ನಕಲಿ ಚಿನ್ನ ದ ಆಸೆಗೆ ತುಮಕೂರಿನಲ್ಲಿ ಬಲಿಯಾದರೇ ಬೆಳ್ತಂಗಡಿಯ ಮೂವರು?

ಸುದ್ದಿಗಳು News

Posted by vidyamaana on 2024-03-23 10:38:46 |

Share: | | | | |


ನಕಲಿ ಚಿನ್ನ ದ ಆಸೆಗೆ ತುಮಕೂರಿನಲ್ಲಿ ಬಲಿಯಾದರೇ ಬೆಳ್ತಂಗಡಿಯ ಮೂವರು?

ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿ ಕೆರೆಗೆ ತಳ್ಳಿದ ಪ್ರಕರಣದಲ್ಲಿ ಮೂವರು ಸಾವನ್ನಪ್ಪಿದ ಸಂಬಂಧಪಟ್ಟಂತೆ ಆರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಪ್ರಕರಣದ‌ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಮತ್ತು ಐದು ಜನರನ್ನು ಕೋರಾ ಪೊಲೀಸರು ಮಾ.22 ರಂದು ರಾತ್ರಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ತುಮಕೂರಿಗೆ ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56) , ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ಹೋಗಿದ್ದರು ಎಂದು ಗುರುತಿಸಿದ್ದಾರೆ.

ಇನ್ನು ಮೂರು ಜನ ಮೃತರೆಲ್ಲಾ ನಕಲಿ ಚಿನ‌್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಅನ್ನೋದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಕಡಿಮೆ ಚಿನ್ನವನ್ನು ಬೆಲೆಗೆ ನೀಡುತ್ತೇವೆ ಎಂದು ಸುಳ್ಳು ಹೇಳಿ ಮೂವರನ್ನು ಕರೆಸಿ ಹಣ ದೋಚುವ ಪ್ಲ್ಯಾನ್ ಮಾಡಿ ಕರೆಸಿಕೊಂಡು ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಲಾಗಿದೆ ಎನ್ನಲಾಗಿದೆ.

ಪ್ರಕರಣದ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಮತ್ತು ಇತರ ಐದು ಜನ ಸೇರಿ ಒಟ್ಟು ಆರು ಜನರನ್ನು ವಶಕ್ಕೆ ಪಡೆದಿರುವ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. 


ಕೋರಾ ಪೊಲೀಸ್ ಠಾಣೆಯಲ್ಲಿ ಮಾ.22 ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು. ಇನ್ನು ಮೂವರ ಶವ ಸಂಪೂರ್ಣವಾಗಿ ಸುಟ್ಟಿರುವ ಕಾರಣ ಗುರುತು ಪತ್ತೆಹಚ್ಚಲು ಡಿಎನ್ಎ ಪರೀಕ್ಷೆ ಬಳಿಕ ಮನೆಮಂದಿಗೆ ಶವ ಬಿಟ್ಟು ಕೊಡಲಿದ್ದಾರೆ. ಡಿಎನ್ಎ ವರದಿ ಬರಲು ಸುಮಾರು ಒಂದು ವಾರ ಬೇಕಾಗುತ್ತದೆ ಎಂದು ಪೊಲೀಸರು ಮನೆಯವರಿಗೆ ತಿಳಸಿದ್ದಾರೆ.

 Share: | | | | |


ವಿಟ್ಲ:ಮಹಿಳೆ ಆತ್ಮಹತ್ಯೆ

Posted by Vidyamaana on 2023-01-28 15:59:05 |

Share: | | | | |


ವಿಟ್ಲ:ಮಹಿಳೆ ಆತ್ಮಹತ್ಯೆ

ವಿಟ್ಲ: ಖಿನ್ನತೆಗೆ ಒಳಗಾದ ಮಹಿಳೆಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದಲ್ಲಿ ನಡೆದಿದೆ.

         ಕೊಳ್ಳಾಡು ಗ್ರಾಮದ ತೋಡ್ಲ ನಿವಾಸಿ ದಿ. ಕರುಣಾಕರ ಪೂಜಾರಿ ಯವರ ಪತ್ನಿ ಶಾಲಿನಿ(38) ಆತ್ಮಹತ್ಯೆ ಮಾಡಿಕೊಂಡ ಮಹಿಳೆ.

           ಶಾಲಿನಿ ಅವರ ಪತಿ ಕೆಲ ವರ್ಷಗಳ ಹಿಂದೆ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ಬಳಿಕ ಇವರು ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ.ಇಂದು ಬೆಳಿಗ್ಗೆ ಶಾಲಿನಿಯವರು ಮನೆಯಲ್ಲಿ ತೀವ್ರ ಅಸ್ವಸ್ಥರಾಗಿದ್ದು, ಸಂಬಂಧಿಕರು ಅವರನ್ನು ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ದಿದಿದ್ದು, ತೀವ್ರ ನಿಗಾ ಘಟಕದಲ್ಲಿ ದಾಖಲಿಸಲಾಗಿತ್ತು. ಆದರೇ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ. ಯಾವುದೋ ಮಾತ್ರೆಗಳನ್ನು ಸೇವಿಸಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ. ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮೃತರು ಓರ್ವ ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ..

ಕುಂಬ್ರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪ್ರಕಾಶ್ಚಂದ್ರ ರೈ ಕೈಕಾರ ರವರ ಪತ್ನಿ ಶುಭಲಕ್ಷ್ಮಿ ನಿಧನ

Posted by Vidyamaana on 2024-01-17 21:00:50 |

Share: | | | | |


ಕುಂಬ್ರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪ್ರಕಾಶ್ಚಂದ್ರ ರೈ ಕೈಕಾರ ರವರ ಪತ್ನಿ ಶುಭಲಕ್ಷ್ಮಿ ನಿಧನ

ಪುತ್ತೂರು, ಜ.17:  ಕುಂಬ್ರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪ್ರಕಾಶ್ಚಂದ್ರ ರೈ ಕೈಕಾರ ಅವರ ಪತ್ನಿ ಶುಭಲಕ್ಷ್ಮಿ(50) ಅಸಹಜ ರೀತಿಯಲ್ಲಿ ನೀರಿ‌ನ ತೊಟ್ಟಿಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ. 


ಒಳಮೊಗ್ರು ಗ್ರಾಮದ ಕೈಕಾರದಲ್ಲಿ ಇವರ ಮನೆಯಿದ್ದು ಬುಧವಾರ ಮಧ್ಯಾಹ್ನ ಮನೆ ಸಮೀಪದ ನೀರಿನ ತೊಟ್ಟಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಮನೆಯ ಗುಡ್ಡದ ಮೇಲೆ ಮಣ್ಣಿನ ಟ್ಯಾಂಕಿ ನಿರ್ಮಿಸಿದ್ದು ಅದಕ್ಕೆ ಟಾರ್ಪಾಲು ಹಾಕಿ ನೀರು ನಿಲ್ಲಿಸಲಾಗಿತ್ತು. ಬೆಳಗ್ಗೆ ಹನ್ನೊಂದು ಗಂಟೆ ವರೆಗೆ ಪ್ರಕಾಶ್ಚಂದ್ರ ರೈ ಮನೆಯಲ್ಲಿದ್ದು ಆನಂತರ ಹೊರಗೆ ತೆರಳಿದ್ದರು. ಮಧ್ಯಾಹ್ನ ಒಂದೂವರೆ ಗಂಟೆ ವೇಳೆಗೆ ಹೋಗಿ ನೋಡಿದಾಗ ಪತ್ನಿ ಇರಲಿಲ್ಲ. ಹುಡುಕಾಟದ ವೇಳೆ ತೊಟ್ಟಿಯಲ್ಲಿ ಶವ ಪತ್ತೆಯಾಗಿದೆ. ಮಗಳು ಕಾಲೇಜಿಗೆ ಹೋಗಿದ್ದು ಮನೆಯಲ್ಲಿ ಕೆಲಸದವರು ಇದ್ದರು ಎಂದು ಪೊಲೀಸರು ತಿಳಿಸಿದ್ದಾರೆ.ಕಾಲುಜಾರಿ ನೀರಿನ ತೊಟ್ಟಿಗೆ ಬಿದ್ದಿದ್ದು, ಆ ಸಂದರ್ಭದಲ್ಲಿ ಯಾರೂ ಇಲ್ಲದ ಕಾರಣ ಅಲ್ಲಿಯೇ ಮೃತಪಟ್ಟಿದ್ದಾರೆ ಎಂದು ಪತಿ ಪ್ರಕಾಶ್ಚಂದ್ರ ರೈ ಗ್ರಾಮಾಂತರ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ‌ಮರಣೋತ್ತರ ಪರೀಕ್ಷೆ ಸಂದರ್ಭದಲ್ಲಿ ಆಸ್ಪತ್ರೆಗೆ ಸಂಸದ ನಳಿನ್ ಕುಮಾರ್ ಕಟೀಲ್, ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ಮುಖಂಡರಾದ  ಗೋಪಾಲಕೃಷ್ಣ ಹೇರಳೆ, ಸಾಜ ರಾಧಾಕೃಷ್ಣ ಆಳ್ವ, ಶಶಿಕುಮಾರ್ ರೈ ಬಾಲ್ಯೊಟ್ಟು ಮತ್ತಿತರರು ಭೇಟಿ ನೀಡಿದ್ದರು.‌

ಬಂಟ್ವಾಳ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಅಭ್ಯರ್ಥಿ ಪದ್ಮರಾಜ್ ಆರ್

Posted by Vidyamaana on 2024-03-28 20:22:05 |

Share: | | | | |


ಬಂಟ್ವಾಳ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಅಭ್ಯರ್ಥಿ ಪದ್ಮರಾಜ್ ಆರ್

ಬಂಟ್ವಾಳ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ಬಿ.ಸಿ. ರೋಡ್ ನಾರಾಯಣ ಗುರು ಸಭಾಭವನದಲ್ಲಿ ಗುರುವಾರ ಸಂಜೆ ನಡೆಯಿತು.


ಅಭ್ಯರ್ಥಿ ಪದ್ಮರಾಜ್ ಆರ್. ಮಾತನಾಡಿ, ನಲ್ವತ್ತು ವರ್ಷದಲ್ಲಿ ಕಾಂಗ್ರೆಸ್ ನಾಯಕರು ಹಲವು ಯೋಜನೆಗಳನ್ನು ಜಿಲ್ಲೆಗೆ ತಂದಿದ್ದಾರೆ. ಇದರಲ್ಲಿ ಬಂದರು, ಏರ್ ಪೋರ್ಟ್, ಎನ್.ಎಂ.ಪಿ.ಟಿ., ಕೆ.ಪಿ.ಟಿ.ಸಿ.ಎಲ್. ಹೀಗೆ ಅನೇಕ ಯೋಜನೆಗಳು ಜಿಲ್ಲೆಗೆ ಬಂದಿದ್ದರೆ ಅದಕ್ಕೆ ಕಾಂಗ್ರೆಸ್ ನಾಯಕರು ಕಾರಣ. ನಂತರದ ಮೂವತ್ತ ಮೂರು ವರ್ಷದಲ್ಲಿ ಬಿಜೆಪಿ ನಾಯಕರು ಏನು ಮಾಡಿದ್ದಾರೆ ಎನ್ನುವುದು ನಿಮಗೆ ತಿಳಿದಿದೆ.



ಅನುಮತಿ ಪಡೆಯದೆ ಭರ್ತಿ ಮಾಡಿದ ಹುದ್ದೆಗಳಿಗೆ ವೇತನ ಇಲ್ಲ: ಸರ್ಕಾರ ನಿರ್ಧಾರ

Posted by Vidyamaana on 2024-01-05 15:03:39 |

Share: | | | | |


ಅನುಮತಿ ಪಡೆಯದೆ ಭರ್ತಿ ಮಾಡಿದ ಹುದ್ದೆಗಳಿಗೆ ವೇತನ ಇಲ್ಲ: ಸರ್ಕಾರ ನಿರ್ಧಾರ

ಬೆಂಗಳೂರು : ಆರ್ಥಿಕ ಇಲಾಖೆಯ ಅನುಮತಿ ಪಡೆದುಕೊಳ್ಳದೆ ರಾಜ್ಯದಲ್ಲಿನ ವಿಶ್ವವಿದ್ಯಾಲಯಗಳಲ್ಲಿ ಭರ್ತಿ ಮಾಡಿರುವ ಹುದ್ದೆಗಳಿಗೆ ವೇತನಾನುದಾನ ನೀಡದಿರಲು ಸರ್ಕಾರ ನಿರ್ಧರಿಸಿದೆ.ರಾಜ್ಯದಲ್ಲಿ 41 ಸರ್ಕಾರಿ ವಿವಿಗಳಿದ್ದು, ಕೆಲವು ವಿವಿಗಳ ಕುಲಪತಿಗಳು ಹಣಕಾಸು ಇಲಾಖೆಯಿಂದ ಅನುಮೋದನೆ ಪಡೆದುಕೊಳ್ಳದೆ ತಮ್ಮ ನಿವೃತ್ತಿ ಅವಧಿಯ ಕೊನೆ ಕ್ಷಣದಲ್ಲಿ ಭರ್ತಿ ಮಾಡಿದ ಪ್ರಕರಣಗಳಿವೆ.ಆರ್ಥಿಕ ಇಲಾಖೆ ಈ ಮೊದಲೇ ಎಚ್ಚರಿಕೆ ನೀಡಿದ್ದರೂ ನೇಮಕಾತಿ ಮಾಡಿಕೊಳ್ಳಲಾಗಿದೆ.


ಅನುಮತಿ ಪಡೆದುಕೊಳ್ಳದೆ ಭರ್ತಿ ಮಾಡಿದ ಹುದ್ದೆಗಳನ್ನು ಮಂಜೂರಾದ ಹುದ್ದೆಗಳೆಂದು ಪರಿಗಣಿಸಲಾಗುವುದಿಲ್ಲ. ಈ ಹುದ್ದೆಗಳ ಭರ್ತಿಗೆ ಸಹಮತ ನೀಡುವುದಿಲ್ಲವೆಂದು ಆರ್ಥಿಕ ಇಲಾಖೆಯಿಂದ ವಿವಿಗಳಿಗೆ ಸೂಚನೆ ನೀಡಲಾಗಿದೆ. ಈ ಹುದ್ದೆಗಳಿಗೆ ವಿವಿಯ ಆರ್ಥಿಕ ಸಂಪನ್ಮೂಲದಿಂದ ಮಾತ್ರ ವೇತನ ನೀಡಬೇಕಾಗುತ್ತದೆ. ಆರ್ಥಿಕ ಇಲಾಖೆ ನೀಡುವ ವೇತನಾನುನುದಾನ ಬಳಕೆ ಸಾಧ್ಯವಿರುವುದಿಲ್ಲ.


ಆರ್ಥಿಕ ಇಲಾಖೆ ಅನುಮತಿ ಪಡೆದುಕೊಳ್ಳದೆ ಭರ್ತಿ ಮಾಡಿದ ಹುದ್ದೆಗಳಿಗೆ ವೇತನಾನುದಾನ ನೀಡಲು ವಿವಿಗಳು ಅನುದಾನ ಕೋರಿ ಪ್ರಸ್ತಾವನೆ ಸಲ್ಲಿಸುತ್ತಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿದ ಆರ್ಥಿಕ ಇಲಾಖೆ ಪರಿಶೀಲಿಸಿದಾಗ ಅನುಮತಿ ಪಡೆದುಕೊಳ್ಳದೆ ನೇಮಕಾತಿ ನಡೆಸಿರುವುದು ಕಂಡುಬಂದಿದೆ.ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿರುವ ಎಲ್ಲಾ ಸಾಮಾನ್ಯ ವಿವಿ, ವೈದ್ಯಕೀಯ ವಿವಿ, ಕೃಷಿ ವಿವಿಗಳು ಆಡಳಿತ ಮಂಡಳಿಯ ಅನುಮೋದನೆ ಪಡೆದು ತಮ್ಮ ಹಂತದಲ್ಲಿ ಅನುಮೋದನೆ ಪಡೆದುಕೊಂಡ ಹುದ್ದೆಗಳ ವಿವರ, ಸರ್ಕಾರದ ಆದೇಶ ನೀಡಿರುವ ಕುರಿತಾದ ಮಾಹಿತಿ ಸಲ್ಲಿಸುವಂತೆ ಸೂಚಿಸಲಾಗಿದೆ.

ಪುರುಷರಕಟ್ಟೆ :ಉದಯಭಾಗ್ಯ ಹೋಟೆಲ್ ಮಾಲಕ ಸುರೇಶ್ ಪ್ರಭು ನಿಧನ

Posted by Vidyamaana on 2023-10-01 09:35:46 |

Share: | | | | |


ಪುರುಷರಕಟ್ಟೆ :ಉದಯಭಾಗ್ಯ ಹೋಟೆಲ್ ಮಾಲಕ ಸುರೇಶ್ ಪ್ರಭು   ನಿಧನ

ಉದಯಭಾಗ್ಯ ಹೋಟಲ್ ಮಾಲಕ ಸುರೇಶ್ ಪ್ರಭು ನಿಧನ


ಪುತ್ತೂರು: ಇಲ್ಲಿನ ಪುರುಷರಕಟ್ಟೆ ಉದಯಭಾಗ್ಯ ಹೊಟೇಲ್ ಮಾಲಕ ಸುರೇಶ್ ಪ್ರಭು (72) ಅವರು ಹೃದಯಾಘಾತದಿಂದ ಇಂದು ಬೆಳಿಗ್ಗೆ ಸ್ವಗೃಹದಲ್ಲಿ ನಿಧನ ಹೊಂದಿದರು.

ಪುತ್ತೂರಿನ ಹೊಟೇಲ್ ಉದ್ಯಮಗಳ ಪೈಕಿ ಉದಯಭಾಗ್ಯ ಹೋಟೆಲ್ ಕೂಡ ಒಂದು. ಸುರೇಶ್ ಪ್ರಭು ಉದ್ಯಮದ ಜೊತೆಗೆ ಹಲವು ಸಂಘ ಸಂಸ್ಥೆಗಳಲ್ಲಿ ಸಕ್ರೀಯರಾಗಿದ್ದರು.

ಪತ್ನಿ, ಒಂದು ಗಂಡು ಹಾಗೂ ಮೂವರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

ನಾಪತ್ತೆಯಾಗಿದ್ದ ಪೊಲೀಸ್ ಕಾನ್ಸ್ ಟೇಬಲ್ ಶವವಾಗಿ ಪತ್ತೆ

Posted by Vidyamaana on 2024-07-02 10:10:36 |

Share: | | | | |


ನಾಪತ್ತೆಯಾಗಿದ್ದ ಪೊಲೀಸ್ ಕಾನ್ಸ್ ಟೇಬಲ್ ಶವವಾಗಿ ಪತ್ತೆ

ಬೆಂಗಳೂರು, ಜುಲೈ 1: ನಾಪತ್ತೆಯಾಗಿದ್ದ ಕಾನ್ಸ್‌ಟೇಬಲ್‌ ಪಾಳು ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮಡಿವಾಳ ಠಾಣೆಯಲ್ಲಿ ಕಾನ್ಸ್‌ಟೇಬಲ್ ಆಗಿ ಕೆಲಸ ಮಾಡುತ್ತಿದ್ದ ಶಿವರಾಜ್ ಕಳೆದ ಜೂ.26ರಂದು ನಾಪತ್ತೆ ಆಗಿದ್ದರು.

2020ರಲ್ಲಿ ಪೊಲೀಸ್ ಕೆಲಸಕ್ಕೆ ಸೇರಿದ್ದ ಕಾನ್ಸ್‌ಟೇಬಲ್‌ ಶಿವರಾಜ್‌ ಮೂರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದರು. ಆದರೆ ಕಳೆದ 26ರಂದು ಶಿವರಾಜ್‌ ಯಾರ ಸಂಪರ್ಕಕ್ಕೂ ಸಿಗದೆ ಏಕಾಏಕಿ ನಾಪತ್ತೆ ಆಗಿದ್ದರು. ಹೀಗಾಗಿ ಶಿವರಾಜ್‌ ಸಹೋದರ ಸುಬ್ರಮಣ್ಯಪುರ ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್‌ ಕೇಸ್‌ ದೂರು ನೀಡಿದ್ದರು. ಸಹೋದರ ದೂರಿನ್ವಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆಗಿಳಿದಿದ್ದರು.

Recent News


Leave a Comment: