ಕಾರು ಡಿಕ್ಕಿ: ಯುಕೆಜಿ ವಿದ್ಯಾರ್ಥಿ ಮಹಮ್ಮದ್ ಆದಿಲ್ ಮೃತ್ಯು

ಸುದ್ದಿಗಳು News

Posted by vidyamaana on 2023-09-23 20:22:34 | Last Updated by Vidyamaana on 2023-09-23 20:22:34

Share: | | | | |


ಕಾರು ಡಿಕ್ಕಿ: ಯುಕೆಜಿ ವಿದ್ಯಾರ್ಥಿ ಮಹಮ್ಮದ್ ಆದಿಲ್ ಮೃತ್ಯು

ಪುತ್ತೂರು: ಮಧ್ಯಾಹ್ನ ಕೆಯ್ಯೂರಿನಲ್ಲಿ ನಡೆದ ಕಾರು ಅಪಘಾತದಲ್ಲಿ ಕೆಯ್ಯೂರು ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಯುಕೆಜಿ ವಿದ್ಯಾರ್ಥಿ,ನುಸ್ರತುಲ್ ಇಸ್ಲಾಂ ಮದ್ರಸದ 1ನೇ ತರಗತಿ ವಿದ್ಯಾರ್ಥಿ ಮೃತಪಟ್ಟಿರುವುದಾಗಿ ವರದಿಯಾಗಿದೆ.

ಮೃತನನ್ನು 5 ವರ್ಷ ಪ್ರಾಯದ ಮುಹಮ್ಮದ್ ಆದಿಲ್ ಎಂದು ಗುರುತಿಸಲಾಗಿದೆ‌. ಕೆಯ್ಯೂರು ನಿವಾಸಿ ಹಾರೀಸ್ ದಾರಿಮಿ ಅವರ ಪುತ್ರ.

ಪುತ್ತೂರು ಕಡೆ ಬರುತ್ತಿದ್ದ ಈಕೋ ಕಾರು ಬಾಲಕನಿಗೆ ಢಿಕ್ಕಿ ಹೊಡೆದಿದ್ದು, ಬಾಲಕ ಗಂಭೀರ ಗಾಯಗೊಂಡಿದ್ದ. ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ಸಂಜೆ ವೇಳೆ ಮೃತಪಟ್ಟ ಬಗ್ಗೆ ವರದಿಯಾಗಿದೆ.

 Share: | | | | |


ಕಂಬಳದ ವೇದಿಕೆಯಲ್ಲೇ ನಡೀತು ಬರ್ತ್ ಡೇ ಸೆಲೆಬ್ರೇಷನ್

Posted by Vidyamaana on 2024-01-26 22:54:07 |

Share: | | | | |


ಕಂಬಳದ ವೇದಿಕೆಯಲ್ಲೇ ನಡೀತು ಬರ್ತ್ ಡೇ ಸೆಲೆಬ್ರೇಷನ್

ಪುತ್ತೂರು: ಉದ್ಯಮಿ ಕಂಬಳ ಸಮಿತಿ ಯ ಉಪಾಧ್ಯಕ್ಷ ಶಿವರಾಮ ಆಳ್ವ ಅವರ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಲಾಯಿತು.

ಶುಕ್ರವಾರ ರಾತ್ರಿ ಶಿವರಾಮ ಆಳ್ವ ರವರ ಪುತ್ತೂರು ಕೋಟಿ - ಚೆನ್ನಯ ಜೋಡುಕರೆ ಕಂಬಳ ಸಮಿತಿ ಪದಾಧಿಕಾರಿಗಳು ಹಾಗೂ ಕಂಬಳ ಅಭಿಮಾನಿಗಳು ಹುಟ್ಟುಹಬ್ಬ ಆಚರಿಸಿದರು.

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದ ಕಂಬಳದ ವೇದಿಕೆ ಮುಂಭಾಗದಲ್ಲೇ ಕೇಕ್ ಕತ್ತರಿಸಿ, ಶುಭಾಶಯ ಕೋರಿದರು.

ಚಂದ್ರಹಾಸ ಶೆಟ್ಟಿ,ಉಮೇಶ್ ನಾಡಜೆ,ಅಜಿತ್ ಶೆಟ್ಟಿ ಕಡಬ, ರೋಷನ್ ರೈ ಬನ್ನೂರು, ವಿಕ್ರಂ ಶೆಟ್ಟಿ, ಪ್ರಶಾಂತ್ ರೈ ಕೈಕಾರ, ಪ್ರವೀಣ್ ಶೆಟ್ಟಿ ಅಳಕೆ ಮಜಲು, ರಂಜಿತ್ ಬಂಗೇರ,ಅಮೋಘ ಆಳ್ವ, ಸಂಮಿತ್ ರೈ, ವರುಣ್ ಶೆಟ್ಟಿ ಸಹಿತ ಹಲವರು ಉಪಸ್ಥಿತರಿದ್ದರು.

ಸಚಿವರು ಸಹಿತ ಹಲವು ರಾಜಕೀಯ ಮುಖಂಡರಗಳು ಶುಭಹಾರೈಸಿದರು

ಮೆಸ್ಕಾಂ ತುರ್ತು ಕಾಮಗಾರಿ: ನಾಳೆ (ಜೂನ್ 3) ವಿದ್ಯುತ್ ನಿಲುಗಡೆ

Posted by Vidyamaana on 2023-06-02 14:50:26 |

Share: | | | | |


ಮೆಸ್ಕಾಂ ತುರ್ತು ಕಾಮಗಾರಿ: ನಾಳೆ (ಜೂನ್ 3) ವಿದ್ಯುತ್ ನಿಲುಗಡೆ

ಪುತ್ತೂರು: ತುರ್ತು ಕಾಮಗಾರಿ ನಿಮಿತ್ತ 33/11 ಕೆವಿ ಕ್ಯಾಂಪ್ಕೋ, ವಿದ್ಯುತ್‌ ಉಪಕೇಂದ್ರದಿಂದ ಹೊರಡುವ ಮುಕ್ತ, ಮುಂಡೂರು ಮತ್ತು ಪೀಡಿರ್‌ನಲ್ಲಿ ದಿನಾಂಕ ಜೂನ್ 3ರಂದು ಪೂರ್ವಾಹ್ನ ಗಂಟೆ 10ರಿಂದ ಅಪರಾಹ್ನ 2ರ ವರೆಗೆ ವಿದ್ಯುತ್‌ ನಿಲುಗಡೆ ಮಾಡಲಾಗುವುದು. 

33/1142 ಕ್ಯಾಂಪ್ಕೋ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಈ ಮೇಲೆ ತಿಳಿಸಿದ ಪೀಡರ್‌ನಿಂದ ವಿದ್ಯುತ್‌ ಸರಬರಾಜಾಗುವ ಮುಂಡೂರು, ಕೆಮ್ಮಿಂಜೆ ಮತ್ತು ಆರ್ಯಾಪು ಗ್ರಾಮದ ವಿದ್ಯುತ್‌ ಬಳಕೆದಾರರು ಗಮನಿಸಿ ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಪುತ್ತೂರು: ಹಿಂದೂ ಸಂಘಟನೆಯ ನಾಲ್ವರು ಕಾರ್ಯಕರ್ತರ ಗಡಿಪಾರು

Posted by Vidyamaana on 2023-05-08 17:31:02 |

Share: | | | | |


ಪುತ್ತೂರು: ಹಿಂದೂ ಸಂಘಟನೆಯ ನಾಲ್ವರು ಕಾರ್ಯಕರ್ತರ ಗಡಿಪಾರು

ಪುತ್ತೂರು: ಕ್ರಿಮಿನಲ್ ಹಿನ್ನೆಲೆಯುಳ್ಳ ನಾಲ್ಕು ಮಂದಿಯನ್ನು ಪುತ್ತೂರಿನಿಂದ ಗಡಿಪಾರು ಮಾಡಲಾಗಿದೆ.ಹಿಂದೂ ಸಂಘಟನೆ ಕಾರ್ಯಕರ್ತರಾಗಿರುವ ಬನ್ನೂರು ಮೂಲದ ಪ್ರಜ್ವಲ್, ಪ್ರತಾಪ್, ಜಗ್ಗ ಯಾನೆ ಅಚ್ಚು, ಅವಿನಾಶ್ ಅವರು ಗಡಿಪಾರುಆಗಿದ್ದಾರೆ.ಇವರು ಚುನಾವಣೆಯ ಸಂದರ್ಭ ಶಾಂತಿ ಭಂಗ ಮಾಡಬಹುದೆಂಬ ನಿಟ್ಟಿನಲ್ಲಿ ನಗರ ಠಾಣೆಯಿಂದ ಈ ಕ್ರಮ ಕೈಗೊಳ್ಳಲಾಗಿದೆ.

ಆಸ್ಪತ್ರೆಗೆ ತೆರಳಿ ಮನೆಗೆ ಮರಳುತ್ತಿದ್ದ ದಂಪತಿಗೆ ಅಪಘಾತ – ಪತ್ನಿ ದಾರುಣ ಸಾವು

Posted by Vidyamaana on 2024-01-29 18:51:49 |

Share: | | | | |


ಆಸ್ಪತ್ರೆಗೆ ತೆರಳಿ ಮನೆಗೆ ಮರಳುತ್ತಿದ್ದ ದಂಪತಿಗೆ ಅಪಘಾತ – ಪತ್ನಿ ದಾರುಣ ಸಾವು

ಪುತ್ತೂರು:ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಬಕ ಸಮೀಪದ ಪೋಳ್ಯ ಎಂಬಲ್ಲಿ ಬೈಕ್ ಹಾಗೂ ಟಿಪ್ಪರ್ ಲಾರಿ ಮಧ್ಯೆ ನಡೆದ ಅಪಘಾತದಲ್ಲಿ ಬೈಕ್‌ನ ಹಿಂಬದಿ ಸವಾರೆ, ಮಾಣಿ ಖಾಸಗಿ ಶಾಲಾ ಶಿಕ್ಷಕಿ ಮೃತಪಟ್ಟಿರುವ ಘಟನೆ ಜ.29ರಂದು ಮಧ್ಯಾಹ್ನ ನಡೆದಿದೆ.ಬಂಟ್ವಾಳ ತಾಲೂಕು ಇಡಿದು ಗ್ರಾಮದ ಮಿತ್ತೂರು ಮದಕ ಸುರೇಶ್ ಕುಲಾಲ್ ಪತ್ನಿ ಅನಿತಾ(35ವ.) ಮೃತಪಟ್ಟವರು. ಮಾಣಿ ಸಮೀದ ಗಡಿಯಾರ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿರುವ ಅನಿತಾ ಕೆಲ ದಿನಗಳ ಹಿಂದೆ ಮನೆಯಲ್ಲಿ ಬಿದ್ದು ಗಾಯಗೊಂಡಿದ್ದರು. ಜ.29ರಂದು ಬೆಳಿಗ್ಗೆ ಪುತ್ತೂರು ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಬಂದಿದ್ದರು. ಚಿಕಿತ್ಸೆ ಪಡೆದು ಬೈಕ್‌ನಲ್ಲಿ ಹಿಂತಿರುಗುವ ವೇಳೆ ಕಬಕ ಸಮೀಪ ಪೋಳ್ಯ ಎಂಬಲ್ಲಿ ಮಣ್ಣು ರಸ್ತೆಯಲ್ಲಿ ನಿಲ್ಲಿಸಿದ್ದ ಟಿಪ್ಪರ್ ಲಾರಿ ಏಕಾಏಕಿ ಡಂಬಾರು ರಸ್ತೆ ಗೆ ಬಂದಾಗ ಬೈಕ್ ಸಾವರನಿಗೆ ನಿಯಂತ್ರಣ ತಪ್ಪಿ  ಟಿಪ್ಪರ್ ಲಾರಿಗೆ  ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಹಿಂಬದಿ ಸವಾರೆ ಅನಿತಾ ಹಾಗೂ ಅವರು ಮಗು ರಸ್ತೆಗೆ ಎಸೆಯಲ್ಪಟ್ಟು ತೀವ್ರ ಗಾಯಗೊಂಡಿದ್ದರು. ಕೂಡಲೇ ಅವರನ್ನು ಬೊಳುವಾರು ಮಹಾವೀರ ಆಸ್ಪತ್ರೆಗೆ ಕರೆ ತರಲಾಗಿದ್ದರೂ ಆಸ್ಪತ್ರೆ ತಲುಪುವಷ್ಟರಲ್ಲಿ ಅವರು ಮೃತಪಟ್ಟಿದ್ದರು. ಮಗುವಿನ ಭುಜದ ಭಾಗಕ್ಕೆ ಸಣ್ಣ ಪುಟ್ಟ ಗಾಯವಾಗಿದ್ದು, ಸುರೇಶ್ ಕುಲಾಲ್ ಗೆ ಸಣ್ಣ ಪುಟ್ಟ ಗಾಯವಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ.ಮೃತರ ಪತಿ ಸುರೇಶ್ ಕುಲಾಲ್ ನೀಡಿದ ದೂರಿನಂತೆ ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರು ಪತಿ ಸುರೇಶ್ ಕುಲಾಲ್, ಪುತ್ರಿ ಋತ್ವಿಯವರನ್ನು ಅಗಲಿದ್ದಾರೆ.

ಪುತ್ತೂರು ಬಿಜೆಪಿ ಟಿಕೆಟ್‌ ತಪ್ಪಿದ ಹಿನ್ನೆಲೆ ಇಂದು ಸಂಜೆ ಅರುಣ್ ಪುತ್ತಿಲ ಬೆಂಬಲಿಗರ ತುರ್ತು ಸಭೆ

Posted by Vidyamaana on 2023-04-12 04:38:26 |

Share: | | | | |


ಪುತ್ತೂರು ಬಿಜೆಪಿ ಟಿಕೆಟ್‌ ತಪ್ಪಿದ ಹಿನ್ನೆಲೆ ಇಂದು ಸಂಜೆ ಅರುಣ್ ಪುತ್ತಿಲ ಬೆಂಬಲಿಗರ ತುರ್ತು ಸಭೆ

ಪುತ್ತೂರು: ಜಿಲ್ಲೆಯ ಪ್ರಭಾವಿ ಹಿಂದೂ ಸಂಘಟನೆಯ ಮುಂದಾಳು ಅರುಣ್ ಕುಮಾರ್ ಪುತ್ತಿಲ ಅವರಿಗೆ ಪುತ್ತೂರು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಟಿಕೆಟ್ ದೊರೆಯದ ಹಿನ್ನೆಲೆಯಲ್ಲಿ ಎ.12 ರಂದು ಬೆಂಬಲಿಗರ ನೇತೃತ್ವದಲ್ಲಿ ಇಂದು ಸಂಜೆ  ಕೋಟೇಚಾ ಹಾಲ್ ನಲ್ಲಿ ತುರ್ತು ಸಭೆ ನಡೆಯಲಿದೆ.ಅಭ್ಯರ್ಥಿಯಾಗಿ ಆಯ್ಕೆ ಮಾಡುವಂತೆ ಅವರ ಬೆಂಬಲಿಗರು ಟ್ವಿಟರ್ ಅಭಿಯಾನದ ಮೂಲಕ ನರೇಂದ್ರ ಮೋದಿ, ಅಮಿತ್ ಶಾ ಅವರ ಗಮನಕ್ಕೆ ತರುವ ಪ್ರಯತ್ನ ಮಾಡಿದ್ದರು. ಬಿಜೆಪಿಯ ಸರ್ವೇ ಕಾರ್ಯದಲ್ಲಿ ಕೇಳಿ ಬಂದಿದ್ದ ಆಕಾಂಕ್ಷಿತರ ಪಟ್ಟಿಯಲ್ಲಿ ಅರುಣ್ ಹೆಸರು ಕೂಡ ಇತ್ತು ಎನ್ನಲಾಗಿದ್ದು ಹೀಗಾಗಿ ಈ ಬಾರಿ ಅರುಣ್ ಅವರಿಗೆ ಟಿಕೇಟ್ ಸಿಗುವ ನಿರೀಕ್ಷೆಯನ್ನು ಬೆಂಬಲಿಗರು ಹೊಂದಿದ್ದರು.ಪಕ್ಷೇತರ ಸ್ಪರ್ದೆಗೆ ಒತ್ತಡ:

ಎ.10 ರಂದು ರಾತ್ರಿ ಪ್ರಕಟವಾದ ಬಿಜೆಪಿ ಅಭ್ಯರ್ಥಿ ಪಟ್ಟಿಯಲ್ಲಿ ಅರುಣ್ ಪುತ್ತಿಲ ಹೆಸರಿಲ್ಲದ ಹಿನ್ನೆಲೆಯಲ್ಲಿ ಅರುಣ್ ಬೆಂಬಲಿಗರ ಆಕ್ರೋಶಕ್ಕೆ ಕಾರಣವಾಗಿತ್ತು. ಪಕ್ಷೇತರರಾಗಿ ಕಣಕ್ಕಿಳಿಯುವಂತೆ ಒತ್ತಡ ಹೇರಲಾಗಿದೆ. ಈ ಬೆಳವಣಿಗೆಯ ಹಿನ್ನೆಲೆಯಲ್ಲಿ ತುರ್ತು ಸಭೆ ಮಹತ್ವ ಪಡೆದಿದೆ.

ಬಿಜೆಪಿ ಅಭ್ಯರ್ಥಿಗೆ ಎಂಟು ಬಾರಿ ಮತದಾನ ಮಾಡಿದ ವ್ಯಕ್ತಿ; ವಿಡಿಯೋ ವೈರಲ್

Posted by Vidyamaana on 2024-05-20 14:34:59 |

Share: | | | | |


ಬಿಜೆಪಿ ಅಭ್ಯರ್ಥಿಗೆ ಎಂಟು ಬಾರಿ ಮತದಾನ ಮಾಡಿದ ವ್ಯಕ್ತಿ; ವಿಡಿಯೋ ವೈರಲ್

ಲಕ್ನೋ: ವ್ಯಕ್ತಿಯೊಬ್ಬ ಮತದಾನ ಮಾಡುವಾಗ ಬಿಜೆಪಿ ಅಭ್ಯರ್ಥಿಗೆ ಹಲವು ಬಾರಿ ಮತದಾನ ಮಾಡಿದ್ದು, ಅದನ್ನು ವಿಡಿಯೋ ಮಾಡಿ ಹರಿಬಿಟ್ಟಿದ್ದು ವೈರಲ್ ಆದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಕೃತ್ಯವೆಸಗಿದ ಯುವಕನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಯನ್ನು ರಾಜನ್ ಸಿಂಗ್ ಎಂದು ಗುರುತಿಸಲಾಗಿದೆ. ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷ ಸೇರಿದಂತೆ ವಿರೋಧ ಪಕ್ಷಗಳ ಹಲವು ನಾಯಕರು ಎಕ್ಸ್ ನಲ್ಲಿ ವಿಡಿಯೋ ಹಂಚಿ ಆಗ್ರಹಿಸಿದ ಬಳಿಕ ಆರೋಪಿಯನ್ನು ಬಂಧಿಸಲಾಯಿತು.



Leave a Comment: