ಲಿಂಗನಮಕ್ಕಿ ಜಲಾಶಯದಿಂದ ಯಾವುದೇ ಕ್ಷಣದಲ್ಲಿ ನದಿಗೆ ನೀರು

ಸುದ್ದಿಗಳು News

Posted by vidyamaana on 2024-07-25 16:34:52 |

Share: | | | | |


ಲಿಂಗನಮಕ್ಕಿ ಜಲಾಶಯದಿಂದ ಯಾವುದೇ ಕ್ಷಣದಲ್ಲಿ ನದಿಗೆ ನೀರು

ಶಿವಮೊಗ್ಗ: ಲಿಂಗನಮಕ್ಕಿ ಜಲಾಶಯದಿಂದ ಯಾವುದೇ ಕ್ಷಣದಲ್ಲಿ ನದಿಗೆ ನೀರು ಹರಿಸಲಾಗುತ್ತದೆ. ಹೀಗಾಗಿ ನದಿ ಪಾತ್ರದಲ್ಲಿ ವಾಸಿಸುತ್ತಿರುವ ಜನರು ತಮ್ಮ ಜಾನುವಾರುಗಳೊಂದಿಗೆ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಕರ್ನಾಟಕ ವಿದ್ಯುತ್ ನಿಗಮದ ಕಾರ್ಯ ನಿರ್ವಾಹಕ ಎಂಜಿನಿಯರ್ ಬುಧವಾರ ಮುನ್ನೆಚ್ಚರಿಕೆ ನೀಡಿದ್ದಾರೆ

ಕಾರ್ಗಲ್ ನ ಲಿಂಗನಮಕ್ಕಿ ಜಲಾಶಯದ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ಜಲಾಶಯಕ್ಕೆ ಸದ್ಯ 60 ಸಾವಿರ ಕ್ಯುಸೆಕ್ ಒಳಹರಿವು ಇದೆ.

Additional Image


ಜಲಾಶಯದ ಗರಿಷ್ಠ ಮಟ್ಟ 1819 ಅಡಿಗಳು ಇದ್ದು, ಜಲಾಶಯದಲ್ಲಿ ಈಗ 1801. 20 ಅಡಿ ನೀರಿನ ಸಂಗ್ರಹ ಇದೆ. ಮಳೆ ಹೆಚ್ಚಿರುವುದರಿಂದ ಜಲಾಶಯದ ಮಟ್ಟ ಶೀಘ್ರವೇ ಗರಿಷ್ಠ ಮಟ್ಟ ತಲುಪುವ ಸಾಧ್ಯತೆ ಇದೆ.


ಅಣೆಕಟ್ಟೆಯ ಸುರಕ್ಷತೆಯ ದೃಷ್ಟಿಯಿಂದ ಯಾವುದೇ ಕ್ಷಣದಲ್ಲಿ ನದಿಗೆ ನೀರು ಹರಿಸಬಹುದು ಎಂದು ಕೆಪಿಸಿಎಲ್‌ ಪ್ರಕಟಣೆಯಲ್ಲಿ ತಿಳಿಸಿದೆ.

 Share: | | | | |


ಖಾಸಗಿ ಬಸ್ಸಿನ ಓವರ್ ಟೇಕ್ ಧಾವಂತ: ಬೈಕ್ ಸವಾರ ದಾರುಣ ಮೃತ್ಯು

Posted by Vidyamaana on 2024-03-02 09:56:38 |

Share: | | | | |


ಖಾಸಗಿ ಬಸ್ಸಿನ ಓವರ್ ಟೇಕ್ ಧಾವಂತ: ಬೈಕ್ ಸವಾರ ದಾರುಣ ಮೃತ್ಯು

ಬೆಳ್ತಂಗಡಿ: ಬಸ್ ಮತ್ತು ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ವಿದ್ಯಾರ್ಥಿಯೋರ್ವ ದಾರುಣವಾಗಿ ಮೃತಪಟ್ಟ ಘಟನೆ ಮಾ 1ರಂದು ರಾತ್ರಿ ಮಂಗಳೂರಿನ ಕಂಕನಾಡಿ ಸಮೀಪ ನಡೆದಿದೆ‌.

ಕಕ್ಕಿಂಜೆ ಸಮೀಪದ ಚಾರ್ಮಾಡಿ ಜಲಾಲಿಯಾ ನಗರದ ನಿವಾಸಿ, ವಹೀದಾ ಅವರ ಮಗ ಸಿನಾನ್  (21 ವರ್ಷ) ಮೃತಪಟ್ಟ ದುರ್ದೈವಿ. ಇವರನ್ನು ಮಂಗಳೂರಿನ ಯೆನಪೋಯ ಕಾಲೇಜಿನ  ವಿಧ್ಯಾರ್ಥಿ ಎಂದು ಗುರುತಿಸಲಾಗಿದೆ.

ಬಡಕುಟುಂಬದ ಸಿನಾನ್  ಪಾರ್ಟ್ ಟೈಮ್ ಪುಡ್ ಡೆಲಿವರಿ ಕೆಲಸ ಮಾಡುತ್ತಿದ್ದರು. ತನ್ನ ಕುಟುಂಬಕ್ಕೆ ಆಧಾರಸ್ತಂಭವಾಗಿದ್ದ ಅವರು, ವಿದ್ಯಾಭ್ಯಾಸವನ್ನು ತನ್ನ ಖರ್ಚಿನಿಂದಲೇ ನಿಭಾಯಿಸುತ್ತಿದ್ದರು. ಇದೇ ರೀತಿ ನಿನ್ನೆ ರಾತ್ರಿ ವೇಳೆ ಫುಡ್ ಡೆಲಿವರಿ ಮಾಡುತ್ತಿದ್ದಾಗ ವಾಹನ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ. ಖಾಸಗಿ ಬಸ್ಸೊಂದು ಬೈಕನ್ನು ಓವರ್ ಟೇಕ್ ಮಾಡುವ ಭರದಲ್ಲಿ ಬೈಕಿನ ಹ್ಯಾಂಡ್ಲಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರ ಬಸ್ಸಿನಡಿಗೆ ಬಿದ್ದು, ದಾರುಣವಾಗಿ ಮೃತಪಟ್ಟಿದ್ದಾರೆ.

ಮೃತರು ತಂದೆ,ತಾಯಿ, ತಮ್ಮ, ತಂಗಿಯನ್ನು ಅಗಲಿದ್ದಾರೆ.

ಬೆಳ್ತಂಗಡಿ ಹೆದ್ದಾರಿ ಬದಿ ಅಂಗಡಿ ಪುಡಿಗೈದ ಕಿಡಿಗೇಡಿಗಳು

Posted by Vidyamaana on 2023-12-03 09:08:40 |

Share: | | | | |


ಬೆಳ್ತಂಗಡಿ ಹೆದ್ದಾರಿ ಬದಿ ಅಂಗಡಿ ಪುಡಿಗೈದ ಕಿಡಿಗೇಡಿಗಳು

ಬೆಳ್ತಂಗಡಿ: ನಿಡ್ಲೆ ಗ್ರಾಮದ ಬೂಡುಜಾಲು ಎಂಬಲ್ಲಿ ರಸ್ತೆ ಬದಿಯಲ್ಲಿದ್ದ ಗೂಡಂಗಡಿಯನ್ನು ಕಿಡಿಗೇಡಿ ಗಳು ರಾತ್ರಿ ವೇಳೆ ಧ್ವಂಸಗೊಳಿಸಿದ ಘಟನೆ ಸಂಭವಿಸಿದ್ದು ಈ ಬಗ್ಗೆ ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ದೂರು ನೀಡಲಾಗಿದೆ.



ಕೊಕ್ಕಡ ಗ್ರಾಮದ ಮಲ್ಲಿಗೆ ಮಜಲು ನಿವಾಸಿ ಅಬ್ದುಲ್‌ ಅಜೀಜ್‌ ಅವರು ಕಳೆದ ಮೂರು ವರ್ಷಗಳಿಂದ ರಾಜ್ಯ ಹೆದ್ದಾರಿಯ ಬದಿಯಲ್ಲಿ ಗೂಡಂಗಡಿ ಇರಿಸಿ ವ್ಯಾಪಾರ ನಡೆಸುತ್ತಿದ್ದರು. ಶುಕ್ರವಾರ ರಾತ್ರಿಯ ವೇಳೆ ಎಂದಿನಂತೆ ಅಂಗಡಿಯನ್ನು ಮುಚ್ಚಿ ಹೋಗಿದ್ದ ಅಬ್ದುಲ್‌ ಅಜೀಜ್‌ ಶನಿವಾರ ಬೆಳಗ್ಗೆ ಬಂದು ನೋಡಿದಾಗ ಅಂಗಡಿಯನ್ನು ಧ್ವಂಸಗೊಳಿಸಿರು ವುದು ಕಂಡು ಬಂದಿದೆ.


ಅಂಗಡಿಯಲ್ಲಿದ್ದ ವಸ್ತುಗಳೆಲ್ಲವನ್ನು ಹೊರಗೆಳೆದು ನಾಶಗೊಳಿಸಲಾಗಿದೆ. ತಂಪು ಪಾನೀಯಗಳ ಬಾಟ್ಲಿಗಳನ್ನು ಒಡೆದು ಹಾಕಲಾಗಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸರಿಗೆ ದೂರು ನೀಡಲಾಗಿದೆ.

ಇಂದು ಪ್ರಗತಿ ಸ್ಟಡಿ ಸೆಂಟರ್‌ನ ಪ್ರಾಯೋಜಕತ್ವದಲ್ಲಿ ಪ್ರಗತಿ ವೈಭವ ತಾಲೂಕು ಮಟ್ಟದ ಸಾಂಸ್ಕೃತಿಕ ಕಾರ್ಯಕ್ರಮ

Posted by Vidyamaana on 2023-12-17 07:30:09 |

Share: | | | | |


ಇಂದು ಪ್ರಗತಿ ಸ್ಟಡಿ ಸೆಂಟರ್‌ನ ಪ್ರಾಯೋಜಕತ್ವದಲ್ಲಿ ಪ್ರಗತಿ ವೈಭವ ತಾಲೂಕು ಮಟ್ಟದ ಸಾಂಸ್ಕೃತಿಕ ಕಾರ್ಯಕ್ರಮ

ಪುತ್ತೂರು: ಇಲ್ಲಿನ ಧರ್ಮಸ್ಥಳ ಬಿಲ್ಡಿಂಗ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಗತಿ ಸ್ಟಡಿ ಸೆಂಟರ್ ಪ್ರಾಯೋಜಕತ್ವದಲ್ಲಿ ತಾಲೂಕು ಮಟ್ಟದ ಪ್ರೌಢಶಾಲೆ ಹಾಗೂ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ದೇಶಭಕ್ತಿ ಗೀತೆ(ಸಮೂಹ), ಜಾನಪದ ನೃತ್ಯ (ಸಮೂಹ), ಮಾನ್ಯಾಧಾರಿತ ಹಾಸ್ಯ ಪ್ರಧಾನ ನಾಟಕ (ಸಮೂಹ), ದೇಶಭಕ್ತಿ ನೃತ್ಯ ರೂಪಕ (ಸಮೂಹ) ಕಾರ್ಯಕ್ರಮ ಡಿ.17 ರಂದು ಜೈನಭವನದಲ್ಲಿ ಬೆಳಗ್ಗೆ 10 ಗಂಟೆಯಿಂದ 8 ರವರೆಗೆ ನಡೆಯಲಿದೆ. ಕಾಠ್ಯಕ್ರಮದ ಉದ್ಘಾಟನೆಯನ್ನು ಪುತ್ತೂರು ಮಹಾಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಇವರು ನೆರವೇರಿಸಲಿದ್ದಾರೆ.

ನಂತರ ವಿವಿಧ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ವಿದ್ಯಾರ್ಥಿಗಳಿಂದ ಸ್ಪರ್ಧೆಗಳು ನಡೆಯಲಿದೆ. ಸಭಾಕಾಯಕ್ರಮ ಸಂಜೆ 4 ಗಂಟೆಗೆ ನಡೆಯಲಿದೆ. ಕಾಠ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಅಶೋಕ್ ಕುಮಾರ್ ರೈ ವಹಿಸಿಕೊಳ್ಳಲಿದ್ದಾರೆ. ಕಾಠ್ಯಕ್ರಮದ ಅತಿಥಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್.. ಶ್ರೀ ರಾಮಕೃಷ್ಣ ಪ್ರೌಢಶಾಲಾ ಸಂಚಾಲಕ ಕಾವು ಹೇಮನಾಥ ಶೆಟ್ಟಿ, ಸುದ್ದಿ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಡಾ. ಯು. ಪಿ. ಶಿವಾನಂದ, ತಾಲೂಕು ಕ.ಸಾ.ಪ. ಅಧ್ಯಕ್ಷ ಉಮೇಶ್ ನಾಯಕ್, ಶಿಕ್ಷಣ ತಜ್ಞೆ ವಚನ ಜಯರಾಮ್, ನಿವೃತ್ತ ಶಿಕ್ಷಕ ನಾರಾಯಣ ರೈ ಕುಕ್ಕುವಳ್ಳಿ, ಅಪ್ಪಯ್ಯ ಪಿ.ಟಿ ಹಾಗೂ ಸರಿತ ಯಶೋಧ ಬೆಂಗಳೂರು, ವಿದ್ಯಾರ್ಥಿ ಪೋಷಕರು ಪಾಲ್ಗೊಳ್ಳಲಿದ್ದಾರೆ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರವೀಂದ್ರ ಶೆಟ್ಟಿ ನುಳಿಯಾಲು, ಸುಷ್ಮಾ ಡೆಪ್ಯೂಟಿ ಮ್ಯಾನೇಜರ್, ಐ.ಸಿ.ಐ.ಸಿ.ಐ ಬ್ಯಾಂಕ್ ಬೆಂಗಳೂರು ಹಾಗೂ ಹಿರಿಯ ವಿದ್ಯಾರ್ಥಿನಿ ಪ್ರಗತಿ ಸ್ಟಡಿ ಸೆಂಟರ್, ವಿನಿತಾ ಸಹಾಯಕ ಪ್ರಾಧ್ಯಾಪಕರು, ಕೆ.ಎಲ್.ಇ ಸೊಸೈಟಿ ನಿಜಲಿಂಗಪ್ಪ ಕಾಲೇಜು, ರಾಜಾಜಿ ನಗರ ಬೆಂಗಳೂರು ಹಾಗೂ ಹಿರಿಯ ವಿದ್ಯಾರ್ಥಿನಿ ಪ್ರಗತಿ ಸ್ಟಡಿ ಸೆಂಟರ್ ಹಾಗೂ ಧರ್ಮದೈವ ಚಿತ್ರ ತಂಡದ ಎಲ್ಲಾ ಸದಸ್ಯರು ಭಾಗವಹಿಸಲಿದ್ದಾರೆ. ರಾಜ್ಯ ಪ್ರಶಸ್ತಿ ಪುರಸ್ಕೃತೆ ಗುರುಪ್ರಿಯ ನಾಯಕ್ ಇವರ ತಂಡದವರಿಂದ ಗಾನನೃತ್ಯ ವೈಭವ ಕಾರ್ಯಕ್ರಮವು ಜರುಗಲಿದೆ. ನಂತರ ಪ್ರಗತಿ ಸ್ಟಡಿ ಸೆಂಟರ್ ವಿದ್ಯಾರ್ಥಿಗಳಿಂದ ವಿವಿಧ ಕಾರ್ಯಕ್ರಮಗಳು ಜರುಗಲಿದೆ ಎಂದು ಪ್ರಾಶುಪಾಲರಾದ ಕೆ ಹೇಮಲತಾ ಗೋಕುಲ್ ನಾಥ್ ಇವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ರಾಜ್ಯದ 34 ಸಾವಿರ ಬಡ ದೇವಸ್ಥಾನಗಳಿಗೂ ಶೀಘ್ರವೇ ಸಿಗಲಿದೆ ಗೃಹಜ್ಯೋತಿ ಉಚಿತ ವಿದ್ಯುತ್ ಸೌಲಭ್ಯ!

Posted by Vidyamaana on 2023-10-26 11:44:20 |

Share: | | | | |


ರಾಜ್ಯದ 34 ಸಾವಿರ ಬಡ ದೇವಸ್ಥಾನಗಳಿಗೂ ಶೀಘ್ರವೇ ಸಿಗಲಿದೆ ಗೃಹಜ್ಯೋತಿ ಉಚಿತ ವಿದ್ಯುತ್ ಸೌಲಭ್ಯ!

ಬೆಂಗಳೂರು : ಸರಕಾರದ ಹೊಸ ಯೋಜನೆ ಅನ್ವಯ ರಾಜ್ಯದಲ್ಲಿ ಈಗಾಗಲೇ ಫಲಾನುಭವಿಗಳಿಗೆ ಉಚಿತವಾಗಿ ದೊರೆಯುತ್ತಿರುವ 200 ಯುನಿಟ್ ವಿದ್ಯುತ್, ಮುಂದಿನ ದಿನಗಳಲ್ಲಿ ಸಿ ಗ್ರೇಡ್ ನ ಬಡ ದೇವಸ್ಥಾನಗಳಿಗೂ ವಿಸ್ತರಣೆಯಾಗಲಿದೆ ಎಂದು ಮುಜುರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.


ಯಾವ ದೇವಾಲಯವು 5 ಲಕ್ಷ ರೂಪಾಯಿಗಿಂತ ಕಡಿಮೆ ಆದಾಯ ಪಡೆಯುತ್ತಿದೆಯೋ, ಆ ದೇವಾಲಯವು ಈ ಯೋಜನೆಗೆ ಒಳಗಾಗುತ್ತದೆ. ಅಂದಾಜಿನಂತೆ 34,700 ದೇಗುಲಗಳು ಇದರ ಪ್ರಯೋಜನ ಪಡೆದುಕೊಳ್ಳಲಿದೆ ಎನ್ನಲಾಗಿದೆ. ಇಲಾಖೆಯ ವ್ಯಾಪ್ತಿಯಲ್ಲಿ ಎ ಗ್ರೇಡ್‌ನ 175, ಬಿ ಗ್ರೇಡ್‌ನ 330 ಮತ್ತು ಸಿ ಗ್ರೇಡ್‌ನ 34,700 ದೇವಸ್ಥಾನಗಳಿವೆ. ವಾರ್ಷಿಕವಾಗಿ ದೇವಾಲಯದ ಆದಾಯ 25 ಲಕ್ಷ ರೂಪಾಯಿಗೂ ಅಧಿಕವಾಗಿದ್ದರೆ, ಮೂಲಸೌಕರ್ಯ ಸೇರಿದಂತೆ ಇನ್ನಿತರೆ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಸ್ಥಳೀಯ ಹಂತದಲ್ಲೇ ಅವಕಾಶಗಳಿವೆ. ಆದರೆ, 1 ರಿಂದ 5 ಲಕ್ಷ ರೂ. ಒಳಗೆ ಆದಾಯ ಪಡೆಯುವ ಸಿ ಗ್ರೇಡ್ ದೇಗುಲಗಳಿಗೆ ಮಾತ್ರ ಯಾವುದೇ ಸೌಕರ್ಯಗಳಿಲ್ಲದೆ ಅಭಿವೃದ್ಧಿ ಕುಂಠಿತಗೊಂಡಿದೆ ಎನ್ನಲಾಗಿದೆ.ಇನ್ನು ರಾಜ್ಯದಲ್ಲಿ ಸಿ ಗ್ರೇಡ್ ದೇವಾಲಯಗಳು ಮಾಸಿಕ ವಿದ್ಯುತ್, ನೀರಿನ ವೆಚ್ಚ ಭರಿಸಲೂ ಪರದಾಡುವ ಸನ್ನಿವೇಶವಿದೆ. ಆದ್ದರಿಂದ ಪ್ರಸ್ತುತ ಚಾಲ್ತಿಯಲ್ಲಿರುವ ಗೃಹಜ್ಯೋತಿ ಯೋಜನೆ ದೇವಸ್ಥಾನಗಳಿಗು ವಿಸ್ತರಣೆಯಾಗಲಿದೆ.


ರಾಜ್ಯದಲ್ಲಿ ಈ ಹಿಂದಿನ ಸರಕಾರಗಳು ಎ ಗ್ರೇಡ್ ದೇವಸ್ಥಾನಗಳ ಆದಾಯದ ಶೇ.20ರಷ್ಟು ಪಾಲನ್ನು ಸಿ ಗ್ರೇಡ್ ದೇಗುಲಗಳ ಅಭಿವೃದ್ಧಿಗೆ ನೀಡಬೇಕೆಂಬ ಯೋಜನೆಯನ್ನು ರೂಪಿಸಿದ್ದವು. ಅವರ ಯಾವ ಯೋಜನೆಯು ಬರಲಿಲ್ಲ. ದೇವಸ್ಥಾನಕ್ಕೆ ಉಪಯೋಗವಾಗುವ ನಿಟ್ಟಿನಲ್ಲಿ ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಯ ಸಿ ಗ್ರೇಡ್ ದೇವಸ್ಥಾನಗಳಿಗೂ ಉಚಿತ ವಿದ್ಯುತ್ ಪೂರೈಸಲು ರಾಜ್ಯ ಸರಕಾರ ಮುಂದಾಗಿದೆ.


ಈ ಯೋಜನೆಯ ಕುರಿತು ಶೀಘ್ರವೇ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಅನುಮೋದನೆ ಪಡೆಯಲಾಗುವುದು ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗರೆಡ್ಡಿ ತಿಳಿಸಿದ್ದಾರೆ

ದೆಹಲಿ: ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್ ಪ್ರತಿಭಟನೆ

Posted by Vidyamaana on 2024-02-07 14:55:35 |

Share: | | | | |


ದೆಹಲಿ: ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್ ಪ್ರತಿಭಟನೆ

ದೆಹಲಿ: ಅನುದಾನ ಹಂಚಿಕೆಯಲ್ಲಿ ಕೇಂದ್ರ ಸರ್ಕಾರದ ತಾರತಮ್ಯ ನೀತಿ ಮತ್ತು ಮಲತಾಯಿ ಧೋರಣೆಯನ್ನು ಆರೋಪಿಸಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ದೆಹಲಿಯ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ನಡೆಸುತ್ತಿದೆ.



ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ರಾಜ್ಯಸಂಪುಟದ ಎಲ್ಲ ಸಚಿವರು, ಕಾಂಗ್ರೆಸ್ ಪಕ್ಷದ ವಿಧಾನಸಭಾ ಮತ್ತು ವಿಧಾನ ಪರಿಷತ್ ಸದಸ್ಯರು, ಸಂಸದರು ಮತ್ತು ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ನಮ್ಮ ತೆರಿಗೆ ನಮ್ಮ ಹಕ್ಕು ಎಂಬ ಫಲಕಗಳನ್ನು ಶಾಸಕರು ಸಂಸದರು ಪ್ರದರ್ಶಿಸುವ ಮೂಲಕ ಗಮನ ಸೆಳೆದರು.

ಜ. 22: ದಕ್ಷಿಣ ಕನ್ನಡದಲ್ಲಿ ಸಂಘಟನೆ ಮಾಡಿದ್ದ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಜಯಂತ್ಯೋತ್ಸವ ಸಂಸ್ಮರಣೆ

Posted by Vidyamaana on 2023-01-18 08:23:59 |

Share: | | | | |


ಜ. 22: ದಕ್ಷಿಣ ಕನ್ನಡದಲ್ಲಿ ಸಂಘಟನೆ ಮಾಡಿದ್ದ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಜಯಂತ್ಯೋತ್ಸವ ಸಂಸ್ಮರಣೆ

ಪುತ್ತೂರು: 1979ರಲ್ಲಿ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ದಕ್ಷಿಣ ಕನ್ನಡಕ್ಕೆ ಬಂದಿದ್ದರು. ಆಗ ಒಕ್ಕಲುತನ ಮಾಡುತ್ತಿದ್ದ ಮನೆಗಳಲ್ಲಿ ನಿಂತು, ಇಲ್ಲಿನ ಕೃಷಿ ಕಾರ್ಯದ ಬಗ್ಗೆ ಆಸಕ್ತಿ ವ್ಯಕ್ತಪಡಿಸಿದ್ದರು. ಸಂಘಟನೆಯ ಕಾರ್ಯಕ್ಕೂ ಚಾಲನೆ ನೀಡಿ, ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನ ನಿರ್ಮಾಣಕ್ಕೆ, ಕೊಂಬೆಟ್ಟು ಐಟಿಐ ನಿರ್ಮಾಣಕ್ಕೆ ಕಾರಣಕರ್ತರಾದರು. ಅವರ ಈ ಎಲ್ಲಾ ಕೆಲಸಗಳನ್ನು ನೆನಪಿಸಿಕೊಳ್ಳುವ ಹಿನ್ನೆಲೆಯಲ್ಲಿ ಜ. 22ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ 78ನೇ ಜಯಂತ್ಯೋತ್ಸವ ಸಂಸ್ಮರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು.



Leave a Comment: