ಕಾಲೇಜು ಶುಲ್ಕ ಹಣದಲ್ಲಿ ದಂಡ ಕಟ್ಟಿದ ಯುವಕ.! PSI ಮಾಡಿದ್ದೇನು ಗೊತ್ತಾ..?

ಸುದ್ದಿಗಳು News

Posted by vidyamaana on 2024-07-25 06:35:41 |

Share: | | | | |


ಕಾಲೇಜು ಶುಲ್ಕ ಹಣದಲ್ಲಿ ದಂಡ ಕಟ್ಟಿದ ಯುವಕ.! PSI ಮಾಡಿದ್ದೇನು ಗೊತ್ತಾ..?

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಇಲಕಲ್ ನಗರದ ಕಂಠಿ ಸರ್ಕಲ್ ಬಳಿ ತ್ರಿಬಲ್ ರೈಡ್ ನಲ್ಲಿ ಬಂದ ಯುವಕರಿಗೆ ಪಿಎಸ್ ಐ ಬುದ್ದಿವಾದ ಹೇಳಿದ ಘಟನೆ ನಡೆದಿದೆ. ತ್ರಿಬಲ್ ರೈಡ್ ಮೂಲಕ ಕಾಲೇಜ್ ಅಡ್ಮಿಷನ್ ಗೆ ಹೊರಟಿದ್ದ ವಿದ್ಯಾರ್ಥಿಗಳನ್ನು ಇಳಕಲ್ ನಗರ ಠಾಣಾ ಮಹಿಳಾ ಪಿಎಸ್‌ಐ ಎಸ್.ಆರ್.ನಾಯಕ್ ಎಂಬವರು ಬಾಲಕನಿಗೆ ದಂಡ ಕಟ್ಟುವಂತೆ ಒತ್ತಾಯಿಸಿದ್ದರು.

ಆದ್ರೆ, ಕಣ್ಣೀರಿಟ್ಟ ಬಾಲಕ, ನನ್ನ ಬಳಿ ಹಣವಿಲ್ಲ ಆದರೆ, ಕಾಲೇಜು ಶುಲ್ಕ ಕಟ್ಟಲೆಂದು ಇಟ್ಟುಕೊಂಡಿರುವ ದುಡ್ಡಿದೆ ಅಷ್ಟೇ. ಅದನ್ನೇ ತಗೆದುಕೊಳ್ಳಿ ಎಂದು ಅಳುತ್ತ ದುಡ್ಡು ಕೊಟ್ಟಿದ್ದಾನೆ.

ಬಾಲಕನ ಹೇಳಿಕೆಯನ್ನು ಪರಿಶೀಲಿಸಿದ ಬಳಿಕ ಮಹಿಳಾ ಪಿಎಸ್‌ಐ ಅಪ್ಪಿಕೊಂಡು ಸಾಂತ್ವನ ತಿಳಿಸಿ, ತಮ್ಮ ಬಳಿಯಿದ್ದ ದಂಡದ ಹಣವನ್ನು ವಾಪಸ್ ಕೊಟ್ಟು, ಧೈರ್ಯ ತುಂಬಿದ್ದಾರೆ. ಪೋಷಕರು ಮಕ್ಕಳಿಗೆ ಬೈಕ್, ಸ್ಕೂಟರ್ ಕೊಡುವ ಮುನ್ನ ಹತ್ತು ಬಾರಿ ಎಚ್ಚರ ವಹಿಸಿ ಎಂದು ಮಹಿಳಾ ಪಿಎಸ್‌ಐ ಹೇಳಿದ್ದಾರೆ.

 Share: | | | | |


ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ್ತಿ ಸಾಲಿಯಾತ್ ಹೃದಯಾಘಾತದಿಂದ ನಿಧನ

Posted by Vidyamaana on 2023-05-31 04:25:17 |

Share: | | | | |


ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ್ತಿ ಸಾಲಿಯಾತ್ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ: ತಾಲೂಕಿನ ಪ್ರತಿಭೆ ವಿದ್ಯಾರ್ಥಿ ದಿಸೆಯಲ್ಲಿ ರಾಷ್ಟ್ರ ಮಟ್ಟದ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ್ತಿ, ಉಜಿರೆ ಎಸ್.ಡಿ.ಎಂ. ಕಾಲೇಜು ಹಳೇ ವಿದ್ಯಾರ್ಥಿ ಸಾಲಿಯತ್ (24) ಹೃದಯಾಘಾತದಿಂದ ಇಂದು ಮೃತಪಟ್ಟಿದ್ದಾರೆ

ಪಡಂಗಡಿ ಪೊಯ್ಕೆಗುಡ್ಡೆ ನಿವಾಸಿ ಆದಂ ಮತ್ತು ಹವ್ವಮ್ಮ ದಂಪತಿಯ ಪುತ್ರಿಯಾಗಿರುವ ಪ್ರಸ್ತುತ ವಿವಾಹವಾಗಿ ಒಂದು ವರ್ಷವಾಗಿ ಚಿಕ್ಕಮಗಳೂರು ಪತಿ ಮನೆಯಲ್ಲಿದ್ದವರು. ಹೃದಯ ಬೇನೆಯಿಂದ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಬುಧವಾರ ಮೃತಪಟ್ಟಿದ್ದು, ವೈದ್ಯರು ಹೃದಯಾಘಾತ ಎಂದು ದೃಢಪಡಿಸಿದ್ದಾರೆ

ಕ್ರೀಡಾ ಪ್ರತಿಭೆ

ಪಡಂಗಡಿಯಲ್ಲಿ ಪ್ರಾಥಮಿಕ, ಎಸ್.ಡಿ.ಎಂ. ಅನುದಾನಿತ ಪ್ರೌಢ ಶಾಲೆ ಉಜಿರೆಯಲ್ಲಿ 9ನೇ ತರಗತಿ, ಮುಂಡಾಜೆಯಲ್ಲಿ 10 ನೇ ತರಗತಿ ಶಿಕ್ಷಣ ಪೂರ್ಣಗೊಳಿಸಿ, ಉಜಿರೆ ಎಸ್.ಡಿ.ಎಂ.ನಲ್ಲಿ ಪದವಿ ಪೂರ್ವ ಹಾಗೂ ಪದವಿ ಶಿಕ್ಷಣ ಪಡೆದಿದ್ದ ಸಾಲಿಯತ್, ಕ್ರೀಡಾ ಕ್ಷೇತ್ರದಲ್ಲಿ ಅತ್ಯಧಿಕ ಸಾಧನೆ ತೋರಿದ್ದರು.

ಹೈದರ್ ಪಡಂಗಡಿ ಅವರ ಗರಡಿಯಲ್ಲಿ ಆರಂಭದ ತರಬೇತಿಯನ್ನು ಪಡೆದಿದ್ದ ಇವರು, ಮುಂದೆ ಪ್ರೌಢ ಶಿಕ್ಷಣವನ್ನು ಮುಂಡಾಜೆ ಶಿಕ್ಷಣ ಸಂಸ್ಥೆಯಲ್ಲಿ ಪಡೆಯುತ್ತಿದ್ದ ಸಂದರ್ಭದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾದ ಗುಣಪಾಲ್ ಎಂ.ಎಸ್. ಅವರ ಗರಡಿಯಲ್ಲಿ ಪಳಗಿ ಅವರು ವಾಲಿಬಾಲ್ ಆಟದಲ್ಲಿ ಅತ್ಯಂತ ಉತ್ಕೃಷ್ಟ ಪ್ರದರ್ಶನ ನೀಡಿ ಉತ್ತರ ಪ್ರದೇಶದ ಅಲಹಾಬಾದ್ ನಲ್ಲಿ ನಡೆದ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಕರ್ನಾಟಕ ರಾಜ್ಯ ತಂಡ ದ್ವಿತೀಯ ಸ್ಥಾನ ಗಳಿಸುವಲ್ಲಿ ಮಹತ್ವದ ಪಾತ್ರ ನಿರ್ವಹಿಸಿದ್ದರು.ಮುಂದೆ ಪದವಿ ಪೂರ್ವ ಹಾಗೂ ಪದವಿ ಶಿಕ್ಷಣವನ್ನು ಎಸ್.ಡಿ.ಎಂ. ಕಾಲೇಜು ಉಜಿರೆಯಲ್ಲಿ ಮಾಡುತ್ತಿದ್ದ ಸಂದರ್ಭದಲ್ಲಿ ಕರ್ನಾಟಕ ರಾಜ್ಯಕ್ಕೆ ಬಹುಬೇಡಿಕೆಯ ವಾಲಿಬಾಲ್ ಆಟಗಾರ್ತಿಯಾಗಿ ಜನಮನ್ನಣೆಗಳಿಸಿದ್ದರು.ರಾಷ್ಟ್ರದ ವಾಲಿಬಾಲ್ ನಲ್ಲಿ ಬೆಳ್ಳಿ ಪದಕ, ಸೀನಿಯರ್ ನ್ಯಾಶನಲ್ ದಕ್ಷಿಣ ವಲಯದಲ್ಲಿ ಚಿನ್ನದ ಪದಕ, ಜ್ಯೂನಿಯರ್ ನ್ಯಾಷನಲ್ ನಲ್ಲಿ ತೃತೀಯ ಸ್ಥಾನ ಗಳಿಸಿರುವುದು ಇವರ ಹಿರಿಮೆಯನ್ನು ಹೆಚ್ಚಿಸಿದೆ.

ಮೃತರು ತಂದೆ, ತಾಯಿ, ಪತಿಯನ್ನು ಅಗಲಿದ್ದಾರೆ.


ಗ್ರಾಮೀಣ ಕೈಗಾರಿಕಾ ಇಲಾಖೆಯಿಂದ ಫಲಾನುಭವಿಗಳಿಗೆ ವಿವಿಧ ಸಲಕರಣೆಗಳ ವಿತರಣೆ

Posted by Vidyamaana on 2024-09-04 05:21:56 |

Share: | | | | |


ಗ್ರಾಮೀಣ ಕೈಗಾರಿಕಾ ಇಲಾಖೆಯಿಂದ ಫಲಾನುಭವಿಗಳಿಗೆ ವಿವಿಧ ಸಲಕರಣೆಗಳ ವಿತರಣೆ

ಪುತ್ತೂರು: ಸರಕಾರದ ವಿವಿಧ ಇಲಾಖೆಯಿಂದ ಸಾರ್ವಜನಿಕರಿಗೆ ಯಾವುದೆಲ್ಲಾ ಸೌಲಭ್ಯಗಳು ದೊರೆಯುತ್ತದೆಯೋ ಅವುಗಳ ಮಾಹಿತಿಯನ್ನು ಮಾಧ್ಯಮಗಳಲ್ಲಿ ಮತ್ತು ಸಾಮಾಜಿಕ ತಾಣದಲ್ಲಿ ಪ್ರಕಟಿಸಿ ಪ್ರಚಾರ ಮಾಡಬೇಕು ಎಂದು ಪುತ್ತೂರು ಶಾಸಕರಾದ ಅಶೋಕ್ ರೈಯವರು ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದ್ದಾರೆ.

ಅವರು ದ ಕ ಜಿಲ್ಲಾ ಪಂಚಾಯತ್, ಗ್ರಾಮೀಣ ಕೈಗಾರಿಕಾ ಇಲಾಖೆಯ ವತಿಯಿಂದ ಪುತ್ತೂರು ವಿಧಾನಸಭಾ ಕ್ಷೆತ್ರದ ವಿವಿಧ ಕುಶಲ ಕರ್ಮಿಗಳಿಗೆ ಸಲಕರಣೆಯನ್ನು ವಿತರಿಸಿ ಮಾತನಾಡಿದರು.

ಯಾವ ಇಲಾಖೆಯಲ್ಲಿ ಯಾವ ಸೌಲಭ್ಯಗಳು ದೊರೆಯುತ್ತದೆ ಎಂದು ಸಾರ್ವಜನಿಕರಿಗೆ ಮಾಹಿತಿ ಕೊರತೆಯಿದೆ. ಕೆಲವರಿಗೆ ಆನ್ ಲೈನ್ ನಲ್ಲಿ ಅರ್ಜಿ ಹಾಕಬೇಕೆಂದು ಗೊತ್ತೇ ಇರುವುದಿಲ್ಲ ಮತ್ತು ಯಾವಾಗ ಅರ್ಜಿ ಹಾಕಬೇಕು ಎಂಬ ಮಾಹಿತಿಯೂ ಇರುವುದಿಲ್ಲ ಈ ಕಾರಣಕ್ಕೆ ಅರ್ಹ ಫಲಾನುಭವಿಗಳು ಸೌಲಭ್ಯದಿಂದ ವಂಚಿತರಾಗುತ್ತಿದ್ದಾರೆ. ಸರಕಾರದಿಂದ ಸಿಗುವ ಸೌಲಭ್ಯಗಳು ಕೆಲವರಿಗೇ ಮಾತ್ರ ಮೀಸಲು ಎಂಬಂತಾಗಬಾರದು ಎಂದು ಹೇಳಿದ ಶಾಸಕರು ಪ್ರತೀ ಇಲಾಖೆಯು ತಮ್ಮ ಇಲಾಖೆಯ ಸೌಲಭ್ಯಗಳ ಬಗ್ಗೆ ಮಾಧ್ಯಮ ಹಗೂ ಸಾಮಾಜಿಕ ಜಾಲತಾದಲ್ಲಿ ಪ್ರಕಟಿಸುವ ಮೂಲಕ ಪ್ರಚಾರ ನೀಡಬೇಕು ಎಂದು ಹೇಳಿದರು. ವಿಚಾರ ಗೊತ್ತಿಲ್ಲದೆ ಅನೇಕ ಮಂದಿ ಬಡವರು ನನ್ನ ಕಚೇರಿಗೆ ಬಂದು ಸೌಲಭ್ಯಕ್ಕಾಗಿ ಬೇಡಿಕೆ ಇಡುತ್ತಿದ್ದಾರೆ, ಮುಂದಿನ ದಿನಗಳಲ್ಲಿ ಈ ಬಗ್ಗೆ ಯಾವುದೇ ದೂರುಗಳು ಬರುವಂತಾಗಬಾರದು ಎಂದು ಹೇಳಿದರು.


ತಟ್ಟಿಯಂಗಡಿಯಲ್ಲಿ ಪೈನಾಪಲ್ ಸವಿದ ಸಭಾಪತಿ ಯು ಟಿ ಖಾದರ್

Posted by Vidyamaana on 2023-12-22 12:52:06 |

Share: | | | | |


ತಟ್ಟಿಯಂಗಡಿಯಲ್ಲಿ ಪೈನಾಪಲ್ ಸವಿದ ಸಭಾಪತಿ ಯು ಟಿ ಖಾದರ್

ಪುತ್ತೂರು: ಮಾಣಿ - ಮೈಸೂರು ರಾ. ಹೆದ್ದಾರಿ ಯ ಕೊಯಿಲತ್ತಡ್ಕದಲ್ಲಿರುವ ತಟ್ಟಿಯಂಗಡಿಯಲ್ಲಿ ಪೈನಾಪಲ್ ತಿನ್ನುವ ಮೂಲಕ ಸಭಾಪತಿ ಯು ಟಿ ಖಾದರ್ ಸಿಂಪ್ಲಿಸಿಟಿ ಮೆರೆದಿದ್ದಾರೆ. ಕುಂಬ್ರದ ಕರ್ನಾಟಕ ಇಸ್ಲಾಮಿಕ್ ಸೆಂಟರ್ ಗೆ ಭೇಟಿ ನೀಢೀ ವಾಪಸ್ಸಾಗುವ ವೇಳೆ ಕೊಯಿಲತ್ತಡ್ಕದ ಅದ್ದು ಎಂಬವರ ಅಂಗಡಿಗೆ ತೆರಳಿದ ಅವರು ಪೈನಾಪಲ್, ಮಾವುತಿಂದು ತೆರಳಿದ್ದಾರೆ. ಖಾದರ್ ಅವರು ಬಂದ ಸುದ್ದಿ ತಿಳಿದು ಸ್ಥಳಿಯರು ಜಮಾಯಿಸಿದರು.

ಮಂಗಳೂರಿನಲ್ಲಿ ಸ್ಪೀಕರ್ ಯುಟಿ ಖಾದರ್ ಅವರ ಕುಟುಂಬದ ಅದ್ದೂರಿ ಮದುವೆ ರಿಸೆಪ್ಶನ್ ; ಬರಲಿದ್ದಾರೆ ರಾಜ್ಯಪಾಲರು,ಸಿಎಂ, ಡಿಸಿಎಂ,ಕರ್ನಾಟಕ, ಕೇರಳ ಸಚಿವರ ದಂಡು , ನಗರದಲ್ಲಿ ಸಂಚಾರ ವ್ಯವಸ್ಥೆ ಬದಲಾವಣೆ

Posted by Vidyamaana on 2024-05-25 09:44:52 |

Share: | | | | |


ಮಂಗಳೂರಿನಲ್ಲಿ ಸ್ಪೀಕರ್ ಯುಟಿ ಖಾದರ್ ಅವರ ಕುಟುಂಬದ ಅದ್ದೂರಿ ಮದುವೆ ರಿಸೆಪ್ಶನ್ ; ಬರಲಿದ್ದಾರೆ ರಾಜ್ಯಪಾಲರು,ಸಿಎಂ, ಡಿಸಿಎಂ,ಕರ್ನಾಟಕ, ಕೇರಳ ಸಚಿವರ ದಂಡು , ನಗರದಲ್ಲಿ ಸಂಚಾರ ವ್ಯವಸ್ಥೆ ಬದಲಾವಣೆ

ಮಂಗಳೂರು, ಮೇ 24: ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಅವರ ಹಿರಿಯ ಸೋದರನ ಮಗಳ ಮದುವೆಯ ಅದ್ದೂರಿ ರಿಸೆಪ್ಶನ್ ಸಮಾರಂಭವನ್ನು ಮಂಗಳೂರಿನ ಟಿಎಂಎ ಪೈ ಹಾಲ್ ನಲ್ಲಿ ಮೇ 25 ಮತ್ತು 26ರಂದು ಆಯೋಜಿಸಲಾಗಿದ್ದು ವಿವಿಧ ರಾಜ್ಯಗಳ ರಾಜ್ಯಪಾಲರು, ಕರ್ನಾಟಕ ಸರ್ಕಾರದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಸಚಿವರು, ಕೇರಳ ಸರ್ಕಾರದ ಸಚಿವರು ಆಗಮಿಸಲಿದ್ದಾರೆ. 


ಪ್ರಮುಖ ವಿವಿಐಪಿಗಳು ಮಂಗಳೂರು ನಗರಕ್ಕೆ ಆಗಮಿಸಿ, ನಗರದ PVS ಹಾಗೂ ಲಾಲ್‌ಬಾಗ್ ಜಂಕ್ಷನ್‌ಗಳ ನಡುವೆ ಇರುವ ಎಂ.ಜಿ ರಸ್ತೆಯಲ್ಲಿನ ಟಿ.ಎಂ.ಎ.ಪೈ ಹಾಲ್‌ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲಿರುತ್ತಾರೆ. ಈ ಹಿನ್ನೆಲೆಯಲ್ಲಿ ಸದ್ರಿ ಪ್ರದೇಶಗಳಲ್ಲಿ ವಾಹನ ದಟ್ಟಣೆ ಅಧಿಕವಾಗುವ ಸಾಧ್ಯತೆ ಇರುತ್ತದೆ. ಹೀಗಾಗಿ ನವಭಾರತ ಸರ್ಕಲ್‌ನಿಂದ ಪಿವಿಎಸ್ ಮೂಲಕ ಲೇಡಿಹಿಲ್ ಸರ್ಕಲ್ ಕಡೆಗೆ ಹೋಗುವ ಎಂ.ಜಿ ರಸ್ತೆಯಲ್ಲಿನ ಎಲ್ಲಾ ಸಂಪರ್ಕಗಳನ್ನು ಮುಚ್ಚಬೇಕಾಗುತ್ತದೆ. ಬೆಸೆಂಟ್ ಜಂಕ್ಷನ್, ಕೋಡಿಯಾಲ್‌ಗುತ್ತು ಕ್ರಾಸ್, ಬಲ್ಲಾಳ್‌ಬಾಗ್ ಜಂಕ್ಷನ್, ನೆಹರೂ ಅವೆನ್ಯೂ ಜಂಕ್ಷನ್ ಸಂಪರ್ಕವೂ ಬಂದ್ ಆಗಲಿದೆ. ಸದ್ರಿ ರಸ್ತೆಯನ್ನು ಬಳಸುವ ಎಲ್ಲ ವಾಹನ ಚಾಲಕರಿಗೆ ಪರ್ಯಾಯ ಮಾರ್ಗಗಳಲ್ಲಿ ಸಂಚರಿಸಲು ಪೊಲೀಸರು ಸೂಚಿಸಿದ್ದಾರೆ. 

ವಾಹನ ದಟ್ಟಣೆ ಹೆಚ್ಚಾಗುವ ಸಾಧ್ಯತೆಗಳಿರುವ ಸ್ಥಳಗಳು 

ಕೊಟ್ಟಾರ ಚೌಕಿ, ಕುಂಟಿಕಾನ, ಕೆ.ಪಿ.ಟಿ, ನಂತೂರು, ಕೆ.ಎಸ್.ಆರ್.ಟಿ.ಸಿ., ಬಂಟ್ಸ್ ಹಾಸ್ಟೆಲ್, ಡಾ. ಅಂಬೇಡ್ಕರ್ ಸರ್ಕಲ್, ಹಾರ್ಟಿಕಲ್ಚರ್ ಜಂಕ್ಷನ್, ಬಲ್ಮಠ, ಹಂಪನಕಟ್ಟೆ, ಕರಾವಳಿ ಸರ್ಕಲ್, ಕಂಕನಾಡಿ, ಪಂಪ್‌ವೆಲ್, ತೊಕ್ಕೊಟ್ಟು.

ಕಡಬ; ಡೆಂಟಲ್ ಕ್ಲಿನಿಕ್ ಗೆಂದು ಹೋದ ತೀರ್ಥಲತಾ ನಾಪತ್ತೆ

Posted by Vidyamaana on 2023-08-02 10:49:33 |

Share: | | | | |


ಕಡಬ; ಡೆಂಟಲ್ ಕ್ಲಿನಿಕ್ ಗೆಂದು ಹೋದ   ತೀರ್ಥಲತಾ ನಾಪತ್ತೆ

ಕಡಬ; ಡೆಂಟಲ್ ಕ್ಲಿನಿಕ್ ಗೆಂದು ಹೋದ ವಿವಾಹಿತೆ ನಾಪತ್ತೆಯಾಗಿರುವ ಘಟನೆ ಕಡಬದಲ್ಲಿ ನಡೆದಿದೆ.ಇಲ್ಲಿನ ಬಿಳಿನೆಲೆ ಗ್ರಾಮದ ದೇವಸ್ಯ ಮನೆ ಮಾಯಿಲಪ್ಪ ಗೌಡ ಅವರ ಪುತ್ರಿ ತೀರ್ಥಲತಾ ಕಾಣೆಯಾದ ವಿವಾಹಿತೆ.


ಈ ಬಗ್ಗೆ ಅವರ ತಂದೆ ದೂರು ನೀಡಿದ್ದು, ತನ್ನ ಮಗಳನ್ನು ಗದಗ ಮೂಲದ ಮುಂಡರಗಿಯ ಶಿವರಾಜ್ ಎಂಬವರಿಗೆ ವಿವಾಹ ಮಾಡಿಕೊಡಲಾಗಿತ್ತು. ತಂದೆ ಮನೆಗೆ ಬಂದಿದ್ದ ಆಕೆ ಸುಬ್ರಹ್ಮಣ್ಯದಲ್ಲಿರುವ ಡೆಂಟಲ್ ಕ್ಲಿನಿಕ್ ಗೆ ಚಿಕಿತ್ಸೆಗಾಗಿ ತೆರಳಿ ಬಳಿಕ ಮನೆಗೆ ಬಂದಿಲ್ಲವೆಂದು ದೂರಿನಲ್ಲಿ ತಿಳಿಸಲಾಗಿದೆ.


ಈ ಬಗ್ಗೆ ಸುಬ್ರಹ್ಮಣ್ಯ ಪೊಲೀಸರು ದೂರು ದಾಖಲಿಸಿಕೊಂಡು ಸಾರ್ವಜನಿಕ ಪ್ರಕಟನೆ ಹೊರಡಿಸಿ ಮಾಹಿತಿ ಸಿಕ್ಕಲ್ಲಿ ಠಾಣೆಗೆ ತಿಳಿಸುವಂತೆ ಕೋರಿದ್ದಾರೆ.

ಟೊಮೆಟೋ ಅಂಗಡಿಗೆ ಬೌನ್ಸರ್ ನೇಮಿಸಿದ್ದ ವ್ಯಾಪಾರಿ ಅಜಯ್ ಫೌಜಿ ಬಂಧನ

Posted by Vidyamaana on 2023-07-12 17:06:37 |

Share: | | | | |


ಟೊಮೆಟೋ ಅಂಗಡಿಗೆ ಬೌನ್ಸರ್ ನೇಮಿಸಿದ್ದ ವ್ಯಾಪಾರಿ ಅಜಯ್ ಫೌಜಿ ಬಂಧನ

ವಾರಾಣಸಿ: ಟೊಮೆಟೋಗಳನ್ನು ರಕ್ಷಿಸಿಕೊಳ್ಳಲು ಬೌನ್ಸರ್ ಗಳನ್ನು ನೇಮಿಸಿದ್ದ ವ್ಯಾಪಾರಿಯನ್ನು ಪೊಲೀಸರು ಬಂಧಿಸಿದ್ದಾರೆ.

ಸಮಾಜವಾದಿ ಪಕ್ಷದ ಕಾರ್ಯಕರ್ತ ಅಜಯ್ ಫೌಜಿ ಎಂಬವರು ರವಿವಾರ ವಾರಣಾಸಿಯ ಲಂಕಾ ಪ್ರದೇಶದಲ್ಲಿ ತರಕಾರಿ ಮಾರಾಟಗಾರರ ಅಂಗಡಿಯೊಂದರಲ್ಲಿ ಎರಡು ಬೌನ್ಸರ್ ಗಳನ್ನು ನಿಯೋಜಿಸಿದ್ದರು. ಇದು ಟೊಮೆಟೊ ಬೆಲೆಯ ಬಗ್ಗೆ ಚೌಕಾಶಿ ಮಾಡುವಾಗ ಖರೀದಿದಾರರು ಆಕ್ರಮಣಕಾರಿ ವರ್ತನೆ ತೋರುವುದನ್ನು ತಡೆಯಲು ಕೈಗೊಂಡ ಕ್ರಮ ಎಂದು ಅವರು ಹೇಳಿದ್ದರು.

ಅಂಗಡಿ ಮಾಲೀಕ ರಾಜ್ ನಾರಾಯಣ್ ನನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ವಶಕ್ಕೆ ಪಡೆಯಲಾಗಿದ್ದು, ನಾಟಕೀಯ ಪ್ರತಿಭಟನೆ ನಡೆಸಿದ ಅಜಯ್ ಫೌಜಿ ಹಾಗೂ ಇಬ್ಬರು ಬೌನ್ಸರ್ ಗಳು ಪರಾರಿಯಾಗಿದ್ದಾರೆ.

ಈ ಹಿನ್ನೆಲೆಯಲ್ಲಿ ನಾರಾಯಣ್ ಮತ್ತು ವಿಕಾಸ್ ನನ್ನು ಐಪಿಸಿ ಸೆಕ್ಷನ್ 153 ಗಲಭೆಗೆ ಪ್ರಚೋದನೆ, 291 (ತಪ್ಪು ಪುನರಾವರ್ತನೆ) ಹಾಗೂ 505 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.



Leave a Comment: