದೆ.ಅಲ್ಲದೆ, ಯುವಕರು ಸಕ್ರಿಯ ರಾಜಕಾರಣ ಮತ್ತು ಮಾನ ವೀಯ ಸಿದ್ಧಾಂತಗಳಲ್ಲಿ ತೊಡಗಬೇಕು ಎಂಬ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಆಶಯದಂತೆ ಈ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಸೇವಾ ಮನೋ ಭಾವದಿಂದ ಎಲ್ಲರೂ ಕೆಲಸ ಮಾಡಲು ಮುಂದಾಗಬೇಕು. ಸೇವಾದಳವು ನಿಸ್ವಾ ರ್ಥ ಸೇವಾ ಸಂಘಟನೆ ಆಗಿದೆ. ಜಾತಿ ಭಾವನೆ ತ್ಯಜಿಸಿ ರಚನಾತ್ಮಕ ಕಾರ್ಯಕ್ರ ಮಗಳ ಮೂಲಕ ರಾಷ್ಟ್ರೀಯತೆಯನ್ನು ಮೂಡಿಸುವುದೇ ನಮ್ಮ ಗುರಿ ಎಂದು ಝುನೈದ್ ತಿಳಿಸಿದರು.

ಆಫ್ರಿಕಾ ಖಂಡವನ್ನು ಕಂಗೆಡಿಸುತ್ತಿದೆ ಮಂಕಿ ಫಾಕ್ಸ್ ಸೋಂಕು - ವಿಶ್ವದ ಇತರೇ ರಾಷ್ಟ್ರಗಳಿಗೂ ಹಬ್ಬಿದ ಭೀತಿ

Posted by Vidyamaana on 2024-08-17 09:13:23 |

Share: | | | | |


ಆಫ್ರಿಕಾ ಖಂಡವನ್ನು ಕಂಗೆಡಿಸುತ್ತಿದೆ ಮಂಕಿ ಫಾಕ್ಸ್ ಸೋಂಕು - ವಿಶ್ವದ ಇತರೇ ರಾಷ್ಟ್ರಗಳಿಗೂ ಹಬ್ಬಿದ ಭೀತಿ

ನವದೆಹಲಿ, ಆಗಸ್ಟ್.16: ನೂರಕ್ಕೂ ಹೆಚ್ಚು ದೇಶಗಳಲ್ಲಿ ಮಂಕಿ ಪಾಕ್ಸ್ ಹಬ್ಬಿದ್ದು ಈ ಹಿನ್ನೆಲೆಯಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಜಾಗತಿಕ ತುರ್ತು ಪರಿಸ್ಥಿತಿ ಘೋಷಣೆ ಮಾಡಿದೆ. ಆಫ್ರಿಕಾ ಖಂಡದ ಬಹುತೇಕ ಭಾಗದಲ್ಲಿ ರೋಗದ ಹಾವಳಿ ಕಾಣಿಸಿಕೊಂಡಿದ್ದು ಡೆಮಾಕ್ರೆಟಿಕ್ ರಿಪಬ್ಲಿಕ್ ಆಫ್ ಕಾಂಗೋ ಈ ರೋಗದಿಂದ ಸಂಪೂರ್ಣ ನಲುಗಿದೆ. 

ಕಳೆದ ಎರಡು ವರ್ಷಗಳ ಅವಧಿಯಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಎರಡನೇ ಬಾರಿಗೆ ಮಂಕಿ ಪಾಕ್ಸ್‌ ಬಗ್ಗೆ ಜಾಗತಿಕ ತುರ್ತು ಪರಿಸ್ಥಿತಿ ಘೋಷಣೆ ಮಾಡಿದೆ. ಈ ಬಾರಿ ಎಮರ್ಜೆನ್ಸಿ ಘೋಷಣೆ ಮಾಡುವ ಜೊತೆಯಲ್ಲೇ ಸೋಂಕಿನ ವಿರುದ್ಧ ಹೋರಾಡಲು 1.5 ಮಿಲಿಯನ್ ಅಮೆರಿಕನ್ ಡಾಲರ್ ಅನುದಾನವನ್ನೂ ನೀಡಿದೆ. 

ಸಿಡುಬು ರೋಗದಂತೆ ಕಂಡು ಬರುವ ಈ ರೋಗವನ್ನು 1970ರಲ್ಲಿ ಮೊದಲ ಬಾರಿಗೆ ವಿಜ್ಞಾನಿಗಳು ಮನುಷ್ಯನಲ್ಲಿ ಪತ್ತೆ ಮಾಡಿದ್ದರು. ಅದಕ್ಕೂ ಹಿಂದೆ ಈ ಸೋಂಕು ಕೇವಲ ಕೋತಿಗಳಲ್ಲಿ ಮಾತ್ರ ಕಾಣಿಸಿಕೊಳ್ಳುತ್ತಿತ್ತು. ಆಫ್ರಿಕಾದಲ್ಲೇ ಮೊದಲ ಬಾರಿಗೆ ಈ ಸೋ‌ಂಕು ಮನುಷ್ಯನಿಗೆ ಹರಡಿತ್ತು. ಕೇಂದ್ರ ಹಾಗೂ ಪಶ್ಚಿಮ ಆಫ್ರಿಕಾ ದೇಶಗಳಲ್ಲಿ ಈ ಸೋಂಕಿನ ಹಾವಳಿ ವಿಪರೀತವಾಗಿದೆ. ಸೋಂಕಿತ ಪ್ರಾಣಿಗಳ ಸಂಪರ್ಕಕ್ಕೆ ಬರುವ ಮಾನವರಿಗೂ ಮಂಕಿ ಪಾಕ್ಸ್ ಹರಡುತ್ತಿದೆ. 2022ರಲ್ಲಿ ಸೋಂಕು ಹರಡುವ ತೀವ್ರತೆ ಹೆಚ್ಚತೊಡಗಿತ್ತು.

ಬೆಂಗಳೂರು : ಬೆಳ್ಳಂಬೆಳಗ್ಗೆ ಬೆಂಗಳೂರಿನ 15ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ

Posted by Vidyamaana on 2023-12-01 12:52:33 |

Share: | | | | |


ಬೆಂಗಳೂರು : ಬೆಳ್ಳಂಬೆಳಗ್ಗೆ ಬೆಂಗಳೂರಿನ 15ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ

ಬೆಂಗಳೂರು: ಶುಕ್ರವಾರ ಬೆಂಗಳೂರಿನಾದ್ಯಂತ 15 ಕ್ಕೂ ಹೆಚ್ಚು ಶಾಲೆಗಳಿಗೆ ಅನಾಮಧೇಯ ಇ- ಮೇಲ್‌ಗಳ ಮೂಲಕ ಬಾಂಬ್ ಬೆದರಿಕೆಗಳು ಬಂದಿದ್ದು, ಪರಿಣಾಮ ವಿದ್ಯಾರ್ಥಿಗಳು, ಪೋಷಕರು ಮತ್ತು ಶಾಲಾ ಅಧಿಕಾರಿಗಳಲ್ಲಿ ಭಯಭೀತರಾಗಿದ್ದಾರೆ.



ಇಂದು( ಶುಕ್ರವಾರ) ಬೆಳಿಗ್ಗೆ ಮಕ್ಕಳು ಶಾಲೆಗಳಿಗೆ ಬಂದಿದ್ದು ಇನ್ನೂ ಕೆಲವು ಮಕ್ಕಳು ಶಾಖೆಗೆ ಬರುತ್ತಿದ್ದರು ಅಷ್ಟೋತ್ತಿಗೆ ಇ ಮೇಲ್ ಪರಿಶೀಲಿಸಿದ ಶಾಲಾ ಅಧಿಕಾರಿಗಳಿಗೆ ಶಾಕ್ ಆಗಿದೆ. ಇ ಮೇಲ್ ನಲ್ಲಿ ಶಾಲೆಗಳಿಗೆ ಬಾಂಬ್ ಹಾಕುವ ಬೆದರಿಕೆ ಹಾಕಲಾಗಿದ್ದು ಕಂಗಾಲಾದ ಶಾಲಾ ಆಡಳಿತ ಮಂಡಳಿ ಮಕ್ಕಳನ್ನು ಮನೆಗೆ ತೆರಳುವಂತೆ ಸೂಚಿಸಿದ್ದಾರೆ ಅಲ್ಲದೆ ಕೆಲವು ಮಕ್ಕಳು ಶಾಲೆಗೆ ಬರುತ್ತಿದ್ದು ಆ ಮಕ್ಕಳನ್ನು ಗೇಟ್ ನಿಂದಲೇ ಹಿಂದೆ ಕಳುಹಿಸಿದ್ದಾರೆ.


ಇದೇ ರೀತಿ ಸುಮಾರು ಹದಿನೈದಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಮೇಲ್ ಬಂದಿದೆ ಎನ್ನಲಾಗಿದ್ದು ಕೂಡಲೇ ಎಚ್ಚೆತ್ತ ಪೊಲೀಸ್ ಅಧಿಕಾರಿಗಳ ತಂಡ ಶಾಲೆಗಳಿಗೆ ತೆರಳಿ ಪರಿಶೀಲನೆ ನಡೆಸುತ್ತಿದೆ.


ಬಸವೇಶ್ವರ ನಗರದ ನ್ಯಾಪಲ್, ವಿದ್ಯಾಶಿಲ್ಪ, ಮಹದೇವಪುರದ ಗೋಪಾಲನ್ ಇಂಟನ್ರ್ಯಾಷನಲ್ ಶಾಲೆ, ವರ್ತೂರು ಠಾಣಾ ವ್ಯಾಪ್ತಿಯ ಡೆಲ್ಲಿ ಪಬ್ಲಿಕ್ ಸ್ಕೂಲ್, ಮಾರತ್ತಹಳ್ಳಿ ಠಾಣಾ ವ್ಯಾಪ್ತಿಯ ನ್ಯೂ ಅಕಾಡೆಮಿ ಸ್ಕೂಲ್, ಹೆಣ್ಣೂರು ಠಾಣಾ ವ್ಯಾಪ್ತಿಯ ಸೇಂಟ್ ವಿನ್ಸೆಂಟ್ ಪೌಲ್ ಶಾಲೆ, ಗೋವಿಂದಪುರ ಠಾಣಾ ವ್ಯಾಪ್ತಿಯ ಇಂಡಿಯನ್ ಪಬ್ಲಿಕ್ ಸ್ಕೂಲ್‍ ಸೇರಿದಂತೆ ಹಲವಾರು ಶಾಲೆಗಳಿಗೆ ಬಾಂಬ್ ಇಟ್ಟಿರುವುದಾಗಿ ದುಷ್ಕರ್ಮಿಗಳಿಂದ ಬೆದರಿಕೆ. ಕೂಡಲೇ ಶಾಲೆಗೆ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳ ಸಿಬ್ಬಂದಿ ಆಗಮಿಸಿ ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದಾರೆ.ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನಿವಾಸದ ಬಳಿ ಇರುವ ಶಾಲೆಗೂ ಬಾಂಬ್ ಬೆದರಿಕೆ ಇದೆ ಎನ್ನಲಾಗಿದೆ.



ಸದ್ಯ ಶಾಲೆಗಳಿಗೆ ಬಾಂಬ್ ನಿಷ್ಕ್ರಿಯ ತಂಡ ಹಾಗೂ ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.


ಆತಂಕ ಬೇಡ:

ಮಕ್ಕಳು, ಪೋಷಕರು ಭಯ, ಆತಂಕಪಡುವ ಅಗತ್ಯವಿಲ್ಲ. ನಮ್ಮ ಸಿಬ್ಬಂದಿ ಪರಿಶೀಲನೆ ಮುಂದುವರೆಸಿದ್ದಾರೆ. ಇದು ಹುಸಿ ಬಾಂಬ್ ಕರೆಯೋ ಎಂಬುದು ಕೆಲವೇ ಕ್ಷಣಗಳಲ್ಲಿ ತಿಳಿಯಲಿದೆ. ಈ ಹಿಂದೆಯೂ ಹಲವಾರು ಬಾರಿ ನಗರದ ಶಾಲೆಗಳಲ್ಲಿ ಬಾಂಬ್ ಇಡಲಾಗಿದೆ ಎಂಬ ಕರೆ, ಇ-ಮೇಲ್ ಬಂದಿತ್ತು. ಆಗ ಪರಿಶೀಲನೆ ನಡೆಸಿದಾಗ ಅದು ಹುಸಿ ಕರೆ ಎಂಬುದು ತಿಳಿದಿತ್ತು. ಇಂತಹ ಬೆದರಿಕೆ ಹಾಕಿದವರನ್ನು ಬಂಧಿಸಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಹೇಳಿದ್ದಾರೆ.

ಕಡಬ : ಕಳಾರ ನಿವಾಸಿ ಮುಸ್ತಫಾ ನೇಣು ಬಿಗಿದು ಆತ್ಮಹತ್ಯೆ!

Posted by Vidyamaana on 2024-07-29 12:32:13 |

Share: | | | | |


ಕಡಬ : ಕಳಾರ ನಿವಾಸಿ ಮುಸ್ತಫಾ ನೇಣು ಬಿಗಿದು ಆತ್ಮಹತ್ಯೆ!

ಕಡಬ : ಕಳಾರ ನಿವಾಸಿ ಮುಸ್ತಫಾ (33) ಕಳಾರದ ಹಳೆ ಮನೆಯೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಪುತ್ತೂರು ಶಾಸಕ ಕಚೇರಿಗೆ ನಗರಸಭೆ ನಿಧಿಯ ದುರುಪಯೋಗ - ನಗರಸಭೆ ಬಿಜೆಪಿ ಸದಸ್ಯರಿಂದ ಆಕ್ಷೇಪಿಸಿ ಆಡಳಿತಾಧಿಕಾರಿ ಡಿ.ಸಿಗೆ ಮನವಿ

Posted by Vidyamaana on 2023-09-15 17:18:43 |

Share: | | | | |


ಪುತ್ತೂರು ಶಾಸಕ ಕಚೇರಿಗೆ ನಗರಸಭೆ ನಿಧಿಯ ದುರುಪಯೋಗ - ನಗರಸಭೆ ಬಿಜೆಪಿ ಸದಸ್ಯರಿಂದ ಆಕ್ಷೇಪಿಸಿ ಆಡಳಿತಾಧಿಕಾರಿ ಡಿ.ಸಿಗೆ ಮನವಿ

ಪುತ್ತೂರು: ಶಾಸಕ ನೂತನ ಕಚೇರಿಗೆ ಪುತ್ತೂರು ನಗರಸಭಾ ನಿಧಿಯ ದುರುಪಯೋಗವಾಗಿದೆ ಮತ್ತು ನಗರಸಭೆಯ ನಗರೋತ್ಥಾನದ ವಿವಿಧ ಕಾಮಗಾರಿ ವಿಳಂಬ ಸಹಿತ ನಗರಸಭೆ ೨ ನೇ ಅವಧಿಗೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ಮೀಸಲಾತಿ ಇನ್ನೂ ಆಗಿಲ್ಲ ಎಂದು ನಗರಸಭೆ ಬಿಜೆಪಿ ಸದಸ್ಯರು ನಗರಸಭೆ ಆಡಳಿತಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಮುಲೈಮುಗಿಲನ್ ಅವರಿಗೆ ಪುತ್ತೂರಿನಲ್ಲಿ ಮನವಿ ಮಾಡಿದ್ದಾರೆ.


ಪುತ್ತೂರು ತಾಲೂಕು ಆಡಳಿತಕ್ಕೆ ಜಿಲ್ಲಾಧಿಕಾರಿಯವರು ಸೆ.೧೫ ರಂದು ಆಗಮಿಸಿದ ವೇಳೆ ಸದಸ್ಯರು ಮನವಿ ಮಾಡಿದ್ದಾರೆ. ಪುತ್ತೂರು ಶಾಸಕರು ನಮ್ಮ ನಗರ ಸಭೆಯ ಕಟ್ಟಡದಲ್ಲಿ ಈ ಹಿಂದೆ ಕಾರ್ಯನಿರ್ವಹಿಸುತ್ತಿದ್ದ ನಗರ ಯೋಜನಾ ಪ್ರಾಧಿಕಾರದ ಕಚೇರಿಯನ್ನು ಅಲ್ಲಿಂದ ತೆರವುಗೊಳಿಸಿ ತಮ್ಮ ಶಾಸಕರ ಕೊಠಡಿಯನ್ನಾಗಿ ತಮ್ಮ ಮೂಲಕ ಪರಿವರ್ತಿಸಿರುತ್ತಾರೆ, ಅಲ್ಲದೆ ಸದ್ರಿ ಕಚೇರಿಯ ನವೀಕರಣಕ್ಕೆ, ಸುಮಾರು 31 ಲಕ್ಷ ರೂಪಾಯಿಗಳನ್ನು ಸಾರ್ವಜನಿಕರ ತೆರಿಗೆ ಹಣವನ್ನು ನಗರಸಭಾ ನಿಧಿಯಿಂದ ನೀಡುವಂತೆ ತಮ್ಮ ಮೂಲಕ ಆದೇಶ ನೀಡಲಾಗಿದೆ. ಈ ರೀತಿ ನಾಗರಿಕರಿಂದ ಸಂಗ್ರಹವಾದ ತೆರಿಗೆ ಹಣವನ್ನು ನಗರಸಭಾ ನಿಧಿಯಿಂದ ಶಾಸಕರ ಐಷಾರಾಮಿ ಕಚೇರಿಯ ಅಭಿವೃದ್ಧಿಗೆ ನೀಡಲು ಚುನಾಯಿತ ಸದಸ್ಯರುಗಳಾದ ನಮ್ಮ ಆಕ್ಷೇಪವಿರುತ್ತದೆ. ಅದಲ್ಲದೇ ಈ ಹಿಂದಿನ ಅವಧಿಯಲ್ಲಿ ಮಂಜೂರಾದ ಅಮೃತ ನಗರೋತ್ಥಾನದ ಕಾಮಗಾರಿಗಳು ಆರಂಭವಾಗಿರುವುದಿಲ್ಲ. ನಗರಸಭೆಯ ಎರಡನೆಯ  ಅವಧಿಗೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ಮೀಸಲಾತಿ ತೊಡಕು ಇನ್ನೂ ನಿವಾರಣೆಯಾಗಿರುವುದಿಲ್ಲ. ಆದ್ದರಿಂದ ತಾವು ಈ ಎಲ್ಲಾ ವಿಚಾರಗಳ ಬಗ್ಗೆ ವರಿಶೀಲಿಸಿ ಚುನಾಯಿತ ಸದಸ್ಯರಾದ ನಮ್ಮ ಅಭಿಪ್ರಾಯಕ್ಕೆ ಮನ್ನಣೆ ನೀಡಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಈ ಮೂಲಕ ವಿನಂತಿಸುತ್ತಿದ್ದೇವೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.


ನಗರಸಭೆ ನಿಕಟಪೂರ್ವ ಅಧ್ಯಕ್ಷ ಕೆ ಜೀವಂಧರ್ ಜೈನ್, ನಿಕಟಪೂರ್ವ ಉಪಾಧ್ಯಕ್ಷೆ ವಿದ್ಯಾ ಗೌರಿ, ಸದಸ್ಯರಾದ ಪಿ ಜಿ ಜಗನ್ನಿವಾಸ ರಾವ್, ಭಾಮಿ ಅಶೋಕ್ ಶೆಣೈ, ಮನೋಹರ್ ಕಲ್ಲಾರೆ, ನವೀನ್ ಪೆರಿತ್ತೋಡಿ, ಪ್ರೇಮ್, ಸಂತೋಷ್ ಬೊಳುವಾರು, ಸುಂದರ ಪೂಜಾರಿ ಬಡಾವು, ಶೀನಪ್ಪ ನಾಯ್ಕ್, ಪದ್ಮನಾಭ ಪಡೀಲ್ , ವಸಂತ ಕಾರೆಕ್ಕಾಡು, ಬಾಲಚಂದ್ರ, ಶಶಿಕಲಾ ಸಿ.ಎಸ್, ಪ್ರೇಮಲತಾ ನಂದಿಲ, ಮೋಹಿನಿ ವಿಶ್ವನಾಥ್, ಮಮತಾ ರಂಜನ್, ಯಶೋದಾ ಹರೀಶ್, ಗೌರಿ ಬನ್ನೂರು, ಲೀಲಾವತಿ, ದೀಕ್ಷಾ ಪೈ, ಇಂದಿರಾ, ರೋಹಿಣಿ ಈ ಸಂದರ್ಭ ಉಪಸ್ಥಿತರಿದ್ದರು.



Leave a Comment: