ಪೊಲೀಸರಿಂದ ಎಸ್ಕೆಪ್ ಆಗಲು ಹೋಗಿ ನೀರುಪಾಲಾದ ಇಬ್ಬರ ರಕ್ಷಣೆ : ಐವರು ನಾಪತ್ತೆ

ಸುದ್ದಿಗಳು News

Posted by vidyamaana on 2024-07-03 10:25:40 |

Share: | | | | |


ಪೊಲೀಸರಿಂದ ಎಸ್ಕೆಪ್ ಆಗಲು ಹೋಗಿ ನೀರುಪಾಲಾದ ಇಬ್ಬರ ರಕ್ಷಣೆ : ಐವರು ನಾಪತ್ತೆ

ವಿಜಯಪುರ: ಇಸ್ಪೀಟ್ ಆಡುವಾಗ ಪೊಲೀಸರು ದಾಳಿ ನಡೆಸಿದ್ದು, ಈ ವೇಳೆ ಎಸ್ಕೇಪ್ ಆಗಲು ಹೋಗಿ ತೆಪ್ಪ ಮಗುಚಿದ ಘಟನೆ ನಿನ್ನೆ ಬಳೂತಿ ಗ್ರಾಮದ ವ್ಯಾಪ್ತಿಯಲ್ಲಿ ನಡೆದಿದೆ. ಅಲ್ಲಿನ ಆಲಮಟ್ಟಿ ಜಲಾಶಯದ ಕೊಲ್ಹಾರ ಬಳಿಯ ಕೃಷ್ಣಾ ನದಿ ಹಿನ್ನೀರು ಪ್ರದೇಶದಲ್ಲಿ ಈ ದುರ್ಘಟನೆ ಸಂಭವಿಸಿದೆ.

ಎಂಟು ಜನ ತೆಪ್ಪದಲ್ಲಿ ಕೃಷ್ಣಾ ನದಿಯ ಮೂಲಕ ಎಸ್ಕೇಪ್ ಆಗುವ ವೇಳೆ ದುರಂತ ನಡೆದಿದೆ. ಇನ್ನು, ಮೀನುಗಾರರು ಹಾಗೂ ಸ್ಥಳೀಯರ ನೆರವಿನೊಂದಿಗೆ ಇಬ್ಬರ ರಕ್ಷಣೆ ಮಾಡಲಾಗಿದ್ದು ಇಬ್ಬರ ಇಬ್ಬರ ಮೃತದೇಹ ಸಿಕ್ಕಿದೆ.

ಪುಂಡಲೀಕ ಯಂಕಂಚಿ (35), ಮಹಮ್ಮದ್ ತೈಹದ್ ಚೌಧರಿ(45) ಸಾವನ್ನಪ್ಪಿದ್ದಾರೆ. ಸಚಿನ್ ಕಟಬರ್, ಫಾರೂಕ್ ಅಮದ ರಕ್ಷಣೆ ಮಾಡಲಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಎಂಟು ಜನ ಕೊಲ್ಹಾರ ಪಟ್ಟಣದವರಾಗಿದ್ದು, ನೀರುಪಾಲಾದವರು ದಶರಥ( 58),ಮೈಬೂಬ್ ವಾಲಿಕಾರ (35), ರಫೀಕ್ ಬಾಂಬೆ ,(40), ರಫೀಕ ಜಾಲಗಾರರಿಗಾಗಿ(48) ಹುಡುಕಾಟ ನಡೆಯುತ್ತಿದೆ.

 Share: | | | | |


ಜೂ 3 ಮತದಾರರಿಗೆ ಕಾಂಗ್ರೆಸ್ ಕಾರ್ಯಕರ್ತರಿಗೆ ಅಭಿನಂದನೆ ಕೃತಜ್ಞತಾ ಸಮರ್ಪಣಾ ಸಮಾರಂಭ

Posted by Vidyamaana on 2023-06-02 16:40:34 |

Share: | | | | |


ಜೂ 3 ಮತದಾರರಿಗೆ ಕಾಂಗ್ರೆಸ್ ಕಾರ್ಯಕರ್ತರಿಗೆ ಅಭಿನಂದನೆ ಕೃತಜ್ಞತಾ ಸಮರ್ಪಣಾ ಸಮಾರಂಭ

ಪುತ್ತೂರು: ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ಸಂಭ್ರಮವನ್ನು ಅದ್ದೂರಿಯಾಗಿ ನಡೆಸಲು ಈ ಹಿಂದೆ ತೀರ್ಮಾನ ಮಾಡಿದ್ದು ಅದನ್ನು ರದ್ದು ಮಾಡಲಾಗಿದೆ. ಯಾವುದೇ ಮೆರವಣಿಗೆ  ಇಲ್ಲದೆ ಜೂ. 3ರಂದು ಶನಿವಾರ ಬೆಳಗ್ಗೆ 10 ಗಂಟೆಯಿಂದ ಪುತ್ತೂರಿನ ಪುರಭವನದಲ್ಲಿ ಕಾರ್ಯಕರ್ತರಿಗೆ ಅಭಿನಂದನಾ ಸಮಾರಂಭ ಆಯೋಜನೆ ಮಾಡಲಾಗಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.

ಕಾರ್ಯಕರ್ತರ ಅಪೇಕ್ಷೆಯಂತೆ ಸುಮಾರು 15 ರಿಂದ 20 ಸಾವಿರ ಕಾರ್ಯಕರ್ತರ ದೊಡ್ಡ ಮಟ್ಟದ ವಿಜಯೋತ್ಸವ ಮೆರವಣಿಗೆ ಮಾಡಬೇಕೆಂಬ ತೀರ್ಮಾನವನ್ನು ಮಾಡಿದ್ದೆವು. ಆದರೆ ಅಷ್ಟೊಂದು ಮಂದಿಯ ಮೆರವಣಿಗೆ ಮಾಡುವಾಗ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ ಮತ್ತು ರಸ್ತೆ ಬ್ಲಾಕ್ ಆಗಿ ವಾಹನ ಸಂಚಾರಕ್ಕೂ ಅಡಚಣೆಯಾಗುತ್ತದೆ ಎಂಬ ಕಾರಣಕ್ಕೆ ನಾವು ಪಕ್ಷದ ಮುಖಂಡರ ತೀರ್ಮಾನದಂತೆ ರ್‍ಯಾಲಿಯನ್ನು ರದ್ದು ಮಾಡಿದ್ದೇವೆ. ಕಾಂಗ್ರೆಸ್‌ನಿಂದಾಗಿ ಯಾವುದೇ ವ್ಯಕ್ತಿಗೂ ತೊಂದರೆಯಾಗಬಾರದು.  ಸಾರ್ವಜನಿಕರಿಗೆ ತೊಂದರೆಯಾಗುತ್ತದೆ ಎಂಬ ಕಾರಣಕ್ಕೆ ಮೆರವಣಿಗೆಯನ್ನು ಕೈ ಬಿಡಲಾಗಿದೆ ಎಂದು ಶಾಸಕರು ತಿಳಿಸಿದ್ದಾರೆ.

ಪುರಭವನದಲ್ಲಿ ಕಾರ್ಯಕರ್ತರಿಗೆ ಅಭಿನಂದನಾ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್‌ ಕುಮಾರ್ ಮತ್ತು ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ ವಿಶೇಷ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಶಾಸಕರು ತಿಳಿಸಿದ್ದಾರೆ.

ಸಮಸ್ಯೆ ಹೇಳಿಕೊಂಡು ಕಣ್ಣೀರಿಟ್ಟ ಮಹಿಳೆ; ಅಧಿಕಾರಿಗಳಿಗನ್ನು ತಾರಾಟೆಗೆ ತೆಗೆದುಕೊಂಡ ಲೋಕಾಯುಕ್ತ ಎಸ್​ಪಿ ಸೈಮನ್

Posted by Vidyamaana on 2023-12-16 07:34:09 |

Share: | | | | |


ಸಮಸ್ಯೆ ಹೇಳಿಕೊಂಡು ಕಣ್ಣೀರಿಟ್ಟ ಮಹಿಳೆ; ಅಧಿಕಾರಿಗಳಿಗನ್ನು ತಾರಾಟೆಗೆ ತೆಗೆದುಕೊಂಡ ಲೋಕಾಯುಕ್ತ ಎಸ್​ಪಿ ಸೈಮನ್

ಕಡಬ : ಕುಟ್ರುಪ್ಪಾಡಿ ಗ್ರಾಮದ ಉಳಿಪ್ಪು ನಿವಾಸಿ ಶಿಬು ಎಂಬವರ ಪತ್ನಿ ಸೌಮ್ಯ ಅವರು ಅಕ್ರಮ ಸಕ್ರಮ ಕಡತ ವಿಲೇವಾರಿಯಲ್ಲಿ ಅಧಿಕಾರಿಗಳಿಂದ ಆಗಿರುವ ಅನ್ಯಾಯವನ್ನು ಲೋಕಾಯುಕ್ತ ಅಧಿಕಾರಿಗಳ ಮುಂದೆ ಹೇಳಿ ಕಣ್ಣೀರಿಟ್ಟ ಪ್ರಸಂಗ ನಡೆದಿದೆ.

ಇದರಿಂದ ಕೆಂಡಾಮಂಡಲರಾದ ಲೋಕಾಯುಕ್ತ ಎಸ್ಪಿ ಸೈಮನ್ ಅವರು ಸ್ಥಳದಲ್ಲಿದ್ದ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು.ಕರ್ನಾಟಕ ಲೋಕಾಯುಕ್ತ ಮಂಗಳೂರು ವಿಭಾಗದ ಅಧಿಕಾರಿಗಳಿಂದ ಕಡಬ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ಸಾರ್ವಜನಿಕ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ, ಸೌಮ್ಯ ಕಳೆದ ಎಂಟು ವರ್ಷಗಳಿಂದ ನಮ್ಮ ಅಕ್ರಮ ಸಕ್ರಮ ಕಡತವನ್ನು ವಿಲೇವಾರಿ ಮಾಡದೆ ವಿನಾಕಾರಣ ಸತಾಯಿಸುತ್ತಿದ್ದಾರೆ. ಕಳೆದ ವರ್ಷ ಕುಟ್ರುಪ್ಪಾಡಿಯಲ್ಲಿ ನಡೆದ ಜಿಲ್ಲಾಧಿಕಾರಿಯವರ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ನಾವು ದೂರು ನೀಡಿದಾಗ ಒಂದು ವಾರದೊಳಗೆ ಕಡತ ವಿಲೇವಾರಿ ಮಾಡಿ ಹಕ್ಕು ಪತ್ರ ನೀಡಬೇಕೆಂದು ಕಂದಾಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಯವರು ಸೂಚನೆ ನೀಡಿದ್ದರು.ಆದರೆ ಈವರೆಗೆ ಯಾವ ಪ್ರಕ್ರಿಯೆಯೂ ನಡೆದಿಲ್ಲ ಎಂದು ಅಳಲು ತೋಡಿಕೊಂಡರು.ತನಗೆ ಕಳೆದ ಎಂಟು ವರ್ಷಗಳಿಂದ ಅನ್ಯಾಯ ಮಾಡಲಾಗುತ್ತಿದೆ ಎಂದು ಲೋಕಾಯುಕ್ತ ಅಧಿಕಾರಿಗಳ ಎದುರು ಕಣ್ಣೀರಿಟ್ಟು ಸೌಮ್ಯ ತನ್ನ ಸಮಸ್ಯೆಯನ್ನು ಹೇಳಿಕೊಂಡರು.

ಇದರಿಂದ ಕೆಂಡಾಮಂಡಲರಾದ ಲೋಕಾಯುಕ್ತ ಅಧಿಕಾರಿಗಳು ಸ್ಥಳದಲ್ಲಿದ್ದ ತಹಶೀಲ್ದಾರ್, ಉಪತಹಶೀಲ್ದಾರ್ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡು, 15 ದಿನಗಳ ಒಳಗೆ ಆ ಕಡತ ವಿಲೇವಾರಿ ಮಾಡಿಕೊಡುವಂತೆ ಸೂಚನೆ ನೀಡಿದರು. ಕಡತ ವಿಲೇವಾರಿ ಆಗದಿದ್ದರೆ ತಮ್ಮ ಗಮನಕ್ಕೆ ತರುವಂತೆ ಸೌಮ್ಯ ಅವರಿಗೆ ಅಭಯ ನೀಡಿದರು.ಇದೇ ಸಮಯದಲ್ಲಿ, ಸಾರ್ವಜನಿಕರಿಗೆ ಯಾವುದೇ ಅಧಿಕಾರಿಗಳು ಸರಿಯಾಗಿ ಸ್ಪಂದನೆ ನೀಡದೆ ಅಧಿಕಾರ ನಡೆಸಿದರೆ, ಸರ್ಕಾರಿ ಸವಲತ್ತುಗಳನ್ನು ದೊರಕಿಸಿಕೊಡುವಲ್ಲಿ ವಿನಕಾರಣ ತೊಂದರೆ ನೀಡಿದಲ್ಲಿ, ಅಧಿಕಾರಿಗಳು ಸಾರ್ವಜನಿಕರಿಗೆ ಸರ್ಕಾರಿ ಕೆಲಸದಲ್ಲಿ ತೊಂದರೆ ನೀಡಿದರೆ, ಲೋಕಾಯುಕ್ತಕ್ಕೆ ದೂರು ನೀಡಬಹುದು. ದೂರು ಯೋಗ್ಯವಾಗಿದ್ದಲ್ಲಿ ವಿಚಾರಣೆಗೆ ಒಳಪಡಿಸಲಗುವುದು ಎಂದು ಹೇಳಿದರು. ಅದೇ ರೀತಿ ಜನರು ಕೂಡಾ ಹೆಚ್ಚಿನ ಸ್ಪಂದನೆ ಕೊಡಬೇಕು. ಈ ಕಾರ್ಯಕ್ರಮದಲ್ಲಿ ಕೇವಲ ಐದು ದೂರುಗಳು ಮಾತ್ರ ಬಂದಿವೆ. ಅವುಗಳನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ವರ್ಗಾಯಿಸಿ ಮುಂದಿನ ಕ್ರಮ ಕೈಗೊಳ್ಳಗಾವುದು ಎಂದು ಹೇಳಿದರು.ಇನ್ಮುಂದೆ ಯಾವುದೇ ಅಧಿಕಾರಿಯಿಂದ ತೊಂದರೆಯಾದರೆ ಸಾರ್ವಜನಿಕರು ತಕ್ಷಣ ಲೋಕಾಯುಕ್ತಕ್ಕೆ ನೇರವಾಗಿ ದೂರು ನೀಡಬಹುದು, ಎಲ್ಲಾ ದೂರುಗಳಿಗೆ ಸಾಧ್ಯವಾದಷ್ಟು ಸ್ಪಂದಿಸಿ ಮುಂದೆ ಸೂಕ್ತ ಕ್ರಮ ಜರಗಿಸಲು ಲೋಕಾಯುಕ್ತ ಅಧಿಕಾರಿಗಳು ಬದ್ಧರಾಗಿದ್ದಾರೆ ಎಂದರು.


ಸೀತಾರಾಮ ನಾಯ್ಕ್ ಹಾಗೂ ವೆಂಕಟ್‌ರಾಜ್ ಕೋಡಿಬೈಲು ದೂರು ನೀಡಿ, ಕಡಬದಲ್ಲಿ ಕೆರೆ ಒತ್ತುವರಿ ಮಾಡಿಕೊಂಡು ಸಾರ್ವಜನಿಕರಿಗೆ ನಡೆದಾಡಲು ದಾರಿ ಇಲ್ಲದಂತೆ ಮಾಡಲಾಗಿದೆ. ನಮಗೆ ನ್ಯಾಯ ಒದಗಿಸಬೇಕೆಂದು ವಿನಂತಿ ಮಾಡಿಕೊಂಡರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಲೋಕಾಯುಕ್ತ ಅಧಿಕಾರಿಗಳು ಪಟ್ಟಣ ಪಂಚಾಯಿತಿ ಅಧಿಕಾರಿಗಳಿಗೆ ಸೂಚನೆ ನೀಡಿ ತಕ್ಷಣ ಕೆರೆ ಒತ್ತುವರಿ ತೆರವುಗೊಳಿಸಿ, ರಸ್ತೆ ನಿರ್ಮಾಣಕ್ಕೆ ಅವಕಾಶ ಮಾಡಿಕೊಡಬೇಕೆಂದರು.ಸಂದರ್ಭದಲ್ಲಿ ಲೋಕಾಯುಕ್ತ ಡಿವೈಎಸ್‌ಪಿಗಳಾದ ಗಾನಾ ಪಿ.ಕುಮಾರ್, ಚೆಲುವರಾಜ್, ಕಡಬ ತಹಶೀಲ್ದಾರ್ ಪ್ರಭಾಕರ್​ ಖಜೂರೆ, ಉಪತಹಶೀಲ್ದಾರ್​ಗಳಾದ ಮನೋಹರ್ ಕೆ.ಟಿ, ಗೋಪಾಲ್ ಕಲ್ಲುಗುಡ್ಡೆ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕಾಧಿಕಾರಿ ಭವಾನಿಶಂಕರ್, ಕಡಬ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೀಲಾವತಿ, ಕಂದಾಯ ನಿರೀಕ್ಷಕ ಪೃಥ್ವಿರಾಜ್ ಹಾಗೂ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.

ಬಡವರ ಕಣ್ಣೀರು ಒರೆಸುವ ಕೆಲಸ ಮಾಡುವುದೇ ನಿಜವಾದ ಹಿಂದುತ್ವ:ಶಾಸಕ ಅಶೋಕ್ ಕುಮಾರ್ ರೈ

Posted by Vidyamaana on 2024-04-24 04:03:48 |

Share: | | | | |


ಬಡವರ ಕಣ್ಣೀರು ಒರೆಸುವ ಕೆಲಸ ಮಾಡುವುದೇ ನಿಜವಾದ ಹಿಂದುತ್ವ:ಶಾಸಕ ಅಶೋಕ್ ಕುಮಾರ್ ರೈ

ಪುತ್ತೂರು: ದೇಶದಲ್ಲಿ ಜಾತಿ ಧರ್ಮಗಳ  ನಡುವೆ ಒಡಕು ಮೂಡಿಸುವ ಬಿಜೆಪಿಯ ಹಿಂದುತ್ವ ದೇಶಕ್ಕೆ ಮಾರಕವಾಗಲಿದೆ. ನಮ್ಮ ನಡುವಿನ ಒಡಕುಗಳ ಕಾರಣದಿಂದ ಇತರ ದೇಶಗಳು ನಮ್ಮ ದೇಶದ ಮೇಲೆ ಆಕ್ರಮಣ ಮಾಡುವ ಸಂದರ್ಭಗಳು ಉಂಟಾಗುವ ಅಪಾಯವಿದೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.

ಅವರು ಸಂಜೆ ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬಡವರ ಕಣ್ಣೀರು ಒರೆಸುವ ಕೆಲಸ ಮಾಡುವುದೇ ನಿಜವಾದ ಹಿಂದುತ್ವ. ನಾನು ಓರ್ವ ಹಿಂದೂ ಎಂದು ಎದೆತಟ್ಟಿ ಹೇಳಬಲ್ಲೆ. ನಾನು ೯೦ ಮಂದಿ ಬಡವರಿಗೆ ಮನೆ ನಿರ್ಮಿಸಿ ಕೊಟ್ಟಿದ್ದೇನೆ. ೨೨ ಸಾವಿಕ ಕುಟುಂಬಗಳಿಗೆ ವಿವಿಧ ಬಗೆಯಲ್ಲಿ ಆರ್ಥಿಕ ಸಹಕಾರ ನೀಡಿದ್ದೇನೆ. ಹಲವಾರು ದೇವಾಲಯಗಳ ಜೀರ್ಣೋದ್ಧಾರ ಕಾರ್ಯಕ್ಕೆ ನೇತೃತ್ವ ವಹಿಸಿದ್ದೇನೆ. ನಾನು ಮತ್ತು ಪದ್ಮರಾಜ್ ಪೂಜಾರಿಯನ್ನು

ಇಂದು ನಡೆಯಬೇಕಿದ್ದ NEET-PG ಪ್ರವೇಶ ಪರೀಕ್ಷೆ ಮುಂದೂಡಿಕೆ

Posted by Vidyamaana on 2024-06-23 06:25:10 |

Share: | | | | |


ಇಂದು ನಡೆಯಬೇಕಿದ್ದ NEET-PG ಪ್ರವೇಶ ಪರೀಕ್ಷೆ ಮುಂದೂಡಿಕೆ

ನವದೆಹಲಿ : ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯ ಬಗ್ಗೆ ಕೋಲಾಹಲದ ಮಧ್ಯೆ ಮತ್ತೊಂದು ಪರೀಕ್ಷೆಯನ್ನ ಮುಂದೂಡಲಾಗಿದೆ. ರಾಷ್ಟ್ರೀಯ ಪರೀಕ್ಷಾ ಮಂಡಳಿ ಇಂದು ನಿಗದಿ ಪಡಿಸಿದ್ದ ನೀಟ್-ಪಿಜಿ ಪ್ರವೇಶ ಪರೀಕ್ಷೆಯನ್ನು ಮುಂದೂಡಲಾಗಿದೆ. ಅಂದ್ಹಾಗೆ, ಜೂನ್ 23ರ ಇಂದು ನೀಟ್ ಪಿಜಿ ಪ್ರವೇಶ ಪರೀಕ್ಷೆ ನಡೆಯಬೇಕಿತ್ತು.

ಆದ್ರೆ, ನೀಟ್-ಪಿಜಿ ಪ್ರವೇಶ ಪರೀಕ್ಷೆಯನ್ನು ಮುಂದೂಡಲಾಗಿದೆ. ಪ್ರವೇಶ ಪರೀಕ್ಷೆಯ ಹೊಸ ದಿನಾಂಕವನ್ನು ರಾಷ್ಟ್ರೀಯ ಪರೀಕ್ಷಾ ಮಂಡಳಿ ಶೀಘ್ರದಲ್ಲೇ ಪ್ರಕಟಿಸಲಿದೆ.

ನಟ ದರ್ಶನ್ ಅರೆಸ್ಟ್ : ಕೊಲೆಯಾದ ರೇಣುಕಾಸ್ವಾಮಿ ಹಿನ್ನೆಲೆ ಏನು ? ಇಲ್ಲಿದೆ ಮಾಹಿತಿ

Posted by Vidyamaana on 2024-06-11 11:09:57 |

Share: | | | | |


ನಟ ದರ್ಶನ್ ಅರೆಸ್ಟ್ : ಕೊಲೆಯಾದ ರೇಣುಕಾಸ್ವಾಮಿ ಹಿನ್ನೆಲೆ ಏನು ? ಇಲ್ಲಿದೆ ಮಾಹಿತಿ

ಬೆಂಗಳೂರು :ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದಕ್ಕೆ ರೇಣುಕಾ ಸ್ವಾಮಿ ಎಂಬುವವರು ಕೊಲೆ ಆದ ಘಟನೆಗೆ ಸಂಬಂಧಿಸಿದಂತೆ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್ ಆಗಿದ್ದಾರೆ. ನಟ ದರ್ಶನ್ ಅವರ ಸೂಚನೆ ಮೇರೆಗೆ ಕೊಲೆ ನಡೆದಿದೆ ಎಂದು ಹೇಳಲಾಗಿದೆ.

ಇನ್ನೂ ಕೊಲೆಯಾದ ರೇಣುಕಾ ಸ್ವಾಮಿ ಚಿತ್ರದುರ್ಗದ ಬಡಾವಣೆಯೊಂದರಲ್ಲಿ ವಾಸವಾಗಿದ್ದರು.ಅವರ ತಂದೆ ನಿವೃತ್ತ ಸರ್ಕಾರಿ ಅಧಿಕಾರಿ.ಇವರಿಗೆ ಕಳೆದ ವರ್ಷವಷ್ಟೇ ಮದುವೆಯಾಗಿದ್ದು ಹೆಂಡತಿ ಗರ್ಭಿಣಿಯಾಗಿದ್ದಾರೆ.ರೇಣುಕಾ ಸ್ವಾಮಿ ಮೆಡಿಕಲ್ ಫಾರ್ಮ್ ನಲ್ಲಿ ಕೆಲಸ ಮಾಡುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

ಹೈ ಸೆಕ್ಯುರಿಟಿ ನಂಬರ್‌ ಪ್ಲೇಟ್‌ ನಲ್ಲಿ 700 ಕೋಟಿ ರೂ. ದೋಖಾ - ಲೋಕಾಯುಕ್ತಕ್ಕೆ ದೂರುದಾಖಲು!

Posted by Vidyamaana on 2024-01-13 08:23:37 |

Share: | | | | |


ಹೈ ಸೆಕ್ಯುರಿಟಿ ನಂಬರ್‌ ಪ್ಲೇಟ್‌ ನಲ್ಲಿ 700 ಕೋಟಿ ರೂ. ದೋಖಾ - ಲೋಕಾಯುಕ್ತಕ್ಕೆ ದೂರುದಾಖಲು!

ಬೆಂಗಳೂರು : ಉನ್ನತ ಸುರಕ್ಷತಾ ನೋಂದಣಿ ಫಲಕ (High security number plate) ಅಳವಡಿಕೆಯಲ್ಲಿ ನಕಲಿ ನಂಬರ್‌ ಪ್ಲೇಟ್‌ (Fake number plate) ಅಳವಡಿಕೆ ನಡೆಯುತ್ತಿರುವ ಆರೋಪ ಕೇಳಿಬಂದಿದೆ. ನಕಲಿ ನಂಬರ್‌ ಪ್ಲೇಟ್‌ ಬಳಸಿ ಪೊಲೀಸರು ಹಾಗೂ ಸರ್ಕಾರಕ್ಕೆ ವಂಚಿಸುತ್ತಿರುವವರ ಪ್ರಮಾಣ ದಿನೇದಿನೇ ಹೆಚ್ಚಾಗುತ್ತಿದ್ದು ಇವರ ವಿರುದ್ದ ಕ್ರಮ ಕೈಗೊಳ್ಳಬೇಕೆಂದು ಲೋಕಾಯುಕ್ತಕ್ಕೆ (Lokayukta) ದೂರು ನೀಡಲಾಗಿದೆ.ಅಖಿಲ ಕರ್ನಾಟಕ ನಂಬರ್‌ ಪ್ಲೇಟ್‌ ತಯಾರಕರು ಹಾಗೂ ಮಾರಾಟಗಾರರ ಸಂಘದ ಅಧ್ಯಕ್ಷ ಎಸ್‌.ಎನ್‌ .ಜಿತೇಂದ್ರ ಲೋಕಾಯುಕ್ತ ಕಚೇರಿಯಲ್ಲಿ ಈ ಕುರಿತು ದೂರು ದಾಖಲಿಸಿದ್ದಾರೆ. 


2019 ಏ. 1 ಕ್ಕೂ ಮುನ್ನ ಖರೀದಿಸಿರುವ ವಾಹನಗಳಿಗೆ ಉನ್ನತ ಸುರಕ್ಷತಾ ನೋಂದಣಿ ಫಲಕ ಅಳವಡಿಸಬೇಕೆಂದು ಸಾರಿಗೆ ಇಲಾಖೆ ಆದೇಶಿಸಿತ್ತು. ಈ ಆದೇಶದ ಬಳಿಕ ನಕಲಿ ಪ್ಲೇಟ್‌ಗಳ ಹಾವಳಿಂದಾಗಿ ಸುಮಾರು 700 ಕೋಟಿ ರೂ. ಗಳಿಗೂ ಹೆಚ್ಚು ಭ್ರಷ್ಟಾಚಾರ ನಡೆದಿದೆ ಎಂದು ಜಿತೇಂದ್ರ ತಮ್ಮ ದೂರಿನಲ್ಲಿ ವಿವರಿಸಿದ್ದಾರೆ.



Leave a Comment: