ಕಾಲೇಜು ಶುಲ್ಕ ಹಣದಲ್ಲಿ ದಂಡ ಕಟ್ಟಿದ ಯುವಕ.! PSI ಮಾಡಿದ್ದೇನು ಗೊತ್ತಾ..?

ಸುದ್ದಿಗಳು News

Posted by vidyamaana on 2024-07-25 06:35:41 |

Share: | | | | |


ಕಾಲೇಜು ಶುಲ್ಕ ಹಣದಲ್ಲಿ ದಂಡ ಕಟ್ಟಿದ ಯುವಕ.! PSI ಮಾಡಿದ್ದೇನು ಗೊತ್ತಾ..?

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಇಲಕಲ್ ನಗರದ ಕಂಠಿ ಸರ್ಕಲ್ ಬಳಿ ತ್ರಿಬಲ್ ರೈಡ್ ನಲ್ಲಿ ಬಂದ ಯುವಕರಿಗೆ ಪಿಎಸ್ ಐ ಬುದ್ದಿವಾದ ಹೇಳಿದ ಘಟನೆ ನಡೆದಿದೆ. ತ್ರಿಬಲ್ ರೈಡ್ ಮೂಲಕ ಕಾಲೇಜ್ ಅಡ್ಮಿಷನ್ ಗೆ ಹೊರಟಿದ್ದ ವಿದ್ಯಾರ್ಥಿಗಳನ್ನು ಇಳಕಲ್ ನಗರ ಠಾಣಾ ಮಹಿಳಾ ಪಿಎಸ್‌ಐ ಎಸ್.ಆರ್.ನಾಯಕ್ ಎಂಬವರು ಬಾಲಕನಿಗೆ ದಂಡ ಕಟ್ಟುವಂತೆ ಒತ್ತಾಯಿಸಿದ್ದರು.

ಆದ್ರೆ, ಕಣ್ಣೀರಿಟ್ಟ ಬಾಲಕ, ನನ್ನ ಬಳಿ ಹಣವಿಲ್ಲ ಆದರೆ, ಕಾಲೇಜು ಶುಲ್ಕ ಕಟ್ಟಲೆಂದು ಇಟ್ಟುಕೊಂಡಿರುವ ದುಡ್ಡಿದೆ ಅಷ್ಟೇ. ಅದನ್ನೇ ತಗೆದುಕೊಳ್ಳಿ ಎಂದು ಅಳುತ್ತ ದುಡ್ಡು ಕೊಟ್ಟಿದ್ದಾನೆ.

ಬಾಲಕನ ಹೇಳಿಕೆಯನ್ನು ಪರಿಶೀಲಿಸಿದ ಬಳಿಕ ಮಹಿಳಾ ಪಿಎಸ್‌ಐ ಅಪ್ಪಿಕೊಂಡು ಸಾಂತ್ವನ ತಿಳಿಸಿ, ತಮ್ಮ ಬಳಿಯಿದ್ದ ದಂಡದ ಹಣವನ್ನು ವಾಪಸ್ ಕೊಟ್ಟು, ಧೈರ್ಯ ತುಂಬಿದ್ದಾರೆ. ಪೋಷಕರು ಮಕ್ಕಳಿಗೆ ಬೈಕ್, ಸ್ಕೂಟರ್ ಕೊಡುವ ಮುನ್ನ ಹತ್ತು ಬಾರಿ ಎಚ್ಚರ ವಹಿಸಿ ಎಂದು ಮಹಿಳಾ ಪಿಎಸ್‌ಐ ಹೇಳಿದ್ದಾರೆ.

 Share: | | | | |


ನದಿಯಲ್ಲಿ ತೇಲಿ ಹೋದ ಗ್ಯಾಸ್‌ ಟ್ಯಾಂಕ‌ರ್; ಸೋರಿಕೆ ಸಾಧ್ಯತೆ

Posted by Vidyamaana on 2024-07-17 08:26:09 |

Share: | | | | |


ನದಿಯಲ್ಲಿ ತೇಲಿ ಹೋದ ಗ್ಯಾಸ್‌ ಟ್ಯಾಂಕ‌ರ್; ಸೋರಿಕೆ ಸಾಧ್ಯತೆ

ಅಂಕೋಲಾ : ತಾಲೂಕಿನಲ್ಲಿ ಕಳೆದೆರಡು ದಿನದಿಂದ ಅತಿ ಹೆಚ್ಚಿನ ಮಳೆಯಾಗುತ್ತಿದ್ದು, ಶಿರೂರು ರಾಷ್ಟ್ರೀಯ ಹೆದ್ದಾರಿ ಮೇಲೆ ಗುಡ್ಡ ಕುಸಿತ ಉಂಟಾದ ಪರಿಣಾಮ ಎರಡು ಗ್ಯಾಸ್ ಟ್ಯಾಂಕರ್ ಗಂಗಾವಳಿ ನದಿಗೆ ಉರುಳಿ ಬಿದ್ದಿದ್ದು, ಗ್ಯಾಸ್ ಸೋರಿಕೆ ಸಾಧ್ಯತೆಗಳಿದ್ದು, ಗಂಗಾವಳಿ ನದಿ ಸುತ್ತಮುತ್ತಲಿನ ಜನರು ಸುರಕ್ಷಿತ ಸ್ಥಳಕ್ಕೆ ತೆರಳಲು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಪ್ರಕಟಣೆಯ ಮೂಲಕ ಮನವಿ ಮಾಡಿದ್ದಾರೆ.

ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ದೀಪಿಕಾ ಸುಳ್ಯದಲ್ಲಿ ಪತ್ತೆ

Posted by Vidyamaana on 2024-05-10 07:20:16 |

Share: | | | | |


ನಾಪತ್ತೆಯಾಗಿದ್ದ ವಿದ್ಯಾರ್ಥಿನಿ  ದೀಪಿಕಾ ಸುಳ್ಯದಲ್ಲಿ ಪತ್ತೆ

ಮಂಗಳೂರು, ಮೇ 9: ರೋಶನಿ ನಿಲಯದಲ್ಲಿ ಎಂಎಸ್ಸಿ ಕಲಿಯುತ್ತಿದ್ದು ಪರೀಕ್ಷೆ ಹಾಲ್ ನಿಂದಲೇ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಪೊನ್ನುರಾಜ್ ಅವರನ್ನು ಪೊಲೀಸರು ಸುಳ್ಯದಲ್ಲಿ ಪತ್ತೆ ಮಾಡಿದ್ದಾರೆ.

ಕ್ರಿಮಿನಾಲಜಿ ಮತ್ತು ಫಾರೆನ್ಸಿಕ್ ಸೈನ್ಸ್ ವಿಷಯದಲ್ಲಿ ಮೊದಲನೇ ವರ್ಷದ ಎಂಎಸ್ಸಿ ಕಲಿಯುತ್ತಿದ್ದ ವಿದ್ಯಾರ್ಥಿನಿ ಮೇ 7ರಂದು ಎರಡನೇ ಸೆಮಿಸ್ಟರ್ ಪರೀಕ್ಷೆ ಮುಗಿಸಿ ಹೊರಗೆ ಬಂದವಳು ನಾಪತ್ತೆಯಾಗಿದ್ದಳು. ಮನೆಯವರು ಪಾಂಡೇಶ್ವರ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು. ಪುಸ್ತಕ ಮತ್ತು ಮೊಬೈಲನ್ನು ಕಾಲೇಜಿನಲ್ಲಿಯೇ ಬಿಟ್ಟು ತೆರಳಿದ್ದರಿಂದ ಭಾರೀ ಕುತೂಹಲ ಉಂಟಾಗಿತ್ತು.

ಪರಿಷತ್‌ ಚುನಾವಣೆ- ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಪಕ್ಷದ ಸಭೆ

Posted by Vidyamaana on 2024-05-27 21:31:18 |

Share: | | | | |


ಪರಿಷತ್‌ ಚುನಾವಣೆ- ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಪಕ್ಷದ ಸಭೆ

ಮಂಗಳೂರು: ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಕಾರ್ಯಕರ್ತರ ಸಭೆ ಸೋಮವಾರ ನಗರದ ಡೊಂಗರಕೇರಿಯ ಕೆನರಾ ಶಾಲೆಯ ಸುಧೀಂದ್ರ ಸಭಾಂಗಣದಲ್ಲಿ ನಡೆಯಿತು.

ಸಭೆಯ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿ, ಶಿಕ್ಷಕರ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಭೋಜೇಗೌಡ ಓರ್ವ ನುರಿತ ರಾಜಕಾರಣಿ. ಅವರ ಮಾತುಗಳು ಕೇಳಿದ್ರೆ ಅವರು ಬಾಲ್ಯದಲ್ಲಿ ಸ್ವಯಂ ಸೇವಕ ಆಗಿರಬೇಕು ಅನಿಸುತ್ತದೆ. ಡಾ.ಧನಂಜಯ ಸರ್ಜಿ ಹೊಟ್ಟೆ ಪಾಡಿಗಾಗಿ ರಾಜಕಾರಣಕ್ಕೆ ಬಂದವರಲ್ಲ. ಅವರು ಮಾಡಿರುವ ಸೇವೆಯ ಕಾರಣಕ್ಕೆ ಜನರು ಅವರನ್ನು ಗುರುತಿಸಿದ್ದಾರೆ ಎಂದರು.

ಚುನಾವಣಾ ನೀತಿ ಸಂಹಿತೆ ಹಿನ್ನೆಲೆ: ಚಾರ್ಮಾಡಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಕಾರು ತಪಾಸಣೆ ನಡೆಸಿದ ಅಧಿಕಾರಿಗಳು

Posted by Vidyamaana on 2023-04-13 16:24:20 |

Share: | | | | |


ಚುನಾವಣಾ ನೀತಿ ಸಂಹಿತೆ ಹಿನ್ನೆಲೆ: ಚಾರ್ಮಾಡಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಕಾರು ತಪಾಸಣೆ ನಡೆಸಿದ ಅಧಿಕಾರಿಗಳು

ಬೆಳ್ತಂಗಡಿ : ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ನಿನ್ನೆಯಷ್ಟೇ ಸಿ.ಎಂ. ಬೊಮ್ಮಾಯಿಯವರು ಹೆಲಿಕಾಪ್ಟರ್ ಮೂಲಕ ಧರ್ಮಸ್ಥಳ ಕ್ಷೇತ್ರಕ್ಕೆ ಆಗಮಿಸುತ್ತಿದ್ದಂತೆ ಅವರ ವಾಹನ ತಪಾಸಣೆಗೆ ಒಳಪಡಿಸಿದ ಘಟನೆಯ ಬೆನ್ನಲ್ಲೇ ಎ.13 ರಂದು ಚುನಾವಣಾ ಅಧಿಕಾರಿಗಳು ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಮತ್ತು ಜಿಲ್ಲಾಧ್ಯಕ್ಷ ಸುದರ್ಶನ ಅವರ ಕಾರನ್ನು ತಪಾಸಣೆ ನಡೆಸಿದ್ದಾರೆ.ಅಧಿಕಾರಿ ಜಯಕೀರ್ತಿ ಹೆಚ್.ಬಿ. ಅವರಿದ್ದ ತಂಡವು ಐದು ಪೊಲೀಸ್ ಭದ್ರತಾ ವಾಹನದೊಂದಿಗೆ ಬೆಂಗಳೂರಿನಿಂದ ಮಂಗಳೂರಿಗೆ ಚಾರ್ಮಾಡಿ ಘಾಟ್ ರಸ್ತೆ ಮೂಲಕ ಬರುತ್ತಿದ್ದಾಗ ಚಾರ್ಮಾಡಿ ಚೆಕ್ ಪೋಸ್ಟ್ ನಲ್ಲಿ ತಡೆದು ನಿಲ್ಲಿಸಿ ಕಾರು ಪರಿಶೀಲನೆ ನಡೆಸಿ ನಂತರ ಪ್ರಯಾಣಕ್ಕೆ ಅನುವು ಮಾಡಿಕೊಟ್ಟರು.ಚಾರ್ಮಾಡಿ ಚೆಕ್ ಪೋಸ್ಟ್ ನಲ್ಲಿ ಎಸ್.ಎಸ್.ಟಿ. ಅಧಿಕಾರಿ ಜಯಕೀರ್ತಿ ಹೆಚ್.ಬಿ., ಸುಖೇಶ್ ಜಿ, ಧರ್ಮಸ್ಥಳ ಪೊಲೀಸ್ ಸಿಬ್ಬಂದಿಗಳಾದ ಮಂಜುನಾಥ್, ಸುನಿಲ್ ಹಾಗೂ ಸಿ.ಆರ್.ಪಿ.ಎಫ್. ಪಡೆ ಸಿಬ್ಬಂದಿಗಳು ತಮ್ಮ ಕರ್ತವ್ಯ ನಿರ್ವಹಿಸಿದರು.

ಹೊಸ ಕಾಯ್ದೆಯಡಿ ಕೇಂದ್ರ ಸರ್ಕಾರಕ್ಕೆ ಸೂಪ‌ರ್ ಪವ‌ರ್ ; ತುರ್ತು ಸಂದರ್ಭಗಳಲ್ಲಿ ಎಲ್ಲಾ ಟೆಲಿಕಾಂ ನೆಟ್ವರ್ಕ್‌ ಗಳ ನಿಯಂತ್ರಣ

Posted by Vidyamaana on 2024-06-22 20:54:49 |

Share: | | | | |


ಹೊಸ ಕಾಯ್ದೆಯಡಿ ಕೇಂದ್ರ ಸರ್ಕಾರಕ್ಕೆ ಸೂಪ‌ರ್ ಪವ‌ರ್ ; ತುರ್ತು ಸಂದರ್ಭಗಳಲ್ಲಿ ಎಲ್ಲಾ ಟೆಲಿಕಾಂ ನೆಟ್ವರ್ಕ್‌ ಗಳ ನಿಯಂತ್ರಣ

ನವದೆಹಲಿ : ಜೂನ್ 26ರಿಂದ, ದೂರಸಂಪರ್ಕ ಕಾಯ್ದೆ 2023ರ ಅನುಷ್ಠಾನದ ನಂತ್ರ ತುರ್ತು ಸಂದರ್ಭಗಳಲ್ಲಿ ಯಾವುದೇ ದೂರಸಂಪರ್ಕ ಸೇವೆಗಳು ಅಥವಾ ನೆಟ್ವರ್ಕ್ಗಳನ್ನ ನಿಯಂತ್ರಿಸುವ ಅಧಿಕಾರವನ್ನು ಕೇಂದ್ರ ಸರ್ಕಾರ ಹೊಂದಿರುತ್ತದೆ. ಕೇಂದ್ರವು ಕಾಯ್ದೆಯನ್ನು ಭಾಗಶಃ ಅಧಿಸೂಚಿಸಿದೆ, ನಿರ್ದಿಷ್ಟ ನಿಬಂಧನೆಗಳನ್ನು ಈ ದಿನಾಂಕದಿಂದ ಜಾರಿಗೆ ತಂದಿದೆ.

ಗೆಜೆಟ್ ಅಧಿಸೂಚನೆಯಲ್ಲಿ, ಕೇಂದ್ರ ಸರ್ಕಾರವು ಜೂನ್ 2024 ರ 26 ನೇ ದಿನವನ್ನು ಈ ಮೂಲಕ ನೇಮಿಸುತ್ತದೆ, ಈ ಕಾಯ್ದೆಯ ಸೆಕ್ಷನ್ 1, 2, 10 ರಿಂದ 30, 42 ರಿಂದ 44, 46, 47, 50 ರಿಂದ 58, 61 ಮತ್ತು 62 ರ ನಿಬಂಧನೆಗಳು ಜಾರಿಗೆ ಬರುತ್ತವೆ

ಇದರರ್ಥ ಭದ್ರತೆ, ಸಾರ್ವಜನಿಕ ಸುವ್ಯವಸ್ಥೆ ಅಥವಾ ಅಪರಾಧಗಳ ತಡೆಗಟ್ಟುವಿಕೆಗೆ ಸಂಬಂಧಿಸಿದ ಕಾರಣಗಳಿಗಾಗಿ ಸರ್ಕಾರವು ಟೆಲಿಕಾಂ ಸೇವೆಗಳ ನಿಯಂತ್ರಣವನ್ನ ತೆಗೆದುಕೊಳ್ಳಬಹುದು.

ಪ್ರೀತಿಸಿದ ಹುಡುಗಿ ಏಕಾಏಕಿ ಕೊಟ್ಲು ಕೈ, ನೊಂದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಪಾಗಲ್ ಪ್ರೇಮಿ

Posted by Vidyamaana on 2023-12-08 04:20:03 |

Share: | | | | |


ಪ್ರೀತಿಸಿದ ಹುಡುಗಿ ಏಕಾಏಕಿ ಕೊಟ್ಲು ಕೈ, ನೊಂದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಪಾಗಲ್ ಪ್ರೇಮಿ

ಬೆಂಗಳೂರು: ಪ್ರೀತಿಸಿದ ಹುಡುಗಿ ಏಕಾಏಕಿ ಪ್ರೀತಿಯನ್ನು ನಿರಾಕರಿಸಿ ಬಿಟ್ಟು ಹೋಗಿದ್ದಕ್ಕೆ ಮನನೊಂದ ಯುವಕನೊಬ್ಬ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೆಂಗಳೂರಿನ ಕೆಂಗೇರಿಯ ಕೊಡಿಗೆ ಪಾಳ್ಯದಲ್ಲಿ ಈ ಘಟನೆ ನಡೆದಿದೆ.


ಆನೇಕಲ್ ತಾಲೂಕಿನ ಜಿಗಣಿಯ ಕಲ್ಲುಬಾಳು ಗ್ರಾಮದ ರಾಕೇಶ್ ಮೃತ ದುರ್ದೈವಿ. ರಾಕೇಶ್‌ ಐದಾರು ವರ್ಷದಿಂದ‌ ಯುವತಿಯೊಬ್ಬಳನ್ನು ಪ್ರೀತಿ ಮಾಡುತ್ತಿದ್ದ. ಇಬ್ಬರು ಪಾರ್ಕ್‌, ಸಿನಿಮಾ ಎಂದು ಊರು ಊರು ತಿರುಗಿದ್ದರು. ಆದರೆ ಇತ್ತೀಚೆಗೆ ರಾಕೇಶ್‌ನನ್ನು ಯುವತಿ ಅವಾಯ್ಡ್‌ ಮಾಡಲು ಶುರು ಮಾಡಿದ್ದಳು.


ಪ್ರಾಣಕ್ಕಿಂತ ಹೆಚ್ಚಾಗಿ ಪ್ರೀತಿಸುತ್ತಿದ್ದವಳು ಏಕಾಏಕಿ ದೂರಾಗಿದ್ದಳು. ಮಸೇಜ್‌, ಫೋನ್‌ ಕಾಲ್‌ಗೂ ರೆಸ್ಪಾನ್ಸ್‌ ಮಾಡುತ್ತಿರಲಿಲ್ಲ. ಈ ನಡುವೆ ಬೇರೆ ಯುವಕನ ಜತೆ ಮದುವೆಗೆ ಸಿದ್ಧತೆಯನ್ನು ನಡೆಸಿದ್ದಳು. ಈ ವಿಷಯ ತಿಳಿದು ನಿನ್ನೆ ಬುಧವಾರ ರಾಕೇಶ್ ನೇರ ಯುವತಿ ಮನೆಯ ಬಳಿ ಹೋಗಿ ಪ್ರಶ್ನೆ ಮಾಡಿದ್ದ. ಈ ವೇಳೆ ರಾಕೇಶ್ ಹಾಗೂ ಯುವತಿ ನಡುವೆ ಗಲಾಟೆ ಆಗಿತ್ತು.


ಪ್ರೀತಿಸಿದವಳು ಮೋಸ ಮಾಡಿಬಿಟ್ಟಳೆಂದು ಮನನೊಂದಿದ್ದ ರಾಕೇಶ್‌, ಮನೆಗೆ ಬಂದವನೇ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದ. ಕೂಡಲೇ ಗಾಯಾಳು ರಾಕೇಶ್‌ನನ್ನು ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಬೆಂಕಿ ತೀವ್ರತೆಗೆ ದೇಹದ ಬಹುತೇಕ ಭಾಗ ಸುಟ್ಟು ಕರಕಲಾಗಿತ್ತು. ತೀವ್ರ ನೋವಿನಿಂದ ಬಳಲುತ್ತಿದ್ದ ರಾಕೇಶ್ ಬುಧವಾರ ರಾತ್ರಿಯೇ ಮೃತಪಟ್ಟಿದ್ದಾನೆ. ರಾಕೇಶ್ ಕುಟುಂಬಸ್ಥರು ಈ ಸಂಬಂಧ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ



Leave a Comment: