ಪಿಜಿ ಯುವತಿಯ ಬರ್ಬರ ಹತ್ಯೆ ಕೇಸ್‌ಗೆ ಟ್ವಿಸ್ಟ್

ಸುದ್ದಿಗಳು News

Posted by vidyamaana on 2024-07-25 09:34:49 |

Share: | | | | |


ಪಿಜಿ ಯುವತಿಯ ಬರ್ಬರ ಹತ್ಯೆ ಕೇಸ್‌ಗೆ ಟ್ವಿಸ್ಟ್

ಬೆಂಗಳೂರು : ಕೋರಮಂಗಲದ ಲೇಡಿಸ್ ಪಿಜಿ ಒಳಗೆ ನುಗ್ಗಿ ಯುವತಿಯ ಬರ್ಬರ ಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್‌ ಸಿಕ್ಕಿದ್ದು, ಈ ಬಗ್ಗೆ ಪೊಲೀಸರು ಮಹತ್ವದ ಮಾಹಿತಿ ನೀಡಿದ್ದಾರೆ. ಮೃತ ಯುವತಿಯನ್ನು ಬಿಹಾರದ ಕೃತಿ ಕುಮಾರಿ‌ (24) ಎಂದು ಗುರುತಿಸಲಾಗಿದ್ದು, ಆಕೆಯ ಪ್ರಿಯತಮನೇ ಕೊಲೆಗಾರ ಎಂದು ಪೊಲೀಸರು ತಿಳಿಸಿದ್ದಾರೆ .

ಕೃತಿ ಕುಮಾರಿ ತಾನು ಪ್ರೀತಿಸುತ್ತಿದ್ದ ಯುವಕನಿಂದಲೇ ಕೊಲೆಯಾಗಿದ್ದಾರೆ. ರಾತ್ರಿ 11:30ಕ್ಕೆ ಕೃತಿ ಕುಮಾರಿಯೇ ಯುವಕನನ್ನು ಕರೆದುಕೊಂಡು ಬಂದಿರುವ ಬಗ್ಗೆ ಮೇಲ್ನೋಟಕ್ಕೆ ಮಾಹಿತಿ ಸಿಕ್ಕಿದೆ. ಪಿಜಿಯಿಂದ ಹೊರ ಬಂದ ಕೃತಿ ತನ್ನ ಪ್ರಿಯತಮನ ಜತೆ ರಾತ್ರಿ ಊಟ ಮಾಡಿದ್ದರು. ಊಟ ಮುಗಿಸಿದ ಕೃತಿ ತನ್ನೊಂದಿಗೆ ಯುವಕನ್ನು ಪಿಜಿಗೆ ಕರೆತಂದಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಕೃತಿಯ ರೂಂಗೆ ಆಗಮಿಸಿದ್ದ ವೇಳೆ ಇಬ್ಬರ ಮಧ್ಯೆ ಗಲಾಟೆಯಾಗಿ ಕೊಲೆಯಾಗಿರುವ ಶಂಕೆ ಇದೆ.

ಪಿಜಿಯ ಸಿಸಿಟಿವಿ ಎಲ್ಲವನ್ನು ಕೂಡ ಪರಿಶೀಲನೆ ನಡೆಸಿದ್ದೇವೆ. ಪಿಜಿಯ ನಿರ್ಲಕ್ಷ್ಯತನದ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಆರೋಪಿ ಪತ್ತೆಗಾಗಿ ಪೊಲೀಸರ ವಿಶೇಷ ತಂಡವನ್ನ ರಚನೆ ಮಾಡಲಾಗಿದೆ ಎಂದಿದ್ದಾರೆ

 Share: | | | | |


ಗಾಯಗೊಂಡ ಕಾಡಾನೆ ದಾಳಿ : ಅರಣ್ಯ ಇಲಾಖೆಯ ಸಿಬ್ಬಂದಿ ವೆಂಕಟೇಶ್ ಮೃತ್ಯು

Posted by Vidyamaana on 2023-09-01 01:37:43 |

Share: | | | | |


ಗಾಯಗೊಂಡ ಕಾಡಾನೆ ದಾಳಿ : ಅರಣ್ಯ ಇಲಾಖೆಯ ಸಿಬ್ಬಂದಿ ವೆಂಕಟೇಶ್ ಮೃತ್ಯು

ಹಾಸನ : ಕಾಡಾನೆ ದಾಳಿಯಿಂದ ಗಂಭೀರ ಗಾಯಗೊಂಡಿದ್ದ ಅರಣ್ಯ ಇಲಾಖೆ ಸಿಬ್ಬಂದಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ಆಲೂರು ಸಮೀಪ(Hassan) ಹಳ್ಳಿಯೂರಿನಿಂದ ವರದಿಯಾಗಿದೆ.

ಗುರುವಾರ ಬೆಳಗ್ಗೆ ಗಾಯಗೊಂಡು ತಿರುಗಾಡುತಿದ್ದ ಭೀಮ ಹೆಸರಿನ ಕಾಡಾನೆಗೆ ಹೆಚ್ಚಿನ ಚಿಕಿತ್ಸೆ ನೀಡಲು ಅರಣ್ಯ ಇಲಾಖೆ ಸಿಬ್ಬಂದಿ ವೆಂಕಟೇಶ್ ಮುಂದಾಗಿದ್ದರು.ಈ ವೇಳೆ ವೆಂಕಟೇಶ್ ಅವರ ಮೇಲೆ ಆನೆ ದಾಳಿ ನಡೆಸಿದೆ.

ದಾಳಿಯಿಂದ ಗಂಭೀರ ಗಾಯಗೊಂಡಿದ್ದ ವೆಂಕಟೇಶ್ ಅವರನ್ನು ತಕ್ಷಣ ಹಾಸನದ ಜಿಲ್ಲಾ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.

 

“ಹಾಸನ ಅರಣ್ಯ ವಿಭಾಗದ ಆಲೂರು, ಬೇಲೂರು. ಯಸಳೂರು, ಸಕಲೇಶಪುರ ಮತ್ತು ಅರಕಲಗೂಡು ವಲಯ ವ್ಯಾಪ್ತಿಯಲ್ಲಿ ಸಂಚರಿಸುತ್ತಿದ್ದ ಭೀಮ ಕಾಡಾನೆಗೆ ಇತರೆ ಕಾಡಾನೆಗಳು ಆಗಸ್ಟ್ ಎರಡನೇ ವಾರದಲ್ಲಿ ದಾಳಿ ಮಾಡಿರುವುದರಿಂದ ತೀವ್ರವಾಗಿ ಗಾಯಗೊಂಡಿತ್ತು”


ಕಾಡಾನೆಗೆ ಆ.25 ರಂದು ಚಿಕಿತ್ಸೆ ನೀಡಲಾಗಿದ್ದು, ಗಾಯವಾಸಿಯಾಗದೇ ಉಲ್ಬಣಗೊಂಡಿರುವುದರಿಂದ ಹೆಚ್ಚಿನ ಚಿಕಿತ್ಸೆ ನೀಡುವ ಕಾರ್ಯಾಚರಣೆ ಕೈಗೊಳ್ಳಲು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು (ವನ್ಯಜೀವಿ) ಅನುಮತಿ ನೀಡಿದ್ದರು

ದೇಶದ ಐಸ್‌ಕ್ರೀಂ ಮ್ಯಾನ್ ಎಂದೇ ಖ್ಯಾತಿ ಪಡೆದಿದ್ದ ರಘುನಂದನ್ ಕಾಮತ್ ನಿಧನ

Posted by Vidyamaana on 2024-05-18 08:41:54 |

Share: | | | | |


ದೇಶದ ಐಸ್‌ಕ್ರೀಂ ಮ್ಯಾನ್ ಎಂದೇ ಖ್ಯಾತಿ ಪಡೆದಿದ್ದ ರಘುನಂದನ್ ಕಾಮತ್ ನಿಧನ

ಮಂಗಳೂರು , ಮೇ 17: ಮೂಲತಃ ಮಂಗಳೂರು ನಿವಾಸಿ, ಮುಂಬೈಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (70) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ಮುಂಬೈಯಲ್ಲಿ ನಿಧನರಾದರು.ಅವರು ಪತ್ನಿ, ಇಬ್ಬರು ಪುತ್ರರು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

ಮಂಗಳೂರು: ಅಂಗಡಿಗೆ ನುಗ್ಗಿ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Posted by Vidyamaana on 2024-07-12 19:32:17 |

Share: | | | | |


ಮಂಗಳೂರು: ಅಂಗಡಿಗೆ ನುಗ್ಗಿ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

ಮಂಗಳೂರು : ನಗರದ ಪಂಪ್‌ವೆಲ್ ಸಮೀಪದ ಕಪಿತಾನಿಯೊ ಬಳಿ ಜು.8ರಂದು ರಾತ್ರಿ ಅಂಗಡಿಯೊಂದಕ್ಕೆ ನುಗ್ಗಿ ನಗದು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಮೂಲದ ಇಬ್ಬರನ್ನು ಬಂಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್‌ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಸಹೋದ್ಯೋಗಿಗೆ ಹಲ್ಲೆಗೈದು ಹಲ್ಲುಗಳನ್ನ ಉದುರಿಸಿದ ರಿಕ್ಷಾ ಡ್ರೈವರ್

Posted by Vidyamaana on 2023-11-15 05:38:10 |

Share: | | | | |


ಸಹೋದ್ಯೋಗಿಗೆ ಹಲ್ಲೆಗೈದು ಹಲ್ಲುಗಳನ್ನ ಉದುರಿಸಿದ ರಿಕ್ಷಾ ಡ್ರೈವರ್

ಉಳ್ಳಾಲ, ನ.15: ಸಹೋದ್ಯೋಗಿಗೆ ಹಲ್ಲೆಗೈದು ಹಲ್ಲುಗಳನ್ನ ಉದುರಿಸಿ ಎಸ್ಕೇಪ್ ಆಗಿದ್ದ ಕುಂಪಲದ ಸೈಕೋ ರಿಕ್ಷಾ ಚಾಲಕನನ್ನ ಉಳ್ಳಾಲ ಪೊಲೀಸರು 24 ಗಂಟೆಗಳೊಳಗೆ ಬಂಧಿಸಿ ಜೈಲಿಗಟ್ಟಿದ್ದಾರೆ. 


ಕಳೆದ ಆದಿತ್ಯವಾರ ಸಂಜೆ ಕುಂಪಲ ಬೈಪಾಸ್ ಆಟೋ ರಿಕ್ಷಾ ಪಾರ್ಕಿನಲ್ಲಿದ್ದ ರಿಕ್ಷಾ ಚಾಲಕ ಸುಶಾಂತ್(31) ಎಂಬವರಿಗೆ ಅದೇ ಪಾರ್ಕಿನಲ್ಲಿ ರಿಕ್ಷಾ ಚಾಲನೆ ಮಾಡುತ್ತಿರುವ ರೋಕೇಶ್(37) ಯಾನೆ ಸೈಕೋ ರೋಸ್ ಎಂಬಾತ ಅವಾಚ್ಯ ಶಬ್ದಗಳಿಂದ ಬೈದು ಕೈಯಿಂದ ಮುಖಕ್ಕೆ ಬಲವಾಗಿ ಥಳಿಸಿದ ಪರಿಣಾಮ ಸುಶಾಂತ್ ಅವರ ಎರಡು ಹಲ್ಲುಗಳು ಉದುರಿ ಹೋಗಿದೆ. ತೀವ್ರ ಗಾಯಗೊಂಡಿದ್ದ ಸುಶಾಂತ್ ರವರು  ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದು ಹಲ್ಲೆಗೈದ ಆರೋಪಿ ರೋಕೇಶ್ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಠಾಣೆಯಲ್ಲಿ ತನ್ನ ವಿರುದ್ದ ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ರೋಕೇಶ್ ತಲೆಮರೆಸಿಕೊಂಡಿದ್ದ.

ಉಳ್ಳಾಲ ಪೊಲೀಸ್ ಠಾಣೆಯ ಪಿಐ ಬಾಲಕೃಷ್ಣ ರವರು ಸೋಮವಾರವೇ ತನ್ನ ಸಿಬ್ಬಂದಿಗಳೊಂದಿಗೆ ಅತೀ ಶೀಘ್ರವಾಗಿ ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸಿ ಜೈಲಿಗಟ್ಟಿದ್ದಾರೆ.


ಬಂಧಿತ ಆರೋಪಿ ರೋಕೇಶ್ ಯಾನೆ ಸೈಕೊ ರೋಸ್ ಕುಂಪಲ ನಿವಾಸಿಯಾಗಿದ್ದು ಅಮಲು ಪದಾರ್ಥಗಳಿಗೆ ದಾಸನಾಗಿ ಪ್ರದೇಶಕ್ಕೆ ಕಂಟಕಪ್ರಾಯನಾಗಿದ್ದ. ಈತನ ವಿರುದ್ದ ಉಳ್ಳಾಲ ಠಾಣೆಯಲ್ಲಿ ಈ ಹಿಂದೆಯೂ ಅನೇಕ ಪ್ರಕರಣಗಳು ದಾಖಲಾಗಿವೆ. ಈ ಹಿಂದೆ ಸ್ಥಳೀಯ ಹೆಣ್ಮಕ್ಕಳಿಗೆ ಲೈಗಿಂಕ ಕಿರುಕುಳ ನೀಡಿ ಸಾರ್ವಜನಿಕರಿಂದ ಶಾಸ್ತಿ ಮಾಡಿಸಿಕೊಂಡಿದ್ದ. ಆರೋಪಿಯ ಸಹೋದರ ವೃತ್ತಿಪರ ವಕೀಲನಾಗಿದ್ದು ಆತನ ಧೈರ್ಯದಿಂದಲೇ ಸೈಕೋ ರೋಸ್ ನಿರಂತರ ಅಪರಾಧ ಕೃತ್ಯ ಎಸಗುತ್ತಿರುವುದಾಗಿ ಸ್ಥಳೀಯರು ಆರೋಪಿಸಿದ್ದಾರೆ.


ದಿನ ನಿತ್ಯವೂ ನಶೆಯಲ್ಲೇ ರಿಕ್ಷಾ ಚಾಲನೆ ನಡೆಸುತ್ತಿರುವ ರೋಕೇಶನ ನಡವಳಿಕೆಯ ಬಗ್ಗೆ ಬೈಪಾಸಿನ ರಿಕ್ಷಾ ಚಾಲಕರು, ಮಾಲಕರೇ ಒಟ್ಟಾಗಿ ಉಳ್ಳಾಲ ಠಾಣೆಗೆ ಬರವಣಿಗೆಯಲ್ಲಿ ಮಾಹಿತಿ  ಕೊಟ್ಟಿದ್ದು ಶೀಘ್ರ ಬಂಧನಕ್ಕೆ ಆಗ್ರಹಿಸಿದ್ದರು.

ರಾಜ್ಯ ಸರ್ಕಾರದಿಂದ ಅರ್ಚಕರು ನೌಕರರಿಗೆ ಗುಡ್ ನ್ಯೂಸ್

Posted by Vidyamaana on 2023-10-15 10:39:08 |

Share: | | | | |


ರಾಜ್ಯ ಸರ್ಕಾರದಿಂದ ಅರ್ಚಕರು ನೌಕರರಿಗೆ ಗುಡ್ ನ್ಯೂಸ್

ಬೆಂಗಳೂರು : ರಾಜ್ಯ ಸರ್ಕಾರವು ದೇವಸ್ಥಾನಗಳ ಅರ್ಚಕರು ಹಾಗೂ ಸಿಬ್ಬಂದಿಗಳ ಮಕ್ಕಳಿಗೆ ಸಿಹಿಸುದ್ದಿ ನೀಡಿದ್ದು, ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಆರ್ಥಿಕ ನೆರವು ನೀಡುವುದಾಗಿ ಘೋಷಿಸಿದೆ.ಈ ಕುರಿತು ಸಚಿವ ಎಂ.ಬಿ.ಪಾಟೀಲ್ ಮಾಹಿತಿ ನೀಡಿದ್ದು, ಬಿ ಮತ್ತು ಸಿ ವರ್ಗದ ದೇವಸ್ಥಾನಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರ್ಚಕರ ಅರ್ಚಕರು ಮತ್ತು ಸಿಬ್ಬಂದಿಯ ಮಕ್ಕಳಿಗೆ ರಾಜ್ಯ ಸರ್ಕಾರದಿಂದ ಶಿಕ್ಷಣಕ್ಕಾಗಿ ಆರ್ಥಿಕ ನೆರವು ನೀಡಲಾಗುವುದು ಎಂದು ತಿಳಿಸಿದ್ದಾರೆ.ಸರ್ಕಾರವು ಪಿಯುಸಿ ವಿದ್ಯಾರ್ಥಿಗಳಿಗೆ 5,000 ರೂ., ಐಟಿಐ/ ಜೆಒಸಿ/ ಡಿಪ್ಲೊಮಾ ವಿದ್ಯಾರ್ಥಿಗಳಿಗೆ 5,000 ರೂ., ಪದವಿಗೆ 7,000 ರೂ., ಸ್ನಾತಕೋತ್ತರರಿಗೆ 15,000 ರೂ., ಆಯುರ್ವೇದ 25,000 ರೂ. ವಾರ್ಷಿಕ ಆರ್ಥಿಕ ನೆರವು ನೀಡಲಿದೆ. ಹೋಮಿಯೋಪತಿ ಕೋರ್ಸ್‌ಗಳು, ತಾಂತ್ರಿಕ ಶಿಕ್ಷಣಕ್ಕೆ (ಎಂಜಿನಿಯರಿಂಗ್) 25,000 ರೂ., ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್‌ಗಳಿಗೆ 50,000 ರೂ. ಮತ್ತು ವಿದೇಶದಲ್ಲಿ ಅಧ್ಯಯನಕ್ಕೆ 1 ಲಕ್ಷ ರೂ. ನೆರವು ಸಿಗಲಿದೆ ಎಂದು ಹೇಳಿದ್ದಾರೆ.


ಮುಜರಾಯಿ ಇಲಾಖೆಯ ವ್ಯಾಪ್ತಿಯ ದೇವಾಲಯಗಳಲ್ಲಿ ಕರ್ತವ್ಯ ನಿರ್ವಹಿಸುವ ಅರ್ಚಕರು, ನೌಕರರ ಪೈಕಿ ವರ್ಷಕ್ಕೆ 1,200 ಮಂದಿಯನ್ನು ಕಾಶಿ, ಗಯಾ ಯಾತ್ರೆಗೆ ಉಚಿತವಾಗಿ ಕಳುಹಿಸಲಾಗುವುದು. ಮುಜರಾಯಿ ಇಲಾಖೆಯ ವ್ಯಾಪ್ತಿಯ ದೇವಾಲಯಗಳಲ್ಲಿ ಕರ್ತವ್ಯ ನಿರ್ವಹಿಸುವ ಅರ್ಚಕರು, ನೌಕರರು ಮೃತರಾದರೆ ಅವರ ಕುಟುಂಬಕ್ಕೆ ₹2 ಲಕ್ಷ ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಆ್ಯಸಿಡ್ ಮಾರಾಟ ನಿಷೇಧ: ಗೃಹ ಸಚಿವ ಪರಮೇಶ್ವರ್‌

Posted by Vidyamaana on 2024-03-07 09:09:19 |

Share: | | | | |


ಕರ್ನಾಟಕದಲ್ಲಿ ಆ್ಯಸಿಡ್ ಮಾರಾಟ ನಿಷೇಧ: ಗೃಹ ಸಚಿವ ಪರಮೇಶ್ವರ್‌

ಗಳೂರು(ಮಾ.07): ರಾಜ್ಯದಲ್ಲಿ  ಮಾರಾಟ ಆ್ಯಸಿಡ್ ನಿಷೇಧಿಸಲಾಗುವುದು ಎಂದು ಘೋಷಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್‌, ಆ್ಯಸಿಡ್ ದಾಳಿಗೆ ಒಳಗಾದ ಸಂತ್ರಸ್ತರಿಗೆ ನಿವೇಶನ ನೀಡಲಾಗುವುದು ಎಂದೂ ಹೇಳಿದ್ದಾರೆ.

ಇತ್ತೀಚೆಗೆ ಮಂಗಳೂರಿನಲ್ಲಿ ವ್ಯಕ್ತಿಯೊಬ್ಬ ಮೂವರು ಕಾಲೇಜು ವಿದ್ಯಾರ್ಥಿನಿಯರ ಮೇಲೆ  ಆ್ಯಸಿಡ್  ದಾಳಿ ಮಾಡಿದ್ದ.ಈ ಹಿನ್ನೆಲೆಯಲ್ಲಿ ಗೃಹ ಸಚಿವರು ಈ ಹೇಳಿಕೆ ನೀಡಿದ್ದಾರೆ.

ಮಹಿಳೆಯರ ಮೇಲಿನ ದೌರ್ಜನ್ಯ ಕುರಿತ ವಿಚಾರ ಸಂಕಿರಣದಲ್ಲಿ ಭಾಗವಹಿಸಿ ವಿವಿಧ ಮಹಿಳಾ ಸಂಘಟನೆಗಳು ಹಾಗೂ ಸರ್ಕಾರೇತರ ಸಂಸ್ಥೆಗಳ ಸಲಹೆಗಳನ್ನು ಆಲಿಸಿ ಮಾತನಾಡಿದ ಪರಮೇಶ್ವರ್‌, ರಾಜ್ಯದಲ್ಲಿ ಮಹಿಳಾ ಮತ್ತು ಮಕ್ಕಳ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ಅವರ ಮೇಲೆ ದೌರ್ಜನ್ಯ ನಡೆದರೆ ಸಹಿಸುವುದಿಲ್ಲ. ಮಹಿಳೆಯರು ಮತ್ತು ಮಕ್ಕಳು ತಮ್ಮ ಸಮಸ್ಯೆಗಳಿಗೆ ಪರಿಹಾರ ಸಿಗದಿದ್ದರೆ, ವಿಧಾನಸೌಧದ ಕಾರ್ಯಾಲಯ ಅಥವಾ ಗೃಹ ಕಚೇರಿಗೆ ಆಗಮಿಸಿ ನನ್ನನ್ನು ಭೇಟಿಯಾಗಿ ಸಮಸ್ಯೆಯನ್ನು ಹೇಳಿಕೊಳ್ಳಬಹುದು ಎಂದರು.ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್, ನಿಮ್ಹಾನ್ಸ್‌ ಸಂಸ್ಥೆಯ ಮನೋವೈದ್ಯಶಾಸ್ತ್ರ ಪ್ರಾಧ್ಯಾಪಕಿ ಡಾ.ಪ್ರಭಾ ಎಸ್‌.ಚಂದ್ರ, ವಕೀಲೆ ಸುಮಿತ್ರಾ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು.



Leave a Comment: